– ಕಮಲದ ಹೂವಿನ ಶೈಲಿಯ ಗುಲಾಬಿ ಬಣ್ಣದ ಶರ್ಟ್, ಖಾಕಿ ಪ್ಯಾಂಟ್
ನವದೆಹಲಿ: ಸೆಪ್ಟೆಂಬರ್ 18-22 ರವರೆಗೂ ಸಂಸತ್‌ನ ವಿಶೇಷ ಅಧಿವೇಶನ (Special Parliament Session) ನಡೆಯಲಿದ್ದು ಇದೇ ಸಮಯದಲ್ಲಿ ಸಿಬ್ಬಂದಿಯ ಸಮವಸ್ತ್ರ (Uniform) ಬದಲಾವಣೆಗೂ ಸರ್ಕಾರ ನಿರ್ಧರಿಸಿದೆ. ಸೆಪ್ಟೆಂಬರ್ 18 ರಂದು ಅಧಿವೇಶನ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ದಿನದಂದು ಸಣ್ಣ ಪೂಜೆಯ ಬಳಿಕ ಹೊಸ ಸಂಸತ್ ಭವನಕ್ಕೆ (New Parliament Building) ಔಪಚಾರಿಕ ಪ್ರವೇಶ ನಡೆಯಲಿದೆ.
ಹೊಸ ಸಂಸತ್‌ನಲ್ಲಿ ಹೊಸ ಡ್ರೆಸ್ ಕೋಡ್‌ನೊಂದಿಗೆ (Dress Code) ಸಿಬ್ಬಂದಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ. ಸಂಸತ್ ಭವನದ ಸಿಬ್ಬಂದಿ ಗಾಢ ಗುಲಾಬಿ ಬಣ್ಣದ ನೆಹರು ಜಾಕೆಟ್ ಮತ್ತು ಖಾಕಿ ಬಣ್ಣದ ಪ್ಯಾಂಟ್ ಧರಿಸಲಿದ್ದಾರೆ. ಇವರು ಧರಿಸಲಿರುವ ಶರ್ಟ್ ಕಮಲದ ಹೂವಿನ ಶೈಲಿಯಲ್ಲಿ ವಿನ್ಯಾಸಗೊಳಿಸಿದೆ. ಈ ಸಮವಸ್ತ್ರವನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ (ಎನ್‌ಐಎಫ್‌ಟಿ) ರಚಿಸಿದೆ.
ಉಭಯ ಸದನಗಳಲ್ಲಿನ ಮಾರ್ಷಲ್‌ಗಳ ಉಡುಗೆಯನ್ನೂ ಬದಲಾಯಿಸಲಾಗಿದೆ. ಅವರು ಮಣಿಪುರಿ ಪೇಟವನ್ನು ಧರಿಸಲಿದ್ದಾರೆ. ಸಂಸತ್ ಭವನದ ಭದ್ರತಾ ಸಿಬ್ಬಂದಿಯ ಉಡುಗೆಯೂ ಬದಲಾಗಲಿದ್ದು, ಸಫಾರಿ ಸೂಟ್‌ಗಳ ಬದಲಿಗೆ, ಅವರಿಗೆ ಮಿಲಿಟರಿ ಉಡುಪು ಹೋಲುವ ಬಟ್ಟೆಯನ್ನು ನೀಡಲಾಗುತ್ತದೆ. ಇದನ್ನೂ ಓದಿ: ಮಲೇಷ್ಯಾ ಪ್ರಧಾನಿ ಭೇಟಿ ಮಾಡಿದ ರಜನಿಕಾಂತ್: ಅಚ್ಚರಿಯ ಹೇಳಿಕೆ ನೀಡಿದ ಪ್ರಧಾನಿ
ಸೆಪ್ಟೆಂಬರ್ 18 ರಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿದ್ದು ಈ ಅವಧಿಯಲ್ಲಿ ಒಂದು ದೇಶ ಒಂದು ಚುನಾವಣೆ, ಮಹಿಳಾ ಮೀಸಲಾತಿ ಹಾಗೂ ಇಂಡಿಯಾ ಬದಲು ದೇಶದ ಹೆಸರನ್ನು ಭಾರತ್‌ಗೆ ಅಧಿಕೃಗೊಳಿಸುವ ಬಿಲ್ ಮಂಡನೆಯಾಗಬಹುದು ಎನ್ನಲಾಗಿದೆ. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಹೈವೋಲ್ಟೇಜ್ ಸಭೆ
ಹೈದರಾಬಾದ್: ಅಯ್ಯಪ್ಪ ಮಾಲೆ (Ayyappa Mala) ಧರಿಸಿದ್ದ 6ನೇ ತರಗತಿಯ ವಿದ್ಯಾರ್ಥಿಗೆ (Student) ಶಾಲೆಯಲ್ಲಿ (School) ಪ್ರವೇಶ ನಿರಾಕರಿಸಿರುವ ಘಟನೆ ಬುಧವಾರ ಅಯ್ಯಪ್ಪ ಸ್ವಾಮಿ ಮೊಹ್ನಸ್ ಶಾಲೆಯಲ್ಲಿ ನಡೆದಿದೆ. ಘಟನೆಯ ಬಳಿಕ ಚರ್ಚೆ ಉಂಟಾಗಿ, ಪ್ರತಿಭಟನೆ ನಡೆಸಲಾಗಿದೆ.
