Tag: ಸಮುದಾಯ ಭವನ

  • ಇದೇ ತಿಂಗಳು ಉದ್ಘಾಟನೆಗೊಳ್ಳಬೇಕಿದ್ದ ಸಮುದಾಯ ಭವನದಲ್ಲಿ ಡಬಲ್ ಮರ್ಡರ್

    ಇದೇ ತಿಂಗಳು ಉದ್ಘಾಟನೆಗೊಳ್ಳಬೇಕಿದ್ದ ಸಮುದಾಯ ಭವನದಲ್ಲಿ ಡಬಲ್ ಮರ್ಡರ್

    ಶಿವಮೊಗ್ಗ: ನಿರ್ಮಾಣ ಹಂತದ ಸಮುದಾಯ ಭವನದಲ್ಲಿ (Community Hall) ಡಬಲ್ ಮರ್ಡರ್ (Murder) ಆಗಿರುವ ಭೀಕರ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ (Tirthahalli) ತಾಲೂಕಿನಲ್ಲಿ ನಡೆದಿದೆ.

    ತೀರ್ಥಹಳ್ಳಿಯ ಕುರುವಳ್ಳಿ ಸಮೀಪದ ಸಮುದಾಯ ಭವನದಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಹತ್ಯೆ ಮಾಡಲಾಗಿದೆ. ಸಮುದಾಯ ಭವನ ನಿರ್ಮಾಣಕ್ಕೆ ಬಂದ ಕೂಲಿ ಕಾರ್ಮಿಕರನ್ನು ಹತ್ಯೆ ಮಾಡಲಾಗಿದ್ದು, ಅವರನ್ನು ದಾವಣಗೆರೆ ಮೂಲದ ಮಂಜಪ್ಪ(45) ಹಾಗೂ ಬೀರಪ್ಪ(46) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಟ್ರಾಕ್ಟರ್ ಟ್ರಾಲಿಗೆ ಸ್ಲೀಪರ್ ಬಸ್ ಡಿಕ್ಕಿ – ನಾಲ್ವರು ಸಾವು, 15 ಮಂದಿಗೆ ಗಾಯ

    ಹಣದ ವ್ಯವಹಾರಕ್ಕೆ ಸಂಬಂಧಪಟ್ಟಂತೆ ರಾಜಪ್ಪ ಎಂಬ ವ್ಯಕ್ತಿ ಕುಡಿದ ಅಮಲಿನಲ್ಲಿ ಕೊಲೆ ಮಾಡಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇದೇ ತಿಂಗಳ 25 ರಂದು ವಿಶ್ವಕರ್ಮ ಸಮುದಾಯ ಭವನ ಉದ್ಘಾಟನೆಗೊಳ್ಳಬೇಕಿತ್ತು. ಇದೀಗ ಸಮುದಾಯ ಭವನ ಉದ್ಘಾಟನೆಗೂ ಕೆಲವೇ ದಿನಗಳ ಮುನ್ನ ಇಬ್ಬರ ಕೊಲೆಯಾಗಿರುವ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಿಳೆಯ ಕತ್ತು ಕೊಯ್ದು ಭೀಕರ ಹತ್ಯೆಗೈದ ಪತಿಯ ಅಣ್ಣ!

  • ಕಾರ್ಮಿಕ ಇಲಾಖೆಯ ಸಮುದಾಯ ಭವನ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ

    ಕಾರ್ಮಿಕ ಇಲಾಖೆಯ ಸಮುದಾಯ ಭವನ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ

    – 200 ಹಾಸಿಗೆಯ ಕೇರ್ ಸೆಂಟರ್ ಬಳಕೆಗೆ ಸಿದ್ಧ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೀಗಾಗಿ ತಮ್ಮ ಕ್ಷೇತ್ರದ ಜನರ ರಕ್ಷಣೆ ಹಾಗೂ ಸುರಕ್ಷತೆಗಾಗಿ ಹಾಗೂ ಸೋಂಕಿತರ ಆರೈಕೆಗಾಗಿ ಶಾಸಕರು ರಾಜ್ಯ ಕಾರ್ಮಿಕ ಇಲಾಖೆಯ ಸಮುದಾಯ ಭವನವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ ಮಾಡಿದ್ದಾರೆ.

