Tag: ಸರ್ಕಾರಿ ಬಸ್

  • ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಐವರು ಸಾವು, 60 ಮಂದಿಗೆ ಗಾಯ

    ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಐವರು ಸಾವು, 60 ಮಂದಿಗೆ ಗಾಯ

    ಚೆನ್ನೈ: ಶನಿವಾರ ಮುಂಜಾನೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್ (Government Bus) ಮತ್ತು ಓಮ್ನಿಬಸ್ (Omnibus) ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆಯಿಂದ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಮಾರು 10 ಅಂಬುಲೆನ್ಸ್‌ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ತಲುಪಿಸಲು ಸಹಾಯ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿ-ಜೈಪುರ್ ಹೈವೇಯಲ್ಲಿ ಸರಣಿ ಅಪಘಾತ – ನಾಲ್ವರ ದುರ್ಮರಣ

    ಸಮೀಪದ ಚೆಟ್ಟಿಯಪ್ಪನೂರಿನಲ್ಲಿ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿಬಸ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕರಿಗೆ 85 ಕೋಟಿ ರೂ. ಫಂಡಿಂಗ್ – ಪ್ರಕರಣಕ್ಕೆ ದುಬೈ ಲಿಂಕ್

    ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್‌ಇಟಿಸಿ ಬಸ್ ಚಾಲಕ ಕೆ ಎಲುಮಲೈ (47) ಮತ್ತು ಚಿತ್ತೂರಿನ ಬಿ ಅಜಿತ್ (25) ಸ್ಥಳದಲ್ಲೇ ಮೃತಪಟ್ಟರೆ, ಓಮ್ನಿಬಸ್ ಚಾಲಕ ಎನ್ ಸೈಯದ್ ನಂತರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಡುಗೆ ಮಾಡುವ ಕುಕ್ಕರ್‌ನಲ್ಲೇ ಡ್ರಗ್ಸ್ ತಯಾರಿ – ಬೆಂಗಳೂರಲ್ಲಿ ಪೆಡ್ಲರ್ ಅರೆಸ್ಟ್

    ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಎಸ್‌ಇಟಿಸಿ ಬಸ್ ಮೀಡಿಯನ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಓಮ್ನಿಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳನ್ನು ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆಗೆ ಮತ್ತು ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಾಜಿ ಶಾಸಕ ರಘುಪತಿ ಪತ್ನಿ ಆತ್ಮಹತ್ಯೆ ಕೇಸ್‌ – ಆರೋಪಿ ಅತುಲ್ ರಾವ್‌ಗೆ 1 ವರ್ಷ ಜೈಲು

  • ಗಂಟೆಗಟ್ಟಲೆ ಮೊಬೈಲ್‍ನಲ್ಲಿ ಮಾತಾಡ್ಕೊಂಡು ಒಂದೇ ಕೈಯಲ್ಲಿ ಡ್ರೈವಿಂಗ್- ಬಸ್ ಚಾಲಕನ ವಿರುದ್ಧ ಆಕ್ರೋಶ

    ಗಂಟೆಗಟ್ಟಲೆ ಮೊಬೈಲ್‍ನಲ್ಲಿ ಮಾತಾಡ್ಕೊಂಡು ಒಂದೇ ಕೈಯಲ್ಲಿ ಡ್ರೈವಿಂಗ್- ಬಸ್ ಚಾಲಕನ ವಿರುದ್ಧ ಆಕ್ರೋಶ

    ಕಲಬುರಗಿ: ಯಾವುದೇ ವಾಹನ ಚಲಾಯಿಸುವಾಗ ಚಾಲಕರು ಮೊಬೈಲ್ (Bus Driver Mobile) ಬಳಕೆ ಮಾಡಬಾರದು ಎಂಬ ನಿಯಮವಿದೆ. ಆದರೆ ಇಲ್ಲೊಬ್ಬ ಬಸ್ ಚಾಲಕ ಮೊಬೈಲ್‍ನಲ್ಲಿ ಮಾತನಾಡುತ್ತಾ ಒಂದೇ ಕೈಯಿಂದ ಬಸ್ ಓಡಿಸಿ ಪ್ರಯಾಣಿಕರನ್ನು ಆತಂಕಕ್ಕೀಡು ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.

    ಈ ಘಟನೆ ಪ್ರತನಿತ್ಯ ಅಫಜಲಪುರದಿಂದ ಕಲಬುರಗಿ ಮಧ್ಯೆ ಸಂಚರಿಸುವ ಸರ್ಕಾರಿ ಬಸ್ಸಿನಲ್ಲಿ ನಡೆದಿದೆ. ಅಫಜಲಪುರ ಘಟಕದ ಕೆಎ-32 ಎಫ್ 2169 ಬಸ್ ಚಾಲಕ ನಾಗೇಂದ್ರಪ್ಪ ಇಂದು ಒಂದೇ ಕೈಯಲ್ಲಿ ಬಸ್ ಓಡಿಸಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದವರು.

