ಬೆಂಗಳೂರು: ಎಲೆಕ್ಷನ್ ಸನಿಹದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ(Karnataka Government) ಗುಡ್ ನ್ಯೂಸ್ ಕೊಟ್ಟಿದೆ. ಸರ್ಕಾರಿ ನೌಕರರ ಬಹಳ ದಿನಗಳಿಂದ ಎದಿರು ನೋಡುತ್ತಿದ್ದ ಏಳನೇ ವೇತನ ಆಯೋಗದ(7th Pay Commission) ರಚನೆ ಮಾಡಿದೆ.
ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದಲ್ಲಿ ಆಯೋಗದ ಸಮಿತಿ ರಚಿಸಲಾಗಿದೆ. ಈ ಆಯೋಗ ರಚನೆಯಿಂದ 5.40 ಲಕ್ಷ ಸರ್ಕಾರಿ ನೌಕರರು, 3 ಲಕ್ಷ ನಿಗಮ ಮಂಡಳಿ, ಪ್ರಾಧಿಕಾರ, ವಿವಿಗಳ ಸಿಬ್ಬಂದಿ ಮತ್ತು 4 ಲಕ್ಷ ನಿವೃತ್ತ ನೌಕರರಿಗೆ ಅನುಕೂಲ ಆಗಲಿದೆ. ಇದನ್ನೂ ಓದಿ: ನನ್ನ ತೇಜೋವಧೆ ಆಗ್ತಿದೆ – ವಿವಾದಿತ ಹೇಳಿಕೆಯನ್ನು ಹಿಂಪಡೆದ ಸತೀಶ್ ಜಾರಕಿಹೊಳಿ
ಈ ಸಂಬಂಧ ಸರ್ಕಾರ ಇನ್ನಷ್ಟೇ ಅಧಿಸೂಚನೆ ಹೊರಡಿಸಬೇಕಿದೆ. ಈ ಆಯೋಗ ಫೆಬ್ರವರಿ ಹೊತ್ತಿಗೆ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆ ಇದೆ. ಎಲೆಕ್ಷನ್‍ಗೂ ಮೊದಲೇ ಏಳನೇ ವೇತನ ಆಯೋಗದ ಅನ್ವಯ ವೇತನ ಪರಿಷ್ಕರಣೆ ಆಗುವ ಸಂಭವ ಇದೆ.
Live Tv
[brid partner=56869869 player=32851 video=960834 autoplay=true]
ಧಾರವಾಡ: ಸರ್ಕಾರಿ ಕೆಲಸ ದೇವರ ಕೆಲಸ ಅಂತಾರೆ. ಆದ್ರೆ ಅಂತಹ ಸರ್ಕಾರಿ ನೌಕರರೇ (Government Employees) ಸರ್ಕಾರಕ್ಕೆ ಮೋಸ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ.
ಸರ್ಕಾರ ಬಡವರಿಗಾಗಿ ಅನೇಕ ಯೋಜನೆಗಳನ್ನು ನೀಡುತ್ತಿದೆ. ಆದರೆ ಸರ್ಕಾರಿ ಕೆಲಸವಿದ್ದವರೂ ಬಡವರಿಗೆ ನೀಡುವ ಸೌಲಭ್ಯವನ್ನು ಪಡೆದು ಮೋಸ ಮಾಡಿದ್ದಾರೆ. ಅಂತಹವರಿಗೆ ಬುದ್ಧಿ ಕಲಿಸಲು ಸರ್ಕಾರ ದಂಡದ ಬಿಸಿ ಮುಟ್ಟಿಸಿದೆ. ಕೂಡಲೇ ಎಚ್ಚೆತ್ತ ಆಹಾರ ಇಲಾಖೆ (Food Department), ಸುಳ್ಳು ಮಾಹಿತಿ ನೀಡಿ ಪಡಿತರ (Ration Card) ದುರ್ಬಳಕೆ ಮಾಡಿಕೊಂಡ 339 ಸರ್ಕಾರಿ ನೌಕಕರರಿಂದ 36.73 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ. ಇದನ್ನೂ ಓದಿ: ವ್ಯಕ್ತಿ ಹೊಟ್ಟೆಯಲ್ಲಿತ್ತು 62 ಚಮಚ – ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ
ಮತ್ತೊಂದು ಕಡೆ ಆದಾಯ ತೆರಿಗೆ ಪಾವತಿಸುತ್ತಿದ್ದರೂ ಬಿಪಿಎಲ್ ಕಾರ್ಡ್ ಹೊಂದಿರುವವರ ಮೇಲೆ ಕ್ರಮಕ್ಕೆ ಮುಂದಾಗಿದೆ. 1945ರ ಕಾಯ್ದೆಯ ಅನ್ವಯ ಆದಾಯ ತೆರಿಗೆ ಪಾವತಿಸುವವರ ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಮಾಡಿದೆ. ಜೊತೆಗೆ ಸ್ವಂತ ಕಾರು ಇದ್ದವರ ಬಗ್ಗೆ ಆರ್‌ಟಿಒನಿಂದ ಮಾಹಿತಿ ಪಡೆದು ಅಂತಹ ಕಾರ್ಡ್‌ಗಳನ್ನು ಅಮಾನ್ಯ ಮಾಡಲು ಮುಂದಾಗಿದ್ದಾರೆ. ಸದ್ಯ ಅಧಿಕಾರಿಗಳು, 4 ಅಂತಸ್ತಿನ ಮನೆ ಇದ್ದವರು ಹಾಗೂ 10 ರಿಂದ 12 ಎಕರೆ ನೀರಾವರಿ ಜಮೀನು ಇದ್ದವರು ಕೂಡಾ ಆಹಾರ ಇಲಾಖೆ ಕಣ್ಣಿಗೆ ಮಣ್ಣು ಎರಚುತ್ತಿದ್ದಾರೆ. ಇಂಥವರನ್ನ ಮಟ್ಟಹಾಕುವಂತೆಯೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬಿಂದು ಅವರು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಮಗ 10ನೇ ತರಗತಿಯಲ್ಲಿದ್ದಾಗ ನನಗೆ ಓದಲು ಪ್ರೋತ್ಸಾಹಿಸಿದ. ಆಗ ನಾನು ಪುಸ್ತಕಗಳನ್ನು ಓದಲು ಪ್ರಾರಂಭಿಸಿದ್ದೇನೆ. ಆದರೆ ಇದು ಕೇರಳ ಪಬ್ಲಿಕ್ ಸರ್ವಿಸ್ ಕಮಿಷನ್(PSC) ಪರೀಕ್ಷೆಗಳಿಗೆ ತಯಾರಿ ನಡೆಸುವಂತೆ ಪ್ರೇರೇಪಿಸಿತು. ಈಗ ನಾವಿಬ್ಬರು ಒಟ್ಟಿಗೆ ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿರುವುದು ಸಂತೋಷವಾಗುತ್ತಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ನಾನು ಎಲ್‍ಜಿಎಸ್‍ಗೆ ಎರಡು ಬಾರಿ ಮತ್ತು ಎಲ್‍ಡಿಸಿಗೆ ಒಂದು ಬಾರಿ ಪರೀಕ್ಷೆಯನ್ನು ಕೊಟ್ಟಿದ್ದೆ. ಅವು ಯಶಸ್ಸು ಕಾಣಲಿಲ್ಲ. ಆದರೆ ಈಗ ನಾಲ್ಕನೇ ಸಾಹಸವು ಯಶಸ್ವಿಯಾಗಿದೆ. ನನ್ನ ಮುಖ್ಯ ಗುರಿ ಐಸಿಡಿಎಸ್(ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್‍ಮೆಂಟ್ ಸರ್ವಿಸ್ಸ್(ಐಸಿಡಿಎಸ್) ಮೇಲ್ವಿಚಾರಕರ ಪರೀಕ್ಷೆ, ಆದರೆ ಎಲ್‍ಜಿಎಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಬೋನಸ್ ಎಂದು ತಿಳಿಸಿದರು. ಇದನ್ನೂ ಓದಿ: ಅಕ್ರಮ ಗೋಹತ್ಯೆ ಮನೆ ಮೇಲೆ ದಾಳಿ – ವಿದ್ಯುತ್ ಸಂಪರ್ಕ ಕಟ್, ಶರಣಾಗಲು ಸೂಚನೆ
ಕಳೆದ 10 ವರ್ಷಗಳಿಂದ ಅಂಗನವಾಡಿ ಶಿಕ್ಷಕಿಯಾಗಿರುವ ಬಿಂದು, ಕೋಚಿಂಗ್ ಸೆಂಟರ್‍ನಲ್ಲಿರುವ ಅವರ ಶಿಕ್ಷಕರು, ಸ್ನೇಹಿತರು ಮತ್ತು ಅವರ ಮಗ ಪಿಎಸ್‍ಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಪದೇ ಪದೇ ನೀಡುತ್ತಿದ್ದ ಪ್ರೋತ್ಸಾಹ ಮತ್ತು ಬೆಂಬಲದಿಂದ ಈ ಯಶಸ್ಸು ಗಳಿಸಿದ್ದೇವೆ ಎಂದರು.
