Tag: ಸಮಾಜವಾದಿ ಪಕ್ಷ

  • 23 ತಿಂಗಳ ಜೈಲುವಾಸದ ಬಳಿಕ ಜಾಮೀನು – ಎಸ್ಪಿ ನಾಯಕ ಅಜಮ್ ಖಾನ್ ಬಿಡುಗಡೆ

    23 ತಿಂಗಳ ಜೈಲುವಾಸದ ಬಳಿಕ ಜಾಮೀನು – ಎಸ್ಪಿ ನಾಯಕ ಅಜಮ್ ಖಾನ್ ಬಿಡುಗಡೆ

    ಲಕ್ನೋ: 23 ತಿಂಗಳ ಜೈಲುವಾಸದ ಬಳಿಕ ಇಂದು (ಸೆ.23) ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಮ್ ಖಾನ್ (Azam Khan) ಅವರು ಉತ್ತರಪ್ರದೇಶದ (Uttara Pradesh) ಸೀತಾಪುರ (Sitapur) ಜೈಲಿನಿಂದ ಬಿಡುಗಡೆಯಾದರು.

    ಸೆ.10ರಂದು ಅಲಹಾಬಾದ್ ಹೈಕೋರ್ಟ್ ಅಜಮ್ ಖಾನ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ನ್ಯಾಯಾಲಯ ವಿಧಿಸಿದ ದಂಡ ಪಾವತಿ ಹಾಗೂ ಇನ್ನಿತರ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸದ ಹಿನ್ನೆಲೆ ಬಿಡುಗಡೆ ತಡವಾಗಿತ್ತು. ಬಳಿಕ ಇಂದು ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಬಿಡುಗಡೆ ಮಾಡಲಾಯಿತು.ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ – 7 ಮಂದಿ ಬಲಿ

    ಇನ್ನೂ ಅಜಮ್ ಖಾನ್ ಬಿಡುಗಡೆ ಹಿನ್ನೆಲೆ ಸೀತಾಪುರ ನಗರದಲ್ಲಿ ಸೆಕ್ಷನ್ 144ರ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಹೀಗಾಗಿ ಅಜಮ್ ಖಾನ್ ಬಿಡುಗಡೆ ವೇಳೆ ಬಂದಿದ್ದ ಬೆಂಬಲಿಗರ ಗುಂಪನ್ನು ಹೆಚ್ಚು ಕಾಲ ಜೈಲಿನ ಗೇಟ್ ಬಳಿ ನಿಲ್ಲಲು ಅವಕಾಶ ನೀಡಲಿಲ್ಲ ಎಂದು ತಿಳಿದುಬಂದಿದೆ.

    ಎಸ್ಪಿ ನಾಯಕ ಅಜಮ್ ಖಾನ್ ಅವರ ವಿರುದ್ಧ ಒಟ್ಟು 104 ಪ್ರಕರಣಗಳಿದ್ದು, ಆ ಪೈಕಿ 12 ಪ್ರಕರಣಗಳಲ್ಲಿ ತೀರ್ಪು ನೀಡಲಾಗಿದೆ. ಇನ್ನೂ 5 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದ್ದು, 7 ಪ್ರಕರಣಗಳು ಖುಲಾಸೆಯಾಗಿವೆ. ಪ್ರಸ್ತುತ 59 ಪ್ರಕರಣಗಳು ಸೆಷನ್ಸ್ ನ್ಯಾಯಾಲಯದಲ್ಲಿ ಹಾಗೂ 19 ಪ್ರಕರಣಗಳು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಬಾಕಿ ಉಳಿದಿವೆ. ಸದ್ಯ ಹೈಕೋರ್ಟ್‌ನಿಂದ ಜಾಮೀನು ಮಂಜೂರಾದ ಹಿನ್ನೆಲೆ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಇಬ್ಲೂರು ಜಂಕ್ಷನ್ ಟ್ರಾಫಿಕ್ ಸಮಸ್ಯೆ: ಅಜೀಂ ಪ್ರೇಮ್ ಜೀಗೆ ಸಿಎಂ ಪತ್ರ

     

  • ಹಣಕಾಸು ವಿಚಾರಕ್ಕೆ ವ್ಯಕ್ತಿಗೆ ಜೀವ ಬೆದರಿಕೆ – ಯುಪಿ ಸಂಸದನ ಪುತ್ರನ ವಿರುದ್ಧ ಎಫ್‍ಐಆರ್

    ಹಣಕಾಸು ವಿಚಾರಕ್ಕೆ ವ್ಯಕ್ತಿಗೆ ಜೀವ ಬೆದರಿಕೆ – ಯುಪಿ ಸಂಸದನ ಪುತ್ರನ ವಿರುದ್ಧ ಎಫ್‍ಐಆರ್

    ಲಕ್ನೋ: ಸಮಾಜವಾದಿ ಪಕ್ಷದ (Samajwadi Party) ಫೈಜಾಬಾದ್ ಸಂಸದ ಅವಧೇಶ್ ಪ್ರಸಾದ್ ಅವರ ಪುತ್ರ ಅಜಿತ್ ಪ್ರಸಾದ್ ವಿರುದ್ಧ ಅಪಹರಣ, ಬೆದರಿಕೆ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ರವಿ ತಿವಾರಿ ಎಂಬವರು ಇಲ್ಲಿನ ಕೊತ್ವಾಲಿ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್‍ಐಆರ್ ದಾಖಲಿಸಿದ್ದಾರೆ. ದೂರಿನ ಅಡಿ ಬಿಎನ್‍ಎಸ್ ಸೆಕ್ಷನ್ 140 (3) (ಅಪಹರಣ), 115 (2) (ಹಲ್ಲೆ), 351 (3) (ಜೀವ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೆಲಸ ಬಿಟ್ಟು ಬೈಕ್ ಸಾಲ ಹೇಗೆ ಕಟ್ತೀಯಾ?: ಬುದ್ಧಿವಾದ ಹೇಳಿದ್ದಕ್ಕೆ ನೇಣಿಗೆ ಶರಣಾದ ಯುವಕ

