Tag: ಸರ್ವಪಕ್ಷ ಸಭೆ

  • ʻಆಪರೇಷನ್‌ ಸಿಂಧೂರʼದಲ್ಲಿ 100 ಉಗ್ರರ ಹತ್ಯೆ – ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರದಿಂದ ಮಾಹಿತಿ

    ʻಆಪರೇಷನ್‌ ಸಿಂಧೂರʼದಲ್ಲಿ 100 ಉಗ್ರರ ಹತ್ಯೆ – ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರದಿಂದ ಮಾಹಿತಿ

    ನವದೆಹಲಿ: ʻಆಪರೇಷನ್‌ ಸಿಂಧೂರʼ (Operation Sindoor) ಹೆಸರಿನಡಿ ಭಾರತೀಯ ಸೇನೆಯು ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ (PoK) ಉಗ್ರ ನೆಲೆಗಳ ಮೇಲೆ ನಡೆಸಿದ ಪ್ರತೀಕಾರದ ದಾಳಿಯಲ್ಲಿ 100 ಉಗ್ರರ ಹತ್ಯೆಯಾಗಿದೆ ಎಂದು ಕೇಂದ್ರ ಸರ್ಕಾರ ವಿಪಕ್ಷಗಳಿಗೆ ಮಾಹಿತಿ ನೀಡಿದೆ.

    ಇಂದು ಸಂಸತ್‌ ಭವನದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉಗ್ರರ ನೆಲೆಗಳ ಮೇಲೆ ಬಿದ್ದ ಸೂಸೈಡ್‌ ಡ್ರೋನ್‌ಗಳು ತಯಾರಾಗಿದ್ದು ಬೆಂಗಳೂರಿನಲ್ಲಿ!

    ಭಾರತ ನಡೆಸಿದ ವಾಯುದಾಳಿಯಲ್ಲಿ (Air Strike) 100 ಉಗ್ರರ ಹತ್ಯೆಯಾಗಿದೆ. ನಾವು ಈ ಪರಿಸ್ಥಿತಿಯನ್ನು ಬೆಳೆಸಲು ಬಯಸುವುದಿಲ್ಲ. ಆದ್ರೆ ಪಾಕಿಸ್ತಾನ ಕಿತಾಪತಿ ಮಾಡಿದ್ರೆ ನಾವು ಸಹ ಹಿಂದೆ ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 9 ಉಗ್ರ ಅಡಗು ತಾಣಗಳ ಮಟಾಶ್ – ಯಾವ್ಯಾವ ಪ್ರದೇಶದಲ್ಲಿ ಯಾವ ಉಗ್ರ ಸಂಘಟನೆ ಇತ್ತು? ಅವುಗಳ ಪಾತ್ರ ಏನು?

    ಏನಿದು ʻಆಪರೇಷನ್‌ ಸಿಂಧೂರʼ?
    ಕಳೆದ ಏಪ್ರಿಲ್‌ 22ರಂದು ಕಾಶ್ಮೀರದ ಪೆಹಲ್ಗಾಮ್‌ನ (Pahalgam) ಬೈಸರನ್‌ ಕಣಿವೆ ಪ್ರದೇಶದಲ್ಲಿ ನಾಲ್ವರು ಉಗ್ರರು ಓರ್ವ ವಿದೇಶಿ ಪ್ರಜೆ ಸೇರಿದಂತೆ 26 ಪ್ರವಾಸಿಗರನ್ನ ಗುಂಡಿಕ್ಕಿ ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಪಣ ತೊಟ್ಟಿದ್ದ ಭಾರತ ಮಂಗಳವಾರ ತಡರಾತ್ರಿ 1:44 ಗಂಟೆ ಸುಮಾರಿಗೆ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಪಾಕ್‌ ಸೇನೆಯಾಗಲಿ ಅಥವಾ ನಾಗರಿಕರ ಮೇಲಾಗಲಿ ದಾಳಿ ಮಾಡದೇ ಉಗ್ರರ ನೆಲೆಗಳನ್ನು ಮಾತ್ರವೇ ಗುರಿಯಾಗಿಸಿ ದಾಳಿ ನಡೆಸಿದೆ.

    ಮೋಸ್ಟ್‌ವಾಂಟೆಡ್‌ಗಳನ್ನ ತಯಾರು ಮಾಡ್ತಿದ್ದ ನೆಲೆಗಳು ಧ್ವಂಸ:
    ಭಾರತ ಧ್ವಂಸ ಮಾಡಿರುವ ಈ ಉಗ್ರರ ನೆಲೆಗಳು ಮೋಸ್ಟ್‌ ಡೇಂಜರಸ್‌ ತಾಣಗಳು ಎಂದೇ ಗುರುತಿಸಿಕೊಂಡಿದ್ದು, ಇಡೀ ವಿಶ್ವಕ್ಕೆ ಕಂಟಕವಾಗಿದ್ದವು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಇಲ್ಲಿ ಅಡಗಿಸಿಡಲಾಗಿತ್ತು. ಜೊತೆಗೆ ವಿಶ್ವಾದ್ಯಂತ ವಿವಿಧೆಡೆಗೆ ಕಳುಹಿಸಲು ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಮ್ಮ ಸಹೋದರಿಯರ ಗಂಡಂದಿರನ್ನು ಕೊಂದವರು ಈಗ ತಮ್ಮ ಇಡೀ ಕುಟುಂಬ ಕಳೆದುಕೊಂಡಿದ್ದಾರೆ: ಯೋಗಿ ಆದಿತ್ಯನಾಥ್‌

    ಎಲ್ಲೆಲ್ಲಿ ದಾಳಿ ನಡೆದಿದೆ?
    1) ಬಹವಾಲ್ಪುರ್: ಅಂತರರಾಷ್ಟ್ರೀಯ ಗಡಿಯಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಬಹವಾಲ್ಪುರ್ ಮೇಲೆ ದಾಳಿ ನಡೆದಿದೆ. ಇದು ಜೈಷ್‌ ಉಗ್ರ ಸಂಘಟನೆಯ ಪ್ರಧಾನ ಕಚೇರಿಯಾಗಿತ್ತು.

