ಲಕ್ನೋ: ಸಮಾಜವಾದಿ ಟೋಪಿ ವಿಚಾರವಾಗಿ ಟೀಕಿಸಿದವರೇ ಇಂದು ಟೋಪಿ ಧರಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
ಬುಧವಾರ 42ನೇ ಸಂಸ್ಥಾಪನಾ ದಿನದಂದು ಬಿಜೆಪಿ ನಾಯಕರು ಮತ್ತು ನರೇಂದ್ರ ಮೋದಿ ಅವರು ಕ್ಯಾಪ್ ಧರಿಸಿದ್ದರು. ಇನ್ನೂ ಈ ಫೋಟೋ ವೈರಲ್ ಆಗುತ್ತಿದ್ದಂತೆಯೇ ಸಮಾಜವಾದಿ ಪಕ್ಷದ ವಿರುದ್ಧ ಕಾಮೆಂಟ್ ಮಾಡುತ್ತಿದ್ದ ಮೋದಿ ಹಾಗೂ ಬಿಜೆಪಿ ಅವರೇ ಇಂದು ಕೆಂಪು ಟೋಪಿ ಹಾಕಿಕೊಂಡು ಕುಳಿತುಕೊಂಡಿದ್ದಾರೆ ಎಂದು ಅಖಿಲೇಶ್ ಯಾದವ್ ಬಿಜೆಪಿ ನಾಯಕರ ಕಾಲೆಳೆದಿದ್ದಾರೆ. ಇದನ್ನೂ ಓದಿ: ಗರ್ಲ್‍ಫ್ರೆಂಡ್, ಮಾಜಿ ಪತ್ನಿ ಜೊತೆ ಗೋವಾದಲ್ಲಿ ಪಾರ್ಟಿ ಮಾಡಿದ ಹೃತಿಕ್ ರೋಷನ್
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ ವೇಳೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಸದಸ್ಯರು ರೆಡ್ ಕ್ಯಾಪ್ ಧರಿಸಿದ್ದರು. ಈ ವಿಚಾರ ತೀವ್ರ ಟೀಕೆಗೆ ಒಳಗಾಗಿತ್ತು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಇದಕ್ಕೆ ರೆಡ್ ಅಲರ್ಟ್ ಎಂದು ವ್ಯಂಗ್ಯವಾಡಿದ್ದರು. ಇದನ್ನೂ ಓದಿ: ನಾನು ನಿಮ್ಮವಳು, ಕೆಟ್ಟದ್ದಾಗಿ ಮಾತನಾಡಬೇಡಿ ಎಂದ ರಾಶಿ ಖನ್ನಾ
ಕೆಂಪು ಟೋಪಿ ಧರಿಸಿರುವವರು ವಂಚನೆಯನ್ನು ಮಾಡಲು, ತಮ್ಮ ಬೊಕ್ಕಸವನ್ನು ತುಂಬಲು, ಅಕ್ರಮವಾಗಿ ಸಂಪನ್ಮೂಲವನ್ನು ದೋಚುವ ಮತ್ತು ಮಾಫಿಯಾಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲು ಅಧಿಕಾರವನ್ನು ಬಯಸುತ್ತಾರೆ ಎಂದು ಸಮಾಜವಾದಿ ಪಕ್ಷದ ನರೇಂದ್ರ ಮೋದಿ ಅವರು ಆರೋಪಿಸಿದ್ದರು.