ವರದಿಗಳ ಪ್ರಕಾರ ಅಯ್ಯಪ್ಪ ಮಾಲೆ ಧರಿಸಿದ್ದಕ್ಕೆ 6ನೇ ತರಗತಿಯ ವಿದ್ಯಾರ್ಥಿಯನ್ನು ಆತನ ಶಿಕ್ಷಕರು (Teacher) ನಿಂದಿಸಿದ್ದಾರೆ. ಮಾಲಾಧಾರಿಗಳು 41 ದಿನಗಳ ಕಾಲ ವೃತ ನಡೆಸುತ್ತಾರೆ. ಈ ವೇಳೆ ಅವರು ಕಪ್ಪು ಬಟ್ಟೆಯನ್ನು ಧರಿಸುತ್ತಾರೆ. ಆದರೆ ಶಿಕ್ಷಕರು ತರಗತಿಗೆ ಪ್ರವೇಶ ಬೇಕೆಂದರೆ ಕಪ್ಪು ಬಟ್ಟೆ ಹಾಗೂ ತಿಲಕವನ್ನು ತೆಗೆದುಹಾಕುವಂತೆ ವಿದ್ಯಾರ್ಥಿಗೆ ಒತ್ತಾಯಿಸಿದ್ದಾರೆ.
ಇಂತಹುದೇ ಘಟನೆ ನವೆಂಬರ್ 23ರಂದು ಮಂದಮಾರಿಯ ಸಿಂಗರೇಣಿ ಪ್ರೌಢಶಾಲೆಯಲ್ಲೂ ನಡೆದಿತ್ತು. 10ನೇ ತರಗತಿ ವಿದ್ಯಾರ್ಥಿ ಅಯ್ಯಪ್ಪ ಮಾಲೆ ಧರಿಸಿದ್ದಕ್ಕಾಗಿ ಶಾಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿತ್ತು. ವಿದ್ಯಾರ್ಥಿಯ ತಂದೆ ತನ್ನ ಮಗನಿಗೆ ಮಾಲೆ ಧರಿಸಿದ್ದಕ್ಕಾಗಿ ಶಾಲೆಗೆ ಪ್ರವೇಶಿಸಲು ಅನುಮತಿ ನೀಡಲಿಲ್ಲ ಎಂದು ಆರೋಪಿಸಿದ್ದಾರೆ.
#Hyderabad – Student refused entry to school for wearing Ayyappa Mala, kicks in the school uniform debate
ಈ ಎಲ್ಲಾ ವಿವಾದ ಶಾಲಾ ಸಮವಸ್ತ್ರ ವಿಚಾರದ ಹಿನ್ನೆಲೆಯಲ್ಲಿ ಉಂಟಾಗಿದೆ. ಕರ್ನಾಟಕದಲ್ಲಿ ಪ್ರಾರಂಭವಾದ ಹಿಜಬ್ ವಿವಾದದಿಂದಾಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಏಕರೂಪದ ಡ್ರೆಸ್ ಕೋಡ್ ನಿಯಮವನ್ನು ಪಾಲಿಸುವ ಆದೇಶ ಹೊರಡಿಸಲಾಯಿತು. ಇದರಿಂದಾಗಿ ವಿದ್ಯಾರ್ಥಿಗಳು ಸಮವಸ್ತ್ರವನ್ನು ಹೊರತುಪಡಿಸಿ ಹಿಜಬ್, ಸ್ಕಾರ್ಫ್ ಅಥವಾ ಯಾವುದೇ ಇತರ ಉಡುಗೆಗಳನ್ನು ಧರಿಸುವುದನ್ನು ನಿಷೇಧಿಸಲಾಯಿತು. ಆದರೂ ಈ ಆದೇಶವನ್ನು ಹಲವರು ಪ್ರಶ್ನಿಸಿದ್ದಾರೆ. ಇದು ಅಭಿವ್ಯಕ್ತಿ ಹಾಗೂ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗಾಳಿಯಲ್ಲಿ ಗುಂಡುಹಾರಿಸಿ ಹಿಡಿಯಲು ಮುಂದಾದ ಅರಣ್ಯಾಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಗಂಧಚೋರರು
Live Tv
[brid partner=56869869 player=32851 video=960834 autoplay=true]
ಗುರುವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಈ ಕುರಿತಂತೆ ಮಾಹಿತಿ ದೊರೆತ ಮೇರೆಗೆ ಎಸ್‍ಪಿ, ವಿಧಿವಿಜ್ಞಾನ ತಂಡ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಬೆಡ್‌ಶೀಟ್ ಮೇಲೆ ಕಲೆಗಳಿರುತ್ತಿತ್ತು- ಶ್ರೀಗಳ ಬೆಡ್‌ರೂಂ ರಸಹ್ಯ ಬಯಲು
ನ್ಯೂ ಆಜಾದ್ ನಗರ ಚೌಕಿಯ ಪೋಸ್ಟ್ ಇನ್ ಚಾರ್ಜ್ ಆಗಿ ಸಬ್ ಇನ್ಸ್‌ಪೆಕ್ಟರ್ ಸುಧಾಕರ್ ಪಾಂಡೆ ಅವರನ್ನು ನೇಮಿಸಲಾಗಿದೆ. ಬುಧವಾರ ತಡರಾತ್ರಿ ಕಳ್ಳರು ಠಾಣೆಯಲ್ಲಿದ್ದ ಪೆಟ್ಟಿಗೆಯನ್ನು ಕದ್ದು ಪರಾರಿಯಾಗಿದ್ದಾರೆ. ಕಳ್ಳತನವಾಗಿರುವ ವಿಷಯ ಉನ್ನತ ಅಧಿಕಾರಿಗಳಿಗೆ ತಿಳಿದಾಗ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ. ತರಾತುರಿಯಲ್ಲಿ ಐಜಿ ರೇಂಜ್, ಎಸ್‍ಪಿ ಔಟರ್ ಸೇರಿದಂತೆ ಸರ್ಕಲ್ ಫೋರ್ಸ್ ಸ್ಥಳಕ್ಕೆ ಧಾವಿಸಿದರು. ನಂತರ ತಕ್ಷಣವೇ ವಿಧಿವಿಜ್ಞಾನ ತಂಡವನ್ನು ಸ್ಥಳಕ್ಕೆ ಕರೆಸಲಾಯಿತು. ಸುಧಾಕರ್ ಪಾಂಡೇ ಅವರ ನಿರ್ಲಕ್ಷ್ಯವೇ ಈ ಕಳ್ಳತನಕ್ಕೆ ಕಾರಣ ಎಂದು ಇದೀಗ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.
