Tag: ಸರಕಾರ

  • ‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೆಳ್ಳಿಗೆ ಸರಕಾರಿ ನೌಕರಿ ನೀಡಿದ ತಮಿಳುನಾಡು ಸರಕಾರ

    ‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೆಳ್ಳಿಗೆ ಸರಕಾರಿ ನೌಕರಿ ನೀಡಿದ ತಮಿಳುನಾಡು ಸರಕಾರ

    ದಿ ಎಲಿಫೆಂಟ್ ವಿಸ್ಪರರ್ಸ್’ (The Elephant Whisperers) ಸಿನಿಮಾದ ಮೂಲಕ ಜಗತ್ತಿಗೆ ಪರಿಚಯವಾಗಿದ್ದ ಬೊಮ್ಮನ್ (Bomman) ಮತ್ತು ಬೆಳ್ಳಿಯ (Belli) ಮುಖದಲ್ಲಿ ಮಂದಹಾಸ ಮೂಡಿಸಿದೆ ತಮಿಳುನಾಡು  (Tamil Nadu) ಸರಕಾರ. ಆರ್ಥಿಕ ಸಂಕಷ್ಟದಿಂದ  ಈ ದಂಪತಿ ಬಳಲುತ್ತಿದ್ದರು ಎನ್ನುವ ಮಾಹಿತಿ ಸಿಕ್ಕ ತಕ್ಷಣವೇ ಬೆಳ್ಳಿಗೆ ಸರಕಾರಿ ನೌಕರಿಯನ್ನು ನೀಡಿದೆ ಸರಕಾರ. ಮೊದಲ ಸರಕಾರಿ ಕಾವಡಿಯಾಗಿ ಬೆಳ್ಳಿ ಇದೀಗ ನೇಮಕಗೊಂಡಿದ್ದಾರೆ.

    ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿ ಆಸ್ಕರ್ ಅವಾರ್ಡ್ ಗೆಲ್ಲುವ ಮೂಲಕ ಭಾರತೀಯರು ಹೆಮ್ಮೆಪಡುವಂತೆ ಮಾಡಿತ್ತು. ಇದರಲ್ಲಿ ಪ್ರಮುಖವಾಗಿ ನಟಿಸಿದ್ದ ಬೊಮ್ಮನ್- ಬೆಳ್ಳಿ ಅವರಿಗೆ ಈ ಹಿಂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸನ್ಮಾನ ಮಾಡಿದ್ದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಕೂಡ ಭೇಟಿ ಮಾಡಿ ಅಭಿನಂದಿಸಿದ್ದರು. ಇದನ್ನೂ ಓದಿ:ಟೆಂಪಲ್ ರನ್ ಮುಗಿಸಿ ಫೋಟೋಶೂಟ್ ನಲ್ಲಿ ಭಾಗಿಯಾದ ಸಾರಾ ಅಲಿ ಖಾನ್

    ಬೊಮ್ಮನ್-ಬೆಳ್ಳಿ ಅವರು ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಅರಣ್ಯದ ತೆಪ್ಪಕಾಡು ಆನೆ ಶಿಬಿರದಲ್ಲಿ ವಾಸವಾಗಿದ್ದಾರೆ. ಇಲ್ಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9ರಂದು ಭೇಟಿ ನೀಡಿದ್ದರು. ಬೆಳ್ಳಿ ಮತ್ತು ಬೊಮ್ಮನ್ ದಂಪತಿ ಜೊತೆ ಭೇಟಿಯಾದ ಮೋದಿ ಅವರ ಫೋಟೋ ಸಖತ್ ವೈರಲ್ ಆಗಿತ್ತು.

    ಈ ವರ್ಷದ 95ನೇ ಸಾಲಿನ ಅಕಾಡೆಮಿ ಅವಾರ್ಡ್‌ನಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್ʼ ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿತು. ದೀಪಿಕಾ ಪಡುಕೋಣೆ ಅವರು ಭಾರತವನ್ನು ಪ್ರತಿನಿಧಿಸಿದ ಆಸ್ಕರ್ ಅಂಗಳದಲ್ಲಿ ನಿರೂಪಣೆ ಮಾಡಿದ್ದರು. ಆಸ್ಕತ್ ಪ್ರಶಸ್ತಿಯ ಬಳಿಕ ಬೊಮ್ಮನ್- ಬೆಳ್ಳಿ ಜನಪ್ರಿಯತೆ ಪಡೆದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂ ಗಮನಿಸಿ : 5 ವರ್ಷಗಳಿಂದ ಚಲನಚಿತ್ರ ಪ್ರಶಸ್ತಿ ಪ್ರದಾನವಿಲ್ಲ