ಲಕ್ನೋ: ಬಿಜೆಪಿ ಆಡಳಿತದಲ್ಲಿ ಬುಲ್ಡೋಜರ್ ಜನರನ್ನು ಹತ್ತಿಕ್ಕಲು ಪ್ರಾರಂಭಿಸಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ಬುಲ್ಡೋಜರ್‍ಗಳು ಜನರನ್ನು ತುಳಿಯಲು ಪ್ರಾರಂಭಿಸಿವೆ. ಹಣದುಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸರ್ಕಾರದ ನಿರ್ಲಕ್ಷ್ಯದಿಂದ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕಿಡಿಕಾರಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷವು ಜನರೊಂದಿಗೆ ಇಂತಹ ಕ್ರೂರವಾಗಿ ನಡೆಸಿಕೊಳ್ಳುತ್ತಿದೆ. ಇದು ಅಮಾನವೀಯ ಸಂಗತಿಯಾಗಿದೆ ಎಂದು ವಾಗ್ದಾಳಿ ನಡೆಸಿದ ಅವರು, ಅಚ್ಛೆ ದಿನಗಳನ್ನು ಜನರು ಅನುಭವಿಸಿದ ನಂತರ ಜನರು ಹಳೆಯ ದಿನಗಳನ್ನು ಹಂಬಲಿಸಲು ಪ್ರಾರಂಭಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಚಂಡೀಗಢವು ಜಂಟಿ ರಾಜಧಾನಿಯಾಗಿಯೇ ಉಳಿಯುತ್ತೆ: ಹರಿಯಾಣ ಸಿಎಂ
ಟೋಲ್ ತೆರಿಗೆ ಕೂಡ ದುಬಾರಿಯಾಗಿದ್ದು, ಹೆದ್ದಾರಿಗಳಲ್ಲಿ ಪ್ರಯಾಣ ದುಬಾರಿಯಾಗಿದೆ ಎಂದ ಅವರು, ಬಿಜೆಪಿಯ ನೀತಿ ಹಾಗೂ ಉದ್ದೇಶದಲ್ಲಿ ಸಾರ್ವಜನಿಕ ಕಾಳಜಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಅದು ತನ್ನ ಬೊಕ್ಕಸವನ್ನು ತುಂಬಲು ಮಾತ್ರ ಆಸಕ್ತಿ ಹೊಂದಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ
ಲಕ್ನೋ: ಎಂಟು ಬಾರಿ ಬಿಜೆಪಿ ಶಾಸಕರಾಗಿದ್ದ ಸತೀಶ್ ಮಹಾನಾ ಅವರು ಮಂಗಳವಾರ ಉತ್ತರ ಪ್ರದೇಶ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರ ಆಯ್ಕೆಯನ್ನು ಶ್ಲಾಘಿಸಿದರು. ಸದನದ ಕಾರ್ಯಚಟುವಟಿಕೆಗೆ ಸಕಾರಾತ್ಮಕವಾಗಿ ಕೊಡುಗೆ ನೀಡುವುದಾಗಿ ಭರವಸೆ ನೀಡಿದರು.
ಮಹಾನಾ ಅವರನ್ನು ಸಭಾಧ್ಯಕ್ಷರ ಪೀಠಕ್ಕೆ ಕರೆದೊಯ್ದ ನಂತರ ವಿಧಾನಸಭೆಯಲ್ಲಿ ಮಾತನಾಡಿದ ಆದಿತ್ಯನಾಥ್, ಪ್ರಜಾಪ್ರಭುತ್ವದ ಎರಡು ಚಕ್ರಗಳು (ಆಡಳಿತ ಮತ್ತು ವಿರೋಧ) ಒಂದೇ ದಿಕ್ಕಿನಲ್ಲಿ ಚಲಿಸುತ್ತಿರುವುದು ರಾಜ್ಯಕ್ಕೆ ಉತ್ತಮ ಸಂಕೇತವಾಗಿದೆ ಎಂದು ಹೇಳಿದರು.
ನಂತರ ಮಾತನಾಡಿದ ಯಾದವ್, ಸಭಾಧ್ಯಕ್ಷರನ್ನು ಸರ್ವಾನುಮತದಿಂದ ಆಯ್ಕೆ ಮಾಡುವ ಮೂಲಕ ಸದನದಲ್ಲಿ ಆರೋಗ್ಯಕರ ಸಂಪ್ರದಾಯದ ಆರಂಭ ಎಂದು ಶ್ಲಾಘಿಸಿದರು. ಸಭಾಪತಿಯಾಗಿ ತಟಸ್ಥತೆಯಿಂದ ವರ್ತಿಸಿ ಪ್ರತಿಪಕ್ಷಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಮಹಾನಾ ಅವರಿಗೆ ಒತ್ತಾಯಿಸಿದರು. ನೀವು ಮೂಲ ಬಿಜೆಪಿಯಿಂದ ಬಂದವರೂ ಈಗ ನೀವು ಎಡ ವಿರೋಧದ ಕಡೆಗೆ ಹೆಚ್ಚು ಗಮನಹರಿಸಬೇಕು. ಹೌಸ್‍ನ ರೆಫರಿಯಾಗಿರುವ ನೀವು ಬಿಜೆಪಿಯವರ ಆಟದ ಭಾಗವಾಗಬಾರದು. ಪ್ರತಿಪಕ್ಷಗಳ ಹಕ್ಕುಗಳನ್ನು ಕಾಪಾಡುವುದು ಮತ್ತು ಸರ್ಕಾರ ಸರ್ವಾಧಿಕಾರಿಯಾಗುವುದನ್ನು ತಡೆಯುವುದು ನಿಮ್ಮ ಕರ್ತವ್ಯ ಎಂದು ಯಾದವ್ ಹೇಳಿದರು.
