Tag: ಸರ್ಕಾರಿ ಅಧಿಕಾರಿ

  • ಪತ್ನಿ ಕೊಲ್ಲಲು ಯತ್ನಿಸಿದ ಸರ್ಕಾರಿ ಅಧಿಕಾರಿ- ಪೋಷಕರ ಆರೋಪ

    ಪತ್ನಿ ಕೊಲ್ಲಲು ಯತ್ನಿಸಿದ ಸರ್ಕಾರಿ ಅಧಿಕಾರಿ- ಪೋಷಕರ ಆರೋಪ

    ಮೈಸೂರು: ಸರ್ಕಾರಿ ಅಧಿಕಾರಿಯೊಬ್ಬ ತನ್ನ ಪತ್ನಿಯನ್ನು ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ.

    ನಾಗವೇಣಿ (41) ಈಗ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದು, ಪತಿಯೇ ಈ ಕೃತ್ಯ ಎಸಗಿದ್ದಾನೆ ಎಂದು ಪತ್ನಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

    ವೆಂಕಟಪ್ಪಗೆ 1997ರಲ್ಲಿ ನಾಗವೇಣಿಯನ್ನು ಮದುವೆ ಮಾಡಿಕೊಡಲಾಗಿತ್ತು. ನಾಗವೇಣಿ  ಪತಿ ವೆಂಕಟಪ್ಪ, ಹುಣಸೂರು ತಾಲೂಕಿನಲ್ಲಿ ಸಹಾಯಕ ಶಿಶುಯೋಜನಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾನೆ. ಮೈಸೂರು ತಾಲೂಕಿನ ಸೋಮನಾಥಪುರ ಗ್ರಾಮದಲ್ಲಿ ಈ ದಂಪತಿ ವಾಸವಿದ್ದರು.

    ಆದರೆ ಈಗ ನಾಗವೇಣಿ ಪೋಷಕರು, ಅಳಿಯ ವೆಂಕಟಪ್ಪ ಕೆಲ ತಿಂಗಳಿನಿಂದ ಕುಡಿದು ಬಂದು ಮಗಳಿಗೆ ಹೊಡೆದು ಕಿರುಕುಳ ಕೊಡುತ್ತಿದ್ದನು. ಅಲ್ಲದೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು. ಈ ಬಗ್ಗೆ ನಮ್ಮ ಮಗಳು ನಮಗೆ ಹೇಳಿದ್ದಳು. ನಂತರ ನಾವು ಅಳಿಯನಿಗೆ ಬುದ್ಧಿವಾದ ಹೇಳಿದ್ದೆವು. ಆದರೆ ಆತ ನಮಗೆ ಅವಾಚ್ಯ ಪದದಿಂದ ಬೈದಿದ್ದನು. ಈಗ ಆತನೇ ಮಗಳಿಗೆ ನೇಣು ಬಿಗಿದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

  • ಸಾರ್ವಜನಿಕ ಸಭೆಯಲ್ಲೇ ಸರ್ಕಾರಿ ಅಧಿಕಾರಿಗೆ ಮಹಿಳೆಯಿಂದ ಚಪ್ಪಲಿ ಏಟು

    ಸಾರ್ವಜನಿಕ ಸಭೆಯಲ್ಲೇ ಸರ್ಕಾರಿ ಅಧಿಕಾರಿಗೆ ಮಹಿಳೆಯಿಂದ ಚಪ್ಪಲಿ ಏಟು

    ಭೋಪಾಲ್: ಸಾರ್ವಜನಿಕ ಸಭೆಯಲ್ಲೇ ಮಹಿಳೆಯೊಬ್ಬಳು ಸರ್ಕಾರಿ ಅಧಿಕಾರಿಗೆ ಚಪ್ಪಲಿ ಏಟು ಕೊಟ್ಟ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