ಈ ಘಟನೆ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್‍ಪಿ ತೇಜ್ ಸ್ವರೂಪ್ ಸಿಂಗ್ ಅವರು, ಪೊಲೀಸ್ ಠಾಣೆಯಲ್ಲಿಯೇ ಈ ಘಟನೆ ನಡೆದಿದ್ದು, ಸರ್ಕಾರಿ ಪಿಸ್ತೂಲ್ ಮತ್ತು 10 ಕಾಟ್ರಿಡ್ಜ್‌ಗಳು ಕಾಣೆಯಾಗಿದೆ. ಈ ವೇಳೆ ಎಸ್‍ಐ ಔಟ್‍ಪೋಸ್ಟ್‌ನಲ್ಲಿದ್ದರು. ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಕಳ್ಳರನ್ನು ಹಿಡಿಯಲು ಐದು ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಸೂರಜ್‌ಕುಂಡ್: ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಪೊಲೀಸರಿಗೆ ಒಂದು ದೇಶ ಒಂದು ಸಮವಸ್ತ್ರ(One Nation One Uniform) ಕಲ್ಪನೆಯನ್ನು ಪ್ರಸ್ತಾಪಿಸಿದ್ದಾರೆ.
ಹರ್ಯಾಣದ ಸೂರಜ್‌ಕುಂಡ್‌ನಲ್ಲಿ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳ ಗೃಹ ಸಚಿವರ ಜೊತೆ ಎರಡು ದಿನ ಚಿಂತನ ಶಿಬಿರವನ್ನು(Chintan Shivir) ಆಯೋಜಿಸಿದೆ. ಈ ಶಿಬಿರ ಗುರುವಾರ ಆರಂಭಗೊಂಡಿದ್ದು ಇಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಇದನ್ನೂ ಓದಿ: IPC, CRPC ಸುಧಾರಣೆಗೆ ಶೀಘ್ರದಲ್ಲೇ ನೂತನ ಕರಡು ಮಂಡನೆ – ಶಾ ಹೇಳಿಕೆ
ಈ ವೇಳೆ ಒಂದು ದೇಶ ಒಂದು ಸಮವಸ್ತ್ರ ಕಲ್ಪನೆಯನ್ನು ಪ್ರಸ್ತಾಪಿಸಿದ ಮೋದಿ ಇದು ಕೇವಲ ಸಲಹೆಯಾಗಿದೆ. ಇದನ್ನು ನಾನು ರಾಜ್ಯಗಳ ಮೇಲೆ ಹೇರಲು ಪ್ರಯತ್ನಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
5, 50, 100 ವರ್ಷಗಳಲ್ಲಿ ಇದು ಆಗಬಹುದು. ಈ ನಿಟ್ಟಿನಲ್ಲಿ ಸ್ವಲ್ಪ ಯೋಚಿಸಿ ಎಂದು ರಾಜ್ಯಗಳಿಗೆ ಸಲಹೆ ನೀಡಿದರು. ಅಪರಾಧ ಮತ್ತು ಅಪರಾಧಿಗಳನ್ನು ನಿಯಂತ್ರಿಸಲು ರಾಜ್ಯಗಳು ಪರಸ್ಪರ ಸಹಕಾರ ನೀಡಬೇಕು ಎಂದು ಮೋದಿ ಹೇಳಿದರು.
ಈ ಶಿಬಿರದಲ್ಲಿ ರಾಜ್ಯಗಳ ಗೃಹ ಕಾರ್ಯದರ್ಶಿಗಳು, ಪೊಲೀಸ್ ಮಹಾ ನಿರ್ದೇಶಕರು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು, ಕೇಂದ್ರ ಪೊಲೀಸ್ ಸಂಸ್ಥೆಗಳ ನಿರ್ದೇಶಕರು ಭಾಗವಹಿಸಿದ್ದರು.
Addressing Chintan Shivir of Home Ministers of states being held in Haryana. https://t.co/LIMv4dfhWv
ಪೊಲೀಸ್ ಪಡೆಗಳ ಆಧುನೀಕರಣ, ಸೈಬರ್ ಅಪರಾಧ ನಿರ್ವಹಣೆ, ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನ ಬಳಕೆ, ಕರಾವಳಿ ಭದ್ರತೆ, ಮಹಿಳಾ ಸುರಕ್ಷತೆ, ಮಾದಕ ವಸ್ತು ಕಳ್ಳ ಸಾಗಣೆ ಮುಂತಾ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ವಿದ್ಯಾರ್ಥಿಗಳ (Students) ಸಮವಸ್ತ್ರದಲ್ಲೂ (Uniform) 40% ಲೂಟಿ ಮಾಡಿಲಾಗಿದೆಯೇ ಬಿ.ಸಿ ನಾಗೇಶ್ (B.C Nagesh) ಅವರೇ? ಸಮವಸ್ತ್ರ ಕೊಡುವುದೇ ವಿಳಂಬವಾಗಿದೆ, ಅದರಲ್ಲೂ ತೆಳುವಾದ ಕಳಪೆ ಬಟ್ಟೆಗಳನ್ನು ನೀಡಲಾಗಿದೆ. ಇದರಲ್ಲೂ ಮೊಟ್ಟೆಯ ಕಮಿಷನ್‍ನಂತೆ, ಬಟ್ಟೆಯಲ್ಲೂ ಕಮಿಷನ್ ಲೂಟಿಯೇ ಎಂದು ಕಾಂಗ್ರೆಸ್ (Congress) ಸರಣಿ ಟ್ವೀಟ್ ಮೂಲಕ ಬಿಜೆಪಿ (BJP) ವಿರುದ್ಧ ಚಾಟಿ ಬೀಸಿದೆ.
ಟ್ವೀಟ್‍ನಲ್ಲಿ ಏನಿದೆ?
ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ 40% ಲೂಟಿ ಮಾಡಿಲಾಗಿದೆಯೇ ಬಿ.ಸಿ ನಾಗೇಶ್ ಅವರೇ? ಸಮವಸ್ತ್ರ ಕೊಡುವುದೇ ವಿಳಂಬವಾಗಿದೆ, ಅದರಲ್ಲೂ ತೆಳುವಾದ ಕಳಪೆ ಬಟ್ಟೆಗಳನ್ನು ನೀಡಲಾಗಿದೆ. ಅರ್ಧ ವರ್ಷ ಕಳೆದಿದೆ, ಇನ್ನರ್ಧ ವರ್ಷ ಬಾಳಿಕೆ ಬಂದರೆ ಸಾಕು ಎಂಬ ಸರ್ಕಾರದ ಆಲೋಚನೆಯೇ? ಮೊಟ್ಟೆಯ ಕಮಿಷನ್‍ನಂತೆ, ಬಟ್ಟೆಯಲ್ಲೂ ಕಮಿಷನ್ ಲೂಟಿಯೇ ಬಿಜೆಪಿ ಸರ್ಕಾರ? ಇದನ್ನೂ ಓದಿ: ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ರು ಸಿದ್ದರಾಮಯ್ಯ
ಆಸ್ಪತ್ರೆಗಳಿಗೆ ವಿದ್ಯುತ್ ಕಡಿತಗೊಳ್ಳುತ್ತದೆ, ಕಳಪೆ ವೆಂಟಿಲೇಟರ್‌ಗಳು ಕೈಕೊಡುತ್ತಿವೆ, ಈಗ ಔಷಧ ಪೂರೈಕೆಯೂ ನಿಂತಿದೆ. ಸರ್ಕಾರಿ ಆಸ್ಪತ್ರೆಗಳ ಔಷಧ ಪೂರೈಕೆದಾರರಿಗೆ ಹಣ ಬಿಡುಗಡೆ ಮಾಡದ ಪರಿಣಾಮವಿದು. 40% ಕಮಿಷನ್ ಸರ್ಕಾರ ಇಷ್ಟೊಂದು ದಿವಳಿಯಾಗಿದೆಯೇ? ಸುಧಾಕರ್ ಎಂಬ ಅಸಮರ್ಥ ಸಚಿವರ ದುರಾಡಳಿತದಲ್ಲಿ ಜನ ಸಾವಿನ ಮನೆ ಸೇರುವಂತಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಮಿಗ್-21 ಫೈಟರ್ ಜೆಟ್ ಸೇನೆಯಿಂದ ನಿವೃತ್ತಿ
ಪೊಲೀಸರನ್ನು ಸರ್ಕಾರದ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆಯೇ ಸರ್ಕಾರ? ಪೊಲೀಸ್ ಇಲಾಖೆಯ ಶಿಸ್ತು ಪ್ರಾಧಿಕಾರದಲ್ಲಿ ಮೇಲ್ಮನವಿ ಸಲ್ಲಿಸುವ ಹಕ್ಕು ಕಿತ್ತುಕೊಳ್ಳುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು. ಆರಗ ಜ್ಞಾನೇಂದ್ರ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ. ಇದನ್ನೂ ಓದಿ: ಮಹಿಳಾ ಪೇದೆ ಹತ್ಯೆ ಪ್ರಕರಣ – ಠಾಣೆಯಲ್ಲೇ ಇದ್ಳು ಹಂತಕಿ!
Live Tv
[brid partner=56869869 player=32851 video=960834 autoplay=true]
ನವದೆಹಲಿ:ವಿಶ್ವಾದ್ಯಂತ ಹಿಜಬ್‌ಗೆ(Hijab) ಮಾನ್ಯತೆ ಇದೆ, ಕರ್ನಾಟಕದಲ್ಲಿ(Karnataka) ಯಾಕಿಲ್ಲ? ಹಿಜಬ್ ನಿರ್ಬಂಧಿಸುವುದು ಎಷ್ಟು ಸರಿ ಎಂದು ಹಿಜಬ್ ಪರ ವಕೀಲರು ಪ್ರಶ್ನಿಸಿದ್ದಾರೆ.
ಶಾಲೆ ಮತ್ತು ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್(High Court) ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್(Supreme Court) ವಿಚಾರಣೆಗೆ ನಡೆಸುತ್ತಿದೆ. ಕಳೆದ ಐದು ದಿನಗಳಿಂದ ನ್ಯಾ. ಹೇಮಂತ್ ಗುಪ್ತಾ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ.