ಹಂಗಾಮಿ ಸ್ಪೀಕರ್ ರಮಾಪತಿ ಶಾಸ್ತ್ರಿ ಅವರು, ಇಂದು ಮಹಾನಾ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಮಾರ್ಚ್ 29 ರಂದು ಸ್ಪೀಕರ್ ಆಯ್ಕೆಗೆ ದಿನಾಂಕ ನಿಗದಿಪಡಿಸಿದ್ದರು.
ಮಹಾನಾ ಅವರ ನಾಮನಿರ್ದೇಶನವನ್ನು ಆದಿತ್ಯನಾಥ್ ಪ್ರಸ್ತಾಪಿಸಿದರು. ಹಿರಿಯ ಸಚಿವ ಸುರೇಶ್ ಖನ್ನಾ ಅವರು ಅನುಮೋದಿಸಿದರು. ಸಮಾಜವಾದಿ ಪಕ್ಷದ (ಎಸ್‍ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಮಹಾನಾ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಅವರ ಪಕ್ಷದ ಅವಧೇಶ್ ಪ್ರಸಾದ್ ಕೂಡಾ ಇದಕ್ಕೆ ಬೆಂಬಲಿಸಿದ್ದರು.
ಮಹಾನಾ ಅವರು ಕಾನ್ಪುರ ಜಿಲ್ಲೆಯ ಮಹಾರಾಜಪುರ ಕ್ಷೇತ್ರದಿಂದ ಎಂಟನೇ ಬಾರಿಗೆ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 14, 1960 ರಂದು ಕಾನ್ಪುರದಲ್ಲಿ ಜನಿಸಿದ ಅವರು 1991 ರಲ್ಲಿ ಮೊದಲ ಬಾರಿಗೆ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾದರು. ಬಿಎಸ್‍ಪಿ-ಬಿಜೆಪಿ ಮೈತ್ರಿಕೂಟದ ಮಾಯಾವತಿ ನೇತೃತ್ವದ ಸರ್ಕಾರದಲ್ಲಿ ನಗರಾಭಿವೃದ್ಧಿ ಖಾತೆ ರಾಜ್ಯ ಸಚಿವರಾಗಿದ್ದಲ್ಲದೆ, ಕಲ್ಯಾಣ್ ಸಿಂಗ್, ರಾಮ್ ಪ್ರಕಾಶ್ ಗುಪ್ತಾ ಮತ್ತು ರಾಜನಾಥ್ ಸಿಂಗ್ ನೇತೃತ್ವದ ಸರ್ಕಾರಗಳಲ್ಲಿ ಸಚಿವರೂ ಆಗಿದ್ದಾರೆ. ಇದನ್ನೂ ಓದಿ: ಪರವಾನಿಗೆ ಇಲ್ಲದೆ ಬಂದೂಕುಗಳನ್ನು ಹೊಂದಲು ಕೊಡವರಿಗೆ ಅವಕಾಶ- ರಾಜ್ಯಕ್ಕೆ ಸುಪ್ರೀಂ ನೋಟಿಸ್
ಮಹಾನಾ ಹಿಂದಿನ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಕೈಗಾರಿಕಾ ಅಭಿವೃದ್ಧಿ ಸಚಿವರಾಗಿದ್ದರು. ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ 273 ಸ್ಥಾನಗಳನ್ನು ಗಳಿಸಿತ್ತು. ಎಸ್‍ಪಿ ನೇತೃತ್ವದ ಮೈತ್ರಿಕೂಟ 125 ಸ್ಥಾನಗಳನ್ನು ಗಳಿಸಿತ್ತು. ಕಾಂಗ್ರೆಸ್ ಮತ್ತು ಜನಸತ್ತಾದಳ ಲೋಕತಾಂತ್ರಿಕ್ ತಲಾ ಎರಡು ಸ್ಥಾನಗಳನ್ನು ಪಡೆದರೆ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷವು ಒಂದು ಸ್ಥಾನವನ್ನು ಪಡೆದುಕೊಂಡಿದೆ.