    ಸಿಎಂ ಗಮನಿಸಿ : 5 ವರ್ಷಗಳಿಂದ ಚಲನಚಿತ್ರ ಪ್ರಶಸ್ತಿ ಪ್ರದಾನವಿಲ್ಲ

    ರ್ನಾಟಕ (Karnataka) ಸರ್ಕಾರ ಚಲನಚಿತ್ರಗಳಿಗೆ ನೀಡುವ ವಾರ್ಷಿಕ ಪ್ರಶಸ್ತಿಯನ್ನು (State Award) ಬರೋಬ್ಬರಿ ಐದು ವರ್ಷಗಳಿಂದ ಪ್ರದಾನ ಮಾಡಿಲ್ಲ. 2018ರ ಪ್ರಶಸ್ತಿ ಘೋಷಣೆಯಾಗಿದ್ದು, ಅದು ಕೋರ್ಟಿನಲ್ಲಿ ಇರುವುದರಿಂದ ಈವರೆಗೂ ಅದರತ್ತ ಯಾರೂ ಕಣ್ಣು ಕೂಡ ಹಾಯಿಸಿಲ್ಲ. 2019 ರಿಂದ 2022ರವರೆಗೆ ಈವರೆಗೂ ಪ್ರಶಸ್ತಿಗಳ ಆಯ್ಕೆ ಕೂಡ ಆಗಿಲ್ಲ. ಪ್ರಶಸ್ತಿ ಆಯ್ಕೆ ಕಮಿಟಿ ಕೂಡ ಮಾಡಿಲ್ಲ. 2022 ಸಾಲಿನ ಪ್ರಶಸ್ತಿಗಳಿಗೆ ಸಿನಿಮಾಗಳನ್ನು ಆಹ್ವಾನ ಕೂಡ ಮಾಡಿಲ್ಲ. ಇಷ್ಟರ ಮಟ್ಟಿಗೆ ಚಲನಚಿತ್ರ ರಂಗದ ಮೇಲೆ ಸರಕಾರ (Government) ದಿವ್ಯ ನಿರ್ಲಕ್ಷ್ಯ ತೋರಿದೆ.

    ಸಬ್ಸಿಡಿ ವಿಚಾರದಲ್ಲೂ ಹಾಗೆಯೇ ಆಗಿದೆ. ಹಲವು ವರ್ಷಗಳಿಂದ ಸಬ್ಸಿಡಿಯನ್ನೇ ನೀಡಿಲ್ಲ. ಸಿನಿಮಾಗಳ (Cinema) ಆಯ್ಕೆಗಾಗಿ ಕಮಿಟಿ ಕೂಡ ರಚನೆ ಮಾಡಿಲ್ಲ. ಮೂರ್ನಾಲ್ಕು ವರ್ಷಗಳಿಂದ ಸಬ್ಸಿಡಿ ಬಾಕಿಯಿದೆ. ಹಾಗಾಗಿ ನಿರ್ಮಾಪಕರು ಸಹಜವಾಗಿಯೇ ಸಂಕಷ್ಟದಲ್ಲಿದ್ದಾರೆ. ಹಿಂದಿನ ಸರಕಾರಕ್ಕೆ ಹಲವು ಬಾರಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಕೂಡ ಆಗಲಿಲ್ಲ ಎನ್ನುವ ಮಾತನ್ನು ಹಲವರು ಆಡುತ್ತಾರೆ. ಇದನ್ನೂ ಓದಿ:ಮೈಸೂರಿಗೆ ಬಂದಿಳಿದ ನಟ ಉಸ್ತಾದ್ ರಾಮ್ ಪೋತಿನೇನಿ

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ಬಿ.ಎಸ್.ಲಿಂಗದೇವರು, ಗಿರೀಶ್ ಕಾಸರವಳ್ಳಿ, ಪಿ. ಶೇಷಾದ್ರಿ ಸೇರಿದಂತೆ ಹಲವರು ನೇರವಾಗಿ ಸಚಿವರನ್ನು ಭೇಟಿ ಮಾಡಿ ಈ ಎರಡೂ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದರು. ಜೊತೆಗೆ ಚಿತ್ರನಗರಿ ಕುರಿತು ಪ್ರಸ್ತಾಪ ಮಾಡಿದ್ದರು. ಆದರೂ, ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿಲ್ಲ. ಸಬ್ಸಿಡಿ ಸಿಗಲಿಲ್ಲ. ಮೂರು ವರ್ಷಗಳ ಅವಧಿಯ ಸಿನಿಮಾಗಳನ್ನು ಆಹ್ವಾನಿಸಿದ್ದು ಬಿಟ್ಟರೆ, ಮುಂದಿನ ಹಂತದ ಯಾವ ಕಾರ್ಯಗಳು ನಡೆದಿಲ್ಲ.

    ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇದ್ದಾಗಲೇ ಏಪ್ರಿಲ್ 24 ರಂದು ಡಾ.ರಾಜ್ ಕುಮಾರ್ ಅವರ ಜನ್ಮದಿನದಂದು ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದರು. ಅವರು ಅಧಿಕಾರದಿಂದ ಕೆಳಗಿಳಿದ ನಂತರ ಆ ಕೆಲಸವೂ ಆಗಲೇ ಇಲ್ಲ. ಹೀಗಾಗಿ ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಅವರ ಸರಕಾರವಾದರೂ ಅದನ್ನು ಮುಂದುವರೆಸಿಕೊಂಡು ಹೋಗುತ್ತಾ ನೋಡಬೇಕಿದೆ.

  • ಹಳಿ ತಪ್ಪಿದ್ದು ರೈಲಲ್ಲ, ಸರಕಾರ: ಮತ್ತೆ ಕೇಂದ್ರದ ವಿರುದ್ಧ ಗುಡುಗಿದ ನಟ ಕಿಶೋರ್

    ಹಳಿ ತಪ್ಪಿದ್ದು ರೈಲಲ್ಲ, ಸರಕಾರ: ಮತ್ತೆ ಕೇಂದ್ರದ ವಿರುದ್ಧ ಗುಡುಗಿದ ನಟ ಕಿಶೋರ್

    ಕೇಂದ್ರ ಸರಕಾರದ ವಿರುದ್ಧ ಮತ್ತೆ ಗುಡುಗಿದ್ದಾರೆ ನಟ ಕಿಶೋರ್ (Kishor). ಒಡಿಶಾದಲ್ಲಿ (Odisha) ನಡೆದ ಭೀಕರ ರೈಲು (train) ದುರಂತದ ಬಗ್ಗೆ ಪೋಸ್ಟ್ ಮಾಡಿರುವ ಅವರು,  ಇನ್ನೂರಕ್ಕೂ ಹೆಚ್ಚು ಜನರ ಸಾವಿಗೆ ನೇರವಾಗಿ ಕೇಂದ್ರ ಸರಕಾರವೇ ಹೊಣೆ ಎಂದು ಅವರು ಬಣ್ಣಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಇಂಗ್ಲಿಷ್ ಪತ್ರಿಕೆಯಲ್ಲಿ ಬಂದ ವರದಿಯನ್ನು ಪೋಸ್ಟ್ ಮಾಡಿ, ಅದರೊಂದಿಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.

    ರೈಲ್ವೆ ಮಂತ್ರಿ ಈಗ ಹೋಗಿ ನಿಂತು ಕ್ಯಾಮೆರಾ ಮುಂದೆ ಕಣ್ಣೀರು ಸುರಿಸುವ ನಾಟಕ ಬಿಟ್ಟು, ಇಂದಿಗೂ ಖಾಲಿಯಿರುವ 3 ಲಕ್ಷಕ್ಕೂ ಹೆಚ್ಚು ರೈಲ್ವೆ ನೌಕರರನ್ನು 1500ಕ್ಕೂ ಹೆಚ್ಚು ರೈಲ್ವೆ ಸುರಕ್ಷತೆಗೆ ಬೇಕಾದ ಖಾಲಿಯಾಗೇ ಉಳಿದಿರುವ ಹುದ್ದೆಗಳನ್ನು ತುಂಬಿ, ಹಳಿ ನಿರ್ವಹಣೆ ಸಮಪರ್ಕವಾಗಿಸಬಹುದಿತ್ತೆ? ಎಂದು ಕಿಶೋರ್ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:ದೀರ್ಘಕಾಲದ ಗೆಳತಿಯೊಂದಿಗೆ ಹಸೆಮಣೆ ಏರಿದ ಅಭಿಷೇಕ್

    ಮುಂದುವರೆದು ಬರೆದಿರುವ ಕಿಶೋರ್, ‘ಕೋಟ್ಯಂತರ ರೂಪಾಯಿ ವ್ಯಯಿಸಿ ತಿಂಗಳಿಗೊಂದು ರೈಲಿಗೆ ಹಸಿರು ನಿಶಾನೆ ತೋರಿಸಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಬದಲು, ಕವಚ ತಂತ್ರಜ್ಞಾನಕ್ಕೆ ಪ್ರಾಮುಖ್ಯತೆ ಕೊಟ್ಟು ಎಲ್ಲೆಡೆ ಅಳವಡಿಸಬಹುದಿತ್ತೆ? ಹಾಗೆ ನೋಡಿದರೆ ಕಳೆದ ಆರೇಳು ವರ್ಷಗಳಲ್ಲಿ ಸಾವಿರಕ್ಕೂ ಹೆಚ್ಚು ರೈಲುಗಳು ಹಳಿತಪ್ಪಿ ಅಪಘಾತಕ್ಕೀಡಾಗಿದ್ದರೂ, 2021ರ ಸಿಎಜಿ ರಿಪೋರ್ಟನ್ನು ಕಡೆಗಣಿಸಿ, ಸುರಕ್ಷತೆಗಿಂತ ದೇಶದ ಸ್ವತ್ತನ್ನು ಮಾರಿ ದುಡ್ಡು ಮಾಡುವುದರಲ್ಲೇ ನಿರತವಾದ ಸರ್ಕಾರವೇ ಈ ದುರಂತಕ್ಕೆ ಕಾರಣವಲ್ಲವೆ?’ ಎಂದು ಪ್ರಶ್ನೆ ಮಾಡಿದ್ದಾರೆ.

    ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ, ಅಪರಾಧಿ ಯಾರೆಂದು ಕಂಡು ಹಿಡಿಯುತ್ತದಂತೆ. ಎಂತ ವಿಪರ್ಯಾಸ. ಇಲ್ಲಿ ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ. ಅಪಘಾತಗಳನ್ನೂ ದುರಂತಗಳನ್ನೂ ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ ಎಂದು ಅವರು ಬರೆದಿದ್ದಾರೆ.

  • ಸರಕಾರದ ಮುಂದೆ ಹಳೆ ಬೇಡಿಕೆ ಇಟ್ಟ ರಿಷಬ್ ಶೆಟ್ಟಿ

    ಸರಕಾರದ ಮುಂದೆ ಹಳೆ ಬೇಡಿಕೆ ಇಟ್ಟ ರಿಷಬ್ ಶೆಟ್ಟಿ

    ಕಾಂತಾರ (Kantara) ಚಿತ್ರ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty)  ಸರಕಾರದ ಮುಂದೆ ಹಳೆ ಬೇಡಿಕೆಯನ್ನೇ ಇಟ್ಟಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲೇ ಫಿಲ್ಮ್ ಸಿಟಿ ಆಗಬೇಕು ಎಂದು ಹಲವಾರು ಬಾರಿ ಚರ್ಚೆಯಾಗಿದೆ. ಆನಂತರ ರಾಮನಗರ, ಮೈಸೂರು ಹೇಗೆ ಮಾತಿನಲ್ಲೇ ಫಿಲ್ಮ್ ಸಿಟಿ ಸುತ್ತಾಡಿ ಬಂದಿದೆ. ಇದೀಗ ಮತ್ತೆ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ  (Film City)ಆಗಬೇಕು ಎಂದು ರಿಷಬ್ ಒತ್ತಾಯಿಸಿದ್ದಾರೆ.

    ಕೇಂದ್ರ ಸರಕಾರ (Govt) ಆಯೋಜಿಸಿದ್ದ ಭಾರತದ ಯುವಜನತೆಯ ಕುರಿತಾದ ಕಾರ್ಯಕ್ರಮದಲ್ಲಿ ಮಾತನಾಡಿರುವ ರಿಷಬ್, ‘ಬೆಂಗಳೂರಿನಲ್ಲೇ ಫಿಲ್ಮ್ ಸಿಟಿ ಆಗಲಿ. ಫಿಲ್ಮ್ ಸಿಟಿ ಅವಶ್ಯಕತೆ ಬೆಂಗಳೂರಿನಲ್ಲೇ ಹೆಚ್ಚಿದೆ. ಫಿಲ್ಮ್ ಸಿಟಿ ಎನ್ನುವುದು ಚಿತ್ರೋದ್ಯಮದ ಕನಸು. ಇನ್ನೂ ಆ ಕನಸು ಈಡೇರಿಲ್ಲ’ ಎಂದಿದ್ದಾರೆ ರಿಷಬ್. ಇದನ್ನೂ ಓದಿ:ಬಾಯ್‌ಫ್ರೆಂಡ್ ಖಾಸಗಿ ಫೋಟೋ ಶೇರ್ ಮಾಡಿದ ಮಲೈಕಾ- ಅರ್ಜುನ್ ಕಪೂರ್ ಟ್ರೋಲ್

