ಬೆಳಗಾವಿ: ವಿಧಾನ ಪರಿಷತ್(Vidhan Parishad) ಸಭಾಪತಿ ಚುನಾವಣೆಗೆ(Speaker Election) ಬಿಜೆಪಿ ಸದಸ್ಯ ಬಸವರಾಜ್ ಹೊರಟ್ಟಿ(Basavaraj Boratti) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಚಿವರ ನೇತೃತ್ವದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದು ನಾಳೆ ಚುನಾವಣೆ ನಡೆಯಲಿದೆ.
ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಹೊರಟ್ಟಿ ಈ ಬಾರಿ ಚುನಾವಣೆಯಲ್ಲಿ ಗೆದ್ದಿದ್ದರು. ಬಿಜೆಪಿ ಸೇರಲು ಸಭಾಪತಿ ನೀಡುವ ಭರವಸೆಯನ್ನ ಬಿಜೆಪಿ ನಾಯಕರು ಕೊಟ್ಟಿದ್ದರು. ಕೊಟ್ಟ ಮಾತಿನಂತೆ ಸಭಾಪತಿ ಸ್ಥಾನ ನೀಡಿ ಬಿಜೆಪಿ ಮಾತು ಉಳಿಸಿಕೊಂಡಿದೆ. ಬಹುಮತ ಇರುವ ಕಾರಣ ನಾಳೆ ನಡೆಯುವ ಚುನಾವಣೆಯಲ್ಲಿ ಹೊರಟ್ಟಿ ಅವರು ಅವಿರೋಧ ಆಯ್ಕೆ ಆಗಲಿದ್ದಾರೆ. ಇದನ್ನೂ ಓದಿ: ಇಂಗ್ಲಿಷ್ ಮೀಡಿಯಂ ಶಾಲೆಗಳ ಪರ ರಾಹುಲ್ ಗಾಂಧಿ ಬ್ಯಾಟಿಂಗ್
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಬಸವರಾಜ್ ಹೊರಟ್ಟಿ,ಇದು ನನ್ನ ಜೀವನದಲ್ಲಿ ಅವಿಸ್ಮರಣೀಯ ದಿನ. ಸಿಎಂ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು, ಪಕ್ಷದ ಮುಖ್ಯಸ್ಥರು ಬಂದಿದ್ದು ಖುಷಿಯಾಯ್ತು. ಪಕ್ಷ, ಪಕ್ಷದ ನಾಯಕರು ಪ್ರೀತಿ ವಿಶ್ವಾಸ ಇಟ್ಟು ಸ್ಥಾನ ಕೊಟ್ಟಿದ್ದಾರೆ. ನನಗೆ ಕೊಟ್ಟ ಜವಾಬ್ದಾರಿ, ನಂಬಿಕೆ, ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದರು.
ಪಕ್ಷ, ಸಭಾಪತಿ ಸ್ಥಾನಕ್ಕೆ ನ್ಯಾಯ ಕೊಡುವ ಕೆಲಸ ಮಾಡುತ್ತೇನೆ. ಕೊಟ್ಟ ಮಾತಿನಂತೆ ಪಕ್ಷ ನನಗೆ ಸ್ಥಾನ ನೀಡಿದೆ. ಕೆಲ ತಾಂತ್ರಿಕ ಕಾರಣದಿಂದ ತಡ ಆಗಿರಬಹುದು. ನನಗೆ ಯಾವತ್ತೂ ಅತೃಪ್ತಿ ಆಗಿಲ್ಲ. ಎಲ್ಲಾ ಸಮಸ್ಯೆ ಪರಿಹಾರ ಆಗಿ ಪಕ್ಷ ಸ್ಥಾನ ಕೊಟ್ಟಿದೆ. ನನ್ನ ಸ್ಥಾನಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡ್ತೀನಿ ಅಂತ ಭರವಸೆ ನೀಡಿದರು.
Live Tv
[brid partner=56869869 player=32851 video=960834 autoplay=true]
ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ʼಮಹಾಘಟಬಂಧನʼ ಮೈತ್ರಿ ಸರ್ಕಾರ ವಿಶ್ವಾಸಮತ ಯಾಚಿಸುವುದಕ್ಕೂ ಮುನ್ನ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮಹಾಘಟಬಂಧನ ಮೈತ್ರಿಕೂಟ ತಮ್ಮ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯದ ಬಗ್ಗೆ ದುಃಖ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಆಡಳಿತಾರೂಢ ಮೈತ್ರಿಕೂಟವು ಸಿನ್ಹಾ ವಿರುದ್ಧ ಅವಿಶ್ವಾಸ ನಿಲುವಳಿ ಮಂಡಿಸಲು ಮನವಿ ಸಲ್ಲಿಸಿತ್ತು. ಇದಕ್ಕೆ ಉತ್ತರಿಸಿದ ಸಿನ್ಹಾ, ಅವಿಶ್ವಾಸ ನಿಲುವಳಿ ಸ್ಪಷ್ಟವಾಗಿಲ್ಲ. ಅವಿಶ್ವಾಸ ನಿಲುವಳಿ ಮಂಡನೆಗಾಗಿ 9 ಮಂದಿ ಬರೆದ ಪತ್ರಗಳ ಪೈಕಿ 8 ಪತ್ರಗಳು ನಿಯಮಕ್ಕೆ ಅನುಗುಣವಾಗಿಲ್ಲ ಎಂದು ಹೇಳಿದರು. ನಂತರ ಭಾಷಣ ಮಾಡಿದ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದರು.
ನವದೆಹಲಿ: ಇನ್ನುಮುಂದೆ ಲೋಕಸಭೆ, ರಾಜ್ಯಸಭೆ ಅಧಿವೇಶನಗಳಲ್ಲಿ ಜುಮ್ಲಾಜೀವಿ, ಬಾಲ ಬುದ್ಧಿ, ಕೋವಿಡ್ ಸ್ಪ್ರೆಡರ್, ನಾಚಿಕೆಗೇಡು, ದ್ರೋಹ, ಭ್ರಷ್ಟ, ಅಸಮರ್ಥ, ಸರ್ವಾಧಿಕಾರಿ ಅಂತಹ ಅಸಂಸದೀಯ ಪದಗಳನ್ನು ಬಳಸುವಂತಿಲ್ಲ ಎಂದು ಲೋಕಸಭೆಯ ಸೆಕ್ರಟೇರಿಯಟ್ ಬಿಡುಗಡೆಗೊಳಿಸಿದ ಕಿರು ಪುಸ್ತಕದಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.
2/2creativity, punch, messaging, assault on senses thru words 2bring about reform, tellingly putting across a point— all casualties under new Parl dictionary of unparl words!!how can hypricrisy, ashamed, abuse etc be banned?learn robust, incisive, penetrating debate from uk parl.