    ನಾಗೇಂದ್ರಪ್ಪ ಗಂಟೆಗಟ್ಟಲೇ ಫೋನಿನಲ್ಲಿ ಮಾತನಾಡುತ್ತಾ ಒಂದೇ ಕೈಯಲ್ಲಿ ಬಸ್ ಓಡಿಸುತ್ತಿದ್ದರು. ಇದನ್ನು ಕಂಡು ಗಾಬರಿಗೊಂಡ ಪ್ರಯಾಣಿಕನೋರ್ವ ತನ್ನ ಮೊಬೈಲ್‍ನಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾನೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಅಲ್ಲದೆ ಚಾಲಕನ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಪಾಕಿಸ್ತಾನದ ಅಣ್ವಸ್ತ್ರಗಳು ಎಲ್ಲಾ ಮುಸ್ಲಿಮರಿಗೆ ಸೇರಿದ್ದು: ಷರಿಫ್‌ ಅಳಿಯ

    ಹೀಗೆ ಮೊಬೈಲ್‍ನಲ್ಲಿ ಮಾತನಾಡಿಕೊಂಡು ಹೋಗಿ ಚಾಲಕ ಸ್ವಲ್ಪ ಯಾಮಾರಿದರೆ ಪ್ರಯಾಣಿಕರ ಕಥೆ ಏನು ಎಂದು ಪ್ರಶ್ನಿಸಿದರುವ ಸಾರ್ವಜನಿಕರು, ಚಾಲಕ ನಾಗೇಂದ್ರಪ್ಪನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ʻಶಕ್ತಿʼ ಪ್ರದರ್ಶನ; ಮತ್ತೊಬ್ಬನ ಮೇಲೇರಿ ಕಿಟಕಿಯಿಂದ ನುಗ್ಗಿ, ಬಸ್‌ನಲ್ಲಿ ಸೀಟು ಗಿಟ್ಟಿಸಿಕೊಂಡ ಮಹಿಳೆ

    ʻಶಕ್ತಿʼ ಪ್ರದರ್ಶನ; ಮತ್ತೊಬ್ಬನ ಮೇಲೇರಿ ಕಿಟಕಿಯಿಂದ ನುಗ್ಗಿ, ಬಸ್‌ನಲ್ಲಿ ಸೀಟು ಗಿಟ್ಟಿಸಿಕೊಂಡ ಮಹಿಳೆ

    ರಾಯಚೂರು: ಇಡೀ ರಾಷ್ಟ್ರದ ಗಮನ ಸೆಳೆದಿದ್ದ ಕಾಂಗ್ರೆಸ್‍ನ ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ಶಕ್ತಿ ಯೋಜನೆಗೆ (Shakthi Scheme) ಈಗಲೂ ಮಹಿಳಾ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

    ಕಳೆದ ಆ.29ರ ವರೆಗೆ 48.50 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿ, ಪ್ರಯೋಜನ ಪಡೆದಿದ್ದಾರೆ. ಆದ್ರೆ ಬಸ್ಸಿನಲ್ಲಿ ಸೀಟಿಗಾಗಿ ಮಹಿಳೆಯರು ಕಿತ್ತಾಡೋದನ್ನ ಮಾತ್ರ ಬಿಟ್ಟಿಲ್ಲ. ರಾಯಚೂರು ಜಿಲ್ಲೆಯ ಲಿಂಗಸುಗೂರು ಬಸ್‌ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ಸೀಟಿಗಾಗಿ ಹರಸಾಹಸ ನಡೆಸಿದ್ದಾಳೆ.‌ ಕೊನೆಗೆ ಮತ್ತೊಬ್ಬ ವ್ಯಕ್ತಿಯ ಬೆನ್ನಿನ ಮೇಲೆ ಹತ್ತಿ, ಕಿಟಕಿ ಮೂಲಕ ಬಸ್‌ ಏರಿ ಸೀಟು ಗಿಟ್ಟಿಸಿಕೊಂಡಿದ್ದಾಳೆ. ಇದನ್ನೂ ಓದಿ: ಸಂಸದ ಸ್ಥಾನದಿಂದ ಪುತ್ರ ಅನರ್ಹತೆ ಬೆನ್ನಲ್ಲೇ ಶಾಸಕ ಹೆಚ್‌.ಡಿ.ರೇವಣ್ಣಗೆ ಹೈಕೋರ್ಟ್‌ ಸಮನ್ಸ್‌