ಬಿಂದು ಅವರ ಮಗ ಈ ಕುರಿತು ಮಾತನಾಡಿದ್ದು, ಇಬ್ಬರೂ ಒಟ್ಟಿಗೆ ಅಧ್ಯಯನ ಮಾಡದಿದ್ದರೂ, ಕೆಲವು ವಿಷಯಗಳ ಬಗ್ಗೆ ಚರ್ಚಿಸುತ್ತೇವೆ. ನಾನು ಒಬ್ಬಂಟಿಯಾಗಿ ಓದಲು ಇಷ್ಟಪಡುತ್ತೇನೆ. ಮೇಲಾಗಿ, ನನ್ನ ಅಮ್ಮ ಯಾವಾಗಲೂ ಓದುವುದಿಲ್ಲ. ಸಮಯ ಸಿಕ್ಕಾಗ ಮತ್ತು ಅಂಗನವಾಡಿ ಕೆಲಸ ಮುಗಿದ ನಂತರ ಓದುತ್ತಿದ್ದರು. ನಾನು ಮೊದಲು ಪೊಲೀಸ್ ಪರೀಕ್ಷೆ ಬರೆದಿದ್ದೆ. ಆದರೆ ಅದು ಅಷ್ಟು ಯಶಸ್ವಿಯಾಗಿಲ್ಲ. ಈ ಬಾರಿ, ನಾನು ಎಲ್‍ಡಿಸಿ ಪರೀಕ್ಷೆಗಾಗಿ ಹೆಚ್ಚು ಓದಿದ್ದೆ ಎಂದು ವಿವರಿಸಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಮೊಬೈಲ್ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿ ತೀವ್ರ ಟೀಕೆಗಳ ನಂತರ ಆದೇಶವನ್ನು ವಾಪಸ್ ತೆಗೆದುಕೊಂಡು ರಾಜ್ಯ ಸರ್ಕಾರ ಮುಜುಗರಕ್ಕೀಡಾಗಿದೆ. ಈ ಆದೇಶ ಜಾರಿಗೆ ಪ್ರಮುಖ ಕಾರಣ ನಾನೇ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರಿಗೆ ಪತ್ರ ಬರೆದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಸರ್ಕಾರದ ದುರುದ್ದೇಶಪೂರಿತ ಆದೇಶಕ್ಕೆ ನಾನೇ ಕಾರಣ ಎಂದು ಸಭೆಯೊಂದರಲ್ಲಿ ಕೊಚ್ಚಿಕೊಳ್ಳುವ ಮೂಲಕ ನಿಮ್ಮ ತಪ್ಪನ್ನು ಒಪ್ಪಿಕೊಂಡಿದ್ದೀರಿ. ಈ ಆದೇಶದಿಂದ ಆದ ಬೆಳವಣಿಗೆಯಿಂದ ರಾಜ್ಯದ ಲಕ್ಷಾಂತರ ಪ್ರಮಾಣಿಕ ಸರ್ಕಾರಿ ನೌಕರರ ಭಾವನೆಗಳಿಗೆ ಧಕ್ಕೆಯಾಗಿದೆ. ಇದಕ್ಕೆ ಕಾರಣರಾದ ನೀವು ಸರ್ಕಾರಿ ನೌಕರರ ಕ್ಷಮೆಯಾಚಿಸಬೇಕು ಎಂದು ಪತ್ರದಲ್ಲಿ ರವಿ ಕೃಷ್ಣಾರೆಡ್ಡಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವೀಡಿಯೋ ಮಾಡುವಂತಿಲ್ಲ
ಪತ್ರದಲ್ಲೇನಿದೆ?
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ,
ನನ್ನ ತಂದೆ ಕೃಷ್ಣಾರೆಡ್ಡಿ ವಿ.ಯವರು 1970-80ರ ದಶಕದಲ್ಲಿ ಸರ್ಕಾರಿ ನೌಕರರಾಗಿದ್ದವರು. ಹಾಗಾಗಿ ಸರ್ಕಾರದ ಹಾಗೂ ಜನರ ತೆರಿಗೆಯ ಹಣದ ಋಣ ನನ್ನ ಮತ್ತು ನನ್ನ ಕುಟುಂಬದ ಮೇಲಿದೆ. ಆ ಹಿನ್ನೆಲೆಯಲ್ಲಿ ನಾನು ಅತ್ಯಂತ ಪ್ರೀತಿ, ನೋವು, ಬೇಸರ, ದುಃಖ, ಕಾಳಜಿ, ಅಸಹನೆಯಿಂದ ಕೂಡಿದ ಮಿಶ್ರಭಾವದಿಂದ ನಿಮಗೆ ಮತ್ತು ನಿಮ್ಮ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಈ ಬಹಿರಂಗ ಪತ್ರವನ್ನು ಬರೆಯುತ್ತಿದ್ದೇನೆ.