    2) ಮುರಿಡ್ಕೆ: ಸಾಂಬಾ ಎದುರಿನ ಗಡಿಯಿಂದ 30 ಕಿ.ಮೀ ದೂರದಲ್ಲಿದ್ದು ಇದು ಲಷ್ಕರ್-ಎ-ತೈಬಾ ಸಂಘಟನೆ ಉಗ್ರರ ಶಿಬಿರ ನಡೆಸುತ್ತಿತ್ತು. ಮುಂಬೈ ದಾಳಿ ನಡೆಸಿದ ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗಿತ್ತು.

    3) ಗುಲ್ಪುರ್ : ಗಡಿ ನಿಯಂತ್ರಣ ರೇಖೆ ಪೂಂಚ್-ರಾಜೌರಿಯಿಂದ 35 ಕಿ.ಮೀ ದೂರದಲ್ಲಿದೆ. ಪೂಂಚ್‌ನಲ್ಲಿ ಏಪ್ರಿಲ್ 20, 2023 ರಂದು ನಡೆದ ದಾಳಿ ಮತ್ತು ಜೂನ್ 24 ರಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಮಾಯಕ ಯಾತ್ರಿಕರ ಮೇಲೆ ಇಲ್ಲಿ ತರಬೇತಿ ಪಡೆದ ಉಗ್ರರು ದಾಳಿ ನಡೆಸಿದ್ದರು.

    4) ಸವಾಯಿ: ಲಷ್ಕರ್‌ ಉಗ್ರರ ಕ್ಯಾಂಪ್‌ ಇದಾಗಿದ್ದು ಗಡಿ ನಿಯಂತ್ರಣ ರೇಖೆಯಿಂದ 30 ಕಿ.ಮೀ ದೂರದಲ್ಲಿದೆ. ಕಳೆದ ವರ್ಷ ಅಕ್ಟೋಬರ್ 20, 24 ರಂದು ಸೋನ್‌ಮಾರ್ಗ್, ಅಕ್ಟೋಬರ್ 24 ರಂದು ಗುಲ್ಮಾರ್ಗ್ ಮತ್ತು ಏಪ್ರಿಲ್ 22 ರಂದು ಪಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರು ಇಲ್ಲಿ ತರಬೇತಿ ಪಡೆದಿದ್ದರು.

    5) ಬಿಲಾಲ್: ಉಗ್ರ ಸಂಘಟನೆ ಜೈಷ್–ಎ–ಮೊಹಮದ್ ಲಾಂಚ್‌ ಪ್ಯಾಡ್‌ ಇದಾಗಿದ್ದು ಉಗ್ರರು ಇಲ್ಲಿ ಕೊನೆಯ ಹಂತದ ತರಬೇತಿ ಪಡೆದು ಭಾರತಕ್ಕೆ ನುಗ್ಗುತ್ತಿದ್ದರು.

    6) ಕೋಟ್ಲಿ: ಗಡಿ ನಿಯಂತ್ರಣ ರೇಖೆಯಿಂದ 15 ಕಿ.ಮೀ ದೂರದಲ್ಲಿದೆ. ಲಷ್ಕರ್‌ ಉಗ್ರರ ಕ್ಯಾಂಪ್‌ ಇದಾಗಿದ್ದು 50 ಉಗ್ರರಿಗೆ ತರಬೇತಿ ನೀಡುವ ಸಾಮರ್ಥ್ಯ ಹೊಂದಿತ್ತು.

    7) ಬರ್ನಾಲಾ: ಭಾರತ ಗಡಿಯಿಂದ 10 ಕಿ.ಮೀ ದೂರದಲ್ಲಿದೆ. ಇಲ್ಲೂ ಲಷ್ಕರ್‌ ಉಗ್ರರಿಗೆ ತರಬೇತಿ ನೀಡಲಾಗುತ್ತಿತ್ತು.

    8) ಸರ್ಜಲ್: ಸಾಂಬಾ ಕಟುವಾ ಬಳಿ ಅಂತಾರಾಷ್ಟ್ರೀಯ ಗಡಿಯಿಂದ 8 ಕಿಲೋಮೀಟರ್ ದೂರದಲ್ಲಿ ಜೈಶ್ ಎ ಮೊಹಮದ್ ಕ್ಯಾಂಪ್.

    9) ಮಹಮೂನಾ: ಸಿಯಾಲ್ ಕೋಟ್ ಬಳಿಯ ಅಂತಾರಾಷ್ಟ್ರೀಯ ಗಡಿಯಿಂದ 15 ಕಿಲೋಮೀಟರ್ ದೂರದಲ್ಲಿ ಹಿಜ್ಬುಲ್ಲಾ ಟ್ರೈನಿಂಗ್ ಸೆಂಟರ್.