ಲೋಕಸಭೆಯಲ್ಲಿನ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 380ರ ಪ್ರಕಾರ, ಕಲಾಪದ ಸಂದರ್ಭದಲ್ಲಿ ಅಸಂಸದೀಯ ಪದಗಳನ್ನು ಬಳಸಿದರೆ ಸ್ಪೀಕರ್, ಅವರನ್ನು ಕಲಾಪದಿಂದ ಹೊರ ಹಾಕುತ್ತಾರೆ. ಈ ಬಗ್ಗೆ ಬಿಡುಗಡೆಯಾಗಿರುವ ಟಿಪ್ಪಣಿಯಲ್ಲಿ ಸೇರಿಸಲಾಗಿದೆ. ರಾಜ್ಯಸಭಾ ಅಧ್ಯಕ್ಷರು ಅಥವಾ ಲೋಕಸಭಾ ಸ್ಪೀಕರ್ ಅಧಿವೇಶನದ ವೇಳೆ ಸದನದಲ್ಲಿ ಮಾತನಾಡುವ ಮಾತುಗಳನ್ನು ಗಮನಿಸುತ್ತಾರೆ. ಕೆಲವೊಮ್ಮೆ ಸಭಾಪತಿಯವರು ಅಸಂಸದೀಯ ಪದಗಳನ್ನು ಕಡತದಿಂದ ತೆಗೆದು ಹಾಕುತ್ತಾರೆ. ಆದರೆ ಸಭಾಪತಿಗೆ ಯಾವುದೇ ಪದಗಳ ನಿರ್ಬಂಧ ಇರುವುದಿಲ್ಲ ಎಂದು ತಿಳಿಸಲಾಗಿದೆ.
Baith jaiye. Baith Jaiye. Prem se boliye.
New list of unparliamentary words for LS & RS does not include Sanghi.
Basically govt taken all words used by opposition to describe how BJP destroying India & banned them.
ಸರ್ವಾಧಿಕಾರಿ, ಶಕುನಿ, ತಾನಾಶಾಹಿ, ಜೈಚಂದ್, ವಿನಾಶ್ ಪುರುಷ್, ಖಲಿಸ್ತಾನಿ, ಖೂನ್ ಸೆ ಖೇತಿ, ದೋಹ್ರಾ ಚರಿತ್ರ, ನಿಕಮ್ಮ, ನೌಟಂಕಿ, ಢಿಂಢೋರ ಪೀಟ್ನಾ, ಬೆಹ್ರಿ ಸರ್ಕಾರ್ ಮುಂತಾದ ಪದಗಳನ್ನೂ ಅಸಂಸದೀಯ ಎಂದು ಗುರುತಿಸಲಾಗಿದ್ದು, ಇಂತಹ ಪದಗಳನ್ನು ಬಳಸಿದರೂ ಕಡತದಿಂದ ತೆಗೆದುಹಾಕಲಾಗುತ್ತದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಕ್ಷಣಕ್ಷಣಕ್ಕೂ ವಿಷಮ ಸ್ಥಿತಿ – ಓರ್ವ ನಾಗರಿಕ ಸಾವು, 35 ಮಂದಿಗೆ ಗಾಯ
ಪುಸ್ತಕದಲ್ಲಿ ಅಸಂಸದೀಯ ಎಂದು ಗುರುತಿಸಲಾದ ಪದಗಳಲ್ಲಿ ರಕ್ತಪಾತ, ರಕ್ತಸಿಕ್ತ, ದ್ರೋಹ, ವಂಚನೆ, ಚಮ್ಚಾ, ಚಮ್ಚಾಗಿರಿ, ಚೇಲಾಸ್, ಬಾಲಿಶ, ಹೇಡಿ, ಕ್ರಿಮಿನಲ್, ಮೊಸಳೆ ಕಣ್ಣೀರು ಸೇರಿದೆ. ಇವುಗಳ ಹೊರತಾಗಿ ಅವಮಾನ, ಕತ್ತೆ, ನಾಟಕ, ಕಣ್ಣೊರೆಸುವ ತಂತ್ರ, ಗೂಂಡಾಗಿರಿ, ಅಸಮರ್ಥ, ಸುಳ್ಳು, ಗದ್ದಾರ್, ಗಿರ್ಗಿಟ್, ಗಢಿಯಾಲಿ ಆಂಸು, ಅಪಮಾನ್, ಅಸತ್ಯ, ಅಹಂಕಾರ್, ಕಾಲಾ ದಿನ್, ಕಾಲಾ ಬಜಾರ್, ದಂಗ, ದಲಾಲ್, ದಾದಾಗಿರಿ, ಬೆಚಾರ, ಬಾಯ್‌ಕಟ್. ಲಾಲಿಪಾಪ್, ಸಂವೇದನಾಹೀನ್, ಲೈಂಗಿಕ ಕಿರುಕುಳ ಪದಗಳನ್ನೂ ಅಸಂಸದೀಯ ಎಂದು ಪರಿಗಣಿಸಲಾಗುವುದು ಎಂದು ಲೋಕಸಭಾ ಸೆಕ್ರಟೇರಿಯನ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.
Is “Truth” unparliamentary?
– Annual Gender Gap Report 2022 Ranks India 135 out of 146 – On health and survival subindex, India ranked lowest at 146th place – India among only 5 countries with gender gaps larger than 5%
ಈ ಕ್ರಮಕ್ಕೆ ಕಾಂಗ್ರೆಸ್ ಹಾಗೂ ಟಿಎಂಸಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಸಂಸದೆ ಮೆಹುವಾ ಮೊಯಿತ್ರಾ ಹಾಗೂ ಸಂಸದ ಡೆರಕ್ ನಾವು ಈ ಪದಗಳನ್ನು ಬಳಸುತ್ತೇವೆ, ಬೇಕಿದ್ದರೆ ಅಮಾನತು ಮಾಡಿ ಎಂದು ತಿರುಗೇಟು ನೀಡಿದ್ದಾರೆ.