ಲಕ್ನೋ: ಉತ್ತರ ಪ್ರದೇಶದ ರಾಜಕೀಯದಲ್ಲಿ ವೈರಿಗಳಂತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಪರಸ್ಪರ ಕೈ ಕುಲುಕಿ ಶುಭಾಶಯ ಕೋರಿದ ಅಪರೂಪದ ಘಟನೆ ಇಂದು ವಿಧಾನಸಭೆಯಲ್ಲಿ ಸಾಕ್ಷಿಯಾಗಿದೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿ ಶುಭ ಕೋರಿದರು. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದೆ.
#WATCH Uttar Pradesh CM Yogi Adityanath meets Leader of Opposition Akhilesh Yadav in the Legislative Assembly during oath-taking of newly-elected legislators #Lucknowpic.twitter.com/7r6fX7ErjX
ವೀಡಿಯೋದಲ್ಲಿ ಏನಿದೆ?: ಉತ್ತರಪ್ರದೇಶದ ವಿಧಾನಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸುತ್ತಿದ್ದ ಯೋಗಿ ಆದಿತ್ಯನಾಥ್ ಹಾಗೂ ಅಖಿಲೇಶ್ ಯಾದವ್ ಇಂದು ಪರಸ್ಪರ ಶುಭ ಕೋರಿ ಕೈ ಕುಲುಕಿದ್ದಾರೆ. ನಂತರ ಯೋಗಿ ಆದಿತ್ಯನಾಥ್ ಅವರು ನಗೆ ಬೀರುತ್ತಾ ಅಖಿಲೇಶ್ ಯಾದವ್ ಅವರ ಭುಜವನ್ನು ತಟ್ಟಿದ್ದಾರೆ. ಇದನ್ನೂ ಓದಿ: 32 ವರ್ಷಗಳ ನಂತ್ರ ಕಾಶ್ಮೀರಿ ಪಂಡಿತರಿಗೆ ಸಿಕ್ಕಿದ್ದು ಸಿನಿಮಾ, ನ್ಯಾಯವಲ್ಲ: ಕೇಜ್ರಿವಾಲ್
ಚುನಾವಣಾ ಪೂರ್ವದಲ್ಲಿ ಉಭಯ ನಾಯಕರಿಬ್ಬರು ಪರಸ್ಪರ ಒಬ್ಬರನ್ನೊಬ್ಬರು ಟೀಕಿಸಿದ್ದರು. ಅಖಿಲೇಶ್ ಯಾದವ್, ಯೋಗಿ ಆದಿತ್ಯನಾಥ್ ಅವರನ್ನು ಬಾಬಾ ಬುಲ್ಡೋಜರ್ ಎಂದು ಕರೆದಿದ್ದರು. ಅದಕ್ಕೆ ತಿರುಗೇಟು ನೀಡಿದ್ದ ಯೋಗಿ ಆದಿತ್ಯನಾಥ್, ಅಖಿಲೇಶ್ ಯಾದವ್ ಯಾವಾಗಲೂ ಬಾಬುವಾಗಿಯೇ ಉಳಿಯುತ್ತಾರೆ ಎಂದು ಟೀಕಿಸಿದ್ದರು.
ಮಾರ್ಚ್ 10ರಂದು ಪ್ರಕಟವಾದ ಉತ್ತರಪ್ರದೇಶದ ಚುನಾವಣಾ ಫಲಿತಾಂಶದಲ್ಲಿ 403 ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ 273 ಸ್ಥಾನಗಳನ್ನು ಪಡೆದುಕೊಂದು ಸರ್ಕಾರವನ್ನು ರಚಿಸಿತು. ಹಾಗೂ 111 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಸಮಾಜವಾದಿ ಪಕ್ಷ ವಿರೋಪಕ್ಷದ ಸ್ಥಾನವನ್ನೇರಿದೆ. ಇದನ್ನೂ ಓದಿ: ಎರಡನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣವಚನ
ವಿಧಾನಸಭೆಯಲ್ಲಿ ವಿರೋಧ ಪಕ್ಷಗಳು ಪ್ರಸ್ತಾಪಿಸಬಹುದಾದ ವಿಷಯಗಳ ಕುರಿತು ಚರ್ಚಿಸಲು ಯಾದವ್ ಅವರು ಸಮಾಜವಾದಿ ಪಕ್ಷದ ಮಿತ್ರಪಕ್ಷಗಳ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ.
