Tag: ಸಮಯಪ್ರಜ್ಞೆ

  • ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

    ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

    ಹುಬ್ಬಳ್ಳಿ: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರಾದ ಘಟನೆ ಹುಬ್ಬಳ್ಳಿಯ ಬಂಕಾಪುರ್ ಚೌಕ್ ಬಳಿ ನಡೆದಿದೆ.

    ಲಕ್ಷ್ಮೇಶ್ವರ ಮಾರ್ಗದಿಂದ ಹುಬ್ಬಳ್ಳಿಗೆ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿತ್ತು. ಈ ವೇಳೆ ಬಸ್ಸಿನ ಹಿಂಬಂದಿಯ ಚಕ್ರದ ಟೈರ್ ಚಲಿಸುವ ವೇಳೆ ಸಂಪೂರ್ಣ ಹಾಳಾಗಿತ್ತು. ಇದನ್ನು ಅರಿತ ಬಸ್ ಚಾಲಕ ಸುಮಾರು 7 ಕಿ.ಮೀ ಕ್ರಮಿಸಿ ವಾಹನ ನಿಲ್ಲಿಸಿದ್ದಾರೆ.

    ಬಸ್ ಚಾಲಕ ಹುಬ್ಬಳ್ಳಿ ಬಂಕಾಪೂರ್ ಚೌಕಿನವರೆಗೆ ತಂದು ನಿಲ್ಲಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಅಚ್ಚರಿಗೊಂಡಿದ್ದರು. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ-ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

    ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ-ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

    ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದ ಘಟನೆ ನೆಲಮಂಗಲ ಸಮೀಪದ ಮಾದವಾರ ಬಳಿ ನಡೆದಿದೆ.

    ನೆಲಮಂಗಲದಿಂದ ಶಿವಾಜಿನಗರಕ್ಕೆ ತೆರಳುತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಈ ಅವಘಡ ಸಂಭವಿಸಿದೆ. ಬಸ್‍ನ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ನವಯುಗ ಟೋಲ್ ಸಿಬ್ಬಂದಿಗಳು ಬೆಂಕಿ ನಂದಿಸುವ ಮೂಲಕ ಕಾರ್ಯ ಯಶಸ್ವಿಯಾಯಿತು.

    ಬೆಂಕಿ ಅವಘಡದ ಸಂದರ್ಭದಲ್ಲಿ ಬಸ್ಸಿನಲ್ಲಿ ಶಾಲಾ ಮಕ್ಕಳು, ವೃದ್ಧರು ಸೇರಿದಂತೆ 35 ಮಂದಿ ಪ್ರಯಾಣಿಕರಿದ್ದರು. ಈ ಅವಘಡದಿಂದಾಗಿ ಪ್ರಯಾಣಿಕರಿಗೆ ಯಾವುದೇ ಪ್ರಾಣಾಹಾನಿಯಾಗಿಲ್ಲ.

    ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews