Tag: ಸರ್ವಪಕ್ಷಗಳ ಸಭೆ

  • ಕಾವೇರಿ, ಮಹದಾಯಿ ವಿಚಾರವಾಗಿ ಆಗಸ್ಟ್ 23ರಂದು ಸರ್ವಪಕ್ಷ ಸಭೆ: ಡಿಕೆಶಿ

    ಕಾವೇರಿ, ಮಹದಾಯಿ ವಿಚಾರವಾಗಿ ಆಗಸ್ಟ್ 23ರಂದು ಸರ್ವಪಕ್ಷ ಸಭೆ: ಡಿಕೆಶಿ

    ಬೆಂಗಳೂರು: ಮಹದಾಯಿ, ಕಾವೇರಿ ನೀರು (Kaveri Water) ವಿಚಾರವಾಗಿ ಇದೇ ಆಗಸ್ಟ್ 23 ರಂದು ಸರ್ವಪಕ್ಷಗಳ ಸಭೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ (All Party Meeting) ನಡೆಯಲಿದೆ. ಸಭೆಗೆ ಸಿಎಂ ಅವರೇ ದಿನಾಂಕ ನಿಗದಿ ಮಾಡಿದ್ದು, ಎಲ್ಲ ಸಂಸದರನ್ನ ಆಹ್ವಾನಿಸಲಾಗಿದೆ. ಸಭೆಯಲ್ಲಿ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.

    ಇದೇ ವೇಳೆ ಆ.21ರಂದು ಮಾಜಿ ಕಾರ್ಪೊರೇಟರ್ಸ್ ಸೇರಿದಂತೆ ಹಲವರ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೂ ಅರ್ಜಿ ಹಾಕಿಲ್ಲ, ಮುಂದೆ ಕಾದು ನೋಡಬೇಕು. ಅವರವರ ಬದುಕು ಭವಿಷ್ಯ ನೋಡಿಕೊಳ್ತಾರೆ. ಸಿಟಿ ರವಿ ಹಿರಿಯರಿದ್ದಾರೆ, ಅವರು ಬೆದರಿಕೆಯೊಡ್ಡುತ್ತಿದ್ದಾರೆ, ಕೈಕತ್ತರಿಸಿಬಿಡ್ತೀವಿ ಅಂತಾ? ಜೆಡಿಎಸ್, ಕಾಂಗ್ರೆಸ್ ಶಾಸಕರನ್ನ ಕರ್ಕೊಂಡು ಮಜಾ ಮಾಡಿದ್ರಲ್ಲ ಆವಾಗ ಏನಾಗಿತ್ತು? ಅವರ ರಾಜಕಾರಣ ಅವರು ಮಾಡಲಿ, ನಿಮಗೆ ಬರೋ ಬೆದರಿಕೆ ತರ, ಬೇರೆಯವರಿಗೂ ಬರುತ್ತೆ. ನಾವು ಯಾರನ್ನೂ ಕರೀತಿಲ್ಲ. ನಮಗಿರೋ ನಂಬರ್‌ಗೆ ಯಾರೂ ಅವಶ್ಯಕತೆ ಇಲ್ಲ. ಆದ್ರೆ ಪಕ್ಷಕ್ಕೆ ಬರೋರನ್ನ ನಾನು ತಡೆಯೋಕೆ ಆಗುತ್ತಾ? ಕೋಳಿ ಕೇಳಿ ಮಸಾಲೆ ಅರಿಯೋಕೆ ಆಗುತ್ತಾ? ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ಶಾಕ್‌ ಕೊಟ್ಟ ಮದ್ಯಪ್ರಿಯರು – ಮದ್ಯ ಮಾರಾಟ ಪ್ರಮಾಣ 15% ಇಳಿಕೆ