    ‍ಪ್ರಸಾರ ಮತ್ತು ಮಾಹಿತಿ ಸಚಿವಾಲಯ ಆಯೋಜಿಸಿದ್ದ 9ನೇ ಸೇವಾ ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶದ ಪ್ಯಾನೆಲಿಸ್ಟ್ ಆಗಿ ಹೋಗಿದ್ದ ರಿಷಬ್, ಸಿನಿಮಾ ರಂಗದ ಬಗ್ಗೆ ಅನೇಕ ವಿಷಯಗಳನ್ನೂ ಹೊರಹಾಕಿದ್ದಾರೆ. ಪ್ರೇಕ್ಷಕರನ್ನು ತಲುಪುವ ಬಗೆಯ ಬಗ್ಗೆಯೂ ಅವರು ಮಾತನಾಡಿದ್ದಾರೆ.

  • ನಟಿ ನಯನತಾರ ಬಾಡಿಗೆ ತಾಯ್ತನದ ಮಗು: ತನಿಖೆಗೆ ಆದೇಶಿಸಿದ ತಮಿಳು ನಾಡು ಸರಕಾರ

    ನಟಿ ನಯನತಾರ ಬಾಡಿಗೆ ತಾಯ್ತನದ ಮಗು: ತನಿಖೆಗೆ ಆದೇಶಿಸಿದ ತಮಿಳು ನಾಡು ಸರಕಾರ

    ನಿನ್ನೆಯಷ್ಟೇ ತಾವು ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದಿರುವುದಾಗಿ ನಟಿ ನಯನತಾರಾ (Nayantara) ಮತ್ತು ವಿಘ್ನೇಶ್ ಶಿವನ್ ಘೋಷಿಸಿದ್ದರು. ಅದು ಅವಳಿ ಜವಳಿ ಮಕ್ಕಳಾಗಿರುವ ಮತ್ತು ಆ ಮಗುವಿಗೆ ಹೆಸರೂ ಇಟ್ಟಿರುವ ಕುರಿತು ಖುಷಿಯನ್ನು ಹಂಚಿಕೊಂಡಿದ್ದರು. ಮನೆಗೆ ಮಕ್ಕಳು ಬಂದು ಖುಷಿಯಲ್ಲಿರುವ ದಂಪತಿಗೆ ತಮಿಳುನಾಡು (Tamil Nadu) ಸರಕಾರ ಶಾಕ್ ಮೂಡಿಸಿದೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದದ್ದು ನಿಯಮಗಳ ಪ್ರಕಾರವೇ ಇದೆಯಾ ಎಂದು ಕೇಳಿದೆ.

    ಬಾಡಿಗೆ ತಾಯ್ತನದ ಕುರಿತು ಸರಕಾರವು ಹಲವು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯನತಾರಾ ಮತ್ತು ವಿಘ್ನೇಶ್ ಶಿವನ್ (Vignesh Sivan) ಗಾಳಿಗೆ ತೂರಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ತಮಿಳು ನಾಡು ಸರಕಾರ (Government) ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಬಾಡಿಗೆ ತಾಯ್ತನ ನಿಯಂತ್ರಣ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಬಾಡಿಗೆ ತಾಯಿ ಆರೋಗ್ಯವಾಗಿರಬೇಕು, ಆಕೆಯ ವಯಸ್ಸು 21-35ರ ಅಂತರದಲ್ಲಿ ಇರಬೇಕು. ಒಂದೇ ಸಲ ಬಾಡಿಗೆ ತಾಯಿ ಆಗಲು ಸಾಧ್ಯ ಹಾಗೂ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ.