    ಶನಿವಾರ ಮಧ್ಯಾಹ್ನ ಜಮೀನು ಖರೀದಿ ಕಮಿಷನ್ ವಿಚಾರದಲ್ಲಿ ಅಜಿತ್ ಪ್ರಸಾದ್ ಹಾಗೂ ರವಿ ತಿವಾರಿ ನಡುವೆ ಗಲಾಟೆಯಾಗಿದೆ. ನಂತರ ಫೈಜಾಬಾದ್ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಶಾಖೆಯ ಬಳಿ ಅಜಿತ್ ಪ್ರಸಾದ್ ಮತ್ತು ಇತರ ಐದಾರು ಮಂದಿ ತಿವಾರಿಯವರನ್ನು ಅಪಹರಿಸಿ, ಹಲ್ಲೆ, ಬೆದರಿಕೆ ಹಾಕಿದ್ದಾರೆ ಎಂದು ಎಫ್‍ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ತನಿಖೆ ನಡೆಯತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆಸ್ತಿ ವ್ಯವಹಾರದಲ್ಲಿ ತೊಡಗಿರುವ ಅಜಿತ್ ಪ್ರಸಾದ್ ಅವರು ಮಿಲ್ಕಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ. ಪ್ರಸಾದ್ ತಂದೆ ಇಲ್ಲಿನ ಶಾಸಕರಾಗಿದ್ದರು. ಅವರು ಸಂಸದರಾಗಿ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಇದನ್ನೂ ಓದಿ: ಬೆಂಗಳೂರಲ್ಲಿ ಮಹಿಳೆ ಭೀಕರ ಹತ್ಯೆ; ಅಶ್ರಫ್‌ ಸೇರಿ ನಾಲ್ವರ ಮೇಲೆ ಕುಟುಂಬಸ್ಥರ ಅನುಮಾನ

  • ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್‌ಗೆ 7 ವರ್ಷ ಜೈಲು ಶಿಕ್ಷೆ

    ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್‌ಗೆ 7 ವರ್ಷ ಜೈಲು ಶಿಕ್ಷೆ

    ಲಕ್ನೋ: ಕಾನ್ಪುರದ (Kanpur) ಜಾಜ್ಮೌ ಪ್ರದೇಶದಲ್ಲಿ ಬೆಂಕಿ ಹಚ್ಚಿ ಮನೆ ಸುಟ್ಟ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್‌ ಸೋಲಂಕಿಗೆ (Irfan Solanki) 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕಾನ್ಪುರದ ಸಂಸದ-ಶಾಸಕ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

    ಮನೆಗೆ ಬೆಂಕಿಯಿಟ್ಟ ಪ್ರಕರಣದಲ್ಲಿ ಸೋಲಂಕಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಆತನ ಸಹೋದರ ರಿಜ್ವಾನ್ ಸೋಲಂಕಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಲ್ಲರಿಗೂ ಶಿಕ್ಷೆ ವಿಧಿಸಲಾಗಿದೆ. 2022ರ ನವೆಂಬರ್‌ನಲ್ಲಿ ಜಾಜ್ಮೌದಲ್ಲಿ ವಿಡಿಪಿಡಬ್ಲ್ಯೂ ಅವರ ಮನೆಗೆ ಬೆಂಕಿ ಹಚ್ಚಿದ ಆರೋಪ ಸಮಾಜವಾದಿ ಪಕ್ಷದ ನಾಯಕರ ಮೇಲಿದೆ. ಇದನ್ನೂ ಓದಿ: ಮಹಾರಾಷ್ಟ್ರ ಡಿಸಿಎಂ ಫಡ್ನವೀಸ್‌ ರಾಜೀನಾಮೆ ಪ್ರಸ್ತಾಪ ತಿರಸ್ಕರಿಸಿದ ಅಮಿತ್‌ ಶಾ

    ಕೋರ್ಟ್‌ ಆದೇಶದಿಂದಾಗಿ ಸೋಲಂಕಿ, ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಒಳಗಾಗುವ ಯಾವುದೇ ಶಾಸಕರು ತಮ್ಮ ಸ್ಥಾನದಿಂದ ಅನರ್ಹರಾಗುತ್ತಾರೆ. ಗಂಭೀರ ಕ್ರಿಮಿನಲ್‌ ಅಪರಾಧ ಹೊಂದಿರುವ ವ್ಯಕ್ತಿ ಶಾಸಕರಾಗಿ ಸೇವೆ ಸಲ್ಲಿಸಲು ಸಾಧ್ಯವಿಲ್ಲ ಎಂದು ಕಾನೂನು ಹೇಳುತ್ತದೆ. ಪ್ರತಿ ಅಪರಾಧಿಗೆ ಒಟ್ಟು 30,500 ರೂ. ದಂಡವನ್ನು ವಿಧಿಸಲಾಗಿದೆ.