  • Pahalgam Terror Attack | ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ ಸರ್ಕಾರ

    Pahalgam Terror Attack | ಸರ್ವಪಕ್ಷ ಸಭೆಯಲ್ಲಿ ಭದ್ರತಾ ಲೋಪ ಒಪ್ಪಿಕೊಂಡ ಕೇಂದ್ರ ಸರ್ಕಾರ

    ನವದೆಹಲಿ: ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧದ ನಂತರ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ಕೆಲವಾರು ನಿರ್ಬಂಧಗಳನ್ನು ಹೇರಿ ಬಿಸಿ ಮುಟ್ಟಿಸಿದೆ. ಅಷ್ಟಕ್ಕೆ ಸುಮ್ಮನಾಗದೇ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ಇದಕ್ಕೆ ವಿಪಕ್ಷಗಳು ಕೈಜೋಡಿಸಿವೆ.

    ಏ. 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ವಿಹಾರಧಾಮದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ 26 ಜನರು ಸಾವಿಗೀಡಾಗಿದ್ದಾರೆ. ಉಗ್ರರ ಈ ಕೃತ್ಯಕ್ಕೆ ಭಾರತ ಮಾತ್ರವಲ್ಲ ಅಮೆರಿಕ ಇನ್ನಿತರ ರಾಷ್ಟ್ರಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ, ತಾನು ಮುಂದೆ ಕೈಗೊಳ್ಳಬೇಕಾದ ನಿರ್ಧಾರಗಳ ಕುರಿತಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲು ಏ. 24ರಂದು ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿತ್ತು.

    ಸಭೆಯಲ್ಲಿ ಸರ್ಕಾರದ ಪರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಿದ್ದರೆ, ವಿಪಕ್ಷಗಳ ನಾಯಕರಲ್ಲಿ ಪ್ರಧಾನವಾಗಿ ಲೋಕಸಭೆಯ ವಿರೋಧ ಪಕ್ಷಗಳ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷಗಳ ನಾಯಕ ಮಲ್ಲಿಕಾರ್ಜುನ ಖರ್ಗೆ, ಆಮ್ ಆದ್ಮಿ ಪಾರ್ಟಿಯ ಸಂಜಯ್ ಸಿಂಗ್, ತೃಣಮೂಲ ಕಾಂಗ್ರೆಸ್‌ನ ಸುದೀಪ್ ಬಂಡೋಪಾಧ್ಯಾಯ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದರು.

    ಭದ್ರತಾ ಲೋಪ ಒಪ್ಪಿಕೊಂಡ ಸರ್ಕಾರ
    ಈ ಸಂದರ್ಭದಲ್ಲಿ ಸರ್ಕಾರವೂ ಸಹ ಭದ್ರತಾ ವೈಫಲ್ಯದಿಂದಲೇ ಪಹಲ್ಗಾಮ್ ಘಟನೆ ಆಗಿರುವುದಾಗಿ ಒಪ್ಪಿಕೊಂಡಿತು. ಸಭೆಯ ನಂತರ ಮಾತನಾಡಿದ ಕಿರಣ್ ರಿಜಿಜು, ಸಭೆಯಲ್ಲಿ ಭದ್ರತಾ ಲೋಪವಾಗಿರುವ ಬಗ್ಗೆ ವಿಪಕ್ಷಗಳು ಗಮನ ಸೆಳೆದವು. ಸರ್ಕಾರ ಕೂಡ ಅದನ್ನು ಒಪ್ಪುತ್ತದೆ. ಭವಿಷ್ಯದಲ್ಲಿ ಇಂಥ ಲೋಪಗಳು ಆಗದಂತೆ ಎಚ್ಚರಿಕೆ ವಹಿಸುವುದಾಗಿ ಸಭೆಯಲ್ಲಿ ವಿಪಕ್ಷಗಳ ನಾಯಕರಿಗೆ ನಾವು ಮನವರಿಕೆ ಮಾಡಿದೆವು ಎಂದು ತಿಳಿಸಿದ್ದಾಗಿ ಎಬಿಪಿ ನ್ಯೂಸ್ ಹಾಗೂ ಇಂಡಿಯಾ ಟುಡೇ ಜಾಲತಾಣಗಳು ವರದಿ ಮಾಡಿವೆ.

    ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದಿರುವ ಹತ್ಯಾಕಾಂಡವನ್ನು ಯಾರೂ ಮರೆಯುವ ಹಾಗಿಲ್ಲ. ಕಾಶ್ಮೀರದ ಇತಿಹಾಸದಲ್ಲಿ ಅದೊಂದು ಕಪ್ಪು ಚುಕ್ಕೆಯಾಗಲಿದೆ. ಉಗ್ರವಾದವನ್ನು ಬೇರು ಸಹಿತ ಕಿತ್ತು ಹಾಕಬೇಕಿದೆ. ಅದಕ್ಕಾಗಿ ಕೇಂದ್ರ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳಲೇಬೇಕು. ಈ ವಿಚಾರದಲ್ಲಿ ನಾವೆಲ್ಲರೂ ಪಕ್ಷಾತೀತವಾಗಿ ಕೇಂದ್ರಕ್ಕೆ ಬೆಂಬಲ ನೀಡುತ್ತೇವೆ ಎಂದು ಹೇಳಿದರು.