    ಗ್ವಾಲಿಯರ್ ನಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಅಡಿ ಫಲಾನುಭವಿಗಳಿಗೆ ಮನೆ ಹಂಚಿಕೆ ನಡೆದಿತ್ತು. ಸಾರ್ವಜನಿಕ ಸಭೆಗೆ ಆಗಮಿಸಿದ್ದ ಫಲಾನುಭವಿ ಮಹಿಳೆ, ತನಗೆ ಸಿಗಬೇಕಾದ ಮನೆಯನ್ನು ಅಧಿಕಾರಿಗಳು ಬೇರೆಯವರಿಗೆ ಹಸ್ತಾಂತರ ಮಾಡಿದ್ದಾರೆ ಎಂದು ಅಧಿಕಾರಿಗಳ ಜೊತೆಗೆ ವಾಗ್ವಾದಕ್ಕೆ ಇಳಿದಿದ್ದಳು. ಈ ವೇಳೆ ಕೈಯಲ್ಲಿ ಚಪ್ಪಲಿ ಹಿಡಿದು ಅಧಿಕಾರಿಗೆ ಹೊಡೆದಿದ್ದಾಳೆ.

    ಸಭೆಯಲ್ಲಿ ಸೇರಿದ್ದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮಹಿಳೆಯನ್ನು ತಡೆಯಲು ಪ್ರಯತ್ನಿಸಿದರು. ಆದರೆ ಮಹಿಳೆ ಮಾತ್ರ ಎಲ್ಲರನ್ನೂ ತಳ್ಳಿ ನಾಲ್ಕೈದು ಬಾರಿ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ. ಅಷ್ಟೇ ಅಲ್ಲದೆ ಅಧಿಕಾರಿ ಮೇಲಿನ ಹಲ್ಲೆಯನ್ನು ತಡೆಯಲು ಬಂದ ವ್ಯಕ್ತಿಯನ್ನು ಎಳೆದಾಡಿದ್ದಾಳೆ.

    ಘಟನೆಯಿಂದಾಗಿ ಸಭೆಯಲ್ಲಿ ಗದ್ದಲದ ವಾತಾವರಣ ಉಂಟಾಯಿತು. ಈ ದೃಶ್ಯವನ್ನು ಸಭೆಯಲ್ಲಿ ಸೇರಿದ್ದ ಸ್ಥಳೀಯ ಮಾಧ್ಯಮಗಳು ಹಾಗೂ ಸಾರ್ವಜನಿಕರು ತಮ್ಮ ಕ್ಯಾಮೆರಾ, ಮೊಬೈಲ್‍ನಲ್ಲಿ ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

  • ಸರ್ಕಾರಿ ಅಧಿಕಾರಿಯ ಕೊರಳಪಟ್ಟಿ ಹಿಡಿದು ಹಲ್ಲೆಗೆ ಯತ್ನಿಸಿದ ಮುಖಂಡರು

    ಸರ್ಕಾರಿ ಅಧಿಕಾರಿಯ ಕೊರಳಪಟ್ಟಿ ಹಿಡಿದು ಹಲ್ಲೆಗೆ ಯತ್ನಿಸಿದ ಮುಖಂಡರು

    ಚಿಕ್ಕಬಳ್ಳಾಪುರ: ಸರ್ಕಾರಿ ಅಧಿಕಾರಿಯ ಕೊರಳಪಟ್ಟಿಗೆ ಕೈ ಹಾಕಿದ ದಲಿತ ಮುಖಂಡರು ಹಲ್ಲೆ ನಡೆಸಲು ಮುಂದಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಸಭೆಯಲ್ಲಿ ನಡೆದಿದೆ.

