Tag: ಸಪ್ರೀಂಕೋರ್ಟ್

  • ಸಿಗಂಧೂರು ಚೌಡೇಶ್ವರಿ ದೇವಿಯ ದರ್ಶನ ಪಡೆದ ಸುಪ್ರೀಂಕೋರ್ಟ್ ನ್ಯಾ.ಬಿ.ವಿ.ನಾಗರತ್ನ ದಂಪತಿ

    ಸಿಗಂಧೂರು ಚೌಡೇಶ್ವರಿ ದೇವಿಯ ದರ್ಶನ ಪಡೆದ ಸುಪ್ರೀಂಕೋರ್ಟ್ ನ್ಯಾ.ಬಿ.ವಿ.ನಾಗರತ್ನ ದಂಪತಿ

    ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ.ನಾಗರತ್ನ ದಂಪತಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

    ಭಾನುವಾರ ಸಂಜೆಯೇ ಜಿಲ್ಲೆಗೆ ಭೇಟಿ ನೀಡಿರುವ ಅವರು, ಎರಡು ದಿನಗಳ ಕಾಲ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ ಮುಂಜಾನೆ ಸಿಗಂಧೂರಿಗೆ ಭೇಟಿ ನೀಡಿದ್ದ ಅವರು ಚೌಡೇಶ್ವರಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ ರಾಮಪ್ಪ ದೇವಾಲಯದ ಪರಿಚಯ ಹಾಗೂ ದೇವಿಯ ಮಹಿಮೆಯನ್ನು ವಿವರಿಸಿದರು. ಇದನ್ನೂ ಓದಿ: ನಾಡದೇವತೆ ಚಾಮುಂಡೇಶ್ವರಿಗೆ ಭಕ್ತಿಭಾವದ ಪೂಜೆ ಸಲ್ಲಿಸಿದ ಪ್ರಧಾನಿ – ಬೆಟ್ಟದಲ್ಲಿ ಹಬ್ಬದ ಸಡಗರ

    ಬಿ.ವಿ.ನಾಗರತ್ನ ದಂಪತಿಗೆ ದೇವಾಲಯದ ವತಿಯಿಂದ ಸನ್ಮಾನಿಸಲಾಯಿತು. ಚೌಡೇಶ್ವರಿ ದೇವಿಯ ದರ್ಶನ ಪಡೆದ ದಂಪತಿ ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ತೆರಳಿದ್ದು, ಸಂಜೆ ಶಿವಮೊಗ್ಗಕ್ಕೆ ವಾಪಸ್ಸಾಗಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

    Live Tv