ನಿಮ್ಮ ದುರಾಲೋಚನೆ, ವ್ಯಾಪ್ತಿ ಮೀರಿದ ನಡವಳಿಕೆ ಮತ್ತು ದುಷ್ಕೃತ್ಯದಿಂದಾಗಿ ನೀವು ರಾಜ್ಯದ ಲಕ್ಷಾಂತರ ಪ್ರಾಮಾಣಿಕ ಸರ್ಕಾರಿ ನೌಕರರ ಘನತೆ ಮತ್ತು ಗೌರವಕ್ಕೆ ಚ್ಯುತಿ ತಂದಿದ್ದೀರಿ. ರಾಜ್ಯದ ಮುಖ್ಯಮಂತ್ರಿಯನ್ನು ಮತ್ತು DPAR ಇಲಾಖೆಯ ಅಯೋಗ್ಯ ಅಧಿಕಾರಿಗಳನ್ನು ದಾರಿ ತಪ್ಪಿಸಿ, ಅವರಿಂದ ಕಾನೂನುಬಾಹಿರ ಮತ್ತು ಜನವಿರೋಧಿ ಆದೇಶವನ್ನು ಹೊರಡಿಸಿ, ತದನಂತರ ಕೇವಲ ಒಂದೇ ದಿನದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ಆ Draconian ಆದೇಶವನ್ನು ಹಿಂಪಡೆಯುವಂತೆ ಆಗಿ, ರಾಜ್ಯ ಸರ್ಕಾರಕ್ಕೆ ಹಾಗೂ ಅದರ ನೌಕರರಿಗೆ ಮುಜುಗರ ಮತ್ತು ಅವಮಾನ ಆಗುವಂತಾಗಲು ನೇರ ಕಾರಣ ಆಗಿದ್ದೀರಿ. ಆ ದುರುದ್ದೇಶಪೂರಿತ ಆದೇಶಕ್ಕೆ ನಾನೇ ಕಾರಣ ಎಂದು ಆಲಮಟ್ಟಿಯಲ್ಲಿ ನಡೆದ ಸಭೆಯಲ್ಲಿ ಕೊಚ್ಚಿಕೊಳ್ಳುವ ಮೂಲಕ ನಿಮ್ಮ ತಪ್ಪನ್ನು ಒಪ್ಪಿಕೊಂಡಿದ್ದೀರಿ. ಇದರಲ್ಲಿ ಯಾವ ಪಾತ್ರವೂ ಇಲ್ಲದ ಮತ್ತು ಈ ಘಟನೆಯ ಕಾರಣಕ್ಕಾಗಿ ತೀವ್ರವಾಗಿ ನೊಂದಿರುವ ರಾಜ್ಯದ ಲಕ್ಷಾಂತರ ಪ್ರಾಮಾಣಿಕ ಸರ್ಕಾರಿ ನೌಕರರ ಭಾವನೆಗಳಿಗೆ ಧಕ್ಕೆ ತಂದಿದ್ದೀರಿ. ಹಾಗಾಗಿ, ಈ ಕೂಡಲೇ ನೀವು ರಾಜ್ಯದ ಎಲ್ಲಾ ಸರ್ಕಾರಿ ನೌಕರರಲ್ಲಿ Unconditional ಕ್ಷಮೆ ಯಾಚಿಸಬೇಕು ಎಂದು ನಾನು ಮೊದಲಿಗೆ ಆಗ್ರಹಿಸುತ್ತೇನೆ.
ಅಂದಹಾಗೆ, ನೀವು ಸರ್ಕಾರಿ ನೌಕರರ ಸ್ವಾಭಿಮಾನದ ಬಗ್ಗೆ ಮಾತನಾಡಿದ್ದೀರಿ. ರಾಜ್ಯದ 6 ಲಕ್ಷ ಸರ್ಕಾರಿ ನೌಕರರಲ್ಲಿ ಕನಿಷ್ಠ ನಾಲ್ಕೈದು ಲಕ್ಷ ಸರ್ಕಾರಿ ನೌಕರರು ಈಗಲೂ ಸ್ವಾಭಿಮಾನ ಮತ್ತು ಘನತೆಯಿಂದ ಬದುಕುತ್ತಿದ್ದಾರೆ. ಯಾಕೆಂದರೆ ಅವರ ಇಲಾಖೆಗಳಲ್ಲಿ ಭ್ರಷ್ಟಾಚಾರ ಮತ್ತು ಲಂಚಕ್ಕೆ ಅವಕಾಶ ಬಹಳ ಕಡಿಮೆ ಇರುತ್ತದೆ. ಲಂಚಗುಳಿತನ ಮತ್ತು ಅಕ್ರಮಗಳಿಗೆ ಅಪಾರ ಅವಕಾಶ ಇರುವ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, RDPR ಇಲಾಖೆ, ಅಬಕಾರಿ ಇಲಾಖೆ, ಕೃಷಿ ಇಲಾಖೆಯಂತಹ ಕೆಲವೇ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಲ್ಲಿಯೂ ಎಲ್ಲರೂ ಭ್ರಷ್ಟರಲ್ಲ. ಆದರೆ ಭ್ರಷ್ಟರ ಅಟ್ಟಹಾಸ ಮಾತ್ರ ಮಿತಿಮೀರಿದೆ. ತಮ್ಮ ಹಾಗೆ ಎಲ್ಲರೂ ಪರಮಭ್ರಷ್ಟರೇ ಎನ್ನುವ ಸಾರ್ವತ್ರಿಕ ಭಾವನೆಯನ್ನು ಸೃಷ್ಟಿಸಿರುವುದು ಆ ಅಲ್ಪಸಂಖ್ಯಾತ ಭ್ರಷ್ಟರೇ. ಬಹುಸಂಖ್ಯಾತ ಪ್ರಾಮಾಣಿಕ ನೌಕರರು ಹೆದರುಪುಕ್ಕಲರಾಗಿ ಭ್ರಷ್ಟಾಚಾರ ಬೆಳೆಯಲು ಪರೋಕ್ಷವಾಗಿ ಕಾರಣರಾಗಿದ್ದಾರೆ. ಆ ಕಾರಣದಿಂದಾಗಿಯೇ ಅವರೂ ಆರೋಪಗಳಿಗೆ ಗುರಿಯಾಗುತ್ತಿದ್ದಾರೆ.
ನೀವು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ. ಇಂದು ಸರ್ಕಾರಿ ನೌಕರರ ಘನತೆಗೆ ಹೆಚ್ಚು ಚ್ಯುತಿ ಬಂದಿರುವುದು ಈಗಾಗಲೇ ಹೇಳಿದಂತೆ ನಿಮ್ಮಲ್ಲಿಯ ಕೆಲವರು ಮಾಡುವ ಭ್ರಷ್ಟಾಚಾರ, ಲಂಚಕೋರತನ, ಕರ್ತವ್ಯಲೋಪ, ಸಾರ್ವಜನಿಕರೊಂದಿಗಿನ ದುರ್ನಡತೆ ಮುಂತಾದ ಅವಗುಣಗಳ ಕಾರಣಕ್ಕೆ. ಸರ್ಕಾರಿ ನೌಕರರಿಗೆ ತಕ್ಕುದಲ್ಲದ ನಡವಳಿಕೆಯ ಕಾರಣಕ್ಕೆ. ಸಮಾಜದಲ್ಲಿ ಸರ್ಕಾರಿ ನೌಕರರ ಘನತೆ ಮತ್ತು ಗೌರವ ಹೆಚ್ಚಾಗಬೇಕು ಎಂದರೆ ಅವರು ತಮ್ಮ ದುರ್ನಡತೆ, ದುಷ್ಕೃತ್ಯ, ಅಕ್ರಮ ಮತ್ತು ಕಾನೂನುಬಾಹಿರ ಕೆಲಸಗಳನ್ನು ನಿಲ್ಲಿಸಬೇಕು. ಜನರ ವಿಶ್ವಾಸ ಪಡೆಯಬೇಕು.