    ನಜೀರ್‌ ಫಾತಿಮಾ ಪರವಾಗಿ ಜಾಜ್ಮೌ ಪೊಲೀಸ್‌ ಠಾಣೆಯಲ್ಲಿ 2022ರ ನವೆಂಬರ್‌ 8 ರಂದು ಪ್ರಕರಣ ದಾಖಲಾಗಿತ್ತು. ಶಾಸಕ ಸೇರಿ ಒಟ್ಟು 12 ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು. ತನ್ನ ಮನೆಯನ್ನು ಎಲ್ಲರೂ ಸುಟ್ಟು ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಇದನ್ನೂ ಓದಿ: ನರೇಂದ್ರ ಮೋದಿ ಪ್ರಮಾಣವಚನಕ್ಕೆ ಬಿಎಸ್‌ವೈಗೆ ಆಹ್ವಾನ

  • ಕನೌಜ್‌ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ಸ್ಪರ್ಧೆ

    ಕನೌಜ್‌ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ಸ್ಪರ್ಧೆ

    ಲಕ್ನೋ: ಸಮಾಜವಾದಿ ಪಕ್ಷದ (Samajwadi Party) ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕನೌಜ್‌ನಿಂದ ಸ್ಪರ್ಧಿಸಲಿದ್ದಾರೆ.

    ಯಾದವ್‌ ಅವರನ್ನು ಮೂರು ಬಾರಿ ಸಂಸತ್ತಿಗೆ ಕಳುಹಿಸಿದ ಕ್ಷೇತ್ರ ಮತ್ತು ಅವರ ಪತ್ನಿ ಡಿಂಪಲ್ ಯಾದವ್ ಹಾಗೂ ಎಸ್‌ಪಿ ದಿವಂಗತ ಮುಲಾಯಂ ಸಿಂಗ್ ಯಾದವ್‌ಗೆ ಮತ ಹಾಕಿ ಗೆಲ್ಲಿಸಿದ್ದ ಕ್ಷೇತ್ರವಿದು. ಇದನ್ನೂ ಓದಿ: ಸಂಪತ್ತು ಸಮೀಕ್ಷೆಯ ಮೂಲಕ ಅನ್ಯಾಯದ ಪ್ರಮಾಣವನ್ನು ಕಂಡುಹಿಡಿಯಲು ಬಯಸುತ್ತೇನೆ: ರಾಗಾ

    ಯುಪಿ ಮಾಜಿ ಮುಖ್ಯಮಂತ್ರಿ ಯಾದವ್ ಅವರು ನಾಳೆ ಮಧ್ಯಾಹ್ನ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಪಕ್ಷವು ತಿಳಿಸಿದೆ. ಅವರು 2019 ರಲ್ಲಿ ಅಜಂಗಢ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಆದರೆ ಅವರು 2022 ರಲ್ಲಿ ಕರ್ಹಾಲ್‌ನಿಂದ ಯುಪಿ ವಿಧಾನಸಭೆಗೆ ಆಯ್ಕೆಯಾದ ನಂತರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

    ಕನೌಜ್‌ ಕ್ಷೇತ್ರ ಸಮಾಜವಾದಿ ಪಕ್ಷದ ಭದ್ರಕೋಟೆಯಾಗಿತ್ತು. ಆದರೆ 2019 ರಲ್ಲಿ ಸುಬ್ರತ್ ಪಾಠಕ್ ಅವರು 14,000 ಕ್ಕಿಂತ ಕಡಿಮೆ ಮತಗಳಿಂದ ಗೆಲ್ಲುವ ಮೂಲಕ ಕ್ಷೇತ್ರವನ್ನು ಬಿಜೆಪಿ ವಶಕ್ಕೆ ಪಡೆಯಿತು. 2012 ರಲ್ಲಿ ನಡೆದ ಉಪಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರ ಪತ್ನಿ ಈ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದರು. 2014 ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಮತ್ತೆ ಗೆದ್ದಿದ್ದರು. ಇದನ್ನೂ ಓದಿ: ವ್ಯಕ್ತಿಯ ಸಾವಿನ ನಂತರವೂ ಆಸ್ತಿ ಕಿತ್ತುಕೊಳ್ಳುವ ಮೂಲಕ ಕಾಂಗ್ರೆಸ್‌ ಲೂಟಿಗೆ ಇಳಿದಿದೆ: ನರೇಂದ್ರ ಮೋದಿ

    ಅಖಿಲೇಶ್ ಯಾದವ್ ಅವರು 2000 ರ ಉಪಚುನಾವಣೆಯಲ್ಲಿ ಕನೌಜ್‌ನಲ್ಲಿ ಗೆದ್ದಿದ್ದರು. 2004 ಮತ್ತು 2009 ರ ಸಾರ್ವತ್ರಿಕ ಚುನಾವಣೆಗಳಲ್ಲೂ ಗೆದ್ದು ಭದ್ರಬುನಾದಿ ಹಾಕಿದ್ದರು. ಈ ಚುನಾವಣೆಗಳಲ್ಲಿ ಕ್ರಮವಾಗಿ 3 ಲಕ್ಷ ಮತ್ತು 2.5 ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದರು.