ಈ ಕುರಿತಂತೆ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಟ್ವೀಟ್ ಮಾಡಿದ್ದು, ನಿಮ್ಮ ಟೀಕೆಗಳು ಸೃಜನಶೀಲವಾಗಿರಬೇಕು. ಇಲ್ಲದಿದ್ದರೆ ಸಂಸತ್ತಿನ ಅಧಿವೇಶನ ಪ್ರಯೋಜನವಾಗದು. ಜುಮ್ಲಾಜೀವಿ ಅನ್ನು ಜುಮ್ಲಾಜೀವಿ ಅನ್ನದೇ ಮತ್ತೆ ಇನ್ನೇನು ಹೇಳಬೇಕು? ಇಂತಹ ಪದಗಳನ್ನು ನಿಷೇಧಿಸುವುದು ಅನಿವಾರ್ಯವೇ ಎಂದು ಪ್ರಶ್ನಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ಸಂಸದೆ ಮೆಹುವಾ ಮೊಯಿತ್ರಾ ಸಹ ಟ್ವೀಟ್ ಮಾಡಿದ್ದು, ಬಿಜೆಪಿ ಭಾರತವನ್ನು ಹೇಗೆ ನಾಶಪಡಿಸುತ್ತದೆ ಎಂಬುದು ಗೊತ್ತಾಗುತ್ತಿದೆ. ಅದಕ್ಕಾಗಿ ಪ್ರತಿ ಪಕ್ಷಗಳು ಬಳಸುವ ಪದಗಳನ್ನು ಆಯ್ಕೆ ಮಾಡಿ ನಿಷೇಧಿಸಿದೆ. ಇದು ನಾಚಿಗೇಡಿನ ಸಂಗತಿ. ದುರ್ಬಳಕೆ, ದ್ರೋಹ, ಭ್ರಷ್ಟ, ಬೂಟಾಟಿಕೆ, ಅಸಮರ್ಥ ಎಂಬ ಪದಗಳನ್ನು ನಾನು ಬಳಸುತ್ತೇನೆ, ನನ್ನನ್ನೂ ಬೇಕಿದ್ದರೆ ಅಮಾನತು ಮಾಡಿ. ಆದರೆ ನಾನು ಪ್ರಜಾಪ್ರಭುತ್ವಕ್ಕಾಗಿ ಹೋರಾಟ ಮಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಬಸವರಾಜ ಹೊರಟ್ಟಿ ರಾಜೀನಾಮೆ ಹಿನ್ನೆಲೆಯಲ್ಲಿ ವಿಧಾನಪರಿಷತ್ ಹಂಗಾಮಿ ಸಭಾಪತಿ ನೇಮಕ ಇಂದು ನಡೆಯಲಿದೆ.
ಹಂಗಾಮಿ ಸಭಾಪತಿ ಸ್ಥಾನಕ್ಕೆ ಎಮ್ಮೆಲ್ಸಿ ರಘುನಾಥ್ ರಾವ್ ಮಲ್ಕಾಪೂರೆ ಹೆಸರನ್ನು ರಾಜ್ಯಪಾಲರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಮಲ್ಕಾಪೂರೆ ಅವರೇ ವಿಧಾನ ಪರಿಷತ್ ಸಭಾಪತಿ ಆಗುವುದು ಬಹುತೇಕ ಖಚಿತವಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಂಗಾಮಿ ಸಭಾಪತಿ ನೇಮಕ ಮಾಡಲಿದ್ದಾರೆ. ಹಾಲಿ ಪರಿಷತ್‌ನ ಹಿರಿಯ ಸದಸ್ಯರಾದ ಶಶೀಲ್ ನಮೋಶಿ, ರಘುನಾಥ್ ಮಲ್ಕಾಪುರೆ, ಮಾಜಿ ಉಪಸಭಾಪತಿ ಎಂ.ಕೆ.ಪ್ರಾಣೇಶ್, ತೇಜಸ್ವಿನಿ ರಮೇಶ್ ಮೊದಲಾದವರ ಹೆಸರು ಹಂಗಾಮಿ ಸಭಾಪತಿ ಪಟ್ಟಿಯಲ್ಲಿ ಇತ್ತು. ಇದನ್ನೂ ಓದಿ: ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುವ ಶಾಸಕನ ತಾಯಿ BPL ಹೋಲ್ಡರ್
ಹಂಗಾಮಿ ಸಭಾಪತಿ ನೇಮಕವಾದರೆ ಪ್ರಮಾಣ ವಚನ ಮೊದಲಾದ ಪ್ರಕ್ರಿಯೆಗಳು ಇರುವುದಿಲ್ಲ. ಕೇವಲ ಸಭಾಪತಿ ಹುದ್ದೆಯ ಕಾರ್ಯನಿರ್ವಹಣೆ ಹೊಣೆಗಾರಿಕೆ ಮಾತ್ರ ಇರಲಿದೆ. ಹಂಗಾಮಿ ಸಭಾಪತಿ ನೇಮಕ ಬಳಿಕವಷ್ಟೇ ಬಸವರಾಜ ಹೊರಟ್ಟಿ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರೆ ಅಂಗೀಕಾರ ಪ್ರಕ್ರಿಯೆ ನಡೆಯಲಿದೆ. ಅಲ್ಲಿಯವರೆಗೂ ಅವರ ಉದ್ದೇಶಿತ ಬಿಜೆಪಿ ಸೇರ್ಪಡೆ ವಿಳಂಬವಾಗಲಿದೆ.
ಚಿತ್ರದುರ್ಗ: ಜಿಲ್ಲೆಯ ಭರಮಸಾಗರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕುಲಕುಂಟೆ ಗ್ರಾಮದ ಬಳಿ ಕಾರೊಂದು ರಸ್ತೆ ವಿಭಜಕಕ್ಕೆ ಬಡಿದು ಅಪಘಾತ ಸಂಭವಿಸಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲು ನೆರವಾಗಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಬಳಿಕ ಏಪ್ರಿಲ್ 11 ರಿಂದ 14ರವರೆಗೆ ಆಸ್ಸಾಂ ರಾಜ್ಯದ ಗೌಹಾಟಿಯಲ್ಲಿ ನಡೆಯಲಿರುವ ಅಖಿಲ ಭಾರತ ಪೀಠಾಸೀನ ಅಧಿಕಾರಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಭರಮಸಾಗರ ಕುಲಕುಂಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಮ್ಮ ಕಣ್ಣೆದುರಿಗೆ ಸಂಭವಿಸಿದ ಭಾರೀ ರಸ್ತೆ ಅಪಘಾತವನ್ನು ಗಮನಿಸಿ ಕೂಡಲೇ ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲು ಸಹಕರಿಸಿದ್ದಾರೆ. ಇದನ್ನೂ ಓದಿ: ಅಂಜನಾದ್ರಿಗೆ ಇಂಗ್ಲೆಂಡ್ ದೇಶದ ರಾಯಭಾರಿ ಭೇಟಿ
ಇಡಗುಂಜಿ ದೇವಸ್ಥಾನದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವರದರಾಜ, ಮಂಜುನಾಥ, ನಾಗೇಂದ್ರ ರಾವ್ ಮತ್ತು ಮೋಹನ್ ಕುಮಾರ ಅಪಘಾತದಲ್ಲಿ ಗಾಯಾಗೊಂಡವರಾಗಿದ್ದು, ಹೊರಟ್ಟಿ ಕೂಡಲೇ ಸ್ಥಳೀಯ ಪೊಲೀಸರಿಗೆ ಮತ್ತು ಆಸ್ಪತ್ರೆಗೆ ಕರೆ ಮಾಡಿ ಬೇಗನೆ ಸ್ಥಳಕ್ಕೆ ಆಂಬುಲೆನ್ಸ್ ಕರೆಸಿದರು. ಸುಮಾರು 45 ನಿಮಿಷಗಳಿಗೂ ಹೆಚ್ಚು ಕಾಲ ಅಪಘಾತ ಸ್ಥಳದಲ್ಲಿಯೇ ಇದ್ದು ಗಾಯಾಳುಗಳಿಗೆ ಧೈರ್ಯ ಹೇಳಿ ಅವರಿಗೆ ತುರ್ತು ಚಿಕಿತ್ಸೆ ಕೊಡಿಸುವಲ್ಲಿ ಶ್ರಮಿಸಿದ ಸಭಾಪತಿಗಳ ಸೇವಾ ಮನೋಭಾವ ಕಂಡು ಅಪಘಾತ ಸ್ಥಳದಲ್ಲಿ ನೆರೆದಿದ್ದ ಸುತ್ತಮುತ್ತಲಿನ ಗ್ರಾಮಸ್ಥರು ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಚೊಂಬು ಹಿಡ್ಕೊಂಡು ಬಯಲಿನಲ್ಲಿ ಹೋದರೆ ಅವರಿಗೆ ಆನಂದ: ಈಶ್ವರಪ್ಪ ಅಪಹಾಸ್ಯ
ಬಸವರಾಜ ಹೊರಟ್ಟಿ ಸಂವಿಧಾನಾತ್ಮಕವಾಗಿರುವ ದೊಡ್ಡ ಹುದ್ದೆಯಲ್ಲಿದ್ದರೂ ಜನಸಾಮಾನ್ಯರ ಕಷ್ಟಗಳಿಗೆ ಕೂಡಲೇ ಪ್ರತಿಸ್ಪಂದಿಸಿ ನೆರವಾಗುವ ಮಾನವೀಯತೆಯ ಗುಣ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದ್ದು ಇಂದಿನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ.