    ಸಿಂಧೂ ನದಿ ಒಪ್ಪಂದದ ಬಗ್ಗೆ ಹೇಳಿದ್ದೇನು?
    ಸರ್ವಪಕ್ಷ ಸಭೆಯಲ್ಲಿ ಸಿಂಧೂ ನದಿ ನೀರು ಒಪ್ಪಂದವನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸುವ ವಿಷಯದ ಕುರಿತು ಮಾತನಾಡಿದ ಅಸಾದುದ್ದೀನ್ ಓವೈಸಿ, ನೀರನ್ನು ಸಂಗ್ರಹಿಸಲು ಅಥವಾ ನಿಲ್ಲಿಸಲು ನಮ್ಮಲ್ಲಿ ಯಾವುದೇ ವ್ಯವಸ್ಥೆ ಇಲ್ಲ, ಹಾಗಾದರೆ ಅದನ್ನು ಸ್ಥಗಿತಗೊಳಿಸುವುದರಿಂದ ಏನು ಪ್ರಯೋಜನ? ಅಂತ ಪ್ರಶ್ನೆ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಮಿತ್‌ ಶಾ, ಸರ್ಕಾರದ ಉದ್ದೇಶವನ್ನು ವ್ಯಕ್ತಪಡಿಸಲು ಮತ್ತು ಭಾರತ ಸರ್ಕಾರದ ಭವಿಷ್ಯದ ನಿಲುವು ಏನಾಗುತ್ತದೆ ಎಂಬುದನ್ನು ಸಂದೇಶ ನೀಡಲು ಇದನ್ನು ಮಾಡಲಾಗಿದೆ ಎಂದು ಹೇಳಿದರು.

  • Pahalgam Attack | ಕೇಂದ್ರ ಯಾವ್ದೇ ಕ್ರಮ ತೆಗೆದುಕೊಂಡ್ರೂ‌ ಪೂರ್ಣ ಬೆಂಬಲ ಇದೆ: ರಾಹುಲ್‌ ಗಾಂಧಿ

    Pahalgam Attack | ಕೇಂದ್ರ ಯಾವ್ದೇ ಕ್ರಮ ತೆಗೆದುಕೊಂಡ್ರೂ‌ ಪೂರ್ಣ ಬೆಂಬಲ ಇದೆ: ರಾಹುಲ್‌ ಗಾಂಧಿ

    – ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಸರ್ವಪಕ್ಷ ಸಭೆ ಖಂಡನೆ
    – ಶುಕ್ರವಾರ ಅನಂತನಾಗ್‌ ಜಿಲ್ಲೆಗೆ ರಾಹುಲ್‌ ಗಾಂಧಿ ಭೇಟಿ

    ನವದೆಹಲಿ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯು (All-party meeting) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಸರ್ವಾನುಮತದಿಂದ ಖಂಡಿಸಿದೆ.

    ಸಭೆಯ ಬಳಿಕ ಮಾತನಾಡಿದ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ರಾಜಕೀಯ ಪಕ್ಷಗಳು ಇದನ್ನು ಪಹಲ್ಗಾಮ್‌ ದಾಳಿಯನ್ನ ಏಕರೂಪವಾಗಿ ಖಂಡಿಸಿವೆ. ಉಗ್ರರರನ್ನು ಮಟ್ಟಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡರೂ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.

    ಇನ್ನೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಪುನಃ ಸ್ಥಾಪಿಸಬೇಕೆಂದು ನಾವು ಬಯಸುತ್ತೇವೆ. ನಾಳೆ (ಏ.25) ರಾಹುಲ್‌ ಗಾಂದಿ ಅವರು ಕಾಶ್ಮೀರದ ಅನಂತನಾಗ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಉಗ್ರರ ದಾಳಿಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲಿದ್ದಾರೆ ಎಂದು ತಿಳಿಸಿದರು.

    ಇನ್ನೂ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಮಾತನಾಡಿ, ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ನಾವು ಕೇಂದ್ರದೊಂದಿಗೆ ಇದ್ದೇವೆ. ದೇಶವು ಒಗ್ಗಟ್ಟಿನಿಂದ ಹೋರಾಡಬೇಕು. ಎಲ್ಲಾ ರಾಜಕೀಯ ಪಕ್ಷಗಳ ಮುಖ್ಯಸ್ಥರು ಇಂದಿನ ಸಭೆಯಲ್ಲಿ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ ಎಂದರು.

    ಇದಕ್ಕೂ ಮುನ್ನ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah), ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌, ನಿರ್ಮಲಾ ಸೀತಾರಾಮನ್‌, ಕಿರಣ್‌ ರಿಜಿಜು, ಜೆ.ಪಿ ನಡ್ಡಾ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ಉಗ್ರರ ದಾಳಿ ಹಾಗೂ ಬುಧವಾರ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಅಮಿತ್‌ ಶಾ ಹಾಗೂ ರಾಜನಾಥ್‌ ಸಿಂಗ್‌ ಸಭೆಗೆ ಮಾಹಿತಿ ನೀಡಿದರು.