    ಬಾಡಿಗೆ ತಾಯಿಯಿಂದ (Surrogate Mother) ಮಗು ಪಡೆಯಲು ಇವೆಲ್ಲ ನಿಯಮಗಳನ್ನು ಪಾಲಿಸಲೇಬೇಕಿದೆ. ಆದರೆ, ನಯನ ದಂಪತಿ ಇವುಗಳನ್ನು ಪಾಲಿಸಿಲ್ಲ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳು ನಾಡು ವೈದ್ಯಕೀಯ ಸೇವೆಗಳ ನಿರ್ದೇಶನಾಲಯವು ತನಿಖೆಗೆ (Investigation) ಆದೇಶಿಸಿದೆ. ಈ ತನಿಖೆಯು ತಮ್ಮ ಅವಳಿ ಮಕ್ಕಳಾದ ಉಯಿರ್ ಮತ್ತು ಉಳಗಂ ಜೊತೆ ಆಟವಾಡುತ್ತಿದ್ದ ದಂಪತಿಗೆ ಶಾಕ್ ಮೂಡಿಸಿದೆ. ಇದನ್ನೂ ಓದಿ:ಪ್ರೇಮ್ ಮತ್ತು ಧ್ರುವ ಕಾಂಬಿನೇಷನ್ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್ ದತ್

    ಮದುವೆಗೂ ಮುನ್ನ ವಿಘ್ನೇಶ್ ಶಿವನ್ ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ನಯನತಾರ ನನ್ನ ಮಕ್ಕಳ ತಾಯಿ ಆಗಲಿದ್ದಾರೆ ಎಂದು ಸುಳಿವು ನೀಡಿದ್ದರು. ಅಲ್ಲಿಗೆ ನಯನತಾರ ಮತ್ತು ವಿಘ್ನೇಶ್ ಶಿವನ್ ಮದುವೆ ಆಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಕಳೆದ ಜೂನ್ ನಲ್ಲಿ ಆಪ್ತರ ಸಮ್ಮುಖದಲ್ಲಿ ಇವರು ಹಸೆಮಣೆ ಏರಿದ್ದರು. ತಾವಿಷ್ಟಪಟ್ಟ ಗಣ್ಯರು ಈ ಮದುವೆಗೆ ಸಾಕ್ಷಿ ಆಗಿದ್ಧರು.

    ಮಾರ್ಚ್ ನಲ್ಲಿ ಈ ಜೋಡಿ ಇನ್ನೂ ಮದುವೆ ಆಗದೇ ಇದ್ದರೂ, ಬಾಡಿಗೆ ತಾಯಿ ಮೂಲಕ ಮಗುವನ್ನು ಪಡೆದುಕೊಳ್ಳುವ ಪ್ಲ್ಯಾನ್ ಮಾಡಲಿದ್ದಾರೆ ಎಂಬ ಸುದ್ದಿಯೂ ತಮಿಳು ಸಿನಿಮಾ ರಂಗದಲ್ಲಿ ಜೋರಾಗಿಯೇ ಸುದ್ದಿ ಆಯಿತು. ಅದು ಕೂಡ ಇದೀಗ ನಿಜವಾಗಿದೆ. ಮದುವೆಗೂ ಮುನ್ನ ಬಾಡಿಗೆ ತಾಯಿಯನ್ನು ಫಿಕ್ಸ್ ಮಾಡಿಯೇ ಇವರು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅವಳಿ ಮಕ್ಕಳ ದಂಪತಿ ಆಗುವ ಮೂಲಕ ಅದನ್ನೂ ನಿಜ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಲನಚಿತ್ರ ರಾಜ್ಯ ಪ್ರಶಸ್ತಿ 2017: ನಾಲ್ಕು ವರ್ಷಗಳ ನಂತರ ಕಣ್ತೆರೆದ ಸರಕಾರ

    ಚಲನಚಿತ್ರ ರಾಜ್ಯ ಪ್ರಶಸ್ತಿ 2017: ನಾಲ್ಕು ವರ್ಷಗಳ ನಂತರ ಕಣ್ತೆರೆದ ಸರಕಾರ

    2017ನೇ ಸಾಲಿನ ಕರ್ನಾಟಕ ಚಲನಚಿತ್ರ ರಾಜ್ಯ ಪ್ರಶಸ್ತಿಯನ್ನು ನಾಲ್ಕು ವರ್ಷಗಳ ನಂತರ ಸರಕಾರ ಪ್ರದಾನ ಮಾಡಲಾಗುತ್ತಿದೆ. ಡಾ.ರಾಜ್ ಕುಮಾರ್ ಹುಟ್ಟು ಹಬ್ಬದ ದಿನದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು 2017ನೇ ಸಾಲಿನ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