ಮೊದಲ ಬಾರಿಗೆ ಯಾದವ್, ಯುಪಿಯ ಮೈನ್‌ಪುರಿ ಜಿಲ್ಲೆಯ ಕುಟುಂಬದ ಭದ್ರಕೋಟೆಯಾದ ಕರ್ಹಾಲ್‌ನಿಂದ ಶಾಸಕರಾಗಿ ಆಯ್ಕೆಯಾದ ನಂತರ ಅಜಮ್‌ಗಢ್ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಭಾರತದ ರಾಜಕೀಯದಲ್ಲಿ ಮಹತ್ವದ ಸ್ಥಾನ ಪಡೆದಿರುವ ಯುಪಿಯಲ್ಲಿ 2027 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸದನದಲ್ಲಿ ಬಿಜೆಪಿಯನ್ನು ಎದುರಿಸಲು ಮಾಜಿ ಮುಖ್ಯಮಂತ್ರಿ ಉದ್ದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 8 ಬಾರಿ ಶಾಸಕ, ಸತೀಶ್ ಮಹಾನ್ ಮುಂದಿನ ಯುಪಿ ಸ್ಪೀಕರ್?
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯಾದವ್ ಬಿಜೆಪಿಗೆ ಪ್ರಮುಖ ಸವಾಲಾಗಿದ್ದರು. ಅವರ ಪಕ್ಷವು 403 ಸದಸ್ಯ ಸ್ಥಾನಗಳಲ್ಲಿ 111 ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡನೇ ಸ್ಥಾನವನ್ನು ಗಳಿಸಿದೆ. ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಸಮಾಜವಾದಿ ಪಕ್ಷ ಉತ್ತಮ ಸಾಧನೆ ಮಾಡಿದೆ.
ಲಕ್ನೋ: ಯೋಗಿ ಆದಿತ್ಯನಾಥ್ (Yogi Adityanath) ವಿರುದ್ಧ ಅಸಭ್ಯ ಘೋಷಣೆಗಳನ್ನು ಕೂಗಲಾಗಿದ್ದು, ಈ ಆರೋಪದ ಮೇಲೆ ಸಮಾಜವಾದಿ ಪಕ್ಷದ (Samajwadi Party) ನಾಲ್ವರು ಕಾರ್ಯಕರ್ತರು ಸೇರಿ ಒಟ್ಟು 29 ಮಂದಿ ವಿರುದ್ಧ ಪೊಲೀಸರು (Police) ಪ್ರಕರಣ ದಾಖಲಿಸಿದ್ದಾರೆ.
ಈ ಸಂಬಂಧ ಸ್ಥಳೀಯ ಬಿಜೆಪಿ (BJP) ಮುಖಂಡ ಶಶಿ ಚೌರಾಸಿಯಾ ಅವರು ದೂರು ದಾಖಲಿಸಿದ್ದಾರೆ. ಎಫ್‍ಐಆರ್‌ನಲ್ಲಿ ನಾಲ್ವರು ಎಸ್‍ಪಿ ಕಾರ್ಯಕರ್ತರ ಹೆಸರನ್ನು ದಾಖಲಿಸಲಾಗಿದ್ದು, ಉಳಿದ 25 ಮಂದಿ ಅಪರಿಚಿತರು ಎಂದು ನಮೂದಿಸಲಾಗಿದೆ ಎಂದು ಸರ್ಕಲ್ ಆಫೀಸರ್ ಶಿವನಾರಾಯಣ ವೈಸ್ ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಬಂದಿರೋದು ಮೋದಿ ಮಗ, ನನ್ನ ಮಗನಲ್ಲ: ವಿದ್ಯಾರ್ಥಿ ತಂದೆ ಕಣ್ಣೀರು
ಬೆಲ್ತಾರ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಎಸ್‍ಪಿ-ಎಸ್‍ಬಿಎಸ್‍ಪಿ ಅಭ್ಯರ್ಥಿ ಹಂಸು ರಾಮ್ ಗೆಲುವು ಪಡೆದ ನಂತರ ಎಸ್‍ಪಿ ಕಾರ್ಯಕರ್ತರು ವಿಜಯೋತ್ಸವ ಮಾಡುತ್ತಿದ್ದರು. ಈ ವೇಳೆ ಕಾರ್ಯಕರ್ತರು ಯೋಗಿ ಆದಿತ್ಯನಾಥ್ ವಿರುದ್ಧ ಅವಾಚ್ಯ ಶಬ್ಧಗಳನ್ನು ಬಳಸಿ ಘೋಷಣೆ ಕೂಗಿದ್ದರು. ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ನಾಯಕರನ್ನು ಹತ್ಯೆ ಮಾಡುವ ಬೆದರಿಕೆ ಹಾಕಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಲಕ್ನೋ: ದೇಶದಲ್ಲಿ ಕುತೂಹಲ ಮೂಡಿಸಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಹಲವು ಪ್ರಕರಣಗಳಲ್ಲಿ ಜೈಲುವಾಸ ಅನುಭವಿಸುತ್ತಿರುವ ಸಮಾಜವಾದಿ ಪಕ್ಷದ ಅಜಂ ಖಾನ್ ಅವರು ಭಾರಿ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಎಸ್ಪಿ ಅಭ್ಯರ್ಥಿ ಅಜಂ ಖಾನ್ ಅವರ ಮೇಲೆ ದಾಖಲಾಗಿರುವ ಹಲವು ದೂರುಗಳ ಹಿನ್ನೆಲೆಯಲ್ಲಿ ಸದ್ಯ ಸೀತಾಪುರ ಜೈಲಿನಲ್ಲಿದ್ದಾರೆ. ಭೂ ಕಬಳಿಕೆಯೂ ಸೇರಿದಂತೆ ಖಾನ್ ವಿರುದ್ಧ ಉತ್ತರ ಪ್ರದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹತ್ತಾರು ದೂರುಗಳು ದಾಖಲಾಗಿದ್ದು, ಸರ್ಕಾರವೂ ‘ಭೂ ಮಾಫಿಯಾ’ಗಳ ಪಟ್ಟಿಯಲ್ಲಿ ಆಜಂ ಅವರ ಹೆಸರನ್ನು ಪ್ರಕಟಿಸಿತ್ತು.
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಟಿ, ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಗ್ಗೆಯೂ ರಾಂಪುರ ಠಾಣೆಯ ಪೊಲೀಸರು ದೂರು ದಾಖಲಿಸಿದ್ದರು. ಇದಲ್ಲದೆ ಆಜಂ ಅವರು ತಮ್ಮ ಕೃಷಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ 25ಕ್ಕೂ ಹೆಚ್ಚು ರೈತರು ಇತ್ತೀಚೆಗೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದರು. ಇದನ್ನೂ ಓದಿ: ಮೌನವಾಗಿರುವ ಬಿಜೆಪಿ ಮತದಾರರು ದೊಡ್ಡ ಸಂದೇಶ ಕೊಟ್ಟಿದ್ದಾರೆ: ತೇಜಸ್ವಿ ಸೂರ್ಯ
ಮಗನ ಜನನ ದಿನಾಂಕದ ನಕಲಿ ಪ್ರಮಾಣಪತ್ರ ಪ್ರಕರಣದಲ್ಲಿ ಪತ್ನಿ ಮತ್ತು ಮಗ ಸೇರಿದಂತೆ ಖಾನ್ ಅವರನ್ನು ಫೆ.23 ರಂದು ಬಂಧಿಸಲಾಗಿತ್ತು.
ಲಕ್ನೋ: ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಬುಲ್ಡೋಜರ್ ಟ್ರೆಂಡ್ ಆಗಿದೆ.
ಬುಲ್ಡೋಜರ್ ಟ್ರೆಂಡ್ ಆಗಲು ಕಾರಣವಿದೆ. ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಯೋಗಿ ಆದಿತ್ಯನಾಥ್ ಸರ್ಕಾರ ಅಕ್ರಮ ಕಟ್ಟಡಗಳೆಂದು ಬಹಳಷ್ಟು ಕಟ್ಟಡಗಳನ್ನು ಕೆಡವಿ ಹಾಕಿತ್ತು. ಯೋಗಿ ಈ ತೆರವು ಕ್ರಮಗಳನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟೀಕಿಸಿ ‘ಬುಲ್ಡೋಜರ್ ಬಾಬಾ’ ಎಂದು ವ್ಯಂಗ್ಯವಾಡಿದ್ದರು.