  • Pahalgam Terrorist Attack | ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಶುರು – ರಾಹುಲ್‌, ಖರ್ಗೆ ಭಾಗಿ

    Pahalgam Terrorist Attack | ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಶುರು – ರಾಹುಲ್‌, ಖರ್ಗೆ ಭಾಗಿ

    ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬೆನ್ನಲ್ಲೇ ಪಾಕ್‌ ವಿರುದ್ಧ ರಾಜತಾಂತ್ರಿಕ ಸಂಬಂಧ ಕಡಿದುಕೊಂಡ ಕೇಂದ್ರ ಸರ್ಕಾರ ಇಂದು ಸರ್ವಪಕ್ಷ ಸಭೆ (All-party meeting) ನಡೆಸುತ್ತಿದೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಅವರ ಅಧ್ಯಕ್ಷತೆಯಲ್ಲಿ ಸಭೆ ಶುರುವಾಗಿದೆ. ಸಭೆ ಆರಂಭಿಸವುದಕ್ಕೂ ಮುನ್ನ ಉಗ್ರರ ಗುಂಡಿಗೆ ಬಲಿಯಾದವರಿಗೆ ಸಂತಾಪ ಸೂಚಿಸಲಾಯಿತು.

    ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah), ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌, ನಿರ್ಮಲಾ ಸೀತಾರಾಮನ್‌, ಕಿರಣ್‌ ರಿಜಿಜು, ಜೆ.ಪಿ ನಡ್ಡಾ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ. ಸಭೆಗೂ ಮುನ್ನ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಹಾಗೂ ಜೆ.ಪಿ ನಡ್ಡಾ ಅವರು ರಾಷ್ಟ್ರಪತಿಗಳನ್ನು ಭೇಟಿಯಾಗಿ ಉಗ್ರರ ದಾಳಿಯ ಕುರಿತು ಮಾಹಿತಿ ನೀಡಿದ್ದರು. ಇದನ್ನೂ ಓದಿ: ‘ರಾಮಾಯಣ’ ಚಿತ್ರ ಕೈಬಿಟ್ಟಿದ್ಯಾಕೆ ಶ್ರೀನಿಧಿ ಶೆಟ್ಟಿ?- ಇಂಟ್ರೆಸ್ಟಿಂಗ್ ವಿಚಾರ ಬಿಚ್ಚಿಟ್ಟ ‘ಕೆಜಿಎಫ್ 2’ ನಟಿ

    ಇಂದಿನ ಸಭೆಯಲ್ಲಿ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಾಗೂ ಬುಧವಾರ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಅಮಿತ್‌ ಶಾ ಹಾಗೂ ರಾಜನಾಥ್‌ ಸಿಂಗ್‌ ಸಭೆಗೆ ಮಾಹಿತಿ ನೀಡಲಿದ್ದಾರೆ. ಜೊತೆಗೆ ಮುಂದಿನ ನಿರ್ಣಯಗಳ ಕುರಿತು ಸರ್ವಪಕ್ಷ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ: Pahalgam Terrorist Attack | ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಭರತ್ ಭೂಷಣ್ ಅಂತ್ಯಕ್ರಿಯೆ

    26 ಮಂದಿ ಬಲಿ
    ಜಮ್ಮು-ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಜನಪ್ರಿಯ ಪ್ರವಾಸಿತಾಣ ಪಹಲ್ಗಾಮ್‌ನಲ್ಲಿ ಮಂಗಳವಾರ ಉಗ್ರರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು, ವಿದೇಶಿಯರು ಸೇರಿ 26 ಮಂದಿ ಬಲಿಯಾಗಿದ್ದಾರೆ. 2019ರಲ್ಲಿ 40 ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿಯ ಬಳಿಕ ಉಗ್ರರು ಕಣಿವೆಯಲ್ಲಿ ನಡೆಸಿದ ಭೀಕರ ದಾಳಿ ಇದಾಗಿದೆ. ಇದುವರೆಗೂ ಭದ್ರತಾಪಡೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದ ಉಗ್ರರು, ಇದೇ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ಅಮಾಯಕ ಪ್ರವಾಸಿಗರನ್ನು ಟಾರ್ಗೆಟ್‌ ಮಾಡಿದ್ದಾರೆ. ಆ ಮೂಲಕ ಕಣಿವೆಯಲ್ಲಿ ಆತಂಕ, ಭಯದ ವಾತಾವರಣ ಮರುಕಳಿಸಿದೆ. ಅದರಲ್ಲೂ ಪುರುಷನ್ನೇ ಗುರಿಯಾಗಿಸಿಕೊಂಡು, ನೀನು ಹಿಂದೂನಾ, ಮುಸ್ಲಿಮನಾ? ಅಂತ ಖಚಿತಪಡಿಸಿಕೊಂಡು ಕೊಲ್ಲಲಾಗಿದೆ. ಇದನ್ನೂ ಓದಿ: ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್‌

  • ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ: ಡಿಕೆಶಿ

    ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ: ಡಿಕೆಶಿ

    ನವದೆಹಲಿ: ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಪರ ನಿಲ್ಲುವುದಾಗಿ ಸರ್ವಪಕ್ಷಗಳ ಸಂಸದರು ಮಾತುಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