    ರಾಯಚೂರು-ಬಾಗಲಕೋಟೆ ಮಾರ್ಗದ ಬಸ್ ಹತ್ತಲು ಬಂದಿದ್ದ ಮಹಿಳೆ ಮುಂಭಾಗದ ಡೋರ್‌ನಲ್ಲಿ ರಶ್‌ ಆಗಿದ್ದನ್ನ ಕಂಡಿದ್ದಾಳೆ. ಹಾಗಾಗಿ ಕಿಟಕಿ ಮೂಲಕ ಬ್ಯಾಗನ್ನು ಒಳಗೆ ತೂರಿಸಿ ಸೀಟು ಹಿಡಿಯಲು ಮುಂದಾಗಿದ್ದಾಳೆ. ಮತ್ತೊಬ್ಬ ವ್ಯಕ್ತಿಯ ಬೆನ್ನಿನ ಮೇಲೆ ನಿಂತು ಕಿಟಕಿ ಮೂಲಕ ನುಗ್ಗಿದ್ದಾಳೆ. ಈ ವೇಳೆ ಕೆಲ ಕಾಲ ಕಿಟಕಿಯಲ್ಲೇ ಸಿಕ್ಕಿಕೊಂಡು ಪರದಾಟ ಸಹ ನಡೆಸಿದ್ದಾಳೆ. ಈ ಹಾಸ್ಯಾಸ್ಪದ ದೃಶ್ಯ ಇದೀಗ ಜಾಲತಾಣದಲ್ಲಿ ಸಖತ್‌ ಸದ್ದು ಮಾಡ್ತಿದೆ. ಇದನ್ನೂ ಓದಿ: ʻಗೃಹಲಕ್ಷ್ಮಿʼ ಯೋಜನೆಗೆ ಅದ್ಧೂರಿ ಚಾಲನೆ – ನುಡಿದಂತೆ ನಡೆದಿದ್ದೇವೆ, ಕರ್ನಾಟಕ ದಿವಾಳಿಯಾಗಿಲ್ಲ ಮೋದಿಯವರೇ: ಸಿಎಂ

    Web Stories

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಓವರ್‌ಲೋಡ್‌ನಿಂದ ಕೊಳಕ್ಕೆ ಉರುಳಿದ ಬಸ್ – 17 ಮಂದಿ ಸಾವು, 35 ಮಂದಿಗೆ ಗಾಯ

    ಓವರ್‌ಲೋಡ್‌ನಿಂದ ಕೊಳಕ್ಕೆ ಉರುಳಿದ ಬಸ್ – 17 ಮಂದಿ ಸಾವು, 35 ಮಂದಿಗೆ ಗಾಯ

    ಢಾಕಾ: ಬಸ್‌ವೊಂದು ಕೊಳಕ್ಕೆ ಉರುಳಿದ ಪರಿಣಾಮ ಮೂರು ಮಕ್ಕಳೂ ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದು 35 ಮಂದಿ ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ (Bangladesh) ಜಲಕತಿ ಸದರ್ ಉಪಜಿಲಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಂಢಾರಿಯಾದಿಂದ ಹೊರಟಿದ್ದ ಬಸ್ (Government Bus) ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದ್ದಂತೆ ಕೊಳಕ್ಕೆ ಉರುಳಿದೆ. ಬಸ್ ಮಿತಿಮೀರಿ ಜನರನ್ನ ತುಂಬಿದ್ದರಿಂದ ಕೊಳದಲ್ಲಿ ಮುಳುಗಿದೆ. ನಾನು ಹರಸಾಹದ ಮಾಡಿ ಹೊರಬಂದೆ ಎಂದು ಬದುಕುಳಿದ ಸಂತ್ರಸ್ತ ಮೊಮಿನ್ ಹೇಳಿದ್ದಾರೆ. ಇದನ್ನೂ ಓದಿ: ಪ್ರಿಯಕರನಿಗಾಗಿ 6 ವರ್ಷದ ಮಗಳೊಂದಿಗೆ ಭಾರತಕ್ಕೆ ಹಾರಿಬಂದ 49ರ ಪೋಲೆಂಡ್‌ ಮಹಿಳೆ

    17 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಫಿರೋಜ್‌ಪುರದ ಭಂಡಾರಿಯಾ ಉಪಜಿಲಾ ಮತ್ತು ಜಲ್ಕತಿಯ ರಾಜಾಪುರ ಪ್ರದೇಶದ ನಿವಾಸಿಗಳು ಹೆಚ್ಚಿನವರಿದ್ದಾರೆ ಎಂದು ಬಾರಿಶಾಲ್ ವಿಭಾಗೀಯ ಆಯುಕ್ತ ಎಂ.ಡಿ ಶೌಕತ್ ಅಲಿ ತಿಳಿಸಿದ್ದಾರೆ.

