Tag: ಸರ್ಪ್ರೈಸ್

  • ಸೃಜನ್ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ಚಾಲೆಂಜಿಂಗ್ ಸ್ಟಾರ್!

    ಸೃಜನ್ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ಚಾಲೆಂಜಿಂಗ್ ಸ್ಟಾರ್!

    ಬೆಂಗಳೂರು: ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಗುರುವಾರ ತಮ್ಮ 38ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ವೇಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಆತ್ಮೀಯ ಗೆಳೆಯ ಸೃಜನ್ ಅವರಿಗೆ ಸರ್ಪ್ರೈಸ್ ನೀಡಿ ಶುಭಾಶಯ ಕೋರಿದ್ದಾರೆ.

    ಸೃಜನ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ದರ್ಶನ್ ಶುಭಾಶಯ ಕೋರುವ ವಿಡಿಯೋವನ್ನು ಹಿರಿಯ ಹಾಸ್ಯ ನಟ ಮಂಡ್ಯ ರಮೇಶ್ ಸೃಜನ್ ಅವರಿಗೆ ತೋರಿಸಿದ್ದಾರೆ. ನಮಸ್ಕಾರ ಸೃಜನ್‍ಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಸೃಜನ್‍ಗೆ ಸೃಜ ತೂಗುದೀಪ ಎಂದು ಹೇಳಬೇಕು ಹಾಗೂ ನನಗೆ ದರ್ಶನ್ ಲೋಕೇಶ್ ಎಂದು ಕರೆಯುತ್ತಾರೆ. ನಾನು ಸೃಜನ್‍ಗೆ ಹುಟ್ಟುಹಬ್ಬದ ಶುಭಾಶಯ ಮಾತ್ರ ಕೋರುವುದಿಲ್ಲ. ಆದರೆ ಆತನ ಸಾಧನೆ ಬಗ್ಗೆ ತಿಳಿಸುತ್ತೇನೆ.

    ದರ್ಶನ್ ಹೇಳಿದ್ದೇನು..?
    ಸೃಜ ತನ್ನ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಅನುಭವಿಸಿ ಈಗ ಈ ಸ್ಥಾನದಲ್ಲಿ ನಿಂತಿದ್ದಾನೆ. ಸೃಜನ್ ‘ಲೋಕೇಶ್ ಪ್ರೊಡಕ್ಷನ್’ ಶುರು ಮಾಡಿ ತಾನು ಪಟ್ಟ ಕಷ್ಟವನ್ನು ಬೇರೆಯವರು ಪಡಬಾರದೆಂದು ಸುಮಾರು ಜನರನ್ನು ಇರಿಸಿಕೊಂಡು ಅವರನ್ನು ಬೆಳೆಸಿಕೊಂಡು, ತಾನು ಬೆಳೆಯುತ್ತಿದ್ದಾನೆ. ಸೃಜನ್ ಈಗ ತಿರುಗಿ ನೋಡಿದರೆ ಅವನ ಹಿಂದೆ ಸಾಕಷ್ಟು ಜನ ನಿಂತಿರುತ್ತಾರೆ. ಏಕೆಂದರೆ ಸಾಕಷ್ಟು ಜನ ಸೃಜನ್‍ನನ್ನು ನಂಬಿಕೊಂಡಿದ್ದಾರೆ.

    ನಾನು ಕೂಡ ಹಾಗೇ ಬೆಳೆದಿದ್ದು. ನನಗೆ ಲೋಕೇಶ್ ಪ್ರೊಡಕ್ಷನ್ ಬೇರೆ ಅಲ್ಲ ಹಾಗೂ ತೂಗುದೀಪ ಪ್ರೊಡಕ್ಷನ್ ಬೇರೆ ಅಲ್ಲ. ಅದು ಎರಡು ಒಂದೇ ಪ್ರೊಡಕ್ಷನ್ ಆಗಿ ಶುರು ಮಾಡಿದ್ದೇವು. ಏಕೆಂದರೆ ನಾವು ಇದ್ದರು ಇಲ್ಲದಿದ್ದರು ನಮ್ಮ ತಂದೆಯ ಪ್ರೊಡಕ್ಷನ್ ಹೌಸ್ ಅನ್ನು ಬೆಳೆಸಿಕೊಂಡು ಹೋಗಬೇಕು. ಆ ಕಾರ್ಯವನ್ನು ಸೃಜನ್ ಮಾಡುತ್ತಿದ್ದಾನೆ. ಸೃಜನ್‍ಗೆ ಮತ್ತೊಮ್ಮೆ ಹುಟ್ಟು ಹಬ್ಬದ ಶುಭಾಶಯ ಕೋರುತ್ತಿದ್ದೇನೆ ಎಂದು ದರ್ಶನ್ ವಿಡಿಯೋದಲ್ಲಿ ತಿಳಿಸಿದ್ದಾರೆ.