  • ಅಧಿಕಾರಕ್ಕೆ ಬಂದರೆ ಮೊಬೈಲ್‌ ಡೇಟಾಗೆ 500 ರೂ. ಫ್ರೀ – ಅಖಿಲೇಶ್‌ ಯಾದವ್‌ ಘೋಷಣೆ

    ಅಧಿಕಾರಕ್ಕೆ ಬಂದರೆ ಮೊಬೈಲ್‌ ಡೇಟಾಗೆ 500 ರೂ. ಫ್ರೀ – ಅಖಿಲೇಶ್‌ ಯಾದವ್‌ ಘೋಷಣೆ

    ಲಕ್ನೋ: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮೊಬೈಲ್ ಡೇಟಾಗೆ (Mobile Data) ಉಚಿತವಾಗಿ 500 ರೂ. ಹಣವನ್ನು ಎಲ್ಲಾ ಬಿಪಿಎಲ್‌ (BPL) ಪಡಿತರ ಕಾರ್ಡ್‌ ಹೊಂದಿದ ಗ್ರಾಹಕರಿಗೆ ನೀಡಲಾಗುವುದು ಎಂದು ಸಮಾಜವಾದಿ ಪಕ್ಷ ಹೇಳಿದೆ.

    ಎಸ್‌ಪಿ ಅಧ್ಯಕ್ಷ ಅಖಿಲೇಶ್‌ ಯಾದವ್‌ (Akhilesh Yadav) ಪಕ್ಷದ ಕಚೇರಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು ಉಚಿತ ಲ್ಯಾಪ್‌ಟಾಪ್ ನೀಡಿದ ನಂತರ ಸಮಾಜದಲ್ಲಿ ದೊಡ್ಡ ಬದಲಾವಣೆಯಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಗೆದ್ದು ಅಧಿಕಾರಕ್ಕೆ ಏರಿದರೆ ಮೊಬೈಲ್‌ ಡೇಟಾಗೆ 500 ರೂ. ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ರೋಡ್‌ ಶೋ, ಮೈಸೂರಿನಲ್ಲಿ ಸಮಾವೇಶ – ಮೋದಿ ಕಾರ್ಯಕ್ರಮದಲ್ಲಿ ಬದಲಾವಣೆ

    ಪ್ರಣಾಳಿಕೆಯಲ್ಲಿ ಏನಿದೆ?
    – 2025ರ ಒಳಗಡೆ ಜಾತಿ ಆಧಾರಿತ ಸಮೀಕ್ಷೆ
    – ‘ಅಗ್ನಿಪಥ್‌’ ಯೋಜನೆ ರದ್ದು- ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿಯನ್ನು ಪರಿಚಯ
    – ಸರ್ಕಾರಿ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ
    – ಸ್ವಾಮಿನಾಥನ್ ವರದಿಯಂತೆ ಕೃಷಿ ಬೆಳೆಗಳಿಗೆ ಎಂಎಸ್‌ಪಿ ಗೆ ಕಾನೂನು ಖಾತರಿ
    – ಅರೆಸೇನಾ ಸಿಬ್ಬಂದಿ ಸೇರಿದಂತೆ ಎಲ್ಲರಿಗೂ ಹಳೆಯ ಪಿಂಚಣಿ ಯೋಜನೆ (OPS) ಪ್ರಾರಂಭ
    – ಎಲ್ಲಾ ಭೂರಹಿತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮಾಸಿಕ 5,000 ರೂಪಾಯಿ ಪಿಂಚಣಿ   ಇದನ್ನೂ ಓದಿ: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಕಾಂಗ್ರೆಸ್‌ ಬಿಟ್ಟುಕೊಟ್ಟಿದೆಯಾ?; ದ್ವೀಪ ಎಲ್ಲಿದೆ? – ಭಾರತಕ್ಕೆ ಯಾಕೆ ಮುಖ್ಯ?

    ಎಸ್‌ಪಿ INDIA ಒಕ್ಕೂಟದ ಭಾಗವಾಗಿದ್ದು, ಉತ್ತರ ಪ್ರದೇಶದಲ್ಲಿ ಎಸ್‌ಪಿ ಮತ್ತು ಕಾಂಗ್ರೆಸ್‌ ಜೊತೆಯಾಗಿ ಲೋಕಸಭಾ ಚುನಾವಣೆ ಎದುರಿಸುತ್ತಿದೆ.

     

  • ಸಮಾಜವಾದಿ ಪಕ್ಷದ ಅಭ್ಯರ್ಥಿ ಕಾಜಲ್ ನಿಶಾದ್ ಆಸ್ಪತ್ರೆಗೆ ದಾಖಲು

    ಸಮಾಜವಾದಿ ಪಕ್ಷದ ಅಭ್ಯರ್ಥಿ ಕಾಜಲ್ ನಿಶಾದ್ ಆಸ್ಪತ್ರೆಗೆ ದಾಖಲು

    ಲಕ್ನೋ: ಗೋರಖ್‌ಪುರ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ (Samajwadi Party)  ಅಭ್ಯರ್ಥಿ ಕಾಜಲ್ ನಿಶಾದ್ (Kajal Nishad) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಲಕ್ನೋದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಸಂಬಂಧ ಪತಿ ಸಂಜಯ್ ನಿಶಾದ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಕಾಜಲ್ ಅವರು ರಕ್ತದೊತ್ತಡ ಮತ್ತು ಹೃದಯದ ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಏಪ್ರಿಲ್ 5 ರಂದು ಆಕೆಯ ಆರೋಗ್ಯ ಹಠಾತ್ ಹದಗೆಟ್ಟ ನಂತರ ಕಾಜಲ್ ಅವರನ್ನು ಸ್ಟಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ನಿಶಾದ್‌ ಅವರಿಗೆ ಹೃದಯ ಸ್ತಂಭನವಾಗಿದ್ದು, ವೈದ್ಯರು ಅವರನ್ನು ಲಕ್ನೋಗೆ ಕಳುಹಿಸಿದ್ದಾರೆ ಎಂದರು. ಇದನ್ನೂ ಓದಿ: ಆರೋಗ್ಯವಾಗಿದ್ದರೂ ಹೃದಯ ಸ್ತಂಭನ ಯಾಕೆ ಆಗುತ್ತೆ? – ಎಲ್ಲ ಪ್ರಶ್ನೆಗಳಿಗೆ ಡಾ. ಮಂಜುನಾಥ್ ಉತ್ತರ