    ಬಾಂಗ್ಲಾದೇಶದಲ್ಲಿ ರಸ್ತೆ ಅಪಘಾತಗಳು ಸಾಮಾನ್ಯವಾಗಿಬಿಟ್ಟಿವೆ. ರೋಡ್ ಸೇಫ್ಟಿ ಫೌಂಡೇಶನ್ ಪ್ರಕಾರ, ಕಳೆದ ಜೂನ್‌ನಲ್ಲಿ ಒಟ್ಟು 559 ರಸ್ತೆ ಅಪಘಾತಗಳು ಸಂಭವಿಸಿದ್ದು ಅಪಘಾತಗಳಲ್ಲಿ 562 ಜನರು ಸಾವನ್ನಪ್ಪಿದ್ದು, 812 ಜನರು ಗಾಯಗೊಂಡಿದ್ದಾರೆ. ದೇಶಾದ್ಯಂತ ನಡೆದ 207 ಮೋಟಾರ್‌ಸೈಕಲ್ ಅಪಘಾತಗಳಲ್ಲಿ 169 ಜನರು ಸಾವನ್ನಪ್ಪಿದ್ದಾರೆ ಅದರಲ್ಲಿ 78 ಮಹಿಳೆಯರು ಮತ್ತು 114 ಮಕ್ಕಳೂ ಸೇರಿದ್ದಾರೆ ಎಂಬುದು ತಿಳಿದುಬಂದಿದೆ.

    ಜಲಮಾರ್ಗಗಳಲ್ಲಿ ನಡೆದ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, 7 ಮಂದಿ ನಾಪತ್ತೆಯಾಗಿದ್ದಾರೆ. ಅದೇ ಸಮಯದಲ್ಲಿ 21 ರೈಲ್ವೆ ಅಪಘಾತಗಳು ಸಂಭವಿಸಿದ್ದು 18 ಜನ ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿರುವುದಾಗಿ ವರದಿಗಳು ಹೇಳಿವೆ. ಜೊತೆಗೆ 38 ಪ್ರಾಣಿಗಳು ಬಲಿಯಾಗಿವೆ. ಇದನ್ನೂ ಓದಿ: ಮಣಿಪುರದಲ್ಲಿ ನಡೆದ ಘಟನೆ ದುಃಖಕರ – ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಬ್ರಿಜ್‌ ಭೂಷಣ್‌ ಸಿಂಗ್‌ ಖಂಡನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೊಯ್ಸಳಲು ಗ್ರಾಮಕ್ಕೆ 75 ವರ್ಷಗಳ ಬಳಿಕ ಬಂತು ಸರ್ಕಾರಿ ಬಸ್

    ಹೊಯ್ಸಳಲು ಗ್ರಾಮಕ್ಕೆ 75 ವರ್ಷಗಳ ಬಳಿಕ ಬಂತು ಸರ್ಕಾರಿ ಬಸ್

    ಚಿಕ್ಕಮಗಳೂರು: ರಾಜ್ಯವನ್ನಾಳಿದ ಹಲವು ರಾಜ ಮನೆತನಗಳಲ್ಲಿ ಹೊಯ್ಸಳ ಮನೆತನ (Hoysala Empire) ಕೂಡ ಒಂದು. ಅಂತಹ ಹೊಯ್ಸಳ ರಾಜರ ಮೂಲ ಸ್ಥಾನವಾದ ಹೊಯ್ಸಳಲು (Hoysalalu) ಗ್ರಾಮದಲ್ಲಿ ಸ್ವಾತಂತ್ರ‍್ಯ ಸಿಕ್ಕಿ 75 ವರ್ಷಗಳ ಬಳಿಕ ಮೊದಲ ಬಾರಿಗೆ ಸರ್ಕಾರಿ ಬಸ್ (Government Bus) ಓಡಿದೆ.

    ದಶಕಗಳ ಮನವಿ ಹಾಗೂ ಹೋರಾಟದ ಬಳಿಕ ಅಂತೂ ಇಂತು ನಮ್ಮ ಊರಿಗೆ ಸರ್ಕಾರಿ ಬಸ್ ಬಂತೆಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ರಾಜವಂಶ ಹೊಯ್ಸಳರ ಮೂಲಸ್ಥಾನ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊಯ್ಸಳಲು ಗ್ರಾಮ. ಈ ಗ್ರಾಮದಲ್ಲಿ ಹೊಯ್ಸಳರ ಕಾಲದಲ್ಲಿ ನಿರ್ಮಾಣವಾಗಿದ್ದ ದೇವಾಲಯ ಇಂದಿಗೂ ಇದೆ.