A 1.5-year-old child, Navya dresses up as CM Yogi Adityanath and carries a toy bulldozer, as she arrives at BJP office in Lucknow along with her father. #UttarPradeshElectionspic.twitter.com/g1rwLmifx8
ಯೋಗಿ ಆದಿತ್ಯನಾಥ್ ಬುಲ್ಡೋಜರ್ ಅನ್ನು ಅಭಿವೃದ್ಧಿ ಹಾಗೂ ಶಕ್ತಿಯ ಸಂಕೇತ ಎಂದು ಬಿಂಬಿಸಿದ್ದರು. ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಅನಧಿಕೃತ, ಅಕ್ರಮ ಕಟ್ಟಡಗಳನ್ನು ಕೆಡವುವ ಮೂಲಕ ಭೂಮಾಫಿಯಾಗೆ ಬಿಸಿ ಮುಟ್ಟಿಸುವ ಹಾಗೂ ಎಕ್ಸ್‌ಪ್ರೆಸ್ ಹೈವೇಗಳನ್ನು ಕಟ್ಟುವ ಸಾಧನವಾಗಿ ಅದನ್ನು ಬಿಂಬಿಸಿತ್ತು. ಇದನ್ನೂ ಓದಿ: ಪಂಜಾಬ್ ಚುನಾವಣಾ ಫಲಿತಾಂಶ ಕರ್ನಾಟಕ ಕಾಂಗ್ರೆಸ್‌ಗೆ ಪಾಠವಾಗುತ್ತಾ?
ಸುಲ್ತಾನ್‌ಪುರ ಚುನಾವಣಾ ಪ್ರಚಾರ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಬುಲ್ಡೋಜರ್‌ಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದರು. ನನ್ನ ಪ್ರಚಾರ ಸಭೆಗೆ ಬುಲ್ಡೋಜರ್‌ಗಳು ಕೂಡಾ ಬಂದಿವೆ ಎಂದು ಯೋಗಿ ಆದಿತ್ಯನಾಥ್ ಕ್ಯಾಮೆರಾಮ್ಯಾನ್‌ಗೆ ತೋರಿಸುವ ವಿಡಿಯೋವನ್ನು ಅಪ್ಲೋಡ್ ಮಾಡಿದ್ದರು. ಆದಿತ್ಯನಾಥ್ ಬುಲ್ಡೋಜರ್‌ಗಳನ್ನು ನೋಡಿ ಖುಷಿಪಡುವ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಅಖಿಲೇಶ್ ಯಾದವ್, ಕರಾಳ ಕೃಷಿ ಕಾಯ್ದೆ ರದ್ದಾಗುವುದಾದರೆ, ಬಾಬಾ ಕೂಡ ಹೋಗುತ್ತಾರೆ. ಅವರು ಎಲ್ಲದರ ಹೆಸರು ಬದಲಿಸಿದರು, ಹೀಗಾಗಿ ನಾವು ಅವರನ್ನು ಬಾಬಾ ಬುಲ್ಡೋಜರ್ ಎಂದು ಕರೆಯುತ್ತೇವೆ ಎಂದು ವ್ಯಂಗ್ಯವಾಡಿದ್ದರು.
ಲಕ್ನೋ: ವಾರಣಾಸಿಯಲ್ಲಿ ಇವಿಎಂ ದುರ್ಬಳಕೆಯಾಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಆರೋಪಕ್ಕೆ ಸಂಬಂಧಿಸಿದಂತೆ, ಚುನಾವಣಾ ಆಯೋಗಕ್ಕೆ ಸಮಾಜವಾದಿ ಪಕ್ಷ ಪತ್ರವೊಂದನ್ನು ಬರೆದಿದೆ.
ಎಲ್ಲಾ ಕ್ಷೇತ್ರಗಳಿಗೆ ಮತ ಎಣಿಕೆ ಪ್ರಕ್ರಿಯೆಯನ್ನು ವೆಬ್‌ಕಾಸ್ಟಿಂಗ್ ಮಾಡಬೇಕು. ಅದಕ್ಕೆ ಸಂಬಂಧಿಸಿದ ಲಿಂಕ್ ಅನ್ನು ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತರು, ಮತಗಟ್ಟೆ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಬೇಕು ಎಂದು ಎಸ್‌ಪಿ ಒತ್ತಾಯಿಸಿದೆ. ಇದನ್ನೂ ಓದಿ: EVM ಪ್ರೋಟೋಕಾಲ್‍ನಲ್ಲಿ ಲೋಪ: ಚುನಾವಣಾಧಿಕಾರಿಯ ವೀಡಿಯೋ ಹಂಚಿಕೊಂಡ ಎಸ್‍ಪಿ
ಇದರಿಂದ ರಾಜಕೀಯ ಪಕ್ಷಗಳು ಎಣಿಕೆ ಪ್ರಕ್ರಿಯೆಯನ್ನು ಲೈವ್ ವೀಕ್ಷಿಸಬಹುದು. ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ಸ್ವತಂತ್ರವಾಗಿ ನಡೆಸಬಹುದು ಎಂದು ಮನವಿಯಲ್ಲಿ ಉಲ್ಲೇಖಿಸಿದೆ.
ವಾರಣಾಸಿಯ ಮತಗಟ್ಟೆಯಿಂದ ಇವಿಎಂಗಳನ್ನು ಸಾಗಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿತ್ತು. ಸ್ಥಳೀಯ ಅಭ್ಯರ್ಥಿಗಳ ಗಮನಕ್ಕೂ ತಾರದೇ ಇವಿಎಂಗಳನ್ನು ಅಧಿಕಾರಿಗಳು ಸಾಗಾಟ ಮಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ:ವಾರಣಾಸಿಯಲ್ಲಿ EVM ಕಳವು: ಅಖಿಲೇಶ್ ಯಾದವ್ ಗಂಭೀರ ಆರೋಪ
ಲಕ್ನೋ: ವಿದ್ಯಾರ್ಥಿಗಳಿಗೆ ಸ್ಮಾರ್ಟ್‍ಫೋನ್ ಹಾಗೂ ಟ್ಯಾಬ್‍ಗಳನ್ನು ವಿತರಿಸುವ ಸರ್ಕಾರದ ಯೋಜನೆಗೆ ಸಮಾಜವಾದಿ ಪಕ್ಷ ಅಡ್ಡಿಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಿಡಿಕಾರಿದರು.
ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ಬಡವರ ಏಳಿಗೆಯನ್ನು ಬಯಸದ ಸಮಾಜವಾದಿ ಪಕ್ಷ ಟ್ಯಾಬ್ ಮತ್ತು ಸ್ಮಾರ್ಟ್‍ಫೋನ್‍ಗಳನ್ನು ವಿತರಿಸದಂತೆ ಚುನಾವಣಾ ಆಯೋಗಕ್ಕೆ ಮಧ್ಯಸ್ಥಿಕೆ ವಹಿಸುವಂತೆ ಕೋರಿದೆ. ಇಂತಹ ಹಸ್ತಕ್ಷೇಪದಿಂದ ಬಿಜೆಪಿಗೆ ಹಿನ್ನಡೆಯಾಗದು. ಬಿಜೆಪಿ ಸರ್ಕಾರವು ಬಡವರ ಪರವಾಗಿದ್ದು, ಬಡವರ ಏಳಿಗೆಗಾಗಿ ಶ್ರಮಿಸುತ್ತದೆ ಎಂದ ಅವರು, ಮಾರ್ಚ್ 10 ರಿಂದ ಯುವಕರಿಗೆ 2 ಕೋಟಿ ಟ್ಯಾಬ್ ಮತ್ತು ಸ್ಮಾರ್ಟ್ ಫೋನ್ ವಿತರಿಸುತ್ತೇವೆ ಎಂದು ಘೋಷಿಸಿದರು.
ಬಿಜೆಪಿಯೂ ಪುನಃ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಒಬ್ಬರಿಗೂ ಉದ್ಯೋಗವನ್ನು ನೀಡುತ್ತೇವೆ. ಮುಂದಿನ 5 ವರ್ಷಗಳಲ್ಲಿ ಬಿಜೆಪಿಯೂ ಈ ಯೋಜನೆಯನ್ನು ಸಕಾರಗೊಳಿಸಲು ಶ್ರಮಿಸುತ್ತದೆ. ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಉದ್ಯೋಗ, ಸ್ವಂತ ಉದ್ಯೋಗ ನಿರ್ಮಿಸಲು ಸಹಾಯ ಮಾಡುತ್ತದೆ ಎಂದು ಭರವಸೆ ನೀಡಿದರು.ಇದನ್ನೂ ಓದಿ:ಕೇಂದ್ರ ಸಚಿವ ಭಗವಂತ ಖೂಬಾ ವಾಹನದ ಮೇಲೆ ಕಲ್ಲು ತೂರಾಟ