    ದೆಹಲಿಯ (New Delhi) ಖಾಸಗಿ ಹೋಟೆಲ್‌ನಲ್ಲಿ ಸರ್ವಪಕ್ಷ ಸಂಸದರ ಸಭೆಯ (All Party MP Meeting) ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾವೇರಿ (Kaveri) ವಿಚಾರವಾಗಿ ಸಂಸತ್ ಅಧಿವೇಶನದಲ್ಲಿ ದನಿ ಎತ್ತುವುದಾಗಿ ಎಲ್ಲಾ ಸಂಸದರು ಭರವಸೆ ನೀಡಿದ್ದಾರೆ ಎಂದರು. ಮಂಗಳವಾರ ತಡ ರಾತ್ರಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ (Pralhad Joshi) ಅವರನ್ನು ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ. ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಪರಿಸ್ಥಿತಿ ವಿವರಿಸುವುದಾಗಿ ಭರವಸೆ ನೀಡಿದ್ದಾರೆ. ಮಳೆ ಕಡಿಮೆ ಬಿದ್ದಾಗ ನೀರನ್ನು ಎಷ್ಟು ಹಂಚಿಕೆ ಮಾಡಬೇಕು ಎನ್ನುವ ಬಗ್ಗೆ ಕಾವೇರಿ ನೀರು ನಿರ್ವಹಣಾ ಸಮಿತಿ (CWMC) ಸರಿಯಾದ ಸೂತ್ರ ಹಂಚಿಕೆ ಮಾಡಿಲ್ಲ. 5,000 ಕ್ಯೂಸೆಕ್ ನೀರು ಹರಿಸಿ ಎಂದು ಹೇಳಿರುವುದು ಅವೈಜ್ಞಾನಿಕ ಎಂದು ಹೇಳಿದರು. ಇದನ್ನೂ ಓದಿ: ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

    ಸುಪ್ರೀಂನಲ್ಲಿ ನ್ಯಾಯ ಸಿಗುವ ಭರವಸೆ:
    ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆ ಅತ್ಯಂತ ಕಡಿಮೆ ಇದ್ದು, ಇದನ್ನು ಸುಪ್ರೀಂ ಕೋರ್ಟಿಗೆ (Supreme Court) ಮನವರಿಕೆ ಮಾಡುತ್ತೇವೆ. ಅಲ್ಲಿ ನಮಗೆ ನ್ಯಾಯ ಸಿಗುವ ಭರವಸೆಯಿದೆ. ಕಳೆದ 120 ವರ್ಷಗಳಲ್ಲೇ ಅತ್ಯಂತ ಕಷ್ಟದ ಸಂದರ್ಭವನ್ನು ಕರ್ನಾಟಕ ಎದುರಿಸುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 5,000 ಕ್ಯೂಸೆಕ್ ನೀರು ಬಿಡುಗಡೆಗೆ ಆದೇಶ ನೀಡಿದ್ದು ಇಷ್ಟೆಲ್ಲಾ ಸಂಕಷ್ಟಗಳಿಗೆ ದಾರಿ ಮಾಡಿಕೊಟ್ಟಿದೆ ಎಂದರು. ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ಸಂಕಷ್ಟ – ದಿಲ್ಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭೇಟಿಯಾದ ಡಿಕೆಶಿ

    ರಾಜ್ಯದ ನೆಲ-ಜಲದ ಸಂರಕ್ಷಣೆಗೆ ಸದಾ ಬೆನ್ನೆಲುಬಾಗಿ ನಾವು ನಿಲ್ಲುತ್ತೇವೆ ಎಂದು ಸಭೆಗೆ ಬಂದಿದ್ದ ಬಿಜೆಪಿ, ಕಾಂಗ್ರೆಸ್, ಜನತಾ ದಳ ಮತ್ತು ಪಕ್ಷೇತರ ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ಕರ್ನಾಟಕ ಸರ್ಕಾರ ಅಭಾರಿಯಾಗಿರುತ್ತದೆ ಎಂದು ಧನ್ಯವಾದ ತಿಳಿಸಿದರು. ಇದನ್ನೂ ಓದಿ: ಹಳೆ ಸಂಸತ್‌ ಭವನದ ಮುಂದಿನ ಕಥೆ ಏನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿಗೆ ನೀರು – ಇಂದು ಸರ್ವಪಕ್ಷ ಸಭೆ ಕರೆದ ಸರ್ಕಾರ

    ತಮಿಳುನಾಡಿಗೆ ನೀರು – ಇಂದು ಸರ್ವಪಕ್ಷ ಸಭೆ ಕರೆದ ಸರ್ಕಾರ

    ಬೆಂಗಳೂರು: ತಮಿಳುನಾಡಿಗೆ (TamilNadu) ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ (CWRC) ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ (Karnataka Government) ಇಕ್ಕಟ್ಟಿಗೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಇಂದು ವಿಶೇಷ ಸರ್ವಪಕ್ಷ ಸಭೆ (All Party Meeting) ಕರೆದಿದೆ.