    ಹೊಯ್ಸಳಲು ಗ್ರಾಮದಲ್ಲಿ ಸುಮಾರು 200ಕ್ಕೂ ಅಧಿಕ ಕುಟುಂಬಗಳಿವೆ. ಕಾಡಂಚಿನ ಈ ಕುಗ್ರಾಮ ಮೂಲಭೂತ ಸೌಕರ್ಯದಿಂದ ವಂಚಿತವಾಗಿತ್ತು. 75 ವರ್ಷಗಳಿಂದ ಅನೇಕ ಸರ್ಕಾರಗಳು ಬಂದು ಹೋದರು ಈ ಗ್ರಾಮದಲ್ಲಿ ಸರ್ಕಾರಿ ಬಸ್ ಓಡಿರಲಿಲ್ಲ. ಈ ಗ್ರಾಮದ ಇತರೆ ಸಮಸ್ಯೆಗಳಿಗೂ ಯಾವ ಸರ್ಕಾರಗಳು ಸ್ಪಂದಿಸಿರಲಿಲ್ಲ. ಬಡವರು-ಕೂಲಿ ಕಾರ್ಮಿಕರೇ ಹೆಚ್ಚಿರುವ ಮೂಲಭೂತ ಸೌಲಭ್ಯ ಹಾಗೂ ಸರ್ಕಾರಿ ಬಸ್ ಸೇವೆಗೆ ಹಲವು ದಶಕಗಳಿಂದ ಮನವಿ ಮಾಡುತ್ತಲೇ ಬಂದಿದ್ದರು. ಆದರೆ ಮಾಡುತ್ತೇವೆ ಅನ್ನೋ ಸರ್ಕಾರ ಹಾಗೂ ಜನನಾಯಕರು ಏನನ್ನೂ ಮಾಡಿರಲಿಲ್ಲ.

    ಬಿಸಿಲು, ಮಳೆ, ಚಳಿ, ಗಾಳಿ ಎನ್ನದೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು 5 ಕಿ.ಮೀ ನಡೆದುಕೊಂಡು ಬಂದು ಬಸ್ ಹಿಡಿದು ಶಾಲೆ, ಕಚೇರಿಗಳಿಗೆ ಹೋಗಬೇಕಾಗಿತ್ತು. ಇಲ್ಲಿನ ನಿವಾಸಿಗಳು ಮೂಡಿಗೆರೆಗೆ ನೂತನವಾಗಿ ಆಯ್ಕೆಯಾದ ಶಾಸಕಿ ನಯನಾ ಮೋಟಮ್ಮನವರಿಗೂ ಬಸ್‌ಗಾಗಿ ಮನವಿ ಸಲ್ಲಿಸಿದ್ದರು. ಇದೀಗ ಹೊಯ್ಸಳಲು ಗ್ರಾಮಕ್ಕೆ ಸರ್ಕಾರಿ ಬಸ್ ಬಂದಿರುವುದು ಗ್ರಾಮಸ್ಥರ ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಇದನ್ನೂ ಓದಿ: ಮಳೆಗಾಗಿ ವಿಚಿತ್ರವಾದ ಆಚರಣೆ- ಸ್ಮಶಾನದ ಗೋರಿಗಳಿಗೆ ನೀರುಣಿಸಿದ ಗ್ರಾಮಸ್ಥರು

    ಹೀಗಾಗಿ ಗ್ರಾಮಸ್ಥರು ಬಸ್ಸಿಗೆ ತಳಿರು ತೋರಣಗಳನ್ನು ಕಟ್ಟಿ ಸ್ವಾಗತಿಸಿಕೊಂಡಿದ್ದಾರೆ. ಬಸ್ಸಿನ ಬಾಗಿಲಿಗೆ ಟೇಪ್ ಹಾಕಿ, ಅದನ್ನು ಕತ್ತರಿಸುವ ಮೂಲಕ ಮತ್ತೆಂದು ನಿಲ್ಲದಿರಲಿ ಎಂದು ಸಂಚಾರಕ್ಕೆ ಅಡಿ ಇಟ್ಟಿದ್ದಾರೆ. ಹೊಯ್ಸಳಲು ಗ್ರಾಮಕ್ಕೆ ಸರ್ಕಾರಿ ಬಸ್ ಸೇವೆ ಸಿಕ್ಕಿರುವುದರಿಂದ ಶಕ್ತಿ ಯೋಜನೆಯು ಈ ಭಾಗದ ಬಡ ವರ್ಗದವರಿಗೆ ಅನುಕೂಲವಾಗಲಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ನೂರಾರು ಹಳ್ಳಿಗಳಿಗೆ ಇಂದಿಗೂ ಸರ್ಕಾರಿ ಬಸ್ ಸೌಲಭ್ಯವಿಲ್ಲ. ಹೀಗಾಗಿ ಸರ್ಕಾರ ಎಲ್ಲಾ ಭಾಗಕ್ಕೂ ಸರ್ಕಾರಿ ಬಸ್ ಬಿಡುವಂತೆ ಮಲೆನಾಡಿಗರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ಪಟ್ಟಿ ನೋಡಿದ್ರೆ ಎದೆ ನಡುಗುತ್ತೆ – ಹೆಚ್‌.ಡಿ ಕುಮಾರಸ್ವಾಮಿ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ʼಶಕ್ತಿʼ ಯೋಜನೆ ಉದ್ಘಾಟನೆ ಜೋಶ್‌ನಲ್ಲಿ ಸರ್ಕಾರಿ ಬಸ್ ಚಲಾಯಿಸಿ ಸ್ವಾಮೀಜಿ ಅಚಾತುರ್ಯ