    ತಾಲೂಕು ಸಮಾಜ ಕಲ್ಯಾಣಾಧಿಕಾರಿ ಸಿದ್ದನಾರಾಯಣಸ್ವಾಮಿ ಕೆಲ ಮುಖಂಡರು ಹಲ್ಲೆಗೆ ಮುಂದಾಗಿದ್ದರು. ವಾಲ್ಮೀಕಿ ಜಯಂತಿ ಅಂಗವಾಗಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಯನ್ನು ದಲಿತ ಮುಖಂಡರು ಎಳೆದಾಡಿದ್ದಾರೆ. ಚಿಂತಾಮಣಿ ತಾಲೂಕು ಸ್ವಾರಪ್ಪಲ್ಲಿ ಬಳಿ 3 ವರ್ಷಗಳ ಹಿಂದೆ ವಾಲ್ಮೀಕಿ ಭವನ ನಿರ್ಮಾಣಕ್ಕೆ ಗುದ್ದಲಿಪೂಜೆ ನೇರವೇರಿಸಲಾಗಿತ್ತು. ದರೆ 3 ವರ್ಷಗಳಾದರೂ ವಾಲ್ಮೀಕಿ ಭವನ ಇನ್ನೂ ನಿರ್ಮಾಣವಾಗಿಲ್ಲ ಯಾಕೆ ಎಂದು ದಲಿತ ಮುಖಂಡರು ಸಿದ್ದನಾರಾಯಣಸ್ವಾಮಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

    ಈ ವೇಳೆ ಮಾತಿನ ಚಕಮಕಿ ನಡೆದು ಕೆಲ ದಲಿತ ಮುಖಂಡರು ಏಕಾಏಕಿ ಸಿದ್ದನಾರಾಯಣಸ್ವಾಮಿ ಮೇಲೆ ಮುಗಿಬಿದ್ದು ಕೊರಳಪಟ್ಟಿಗೆ ಕೈ ಹಾಕಿ ಎಳೆದಾಡಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಸ್ಥಳದಲ್ಲಿದ್ದ ಅಧಿಕಾರಿಗಳು ಆಕ್ರೋಶಿತ ದಲಿತ ಮುಖಂಡರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಸದ್ಯ ಈ ಸಂಬಂಧ ಸಿದ್ದನಾರಾಯಣಸ್ವಾಮಿ ಪೊಲೀಸರಿಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ.

  • ಸರ್ಕಾರಿ ಅಧಿಕಾರಿಗಳೆಲ್ಲಾ ಪ್ರತಿ ಗುರುವಾರ ಬಸ್ಸಲ್ಲೇ ಓಡಾಡಿ – ಉಡುಪಿ ಡಿಸಿ ಹೆಪ್ಸಿಬಾ ರಾಣಿ ಆದೇಶ

    ಸರ್ಕಾರಿ ಅಧಿಕಾರಿಗಳೆಲ್ಲಾ ಪ್ರತಿ ಗುರುವಾರ ಬಸ್ಸಲ್ಲೇ ಓಡಾಡಿ – ಉಡುಪಿ ಡಿಸಿ ಹೆಪ್ಸಿಬಾ ರಾಣಿ ಆದೇಶ

    ಉಡುಪಿ: ಪರಿಸರ ಪ್ರೇಮಿಯಾದ ಉಡುಪಿ ಡಿಸಿ ಹೆಪ್ಸಿಬಾ ರಾಣಿ ಸರ್ಕಾರಿ ಅಧಿಕಾರಿಗಳೆಲ್ಲಾ ಪ್ರತಿ ಗುರುವಾರ ಬಸ್ಸಿನಲ್ಲಿ ಓಡಾಡಬೇಕು ಎಂದು ಹೊಸ ಆದೇಶವನ್ನು ನೀಡಿದ್ದಾರೆ.

    ವರ್ಷದಿಂದ ವರ್ಷಕ್ಕೆ ಜನರಲ್ಲಿ ಪರಿಸರದ ಕಾಳಜಿ ಜಾಸ್ತಿಯಾಗುತ್ತಿದೆ. ಆದರೆ ಪರಿಸರ ಮಾಲಿನ್ಯ ಮಾತ್ರ ಕಮ್ಮಿ ಆಗುತ್ತಿಲ್ಲ. ನಗರಗಳಲ್ಲಿ ವಾಹನ ದಟ್ಟಣೆಯೇ ಇದಕ್ಕೆ ನೇರ ಕಾರಣ, ಹೇಗಾದರೂ ಮಾಡಿ ಪರಿಸರ ಮಾಲಿನ್ಯ ಕಡಿಮೆ ಮಾಡಲು ಉಡುಪಿ ಡಿಸಿ ಪಣ ತೊಟ್ಟಿದ್ದಾರೆ.