ರಾಮನಗರ: ಕೋಲಾರದ ಶಿವಾರಪಟ್ಟಣ ಎಂಬ ಹಳ್ಳಿಯಲ್ಲಿ ಕಳೆದ 35 – 40 ವರ್ಷಗಳಿಂದ ದೇವರ ಪ್ರತಿಮೆ ಮಾಡಿಕೊಂಡು ಬಂದಿರುವುದು ಮುಸ್ಲಿಂ ಕುಟುಂಬದವರೇ. ಇಂದಿಗೂ ಅವರು ಶಿಲ್ಪಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಯಾವಾಗ ಬಹಿಷ್ಕರಿಸುತ್ತೀರಿ? ಎಂಬುದನ್ನು ಬಿಜೆಪಿಯವರು ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿ ಟೀಕಿಸಿದ್ದಾರೆ.
ನಾನು ಜಾತಿ ಕೇಳುವುದಿಲ್ಲ: ಈಚೆಗಷ್ಟೇ ನಾನು `ದೇವಸ್ಥಾನಗಳಲ್ಲಿ ದಲಿತರಿಗೆ ಪೂಜೆ ಮಾಡುವುದಕ್ಕೆ ಬಿಡುತ್ತಾರೆಯೇ? ಎಂದು ಪ್ರಶ್ನಿಸಿದ್ದೆ. ಇದಕ್ಕೆ ಈ ವಿವಾದವನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ಮನೆಯೊಳಗೂ ದಲಿತರನ್ನೂ ಹೀಗೇ ಸೇರಿಸುತ್ತಾರೆಯೇ ಎಂದು ಸ್ವಾಮೀಜಿಯೊಬ್ಬರು ಪ್ರಶ್ನಿಸಿದ್ದರು. ಆ ಸ್ವಾಮೀಜಿ ಅವರು ಬೇಕಿದ್ದರೆ ಬಂದು ನನ್ನ ಮನೆಯ ವಾತಾವರಣ ನೋಡಲಿ, ಅವರಿಗೂ ಉಳಿದುಕೊಳ್ಳಲು ಆಶ್ರಮದ ಪದ್ಧತಿಯಂತೆಯೇ ವ್ಯವಸ್ಥೆ ಮಾಡಿಕೊಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: 40% ಕಮಿಷನ್ – ಈಶ್ವರಪ್ಪ ವಿರುದ್ಧ ಮೋದಿಗೆ ಪತ್ರ ಬರೆದ ಗುತ್ತಿಗೆದಾರ
ದಲಿತರೂ ಸೇರಿದಂತೆ ಎಲ್ಲ ವರ್ಗದ ಜನರು ನಮ್ಮ ತೋಟದ ಕೆಲಸಕ್ಕೆ ಬೆಳಿಗ್ಗೆ 5:30 ರಿಂದಲೇ ಬರುತ್ತಾರೆ. ಪ್ರತಿದಿನ ನಾನು ಅವರ ಕಷ್ಟಗಳನ್ನು ವಿಚಾರಿಸುತ್ತೇನೆಯೇ ಹೊರತು ಯಾವ ಜಾತಿ? ಎಂದು ಕೇಳುವುದಿಲ್ಲ ಇಂದಿಗೂ ಅವರಿಗೆ ನನ್ನ ಮನೆಯಲ್ಲಿ ಮುಕ್ತವಾಗಿ ಓಡಾಡಿಕೊಂಡು ಕೆಲಸ ಮಾಡುವ ವಾತಾವರಣ ಕಲ್ಪಿಸಿಕೊಟ್ಟಿದ್ದೇನೆ. ಮನೆಯಲ್ಲಿ ದಲಿತರೂ ನನ್ನ ಜೊತೆ ಕುಳಿತು ಊಟ ಮಾಡುತ್ತಾರೆ. ನಾನು ಯಾವುದೇ ವರ್ಗವನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿಲ್ಲ. ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ, ಅದನ್ನು ಹಾಳುಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಸೋಮವಾರ ಬೆಳಗ್ಗೆ ನಾನು ನಾಮಪತ್ರ ಸಲ್ಲಿಸಲು ಸಮಯ ನಿಗದಿಪಡಿಸಲಾಗಿದೆ ಎಂದು ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಈ ಕುರಿತು ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮುಹೂರ್ತ ನಿಗದಿ ಮಾಡಿದ್ದಾರೆ. ರೇವಣ್ಣ ಅವರ ಸಲಹೆಯಂತೆ ಸೋಮವಾರ ಬೆಳಗ್ಗೆ 10.15 ರಿಂದ 10.30 ರೊಳಗೆ ನಾಮಪತ್ರ ಸಲ್ಲಿಸುತ್ತೇನೆ. ಸೋಮವಾರ ಬೆಳಗ್ಗೆ 10.15 ರಿಂದ 10.30 ರವರೆಗೆ ಶುಭ ಘಳಿಗೆ ಇದೆ. ಈ ಶುಭ ಘಳಿಗೆಯಲ್ಲಿ ನಾಮಪತ್ರ ಸಲ್ಲಿಸುವಂತೆ ರೇವಣ್ಣ ಸಲಹೆ ನೀಡಿದ್ದಾರೆ ಎಂದು ನಗುತ್ತಾ ಹೇಳಿದರು.