    ಈಗ ನಾನು ಸೃಜನ್‍ಗೆ ಹೇಳುತ್ತಿರುತ್ತೇನೆ. ನಮಗೆ 60-70 ವರ್ಷವಾದಾಗ ಒಂದು ಕಡೆ ಕುಳಿತುಕೊಂಡು ಆಗ ಏನು ಮಾತಡಬೇಕೋ ಈಗಿನಿಂದಲೇ ತಯಾರಿ ನಡೆಸಿಕೊಳ್ಳುತ್ತಿದ್ದೇವೆ. ಈ ವಿಷಯ ಸೃಜನ್‍ಗೂ ತುಂಬಾ ಚೆನ್ನಾಗಿ ಗೊತ್ತು. ನಾನು ಮತ್ತೊಮ್ಮೆ ಮಗದೊಮ್ಮೆ ನಿನಗೆ ಹುಟ್ಟುಹಬ್ಬ ಹಾರ್ದಿಕ ಶುಭಾಶಯ ಕೋರುತ್ತಿದ್ದೇನೆ. ನೀನು ಹೀಗೆ ಬೆಳೆಯುತ್ತಿರು. ನೀನು ಯಾವತ್ತು ಹಿಂದೆ ತಿರುಗಿ ನೋಡಿದರೂ ಆ ಭಗವಂತ ನಿನಗೆ ಕೊಡದೇ ಇದ್ದರು, ನಾನು ಯಾವಾಗಲೂ ನಿನ್ನ ಹಿಂದೆ ಇರುತ್ತೇನೆ ಎಂದು ದರ್ಶನ್ ತಮ್ಮ ವಿಡಿಯೋದಲ್ಲಿ ಹೇಳಿದ್ದಾರೆ.

  • ರಾತ್ರೋರಾತ್ರಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ರು ಯಶ್!

    ರಾತ್ರೋರಾತ್ರಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ರು ಯಶ್!

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ರಾತ್ರೋರಾತ್ರಿ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ.

    ನಟ ಯಶ್ ಬೆಂಗಳೂರಿನ ರಸ್ತೆಗಳಲ್ಲಿ ರಾತ್ರಿ ಹೊತ್ತು ಯಾರಿಗೂ ಗೊತ್ತಾಗದಂತೆ ರೌಂಡ್ಸ್ ಹೊಡೆಯುತ್ತಾ ಸೈಕಲ್ ಸವಾರಿ ಮಾಡಿದ್ದಾರೆ. ಈ ಮೂಲಕ ರಾತ್ರೋರಾತ್ರಿ ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ.

    ಯಶ್ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಸೈಕಲ್ ಸವಾರಿ ಮಾಡಿದ್ದಾರೆ. ಈ ವೇಳೆ ಈ ಮುಸುಕುಧಾರಿ ಯಾರೆಂದು ಹಿಂದೆ ಬಿದ್ದು ನೋಡಲು ಹೋದ ಅಭಿಮಾನಿಗಳಿಗೆ ಸೈಕಲ್ ಸವಾರಿ ಮಾಡುತ್ತಿರುವುದು ಯಶ್ ಎಂಬುದು ತಿಳಿದುಬಂದಿದೆ.

    ಯಶ್ ಸೈಕಲ್ ಸವಾರಿ ಮಾಡುತ್ತಿರುವುದನ್ನು ಅಲ್ಲಿದ್ದ ಅಭಿಮಾನಿಗಳು ವಿಡಿಯೋ ಮಾಡಿದ್ದಾರೆ. ಅಲ್ಲದೇ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಕಷ್ಟು ವೈರಲ್ ಆಗಿದೆ.