ಇಂದು ಮೂವರು ವಕೀಲರು ಹಿಜಬ್ ಪರವಾಗಿ ವಾದ ಮಂಡಿಸಿದ್ದಾರೆ. ಮೊದಲು ವಾದ ಆರಂಭಿಸಿದ ಹಿರಿಯ ವಕೀಲ ಆದಿತ್ಯ ಸೋಂಧಿ, ಪ್ರಕರಣ ಬಹಳ ಗಂಭೀರವಾಗಿದೆ. ಸಾಮಾಜಿಕ – ಆರ್ಥಿಕ ಮಾನದಂಡಗಳು ಮತ್ತು ವಿದ್ಯಾರ್ಥಿಗಳು ಹಿನ್ನೆಲೆಯನ್ನು ಇಲ್ಲಿ ಪರಿಗಣಿಸಬೇಕಾಗಿದೆ. ನಾನು ಓದುತ್ತಿದ್ದ ಕಾಲೇಜಿನಲ್ಲಿ ಹಿಜಬ್ ಧರಿಸದ ಮುಸ್ಲಿಂ ಸಹಪಾಠಿಗಳು ಇದ್ದರು. ಹಿಜಬ್ ಎನ್ನುವುದು ಒಂದು ಆಯ್ಕೆಯಾಗಿದ್ದು ಅದಕ್ಕೆ ಅನುಮತಿ ನೀಡಬೇಕಿದೆ. ಕೊಡವರಿಗೆ(Kodava) ಶಸ್ತ್ರಾಸ್ತ್ರಗಳನ್ನು(Arms) ಹೊಂದುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ಈ ತೀರ್ಪು ನೀಡಿದೆ. ಧಾರ್ಮಿಕ ಹೋರಾಟ ಅಥವಾ ಸಾಂಸ್ಕೃತಿಕ ಹಕ್ಕಿನ ನಡುವಿನ ಇರುವುದು ತೆಳುವಾದ ಗೆರೆ ಮಾತ್ರ. ಇವುಗಳನ್ನು ಪ್ರತ್ಯೇಕಿಸುವುದು ಕಷ್ಟ. ಸಾರ್ವಜನಿಕ ಸುವ್ಯವಸ್ಥೆಗಾಗಿ ಹಿಜಬ್ ನಿಷೇಧಿಸಿ ಸರ್ಕಾರ ಆದೇಶ ಮಾಡಿದೆ. ಶಾಲೆಗಳಿಗೆ ಸಮವಸ್ತ್ರ ನಿರ್ಧರಿಸುವ ಅಧಿಕಾರ ನೀಡಿದೆ. ಹಿಜಬ್ ನಿಂದ ಯಾವ ಸುವ್ಯವಸ್ಥೆ ಹಾಳಾಗುತ್ತದೆ? ಹುಡುಗಿಯರು ಹಿಜಬ್ ಧರಿಸುವುದು ಸಾಮಾನ್ಯ ಎಂದರು. ಇದನ್ನೂ ಓದಿ: 200 ಕೋಟಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಹಡಗು ಗುಜರಾತ್‌ನಲ್ಲಿ ವಶ
ಬಳಿಕ ವಾದ ಮಂಡಿಸಿದ ಹಿರಿಯ ವಕೀಲ ರಾಜೀವ್ ಧವನ್(Rajeev Dhavan), ಉಡುಗೆ ತೊಡುಗೆಯ ಹಕ್ಕು ವಾಕ್ ಸ್ವಾತಂತ್ರ್ಯದ ಭಾಗವಾಗಿದೆ. ಇದು ಸಾರ್ವಜನಿಕ ಆದೇಶಕ್ಕೆ ಮಾತ್ರ ಒಳಪಟ್ಟಿರುತ್ತದೆ. ಈಗಾಗಲೇ ಉಲ್ಲೇಖಿಸಿರುವ ಪುಟ್ಟಸ್ವಾಮಿ ಮತ್ತು ನಲ್ಸಾ ಪ್ರಕರಣಗಳ ಆದೇಶದಂತೆ ಖಾಸಗಿತನ ಹಕ್ಕಾಗಿದೆ. ಹಿಜಬ್ ಧರಿಸಿದ ವ್ಯಕ್ತಿಯನ್ನು ಧರ್ಮ ಮತ್ತು ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡಲಾಗುವುದಿಲ್ಲ ಎಂದು ವಾದಿಸಿದರು.
ಈ ಪ್ರಕರಣವನ್ನು ಅದರ ಸರಿಯಾದ ದೃಷ್ಟಿಕೋನದಲ್ಲಿ ವಿಚಾರಣೆ ನಡೆಸಬೇಕು. ಇಂದು ಬಹುಸಂಖ್ಯಾತ ಸಮುದಾಯದಲ್ಲಿ ಇಸ್ಲಾಂ ಎಂದು ಬಂದಿದ್ದನ್ನು ಹೊಡೆದುರುಳಿಸುವ ಅತೃಪ್ತಿ ಬಹಳಷ್ಟಿದೆ. ನನ್ನ ಅರ್ಜಿದಾರರು ಕಾಲೇಜಿನಲ್ಲಿದ್ದು ಹಿಜಬ್ ಧರಿಸಿಯೇ ಕರಾಟೆ ಸ್ಪರ್ಧೆಯಲ್ಲಿ ಸಾಧನೆ ಮಾಡಿದ್ದಾಳೆ. ಪ್ರಪಂಚದಾದ್ಯಂತ ಹಿಜಬ್ ಅನ್ನು ಮಾನ್ಯವೆಂದು ಗುರುತಿಸಲಾಗಿದೆ. ಇದು ಲಿಂಗ ಮತ್ತು ಧಾರ್ಮಿಕ ಹಕ್ಕುಗಳನ್ನು ನಿರ್ಧರಿಸುವ ವಿಷಯವಾಗಿದೆ ಎಂದು ಕೋರ್ಟ್‌ಗೆ ತಿಳಿಸಿದರು.
ಕೇಂದ್ರಿಯ ವಿದ್ಯಾಲಯಗಳಲ್ಲಿ ಹಿಜಬ್‌ಗೆ ಅನುಮತಿ ಇದೆ. ಅದು ಕೇಂದ್ರಿಯ ವಿದ್ಯಾಲಯಕ್ಕೆ ಸಂಬಂಧಿಸಿದ ನಿರ್ಧಾರ ಎಂದು ಅವರು ಹೇಳುತ್ತಾರೆ. ಧರ್ಮ ಮತ್ತು ಅದರ ಆಚರಣೆಗಳನ್ನು ಅಗತ್ಯ ಭಾಗಗಳಲ್ಲ ಎಂದು ಹೇಳುವ ಅಧಿಕಾರ ಹೊರಗಿನವರಿಗಿಲ್ಲ. ಅಂತವುಗಳನ್ನು ನಿಷೇಧಿಸಲು ಜಾತ್ಯಾತೀತ ಸರ್ಕಾರ ಮುಕ್ತವಾಗಿಲ್ಲ. ಲಕ್ಷಾಂತರ ಮಹಿಳೆಯರು ಸ್ಕಾರ್ಫ್ ಧರಿಸುತ್ತಿದ್ದಾರೆ. ಸಾರ್ವಜನಿಕ ಸುವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಹೇಳಲು ಏನು ಸಮರ್ಥನೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸ್ಕೂಲ್ ಬಸ್ಸಿನೊಳಗೆ ಉಸಿರುಗಟ್ಟಿ ಬಾಲಕಿ ಸಾವು ಪ್ರಕರಣ- ಶಾಲೆ ಮುಚ್ಚಲು ಆದೇಶ
ಸಮವಸ್ತ್ರ ನಿಯಮ ರೂಪಿಸುವಾಗ ಬುರ್ಖಾಗೆ ಅವಕಾಶ ನೀಡುವುದಿಲ್ಲ ಎಂದು ಹೇಳಬಹುದು. ಹಿಜಬ್ ನಿರ್ಬಂಧಿಸುವುದು ಎಷ್ಟು ಸರಿ? ಸಮವಸ್ತ್ರ ಬಣ್ಣದೇ ಹಿಜಬ್ ಧರಿಸಲಾಗುತ್ತಿದೆ ಎಂದು ವಾದ ಮಂಡಿಸಿದರು.