ಕಾಂಗ್ರೆಸ್ ನಿಂದ ನಸೀರ್ ಅಹಮದ್ ನಾಮಪತ್ರ ಸಲ್ಲಿಕೆ ಮಾಡುತ್ತಾರೆ ಎಂಬ ಮಾಹಿತಿ ಇದೆ. ಆದರೆ ಖಚಿತವಾಗಿಲ್ಲ ಎಂದು ಇದೇ ವೇಳೆ ತಿಳಿಸಿದರು. ಜೆಡಿಎಸ್ ಪಕ್ಷ ಸಂಘಟನೆ ವಿಚಾರದ ಕುರಿತು ಮಾತನಾಡಿದ ಅವರು, ಪಕ್ಷ ಸಂಘಟನೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ. ಈಗಾಗಲೇ ಜಿಲ್ಲಾವಾರು ಸಭೆಗಳು ಆರಂಭವಾಗಿವೆ. ಆಡಳಿತಾರೂಢ ಪಕ್ಷಗಳ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡುತ್ತೇವೆ. ಇಬ್ಬರು ಶಾಸಕರು ಮುನಿಸಿಕೊಂಡಿದ್ದಾರೆ. ಅವರಿಗೂ ಅಸಮಾಧಾನ ಇದ್ದಂತಿಲ್ಲ. ದೊಡ್ಡವರಾಗಿರಲಿ, ಚಿಕ್ಕವರಾಗಿರಲಿ ಲೋಪಗಳನ್ನ ಸರಿಪಡಿಸಿಕೊಂಡು ಪಕ್ಷ ಸಂಘಟನೆಗೆ ಆದ್ಯತೆ ನೀಡುತ್ತೇವೆ ಎಂದರು.
ರೈತರಿಂದ ಇಂದು ಹೆದ್ದಾರಿ ತಡೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಮಾಜಿ ಶಾಸಕ ವೈ.ಎಸ್.ವಿ.ದತ್ತಾ, ರೈತರ ಪ್ರತಿಭಟನೆಗೆ ನಮ್ಮ ಬೆಂಬಲ ಇದೆ. ರೈತರಿಗೆ ಕೇಂದ್ರದ ಸ್ಪಷ್ಟೀಕರಣಗಳು ತೃಪ್ತಿ ತರುತ್ತಿಲ್ಲ. ಕೇಂದ್ರ ರೈತರನ್ನು ಅಪರಾಧ ಪಟ್ಟಿಯಲ್ಲಿ ಸೇರಿಸುವ ಯತ್ನ ಮಾಡುತ್ತಿದೆ. ಈ ಮೂಲಕ ರೈತರ ಹೋರಾಟ ದುರ್ಬಲಗೊಳಿಸುವ ಯತ್ನ ನಡೆಸುತ್ತಿದೆ. ವಿದೇಶಿ ಸೆಲೆಬ್ರಿಟಿಗಳ ಟ್ವೀಟ್ ತಪ್ಪು ಎಂದು ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ಹಿಂದೆ ಇಂದಿರಾಗಾಂಧಿಯವರ ತುರ್ತು ಪರಿಸ್ಥಿತಿ ಹೇರಿಕೆಯನ್ನು ಜಗತ್ತಿನ ಜನತಾಂತ್ರಿಕ ದೇಶಗಳು ವಿರೋಧಿಸಿದ್ದವು. ಆಗ ಇದ್ದ ಜನಸಂಘವೂ ಅದನ್ನು ಒಪ್ಪಿಕೊಂಡಿತ್ತು. ಆದರೆ ಈಗ ಹಾಲಿವುಡ್ ಸೆಲೆಬ್ರಿಟಿಗಳ ಟ್ವೀಟ್ ತಪ್ಪು ಎಂದು ಬಿಜೆಪಿ ಹೇಳುತ್ತಿದೆ. ವಿದೇಶಿ ಸೆಲೆಬ್ರಿಟಿಗಳು ಸರ್ಕಾರದ ನೀತಿಯನ್ನಷ್ಟೇ ವಿರೋಧಿಸಿರೋದು. ಅವರು ದೇಶವನ್ನು ವಿರೋಧಿಸಿಲ್ಲ ಎಂದು ಹೇಳಿದರು.
– ಸಭಾಪತಿ ವಿರುದ್ಧ ಒಂದಾದ ಬಿಜೆಪಿ, ಜೆಡಿಎಸ್ – ಅನಿರ್ದಿಷ್ಟಾವಧಿಗೆ ಕಲಾಪ ಮುಂದೂಡಿಕೆ
ಬೆಂಗಳೂರು: ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಿದ ನಂತರ ಇದೇ ಮೊದಲ ಬಾರಿಗೆ ಕಲಾಪವನ್ನು ಮತ್ತೆ ನಡೆಸುವ ಮೂಲಕ ರಾಜ್ಯ ವಿಧಾನ ಪರಿಷತ್ ಇತಿಹಾಸ ಸೃಷ್ಟಿಸುವ ಜೊತೆ ಕಪ್ಪು ಚುಕ್ಕೆಯನ್ನು ಅಂಟಿಸಿಕೊಂಡಿದೆ. ಒಂದೇ ಕುರ್ಚಿಗಾಗಿ ಕಾಂಗ್ರೆಸ್, ಬಿಜೆಪಿ ಸದಸ್ಯರು ಬಡಿದಾಡಿದ್ದು ಈಗ ಮತ್ತೊಮ್ಮೆ ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಿಕೆ ಮಾಡಲಾಗಿದೆ.
ಬಿಜೆಪಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಆದರೆ ಸಭಾಪತಿಗಳು ಅವಿಶ್ವಾಸ ನಿರ್ಣಯ ಕ್ರಮಬದ್ಧವಾಗಿಲ್ಲ ಎಂದು ಹೇಳಿ ತಿರಸ್ಕೃತಗೊಳಿಸಿದ್ದರು. ಇದು ಬಿಜೆಪಿ ಸದಸ್ಯರನ್ನು ಕೆರಳಿಸಿತ್ತು. ನಿನ್ನೆಯವರೆಗೂ ತನ್ನ ನಿರ್ಧಾರ ಪ್ರಕಟಿಸದ ಜೆಡಿಎಸ್ ಇಂದು ಪರಿಷತ್‌ನಲ್ಲಿ ಬಿಜೆಪಿಯ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿತ್ತು. ಜೆಡಿಎಸ್‌ನಿಂದ ಬೆಂಬಲ ಸಿಕ್ಕಿದ ಪರಿಣಾಮ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ನೀಡದೇ ಇದ್ದರೂ ಬಿಜೆಪಿ ಸಭಾಪತಿ ಸ್ಥಾನಕ್ಕೆ ಧರ್ಮೇಗೌಡರನ್ನು ಕೂರಿಸಿತ್ತು. ನಂತರದ 20 ನಿಮಿಷದಲ್ಲಿ ಭಾರೀ ಹೈಡ್ರಾಮಾ ನಡೆದು ನಡೆಯಬಾರದ ಘಟನೆಗಳಿಗೆ ಪರಿಷತ್ ಸಾಕ್ಷಿ ಆಯ್ತು.
