Tag: ಸರ್ಕಾರಿ ನೌಕರರು

  • ಸರ್ಕಾರಿ ನೌಕರರು, ಕುಟುಂಬ ಸದಸ್ಯರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿ

    ಸರ್ಕಾರಿ ನೌಕರರು, ಕುಟುಂಬ ಸದಸ್ಯರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿ

    ಬೆಂಗಳೂರು: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸರ್ಕಾರಿ ನೌಕರರು ಹಾಗೂ ಕುಟುಂಬ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗಿದೆ.

    ಅಕ್ಟೋಬರ್ 1 ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬರಲಿದೆ. ಬಹಳ ವರ್ಷಗಳಿಂದ ಈ ಯೋಜನೆ ಮರುಜಾರಿಗೆ ಒತ್ತಾಯ ಕೇಳಿಬಂದಿತ್ತು.

    ಈ ಯೋಜನೆಯಡಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸಿಗಲಿದೆ. ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿಯೂ ನಗದು ರಹಿತ ಉಚಿತ ಚಿಕಿತ್ಸೆ ಸಿಗಲಿದೆ.

  • ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರಿ ನೌಕರರು 1 ದಿನದ ವೇತನ ನೀಡುವಂತೆ ಮಂಡ್ಯ ಡಿಸಿ ಮನವಿ

    ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರಿ ನೌಕರರು 1 ದಿನದ ವೇತನ ನೀಡುವಂತೆ ಮಂಡ್ಯ ಡಿಸಿ ಮನವಿ

    ಮಂಡ್ಯ: ಜಿಲ್ಲೆಯಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು (87th All India Literary Conference) ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರಿ ನೌಕರರು ಒಂದು ದಿನದ ವೇತನವನ್ನು ನೀಡುವಂತೆ ಮಂಡ್ಯ ಜಿಲ್ಲಾಧಿಕಾರಿ (Mandya DC) ಡಾ‌.ಕುಮಾರ ಅವರು ಮನವಿ ಮಾಡಿದರು.

    ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಭೆ ನಡೆಸಿ ಮಾತನಾಡಿದ ಅವರು, ಒಂದು ದಿನದ ಸಂಬಳ ನೀಡುವ ಬಗ್ಗೆ ಜಿಲ್ಲಾಡಳಿತದಿಂದ ಯಾವುದೇ ಒತ್ತಾಯವಿಲ್ಲ. ಎಲ್ಲಾ ಅಧಿಕಾರಿಗಳು (Government Employees) ಹಾಗೂ ಸಿಬ್ಬಂದಿ ಪ್ರೀತಿಪೂರ್ವಕವಾಗಿ ನೀಡುವಂತೆ ಕೋರಿದರು. ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಮನೆ ಮೇಲೆ ಲೋಕಾ ದಾಳಿ; 14.80 ಲಕ್ಷ ಹಣ ಜಪ್ತಿ!

    87ನೇ ಅಖಿಲ ಭಾರತ ಕನ್ನಡ ಸಾಹಿತ್ಯವು ಡಿಸೆಂಬರ್ 20, 21, 22 ರಂದು ಜಿಲ್ಲೆಯಲ್ಲಿ ನಡೆಯಲಿದೆ. ಸರ್ಕಾರಿ ನೌಕರರಲ್ಲೇ ವಿವಿಧ ಸಂಘ ಸಂಸ್ಥೆಗಳು, ಕನ್ನಡ ಪರ ಹೋರಾಟ ಸಂಘಗಳು ಹಾಗೂ ಸಾರ್ವಜನಿಕರು ಮನಪೂರ್ವಕವಾಗಿ ತಮ್ಮ ಇಚ್ಛೆಯಿಂದ ಸಮ್ಮೇಳನಕ್ಕೆ ಸಹಾಯ ಮಾಡಬಹುದು. ಜಿಲ್ಲೆಯ ಕನ್ನಡಿಗರು ಸಮ್ಮೇಳನದಲ್ಲಿ ಒಬ್ಬ ಕನ್ನಡಿಗನಾಗಿ ಸೇವೆ ಮಾಡಬಹುದಾಗಿದ್ದು, ಈ ಬಗ್ಗೆ ಯಾವುದೇ ಒತ್ತಾಯವಿರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಕೇಸ್‌- ಸೈಲ್‌ಗೆ ರಿಲೀಫ್‌, ಶಿಕ್ಷೆಯನ್ನು ಅಮಾನತಿನಲ್ಲಿಟ್ಟ ಹೈಕೋರ್ಟ್‌

    ಸಭೆಯಲ್ಲಿ ಪ್ರತಿಯೊಬ್ಬರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂತೋಷದ ವಿಷಯವಾಗಿದೆ. ಸಮ್ಮೇಳನವು ಕೇವಲ ವೈಯಕ್ತಿಕ ಹಬ್ಬವಾಗಿರದೇ, ಕನ್ನಡದ ಐಕ್ಯತೆಯನ್ನು ಸಾರುವ, ಪ್ರತಿಬಿಂಬಿಸುವ ಪ್ರತಿಯೊಬ್ಬ ಕನ್ನಡಿಗರ ಮನೆಯ ಹಬ್ಬವಾಗಿದೆ. ಸಾರ್ವಜನಿಕರು, ಎಲ್ಲಾ ಸರ್ಕಾರಿ ನೌಕರರು ಕೂಡ ತಮ್ಮ ಮನೆಯ ಹಬ್ಬವೆಂದು ಭಾವಿಸಿ ಸಂಭ್ರಮ, ಸಡಗರದಿಂದ ಆಚರಿಸೋಣ ಎಂದು ಕರೆ ನೀಡಿದರು.

    ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರಲ್ಲಿ ವಿವಿಧ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ 10 ಮಂದಿ ಕನ್ನಡಿಗರಿಗೆ ಸನ್ಮಾನ ಮಾಡುವ ಬಗ್ಗೆ ಹಾಗೂ ಸಮ್ಮೇಳನ ನಡೆಯುವ ದಿನಗಳಂದು ರಜೆ ನೀಡುವ ಬಗ್ಗೆ ಚಿಂತಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ವಿದ್ಯಾರ್ಥಿಗಳ ಪೋಷಕರೊಂದಿಗೆ ಅನುಚಿತ ವರ್ತನೆ, ಹಣ ದುರುಪಯೋಗ – ಇಬ್ಬರು ಶಿಕ್ಷಕರು ಅಮಾನತು

  • ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು – ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಜಮೆಯಾಗದ ಸಂಬಳ

    ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು – ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಜಮೆಯಾಗದ ಸಂಬಳ

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಆರ್ಥಿಕ ಸಂಕಷ್ಟ ಶುರುವಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ನೌಕರರಿಗೆ ತಿಂಗಳ ವೇತನ ಜಮೆಯಾಗಿಲ್ಲ. ಆಗಸ್ಟ್ ತಿಂಗಳ ವೇತನವನ್ನು ಇನ್ನೂ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ತಿಳಿದು ಬಂದಿದೆ. ವೇತನ ವಿಳಂಬದಿಂದ ಎರಡು ಲಕ್ಷಕ್ಕೂ ಹೆಚ್ಚು ರಾಜ್ಯ ಸರ್ಕಾರಿ ನೌಕರರ ಮೇಲೆ ಪರಿಣಾಮ ಬೀರಿದೆ ಎಂದು ಮೂಲಗಳು ತಿಳಿಸಿವೆ.

    ವೇತನ ವಿಳಂಬವಾಗಿದ್ದರೂ, ವೇತನವನ್ನು ಯಾವಾಗ ವಿತರಿಸಲಾಗುವುದು ಎಂಬ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಪ್ರಸ್ತುತ ಆರ್ಥಿಕ ಸ್ಥಿತಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು (Sukhvinder Singh Sukhu) ಆರೋಪಿಸಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಭಾಷಣ ಮಾಡಿದ ಸುಖು ಅವರು ಆರ್ಥಿಕ ಅವ್ಯವಸ್ಥೆಗೆ ಬಿಜೆಪಿ ಪ್ರಾರಂಭಿಸಿದ ಉಚಿತ ಕೊಡುಗೆಗಳ ಸಂಸ್ಕೃತಿ ಕಾರಣ ಎಂದು ದೂಷಿಸಿದರು. ಇದನ್ನೂ ಓದಿ: ದರ್ಶನ್‌ ಗ್ಯಾಂಗ್‌ನ ಮತ್ತಿಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

    ಆರ್ಥಿಕ ಪರಿಸ್ಥಿತಿ ಹಾಳಾದ ಬೆನ್ನಲ್ಲೇ‌ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸುಖವಿಂದರ್ ಸಿಂಗ್ ಸುಖು, ತಮ್ಮ ಸರ್ಕಾರವು ರಾಜ್ಯದ ಆರ್ಥಿಕ ಆರೋಗ್ಯವನ್ನು ಸುಧಾರಿಸಲು ವಿವಿಧ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ನನ್ನ ಎಲ್ಲಾ ಕೆಲಸಗಳು 2027 ರ ವೇಳೆಗೆ ಹಿಮಾಚಲ ಪ್ರದೇಶವನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಲು ಮತ್ತು 2032 ರ ವೇಳೆಗೆ ದೇಶದ ಅತ್ಯಂತ ಶ್ರೀಮಂತ ರಾಜ್ಯವಾಗಿಸಲು ಕೇಂದ್ರೀಕೃತವಾಗಿವೆ ಎಂದು ಹೇಳಿದರು.

    ರಾಜ್ಯದಲ್ಲಿ ಯಾವುದೇ ಆರ್ಥಿಕ ಅವ್ಯವಸ್ಥೆ ಇಲ್ಲ. ನೌಕರರು ಮತ್ತು ಪಿಂಚಣಿದಾರರು ತಮ್ಮ ಬಾಕಿಯನ್ನು ಪಡೆಯುತ್ತಿದ್ದಾರೆ. 75 ವರ್ಷಕ್ಕಿಂತ ಮೇಲ್ಪಟ್ಟ 28,000 ಪಿಂಚಣಿದಾರರ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ ಮತ್ತು ಸರ್ಕಾರವು ವಿವಿಧ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಇದೇ ವೇಳೆ ತಿಳಿಸಿದರು. ಇದನ್ನೂ ಓದಿ: ಜೈಲಿನಲ್ಲಿ ಕೊನೆಗೂ ದರ್ಶನ್ ಗೆ ಸಿಕ್ತು ಸರ್ಜಿಕಲ್ ಚೇರ್ ಭಾಗ್ಯ