ಕೊಡವರಿಗೆ ವಿಶೇಷ ವಿನಾಯಿತಿ ಯಾಕೆ?
ಕೊಡಗಿನ ಜನರ ವಿಶಿಷ್ಟ ಸಂಸ್ಕೃತಿಯ ಭಾಗ ಕೋವಿ. ಯೋಧ ಪರಂಪರೆಯ ಜನಾಂಗ ಕೊಡವರಿಗೆ ಕೋವಿ ಬಳಸಲು ವಿಶೇಷ ವಿನಾಯಿತಿಯ ಅನುಮತಿಯಿದೆ. ಇಂಡಿಯನ್ ಆರ್ಮ್ಸ್ ಆಕ್ಟ್ ಸೆಕ್ಷನ್ ಮೂರರ ಪ್ರಕಾರ ಯಾರಿಗೂ ಇಲ್ಲದ ಅನುಮತಿ ಕೊಡವರಿಗೆ ಇದೆ. ಕೊಡಗಿನ ಜನರ ಹಬ್ಬ ಹರಿದಿನ. ಹುಟ್ಟು, ಸಾವು ಎಲ್ಲದರಲ್ಲಿಯೂ ಕೋವಿಯ ಮಹತ್ವವಿದೆ. ಬಂದೂಕು ಕೊಡವರಿಗೆ ಕೇವಲ ಒಂದು ಅಯುಧವಲ್ಲ, ಇದು ಇಲ್ಲಿನ ಜನರ ಧಾರ್ಮಿಕ ಸಂಕೇತ ಕೊಡವರಲ್ಲಿ ಕೋವಿಗೆ ಪೂಜ್ಯಭಾವನೆಯಿದೆ, ಪವಿತ್ರ ಸ್ಥಾನವಿದೆ.
ಸಮರ ಸಮುದಾಯವಾಗಿರುವ ಕೊಡವ ಸಮುದಾಯವು ಸ್ವಾತಂತ್ರ್ಯ ಪೂರ್ವದಿಂದಲೂ ಜುಮ್ಮಾ ಹಿಡುವಳಿದಾರರು, ಅಂದಿನಿಂದ ಅವರು ಈ ವಿನಾಯಿತಿಯ ಲಾಭವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಈಗಲೂ ಅವರಿಗೆ ಅನಿರ್ದಿಷ್ಟ ಅವಧಿಗೆ ವಿನಾಯಿತಿ ನೀಡಲಾಗಿದೆ. ಈ ವಿನಾಯಿತಿ ಕೆಲವು ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಆದ್ದರಿಂದ, ಅಧಿಸೂಚನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯಲಾಗಿದೆ ಎಂದು ಈ ಹಿಂದೆ ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಹಿಜಬ್ ವಿವಾದ ಹಿನ್ನಲೆಯಲ್ಲಿ ಪಿಯುಸಿ ಬೋರ್ಡ್ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಈ ವರ್ಷದಿಂದ ಕಡ್ಡಾಯವಾಗಿ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡ್ ಎಲ್ಲ ಕಾಲೇಜುಗಳಿಗೆ ಸೂಚಿಸಿದೆ.
ಮಾರ್ಗಸೂಚಿಯಲ್ಲಿ ಏನಿದೆ?
ಕಾಲೇಜು ಅಭಿವೃದ್ಧಿ ಸಮಿತಿ ನಿಗದಿ ಮಾಡಿರುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕು. ಒಂದು ವೇಳೆ ಸಮವಸ್ತ್ರ ನಿಯಮ ಇಲ್ಲದೆ ಇದ್ದರೆ ಧಾರ್ಮಿಕ ಭಾವನೆಗೆ ಧಕ್ಕೆ ಆಗದಂತಹ ವಸ್ತ್ರ ಧರಿಸಬೇಕು ಎಂದು ಹೇಳಿದೆ. ಹೈಕೋರ್ಟ್ ತೀರ್ಪಿನ ಅನ್ವಯ ಸಮವಸ್ತ್ರ ಧರಿಸುವಂತೆ ಸೂಚಿಸಿದೆ.
ಹಿಜಬ್ ವಿವಾದದ ಹಿನ್ನೆಲೆಯಲ್ಲಿ ಈ ವರ್ಷ ಮಾರ್ಗಸೂಚಿಯಲ್ಲಿ ಸಮವಸ್ತ್ರದ ಬಗ್ಗೆ ಶಿಕ್ಷಣ ಇಲಾಖೆ ಉಲ್ಲೇಖ ಮಾಡಿದೆ. ಕಳೆದ ವರ್ಷದ ಮಾರ್ಗಸೂಚಿಯಲ್ಲಿ ಸಮವಸ್ತ್ರದ ಬಗ್ಗೆ ಉಲ್ಲೇಖ ಮಾಡಿರಲಿಲ್ಲ. ಈ ವರ್ಷ ಹೈಕೋರ್ಟ್ ತೀರ್ಪು ಪ್ರಕಟವಾದ ಬಳಿಕ ಮಾರ್ಗಸೂಚಿಯಲ್ಲಿ ಸಮವಸ್ತ್ರ ಕಡ್ಡಾಯದ ಬಗ್ಗೆ ಪಿಯುಸಿ ಬೋರ್ಡ್ ಉಲ್ಲೇಖ ಮಾಡಿದೆ.