ಯಾರ ತಪ್ಪು ಏನು?
ಸಭಾಪತಿ ಸೂಚನೆ ಮೇರೆಗೆ ಬೆಳಗ್ಗೆ ಕಲಾಪ ಆರಂಭಕ್ಕೆ ಮೊದಲು ಬೆಲ್ ಹಾಕಲಾಗುತ್ತದೆ. ಬೆಲ್ ಮುಗಿದ ಮೇಲೆ ಸಭಾಪತಿಗಳು ಪೀಠದ ಮೇಲೆ ಕುಳಿತು ಕಲಾಪ ಪ್ರಾರಂಭ ಮಾಡುವುದು ಸಂಪ್ರದಾಯ. ಆದರೆ ಬೆಲ್ ಹೊಡೆಯುವ ಸಮಯದಲ್ಲಿ ಉಪ ಸಭಾಪತಿ ಧರ್ಮೇಗೌಡರು ಪೀಠಕ್ಕೆ ಬಂದು ಕುಳಿತದ್ದು ನಿಯಮ ಅಲ್ಲ.
ಸಭಾಪತಿ ಇಲ್ಲದೆ ವೇಳೆ ಅಥವಾ ಸಭಾಪತಿ ಸೂಚನೆ ಮೇಲೆ ಉಪ ಸಭಾಪತಿಗಳು ಕಲಾಪ ನಡೆಸಲು ಅಧಿಕಾರವಿದೆ. ಅದನ್ನು ಹೊರತು ಪಡಿಸಿ ಬೆಲ್ ಹೊಡೆಯುವಾಗ ಕುಳಿತುಕೊಳ್ಳುವಂತೆ ಇಲ್ಲ. ಇದು ಉಪ ಸಭಾಪತಿ ಮಾಡಿದ ತಪ್ಪು.
ಉಪ ಸಭಾಪತಿ ಕುಳಿತ ಬಳಿಕ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಆಗಮಿಸುವ ಬಾಗಿಲನ್ನು ಬಿಜೆಪಿ ಸದಸ್ಯರು ಮುಚ್ಚಿದ್ದರು. ಇದು ನಿಯಮಬಾಹಿರವಾಗಿದ್ದು ಮಾರ್ಷಲ್‌ಗಳೇ ಬಾಗಿಲು ಮತ್ತು ಮುಚ್ಚುವ ಕೆಲಸ ಮಾಡಬೇಕು. ಆದರೆ ಬಾಗಿಲನ್ನು ಮುಚ್ಚಿದ್ದಾರೆ ಎಂದು ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್ ಸೇರಿ ಇತರರು ಡೋರ್ ಕಾಲಿನಲ್ಲಿ ಒದ್ದಿದ್ದು ಸರಿಯಲ್ಲ.
ಪೀಠದ ಮೇಲೆ ಕುಳಿತ ಉಪಸಭಾಪತಿಯನ್ನ ಎಬ್ಬಿಸಲು ಅಧಿಕಾರ ಇರುವುದು ಸಭಾಪತಿ ಸೂಚನೆ ಮೇರೆಗೆ ಮಾರ್ಷಲ್‌ಗಳಿಗೆ ಮಾತ್ರ. ಕಾಂಗ್ರೆಸ್‌ನ ನಾರಾಯಣಸ್ವಾಮಿ ಪೀಠದ ಮೇಲೆ ಕುಳಿತ ಉಪ ಸಭಾಪತಿ ಕತ್ತು ಪಟ್ಟಿ ಇಳಿದು ಎಳೆದಾಡಿದ್ದು ನಿಯಮ ಬಾಹಿರ.
ಉಪ ಸಭಾಪತಿಗಳನ್ನ ಎಬ್ಬಿಸಿ ಕಾಂಗ್ರೆಸ್ ಸದಸ್ಯರು ಚಂದ್ರಶೇಖರ ಪಾಟೀಲರನ್ನು ಕೂರಿಸಿದ್ದು ಇನ್ನೊಂದು ತಪ್ಪು. ಸಭಾಪತಿ, ಉಪ ಸಭಾಪತಿ ಇಲ್ಲದ ವೇಳೆ ಸಭಾಪತಿ ಮೊದಲೇ ಸೂಚಿಸಿದ ಸದಸ್ಯರು ಮಾತ್ರ ಪೀಠದ ಮೇಲೆ ಕುಳಿತುಕೊಳ್ಳಬೇಕು. ಆದರೆ ಅ ನಿಯಮ ಗಾಳಿಗೆ ತೂರಿ ಚಂದ್ರಶೇಖರ ಪಾಟೀಲರು ಪೀಠದ ಮೇಲೆ ಕುಳಿತಿದ್ದು ತಪ್ಪು.
ಸಭಾಪತಿಗಳ ಪೀಠಕ್ಕೆ ಇತಿಹಾಸದ ಜೊತೆ ಅಪಾರ ಗೌರವ ಇದೆ. ಅ ಪೀಠದ ಮೇಲೆ ಸದಸ್ಯರು ಕುಳಿತಿದ್ದು ತಪ್ಪು. ಪೀಠದ ಮುಂದೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರ ವರ್ತನೆ ಪೀಠಕ್ಕೆ ಮಾಡಿದ ಅಪಮಾನ.
ಕಾಂಗ್ರೆಸ್ ಸದಸ್ಯ ಪೀಠದ ಮೇಲೆ ಕುಳಿತ ಅಂತ ಬಿಜೆಪಿ ಸದಸ್ಯರು ಪೀಠದ ಮೇಲೆ ಕುಳಿತುಕೊಳ್ಳಲು ಮುಂದಾಗಿದ್ದು ಮತ್ತೊಂದು ತಪ್ಪು. ಪೀಠದ ಮುಂದಿನ ಗ್ಲಾಸ್ ಮುರಿದದ್ದು, ಅಜೆಂಡಾ ಕಾಪಿ ಹರಿದು ಹಾಕಿದ್ದು ಪೀಠಕ್ಕೆ ತೋರಿಸಿದ ಅಗೌರವ.
ಯಾವ ಸಮಯದಲ್ಲಿ ಏನಾಯ್ತು?
