Tag: ಸರ್ಕಾರಿ ಜಾಗ

  • ಸರ್ಕಾರಿ ಜಾಗದಲ್ಲಿ ಪೆಟ್ರೋಲ್ ಬಂಕ್ – ಅಧಿಕಾರಿಗಳಿಂದ ತೆರವು ಕಾರ್ಯ

    ಸರ್ಕಾರಿ ಜಾಗದಲ್ಲಿ ಪೆಟ್ರೋಲ್ ಬಂಕ್ – ಅಧಿಕಾರಿಗಳಿಂದ ತೆರವು ಕಾರ್ಯ

    ಕೋಲಾರ : ನಗರದ ಹೃದಯ ಭಾಗದಲ್ಲಿ ಸರ್ಕಾರಿ ಜಾಗದಲ್ಲಿದ್ದ ಪೆಟ್ರೋಲ್ ಬಂಕ್‌ ಒಂದನ್ನು ಕಂದಾಯ ಇಲಾಖೆ ಅಧಿಕಾರಿಗಳು ಇಂದು ತೆರವುಗೊಳಿಸಿದ್ದಾರೆ.

    ಕೋಲಾರ ಉಪ ವಿಭಾಗಾಧಿಕಾರಿ ಸೋಮಶೇಖರ್ ಹಾಗೂ ತಹಶೀಲ್ದಾರ್ ಶೋಭಿತಾ ನೇತೃತ್ವದಲ್ಲಿ ಕೋಲಾರದ ಟೀಕಲ್ ರಸ್ತೆ ಬಳಿಯಿರುವ ಇಂಡಿಯನ್ ಆಯಿಲ್ ಬಂಕ್ ತೆರವುಗೊಳಿಸಲಾಯಿತು.

    ತೆರವು ಸಂದರ್ಭದಲ್ಲಿ ಅಧಿಕಾರಗಳ ಮತ್ತು ಪೆಟ್ರೋಲ್ ಬಂಕ್ ಮಾಲೀಕ ಸತೀಶ್‌ ನಡುವೆ ನಡುವೆ ಮಾತಿನ ಚಕಮಕಿ ನಡೆಯಿತು.

    1948ರಲ್ಲಿ ನಮ್ಮ ತಂದೆಯವರು ಬೇರೆಯವರಿಂದ ಈ ಜಾಗವನ್ನು ಪಡೆದುಕೊಂಡಿದ್ದಾರೆ. ಜೊತೆಗೆ ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳಿಂದ ಅನುಮತಿ ಪಡೆಯಲಾಗಿದೆ. ಈಗ ಏಕಾಏಕಿ ಪೆಟ್ರೋಲ್ ಬಂಕ್ ತೆರವುಗೊಳಿಸುತ್ತಿರುವುದು ಎಷ್ಟು ಸರಿ ಎಂದು ಬಂಕ್‌ ಮಾಲೀಕರು ಪ್ರಶ್ನೆ ಮಾಡಿದ್ದಾರೆ.

     

    ಮಾತಿನ ಚಕಮಕಿ ನಡೆದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

  • ಸರ್ವೇ ವೇಳೆ ಬಂಗಾರಪೇಟೆ ತಹಶೀಲ್ದಾರ್‌ಗೆ ಚಾಕು ಇರಿತ – ಕೊಲೆಗೈದ ನಿವೃತ್ತ ಶಿಕ್ಷಕ ಅರೆಸ್ಟ್

    ಸರ್ವೇ ವೇಳೆ ಬಂಗಾರಪೇಟೆ ತಹಶೀಲ್ದಾರ್‌ಗೆ ಚಾಕು ಇರಿತ – ಕೊಲೆಗೈದ ನಿವೃತ್ತ ಶಿಕ್ಷಕ ಅರೆಸ್ಟ್

    ಕೋಲಾರ: ಸರ್ವೇ ಮಾಡುವ ವೇಳೆ ಗೊಂದಲವಾಗಿ ತಹಶೀಲ್ದಾರ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

    ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ದೊಡ್ಡಕಳವಂಚಿ ಗ್ರಾಮದಲ್ಲಿ ಈ ಘಟನೆ ಜರುಗಿದ್ದು, ಗ್ರಾಮದ ವೆಂಕಟಪತಿ ತಹಶೀಲ್ದಾರ್ ಚಂದ್ರಮೌಳೇಶ್ವರಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಕಳೆದ 3 ವರ್ಷಗಳಿಂದ ಬಂಗಾರಪೇಟೆ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತುಮಕೂರು ಮೂಲದ ಚಂದ್ರಮೌಳೇಶ್ವರ್ ಗೆ ಚಾಕುವಿನಿಂದ ಇರಿದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