    ಮದ್ಯ ಮಾರಾಟದ ಹರಾಜಿನಲ್ಲಿನ ಅಕ್ರಮಗಳ ಆರೋಪಗಳು ಸುಳ್ಳು. ಬಿಜೆಪಿ ನಾಯಕರು ಸತ್ಯವನ್ನು ಪರಿಶೀಲಿಸುವಂತೆ ಆಗ್ರಹಿಸಿದರು. ವಿದ್ಯುತ್ ಮತ್ತು ನೀರಿನ ಬಿಲ್ ಪಾವತಿಸಲು ಶಕ್ತರಾಗಿರುವ ಜನರು ಸಬ್ಸಿಡಿ ತೆಗೆದುಕೊಳ್ಳಬಾರದು. ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೆಲಸ‌ ಮಾಡುತ್ತಿದೆ. ಹೆಚ್ಚುವರಿಯಾಗಿ, ರೈತರು, ಕಾರ್ಮಿಕರು, ತೋಟಗಾರರು, ಮಹಿಳೆಯರು ಮತ್ತು ಸಣ್ಣ ಅಂಗಡಿಕಾರರು ಸೇರಿದಂತೆ ಎಲ್ಲಾ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

  • ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ – 7ನೇ ವೇತನ ಆಯೋಗದ ಶಿಫಾರಸು ಜಾರಿ: ಸಿಎಂ ಘೋಷಣೆ

    ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ – 7ನೇ ವೇತನ ಆಯೋಗದ ಶಿಫಾರಸು ಜಾರಿ: ಸಿಎಂ ಘೋಷಣೆ

    ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. 7ನೇ ವೇತನ ಆಯೋಗದ (7th Pay Commission) ವೇತನ ಪರಿಷ್ಕರಣೆಯನ್ನು ಆಗಸ್ಟ್‌ 1 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.

    ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆಗೆ ಏಳನೇ ವೇತನ ಆಯೋಗ ರಚನೆ ಮಾಡಲಾಗಿತ್ತು. ಏಳನೇ ವೇತನ ಆಯೋಗ ವರದಿ ನೀಡಿ, ಶಿಫಾರಸು ಮಾಡಿದೆ. ಆ.1 ರಿಂದ ಅನ್ವಯ ಆಗುವಂತೆ ವೇತನ ಪರಿಷ್ಕರಣೆ ಜಾರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ – ಎಂ.ಬಿ ಪಾಟೀಲ್ ಘೋಷಣೆ

    30% ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. 27.5% ವೇತನ ಹೆಚ್ಚಳ ಮಾಡಲಾಗುವುದು. ಮೂಲವೇತನ 17 ಸಾವಿರದಿಂದ 27 ಸಾವಿರ ವರೆಗೆ ಹೆಚ್ಚಳವಾಗಲಿದೆ. ಗರಿಷ್ಠ 1,50,600 ದಿಂದ 2,43,000 ವರೆಗೂ ವೇತನ ಹೆಚ್ಚಳವಾಗಲಿದೆ. ಪಿಂಚಣಿ ಕನಿಷ್ಠ 8 ಸಾವಿರದಿಂದ 13 ಸಾವಿರಕ್ಕೆ ಹೆಚ್ಚಾಗಲಿದೆ. ಗರಿಷ್ಠ ಪಿಂಚಣಿ 75,300 ರೂ. ನಿಂದ 1,20,600 ವರೆಗೂ ಹೆಚ್ಚಳವಾಗಲಿದೆ ಎಂದು ಹೇಳಿದ್ದಾರೆ.

    ಸರ್ಕಾರಿ ನೌಕರರ ವೇತನ ಹೆಚ್ಚಳದಿಂದ ವಾರ್ಷಿಕವಾಗಿ 20,208 ಕೋಟಿ ಹೆಚ್ಚುವರಿ ವೆಚ್ಚ ಆಗಲಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಸದನದಲ್ಲಿ ವಾಲ್ಮೀಕಿ ನಿಗಮ ಹಗರಣ ಗದ್ದಲ – ಸಿಎಂ, ಸಚಿವರ ವಿರುದ್ಧ ಬಿಜೆಪಿ ನಾಯಕರ ಕಿಡಿ

  • ಸರ್ಕಾರಿ ನೌಕರರು 2ನೇ ಮದುವೆಯಾಗುವಂತಿಲ್ಲ – ಅಸ್ಸಾಂ ಸರ್ಕಾರ ಆದೇಶ

    ಸರ್ಕಾರಿ ನೌಕರರು 2ನೇ ಮದುವೆಯಾಗುವಂತಿಲ್ಲ – ಅಸ್ಸಾಂ ಸರ್ಕಾರ ಆದೇಶ

    ದಿಸ್ಪುರ್: ಸರ್ಕಾರಿ ನೌಕರರು (Government Employees) 2ನೇ ಮದುವೆಯಾಗುವುದನ್ನು ಅಸ್ಸಾಂ (Assam) ಸರ್ಕಾರ ನಿರ್ಬಂಧಿಸಿದೆ. ಸರ್ಕಾರಿ ನೌಕರನ ಧರ್ಮ 2ನೇ ಮದುವೆಗೆ (2nd Marriage) ಅನುಮತಿಸಿದರೂ ಸರ್ಕಾರದ ಅನುಮತಿ ಇಲ್ಲದೇ 2ನೇ ಮದುವೆ ಮಾಡಿಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ.

