Tag: ಸರ್ಕಾರಿ ಉರ್ದು ಶಾಲೆ

  • ಹಿಜಬ್ ಧರಿಸಿಯೇ ಶಾಲೆಗೆ ಬಂದ ವಿದ್ಯಾರ್ಥಿನಿಯರು

    ಹಿಜಬ್ ಧರಿಸಿಯೇ ಶಾಲೆಗೆ ಬಂದ ವಿದ್ಯಾರ್ಥಿನಿಯರು

    ಕಲಬುರಗಿ: ಹೈಕೋರ್ಟ್ ಆದೇಶವನ್ನು ಧಿಕ್ಕರಸಿ ಇಂದು ಕಲಬುರಗಿ ನಗರದ ಉರ್ದು ಶಾಲೆಯ ವಿದ್ಯಾರ್ಥಿನಿಯರು ಶಾಲೆಗೆ ಹಿಜಬ್ ಧರಿಸಿ ಆಗಮಿಸಿದ್ದರು.

    ಇಂದಿನಿಂದ ಪ್ರೌಢ ಶಾಲೆಯ ಪ್ರಾರಂಭದ ಹಿನ್ನಲೆ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಉರ್ದು ಪ್ರೌಢ ಶಾಲೆಯ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರು, ಹಿಜಬ್ ಧರಿಸಿ ಶಾಲಾ ಕೊಠಡಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದರು. ಇದನ್ನೂ ಓದಿ: ಬಿಜೆಪಿ ಶಾಸಕನ ಕಚೇರಿ ಮೇಲೆ ಕಲ್ಲೆಸೆದ ಯುವಕ

     

    ವಿದ್ಯಾರ್ಥಿಗಳು ಹಿಜಬ್, ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕ ಭಾವನೆಯನ್ನು ಬಿಂಬಿಸುವ ವಸ್ತ್ರಗಳನ್ನು ಧರಿಸುವಂತಿಲ್ಲ ಅಂತ ಹೈಕೋರ್ಟ್ ಸೂಚಿಸಿದ್ದು, ಸಮವಸ್ತ್ರ ನಿಯಮ ಉಲ್ಲಂಘನೆಯಾದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರಗೊಂಡಿತ್ತು.

    ಸುದ್ದಿ ಪ್ರಸಾರವಾದ ಬೆನ್ನಲ್ಲೇ ಶಿಕ್ಷಕರು ಮಕ್ಕಳಿಗೆ ತಿಳಿ ಹೇಳಿ ಹಿಜಬ್ ತೆಗೆಯುವಂತೆ ಸೂಚಿಸಿದ್ದರು. ಶಿಕ್ಷಕರ ಮಾತಿಗೆ ಬೆಲೆ ಕೊಟ್ಟು ವಿದ್ಯಾರ್ಥಿಗಳು ಹಿಜಬ್ ತೆಗೆದು ಈಗ ಪಾಠ ಕೇಳುತ್ತಿದ್ದಾರೆ. ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಪ್ರಜಾಪ್ರಭುತ್ವದ ಹಬ್ಬ ಮಾಡಿ: ಮೋದಿ

    ಹಲವಾರು ಶಿಕ್ಷಕಿಯರು ಹಿಜಬ್ ಧರಿಸಿಕೊಂಡೆ ಸ್ಟಾಫ್ ರೂಮಿಗೆ ಆಗಮಿಸಿದ್ದರು. ಸರ್ಕಾರಿ ಪ್ರೌಢ ಶಾಲೆಗೆ ಜಿಲ್ಲಾಧಿಕಾರಿ ಯಶವಂತ ಗುರುಕಾರ್, ಜಿಲ್ಲಾಧಿಕಾರಿ ಗೆಸಾಥ್ ನೀಡಿರುವ ಡಿಸಿಪಿ ಮತ್ತು ಇನ್ನಿತರ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಪ್ರೌಢ ಶಾಲೆಯ ಪ್ರಾರಂಭದ ಹಿನ್ನಲೆ ನಗರದ ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಶಾಲೆಗೆ ಶಾಲಾ ಸಮವಸ್ತ್ರ ಧರಿಸಿಕೊಂಡು ಬರಲು ಮಾತ್ರ ಅವಕಾಶ ಇದೆ. ಎಲ್ಲರು ನಿಯಮಗಳನ್ನು ಕಡ್ಡಾಯ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಶಿಕ್ಷಕರು ಹಿಜಾಬ್ ಧರಿಸಿಕೊಂಡು ಬರುವದರ ಬಗ್ಗೆ ನಾನು ಮಾತನಾಡುವದಿಲ್ಲ. ಹಿಜಬ್ ವಿವಾದದ ಕುರಿತು ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದ್ದು, ಅದರ ಬಗ್ಗೆ ನಾನು ಕಾಮೆಂಟ್ ಮಾಡಲ್ಲ. ನ್ಯಾಯಾಲಯದ ತೀರ್ಪಿನಲ್ಲಿ ಶಿಕ್ಷಕರ ಉಡುಪಿನ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಜಿಲ್ಲೆಯಲ್ಲಿ ಎಲ್ಲಿಯೂ 144 ಸೆಕ್ಷನ್ ವಿಧಿಸಿಲ್ಲ. ಜಿಲ್ಲಾದ್ಯಂತ ಎಲ್ಲಾ ಕಡೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದರು.

  • ಸರ್ಕಾರಿ ಉರ್ದು ಶಾಲೆಯಲ್ಲಿ ಬಿರಿಯಾನಿ ಬಾಡೂಟ

    ಸರ್ಕಾರಿ ಉರ್ದು ಶಾಲೆಯಲ್ಲಿ ಬಿರಿಯಾನಿ ಬಾಡೂಟ

    ದಾವಣಗೆರೆ: ಸರ್ಕಾರಿ ಉರ್ದು ಶಾಲೆಯಲ್ಲಿ ಇಂದು ಬಿರಿಯಾನಿ ಬಾಡೂಟ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ಜಿಲ್ಲೆಯ ವಿನೋಬನಗರದ ಸರ್ಕಾರಿ ಉರ್ದು ಶಾಲೆಯಲ್ಲಿ ಶಿಕ್ಷಕರು ಹಾಗೂ ಪೋಷಕರು ಬಿರಿಯಾನಿ ಮಾಡಿಸಿ ಶಾಲೆಯಲ್ಲೇ ಮಜಾ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಮಾಧ್ಯಮಗಳು ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆಯೇ ಬಿರಿಯಾನಿ ಮಾಡಿದ ಪಾತ್ರೆಗಳನ್ನ ಒಂದು ರೂಮಿನಲ್ಲಿ ಇಟ್ಟು ಬೀಗ ಹಾಕಲಾಗಿದೆ.

    ಈ ಸಂಬಂಧಪಟ್ಟ ದೃಶ್ಯವನ್ನ ಸೆರೆ ಹಿಡಿಯಲು ಮುಂದಾದಾಗ ಅಲ್ಲಿನ ಶಿಕ್ಷಕರು ಹಾಗೂ ಪೋಷಕರು ಮಾಧ್ಯಮಗಳ ಮೇಲೆ ದೌರ್ಜನ್ಯ ನಡೆಸಿದ್ದಲ್ಲದೇ, ನಿಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಉದ್ಧಟತನ ಮೆರೆದಿದ್ದಾರೆ.