    ಬಂಗಾರಪೇಟೆಯ ದೊಡ್ಡಕಳವಂಕಿ ಗ್ರಾಮದ ಅರೋಪಿ ನಿವೃತ್ತ ಶಿಕ್ಷಕ ವೆಂಕಟಪತಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿದ್ದು, ಈ ಸಂಬಂಧ ಸರ್ವೇ ಮಾಡಲು ಹೋದ ವೇಳೆ ತಹಶೀಲ್ದಾರ್‌ಗೆ ಚಾಕುವಿನಿಂದ ಇರಿಯಲಾಗಿದೆ. ತಕ್ಷಣ ತಹಶೀಲ್ದಾರ್ ಕಾರಿನಲ್ಲಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಜಾಲಪ್ಪ ಅಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

     

    ಸ್ಥಳಕ್ಕೆ ಕೋಲಾರ ಜಿಲ್ಲಾಧಿಕಾರಿ ಸತ್ಯಭಾಮ, ಎಸ್ಪಿಗಳಾದ ಕಾರ್ತಿಕ್ ರೆಡ್ಡಿ, ಮೊಹಮದ್ ಸುಜಿತ ಅವರು ಭೇಟಿ ನೀಡಿದ್ದಾರೆ. ಮೃತ ತಹಶೀಲ್ದಾರ್ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನವರಾಗಿದ್ದಾರೆ. ಆರೋಪಿಯನ್ನ ಕಾಮಸಮುದ್ರ ಪೊಲೀಸರು ಬಂಧಿಸಿದ್ದಾರೆ.

  • ಸಚಿವ ಎಚ್.ಡಿ.ರೇವಣ್ಣ ಪುತ್ರರಿಗೆ ಹಾಸನ ನಗರಸಭೆಯಿಂದ ನೋಟಿಸ್

    ಸಚಿವ ಎಚ್.ಡಿ.ರೇವಣ್ಣ ಪುತ್ರರಿಗೆ ಹಾಸನ ನಗರಸಭೆಯಿಂದ ನೋಟಿಸ್

    ಹಾಸನ: ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರರಿಗೆ ಹಾಸನ ನಗರಸಭೆ ನೋಟಿಸ್ ಜಾರಿ ಮಾಡಿದೆ.

    ಸಚಿವರ ಪುತ್ರರಾದ ಪ್ರಜ್ವಲ್ ಮತ್ತು ಸೂರಜ್ ವಿರುದ್ಧ ನಗರಸಭೆ ನೋಟಿಸ್ ನೀಡಿದೆ. 1ನೇ ವಾರ್ಡ್ ವ್ಯಾಪ್ತಿಯ ಬಿಎಂ ರಸ್ತೆಗೆ ಹೊಂದಿಕೊಂಡಂತೆ ಇರುವ ಆಸ್ತಿಯಲ್ಲಿ, 6 ಮೀಟರ್ ಕಟ್ಟಡ ರೇಖೆಯನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನೋಟಿಸ್ ತಲುಪಿದ 7 ದಿನಗಳ ಒಳಗಾಗಿ ಅತಿಕ್ರಮಿಸಿದ ಜಾಗವನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವೇ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಅಧಿಕೃತ ದಾಖಲೆಗಳನ್ನು ನಗರಸಭೆಗೆ ಹಾಜರು ಪಡಿಸಬೇಕು ಎಂದು ನೋಟಿಸ್‍ನಲ್ಲಿ ಉಲ್ಲೇಖಿಸಲಾಗಿದೆ.