11:18 – ಪರಿಷತ್ ಬೆಲ್.
11:19 – ಬೆಲ್ ಹೊಡೆಯುವ ವೇಳೆಯೇ ಉಪಸಭಾಪತಿ ಎಲ್.ಧರ್ಮೇಗೌಡ ಪೀಠಾಸೀನ. ಸಭಾಪತಿ ಪ್ರವೇಶ ಬಾಗಿಲು ಬಂದ್ ಮಾಡಿದ ಬಿಜೆಪಿ ಸದಸ್ಯರು.
11:20 – ಕಾಂಗ್ರೆಸ್ ಸದಸ್ಯರ ಆಕ್ಷೇಪ. ಬಾಗಿಲು ಒದ್ದ ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್
11:22 – ಸಭಾಪತಿ ಪೀಠಕ್ಕೆ ಕಾಂಗ್ರೆಸ್, ಬಿಜೆಪಿ ಮುತ್ತಿಗೆ .
11:25 – ಉಪಸಭಾಪತಿಯನ್ನ ಎಳೆದ ನಾರಾಯಣಸ್ವಾಮಿ.
11:30 – ಸಭಾಪತಿ ಬಾಗಿಲು ತೆರೆದ ಮಾರ್ಷಲ್‌ಗಳು.
11:32 – ಖಾಲಿಯಿದ್ದ ಪೀಠದ ಮೇಲೆ ಕುಳಿತ ಕಾಂಗ್ರೆಸ್ ಸದಸ್ಯ ಚಂದ್ರಶೇಖರ್ ಪಾಟೀಲ್.
11:33 – ಬಿಜೆಪಿ-ಕಾಂಗ್ರೆಸ್ ಸದಸ್ಯರ ತಳ್ಳಾಟ ನೂಕಾಟ.
11:35 – ಸಭಾಪತಿ ಮುಂದಿನ ಗ್ಲಾಸ್ ಮುರಿದು ಹಾಕಿದ ಕಾಂಗ್ರೆಸ್ ಬಿಜೆಪಿ ಸದಸ್ಯರು.
11:38 – ಮಾರ್ಷಲ್ ಗಳ ಭದ್ರತೆ ಯಲ್ಲಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಆಗಮನ.
11:38 -ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿದ ಸಭಾಪತಿ.
11:39 – ಸದನದಿಂದ ಹೊರನಡೆದ ಪ್ರತಾಪಚಂದ್ರ ಶೆಟ್ಟಿ.
11:40 – ಸದನದಲ್ಲಿ ಗದ್ದಲ ಗಲಾಟೆ. ಪರಸ್ಪರ ನೂಕಾಟ ತಳ್ಳಾಟ.
ಬೆಂಗಳೂರು: ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಿದ ನಂತರ ಇದೇ ಮೊದಲ ಬಾರಿಗೆ ಕಲಾಪವನ್ನು ಮತ್ತೆ ನಡೆಸುವ ಮೂಲಕ ರಾಜ್ಯ ವಿಧಾನ ಪರಿಷತ್ ಇತಿಹಾಸ ಸೃಷ್ಟಿಸುತ್ತಿದೆ. ನಾಳೆ ಪರಿಷತ್ ಕಲಾಪ ಆರಂಭವಾದ ಕೂಡಲೇ ಸಭಾಪತಿ ಪೀಠದಲ್ಲಿ ಉಪಸಭಾಪತಿ ಧರ್ಮೇಗೌಡರನ್ನು ಕೂರಿಸಲು ಬಿಜೆಪಿ ಪ್ಲಾನ್ ಎ ರೆಡಿ ಮಾಡಿದೆ.
ಒಂದೊಮ್ಮೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಮೊದಲೇ ಪೀಠದ ಮೇಲೆ ಬಂದು ಕೂತರೆ, ಪಕ್ಕದಲ್ಲೇ ಮತ್ತೊಂದು ಪೀಠ ಹಾಕಿ ಅದರಲ್ಲಿ ಉಪಸಭಾಪತಿ ಧರ್ಮೇಗೌಡರನ್ನು ಕೂರಿಸಲು ಸಹ ಬಿಜೆಪಿ ಪ್ಲಾನ್ ಮಾಡ್ಕೊಂಡಿದೆ. ಅವಿಶ್ವಾಸ ನಿರ್ಣಯದ ನೋಟಿಸ್ ಕೊಟ್ಟಿರುವ ಹಿನ್ನೆಲೆಯಲ್ಲಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರಿಗೆ ಪೀಠದ ಮೇಲೆ ಕೂರುವುದಕ್ಕೆ ಅವಕಾಶ ಕೊಡದೇ ಬಿಜೆಪಿ ಗದ್ದಲ ನಡೆಸುವ ಸಂಭವ ಇದೆ.
ಸಭಾಪತಿ ಬದಲಾವಣೆ ಆದಲ್ಲಿ ಮಾತ್ರ ಗೋಹತ್ಯೆ ಮಸೂದೆ ಮಂಡಿಸಿ ಅಂಗೀಕಾರ ಪಡೆಯಲು ಬಿಜೆಪಿ ಪ್ಲಾನ್ ಮಾಡಿದೆ. ಸಭಾಪತಿ ಬದಲಾವಣೆ ವಿಚಾರದಲ್ಲಿ ಜೆಡಿಎಸ್ ಬೆಂಬಲ ಸಿಗುವ ವಿಶ್ವಾಸದಲ್ಲಿ ಬಿಜೆಪಿ ಇದೆ. ಸಭಾಪತಿ ಸ್ಥಾನಕ್ಕೆ ಬಿಜೆಪಿಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ, ಸುಶೀಲ್ ನಮೋಶಿ, ಮಹಾಂತೇಶ ಕವಟಗಿಮಠ, ಅರುಣ್ ಶಹಾಪೂರ ಹೆಸರುಗಳು ಕೇಳಿಬರುತ್ತಿವೆ.
ನಾಳೆ ಬೆಳಗ್ಗೆ ಸಭಾಪತಿ ಸ್ಥಾನದ ಅಭ್ಯರ್ಥಿ ಹೆಸರನ್ನು ಬಿಜೆಪಿ ಅಖೈರು ಮಾಡಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ, ಸದನದಲ್ಲಿ ಜೆಡಿಎಸ್ ಪಾತ್ರ ಸ್ಪಷ್ಟವಾಗಿದೆ. ಸಭಾಪತಿ ವಿರುದ್ಧದ ಅವಿಶ್ವಾಸ ಗೊತ್ತುವಳಿ ವಿಚಾರದಲ್ಲಿ ಪಕ್ಷದ ತೀರ್ಮಾನ ನಾಳೆ ಪ್ರಕಟಿಸಲಾಗುವುದು ಎಂದಿದ್ದಾರೆ.