    ʼಶಕ್ತಿʼ ಯೋಜನೆ ಉದ್ಘಾಟನೆ ಜೋಶ್‌ನಲ್ಲಿ ಸರ್ಕಾರಿ ಬಸ್ ಚಲಾಯಿಸಿ ಸ್ವಾಮೀಜಿ ಅಚಾತುರ್ಯ

    ವಿಜಯಪುರ: ಮಹಿಳೆಯರಿಗೆ ಉಚಿತ ಬಸ್ (Free Bus Travel) ಪ್ರಯಾಣಕ್ಕೆ ಚಾಲನೆ ನೀಡುವಾಗ ಸ್ವಾಮೀಜಿಯೊಬ್ಬರು ಅಚಾತುರ್ಯ ಎಸಗಿದ್ದಾರೆ. ಭಾನುವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿ ತಾವೇ ಸರ್ಕಾರಿ ಬಸ್ ಚಲಾಯಿಸಿದ್ದಾರೆ.

    ವಿಜಯಪುರ (Vijayapura) ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಸುಮಾರು 5 ಕಿ.ಮೀ ವರೆಗೆ ಸರ್ಕಾರಿ ಬಸ್‌ನ್ನು ಸ್ವಾಮೀಜಿ ಚಲಾಯಿಸಿದ್ದಾರೆ. ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ್ ಸ್ವಾಮೀಜಿ ಬಸ್ ಚಲಾಯಿಸಿ ಅಚಾತುರ್ಯ ಎಸಗಿದ್ದಾರೆ. ಇದನ್ನೂ ಓದಿ: ಉಚಿತ ಬಸ್‌ ಪ್ರಯಾಣದ ಮೊದಲ ಟಿಕೆಟ್‌ ಪಡೆದ ಅದೃಷ್ಟಶಾಲಿ ಮಹಿಳೆ ಇವರೇ..!

    ಸರ್ಕಾರಿ ಅಧಿಕಾರಿಗಳ ಸಮ್ಮುಖದಲ್ಲೇ ಬಸ್ ತೆಗೆದುಕೊಂಡು ಹೋಗಿ ಕೊಲ್ಹಾರ ಪಟ್ಟಣದಲ್ಲಿ ಸ್ವಾಮೀಜಿ ಸುತ್ತಾಡಿಸಿದ್ದಾರೆ. ಸ್ವಾಮೀಜಿ ಬಸ್ ಜಲಾಯಿಸುತ್ತಿದ್ದಂತೆ ಆತಂಕದಲ್ಲೇ ಪ್ರಯಾಣಿಕರು ಪ್ರಯಾಣಿಸಿದ್ದಾರೆ.

    ನಿಯಮದಂತೆ ಸರ್ಕಾರಿ ಚಾಲಕ ಬಿಟ್ಟು ಬೇರೆಯವರು ಸರ್ಕಾರಿ ಬಸ್ ಚಲಾಯಿಸುವಂತಿಲ್ಲ. ಬಸ್ ಚಲಾಯಿಸುವವರು ಕಡ್ಡಾಯವಾಗಿ ಹೇವಿ ಲೈಸನ್ಸ್ ಪಡೆದಿರಬೇಕು. ಸರ್ಕಾರಿ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರಿ ಬಸ್‌ನ್ನು ಕಲ್ಲಿನಾಥ ಸ್ವಾಮೀಜಿ ಚಲಾಯಿಸಿದ್ದಾರೆ. ಸ್ವಾಮೀಜಿಯ ಅಚಾತುರ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆ- ಮಂಜುನಾಥನ ಸನ್ನಿಧಿಗೆ ಮೊದಲ ಬಸ್ ಪ್ರಯಾಣ

  • ಉಡುಪಿ, ದ.ಕ, ಶಿವಮೊಗ್ಗದಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್

    ಉಡುಪಿ, ದ.ಕ, ಶಿವಮೊಗ್ಗದಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್

    ಉಡುಪಿ: ಸರ್ಕಾರಿ ಬಸ್‌ಗಳೊಂದಿಗೆ (Govt Bus) ಖಾಸಗಿ ಬಸ್‌ಗಳಲ್ಲಿಯೂ (Private Bus) ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು (Free Travel Facility) ಕಲ್ಪಿಸಬೇಕೆಂದು ಶಾಸಕ ಸುನಿಲ್ ಕುಮಾರ್ (Sunil Kumar) ಆಗ್ರಹಿಸಿದ್ದಾರೆ.