ಹಾಗಾಗಿ ನೀವು ಸರ್ಕಾರಿ ನೌಕರರ ಯಾವುದೇ ಸಭೆಯಲ್ಲಿ ನಿಮ್ಮ ಸಹನೌಕರರಿಗೆ ಅವರು “ಯಾವುದೇ ಕಾರಣಕ್ಕೂ ಲಂಚ ತೆಗೆದುಕೊಳ್ಳಬಾರದು, ಅಕ್ರಮಗಳನ್ನು ಮಾಡಬಾರದು, ಸಾರ್ವಜನಿಕರನ್ನು ವಿನಾಕಾರಣ ಸತಾಯಿಸಬಾರದು, ಅವರೊಂದಿಗೆ ಸೌಜನ್ಯ ಮತ್ತು ಗೌರವದಿಂದ ನಡೆದುಕೊಳ್ಳಬೇಕು” ಎಂದು ಎಂದಾದರೂ ಹೇಳಿದ್ದೀರಾ? ಇಲ್ಲವಾದಲ್ಲಿ ನೀವು ಎಂತಹ ನೌಕರರ ಸಂಘದ ಅಧ್ಯಕ್ಷ? ನಿಮ್ಮ ಸಂಘದ ಲಕ್ಷಾಂತರ ಸದಸ್ಯರ ಗೌರವ ಮತ್ತು ಘನತೆಯನ್ನು ನೀವು ಇನ್ಯಾವ ರೀತಿ ಕಾಪಾಡುತ್ತೀರಿ, ಹೆಚ್ಚಿಸುತ್ತೀರಿ?
ಬಹುಶಃ, ಮೊನ್ನೆ ಮಾಡಿದ ರೀತಿಯಲ್ಲಿಯೇ ಇರಬೇಕು. ಒಬ್ಬ ಸುಳ್ಳುಗಾರ ಮತ್ತು ಅದಕ್ಷ ಮುಖ್ಯಮಂತ್ರಿಯ ಜೊತೆ ಕಾರಿನಲ್ಲಿ ಖಾಸಗಿಯಾಗಿ ಕುಳಿತು ಅವರಿಂದ ಹೀನ ಮತ್ತು ಜನದ್ರೋಹಿ ಆದೇಶ ಹೊರಡಿಸುವಂತೆ ಮಾಡುವ ಮೂಲಕ ಅಲ್ಲವೇ? ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ/ವೀಡಿಯೋ ತೆಗೆಯಬಾರದು ಎಂದು ಸರ್ಕಾರ ಆದೇಶ ಹೊರಡಿಸಿದ ನಂತರ ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ರಾಜ್ಯದ ಸರ್ಕಾರಿ ನೌಕರರ ಮಾನ ಮತ್ತು ಮರ್ಯಾದೆ ಯಾವ ರೀತಿ ಹರಾಜು ಆಗಿದೆ ಎಂದು ನಿಮಗೆ ಗೊತ್ತಿದೆಯೇ?
ಈ ವಿಷಯದಲ್ಲಿ ನಿಮ್ಮ ದುರಾಲೋಚನೆ ಮತ್ತು ಅಹಂಕಾರದ ಏಕೈಕ ಕಾರಣದಿಂದಾಗಿ ತಮಗಾಗಿರುವ ಮಾನಹಾನಿ ಕುರಿತು ಸರ್ಕಾರಿ ನೌಕರರು ಇಷ್ಟೊತ್ತಿಗೆ ನಿಮ್ಮಿಂದ ರಾಜೀನಾಮೆ ಪಡೆಯಬೇಕಿತ್ತು. ಆದರೆ ಅದನ್ನು ಮಾಡದ ಅವರ ಮೌನವೂ ಸಹ ಸರ್ಕಾರಿ ನೌಕರರು ಈಗ ಯಾವ ಮನಸ್ಥಿತಿಗೆ ತಲುಪಿದ್ದಾರೆ ಎನ್ನುವುದನ್ನು ಸೂಚಿಸುತ್ತದೆ. ಇದು ದುರಂತ.
ನಮಗೆ ತಿಳಿದು ಬಂದಿರುವ ಹಾಗೆ, ನೀವೂ ಸೇರಿದಂತೆ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾಗಿರುವ ಅನೇಕರು ಸರ್ಕಾರದಲ್ಲಿ ತಮಗೆ ಕೊಟ್ಟಿರುವ ಕೆಲಸ ಮಾಡುವುದನ್ನು ಬಿಟ್ಟು ಇತರೆ ನೌಕರರ ವರ್ಗಾವಣೆ ಮಾಡಿಸುವುದು, ಭ್ರಷ್ಟರನ್ನು ಕಾನೂನಿನ ಪ್ರಕ್ರಿಯೆಗಳಿಂದ ರಕ್ಷಿಸುವುದು, ಕೆಲವು ಭ್ರಷ್ಟ ರಾಜಕಾರಣಿಗಳ ಚೇಲಾಗಳಾಗಿ ವರ್ತಿಸುವುದು, ತಮ್ಮ ಮಾತು ಒಪ್ಪದ ಇತರೆ ಪ್ರಾಮಾಣಿಕ ಸರ್ಕಾರಿ ನೌಕರರ ಮೇಲೆ ದಬ್ಬಾಳಿಕೆ ಮಾಡುವುದೂ ಸೇರಿದಂತೆ ಹಲವು ಕುಕೃತ್ಯ ಮತ್ತು ಸರ್ಕಾರಿ ನೌಕರರಿಗೆ ತಕ್ಕುದಲ್ಲದ ನಡವಳಿಕೆಯಲ್ಲಿ ತೊಡಗಿರುವ ಕುರಿತು ಆರೋಪಗಳಿವೆ. ನೀವಂತೂ KAS/IAS/IPS ಅಧಿಕಾರಿಗಳನ್ನೂ ವರ್ಗಾವಣೆ ಮಾಡಿಸುವಷ್ಟು ಪ್ರಭಾವಶಾಲಿ ಎನ್ನುತ್ತಾರೆ. ನಿಮ್ಮಂತಹವರ ಇಂತಹ ಅನುಚಿತ ಮತ್ತು ವ್ಯಾಪ್ತಿ ಮೀರಿದ ನಡವಳಿಕೆಯೂ ಇವತ್ತಿನ ದುರಾಡಳಿತಕ್ಕೆ ತನ್ನದೇ ಆದ ಕೆಟ್ಟ ಕೊಡುಗೆ ನೀಡಿದೆ.
ಅಂದಹಾಗೆ, ನೀವು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು. ಸಂಘದ ಕೆಲಸ ಕಾರ್ಯಗಳನ್ನು ಕಚೇರಿಯ ಅವಧಿಯ ನಂತರ ಮಾಡಬೇಕೇ ವಿನಃ ದಿನಪೂರ್ತಿ ಅದನ್ನೇ ಮಾಡುವಂತಿಲ್ಲ. ಆ ರೀತಿಯ ವಿಶೇಷ ಹಕ್ಕುಗಳು ನೌಕರರ ಸಂಘದ ಪದಾಧಿಕಾರಿಗಳಿಗೆ ಇಲ್ಲ. ಯಾವ ಕೆಲಸಕ್ಕಾಗಿ ನಿಮಗೆ ಜನರ ತೆರಿಗೆಯ ಹಣವನ್ನು ಸರ್ಕಾರ ಸಂಬಳವಾಗಿ ನೀಡುತ್ತಿದೆಯೋ, ಅದನ್ನು ಮಾಡಿಯೇ ನೀವು ಇತರೆ ಖಾಸಗಿ ಕೆಲಸಗಳನ್ನು ಮಾಡಬೇಕು. ಆದರೆ ನೀವು ನಿಮ್ಮ ದುಷ್ಪ್ರಭಾವ ಬಳಸಿ ನಿಮ್ಮ ಅಧಿಕೃತ ಸರ್ಕಾರಿ ಕೆಲಸವನ್ನೇ ಮಾಡುತ್ತಿಲ್ಲ ಎನ್ನುವ ಮಾಹಿತಿ ಬಂದಿದೆ.