    ಎರಡೂವರೆ ವರ್ಷ ಆದ್ಮೇಲೆ ಸಚಿವ ಸ್ಥಾನ ಬಿಟ್ಟುಕೊಡಬೇಕೆಂಬ ಮುನಿಯಪ್ಪ ಹೇಳಿಕೆ ವಿಚಾರಕ್ಕೆ ಉತ್ತರಿಸಿದ ಡಿಸಿಎಂ, ಪಾರ್ಟಿ, ಹೈಕಮಾಂಡ್ ಏನ್ ಹೇಳುತ್ತೋ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು. ನಾವು ಯಾರು ಅದನ್ನ ಬಹಿರಂಗವಾಗಿ ಚರ್ಚೆ ಮಾಡುವ ವಿಷಯವಲ್ಲ. ಮುಂದಿನ ವಾರ ನಮ್ಮ ರಾಷ್ಟ್ರೀಯ ನಾಯಕರು ಬರುತ್ತಾರೆ, ಅವರ ಬಳಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3 ಸಕ್ಸಸ್ ಆಗುತ್ತೆ – ಕೋಡಿಮಠ ಶ್ರೀಗಳ ಭವಿಷ್ಯ

    Web Stories

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊರೊನಾ ಕುರಿತ ಸರ್ವ ಪಕ್ಷಗಳ ಸಭೆ – ಏನು ನಿರ್ಣಯ ತೆಗೆದುಕೊಳ್ಳಲಾಗಿದೆ?

    ಕೊರೊನಾ ಕುರಿತ ಸರ್ವ ಪಕ್ಷಗಳ ಸಭೆ – ಏನು ನಿರ್ಣಯ ತೆಗೆದುಕೊಳ್ಳಲಾಗಿದೆ?

    ಬೆಂಗಳೂರು: ಕೊರೊನಾ ಕುರಿತು ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ವಪಕ್ಷಣಗಳ ಸಭೆ ನಡೆದಿದೆ. ಈ ಸಭೆಯಲ್ಲಿ ಕೊರೊನಾ ವಿರುದ್ಧ ರಾಜ್ಯ ಹೋರಾಡಲು ಬೇಕಾದ ಕೆಲ ನಿರ್ಣಯಗಳನ್ನು ತಗೆದುಕೊಳ್ಳಲಾಗಿದೆ.

    ಸಭೆ ಬಳಿಕ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಸರ್ವ ಪಕ್ಷಗಳ ಸಭೆಯಲ್ಲಿ ನಾಯಕರು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ. ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಿದೆ. ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದರು ಎಂದು ತಿಳಿಸಿದ್ದಾರೆ.

    ಜೊತೆಗೆ ಸಭೆಯಲ್ಲಿ ನಾಯಕರು ಸಲಹೆ ನೀಡಿದಂತೆ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್‍ಗಳು ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

    ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು. ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.

    ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಒಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಪಡಿತರವನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು. ಮುಸ್ಲಿಂ ಬಾಂಧವರ ಜೊತೆ ನಾನು ಸಭೆ ನಡೆಸಿದ್ದು, ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ನಡೆಸಲು ಒಪ್ಪಿ ಸಹಕರಿಸಿರುತ್ತಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಸಿಎಂ ಸರ್ವ ಪಕ್ಷಗಳ ಸಭೆಯಲ್ಲಿ ತಗೆದುಕೊಂಡ ನಿರ್ಧಾರಗಳನ್ನು ತಿಳಿಸಿದರು.

    ಈ ಸಭೆಯಲ್ಲಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಜೆಡಿಎಸ್ ನಾಯಕರಾದ ಹೆಚ್.ಡಿ.ರೇವಣ್ಣ, ಬಸವರಾಜ್ ಹೊರಟ್ಟಿ, ಮಾಜಿ ಸಿಎಂ ಕುಮಾರಸ್ವಾಮಿ, ಸಚಿವರಾದ ಶ್ರೀರಾಮುಲು, ಸುಧಾಕರ್, ಬೊಮ್ಮಾಯಿ, ಲಕ್ಷ್ಮಣ್ ಸವದಿ, ಅಧಿಕಾರಿಗಳು ಉಪಸ್ಥಿತಿರಿದ್ದರು.