     

    ಪ್ರತಿ ಗುರುವಾರ ಅಧಿಕಾರಿಗಳು ಸರ್ಕಾರಿ ವಾಹನ ಉಪಯೋಗಿಸದೆ, ಬಸ್‍ನಲ್ಲಿ ಓಡಾಡೋ ಆದೇಶವನ್ನು ಹೊರಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಇದನ್ನು ಪಾಲಿಸುತ್ತಿದ್ದಾರೆ. ಪ್ರತೀ ಗುರುವಾರ ಬಸ್ ನಗರದ ಪ್ರಮುಖ ರಸ್ತೆಗಳಲ್ಲಿ ಓಡಾಡುತ್ತದೆ. ನಗರದ ಪ್ರಮುಖ ಜಂಕ್ಷನ್‍ಗಳಲ್ಲಿ ಸರ್ಕಾರಿ ನೌಕರರರು ಈ ಬಸ್ಸಿಗಾಗಿ ಕಾಯುತ್ತಿರಬೇಕು. ಬಸ್ ಬಂದ ಕೂಡಲೇ ಹತ್ತಿಕೊಂಡು ಜಿಲ್ಲಾಧಿಕಾರಿ ಕಚೇರಿ ಸೇರಬೇಕು ಎಂದು ಆದೇಶ ನೀಡಿದ್ದಾರೆ.

    ಈ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ, ರಸ್ತೆಯಲ್ಲಿ ವಾಹನದಟ್ಟಣೆ ಕಡಿಮೆಯಾದರೆ ಅಟೋಮ್ಯಾಟಿಕ್ ಆಗಿ ಪರಿಸರ ಮಾಲಿನ್ಯ ಕಡಿಮೆ ಆಗುತ್ತದೆ. ಮಾಲಿನ್ಯ ಕಡಿಮೆ ಆದರೆ ನಮ್ಮದೇ ಆರೋಗ್ಯ ಚೆನ್ನಾಗಿರುತ್ತದೆ. ಸಮಸ್ಯೆಯೂ ನಮ್ಮಿಂದನೇ ಆಗುತ್ತಿದೆ ಅದಕ್ಕೆ ನಾವೇ ಪರಿಹಾರ ಕಂಡುಕೊಳ್ಳಬೇಕು. ಒಂದೇ ಸಂಸ್ಥೆಗಳಲ್ಲಿ ಅಥವಾ ಕಂಪನಿಗಳಲ್ಲಿ ಕೆಲಸ ಮಾಡುವ ಹತ್ತಿಪ್ಪತ್ತು ಜನ ಒಂದು ವಾಹನದಲ್ಲಿ ಹೋದರೆ ಅಷ್ಟೂ ವಾಹನ ಓಡಾಟ ಇರಲ್ಲ ಮತ್ತು ಇಂಧನ ಕೂಡಾ ಉಳಿಯುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಡಿಸಿ ಸದ್ಯ ವಾರ್ತಾ ಇಲಾಖೆಯ ಬಸ್ಸನ್ನು ಗುರುವಾರ ಎರಡು ಟ್ರಿಪ್ ಓಡಿಸೋಕೆ ಆದೇಶ ಮಾಡಿದ್ದಾರೆ. ಮುಂದೆ ಸರ್ಕಾರಿ ಬಸ್ಸು ಓಡಾಡಲಿದೆಯಂತೆ. ಪ್ರತಿಯೊಬ್ಬರು ಈ ರೀತಿಯ ನಿರ್ಧಾರ ಮಾಡಿದರೆ ನಿಜವಾದ ಪರಿಸರ ರಕ್ಷಣೆ ಮಾಡಬಹುದು. ಪರಿಸರ ನಾಶ ಕಡಿಮೆ ಮಾಡಿ ಪರಿಸರ ರಕ್ಷಣೆ ಮಾಡುವ ಈ ಯೋಜನೆಯ ರಿಸಲ್ಟ್ ಪಾಸಿಟಿವ್ ಆಗಿ ಇರಲಿದೆ ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯ.