Tag: ಸಫಾಯಿ ಕರ್ಮಚಾರಿಗಳು

  • ರಾಜ್ಯದಲ್ಲಿ ಮಲಹೊರುವ ಪದ್ಧತಿ ಇನ್ನೂ ಜೀವಂತ

    ರಾಜ್ಯದಲ್ಲಿ ಮಲಹೊರುವ ಪದ್ಧತಿ ಇನ್ನೂ ಜೀವಂತ

    ರಾಯಚೂರು: ರಾಜ್ಯದಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತವಾಗಿದ್ದು, ಸಮೀಕ್ಷೆಯ ಪ್ರಕಾರ 708 ಜನ ಮಲ ಹೊರುವವರು ಇದ್ದಾರೆ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ ಹಿರೇಮಣಿ ಹೇಳಿದ್ದಾರೆ.

    ನಗರದಲ್ಲಿ ಆಯೋಜಿಸಿದ್ದ ಸಫಾಯಿ ಕರ್ಮಚಾರಿ ಆಯೋಗ ಯೋಜನೆಗಳ ಕುರಿತ ಸಭೆಯಲ್ಲಿ ಮಾತನಾಡಿದ ಹಿರೇಮಣಿ, ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು. ಈ ಹಿಂದೆ ರಾಜ್ಯದಲ್ಲಿ ಮಲಹೊರುವ ಪದ್ಧತಿ ಇಲ್ಲವೆಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಪ್ಪು ವರದಿ ನೀಡಿತ್ತು. ಆದರೆ ಮಲಹೊರುವ ಪದ್ಧತಿ ಇನ್ನೂ ಜೀವಂತವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

    ಜಿಲ್ಲೆಯ ಅಧಿಕಾರಿಗಳು ಸೋಮಾರಿಗಳಾಗಿದ್ದು, ಸಫಾಯಿ ಕರ್ಮಾಚಾರಿಗಳಿಗೆ ಇರುವ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಅಂತಾ ತರಾಟೆಗೆ ತೆಗೆದುಕೊಂಡರು. ಮುಂದಿನ ಸಭೆಯಲ್ಲಿ ಇದೇ ರೀತಿ ಮುಂದುವರೆದರೆ ಜಿಲ್ಲಾಡಳಿತ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.