    41 ವರ್ಷದ ಕಾಜಲ್ ನಿಶಾದ್ ಅವರು ಗೋರಖ್‌ಪುರ ಕ್ಷೇತ್ರದಿಂದ ನಟ ಮತ್ತು ಹಾಲಿ ಬಿಜೆಪಿ ಸಂಸದ ರವಿ ಕಿಶನ್ ಶುಕ್ಲಾ ವಿರುದ್ಧ ಕಣದಲ್ಲಿದ್ದಾರೆ. 2019 ರಲ್ಲಿ ಮೊದಲ ಬಾರಿಗೆ ಈ ಸ್ಥಾನವನ್ನು ಗೆದ್ದ ನಂತರ ಮರುಚುನಾವಣೆಗೆ ಸ್ಪರ್ಧಿಸುತ್ತಿರುವ ರವಿ ಕಿಶನ್, ಈ ಸ್ಥಾನದಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಾಜಲ್ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಡುವಿನ ಒಪ್ಪಂದದ ಅಡಿಯಲ್ಲಿ ಇಂಡಿಯಾ ಬ್ಲಾಕ್ ಅಭ್ಯರ್ಥಿಯಾಗಿದ್ದಾರೆ.

    2024 ರ ಏಳು ಹಂತದ ಲೋಕಸಭಾ ಚುನಾವಣೆಯ ಕೊನೆಯ ಹಂತದಲ್ಲಿ ಜೂನ್ 1 ರಂದು ಗೋರಖ್‌ಪುರ ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಹೊರಬೀಳಲಿವೆ.

  • ಆಫರ್‌ ಒಪ್ಪಿಕೊಂಡರೆ ಮಾತ್ರ INDIA ದಲ್ಲಿ ಮುಂದುವರಿಕೆ- ಕಾಂಗ್ರೆಸ್‌ಗೆ ಎಸ್‌ಪಿ ಷರತ್ತು

    ಆಫರ್‌ ಒಪ್ಪಿಕೊಂಡರೆ ಮಾತ್ರ INDIA ದಲ್ಲಿ ಮುಂದುವರಿಕೆ- ಕಾಂಗ್ರೆಸ್‌ಗೆ ಎಸ್‌ಪಿ ಷರತ್ತು

    ನವದೆಹಲಿ: ಕಾಂಗ್ರೆಸ್‌ ಜೊತೆ ಉತ್ತರ ಪ್ರದೇಶದಲ್ಲಿ (Uttar Pradesh) ಮೈತ್ರಿಗೆ ಸಮಾಜವಾದಿ ಪಕ್ಷ (Samajwadi Party) ಷರತ್ತು ವಿಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ಮೂಲಗಳು ನೀಡಿರುವ ಮಾಹಿತಿ ಪ್ರಕಾರ ಒಟ್ಟು 80 ಲೋಕಸಭಾ (Lok Sabha) ಕ್ಷೇತ್ರಗಳ ಪೈಕಿ 15ರಲ್ಲಿ ಮಾತ್ರ ಕಾಂಗ್ರೆಸ್‌ಗೆ (Congress) ಬಿಟ್ಟು ಕೊಡಲು ಮುಂದಾಗಿದೆ.  ಇದನ್ನೂ ಓದಿ: ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ ನಿಧನ- ದೇಹದಾನಕ್ಕೆ ಮುಂದಾದ ಕುಟುಂಬ

    ಮಾಜಿ ಸಿಎಂ ಅಖಿಲೇಶ್‌ ಯಾದವ್‌ (Akhilesh Yadav) ನೀಡಿರುವ ಆಫರನ್ನು ಕಾಂಗ್ರೆಸ್‌ ಒಪ್ಪಿಕೊಂಡರೆ ಮಾತ್ರ INDIA ಒಕ್ಕೂಟದಲ್ಲಿ ಸಮಾಜವಾದಿ ಪಕ್ಷ ಇರಲಿದೆ. ಈ ಆಫರ್‌ ಒಪ್ಪದೇ ಇದ್ದರೆ ಎಸ್‌ಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ.

    ಆರಂಭದಲ್ಲಿ ನಿಗದಿಯಾದ ಕಾರ್ಯಕ್ರಮದ ಪ್ರಕಾರ ರಾಹುಲ್‌ ಗಾಂಧಿ (Rahul Gandhi) ಅವರ ಉತ್ತರ ಪ್ರದೇಶ ಯಾತ್ರೆಯಲ್ಲಿ ಅಖಿಲೇಶ್‌ ಯಾದವ್‌ ಭಾಗಿಯಾಗಬೇಕಿತ್ತು. ಆದರೆ ಇನ್ನೂ ಸೀಟ್‌ ಹಂಚಿಕೆಯಾಗದ ಕಾರಣ ಅಖಿಲೇಶ್‌ ಯಾದವ್‌ ಭಾರತ್‌ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿಲ್ಲ.  ಇದನ್ನೂ ಓದಿ: ಪಬ್ಲಿಕ್‌ ಟಿವಿ ಇಂಪ್ಯಾಕ್ಟ್- ವಸತಿ ಶಾಲೆಯ ಘೋಷವಾಕ್ಯ ಯಥಾಸ್ಥಿತಿ