    2 ಮದುವೆಗಳಿಂದ ಸರ್ಕಾರಿ ನೌಕರನ ಪಿಂಚಣಿಗಾಗಿ ಇಬ್ಬರು ಪತ್ನಿಯರು ಹೋರಾಟ ಮಾಡುವುದನ್ನು ನಾವು ಗಮನಿಸಿದ್ದೇವೆ. ಅಸ್ಸಾಂನಲ್ಲಿ ಈ ಕಾನೂನು ಮೊದಲೇ ಇತ್ತು. ಅದನ್ನು ಕಠಿಣವಾಗಿ ಜಾರಿಗೆ ನಿರ್ಧಾರ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

    ಬಹುಪತ್ನಿತ್ವವನ್ನು ನಿಷೇಧಿಸುವ ಕಾನೂನು 58 ವರ್ಷಗಳ ಹಿಂದೆ ಅಸ್ಸಾಂನಲ್ಲಿ ಜಾರಿ ಮಾಡಲಾಗಿತ್ತು. ಮೊದಲ ಸಂಗಾತಿಯು ಜೀವಂತವಾಗಿರುವವರೆಗೆ ಸರ್ಕಾರದ ಒಪ್ಪಿಗೆಯಿಲ್ಲದೆ 2ನೇ ಮಹಿಳೆಯನ್ನು ಮದುವೆಯಾಗುವುದನ್ನು ಕಾನೂನು ನಿರ್ಬಂಧಿಸುತ್ತದೆ.

    ಮುಸ್ಲಿಮರನ್ನು ಉಲ್ಲೇಖಿಸದೆ ವೈಯಕ್ತಿಕ ಕಾನೂನಿನಿಂದ ಅನುಮತಿ ಪಡೆದ ಪುರುಷರಿಗೂ ಈ ನಿಯಮ ಅನ್ವಯಿಸುತ್ತದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಅದೇ ರೀತಿ ಮಹಿಳಾ ನೌಕರರು ಈ ಮೊದಲು ಮದುವೆಯಾಗಿರುವ ವ್ಯಕ್ತಿಯನ್ನು 2ನೇ ಮದುವೆಯಾಗಬಾರದು ಎಂದು ಸೂಚಿಸಲಾಗಿದೆ. ಇದನ್ನೂ ಓದಿ: ಭಾರತದ ಕಾನೂನು ಬದಲಿಸುವ ಮೂರು ಮಸೂದೆಗಳು ಶೀಘ್ರದಲ್ಲಿ ಅಂಗೀಕಾರ: ಅಮಿತ್ ಶಾ

    ಅಕ್ಟೋಬರ್ 20 ರಂದು ಸಿಬ್ಬಂದಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೀರಜ್ ವರ್ಮಾ ಅವರು ಅಧಿಸೂಚನೆ ಹೊರಡಿಸಿದ್ದು, ಇದು ಗುರುವಾರ ಬೆಳಕಿಗೆ ಬಂದಿದೆ. ಅಸ್ಸಾಂ ನಾಗರಿಕ ಸೇವೆಗಳ (ನಡತೆ) ನಿಯಮಗಳು 1965 ರ ನಿಯಮ 26 ರ ನಿಬಂಧನೆಗಳ ಪ್ರಕಾರ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಅದು ಹೇಳಿದೆ. ಮೇಲಿನ ನಿಬಂಧನೆಗಳ ಅನ್ವಯ ಶಿಸ್ತು ಸಮಿತಿ ಪ್ರಾಧಿಕಾರವು ತಕ್ಷಣದ ಇಲಾಖಾ ಪ್ರಕ್ರಿಯೆಗಳನ್ನು ಪ್ರಾರಂಭಿಸಬಹುದು. ಕಡ್ಡಾಯ ನಿವೃತ್ತಿ ಸೇರಿದಂತೆ ಪ್ರಮುಖ ದಂಡವನ್ನು ವಿಧಿಸಲು ಆದೇಶದಲ್ಲಿ ಹೇಳಿದೆ. ಇದನ್ನೂ ಓದಿ: IPL 2024 – ದುಬೈನಲ್ಲಿ ಹರಾಜು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಏಪ್ರಿಲ್ 1 ರಿಂದಲೇ ವೇತನ ಹೆಚ್ಚಳ ಜಾರಿಗೆ- ಸರ್ಕಾರದಿಂದ ಅಧಿಕೃತ ಆದೇಶ

    ಏಪ್ರಿಲ್ 1 ರಿಂದಲೇ ವೇತನ ಹೆಚ್ಚಳ ಜಾರಿಗೆ- ಸರ್ಕಾರದಿಂದ ಅಧಿಕೃತ ಆದೇಶ

    ಬೆಂಗಳೂರು: ಸರ್ಕಾರಿ ನೌಕರ (Government Employees) ರಿಗೆ 17% ವೇತನ ಹೆಚ್ಚಳವನ್ನು ಏಪ್ರಿಲ್ 1 ರಿಂದ ಜಾರಿಗೆ ತರಲಾಗುವುದು ಎಂದು ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

    ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸುದ್ದಿಗಾರರೊಂದಿಗೆ ಮಾತನಾಡಿ, 17% ವತನ ಹೆಚ್ಚಳ ಮಾಡುವುದಾಗಿ ತಿಳಿಸಿದರು. ಇದೀಗ ಸಿಎಂ ಸೂಚನೆ ಮೇರೆಗೆ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.

    ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸರ್ಕಾರ, 1018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ಸರ್ಕಾರಿ ನೌಕರರಿಗೆ 2023ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡುವುದಾಗಿ ತಿಳಿಸಿದೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ: ಸಿಎಂ

    ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು 7ನೇ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗುತ್ತದೆ. ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ ಸರ್ಕಾರದ ನೀತಿ ನಿರ್ಣಯದಂತೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿರುವುದಾಗಿ ತಿಳಿಸಲಾಗಿದೆ.