    ಈ ಹಿಂದೆ ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ ರಾತ್ರಿ ವೇಳೆ ತಮ್ಮ ಬೈಕಿನಲ್ಲಿ ಬೆಂಗಳೂರಿನ ಬೀದಿಗಳಲ್ಲಿ ರೌಂಡ್ ಹೊಡೆದಿದ್ದರು. ದರ್ಶನ್ ತಮ್ಮ ಗೆಳೆಯ ಧರ್ಮ ಕೀರ್ತಿರಾಜ್ ರಾಯಲ್ ಎನ್‍ಫೀಲ್ಡ್ ಬೈಕ್ ಖರೀದಿಸಿದಾಗ ಅವರ ಜೊತೆ ರಾತ್ರಿ ಜಾಲಿ ರೈಡ್ ಮಾಡಿದ್ದರು. ಇನ್ನೂ ಕಿಚ್ಚ ಸುದೀಪ್ ಕೂಡ ಬಿಎಂಡಬ್ಲ್ಯೂ ಆರ್ 1200 ಬೈಕ್ ಖರೀದಿಸಿದಾಗ ನಟ ಚಂದನ್ ಜೊತೆ ರಾತ್ರಿ ಹೊತ್ತು ಬೆಂಗಳೂರಿನ ಬೀದಿಗಳಲ್ಲಿ ಸುತ್ತಿದ್ದರು.

    https://www.youtube.com/watch?v=MphoTidE1vo

  • ಮಹಿಳಾ ಅಭಿಮಾನಿ ಮದ್ವೆಗೆ ಸರ್ಪ್ರೈಸ್ ಕೊಟ್ಟ ಮಹೇಶ್ ಬಾಬು!

    ಮಹಿಳಾ ಅಭಿಮಾನಿ ಮದ್ವೆಗೆ ಸರ್ಪ್ರೈಸ್ ಕೊಟ್ಟ ಮಹೇಶ್ ಬಾಬು!

    ಹೈದರಾಬಾದ್: ಟಾಲಿವುಡ್ ನಟ ಮಹೇಶ್ ಬಾಬು ತಮ್ಮ ಅಭಿಮಾನಿಗಳ ಜೊತೆ ಹೆಚ್ಚು ಸಮಯ ಕಳೆಯುತ್ತಾರೆ. ಹೀಗೆ ತಮ್ಮ ಮಹಿಳಾ ಅಭಿಮಾನಿಯ ಮದುವೆಗೆ ಸರ್ಪ್ರೈಸ್ ನೀಡಿ ವಧುವನ್ನು ಖುಷಿಪಡಿಸಿದ್ದಾರೆ.

    ಸುಲೇಖಾ, ಮಹೇಶ್ ಬಾಬು ಅವರ ಕಟ್ಟ ಅಭಿಮಾನಿಯಾಗಿದ್ದು, ಇತ್ತೀಚೆಗೆ ಹೈದರಾಬಾದ್‍ನಲ್ಲಿ ಮದುವೆಯಾಗಿದ್ದರು. ಮದುವೆಯಲ್ಲಿ ಮಹೇಶ್ ಬಾಬು ಸ್ವತಃ ತಯಾರು ಮಾಡಿದ ಗ್ರೀಟಿಂಗ್ ಕಾರ್ಡ್ ಉಡುಗೊರೆಯಾಗಿ ಪಡೆದರು.

    ಸುಲೇಖಾ ಮದುವೆ ದಿನ ಆಕೆಯ ಸಂಬಂಧಿಕರು ಆ ಗ್ರೀಟಿಂಗ್ ಕಾರ್ಡ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಆ ಕಾರ್ಡ್ ನಲ್ಲಿ ನಟ ಮಹೇಶ್ ಬಾಬು ಹಾಗೂ ಅವರ ಪತ್ನಿ ನಮ್ರತಾ ಸಿರೋದ್ಕರ್ ತಮ್ಮ ಆಟೋಗ್ರಾಫ್ ನೀಡಿದ್ದಾರೆ.

    ಸುಲೇಖಾ ಅವರ ಸಂಬಂಧಿಕರು ಮದುವೆಯ ಆಹ್ವಾನ ಪತ್ರಿಕೆಯನ್ನು ಮಹೇಶ್ ಬಾಬು ಅವರಿಗೆ ಕಳುಹಿಸಿದ್ದರು. ಆಗ ಮಹೇಶ್ ಬಾಬು ಹಾಗೂ ಅವರ ಪತ್ನಿ ಆಹ್ವಾನ ಪ್ರತಿಕೆಯಲ್ಲಿ ತಮ್ಮ ಸಹಿಯನ್ನು ಹಾಕಿ ಹಿಂದಿರುಗಿಸಿದ್ದಾರೆ.