    2019ರ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ 62, ಬಿಎಸ್‌ಪಿ 10, ಎಸ್‌ಪಿ 5, ಎಡಿಎಸ್‌ 2, ಕಾಂಗ್ರೆಸ್‌ 1 ಸ್ಥಾನವನ್ನು ಗೆದ್ದುಕೊಂಡಿತ್ತು. ಸೋನಿಯಾ ಗಾಂಧಿ ಅವರು ರಾಯ್‌ಬರೇಲಿ ಮತ್ತು ರಾಹುಲ್‌ ಗಾಂಧಿ ಸ್ಪರ್ಧಿಸಿದ್ದ ಅಮೇಠಿಯಲ್ಲಿ ಎಸ್‌ಪಿ ಯಾವುದೇ ಅಭ್ಯರ್ಥಿಯನ್ನು ಹಾಕಿರಲಿಲ್ಲ. ಆದರೆ ಈ ಬಾರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಸಾಧ್ಯತೆಯಿದೆ.

     

  • ಲೋಕಸಭೆ ಚುನಾವಣೆ 2024 – ಶಾಸಕರು, ಮಾಜಿ ಸಚಿವರಿಗೆ ಟಿಕೇಟ್ ನೀಡಲು SP ಪ್ಲ್ಯಾನ್

    ಲೋಕಸಭೆ ಚುನಾವಣೆ 2024 – ಶಾಸಕರು, ಮಾಜಿ ಸಚಿವರಿಗೆ ಟಿಕೇಟ್ ನೀಡಲು SP ಪ್ಲ್ಯಾನ್

    ಲಕ್ನೋ: ಸಚಿವರು, ಪ್ರಮುಖ ಶಾಸಕರನ್ನು ಲೋಕಸಭೆ ಚುನಾವಣೆಗೆ (Lok Sabha Elections) ಕಣಕ್ಕಿಳಿಸುವ ಬಗ್ಗೆ ರಾಜ್ಯದಲ್ಲಿ ಚರ್ಚೆಯಾಗುತ್ತಿದ್ದು ಇಂತಹದೇ ಪ್ರಯತ್ನವನ್ನು ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (Samajwadi Party) ಕಾರ್ಯರೂಪಕ್ಕೆ ತರಲು ತಯಾರಿ ಆರಂಭಿಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ತನ್ನ ಪ್ರಮುಖ ಶಾಸಕರನ್ನು ಸ್ಪರ್ಧಿಸಲು ಮಾಜಿ ಸಿಎಂ ಅಖಿಲೇಶ್ ಯಾದವ್ (Akhilesh Yadav) ಸೂಚಿಸಿದ್ದಾರೆ.

    ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಶಾಸಕರ ಸಭೆಯಲ್ಲಿ ಅಖಿಲೇಶ್ ಯಾದವ್ ಈ ಸೂಚನೆ ನೀಡಿದ್ದಾರೆ. ಗೆಲ್ಲುವ ಅಭ್ಯರ್ಥಿಗಳಿರುವಷ್ಟು ಸ್ಥಾನಗಳನ್ನು ಕಾಂಗ್ರೆಸ್‌ಗೆ (Congress) ನೀಡಲಾಗುವುದು, ಬಾಕಿ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೇಟ್ ನೀಡಲಾಗುವುದು ಇಲ್ಲಿ ಶಾಸಕರ ಹೆಸರನ್ನು ಪರಿಗಣಿಸಲಾಗುವುದು, ಸ್ಪರ್ಧೆಗೆ ತಯಾರಿ ಇರುವಂತೆ ಅಖಿಲೇಶ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ ವಿಗ್ರಹ ಕೆತ್ತನೆ ಕಾರ್ಯ ಯಶಸ್ವಿ- ಚಿತ್ರದುರ್ಗದ ಶಿಲ್ಪಿ ಮನೆಯಲ್ಲಿ ಸಂಭ್ರಮಾಚರಣೆ

    ಚುನಾವಣೆ ಅವಧಿಯಲ್ಲಿ ನಿರುದ್ಯೋಗ ಮತ್ತು ಹಣದುಬ್ಬರದಂತಹ ಸಾಮಾನ್ಯ ಜನರ ಸಮಸ್ಯೆಗಳತ್ತ ಗಮನ ಹರಿಸುವಂತೆ ಅಖಿಲೇಶ್ ತಮ್ಮ ನಾಯಕರಿಗೆ ಸಲಹೆ ನೀಡಿದ್ದಾರೆ. ಧರ್ಮಕ್ಕೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿ ಬಿಜೆಪಿ ಅಸ್ತ್ರಕ್ಕೆ ಸಿಲುಕಿಕೊಳ್ಳಬಾರದು ಎಂದರು. ಮುಚ್ಚಿದ ಲಕೋಟೆಯಲ್ಲಿ ಶಾಸಕರಿಂದ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದ ಸಲಹೆಗಳನ್ನು ಸಹ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ, ಅದರ ಬಗ್ಗೆ ಕಾಂಗ್ರೆಸ್ ನಾಯಕರು ಉತ್ತರ ಕೊಡಲಿ: ನಿಖಿಲ್