    ಕಾಂಗ್ರೆಸ್ ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಅನುಷ್ಠಾನಕ್ಕೆ ಬರುವುದಾಗಿ ನೂತನ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಸುನಿಲ್ ಕುಮಾರ್ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿನ ಜನರಿಗೆ ಇರಿಂದ ಅನ್ಯಾಯವಾಗಲಿದೆ ಎಂದು ಹೇಳಿದ್ದಾರೆ.

    ಟ್ವೀಟ್‌ನಲ್ಲೇನಿದೆ?
    ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್‌ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಬರೆದಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ – ರಾಮಲಿಂಗಾರೆಡ್ಡಿ ಭರವಸೆ

    ಎಲ್ಲಾ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ ಎನ್ನುವುದು ಕಾಂಗ್ರೆಸ್ ಸರ್ಕಾರದ ಪ್ರಣಾಳಿಕೆಯಾಗಿತ್ತು. ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿಗೆ ಬರುವುದರಲ್ಲಿ ಅನುಮಾನವೇ ಇಲ್ಲ. ಜೂನ್ 1 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಆರನೆಯ ಗ್ಯಾರಂಟಿ ಪಕ್ಕಾ: ಪ್ರಿಯಾಂಕ್ ಖರ್ಗೆ

  • ಅನಧಿಕೃತವಾಗಿ ಮಹಾರಾಷ್ಟ್ರ ಸರ್ಕಾರಿ ಬಸ್‍ನಲ್ಲಿ ಸಾಗಿಸ್ತಿದ್ದ 27.34 ಲಕ್ಷ ರೂ. ಜಪ್ತಿ

    ಅನಧಿಕೃತವಾಗಿ ಮಹಾರಾಷ್ಟ್ರ ಸರ್ಕಾರಿ ಬಸ್‍ನಲ್ಲಿ ಸಾಗಿಸ್ತಿದ್ದ 27.34 ಲಕ್ಷ ರೂ. ಜಪ್ತಿ

    ಬೆಳಗಾವಿ: ಮಹಾರಾಷ್ಟ್ರ (Maharastra) ಸರ್ಕಾರಿ ಬಸ್‍ನಲ್ಲಿ ಸಾಗಿಸುತ್ತಿದ್ದ 27.34 ಲಕ್ಷ ಹಣವನ್ನ ಬೆಳಗಾವಿ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

    ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿರುವ ಬೆಳಗಾವಿ ತಾಲೂಕಿನ ಬಾಚಿ ಚೆಕ್‍ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ಮಹಾರಾಷ್ಟ್ರದ ಸಾರಿಗೆ ಸಂಸ್ಥೆಯ ಬಸ್‍ನಲ್ಲಿ ಪಾಂಡುರಂಗ ಎಂಬವರು ಹಣ ಸಾಗಿಸುತ್ತಿದ್ದರು. ಇದನ್ನೂ ಓದಿ: ನರೇಗಾ ಬಿಲ್ ಪಾವತಿಗೆ ಗ್ರಾ.ಪಂ ಅಧಿಕಾರಿಯಿಂದ ಲಂಚಕ್ಕೆ ಬೇಡಿಕೆ- ಹಣವಿಲ್ಲದೆ ಎತ್ತುಗಳನ್ನು ನೀಡಲು ಮುಂದಾದ ರೈತ

    ಇತ್ತ ತಪಾಸಣೆಯ ಮಾಡುವ ಸಂದರ್ಭದಲ್ಲಿ ಟೂರಿಸ್ಟ್ ಬ್ಯಾಗ್‍ನಲ್ಲಿ 27 ಲಕ್ಷ 34 ಸಾವಿರ ಹಣ ಪತ್ತೆಯಾಗಿದೆ. ಸದ್ಯ ಹಣವನ್ನು ಜಪ್ತಿ ಮಾಡಿಕೊಂಡ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬಸ್ಸಿನ ರಾಡ್ ಸೊಂಟಕ್ಕೆ ತಾಗಿ ಮುರಿದೇ ಹೋಯ್ತು ವ್ಯಕ್ತಿಯ ಬೆನ್ನುಮೂಳೆ!