ಹಾವೇರಿ: ಯಾರಾದರೂ ಸಂಪ್ರದಾಯದ ಹೆಸರಿನಲ್ಲಿ ಅನ್ಯಾಯ ಮಾಡುತ್ತಿದ್ದಾರೆ ಅಂದರೆ ಅದು ಅವರ ಸಂಸ್ಕೃತಿ ಬಿಂಬಿಸುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ಮಾತನಾಡಿ, ಕರಾವಳಿ ಭಾಗದಲ್ಲಿ ಕೆಲ ಸಂಘಟನೆಗಳಿಂದ ತಾಲಿಬಾನ್ ಮಾದರಿ ಸಂಸ್ಕೃತಿ ಹೇರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಅವರೇನು ಹೇಳ್ತಾರೆ, ಇವರೇನು ಹೇಳ್ತಾರೆ ಅನ್ನೋದು ಯಾವುದೂ ಅಲ್ಲ. ಸಂವಿಧಾನ ಬದ್ಧವಾಗಿ ರಾಜ್ಯದ ಉಚ್ಚ ನ್ಯಾಯಾಲಯ ಸಮವಸ್ತ್ರ ಪಾಲಿಸಿ ಎಂದು ಹೇಳಿದೆ. ಅದನ್ನು ಪಾಲಿಸಬೇಕು ಅನ್ನೋದು ಸರ್ಕಾರದ ನಿಲುವಾಗಿದೆ. ಹೈಕೋರ್ಟ್ ತೀರ್ಪುನ್ನು ಮೀರಿ ಯಾರಾದರೂ ಹೇಳುತ್ತಾರೆ ಅಂದರೆ ಅವರಿಗೆ ಸಂವಿಧಾನದ ಮೇಲೆ ಇರುವ ಗೌರವವನ್ನು ಪ್ರಶ್ನಿಸುವ ಅನಿವಾರ್ಯತೆ ಇದೆ ಎಂದು ಸ್ಪಷ್ಟಪಡಿಸಿದರು.
ಹೈಕೋರ್ಟ್ ಏನು ಹೇಳಿದೆ, ಅದಕ್ಕೆ ನಮ್ಮ ಬದ್ಧತೆ ಇದೆ. ಯಾರಾದರೂ ಸಂಪ್ರದಾಯದ ಹೆಸರಿನಲ್ಲಿ ಅನ್ಯಾಯ ಮಾಡುತ್ತಾರೆ ಅಂದರೆ ಅದು ಅವರ ಸಂಸ್ಕೃತಿ ಬಿಂಬಿಸುತ್ತದೆ. ಸಂವಿಧಾನದ ಆಶಯದಂತೆ ಕೋರ್ಟ್ ತೀರ್ಪಿನಂತೆ ಸಮವಸ್ತ್ರ ಕಡ್ಡಾಯ ಎಂದು ಈಗಾಗಲೇ ಸರ್ಕಾರ ಆದೇಶ ಕೊಟ್ಟಿದೆ. ಸರ್ಕಾರ ಕಠಿಣ ಕ್ರಮವನ್ನು ತೆಗೆದುಕೊಂಡಿದೆ ಎಂದರು. ಇದನ್ನೂ ಓದಿ:ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅರ್ಜಿ ವಜಾ
ಕೆಲವರು ಮತೀಯವಾದ ಇಟ್ಟುಕೊಂಡು ರಾಷ್ಟ್ರೀಯವಾದಕ್ಕೆ ಸವಾಲು ಹಾಕುವಂತಹ ವಿಚಾರ ತಾವೆಲ್ಲಾ ಕೇಳಿದ್ದೀರಿ. ಇದನ್ನು ಸ್ಪಷ್ಟವಾಗಿ ನಿಯಂತ್ರಣಕ್ಕೆ ತರುತ್ತೇವೆ. ಯಾರೂ ಕೂಡಾ ಕಾನೂನಿಗಿಂತ ಮೇಲಲ್ಲ. ನಮ್ಮ ವ್ಯವಸ್ಥೆಗಳು, ಆಚರಣೆಗಳು, ಆಲೋಚನೆಗಳು, ನಂಬಿಕೆಗಳು ನಮ್ಮ ಚೌಕಟ್ಟಿನಲ್ಲಿ ಸಾಂಪ್ರದಾಯಿಕವಾಗಿ, ಖಾಸಗಿಯಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ. ಇದನ್ನು ಉಲ್ಲಂಘಿಸಿದರೇ ಕಠಿಣ ಕ್ರಮ ಕೈಗೊಳ್ಳುತ್ತೇವೆ, ಕಾನೂನಿಗೆ ಪೂರಕವಾದ ವಾತಾವಣವನ್ನು ಒದಗಿಸುತ್ತೇವೆ. ಕಾನೂನಿಗೆ ಸೆಡ್ಡು ಹೊಡೆಯುವವರನ್ನು ನಿಯಂತ್ರಣ ಮಾಡುವ ಅಧಿಕಾರ ಇದೆ. ಅದನ್ನೂ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ:ಉದ್ಧವ್ ಠಾಕ್ರೆ ಸಿಎಂ ಆಗಿದ್ದಕ್ಕೆ ರಾಜ್ ಠಾಕ್ರೆಗೆ ಧ್ವನಿವರ್ಧಕಗಳ ಸಮಸ್ಯೆ: ಸಂಜಯ್ ರಾವತ್
ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿತರಿಸುವ ಸಮವಸ್ತ್ರದಲ್ಲಿ ಬಹು ಕೋಟಿಯ ಹಗರಣ ಬೆಳಕಿಗೆ ಬಂದಿದ್ದು, ಇದು ಶಿಕ್ಷಣ ಸಚಿವರ ಕಮಿಷನ್ ದಂಧೆಯಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ಆಗ್ರಹಿಸಿದೆ.