  • ಸರ್ಕಾರಿ ನೌಕರರಿಗೆ 17%  ವೇತನ ಹೆಚ್ಚಳ: ಸಿಎಂ

    ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ: ಸಿಎಂ

    ಬೆಂಗಳೂರು: ಸರ್ಕಾರಿ ನೌಕರರಿಗೆ 17 ಪರ್ಸೆಂಟ್ ವೇತನ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಿಸಿದರು.

    ಸರ್ಕಾರಿ ನೌಕರರ (Government Employees) ಮುಷ್ಕರ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನೌಕರರ ಜೊತೆ ಚರ್ಚೆ ಆದ ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತಾಡಿದೆ, ಈ ವೇಳೆ ಒಂದು ಒಪ್ಪಂದಕ್ಕೆ ಬಂದಿದ್ದೇವೆ. 17% ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಇದು ಮಧ್ಯಂತರ ಪರಿಹಾರ ರೂಪದಲ್ಲಿ ಇರಲಿದೆ. ಆಯೋಗದ ವರದಿ ಬಳಿಕ ಶೇಕಡವಾರು ಪ್ರಮಾಣದಲ್ಲಿ ಬದಲಾವಣೆ ಆಗಬಹುದು. ಸರ್ಕಾರಿ ನೌಕಕರು ಮುಷ್ಕರ ಕೈಬಿಡ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

    ಎನ್ ಪಿಎಸ್ ರದ್ದು ಬಗ್ಗೆ ಸಮಿತಿ ರಚನೆ ಬಳಿಕ ಸರ್ಕಾರದಿಂದ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು. ಹೊಸ ಪಿಂಚಣಿ ಯೋಜನೆ (NPS) ರದ್ದು ಮಾಡುವ ಬೇಡಿಕೆ ಪರಾಮರ್ಶೆ ಮಾಡ್ತೇವೆ. ಎಸಿಎಸ್ ನೇತೃತ್ವದಲ್ಲಿ ಸಮಿತಿ ರಚಿಸುತ್ತೇವೆ. ಬೇರೆ ರಾಜ್ಯಗಳಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಅಂತ ಅಧ್ಯಯನ ನಡೆಸಿ ವರದಿ ಕೊಡಲು ಸೂಚಿಸ್ತೇವೆ ಎಂದರು.

    ಒಟ್ಟಿನಲ್ಲಿ 7 ನೇ ವೇತನ ಆಯೋಗದಿಂದ ಸರ್ಕಾರ ಇನ್ನೂ ವರದಿ ಪಡೆದಿಲ್ಲ. ಆದರೆ ಸರ್ಕಾರಿ ನೌಕರರ ಒತ್ತಡ ತೀವ್ರವಾದ ಹಿನ್ನೆಲೆಯಲ್ಲಿ 17% ಮಧ್ಯಂತರ ಪರಿಹಾರಕ್ಕೆ ಭರವಸೆ ಕೊಟ್ಟಿದೆ. ಇದನ್ನೂ ಓದಿ: ಬುಧವಾರದಿಂದ ಸರ್ಕಾರಿ ನೌಕರರ ಮುಷ್ಕರ: ಯಾವ ಕಚೇರಿಗಳು ಬಂದ್‌ ಆಗಲಿವೆ?

    ಚುನಾವಣೆಯ ಹೊತ್ತಲ್ಲೇ ಸರ್ಕಾರದ ವಿರುದ್ಧ ಸರ್ಕಾರಿ ನೌಕರರು ಸಮರ ಸಾರಿದ್ದಾರೆ. 7ನೇ ವೇತನ ಆಯೋಗ ಜಾರಿ, ಹೊಸ ಪಿಂಚಣಿ ನೀತಿ ವಿರೋಧಿಸಿ ಹಳೇ ಪಿಂಚಣಿ ನೀತಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ (Indefinite Strike) ಕೈಗೊಂಡಿದ್ದಾರೆ.

  • ಬುಧವಾರದಿಂದ ಸರ್ಕಾರಿ ನೌಕರರ ಮುಷ್ಕರ: ಯಾವ ಕಚೇರಿಗಳು ಬಂದ್‌ ಆಗಲಿವೆ?

    ಬುಧವಾರದಿಂದ ಸರ್ಕಾರಿ ನೌಕರರ ಮುಷ್ಕರ: ಯಾವ ಕಚೇರಿಗಳು ಬಂದ್‌ ಆಗಲಿವೆ?

    ನವದೆಹಲಿ: ರಾಜ್ಯದಲ್ಲಿ ಚುನಾವಣೆ ಘೋಷಣೆಗೆ ದಿನಗಣನೆ ಶುರುವಾಗಿದೆ. ಈ ಹೊತ್ತಲ್ಲೇ ಸರ್ಕಾರದ ವಿರುದ್ಧ ಸರ್ಕಾರಿ ನೌಕರರು (Government Employees) ಸಮರ ಸಾರಿದ್ದಾರೆ. 7ನೇ ವೇತನ ಆಯೋಗ ಜಾರಿ, ಹೊಸ ಪಿಂಚಣಿ ನೀತಿ ವಿರೋಧಿಸಿ ಹಳೇ ಪಿಂಚಣಿ ನೀತಿಗೆ ಆಗ್ರಹಿಸಿ ಮುಷ್ಕರಕ್ಕೆ (Indefinite Strike) ಮುಂದಾಗಿದ್ದಾರೆ.