    ಪ್ರತಿ ವರ್ಷವೂ ಆಯಾ ಕ್ಯಾಲೆಂಡರ್ ವರ್ಷದ ಚಲನಚಿತ್ರ ಪ್ರಶಸ್ತಿಯನ್ನು ನೀಡುತ್ತಾ ಬಂದಿರುವುದು ವಾಡಿಕೆ ಆಗಿತ್ತು. 2017ರಿಂದ ಈವರೆಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿಲ್ಲ. 2017ರಲ್ಲಿ ಎರಡು ಬಾರಿ ಪ್ರದಾನ ಸಮಾರಂಭವನ್ನು ಹಮ್ಮಿಕೊಂಡಿದ್ದರೂ, ನಾನಾ ಕಾರಣಗಳಿಂದಾಗಿ ನಿಗದಿತ ದಿನಾಂಕಗಳಂದು ಅವುಗಳು ನಡೆಯಲಿಲ್ಲ. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ

    2018 ನವೆಂಬರ್ 24 ರಂದು ಬೆಂಗಳೂರಿನಲ್ಲಿ 2017ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಬೇಕಿತ್ತು. ಮಂಡ್ಯದ ಬಳಿ ಬಸ್ಸೊಂದು ಕೆರೆಗೆ ಬಿದ್ದು ಹಲವರು ಪ್ರಾಣ ಕಳೆದುಕೊಂಡರು. ಜತೆಗೆ ಅಂದೇ ಅಂಬರೀಶ್ ಕೂಡ ನಿಧನರಾದರು. ಹಾಗಾಗಿ ಪ್ರದಾನ ಸಮಾರಂಭ ನಡೆಯಲಿಲ್ಲ. ನಂತರ ಕೊರೋನಾ ಮತ್ತಿತರ ಕಾರಣಗಳನ್ನು ಕೊಟ್ಟು ಪ್ರಶಸ್ತಿ ವಿತರಿಸಲಿಲ್ಲ. ಕೊನೆಗೂ ಏ.24 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

    ಈ ಸಮಾರಂಭದಲ್ಲಿ ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ಜಿ.ಎನ್.ಲಕ್ಷ್ಮೀಪತಿ, ಡಾ.ರಾಜ್ ಕುಮಾರ್ ಪ್ರಶಸ್ತಿಯನ್ನು ನಿರ್ದೇಶಕಿ ಲಕ್ಷ್ಮಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಎಸ್.ನಾರಾಯಣ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಆದರ್ಶ ಈಶ್ವರಪ್ಪ ಅವರ ಶುದ್ದಿ, ಕೋಡ್ಲು ರಾಮಕೃಷ್ಣ ಅವರ ಮಾರ್ಚ್ 24 ಮತ್ತು ಅಭಯ ಸಿಂಹ ನಿರ್ದೇಶನದ ಪಡ್ಡಾಯಿ ಕ್ರಮವಾಗಿ ಪ್ರಥಮ, ದ್ವಿತಿಯಾ, ತೃತಿಯ ಪ್ರಶಸ್ತಿಗಳು ಪಡೆದಿವೆ. ಅತ್ಯುತ್ತಮ ಮನರಂಜನಾ ಸಿನಿಮಾವಾಗಿ ಪುನೀತ್ ರಾಜ್ ಕುಮಾರ್ ನಟನೆಯ ‘ರಾಜಕುಮಾರ’ ಆಯ್ಕೆಯಾಗಿದೆ.