    ಒಂದು ವೇಳೆ ನೋಟಿಸ್‍ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಇದ್ದರೆ ಅತಿಕ್ರಮ ಜಾಗವನ್ನು ತೆರುವುಗೊಳಿಸಲಾಗುತ್ತದೆ. ಅದಕ್ಕೆ ತಗುಲುವ ವೆಚ್ಚವನ್ನು ಕಟ್ಟಡ ಮಾಲೀಕರಾದ ನಿಮ್ಮಿಂದಲೇ ವಸೂಲಿ ಮಾಡಲಾಗುವುದು ಎಂದು ನಗರಸಭೆ ಆಯುಕ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಚಿವ ಜಾರ್ಜ್ ಕ್ಷೇತ್ರದಲ್ಲಿ ಟ್ರಸ್ಟ್ ಸ್ಥಳವನ್ನು ಸರ್ಕಾರಿ ಜಾಗವನ್ನಾಗಿ ಮಾಡಲು ಮುಂದಾದ ಅಧಿಕಾರಿಗಳು!

    ಸಚಿವ ಜಾರ್ಜ್ ಕ್ಷೇತ್ರದಲ್ಲಿ ಟ್ರಸ್ಟ್ ಸ್ಥಳವನ್ನು ಸರ್ಕಾರಿ ಜಾಗವನ್ನಾಗಿ ಮಾಡಲು ಮುಂದಾದ ಅಧಿಕಾರಿಗಳು!

    ಬೆಂಗಳೂರು: ಮಠದ ಜಾಗವನ್ನು ಹೊಡೆಯಲು ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಪ್ರಯತ್ನಿಸಿದ್ದಾಯ್ತು. ಇದೀಗ ಸಚಿವ ಕೆಜೆ ಜಾರ್ಜ್ ಕ್ಷೇತ್ರದಲ್ಲಿ ಬರುವ ಶ್ರೀರಾಮ ಮಂದಿರದ ಟ್ರಸ್ಟ್ ಗೆ ಸೇರಿದ ಜಾಗವನ್ನು ಸರ್ಕಾರಿ ಜಾಗವನ್ನಾಗಿ ಮಾಡಲು ಅಧಿಕಾರಿಗಳು ಮುಂದಾಗಿರೋದು ಬೆಳಕಿಗೆ ಬಂದಿದೆ.

    ಬೆಂಗಳೂರಿನ ಕಾಚರಕನಹಳ್ಳಿಯಲ್ಲಿರುವ ರಾಮಮಂದಿರದ ಸುತ್ತಮುತ್ತಲಿನ ಜಾಗ ಶ್ರೀರಾಮ ಚೈತನ್ಯ ವರ್ಧಿನಿ ಟ್ರಸ್ಟ್ ಗೆ ಸೇರಿದ್ದು ಅಂತ ಕೋರ್ಟ್ ಆದೇಶಿಸಿದೆ. ಆದ್ರೆ ಈ ಜಾಗ ಸರ್ಕಾರದ್ದು ಅಂತ ತಹಶೀಲ್ದಾರ್ ಮತ್ತು ಅಧಿಕಾರಿಗಳು ತಡೆಗೋಡೆ ನಿರ್ಮಿಸಲು ಮುಂದಾಗಿದ್ದಾರೆ.

    ಈ ಕುರಿತು ಆದೇಶ ಎಲ್ಲಿದೆ ಅಂತ ಪ್ರಶ್ನಿಸಿದ್ರೆ ನಮಗೆ ಮೇಲಿಂದ ಒತ್ತಡ ಇದೆ ಅಂತ ಹೇಳುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ದೇವಸ್ಥಾನದ ಟ್ರಸ್ಟಿಗಳು ಮತ್ತು ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಚಿವ ಕೆಜೆ ಜಾರ್ಜ್ ಅವರೇ ಪರೋಕ್ಷವಾಗಿ ಒತ್ತಡ ಹೇರಿ ತಡೆಗೋಡೆ ನಿರ್ಮಿಸಲು ಸೂಚಿಸಿದ್ದಾರೆ ಅಂತ ಟ್ರಸ್ಟಿಗಳು ಆರೋಪಿಸಿದ್ದಾರೆ.

    ಈ ಬಗ್ಗೆ ಅಪರ ಜಿಲ್ಲಾಧಿಕಾರಿಗಳನ್ನು ಕೇಳಿದ್ರೆ ನಮಗೆ ಯಾರ ಒತ್ತಡವೂ ಇಲ್ಲ ಅಂತ ಹೇಳುತ್ತಿದ್ದಾರೆ. ಆದ್ರೆ ದಾಖಲೆಗಳನ್ನು ಕೇಳಿದ್ರೆ ಮಾತ್ರ ತೋರಿಸಲು ಮುಂದಾಗುತ್ತಿಲ್ಲ.