    ಈ ಸಂಬಂಧ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರು ವಿಧಾನಸೌಧದಲ್ಲಿ ಸರ್ಕಾರಿ ನೌಕರರ ಸಂಘದ ನಿಯೋಗದ ಜೊತೆ ಸಭೆ ನಡೆಸಿ, ಸಂಧಾನಕ್ಕೆ ಯತ್ನಿಸಿದರು. ಬೇಡಿಕೆ ಈಡೇರಿಸಲು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ಆಗಲಿದೆ. ಹೋರಾಟ ಕೈಬಿಡುವಂತೆ ಮನವಿ ಮಾಡಿದರು. ಆದರೆ ಸರ್ಕಾರಿ ನೌಕರರು ಒಪ್ಪದ ಕಾರಣ ಸಂಧಾನ ಸಭೆ ವಿಫಲವಾಗಿದೆ.

    ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ. ಸರ್ಕಾರಿ ಸಂಘದ ನೌಕರರಲ್ಲಿ ಯಾವುದೇ ಒಡಕಿಲ್ಲ. ಎಲ್ಲ ಸರ್ಕಾರಿ ನೌಕರರು ಒಗ್ಗಟ್ಟಾಗಿದ್ದೇವೆ ಎಂದರು. ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಕರ್ತವ್ಯಕ್ಕೆ ಗೈರಾಗುತ್ತೇವೆ ಎಂದು 40 ಸಂಘಟನೆಗಳ 10 ಲಕ್ಷ ನೌಕರರು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಕೆಲಸದಿಂದ ವಜಾ ಮಾಡಲಿ, ನಾವು ಹೆದರುವುದಿಲ್ಲ, ಮುಷ್ಕರ ನಡೆಯುತ್ತೆ: ಷಡಕ್ಷರಿ

    ಪರಿಸ್ಥಿತಿ ವಿಷಮ ಆಗದಂತೆ ತಡೆಯಲು ಮಂಗಳವಾರ ರಾತ್ರಿ 9:30ಕ್ಕೆ ಸಿಎಂ ಬೊಮ್ಮಾಯಿ (CM Basavaraj Bommai) ತುರ್ತುಸಭೆ ಕರೆದಿದ್ದಾರೆ. ಒಂದೊಮ್ಮೆ ಸಂಧಾನ ವಿಫಲವಾದರೆ ಬುಧವಾರದಿಂದ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು ಬಂದ್ ಆಗಲಿವೆ.

    ಯಾವ ಕಚೇರಿಗಳು ಬಂದ್?
    ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಎಲ್ಲಾ ಕಚೇರಿಗಳು, ಬಿಬಿಎಂಪಿ, ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಗ್ರಾಮ ಪಂಚಾಯತ್‌, ಸರ್ಕಾರಿ ಶಾಲೆಗಳು, ಪುರಸಭೆ, ಸರ್ಕಾರಿ ಹಾಸ್ಟೆಲ್ ಗಳು, ಕಂದಾಯ ಇಲಾಖೆ, ಸರ್ಕಾರಿ ಕಾಲೇಜುಗಳು ಬಂದ್‌ ಆಗಲಿವೆ.

    ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಸೇವೆಯಷ್ಟೇ ಲಭ್ಯವಿದ್ದು, ಆಸ್ತಿ ನೋಂದಣಿ ಸ್ಥಗಿತವಾಗುವ ಸಾಧ್ಯತೆಯಿದೆ. ಮುಷ್ಕರಕ್ಕೆ ಜಲಮಂಡಳಿ, ಬೆಸ್ಕಾಂ ನೌಕರರ ಸಂಘ ನೈತಿಕ ಬೆಂಬಲ ನೀಡಿವೆ.

  • 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಪ್ರತಿಭಟನೆ – ನಾಳೆ ಸರ್ಕಾರಿ ಸೇವೆಯಲ್ಲಿ ವ್ಯತ್ಯಯ?

    7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಪ್ರತಿಭಟನೆ – ನಾಳೆ ಸರ್ಕಾರಿ ಸೇವೆಯಲ್ಲಿ ವ್ಯತ್ಯಯ?

    ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ನಾಳೆ ಸರ್ಕಾರಿ ನೌಕರರು (Government Employees) ಪ್ರತಿಭಟನೆಗೆ (Protest) ಕರೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳು ಹಾಗೂ ಶಾಲಾ, ಕಾಲೇಜುಗಳಿಗೂ (College) ಇದರ ಪರಿಣಾಮ ತಟ್ಟಲಿದೆ.

    ಕಳೆದ ಕೆಲವು ತಿಂಗಳಿನಿಂದ ಏಳನೇ ವೇತನ ಆಯೋಗ ಜಾರಿ ಹಾಗೂ ಎನ್‍ಪಿಎಸ್ ರದ್ದು ಮಾಡುವಂತೆ ಆಗ್ರಹಿಸಿ ಸರ್ಕಾರಿ ನೌಕರರು ಹೋರಾಟ ನಡೆಸುತ್ತಿದ್ದಾರೆ. ಇದೀಗ ಈ ಪ್ರತಿಭಟನೆಯನ್ನು ತೀವ್ರವಾಗಿ ನಡೆಸಲು ನಾಳೆ ನಿರ್ಧರಿಸಿದ್ದಾರೆ. ಆದರೆ ಸರ್ಕಾರ ಮಧ್ಯಂತರ ಆದೇಶಗಳನ್ನು ಜಾರಿಗೊಳಿಸಿದರೇ ಮಾತ್ರ ಪ್ರತಿಭಟನೆ ವಾಪಸ್ ತೆಗೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದಾರೆ. ನಾಳೆಯೊಳಗೆ ಸರ್ಕಾರ ಆದೇಶ ಹೊರಡಿಸದೇ ಇದ್ದರೆ 6 ಲಕ್ಷ ಉದ್ಯೋಗಿಗಳು ಪ್ರತಿಭಟನೆ ಮಾಡುವ ಸಾಧ್ಯತೆಯಿದೆ.