    ಮಾಯಾವತಿ ನನಗಿಂತ ಹಿರಿಯರು ಎಂದು ಅಖಿಲೇಶ್ ಯಾದವ್ ಅವರು, ಮಹಾನ್ ನಾಯಕಿ ಮತ್ತು ನಾವೆಲ್ಲರೂ ಅವರನ್ನು ಗೌರವಿಸಬೇಕು. ಮೂಲಗಳ ಪ್ರಕಾರ, ಸಭೆಯಲ್ಲಿ ಹಲವು ಶಾಸಕರು ಸ್ವಾಮಿ ಪ್ರಸಾದ್ ಮೌರ್ಯ ಅವರ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ದೂರಿದರು. ಮುಂದೆ ಇಂತಹ ಘಟನೆಗಳು ನಡೆಯುವುದಿಲ್ಲ ಎಂದು ಅಖಿಲೇಶ್ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮುಂದಿನ 5 ವರ್ಷಗಳಲ್ಲಿ ಗುಜುರಾತ್‌ನಲ್ಲಿ 2 ಲಕ್ಷ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಠಿ – ಗೌತಮ್ ಅದಾನಿ ಘೋಷಣೆ 

  • ಭಾರತ ಹಿಂದೂ ರಾಷ್ಟ್ರವಲ್ಲ, ಆಗಿರಲೂ ಇಲ್ಲ: RSS ವಿರುದ್ಧ ಎಸ್‌ಪಿ ನಾಯಕ ಕಿಡಿ

    ಭಾರತ ಹಿಂದೂ ರಾಷ್ಟ್ರವಲ್ಲ, ಆಗಿರಲೂ ಇಲ್ಲ: RSS ವಿರುದ್ಧ ಎಸ್‌ಪಿ ನಾಯಕ ಕಿಡಿ

    ನವದೆಹಲಿ: ಭಾರತ ಎಂದಿಗೂ ಹಿಂದೂ ರಾಷ್ಟ್ರವಲ್ಲ, ಹಿಂದೂ ರಾಷ್ಟ್ರ ಆಗಿರಲೂ ಇಲ್ಲ ಎಂದು ಸಮಾಜವಾದಿ ಪಕ್ಷದ (SP) ನಾಯಕ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya), ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಕಿಡಿ ಕಾರಿದ್ದಾರೆ.

    ಭಾರತವು ಹಿಂದೂ ರಾಷ್ಟ್ರ ಎಂದು ಹೇಳಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಟ್ವೀಟ್‌ ಮೂಲಕವೇ ತಿರುಗೇಟು ಕೊಟ್ಟಿದ್ದಾರೆ.

    ಭಾರತ ಹಿಂದೂ ರಾಷ್ಟ್ರ ಅಲ್ಲ, ಅದು ಎಂದಿಗೂ ಹಿಂದೂ ರಾಷ್ಟ್ರ ಆಗಿರಲಿಲ್ಲ. ಭಾರತವು ಅಂತರ್ಗತವಾಗಿ ಒಂದು ಬಹುತ್ವದ ದೇಶವಾಗಿದೆ. ನಮ್ಮ ಸಂವಿಧಾನವು ಜಾತ್ಯತೀತ ರಾಷ್ಟ್ರದ ಪರಿಕಲ್ಪನೆ ಆಧಾರದಲ್ಲಿ ರಚನೆಯಾಗಿದೆ. ಭಾರತದಲ್ಲಿ ಇರುವ ಎಲ್ಲಾ ಜನರೂ ಭಾರತೀಯರೇ. ನಮ್ಮ ಭಾರತೀಯ ಸಂವಿಧಾನವು ಎಲ್ಲಾ ಧರ್ಮ, ನಂಬಿಕೆಗಳು, ಪಂಥ ಹಾಗೂ ಸಂಸ್ಕೃತಿಗಳ ಪ್ರಾತಿನಿಧಿತ್ವ ಪ್ರತಿನಿಧಿಸುತ್ತದೆ ಎಂದು ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ.

    ಮೋಹನ್‌ ಭಾಗವತ್ ಹೇಳಿದ್ದೇನು?
    ನಾಗಪುರದಲ್ಲಿ ಮಧುಕರ ಭವನ ಉದ್ಘಾಟಿಸಿ ಮಾತನಾಡಿದ್ದ ಮೋಹನ್ ಭಾಗವತ್, ಭಾರತವು ಒಂದು ಹಿಂದೂ ರಾಷ್ಟ್ರ. ಎಲ್ಲಾ ಭಾರತೀಯರೂ ಹಿಂದೂಗಳು ಮತ್ತು ಹಿಂದೂಗಳು ಎಲ್ಲಾ ಭಾರತೀಯರನ್ನ ಪ್ರತಿನಿಧಿಸುತ್ತಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸಪೋರ್ಟ್‌ ಮಾಡ್ತಿದ್ದಾರೆ ʻಐರಾವತʼಬೆಡಗಿ – ಊರ್ವಶಿ ರೌಟೇಲಾ ಕಾಲೆಳೆದ ಟ್ರೋಲ್‌ ಗೆಳೆಯರು

    ಹಿಂದೂಸ್ತಾನವು ಒಂದು ಹಿಂದೂ ದೇಶ ಮತ್ತು ಇದು ವಾಸ್ತವ. ಸೈದ್ಧಾಂತಿಕವಾಗಿ, ಎಲ್ಲಾ ಭಾರತೀಯರೂ ಹಿಂದೂಗಳು ಮತ್ತು ಹಿಂದೂಗಳು ಎಂದರೆ ಭಾರತೀಯರು. ಭಾರತದಲ್ಲಿ ಇಂದು ಇರುವವರೆಲ್ಲರೂ ಹಿಂದೂ ಸಂಸ್ಕೃತಿಗೆ, ಹಿಂದೂ ಪೂರ್ವಜರಿಗೆ ಮತ್ತು ಹಿಂದೂ ಭೂಮಿಗೆ ಸಂಬಂಧಿಸಿದವರು. ಇದಕ್ಕಿಂತ ಬೇರೇನೂ ಅಲ್ಲ ಎಂದು ತಿಳಿಸಿದ್ದರು.