    ಬಸ್ಸಿನ ರಾಡ್ ಸೊಂಟಕ್ಕೆ ತಾಗಿ ಮುರಿದೇ ಹೋಯ್ತು ವ್ಯಕ್ತಿಯ ಬೆನ್ನುಮೂಳೆ!

    ಮಂಗಳೂರು: ರಸ್ತೆ ಅವ್ಯವಸ್ಥೆಯಿಂದಾಗಿ ಬಸ್ಸಿನ ರಾಡ್ ಸೊಂಟಕ್ಕೆ ತಾಗಿ ವ್ಯಕ್ತಿಯ ಬೆನ್ನು ಮೂಳೆ ಮುರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆದಿದೆ.

    ವಿಜಯ್ ಕುಮಾರ್ ಬೆನ್ನು ಮೂಳೆ ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ. ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿಯಾಗಿರುವ ಇವರು, ಮೊಬೈಲ್ ಟೆಕ್ನೀಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ. ಅಂತೆಯೇ ಇವರು ಮೊಬೈಲ್ ಬಿಡಿಭಾಗಕ್ಕಾಗಿ ಮಂಗಳೂರಿಗೆ ಬಂದಿದ್ದರು. ಮಂಗಳೂರಿನಿಂದ ಮತ್ತೆ ಬೆಳ್ಳಾರೆಗೆ ಹೋಗುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಕಲ್ಲಡ್ಕ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಈ ರಾಷ್ಟ್ರೀಯ ಹೆದ್ದಾರಿ ಬೃಹತ್ ಗುಂಡಿಗಳಿಂದ ಕೂಡಿದೆ. ವ್ಯಕ್ತಿ ಬಸ್ಸಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಸರ್ಕಾರಿ ಬಸ್ ರಸ್ತೆ ಗುಂಡಿಗೆ ಬಿದ್ದಿದೆ. ಈ ವೇಳೆ ವಿಜಯ್ ಸೀಟಿನಿಂದ ಮೇಲೆ ಹಾರಿದ್ದಾರೆ. ಪರಿಣಾಮ ಬಸ್ಸಿನ ರಾಡ್ ತಾಗಿ ವಿಜಯ್ ಕುಮಾರ್ ಬೆನ್ನಿಗೆ ಗಂಭೀರ ಪೆಟ್ಟು ಬಿದ್ದಿದೆ.

    ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯ್ ಅವರ ಬೆನ್ನು ಹುರಿ, ಕುತ್ತಿಗೆ ಭಾಗದ ಎಲುಬು ಜಖಂಗೊಂಡಿದೆ. ಬೆನ್ನು ಮೂಳೆ ಆಪರೇಷನ್ ಗೆ ವೈದ್ಯರು ಸೂಚಿಸಿದ್ದಾರೆ. ಸದ್ಯ ವಿಜಯ್ ಕುಮಾರ್ ಅವರು ಮಲಗಿದ ಸ್ಥಿತಿಯಲ್ಲೇ ಇದ್ದಾರೆ. ಇದನ್ನೂ ಓದಿ: ಎಸಿಬಿ ರದ್ದು; ಹೈಕೋರ್ಟ್‌ ಆದೇಶ ಪಾಲಿಸ್ತೀವಿ, ಸುಪ್ರೀಂಗೆ ಹೋಗಲ್ಲ – ಸಿಎಂ

    ಘಟನೆ ಸಂಬಂಧ ಬಸ್ ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಎಂದು ದೂರು ನೀಡಲಾಗಿದ್ದು, ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

    ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

    ಬೆಳಗಾವಿ: ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬೆಳಗಾವಿ ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ನಡೆದಿದೆ.

    ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಭಾರೀ ಮಳೆಗೆ ಕಣ್ಣೂರಿನಲ್ಲಿ ಗುಡ್ಡ ಕುಸಿತ – 2 ಮನೆಗಳಿಗೆ ಹಾನಿ

    ಸರ್ಕಾರಿ ಬಸ್ ಬೆಳಗಾವಿ ನಗರದಿಂದ ಬಾಗಲಕೋಟೆಗೆ ತೆರಳುತ್ತಿತ್ತು. ಈ ಮಧ್ಯೆ ಯರಗಟ್ಟಿಯಿಂದ ಬೆಳಗಾವಿಯತ್ತ ಬರುತ್ತಿದ್ದ ಬಸ್ ಅಪಘಾತವಾಗಿದ್ದು, ಎರಡು ಬಸ್‍ಗಳ ಮುಂಭಾಗ ನಜ್ಜುಗುಜ್ಜಾಗಿದೆ.

    ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]