ಇದೆಲ್ಲವೂ ಭ್ರಷ್ಟ J.C.B ಪಕ್ಷಗಳ ಕಾಲದಲ್ಲಿ ನಡೆಯುತ್ತಿತ್ತು. ಈಗ ಜನ ಎಚ್ಚತ್ತಿದ್ದಾರೆ. KRS ಪಕ್ಷದ ನಿರಂತರ ಹೋರಾಟದ ಕಾರಣಕ್ಕೆ ಇಂದು ರಾಜ್ಯದ ಲಕ್ಷಾಂತರ ಜನಸಾಮಾನ್ಯರಲ್ಲಿ ನವಚೈತನ್ಯ ಸಂಚರಿಸುತ್ತಿದೆ. ಅನ್ಯಾಯವನ್ನು ಸಾರ್ವಜನಿಕವಾಗಿ ಪ್ರಶ್ನಿಸುವ ಸ್ಥೈರ್ಯ ಬೆಳೆಸಿಕೊಂಡಿದ್ದಾರೆ. ಹಾಗಾಗಿ ನೀವೂ ಸೇರಿದಂತೆ ಯಾವೆಲ್ಲಾ ಸರ್ಕಾರಿ ನೌಕರರು ತಮ್ಮ ನಿಯೋಜಿತ ಸ್ಥಾನದಲ್ಲಿ ಕರ್ತವ್ಯ ನಿರ್ವಹಣೆ ಮಾಡುವುದನ್ನು ಬಿಟ್ಟು ರಾಜಕಾರಣಿಗಳ ಹಾಗೆ ಊರೂರು ಸುತ್ತಿ ಸರ್ಕಾರಿ ನೌಕರರ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದೀರೋ, ಅದೆಲ್ಲವೂ ಈ ಕೂಡಲೇ ಬಂದ್ ಆಗಬೇಕು. ಇದನ್ನೂ ಓದಿ: ಉಕ್ಕಿ ಹರಿಯುವ ತುಂಗಭದ್ರಾ ನದಿಯಲ್ಲಿ ಪ್ರವಾಸಿಗರ ಮೋಜುಮಸ್ತಿ – ಮಿತಿಮೀರಿದ ಹುಚ್ಚಾಟ
ಇನ್ನು, ನೀವು ಮಾಡಿದ್ದೀರಿ ಎನ್ನಲಾದ ಹಲವು ಕುಕೃತ್ಯಗಳು ಮತ್ತು ಅಕ್ರಮ ಆಸ್ತಿಯ ಬಗ್ಗೆ ನಮಗೆ ಶಿವಮೊಗ್ಗ ಜಿಲ್ಲೆಯ ಹಲವರು ಕೆಲವು ವಿವರಗಳ ಸಹಿತ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಇವೆಲ್ಲವೂ ಗಂಭೀರ ಆರೋಪಗಳು. ಈ ವಿಚಾರದಲ್ಲಿ ಏನೆಲ್ಲಾ ಕಾನೂನು ಕ್ರಮಗಳನ್ನು ಜರುಗಿಸಬೇಕೋ ಅದನ್ನು ನಾವು ಶೀಘ್ರದಲ್ಲಿಯೇ ಜರುಗಿಸಲಿದ್ದೇವೆ.
ಅದರ ಜೊತೆಗೆ, ನೀವು ಯಾವ ಹುದ್ದೆಯಲ್ಲಿ ಮತ್ತು ಸ್ಥಳದಲ್ಲಿ ಕೆಲಸ ಮಾಡುತ್ತಿದ್ದೀರೋ ಅದೇ ಸ್ಥಳಕ್ಕೆ ಇಷ್ಟರಲ್ಲಿಯೇ KRS ಪಕ್ಷದ ನಿಯೋಗ ಭೇಟಿ ನೀಡಿ, ನಿಮ್ಮ ಅನುಚಿತ ವರ್ತನೆ, ಕೆಲಸದ ಸ್ಥಳದಲ್ಲಿ ಗೈರು ಹಾಜರಿ, ಕರ್ತವ್ಯಲೋಪ ಮುಂತಾದ ವಿಚಾರಗಳ ಕುರಿತು ನಿಮ್ಮ ಮೇಲಧಿಕಾರಿಗೆ ದೂರು ನೀಡಲಿದೆ. ಲೋಕಾಯುಕ್ತದ ಗಮನಕ್ಕೂ ತರಲಿದೆ.
ಸಂಬಳ ನನ್ನ ಹಕ್ಕು, ಗಿಂಬಳ ನನ್ನ ತಾಕತ್ತು, ಕೆಲಸ ನನ್ನ ಮರ್ಜಿ ಎನ್ನುವ ಮನಸ್ಥಿತಿಯ ಕೆಲವು ಭ್ರಷ್ಟ ಸರ್ಕಾರಿ ನೌಕರರಿಗೆ ಅವರ ನೈಜ ಕರ್ತವ್ಯವನ್ನು ನೆನಪಿಸುವ ಕೆಲಸವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಮಾಡುತ್ತಾ ಬಂದಿದೆ. ಆ ಮೂಲಕ ಲಂಚ ಮುಕ್ತ ಕರ್ನಾಟಕ, ಬಸವಣ್ಣನ ಕಲ್ಯಾಣ ಕರ್ನಾಟಕ, ಕುವೆಂಪುರ ಸರ್ವೋದಯ ಕರ್ನಾಟಕವನ್ನು ಕಟ್ಟಲು ಕಟಿಬದ್ಧವಾಗಿದೆ. ಆ ಹಾದಿಯಲ್ಲಿ ಎದುರಾಗುವ ಎಂತಹ ದುಷ್ಟಶಕ್ತಿಗಳನ್ನೂ ಜನ ಬಲ ಮತ್ತು ಸಂಘ ಬಲದಿಂದ KRS ಪಕ್ಷ ಮೆಟ್ಟಿ ನಿಲ್ಲುತ್ತದೆ. ಇದು ಸತ್ಯ ಮತ್ತು ವಾಸ್ತವ.
ಇದನ್ನು ನೀವೂ ಸೇರಿದಂತೆ ಕರ್ನಾಟಕ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ನೆನಪಿಡಬೇಕು. ನಾಡು ಕಟ್ಟುವ ಕೆಲಸದಲ್ಲಿ ಪ್ರಾಮಾಣಿಕ ನೌಕರರು ನಮ್ಮೊಡನೆ ಕೈಜೋಡಿಸಬೇಕು ಎಂದು ಮನವಿ ಮಾಡುತ್ತೇವೆ. ಇದೆಲ್ಲವನ್ನೂ ನಾನು ಕರುನಾಡಿನ ಹಿತದೃಷ್ಟಿಯಿಂದ ಹೇಳಿದ್ದೇನೆ. ನೀವೂ ಸೇರಿದಂತೆ ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ.
ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ. ಶುಭವಾಗಲಿ ಎಂದು ರವಿ ಕೃಷ್ಣಾರೆಡ್ಡಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಪಾಟ್ನಾ: ಎರಡನೇ ಮದುವೆಯಾಗಲು ಬಯಸುವ ಸರ್ಕಾರಿ ಉದ್ಯೋಗಿಗಳು ತಮ್ಮ ಇಲಾಖೆಗಳಿಗೆ ಸೂಚಿಸಿ ಅಗತ್ಯ ಅನುಮತಿಯನ್ನು ಪಡೆದ ನಂತರವೇ ಮುಂದುವರಿಯಬೇಕು ಎಂದು ಬಿಹಾರದ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ.
ಬಿಹಾರದ ಸರ್ಕಾರವು ಹೊಸ ಅಧಿಸೂಚನೆಯನ್ನು ಹೊರಡಿಸಿದ್ದು, ಎಲ್ಲ ಸರ್ಕಾರಿ ಅಧಿಕಾರಿಗಳು ತಮ್ಮ ವೈವಾಹಿಕ ಜೀವನದ ಬಗ್ಗೆ ತಮ್ಮ ಇಲಾಖೆಗಳಿಗೆ ಅಗತ್ಯ ಅನುಮತಿ ಕೊಟ್ಟ ನಂತರವೇ ಎರಡನೇ ಮದುವೆಗೆ ಅರ್ಹರಾಗಬೇಕೆಂದು ನಿರ್ದೇಶಿಸಿದೆ.
ಅಧಿಸೂಚನೆಯಲ್ಲಿ ಏನಿದೆ?
ಎರಡನೇ ಬಾರಿಗೆ ಮದುವೆಯಾಗಲು ಬಯಸುವ ಯಾವುದೇ ಉದ್ಯೋಗಿ ಮೊದಲು ಅವನ ಅಥವಾ ಅವಳ ಸಂಗಾತಿಯಿಂದ ಕಾನೂನುಬದ್ಧವಾಗಿ ಪ್ರತ್ಯೇಕವಾದ ದಾಖಲೆಗಳನ್ನು ಸಂಬಂಧಿಸಿದ ಇಲಾಖೆಗೆ ನೀಡಬೇಕು. ಉದ್ಯೋಗಿಯ ಮೊದಲ ಪತ್ನಿ ಅಥವಾ ಪತಿ ವಿರೋಧಿಸಿದರೆ, ಎರಡನೇ ಪತ್ನಿ ಅಥವಾ ಪತಿಗೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ನಿರಾಕರಿಸಲಾಗುತ್ತದೆ. ಇದನ್ನೂ ಓದಿ: ಯೋಧರು ಸೇರಿ ಐವರ ಪ್ರಾಣ ಉಳಿಸಿದ ಮೃತ ಮಹಿಳೆಯ ಅಂಗಾಂಗ
ಸರ್ಕಾರಿ ನೌಕರನು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೆ ಎರಡನೇ ಮದುವೆಯಾಗಿ ಸೇವಾ ಅವಧಿಯಲ್ಲಿ ಮರಣಹೊಂದಿದರೆ, ಅವನ ಅಥವಾ ಅವಳ ಎರಡನೇ ಪತ್ನಿ ಅಥವಾ ಪತಿ ಮತ್ತು ಅವರ ಮಕ್ಕಳು ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ಅರ್ಹರಾಗಿರುವುದಿಲ್ಲ. ರಾಜ್ಯ ಸರ್ಕಾರ ಮೊದಲ ಪತ್ನಿಯ ಮಕ್ಕಳಿಗೆ ಆದ್ಯತೆ ನೀಡಲಿದೆ.
ಈ ಆದೇಶವನ್ನು ಎಲ್ಲ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಪೊಲೀಸ್ ಮಹಾನಿರ್ದೇಶಕರು(ಡಿಜಿಪಿ), ಡಿಜಿಪಿ ಹೋಮ್ ಗಾರ್ಡ್, ಡಿಜಿಪಿ ಕಾರಾಗೃಹ ಮತ್ತು ಸಂಬಂಧಪಟ್ಟ ಪ್ರತಿಯೊಬ್ಬ ಅಧಿಕಾರಿಯನ್ನು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಜಾರಿಗೊಳಿಸಲು ಸೂಚಿಸಿದೆ. ಇದನ್ನೂ ಓದಿ: ವೀಡಿಯೋ ಬಂದ್ ವಿಚಾರ – ಯಾರು ಏನೇ ಹೇಳಲಿ, ಈಗ ಮೊದಲಿನಂತೆ ನಿಯಮ ಇರಲಿದೆ: ಸಿಎಂ
Live Tv
[brid partner=56869869 player=32851 video=960834 autoplay=true]
ಈ ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಶಾಲೆ ಶಿಕ್ಷಕರು, ಇತರೆ ಇಲಾಖೆಗಳ ನೌಕರರು ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ. ಕೇವಲ ಫಾರ್ಮಲ್ಸ್ ಧರಿಸಲಷ್ಟೇ ಅವಕಾಶ. ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಅಂತ ಎಚ್ಚರಿಕೆ ನೀಡಿದ್ದಾರೆ. ಆದ್ರೆ ಕೆಲ ಸರ್ಕಾರಿ ಕಚೇರಿಯ ನೌಕರರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಹಾವೇರಿ: ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಶಂಕರ್ ಕಿಚಡಿ ಹಾಗೂ ಬಿ.ಸುಭಾಷ್ ಇವರಿಗೆ ಹಾವೇರಿ ಜಿಲ್ಲೆ ಬ್ಯಾಡಗಿ ಬ್ಯಾಡ್ಮಿಂಟನ್ ಕ್ಲಬ್‍ನ ಸದಸ್ಯರು ಅಭಿನಂದಿಸಿದ್ದಾರೆ.
ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಜಿಲ್ಲಾ ಮಟ್ಟದ ಸ್ಫರ್ಧೆಗಳಲ್ಲಿ ಶಂಕರ ಕಿಚಡಿ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸನಲ್ಲಿಯೂ ಪುರುಷರ 400 ಮೀ ಮತ್ತು 800 ಮೀ ರನ್ನಿಂಗ್‍ನಲ್ಲಿ ಬಿ. ಸುಭಾಷ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪುರುಷರ ಬ್ಯಾಡ್ಮಿಂಟನ್ ಡಬಲ್ಸ್‍ನಲ್ಲಿ ಶಂಕರ ಕಿಚಡಿ ಶಂಭು ಬಿದರಕಟ್ಟಿ ಅವರೊಂದಿಗೆ ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಿವಮೊಗ್ಗ: ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ಕೊಟ್ಟರು.
ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘ ಸಂಯುಕ್ತಾಶ್ರಯದಲ್ಲಿ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಲಾಗಿತ್ತು. ಈ ವೇಳೆ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲೇ ನಮ್ಮ ರಾಜ್ಯ ಸರ್ಕಾರಿ ನೌಕರರು ದಕ್ಷ ಅಧಿಕಾರಿಗಳೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೆ ಹಲವಾರು ದಶಕಗಳಿಂದ ಸೇವೆ ಸಲ್ಲಿಸಿದ ಹಿರಿಯ ಸರ್ಕಾರಿ ಅಧಿಕಾರಿ ಅಥವಾ ನೌಕರರ ಶ್ರಮವೇ ಕಾರಣವಾಗಿದೆ. ಅವರನ್ನು ಈ ಸಮಯದಲ್ಲಿ ಸ್ಮರಿಸುತ್ತಾ ಅಭಿನಂದಿಸುತ್ತೇನೆ. ಈ ಪರಂಪರೆ ಹೀಗೆ ಮುಂದುವರೆಸುವ ಕರ್ತವ್ಯ ಮತ್ತು ನೈತಿಕ ಜವಾಬ್ದಾರಿ ನಿಮ್ಮ ಮೇಲಿದೆ. ನಮ್ಮ ಜವಾಬ್ದಾರಿಯನ್ನು ಸ್ಪಷ್ಟವಾಗಿ ತಿಳಿದುಕೊಂಡಲ್ಲಿ ನಮ್ಮ ಕರ್ತವ್ಯಕ್ಕೆ ನ್ಯಾಯ ಒದಗಿಸಬಹುದಾದ್ದರಿಂದ ಆಡಳಿತ ಯಂತ್ರದ ಬಗ್ಗೆ ಸ್ಪಷ್ಟತೆ ಇರಬೇಕು ಎಂದರು. ಇದನ್ನೂ ಓದಿ: ಕಲಬುರಗಿಯಲ್ಲಿ ನಾಳೆಯಿಂದ 2 ದಿನ ಬಿಜೆಪಿ ಕೋರ್ ಕಮಿಟಿ ಸಭೆ – ಸಿಎಂ ಸೇರಿ ಹಲವರು ಭಾಗಿ
ಆಳುವುದೇ ಬೇರೆ ಮತ್ತು ಆಡಳಿತ ಮಾಡುವುದೇ ಬೇರೆ. ಆದ್ದರಿಂದ ನಾವು ಈ ಎರಡರ ನಡುವಿನ ವ್ಯತ್ಯಾಸ ಸ್ಪಷ್ಟಪಡಿಸಿಕೊಳ್ಳಬೇಕು. ನಮ್ಮ ಪಾತ್ರವನ್ನು ನಿಷ್ಠೆಯಿಂದ ನಿರ್ವಹಿಸಿದಲ್ಲಿ ನಾವು ಇಡೀ ರಾಜ್ಯದ ಜನತೆಗೆ ಅಭಿವೃದ್ದಿಯ ಫಲ ನೀಡಲು ಸಾಧ್ಯ. ಜವಾನನಿಂದ ಹಿಡಿದು ಅಧಿಕಾರಿಯವರೆಗೆ ತಮ್ಮ ಅಧಿಕಾರವನ್ನು ಜನಪರವಾಗಿ ಬಳಸಬೇಕು ಎಂದರು.
ಕಾನೂನು ಬದ್ಧವಾಗಿ ಕೆಲಸ ಮಾಡಬೇಕು. ವಿವೇಚನೆ ಬಳಸುವ ಸಂದರ್ಭದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿ ಪರವಾಗಿ ಚಿಂತಿಸಿ ನಿರ್ಣಯ ಕೈಗೊಳ್ಳಬೇಕು. ಶ್ರೀಮಂತನ ಪರವಾಗಿ ಅಲ್ಲ. ಬಡವರು, ಜನ ಸಾಮಾನ್ಯರ ಪರವಾದ ನಿರ್ಣಯ ಕೈಗೊಳ್ಳಬೇಕು ಎಂದರು.
ಆಡಳಿತ ಸುಧಾರಣೆ 2ನೇ ಆಯೋಗದಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬದಲಾಗುತ್ತಿರುವ ಜಾಗತಿಕ ವಿದ್ಯಮಾನಗಳು ಸರ್ಕಾರದ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ನಾವು ಸರ್ಕಾರಿ, ಖಾಸಗಿ ಎಲ್ಲರ ಸಹಭಾಗಿತ್ವದಲ್ಲಿ ಕೆಲಸ ಮಾಡಬೇಕಿದೆ. ಈಗ ನಮ್ಮ ಚಿಂತನೆ, ಕಾರ್ಯವೈಖರಿಗಳು ಬದಲಾಗಬೇಕು ಎಂದು ಸಂದೇಶ ಕೊಟ್ಟರು.
ಗ್ರಾ.ಪಂಯಿಂದ ಹಿಡಿದು ವಿಧಾನಸೌಧದವರೆಗೆ ಈ ತಂತ್ರಜ್ಞಾನ ಬಳಕೆಯ ವ್ಯವಸ್ಥೆ ಬಂದಿದೆ. ನೀವು ನಿಗದಿತ ಅವಧಿಯಲ್ಲಿ ಕೈಗೊಳ್ಳುವ ನಿರ್ಧಾರ ನಿಮ್ಮ ಜನಪರ ಕಳಕಳಿಯನ್ನು ತೋರುತ್ತದೆ. ಜನರ ಓಡಾಟ ತಪ್ಪಿಸುತ್ತದೆ. ಭ್ರಷ್ಟರನ್ನಾಗಿಸುವುದನ್ನು ತಪ್ಪಿಸುತ್ತದೆ. ಆರೋಪವನ್ನು ತಪ್ಪಿಸುತ್ತದೆ. ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥೆಯನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುತ್ತವೆ ಎಂದು ಎಚ್ಚರಿಕೆ ಕೊಟ್ಟರು.
ನಾವು ನಮ್ಮ ಸಾಮಾಜಿಕ, ಜನಪರ ಕೆಲಸ, ಕಾರ್ಯಕ್ಷಮತೆಯ ಮೂಲಕ ಉತ್ತರ ನೀಡಬೇಕು. ಅದನ್ನು ನಾನು ನಿಮ್ಮಿಂದ ಬಯಸುತ್ತಿದ್ದೇನೆ. ಬನ್ನಿ ಬದಲಾವಣೆ ಮಾಡೋಣ. ಆಡಳಿತ ಯಂತ್ರದಲ್ಲಿ ಬದಲಾವಣೆ ಮಾಡೋಣ. ಆಳುವ ರೀತಿಯನ್ನು ಬದಲಾಯಿಸೋಣ, ಜನಸಾಮಾನ್ಯರ ಬಳಿಗೆ ವ್ಯವಸ್ಥೆಯನ್ನು ಕೊಂಡೊಯ್ಯೋಣ. ಬಡವರು, ರೈತರು, ದೀನ-ದಲಿತರು ಸೇರಿದಂತೆ ಎಲ್ಲರ ಅಭಿವೃದ್ದಿಗಾಗಿ ಸ್ಥಿತಪ್ರಜ್ಞೆ ಮತ್ತು ಸಮಯಪ್ರಜ್ಞೆಯಿಂದ ಕೆಲಸ ಮಾಡೋಣವೆಂದು ಕರೆ ನೀಡಿದರು. ಇದನ್ನೂ ಓದಿ: ಬಸವಣ್ಣನಂತೆ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ: ದೇಶಿಕೇಂದ್ರ ಮಹಾಸ್ವಾಮಿಜೀ
ಪ್ರಸ್ತುತ ರಾಜ್ಯದಲ್ಲಿ 2 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇದ್ದರೂ, ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡು ಅಧಿಕಾರಿ/ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಸರ್ಕಾರಿ ನೌಕರರಿಗೆ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಪರಿಶ್ರಮವೂ ಕಾರಣವಾಗಿದೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಆರಗ ಜ್ಞಾನೇಂದ್ರ, ಡಾ.ಅಶ್ವಥನಾರಾಯಣ, ಭೈರತಿ ಬಸವರಾಜ್ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಅಶೋಕ್‍ನಾಯ್ಕ್, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹಾಜರಿದ್ದರು.
