Tag: ಸಮುದಾಯ ಆರೋಗ್ಯ ಕೇಂದ್ರ

  • ನವಜಾತ ಶಿಶುಗಳ ಸರಣಿ ಸಾವು – ಎರಡು ವಾರದ ಅಂತರದಲ್ಲಿ ಮೂರು ಶಿಶುಗಳ ಮರಣ

    ನವಜಾತ ಶಿಶುಗಳ ಸರಣಿ ಸಾವು – ಎರಡು ವಾರದ ಅಂತರದಲ್ಲಿ ಮೂರು ಶಿಶುಗಳ ಮರಣ

    ಯಾದಗಿರಿ: ಜಿಲ್ಲೆಯಲ್ಲಿ ನವಜಾತ ಶಿಶುಗಳ ಸರಣಿ ಸಾವು ಮುಂದುವರೆದಿದ್ದು, ಎರಡು ವಾರದ ಅಂತರದಲ್ಲಿ ಮೂರು ಶಿಶುಗಳು ಮೃತಪಟ್ಟಿವೆ. ಈ ಘಟನೆ ಯಾದಗಿರಿ (Yadagiri) ಜಿಲ್ಲೆಯ ಗುರುಮಠಕಲ್ (Gurumitkal) ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

    ನಿನ್ನೆ (ಎ.08) ತಪಾಸಣೆಗಾಗಿ ಗರ್ಭಿಣಿ ಗಾಯತ್ರಿ ದಾಸರಿ ಎಂಬವರು ಗುರುಮಠಕಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದಿದ್ದರು. ಈ ವೇಳೆ ವೈದ್ಯರು ಕೆಲವು ತಪಾಸಣೆಗಾಗಿ ಜಿಲ್ಲಾಸ್ಪತ್ರೆಗೆ ಹೋಗಲು ಸೂಚಿಸಿದ್ದರು. ಆದರೆ ತಡರಾತ್ರಿ ಗರ್ಭಿಣಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ.ಇದನ್ನೂ ಓದಿ: ಹೆಚ್ಚುವರಿ ಪರಿಹಾರ ನೀಡದ್ದಕ್ಕೆ ಸಣ್ಣ ನೀರಾವರಿ ಇಲಾಖೆಯ 1.43 ಲಕ್ಷ ರೂ. ಮೌಲ್ಯದ ಪೀಠೋಪಕರಣ ಜಪ್ತಿ

    ಆಸ್ಪತ್ರೆಗೆ ಬರುತ್ತಲೇ ಮಗುವಿನ ಅರ್ಧದೇಹ ಹೊರಗೆ ಬಂದಿತ್ತು. ಆದರೆ ಈ ಸಮಯದಲ್ಲಿ ಜಿಲ್ಲಾಸ್ಪತ್ರೆಗೆ ಹೋಗಲು ಯಾವುದೇ ಅಂಬುಲೆನ್ಸ್ ಇರಲಿಲ್ಲ. ಹೀಗಾಗಿ, ಸಿಬ್ಬಂದಿ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೇ ಹೆರಿಗೆ ಮಾಡಿದ್ದಾರೆ. ಹೆರಿಗೆಯಾದ ಕೆಲವೇ ಕ್ಷಣಗಳಲ್ಲಿ ನವಜಾತ ಶಿಶು ಮೃತಪಟ್ಟಿದೆ.

    ಶಿಶು ಮೃತಪಟ್ಟ ಹಿನ್ನೆಲೆ ಡಿಹೆಚ್‌ಓ ಮಹೇಶ್ ಬಿರಾದಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪೇದೆ ಆತ್ಮಹತ್ಯೆ

     

  • ಜೂನ್ 21 ರಿಂದ 5 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ

    ಜೂನ್ 21 ರಿಂದ 5 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ

    ವಾಷಿಂಗ್ಟನ್: ವಿಶ್ವದಾದ್ಯಂತ ಕೋವಿಡ್ ಹೆಚ್ಚಳವಾಗುತ್ತಿದೆ. ಇದರಿಂದ ಆಯಾ ದೇಶಗಳು ಕೋವಿಡ್ ನಿಯಂತ್ರಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಐಸಿಯು ಘಟಕಗಳನ್ನು ಸಿದ್ಧಪಡಿಸಿವೆ.

    CHILDRENS COVID

    ಅಮೆರಿಕದಲ್ಲೂ ಕೆಲ ದಿನಗಳಿಂದ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದ್ದು, ಮಕ್ಕಳ ಮೇಲೆ ನಿಗಾ ಇರಿಸಲಾಗಿದೆ. ಅದಕ್ಕಾಗಿ ಜೂನ್ 21 ರಿಂದ 5 ವರ್ಷದ ಮಳಿಗೂ ಕೊರೊನಾ ಲಸಿಕೆ ನೀಡಲು ಅಮೆರಿಕದ ಆರೋಗ್ಯ ಇಲಾಖೆ ನಿರ್ಧರಿಸಿದೆ. ಇದನ್ನೂ ಓದಿ: 140 ಪ್ರಯಾಣಿಕರ ಜೀವ ಉಳಿಸಿ ತಾನೇ ಪ್ರಾಣ ಬಿಟ್ಟ ಹೈಸ್ಪೀಡ್ ಬುಲೆಟ್ ಟ್ರೈನ್ ಚಾಲಕ

    ಇದಕ್ಕಾಗಿ ಜೂನ್ 15ರಂದೇ ಸ್ವತಂತ್ರ ತಜ್ಞರ ಸಮಿತಿಯು ಮಕ್ಕಳ ದತ್ತಾಂಶವನ್ನು ಕಲೆ ಹಾಕಲು ಸಭೆ ನಡೆಸಲಿದೆ. ಇದನ್ನೂ ಓದಿ: ಸೇನೆಯಲ್ಲಿ 4 ವರ್ಷ ಮಾತ್ರ ಸೇವೆ – ಶೀಘ್ರವೇ ಅಗ್ನಿಪಥ್‌ಗೆ ಅನುಮೋದನೆ

    COVID HIKE

    ಈ ಕುರಿತು ಮಾಹಿತಿ ನೀಡಿರುವ ಶ್ವೇತಭವನದ ಕೋವಿಡ್ ಪ್ರತಿಕ್ರಿಯೆ ಸಂಯೋಜಕ ಡಾ.ಆಶಿಶ್ ಝಾ, ಬೈಡನ್ ನೇತೃತ್ವದ ಸರ್ಕಾರವು 10 ಮಿಲಿಯನ್ (ದಶಲಕ್ಷ) ನಷ್ಟು ಫಿಜರ್ ಮತ್ತು ಮೊಡೆರ್ನಾ ಲಸಿಕೆಗಳನ್ನು ರಾಜ್ಯಗಳ ಔಷಧಾಲಯಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಲಭ್ಯವಾಗುವಂತೆ ಮಾಡಿದೆ. ಆರೋಗ್ಯ ಇಲಾಖೆ ಅಧಿಕೃತ ಆದೇಶ ಹೊರಡಿಸಿದ ನಂತರ ಲಸಿಕೆಯನ್ನು ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.