  • ಅಪ್ಪ ಸರಿ, ಮಕ್ಕಳು ತಪ್ಪು ಸರಕಾರಕ್ಕೆ ಟಾಂಗ್ ಕೊಟ್ಟ ನಟ ಉಪೇಂದ್ರ

    ಅಪ್ಪ ಸರಿ, ಮಕ್ಕಳು ತಪ್ಪು ಸರಕಾರಕ್ಕೆ ಟಾಂಗ್ ಕೊಟ್ಟ ನಟ ಉಪೇಂದ್ರ

    ಸಿನಿಮಾದವರು ಏನೇ ಮಾಡಿದರೂ ಅದು ತಪ್ಪು ಎಂದು ಖಂಡಿಸುವ ಹಲವರಿಗೆ ತಮ್ಮದೇ ಆದ ರೀತಿಯಲ್ಲಿ ಉತ್ತರ ಕೊಟ್ಟಿದ್ದಾರೆ ನಟ ಉಪೇಂದ್ರ. ಇತ್ತೀಚಿನ ದಿನಗಳಲ್ಲಿ ಸಿನಿಮಾದ ಅನೇಕ ನಟ ನಟಿಯರು ಜೂಜು, ತಂಬಾಕು ವಸ್ತುಗಳು ಸೇರಿದಂತೆ ನಾನಾ ರೀತಿಯ ಜಾಹೀರಾತುಗಳಿಗೆ ರೂಪದರ್ಶಿಗಳಾಗುತ್ತಿದ್ದಾರೆ. ಈ ನಡೆಯನ್ನು ಅನೇಕರು ವಿರೋಧಿಸುತ್ತಿದ್ದಾರೆ. ಇಂತಹ ವಿರೋಧಿ ಮನಸ್ಸುಗಳಿಗೆ ಉಪೇಂದ್ರ ಉತ್ತರಿಸಿದ್ದಾರೆ. ಈ ಮೂಲಕ ಸರಕಾರಕ್ಕೂ ಅವರು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

    ರಮ್ಮಿ ಆಟವೊಂದರ ಜಾಹೀರಾತಿನಲ್ಲಿ ಕಿಚ್ಚ ಸುದೀಪ್ ಅವರು ನಟಿಸಿದ್ದರು ಎನ್ನುವ ಕಾರಣಕ್ಕಾಗಿ ಭಾರೀ ವಿರೋಧ ವ್ಯಕ್ತವಾಯಿತು. ಈ ಆಟದಿಂದಾಗಿ ಹಲವರು ಮನೆ ಮಠ ಕಳೆದುಕೊಳ್ಳುತ್ತಿದ್ದಾರೆ ಸಾಮಾಜಿಕ ಜವಾಬ್ದಾರಿ ಇರುವವರು ಈ ರೀತಿ ಮಾಡಬಾರದು ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ವಿರೋಧಿಸಿದರು. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ

    ನಿನ್ನೆಯಷ್ಟೇ ತಂಬಾಕು ಉತ್ಪನ್ನವೊಂದರ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಅಕ್ಷಯ್ ಕುಮಾರ್ ನಾನು ಅಂತ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಬಾರದಿತ್ತು. ಕಾಣಿಸಿಕೊಂಡಿದ್ದಕ್ಕೆ ಅಭಿಮಾನಿಗಳಿಗೆ ಕ್ಷಮೆ ಕೋರುವೆ  ಎಂದಿದ್ದರು. ಮುಂದೆಂದೂ ಅಂತಹ ಜಾಹೀರಾತಿನಲ್ಲಿ ನಟಿಸುವುದಿಲ್ಲ ಎಂದು ಅಶ್ವಾಸನೆಯನ್ನೂ ಅವರು ಕೊಟ್ಟಿದ್ದಾರೆ. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

    ಇವೆಲ್ಲವನ್ನೂ ಮುಂದಿಟ್ಟುಕೊಂಡು ಉಪೇಂದ್ರ ಫೇಸ್ ಬುಕ್ ನಲ್ಲಿ ‘ಒಂದು ಸಿನಿಮಾದಲ್ಲಿ ಸಿಗರೇಟ್ ಸೇದೋರು ತಪ್ಪು, ಕುಡಿಯೋದು ತಪ್ಪು, ಜೂಜಿಗೆ ಜಾಹೀರಾತು ನೀಡೋದು ತಪ್ಪು. ಆದರೆ, ಇವುಗಳಿಂದ ಬರೋ ತೆರಿಗೆ ಹಣಕ್ಕಾಗಿ ಇದಕ್ಕೆಲ್ಲಾ ಅನುಮತಿ ಕೊಟ್ಟಿರೋ ಸರಕಾರ ಸರಿ. ನಾಯಕ ಸಂಸ್ಕೃತಿಯ ರಾಜಕೀಯ ಗುಂಗಿನ ಸಮಾಜದಲ್ಲಿ  ಯಾವತ್ತೂ ಅಪ್ಪ ಸರಿ ಮಕ್ಕಳು ತಪ್ಪು’ ಎಂದು ಬರೆಯುವ ಮೂಲಕ ಸರಕಾರಕ್ಕೆ ಚಾಟಿ ಬೀಸಿದ್ದಾರೆ.