    ಈ ಪ್ರತಿಭಟನೆಗೆ ಸರ್ಕಾರಿ ಶಾಲಾ- ಕಾಲೇಜಿನ ಸರ್ಕಾರಿ ಉಪನ್ಯಾಸಕರು ಕೈಜೋಡಿಸಲಿದ್ದು, ಕೆಲಸಕ್ಕೆ ಗೈರಾಗಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾ – ಕಾಲೇಜಿನಲ್ಲಿ ಪರೀಕ್ಷೆಗಳು (Exam) ಮುಂದೂಡಿಕೆ ಸಾಧ್ಯತೆಯಿದೆ. ಜೊತೆಗೆ ಸರ್ಕಾರಿ ಹಾಸ್ಟೆಲ್‍ನಲ್ಲಿಯೂ ಸಿಬ್ಬಂದಿ ಗೈರಾಗಲು ನಿರ್ಧಾರಿಸಿದ್ದಾರೆ. ಇದರ ಜೊತೆಗೆ ಆಸ್ತಿ ನೋಂದಣಿ, ವಾಹನ ನೋಂದಣಿ, ವಾಹನದ ಲೈಸೆನ್ಸ್ ವಿತರಣೆ ಎಲ್ಲವೂ ಬಂದ್ ಆಗಲಿದ್ದು, ಸಾರ್ವಜನಿಕರಿಗೆ ಸರ್ಕಾರಿ ಸೇವೆಯಲ್ಲಿ ವ್ಯತ್ಯಯ ಆಗಲಿದೆ. ಕಂದಾಯ ಇಲಾಖೆ ಸಬ್ ರಿಜಿಸ್ಟರ್ ಕಚೇರಿ, ಗ್ರಾಮ ಲೆಕ್ಕಿಗ ಕಚೇರಿ ಎಲ್ಲವೂ ಬಂದ್ ಆಗಲಿದ್ದು, ಆಸ್ಪತ್ರೆಗಳಿಗೂ (Hospital) ಪ್ರತಿಭಟನೆ ಬಿಸಿ ತಟ್ಟಲಿದೆ.

    ಆಸ್ಪತ್ರೆ ಹೊರರೋಗಿ ವಿಭಾಗದಲ್ಲಿ ಕೆಲಸ ನಿರ್ವಹಿಸದೇ ಇರಲು ಸರ್ಕಾರಿ ಆರೋಗ್ಯ ನೌಕರರ ಸಂಘ ನಿರ್ಧರಿಸಿದ್ದಾರೆ. ಓಪಿಡಿ ಹೊರತುಪಡಿಸಿ ಉಳಿದಂತೆ, ಐಸಿಯು, ಎಮರ್ಜೆನ್ಸಿ ಸೇವೆಗಳು ಮಾತ್ರ ಲಭ್ಯವಾಗಲಿದೆ. ಅತಿ ತುರ್ತು ಸೇವೆಗಳು ಮಾತ್ರ ನಾಳೆಯಿಂದ ಲಭ್ಯವಾಗಿದೆ. ಸದ್ಯ ರಾಜ್ಯದಲ್ಲಿ 45 ಸಾವಿರಕ್ಕೂ ಹೆಚ್ಚು ಸರ್ಕಾರಿ ವೈದ್ಯಕೀಯ ಸಿಬ್ಬಂದಿಯಿದ್ದಾರೆ. ಏಕಕಾಲದಲ್ಲಿ ಓಪಿಡಿ ಬಂದ್ ಮಾಡಲು ನೌಕರರ ಸಂಘ ನಿರ್ಧರಿಸಿದ್ದಾರೆ. ಇದನ್ನೂ ಓದಿ: ಉಗ್ರನನ್ನು ಹತ್ಯೆಗೈದ ಭದ್ರತಾ ಪಡೆ

    ನಾಳೆ ಯಾವೆಲ್ಲ ಇಲಾಖೆಗಳು ಬಂದ್?: ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಎಲ್ಲಾ ಕಚೇರಿಗಳು ಬಂದ್ ಆಗುವ ಸಾಧ್ಯತೆಯಿದೆ. ಬಿಬಿಎಂಪಿ, ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್‍ಗಳು, ತಾಲೂಕು ಕಚೇರಿ, ಜಿಲ್ಲಾ ಕಚೇರಿ ಆರೋಗ್ಯ ಇಲಾಖೆ, ಕಂದಾಯ ಇಲಾಖೆಗಳಲ್ಲಿ ಸೇವೆಗಳಿರುವುದಿಲ್ಲ. ಇದನ್ನೂ ಓದಿ: ಪಾಕ್, ಚೀನಾದಲ್ಲಿ ತರಬೇತಿ ಪಡೆದ ಡೇಂಜರಸ್ ವ್ಯಕ್ತಿ ಭಾರತಕ್ಕೆ ಎಂಟ್ರಿ – NIA ಅಲರ್ಟ್