    ಟಿ.ದಾಸರಹಳ್ಳಿಯ ಶಾಸಕ ಆರ್.ಮಂಜುನಾಥ್ ತಮ್ಮ ಕ್ಷೇತ್ರದ ಜನರ ರಕ್ಷಣೆಗಾಗಿ ಈ ಕೆಲಸ ಮಾಡಿದ್ದು, ಬೆಂಗಳೂರು ಹೊರವಲಯದ ಟಿ.ದಾಸರಹಳ್ಳಿಯ ಬಗಲಗುಂಟೆ ವಾರ್ಡ್ ನಲ್ಲಿರುವ ರಾಜ್ಯದ ಕಾರ್ಮಿಕ ಇಲಾಖೆಯ ಸಮುದಾಯ ಭವನದಲ್ಲಿ ಸುಮಾರು 200 ಹಾಸಿಗೆಯ ಕೇರ್ ಸೆಂಟರ್ ಸಜ್ಜಾಗಿದೆ. ಕೇರ್ ಸೆಂಟರ್ ಸಿದ್ಧತೆಯನ್ನು ಆರ್.ಮಂಜುನಾಥ್ ಇಂದು ವೀಕ್ಷಿಸಿದರು.

    ಆಹಾರ ಸಚಿವ ಗೋಪಾಲಯ್ಯ ಸಹಕಾರದಿಂದ ನಿರ್ಮಾಣವಾಗಿರುವ ಈ ಕೇರ್ ಸೆಂಟರ್ ನಲ್ಲಿ, ಕೊರೊನಾ ವಾರಿಯರ್ಸ್ ಹಾಗೂ ಜನರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸುಸಜ್ಜಿತ ಬೆಡ್ ಗಳು, ಹೊದಿಕೆ, ಫ್ಯಾನ್, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ, ಮನರಂಜನಾ ಕೊಠಡಿ ಹಾಗೂ ಪ್ರತ್ಯೇಕ ಊಟದ ಹಾಲ್ ನಿರ್ಮಾಣ ಮಾಡಲಾಗಿದೆ. ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್, ಡಿ ಗ್ರೋಪ್ ನೌಕರರಿಗೆ ಪ್ರತ್ಯೇಕವಾಗಿ ಎಲ್ಲ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದಾರೆ.

  • ಸಮುದಾಯ ಭವನದಲ್ಲಿ ಬಾಯ್ಲರ್ ಸ್ಫೋಟ- ತಪ್ಪಿದ ಭಾರೀ ಅನಾಹುತ

    ಸಮುದಾಯ ಭವನದಲ್ಲಿ ಬಾಯ್ಲರ್ ಸ್ಫೋಟ- ತಪ್ಪಿದ ಭಾರೀ ಅನಾಹುತ

    ಬೆಂಗಳೂರು: ಸಮುದಾಯ ಭವನದಲ್ಲಿ ಅಡುಗೆ ಮಾಡುವ ಬಾಯ್ಲರ್ ಸ್ಫೋಟಗೊಂಡ ಘಟನೆ ಸಂಭವಿಸಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸಮುದಾಯ ಭವನದಲ್ಲಿ ಈ ಘಟನೆ ನಡೆದಿದೆ. ಕೆಲಸ ಮಾಡುವವರು ಅಡುಗೆ ಮಾಡಿಕೊಳ್ಳುತ್ತಿದ್ದಾಗ ಬಾಯ್ಲರ್ ಸ್ಫೋಟಗೊಂಡಿದೆ ಎನ್ನಲಾಗಿದೆ.

    ಭವನದಲ್ಲಿ ಯಾವುದೇ ಕಾರ್ಯಕ್ರಮಗಳು ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.