    ಸಿಎಂ ಸಿದ್ದರಾಮಯ್ಯ (CM Siddaramaiah) ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 12:30ಕ್ಕೆ ವಿಶೇಷ ಸರ್ವಪಕ್ಷ ಸಭೆ ನಡೆಯಲಿದೆ. ವಿಪಕ್ಷಗಳ ಸದನ ನಾಯಕರು, ಕಾವೇರಿ ಜಲಾನಯನ ಕ್ಷೇತ್ರಗಳ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಸಿಎಂಗಳಿಗೆ ಸಭೆಗೆ ಬರುವಂತೆ ಆಹ್ವಾನಿಸಲಾಗಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಕುಡಿಯುವ ನೀರಿನ ಚಿಂತೆ; ತಮಿಳುನಾಡಿಗೆ ಬೆಳೆ ಬಾಡುವ ಚಿಂತೆ – 15 ದಿನ 5,000 ಕ್ಯೂಸೆಕ್ ಹರಿಸಲು CWRC ಸೂಚನೆ

     

    ಸಿಡಬ್ಲ್ಯೂಆರ್‌ಸಿ ಶಿಫಾರಸು ಪಾಲನೆ ಮಾಡದಿರುವ ಸಂಬಂಧ ಸಭೆಯಲ್ಲಿ ಎಲ್ಲರೂ ಸೇರಿ ತೀರ್ಮಾನ ಮಾಡಲಿದ್ದಾರೆ. ಜತೆಗೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಬಗ್ಗೆ ಮುಹೂರ್ತ ನಿಗದಿ ಮಾಡುವ ಸಾಧ್ಯತೆ ಇದೆ.

    ಸಭೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ದೆಹಲಿಗೆ ತೆರಳಲಿದ್ದು, ಕೇಂದ್ರದ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಿ ಕೇಂದ್ರದ ಮಧ್ಯಪ್ರವೇಶಕ್ಕೆ ಒತ್ತಾಯಿಸುವ ಸಾಧ್ಯತೆ ಇದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Cauvery Water : ಇಂದು ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ

    Cauvery Water : ಇಂದು ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ

    ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವ ವಿಚಾರವಾಗಿ ಇಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಸಭೆ ನಡೆಯಲಿದೆ.

    ಸಭೆಯಲ್ಲಿ ವಿಪಕ್ಷಗಳ ಸಲಹೆಯನ್ನು ಸರ್ಕಾರ ಪಡೆಯಲಿದೆ. ಸುಪ್ರೀಂಕೋರ್ಟ್,ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆ ಹಾಗೂ ಮುಂದಿನ ಕಾನೂನು ಹೋರಾಟ ಹೇಗೆ ಎಂಬ ಬಗ್ಗೆಯೂ ಚರ್ಚೆ ಆಗಲಿದೆ.

     

    ಕೂಡಲೇ ತಮಿಳುನಾಡಿಗೆ ನೀರು ಬಂದ್ ಮಾಡಿದರೆ ಎದುರಾಗುವ ಕಾನೂನು ತೊಡಕುಗಳು, ಸವಾಲುಗಳ ಬಗ್ಗೆ ವಕೀಲರ ಅಭಿಪ್ರಾಯವನ್ನು ಸಿಎಂ ಆಲಿಸಲಿದ್ದಾರೆ.  ಇದನ್ನೂ ಓದಿ: Chandrayaan-3: ಕೊನೆಯ ಆ 20 ನಿಮಿಷವೇ ಆತಂಕ – ಲ್ಯಾಂಡಿಗ್‌ ಹೇಗಿರುತ್ತೆ? ಈ ಬಗ್ಗೆ ನೀವು ತಿಳಿಯಲೇಬೇಕು

    ಪ್ರತಿಪಕ್ಷಗಳ ಸಲಹೆ ಮೇರೆಗೆ ಮುಂದಿನ ಹೆಜ್ಜೆ ಇಡಲು ಸರ್ಕಾರ ನಿರ್ಧರಿಸಿದೆ. ತಮಿಳುನಾಡಿಗೆ ಪ್ರತಿದಿನ 10,000 ಕ್ಯೂಸೆಕ್‌ ನೀರು ಹರಿಸಲಾಗುತ್ತದೆ. ಆಗಸ್ಟ್ 31 ರವರೆಗೂ ನಿತ್ಯ 10,000 ಕ್ಯೂಸೆಕ್ ನೀರು ಹರಿಸಲು ಸರ್ಕಾರ ತೀರ್ಮಾನಿಸಿದೆ. ಈಗಾಗಲೇ 21 ಟಿಎಂಸಿಗಿಂತಲೂ ಹೆಚ್ಚು ನೀರು ತಮಿಳುನಾಡಿಗೆ ಬಿಡಲಾಗಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾನುವಾರ ನಿಗದಿಯಾಗಿದ್ದ ಸರ್ವಪಕ್ಷ ನಾಯಕರ ಸಭೆ ಮುಂದೂಡಿಕೆ

    ಭಾನುವಾರ ನಿಗದಿಯಾಗಿದ್ದ ಸರ್ವಪಕ್ಷ ನಾಯಕರ ಸಭೆ ಮುಂದೂಡಿಕೆ

    ಬೆಂಗಳೂರು: ಸಿಎಂ ಯಡಿಯೂರಪ್ಪನವರಿಗೆ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣ ಸಂಬAಧ ಭಾನುವಾರ ನಿಗದಿಯಾಗಿದ್ದ ಸರ್ವಪಕ್ಷ ನಾಯಕರ ಸಭೆಯನ್ನು ಮುಂದೂಡಲಾಗಿದೆ.

    ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ. ಚನ್ನಬಸವೇಶ ಅವರು ಸರ್ವಪಕ್ಷ ನಾಯಕರಿಗೆ ಪತ್ರದ ಮೂಲಕ ಮುಂದೂಡಿಕೆಯಾದ ವಿಚಾರವನ್ನು ತಿಳಿಸಿದ್ದಾರೆ.