    ಅಸ್ಸಾಂನ ಗುವಾಹಟಿಯಲ್ಲಿನ ಮತ್ತೊಂದು ಕಾರ್ಯಕ್ರಮದಲ್ಲಿ ಮಾತನಾಡಿದ್ದ ಭಾಗವತ್, ಇಂಡಿಯಾ ಹೆಸರಿನ ಬದಲು ದೇಶವನ್ನ ಭಾರತ ಎಂಬ ಹೆಸರಿನಿಂದ ಕರೆಯಬೇಕು. ಏಕೆಂದರೆ ಭಾರತ ಎನ್ನುವುದು ಬಹಳ ಪುರಾತನ ಕಾಲದಿಂದ ಇದೆ ಅಂತ ಹೇಳಿದ್ದರು. ಇದನ್ನೂ ಓದಿ: Asia Cup 2023: ಕೈಕೊಟ್ಟ ಕೊಹ್ಲಿ, ರೋಹಿತ್‌, ಗಿಲ್‌ – ಪಾಕಿಸ್ತಾನಕ್ಕೆ 267 ರನ್‌ ಗುರಿ ನೀಡಿದ ಭಾರತ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿನಗೆ 3 ದಿನವಷ್ಟೇ ಸಮಯ- ಫೋಟೋ ವಾಟ್ಸಪ್ ಮಾಡಿ ಸಮಾಜವಾದಿ ಪಕ್ಷದ ನಾಯಕನಿಗೆ ಕೊಲೆ ಬೆದರಿಕೆ

    ನಿನಗೆ 3 ದಿನವಷ್ಟೇ ಸಮಯ- ಫೋಟೋ ವಾಟ್ಸಪ್ ಮಾಡಿ ಸಮಾಜವಾದಿ ಪಕ್ಷದ ನಾಯಕನಿಗೆ ಕೊಲೆ ಬೆದರಿಕೆ

    ಮುಂಬೈ: ಸಮಾಜವಾದಿ ಪಕ್ಷದ ಮಹಾರಾಷ್ಟ್ರ ಘಟಕದ ಮುಖ್ಯಸ್ಥ ಅಬು ಅಸಿಮ್ ಅಜ್ಮಿ (Abu Asim Azmi) ಗೆ ಫೊನ್ ಮೂಲಕ ಕೊಲೆ ಬೆದರಿಕೆಯೊಂದು ಬಂದಿದೆ.

    ಮುಂಬೈನ ಮಂಖುರ್ದ್ ಶಿವಾಜಿ ನಗರ ಕ್ಷೇತ್ರದ ಶಾಸಕನಿಗೆ ವಾಟ್ಸಪ್‍ (Whatsapp) ನಲ್ಲಿ ಬೆದರಿಕೆ ಬಂದಿದೆ. ವಾಟ್ಸಪ್ ಬಂದಿರುವ ಅಬು ಫೋಟೋ ಮೇಲೆ ಬಂದೂಕು ಹಾಗೂ ರಕ್ತದ ಕಲೆಯುಳ್ಳ ಚಾಕುವನ್ನು ತೋರಿಸಲಾಗಿದೆ. ಅಲ್ಲದೆ ಮೂರು ದಿನಗಳವರೆಗೆ ಸಮಯವಿದೆ ಎಂದು ಎಚ್ಚರಿಕೆಯ ಮೆಸೇಜ್ ಕೂಡ ರವಾನಿಲಾಗಿದೆ.

    ಈ ಬಗ್ಗೆ ಅನು ತಮಗೆ ಬಂದಿರುವ ವಾಟ್ಸಪ್ ಮೆಸೇಜ್ ಸ್ಕ್ರೀನ್ ಶಾಟ್ ತೆಗೆದು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ವ್ಯಕ್ತಿಯೊಬ್ಬ ನನ್ನ ಪರ್ಸನಲ್ ನಂಬರಿಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಮೂರು ದಿನಗಳಲ್ಲಿ ನಿನ್ನ ಕೊಲೆಯಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಈಗಾಗಲೇ ಕೊಲಾಬಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದಾಗಿ ತಿಳಿಸಿದ್ದಾರೆ.

    ಅಲ್ಲದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್, ಮುಂಬೈ ಪೊಲೀಸರೇ ದಯವಿಟ್ಟು ಈ ಸಂಬಂಧ ಕ್ರಮ ಕೈಗೊಳ್ಳಿ ಎಂದು ಅಬು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ನೂರರ ಗಡಿ ದಾಟಿದ ಟೊಮೆಟೋ ಬೆಲೆ- ಗೃಹಿಣಿಯರ ಆಕ್ರೋಶ

    ಮೊಘಲ್ ಚಕ್ರವರ್ತಿ ಔರಂಗಜೇಬನನ್ನು ಬೆಂಬಲಿಸಿ ನೀಡಿದ ಹೇಳಿಕೆಗಳಿಗಾಗಿ ಈ ವರ್ಷ ಜನವರಿಯಲ್ಲಿಯೂ ನಾಯಕನಿಗೆ ಕೊಲೆ ಬೆದರಿಕೆಗಳು ಬಂದವು. ಅಂದು ಕೂಡ ಅವರ ಆಪ್ತ ಸಹಾಯಕನಿಗೆ ಕರೆ ಮಾಡಲಾಗಿತ್ತು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]