  • ಇನ್ನು 15 ದಿನಗಳಲ್ಲಿ ಪಕ್ಷದ ಪ್ರಣಾಳಿಕೆ ರಿಲೀಸ್ – ಜನಾರ್ದನ ರೆಡ್ಡಿ

    ಇನ್ನು 15 ದಿನಗಳಲ್ಲಿ ಪಕ್ಷದ ಪ್ರಣಾಳಿಕೆ ರಿಲೀಸ್ – ಜನಾರ್ದನ ರೆಡ್ಡಿ

    ಬೆಂಗಳೂರು: ಯಾವತ್ತಿದ್ದರೂ ಅಧಿಕಾರಕ್ಕೆ ಬರಬೇಕು, ಸೇವೆ ಮಾಡಬೇಕು ಅನ್ನೋ ವಿಶ್ವಾಸದಲ್ಲೇ ನಾನೊಂದು ದೊಡ್ಡ ಹೆಜ್ಜೆ ಇಟ್ಟಿದ್ದೇನೆ. ಇನ್ನೂ 15 ದಿನಗಳಲ್ಲಿ ನನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRP)  ಸಂಸ್ಥಾಪಕ ಜನಾರ್ದನ ರೆಡ್ಡಿ (Janardhana Reddy) ಹೇಳಿದ್ದಾರೆ.

    ಇಲ್ಲಿನ ಫ್ರೀಡಂ ಪಾರ್ಕ್‌ನಲ್ಲಿ (Freedom Park) ಎನ್‌ಪಿಎಸ್ (ನೂತನ ಪಿಂಚಣಿ ಯೋಜನೆ) ವಿರೋಧಿಸಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ವಿರುದ್ಧ ಯುದ್ಧ ಸಾರುವುದಾಗಿ ಬೆದರಿಕೆ ಹಾಕಿದ ತಾಲಿಬಾನ್

    ಎಲ್ಲರೂ ಹೊಸ ವರ್ಷದ ಸಂಭ್ರಮ ಮಾಡುತ್ತಿದ್ದರೆ, ನೀವು ನಿಮ್ಮ ಕುಟುಂಬದ ಭವಿಷ್ಯಕ್ಕಾಗಿ ಹೋರಾಟ ಮಾಡುತ್ತಿದ್ದೀರಿ ಎನ್ನುವುದನ್ನು ತಿಳಿದೇ ನಾನಿಲ್ಲಿಗೆ ಬಂದಿದ್ದೇನೆ. ಸರ್ಕಾರಿ ನೌಕರರ ಪರಿಸ್ಥಿತಿ ನನಗೂ ಗೊತ್ತು. ನನ್ನ ತಂದೆ ಕೂಡ ಪೊಲೀಸ್ ಇಲಾಖೆಯಲ್ಲಿದ್ದು ನಿವೃತ್ತರಾಗಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್‌ ದಾಖಲು- ಹರಿಯಾಣದ ಕ್ರೀಡಾ ಸಚಿವ ಸ್ಥಾನಕ್ಕೆ ಸಂದೀಪ್ ಸಿಂಗ್ ರಾಜೀನಾಮೆ

    ರಾಜ್ಯ ಸರ್ಕಾರ (Government of Karnataka) ಮನಸ್ಸು ಮಾಡಿದ್ರೆ ಯಾವುದೂ ದೊಡ್ಡ ವಿಚಾರ ಅಲ್ಲ. ತಮ್ಮೆಲ್ಲರ ಆಶೀರ್ವಾದದಿಂದ ನಾನೊಂದು ದೊಡ್ಡ ಹೆಜ್ಜೆ ಇಟ್ಟಿದ್ದೇನೆ. ನಿಮ್ಮ ಹಾಗೆಯೇ ನಾನು ಕೂಡ ಹಿಂದೆ ಸರಿಯಲ್ಲ. ಯಾವತ್ತಿದ್ದರೂ ಅಧಿಕಾರಕ್ಕೆ ಬರಬೇಕು, ಸೇವೆ ಮಾಡಬೇಕು ಅನ್ನೋ ವಿಶ್ವಾಸದಲ್ಲೇ ಹೆಜ್ಜೆ ಇಟ್ಟಿದ್ದೇನೆ. 15 ದಿನದಲ್ಲಿ ನನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇನೆ. ಪ್ರಣಾಳಿಕೆಯಲ್ಲಿ ನಿವೃತ್ತ ನೌಕರರ ವಿಚಾರವನ್ನೂ ಇಟ್ಟಿದ್ದೇನೆ. ಸರ್ಕಾರ ನಿಮ್ಮ ಹೋರಾಟಕ್ಕೆ ತಲೆ ಬಾಗಲೇಬೇಕು. ಯಾವುದೇ ಕಾರಣಕ್ಕೂ ಹಿಂದೆ ಸರಿಯಬೇಡಿ ಎಂದು ಕರೆ ನೀಡಿದ್ದಾರೆ.

    ರಾಜ್ಯ ಸರ್ಕಾರಿ ಎನ್‌ಪಿಎಸ್ (NPS) ನೌಕರರ ಸಂಘದ ಪ್ರತಿಭಟನೆ 14ನೇ ದಿನಕ್ಕೆ ಕಾಲಿಟ್ಟಿದೆ. ಹೊಸ ಪಿಂಚಿಣಿ ಯೋಜನೆ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]