ವಿಪಕ್ಷ ನಾಯಕ ಎಸ್‍ಆರ್ ಪಾಟೀಲ್ ಮಾತನಾಡಿ, ಸಭಾಪತಿಗಳ ವಿರುದ್ದ ಅವಿಶ್ವಾಸ ಗೊತ್ತುವಳಿ ಕ್ರಮಬದ್ಧವಾಗಿಲ್ಲ ಅಂತ ತಿರಸ್ಕೃತವಾಗಿದೆ. ಈ ಬಗ್ಗೆ ಕಾನೂನು ಸಲಹೆ ಪಡೆದು ಸಭಾಪತಿಗಳು ಸದಸ್ಯರಿಗೆ ಹಿಂಬರಹ ನೀಡಿದ್ದಾರೆ. ಹಾಗಾಗಿ ಕಲಾಪದಲ್ಲಿ ಆ ಬಗ್ಗೆ ಚರ್ಚೆಗೆ ಅವಕಾಶ ಇಲ್ಲ ಎಂದು ತಿಳಿಸಿದರು.
ಬೆಂಗಳೂರು: ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಪರದಾಡುತ್ತಿದ್ದ ದಂಪತಿಗೆ ನಗರದ ಬಟ್ಟೆ ವ್ಯಾಪಾರಿಯೊಬ್ಬರು ಸಹಾಯಕ್ಕೆ ಮುಂದಾಗಿ ಮಾನವೀಯತೆ ತೋರಿಸಿದ್ದಾರೆ.
ಬೆಂಗಳೂರು ಬಟ್ಟೆ ವ್ಯಾಪಾರಿ ಸಭಾಪತಿ, ದಂಪತಿಗೆ ಸಹಾಯ ಮಾಡಿದ್ದಾರೆ. ಒಂದು ತಿಂಗಳ ಕಂದಮ್ಮ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿತ್ತು. ಇಂದೇ ನಾರಾಯಣ ನೇತ್ರಾಲಯಕ್ಕೆ ಕರೆದುಕೊಂಡು ಹೋಗಬೇಕಾಗಿತ್ತು. ಆದ್ದರಿಂದ ಬಿಜಾಪುರದಿಂದ ಬಂದಿದ್ದ ದಂಪತಿ ಮಗುವಿನ ಜೊತೆ ಬಸ್ಸಿಗಾಗಿ ಕಾದು ಕುಳಿತಿದ್ದರು.
ಸುಮಾರು ಮೂರು ತಾಸು ಕಾದು ಕುಳಿತರೂ ಬಸ್ ಬಂದಿರಲಿಲ್ಲ. ಇತ್ತ ಆಟೋಗೆ ಹೋಗೋದಕ್ಕೂ ಅವರ ಬಳಿ ಅಷ್ಟೋಂದು ಹಣವೂ ಇರಲಿಲ್ಲ. ಕೊನೆಗೆ ಸಭಾಪತಿ ಅವರು ಪುಟಾಣಿಯನ್ನು ಉಚಿತವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮಾನವೀಯತೆ ಮೆರೆದಿದ್ದಾರೆ.
ಬೆಂಗಳೂರು ಬಟ್ಟೆ ವ್ಯಾಪಾರಿ ಸಭಾಪತಿ ಪ್ರತಿ ವರ್ಷ ಬಂದ್ ಆದ ಸಂದರ್ಭದಲ್ಲಿ ಗರ್ಭಿಣಿಯರಿಗೆ, ಆಸ್ಪತ್ರೆಗೆ ಹೋಗುವವರಿಗೆ ಮತ್ತು ತುರ್ತು ಸೇವೆ ಬೇಕಾದವರಿಗೆ ಉಚಿತವಾಗಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗುವ ವ್ಯವಸ್ಥೆಯನ್ನು ಮಾಡಿಕೊಂಡು ಬಂದಿದ್ದಾರೆ. ಈ ಬಾರಿಯೂ ಕೂಡ ಬಂದ್ ಸಮಯದಲ್ಲಿ ಬಿಜಾಪುರ ದಂಪತಿಯ ಮಗುವನ್ನು ಸ್ವತಃ ಸಭಾಪತಿ ಅವರೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಸೂಚಿಸುತ್ತಿದ್ದಾರೆ.
ಈ ವೇಳೆ ತಾಯಿ ಮಾತನಾಡಿ, ಮಗುವಿಗೆ ಕಣ್ಣಿನ ತೊಂದರೆ ಇದೆ. ಹೀಗಾಗಿ ನಾರಾಯಣ ಆಸ್ಪತ್ರೆಗೆ ತೋರಿಸಲು ಕರೆದುಕೊಂಡು ಬಂದಿದ್ದೇವೆ. ವೈದ್ಯರು ಚಿಕಿತ್ಸೆಗಾಗಿ ಇಂದೇ ಬರಬೇಕು ಎಂದು ಹೇಳಿದ್ದರು. ಆದ್ದರಿಂದ ಬೇಗ ತೋರಿಸಲು ಬಂದಿದ್ದೆವು. ಆದರೆ ಬಸ್ ಸಿಗಲಿಲ್ಲ. ಕೊನೆಗೆ ಇವರೇ ಆಸ್ಪತ್ರೆಗೆ ಬಿಟ್ಟಿದ್ದಾರೆ ಎಂದು ಸಂತಸದಿಂದ ಹೇಳಿದ್ದಾರೆ.
ನಾನು ಬಟ್ಟೆ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಬಂದ್ ವೇಳೆ ಈ ರೀತಿಯ ಸೇವೆ ಮಾಡುತ್ತೇವೆ. ಈ ರೀತಿ ಬಂದ್ ಮಾಡಿದರೆ ಯಾರಿಗೂ ಲಾಭವಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ವಯಸ್ಸಾದರಿಗೆ, ರೋಗಿಗಳಿಗೆ ಮತ್ತು ತುರ್ತು ಪರಿಸ್ಥಿಯಲ್ಲಿರುವರಿಗೆ ಸಹಾಯ ಮಾಡುತ್ತೇವೆ. ಬಂದ್ ಸಮಯದಲ್ಲಿ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಾರೆ ಎಂದು ಕಳಸ ಬಂಡೂರಿ ಸಮಯದಲ್ಲಿ ಮಾಧ್ಯಮಗಳಲ್ಲಿ ನೋಡಿದ್ದೇನೆ. ಆದ್ದರಿಂದ ಪ್ರತಿ ಬಾರಿ ಬಂದ್ ನಡೆದಾಗಲೂ ಉಚಿತ ಕ್ಯಾಬ್ ಸೇವೆ ನೀಡುತ್ತೇನೆ ಎಂದು ಸಭಾಪತಿ ಪಬ್ಲಿಕ್ ಟಿವಿಗೆ ತಿಳಿಸಿದರು.