ಆರ್‌ಟಿಇ ಕಾಯ್ದೆಯಡಿ ಬರುವ ವಿದ್ಯಾರ್ಥಿಗಳಿಗೆ 2019ರ ಕರ್ನಾಟಕ ಉಚ್ಛ ನ್ಯಾಯಾಲಯದ ಆದೇಶದಲ್ಲಿ ಸರ್ಕಾರವು ಹೊಲಿದ ಸಮವಸ್ತ್ರ ನೀಡಬೇಕೆಂದು ಹೇಳಿದೆ. ಈ ಹಿಂದೆ ಖಾಸಗಿ ಸಂಸ್ಥೆಗಳ ಮೂಲಕ ಸರ್ಕಾರ ನೀಡಿದ್ದ ಟೆಂಡರ್ ಪ್ರಕಾರ ಕೇವಲ 230 ರೂ.ಗೆ ಹೊಲಿದ ಎರಡು ಜೊತೆ ಸಮವಸ್ತ್ರ ಜೊತೆಗೆ ಶೂ, ಸಾಕ್ಸ್ ಹಾಗೂ ಟೈ ಕೂಡ ಎಸ್‍ಡಿಎಂಸಿ ಮುಖಾಂತರ ವಿತರಣೆ ಮಾಡಲಾಗಿತ್ತು. ಇದರಿಂದ ಸ್ಥಳೀಯ ವ್ಯಾಪಾರಿಗಳಿಗೆ ಉದ್ಯೋಗವಾಗುತ್ತಿದ್ದು ಆದರೆ ಇದೀಗ ಸರ್ಕಾರವು ಎಸ್‍ಡಿಎಂಸಿಯನ್ನು ಕಡೆಗಣಿಸಿ, ಕೇವಲ ಕಮಿಷನ್ ವ್ಯಾವೋಹದಿಂದ ಮಹಾರಾಷ್ಟ್ರ ಮೂಲದ ಕಂಪನಿಗೆ ಟೆಂಡರ್ ನೀಡಿ 250 ರೂ. ಗಳಂತೆ ಹೊಲಿಯದ ಬಟ್ಟೆಯನ್ನು ನೀಡಲು ಮುಂದಾಗಿದೆ. ಈ ಮುಖಾಂತರ ಬಹು ಕೋಟಿಯ ಹಗರಣ ನಡೆದಿದೆ ಎಂದು ಆರೋಪಿಸಿದೆ. ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ ಸೋಲಿನ ಬಳಿಕ ಎಚ್ಚೆತ್ತ ಕಾಂಗ್ರೆಸ್ – ಗುಜರಾತ್ ಎಲೆಕ್ಷನ್ ಮೇಲೆ ಕಣ್ಣು
ಶಿಕ್ಷಣ ಸಚಿವರು ಈ ಹಗರಣದ ಹಿಂದೆ ಕಮಿಷನ್ ದಂಧೆ ನಡೆಸುತ್ತಿದ್ದು ಉಚ್ಛ ನ್ಯಾಯಾಲಯದ ತೀರ್ಪನ್ನು ಕೂಡ ಪರಿಗಣಿಸದೆ ನ್ಯಾಯಾಲಯದ ನಿಂದನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ ಕಮಿಷನ್ ದಂಧೆ ನಡೆಸಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿರುವ ಶಿಕ್ಷಣ ಸಚಿವರು ಶೀಘ್ರ ರಾಜೀನಾಮೆ ನೀಡಬೇಕೆಂದು ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ ಆಗ್ರಹಿಸಿದ್ದಾರೆ.
ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಪಿಯುಸಿ ಬೋರ್ಡ್ ಸಮವಸ್ತ್ರ ಕಡ್ಡಾಯಗೊಳಿಸಿದೆ.
ಈ ಹಿಂದೆ ರಾಜ್ಯದಲ್ಲಿ ಹಿಜಬ್ ವಿವಾದ ಬಳಿಕ ಶಾಲಾ-ಕಾಲೇಜ್‍ಗಳಲ್ಲಿ ಸಮವಸ್ತ್ರ ಕಡ್ಡಾಯ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಆ ಬಳಿಕ ಇದೀಗ ದ್ವಿತೀಯ ಪಿಯುಸಿ ಎಕ್ಸಾಂಗೆ ಹಿಜಬ್ ನಿಷೇಧದ ಬಗ್ಗೆ ಪಿಯುಸಿ ಬೋರ್ಡ್ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರಿ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ನಿಗಧಿ ಪಡಿಸಿದ ಸಮವಸ್ತ್ರ ಧರಿಸಬೇಕು. ಖಾಸಗಿ ಕಾಲೇಜುಗಳು ಕಾಲೇಜ್ ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಪರಿಷ್ಕೃತ ವೇಳಾಪಟ್ಟಿ ಹೀಗಿದೆ:
ಏಪ್ರಿಲ್ 22- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏಪ್ರಿಲ್ 23- ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ಏಪ್ರಿಲ್ 25- ಅರ್ಥಶಾಸ್ತ್ರ
ಏಪ್ರಿಲ್ 26- ರಸಾಯನಶಾಸ್ತ್ರ, ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ, ಮೂಲ ಗಣಿತ
ಏಪ್ರಿಲ್ 27- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28- ಕನ್ನಡ, ಅರೇಬಿಕ್
ಮೇ 4- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 5- ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮೇ 6- ಇಂಗ್ಲಿಷ್
ಮೇ 10- ಇತಿಹಾಸ, ಭೌತಶಾಸ್ತ್ರ
ಮೇ 12- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 14- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 17- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮೇ 18- ಹಿಂದಿ