ಲಕ್ನೋ: ಸಚಿವರು ಇನ್ನು ಮುಂದೆ ರಾಜ್ಯದ ಜಿಲ್ಲೆಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೊಟೇಲ್‌ಗಳಲ್ಲಿ ಉಳಿದುಕೊಳ್ಳುವ ಬದಲು ಗೆಸ್ಟ್ ಹೌಸ್‌ಗಳಲ್ಲಿ ಉಳಿದುಕೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.
ಯೋಗಿ ಆದಿತ್ಯನಾಥ್ ತಮ್ಮ ನಿವಾಸದಲ್ಲಿ ನಡೆದ 9ನೇ ತಂಡದ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ, ಸರ್ಕಾರಿ ಅಧಿಕಾರಿಗಳು ಕಚೇರಿ ಕೆಲಸಗಳ ಸಂದರ್ಭದಲ್ಲಿ ಹೆಚ್ಚು ಸಮಯವನ್ನು ಊಟದಲ್ಲಿಯೇ ಕಳೆಯುತ್ತಾರೆ ಎಂಬ ದೂರುಗಳು ಕೇಳಿ ಬಂದಿವೆ. ಹೀಗಾಗಿ ಊಟದ ವಿರಾಮ 30 ನಿಮಿಷ ಮೀರದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ದುರಂತ – 6 ಮಂದಿಯ ಕುಟುಂಬಕ್ಕೆ 25 ಲಕ್ಷ ಪರಿಹಾರ
ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಮಧ್ಯಾಹ್ನ 1:30 ರಿಂದ 2:00 ಗಂಟೆಯವರೆಗೆ ಊಟದ ವಿರಾಮ ಇರುತ್ತದೆ. ಆದರೆ ಕೆಲವರು ಊಟದ ವಿರಾಮವನ್ನು ಹೆಚ್ಚು ಸಮಯ ತೆಗೆದುಕೊಂಡು ಬಳಿಕ ತಮ್ಮ ಕಚೇರಿಗಳಿಗೆ ಹಿಂತಿರುಗುತ್ತಾರೆ. ಹೀಗಾಗಿ ಎಲ್ಲರೂ 30 ನಿಮಿಷಗಳ ಊಟದ ವಿರಾಮವನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ನೌಕರರು ಸರಿಯಾದ ಸಮಯಕ್ಕೆ ಹಾಜರಿರಬೇಕು. ಒಂದು ವೇಳೆ ತಡವಾಗಿ ಕಚೇರಿಗೆ ಬಂದಲ್ಲಿ ಅವರನ್ನು ಸ್ವೀಕರಿಸಲಾಗುವುದಿಲ್ಲ. ಹಿರಿಯ ಅಧಿಕಾರಿಗಳು ನಿತ್ಯ ಕಚೇರಿಗಳಲ್ಲಿ ದಿಢೀರ್ ತಪಾಸಣೆ ನಡೆಸಬೇಕು. ಈ ಬಗ್ಗೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು. ಇದನ್ನೂ ಓದಿ: ಮುಸ್ಲಿಮರು ಬಿಜೆಪಿ ವಿರೋಧಿಸುವುದನ್ನು ನಿಲ್ಲಿಸಬೇಕು: ಮುಸ್ಲಿಂ ಧರ್ಮಗುರು ಸಲಹೆ
ಇದರೊಂದಿಗೆ ಸಾರ್ವಜನಿಕರು ನೀಡುವ ದೂರುಗಳ ಬಗ್ಗೆ ತಕ್ಷಣವೇ ಗಮನಹರಿಸಬೇಕು. ಯಾವುದೇ ಕಡತಗಳು 3 ದಿನಗಳಿಗೂ ಹೆಚ್ಚು ದಿನ ಬಾಕಿಯಿಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆಪ್ತ ಸಹಾಯಕರನ್ನಾಗಿ ಸಂಬAಧಿಗಳನ್ನು ನೇಮಕ ಮಾಡಬೇಡಿ ಎಂದು ಸಂಪುಟದ ಮಂತ್ರಿಗಳಿಗೆ ಯೋಗಿ ಸೂಚಿಸಿದ್ದಾರೆ.
ಸರ್ಕಾರಿ ಕೆಲಸಗಳು ತಡವಾಗಿ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಈ ಕ್ರಮವನ್ನು ಕೈಗೊಂಡಿದ್ದಾರೆ.
ಭುವನೇಶ್ವರ: ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಒಡಿಶಾದ ಸರ್ಕಾರಿ ನೌಕರರು ಒಂದು ವಾರ ರಜೆ ತೆಗೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.
ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸಿದ ಬಳಿಕ ರಜೆಯನ್ನು ತೆಗೆದುಕೊಳ್ಳಬಹುದು. ಪ್ರಸ್ತುತ ಕೊರೊನಾ ಮೂರನೇ ಅಲೆ ಇರುವುದರಿಂದ ಯಾವುದೇ ಉದ್ಯೋಗಿ ಕೊರೊನಾ ಸೋಂಕಿಗೆ ಒಳಗಾದಲ್ಲಿ 7 ದಿನಗಳವರೆಗೂ ರಜೆಯನ್ನು ನೀಡಲು ನಿರ್ಧರಿಸಲಾಗಿದೆ. ಈ ನಿರ್ದೇಶನವು ತಕ್ಷಣವೇ ಜಾರಿ ಬರಲಿದೆ ಎಂದು ಅಧಿಸೂಚನೆ ಹೊರಡಿಸಲಾಗಿದೆ. ಈ ಮುನ್ನ ಕೊರೊನಾ ವೈರಸ್ ಪಾಸಿಟಿವ್ ಹೊಂದಿರುವ ಸರ್ಕಾರಿ ನೌಕರರಿಗೆ 14 ದಿನಗಳವರೆಗೂ ರಜೆ ನೀಡಲಾಗುತ್ತಿತ್ತು. ಇದನ್ನೂ ಓದಿ: ಅಯೋಧ್ಯೆ ಅಲ್ಲ, ಗೋರಖ್‌ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ
ಮತ್ತೊಂದೆಡೆ ಕೆಲವು ದಿನಗಳ ಹಿಂದೆಯಷ್ಟೇ ವಿಕಲಾಂಗರಿಗೆ ಮತ್ತು ನಗರ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ಗರ್ಭಿಣಿಯರಿಗೆ ವರ್ಕ್ ಫ್ರಮ್ ಹೋಮ್ ಮಾಡಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅವಕಾಶ ನೀಡಿತ್ತು. ಈ ನೌಕರರು ಇನ್ನು ಮುಂದೆ ಕಚೇರಿಗಳಿಗೆ ಹಾಜರಾಗುವ ಅಗತ್ಯವಿಲ್ಲ ಎಂದು ಡಿಡಿಎಂಎ ತಿಳಿಸಿತ್ತು.
ಪಿಎಸ್‍ಯುಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ಕಚೇರಿಗಳಿಗೆ ಆಗಮಿಸುವ ಅಂಗವಿಕಲರು ಮತ್ತು ಗರ್ಭಿಣಿಯರಿಗೆ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕಚೇರಿಗೆ ಆಗಮಿಸುವ ಬದಲಾಗಿ ಮನೆಯಲ್ಲಿಯೇ ಕೆಲಸ ಮಾಡಲು ವಿನಾಯಿತಿ ನೀಡಲಾಗಿದೆ. ಇದನ್ನೂ ಓದಿ: ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪಂಜಾಬ್ ಸಿಎಂ ಮನವಿ ಪತ್ರ