    ಭಾನುವಾರ ಸಂಜೆ 4 ಗಂಟೆಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿ ಸಿಎಂ ಯಡಿಯೂರಪ್ಪನವರು ಸರ್ವ ಪಕ್ಷ ನಾಯಕರ ಸಭೆಯನ್ನು ಕರೆದಿದ್ದರು. ಕೊರೊನಾ ಪಾಸಿಟಿವ್ ದೃಢಪಟ್ಟರೂ ಸಿಎಂ ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳಲ್ಲಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಈಗ ನಿಗದಿಯಾಗಿದ್ದ ಸಭೆಯನ್ನೇ ಮುಂದೂಡಿಕೆ ಮಾಡಲಾಗಿದೆ.

    ಮಾಜಿ ಸಿಎಂ ಕುಮಾರಸ್ವಾಮಿ ಅವರು ಸರ್ಕಾರ ಸರಿಯಾಗಿ ಕೊರೊನಾ ನಿಯಮಗಳನ್ನು ಪಾಲನೆ ಮಾಡಿಲ್ಲ. ಈಗ ಸರ್ವ ಪಕ್ಷ ನಾಯಕರ ಸಭೆ ಕರೆದು ಚರ್ಚೆ ಮಾಡಲು ಮುಂದಾಗಿದೆ ಎಂದು ಟೀಕಿಸಿದ್ದರು.

  • ಮೋದಿ ಸೂಚನೆಯನ್ನು ಪಾಲಿಸಲು ಮುಂದಾದ ಸಿಎಂ ಬಿಎಸ್‍ವೈ

    ಮೋದಿ ಸೂಚನೆಯನ್ನು ಪಾಲಿಸಲು ಮುಂದಾದ ಸಿಎಂ ಬಿಎಸ್‍ವೈ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸೂಚನೆಯಂತೆ ಸರ್ವ ಪಕ್ಷ ಸಭೆ ಕರೆಯಲು ಸಿಎಂ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಅಂತ ತಿಳಿದು ಬಂದಿದೆ.

    ಉಪ ಚುನಾವಣೆ ನಂತರ ಅಂದರೆ ಏಪ್ರಿಲ್ 17ರ ನಂತರ ಸರ್ವ ಪಕ್ಷ ಸಭೆ ನಡೆಯಬಹುದು. ಸಭೆಯಲ್ಲಿ ಕೊರೋನಾ ನಿಯಂತ್ರಣ, ನೈಟ್ ಕರ್ಫ್ಯೂ, ಲಾಕ್ ಡೌನ್ ಸಾಧ್ಯತೆ ಸೇರಿದಂತೆ ಎಲ್ಲದರ ಬಗ್ಗೆ ಸಿಎಂ ಚರ್ಚೆ ಮಾಡಲಿದ್ದಾರೆ.

    ಸರ್ವ ಪಕ್ಷಗಳ ಸಭೆಯಲ್ಲಿ ನಾಯಕರ ನಿರ್ಧಾರವನ್ನು ಪರಿಗಣಿಸಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಈಗಾಗಲೇ ಲಾಕ್ ಡೌನ್ ಪರವಾದ ಒಲವು ವ್ಯಕ್ತಪಡಿಸಿದ್ರೆ, ವಿಪಕ್ಷ ನಾಯಕ ಸಿದ್ದರಾಮಯ್ಯ ನೈಟ್ ಕರ್ಫ್ಯೂ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೆಲ್ಲವನ್ನೂ, ಗಮನದಲ್ಲಿಟ್ಟುಕೊಂಡು ಸರ್ವ ಪಕ್ಷಗಳ ಸಭೆ ನಡೆಸಲು ಸಿಎಂ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

    ನೈಟ್ ಕರ್ಫ್ಯೂ ಮುಂದುವರಿಕೆ, ಅಗತ್ಯ ಬಿದ್ದರೆ ವೀಕೆಂಡ್ ಲಾಕ್ ಡೌನ್ ಅಥವಾ ನಿರ್ದಿಷ್ಟ ಅವಧಿಯ ಲಾಕ್‍ಡೌನ್.. ಹೀಗೆ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಿ, ವಿಪಕ್ಷಗಳ ಸಲಹೆ ಪಡೆಯಲು ಸಿಎಂ ಮುಂದಾಗಿದ್ದಾರೆ ಅಂತ ತಿಳಿದು ಬಂದಿದೆ.

    ಕೊರೊನಾ ಹೆಚ್ಚಿರುವ ರಾಜ್ಯಗಳ ಸಿಎಂಗಳಿಗೆ ಸರ್ವ ಪಕ್ಷ ಸಭೆ ಕರೆದು ಎಲ್ಲರ ಸಲಹೆ-ಸೂಚನೆ ಪಡೆಯುವಂತೆ ಪ್ರಧಾನಿ ಮೋದಿ 11 ರಾಜ್ಯಗಳಿಗೆ ಸೂಚಿಸಿದ್ದರು.

  • ದೇಶದ ಒಂದು ಇಂಚು ಜಾಗವನ್ನು ಯಾರಿಗೂ ಬಿಟ್ಟು ಕೊಡಲ್ಲ: ಮೋದಿ

    ದೇಶದ ಒಂದು ಇಂಚು ಜಾಗವನ್ನು ಯಾರಿಗೂ ಬಿಟ್ಟು ಕೊಡಲ್ಲ: ಮೋದಿ