    ಸದ್ಯ ವಧು ಸುಲೇಖಾ ಮಹೇಶ್ ಬಾಬು ನೀಡಿರುವ ಕಾರ್ಡ್ ಓದುತ್ತಿರುವ ಫೋಟೋವನ್ನು ಕ್ಯಾಮೆರಾಮೆನ್ ಕ್ಲಿಕಿಸಿದ್ದು, ಈ ಕ್ಷಣ ಸುಲೇಖಾ ಬದುಕಲ್ಲಿ ಅದ್ಭುತ ಕ್ಷಣ ಎಂದು ಕುಟುಂಬಸ್ಥರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

  • ಪತ್ನಿ ವಿಜಯಲಕ್ಷ್ಮಿಯಿಂದ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಪಡೆದ ದಚ್ಚು

    ಪತ್ನಿ ವಿಜಯಲಕ್ಷ್ಮಿಯಿಂದ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಪಡೆದ ದಚ್ಚು

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಇನ್ನು ಕೆಲವು ದಿನಗಳು ಬಾಕಿ ಇದ್ದು, ಅಭಿಮಾನಿಗಳು `ಡಿ ಬಾಸ್’ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಲು ವಿಭಿನ್ನವಾಗಿ ಯೋಚನೆ ಮಾಡುತ್ತಿದ್ದಾರೆ. ಇದೇ ಸಮಯದಲ್ಲಿ ದರ್ಶನ್ ಅವರ ಪತ್ನಿ ಕೂಡ ತಮ್ಮ ಪತಿಯ ಹುಟ್ಟುಹಬ್ಬಕ್ಕಾಗಿ ಸ್ಪೆಷಲ್ ಸರ್ಪ್ರೈಸ್ ನೀಡಿದ್ದಾರೆ.

    ವಿಜಯಲಕ್ಷ್ಮಿ ದರ್ಶನ್ ವಿಶೇಷವಾದ ಸರ್ಪ್ರೈಸ್ ನೀಡಿದ್ದಾರೆ. ವಿಜಯಲಕ್ಷ್ಮಿ ಅವರು ತಮ್ಮ ಉಂಗುರದ ಬೆರಳಿನ ಮೇಲೆ ದರ್ಶನ್ ಅವರ ಹೆಸರಿನ ಹಚ್ಚೆ ಹಾಕಿಸಿಕೊಂಡಿದ್ದಾರೆ. ಸಾಮಾನ್ಯವಾಗಿ ಅಭಿಮಾನಿಗಳು ಸ್ಟಾರ್ ಗಳ ಹೆಸರು ಹಾಗೂ ಭಾವಚಿತ್ರವನ್ನ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದರೆ ದರ್ಶನ್ ಪತ್ನಿ ಈ ಬಾರಿಯ ಬರ್ತ್ ಡೇ ಸ್ಪೆಷಲ್ ಆಗಿ ಈ ರೀತಿಯಲ್ಲಿ ಡಿ ಬಾಸ್ ಅವರಿಗೆ ಸರ್ಪ್ರೈಸ್ ನೀಡಿದ್ದಾರೆ.

    ದರ್ಶನ್ ಅನ್ನುವ ಹೆಸರನ್ನ ತಮ್ಮ ಎಡಗೈ ಉಂಗುರದ ಬೆರಳಿನ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ. ಹೆಸರಿನ ಜೊತೆಯಲ್ಲಿ ಒಂದು ಹಾರ್ಟ್ ಸಿಂಬಲ್ ಕೂಡ ಇದೆ. ಇದು ಖುಷಿಯ ವಿಚಾರವಾಗಿದೆ.

    ವಿಜಯಲಕ್ಷ್ಮಿ ಅವರು ಪರ್ಷಿಯನ್ ಬೆಕ್ಕನ್ನು ಹಿಡಿದುಕೊಂಡು ಫೋಟೋವನ್ನ ತೆಗೆಸಿಕೊಂಡು ಅದನ್ನು ತಮ್ಮ ಟ್ವಿಟ್ಟರ್ ಅಕೌಂಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಹಚ್ಚೆ ಹಾಕಿಸಿಕೊಂಡಿರುವುದು ಕಾಣಿಸುತ್ತದೆ.