Tag: ಸರ್ವರ್‌ ಸಮಸ್ಯೆ

  • ಕೊಡಗಿನಲ್ಲಿ ಗಣತಿದಾರರ ಪರದಾಟ – ಮುಂದುವರಿದ ಸರ್ವರ್​ ಸಮಸ್ಯೆ, 4 ದಿನಗಳಲ್ಲಿ ಕೇವಲ 1,133 ಮಂದಿ ದತ್ತಾಂಶ ಸಂಗ್ರಹ

    ಕೊಡಗಿನಲ್ಲಿ ಗಣತಿದಾರರ ಪರದಾಟ – ಮುಂದುವರಿದ ಸರ್ವರ್​ ಸಮಸ್ಯೆ, 4 ದಿನಗಳಲ್ಲಿ ಕೇವಲ 1,133 ಮಂದಿ ದತ್ತಾಂಶ ಸಂಗ್ರಹ

    – ʻಪಬ್ಲಿಕ್ ಟಿವಿʼ ರಿಯಾಲಿಟಿ ಚೆಕ್‌ ವೇಳೆ ಸಮೀಕ್ಷಕರ ಸಮಸ್ಯೆ ಅನಾವರಣ

    ಮಡಿಕೇರಿ: ರಾಜ್ಯಾದ್ಯಂತ ಆರಂಭಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ 4ನೇ ದಿನವೂ ಸರ್ವರ್‌ ಸಮಸ್ಯೆಯ ತಲೆನೋವಾಗಿದೆ. ಸಮೀಕ್ಷೆ ಶುರುವಾಗಿ 4ನೇ ದಿನಕ್ಕೆ ಕಾಲಿಟ್ಟರೂ ಸರ್ವರ್ ಸಮಸ್ಯೆ ಬಗೆಹರಿಯುವ ಲಕ್ಷಣಗಳು ಮಾತ್ರ ಗೋಚರಿಸುತ್ತಿಲ್ಲ. ಹೀಗಾಗಿ ಶಾಲಾ ಶಿಕ್ಷಕರು ಪ್ರತಿ ಮನೆಮನೆಗೆ ತೆರಳಿ ಗಂಟೆಗಟ್ಟಲೇ ಓಟಿಪಿಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ʻಪಬ್ಲಿಕ್‌ ಟಿವಿʼ ರಿಯಾಲಿಟಿ ಚೆಕ್‌ ನಡೆಸಿದಾಗ ಸಮೀಕ್ಷಕರ ಪರದಾಟಗಳು ಅನಾವರಣಗೊಂಡಿದೆ.

    15 ದಿನಗಳಲ್ಲಿ ಜಾತಿ ಜನಗಣತಿ ಕಾರ್ಯ ಮುಗಿಸಬೇಕೆಂದು ಈಗಾಗಲೇ ಶಿಕ್ಷಕರಿಗೆ ಸೂಚನೆ ಕೊಟ್ಟಿದೆ. ದಸರಾ ರಜೆ ಕೂಡ ಇರೋದ್ರಿಂದ ಶಿಕ್ಷಕರು ನಿತ್ಯ ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದಾರೆ. ಆದ್ರೆ ಕೊಡಗಿನಲ್ಲಿ ಸರ್ವರ್‌ ಸಮಸ್ಯೆ ಇರೋದ್ರಿಂದ ಸಮೀಕ್ಷಾ ಮಾಹಿತಿಯನ್ನ ಮೊಬೈಲ್‌ ಆ್ಯಪ್‌ನಲ್ಲಿ ದಾಖಲಿಸಲು ಸಾಧ್ಯವಾಗುತ್ತಿಲ್ಲ. ಇದನ್ನೂ ಓದಿ: ನಾಳೆಯಿಂದ ಜಾತಿ ಜನಗಣತಿ, ಒಬ್ಬ ಸಮೀಕ್ಷಕರಿಗೆ ಕನಿಷ್ಠ 150 ಮನೆ ಹಂಚಿಕೆ: ಮಧುಸೂದನ್ ನಾಯ್ಕ್

    2-3 ಗಂಟೆ ಒಂದೇ ಮನೆಯಲ್ಲಿ ಠಿಕಾಣಿ
    ಹೇಗೋ ಹರಸಾಹಸ ಮಾಡಿ ಎಲ್ಲಾ ಮಾಹಿತಿಯನ್ನ ಆ್ಯಪ್‌ನಲ್ಲಿ ದಾಖಲಿಸಿದ್ರೆ ಓಟಿಪಿ ಹಾಕುವ ಸಂದರ್ಭದಲ್ಲೇ ಕೈಕೊಡುತ್ತಿದೆ. ಹೀಗಾಗಿ ಶಾಲಾ ಶಿಕ್ಷಕರು ಓಟಿಪಿಗಾಗಿ ಗಂಟೆಗಟ್ಟಲೆ ಕಾದು ಹೈರಾಣಾಗುತ್ತಿದ್ದಾರೆ. ಸರ್ವೇ ನಡೆಸಲು ಎರಡು ಮೂರು ಗಂಟೆಗಳ ಕಾಲ ಶಿಕ್ಷಕರು ಒಂದೇ ಮನೆ ಬಳಿ ಕುಳಿತಿರುತ್ತಾರೆ. ಇದರಿಂದ ಮಾಹಿತಿ ನೀಡುತ್ತಿರುವ ಜನಸಾಮಾನ್ಯರಿಗೂ ಕಿರಿಕಿರಿ ಉಂಟಾಗುತ್ತಿದೆ. ಇದನ್ನೂ ಓದಿ: ಜಾತಿ ಜನಗಣತಿ ವಿರೋಧಿಸಿ ಅರ್ಜಿ – ಕೇಂದ್ರ , ರಾಜ್ಯ, ಸೆನ್ಸಸ್ ಮಂಡಳಿ, ಹಿಂದುಳಿದ ಆಯೋಗಕ್ಕೆ ನೋಟಿಸ್ ಜಾರಿ

    ಸಂಜೆಯಾದ್ರೆ ಆನೆಕಾಟ, ಬೆಳಗ್ಗೆ ನೆಟ್‌ವರ್ಕ್‌ ಸಮಸ್ಯೆ
    ಇನ್ನೂ ಕೊಡಗು ಗುಡ್ಡಗಾಡು ಪ್ರದೇಶ ಆಗಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಗಣತಿದಾರರು ನೆಟ್‌ವರ್ಕ್ ಸಮಸ್ಯೆ ಎದುರಿಸುತ್ತಿದ್ದಾರೆ. ಒಂದು ಮನೆಯ ಪೂರ್ಣ ವಿವರ ದಾಖಲಿಸಿ ಅಪ್‌ಲೋಡ್‌ ಮಾಡಿದ ನಂತರ ಮತ್ತೊಂದು ಮನೆ ಗಣತಿ ನಡೆಸಬೇಕು. ಆದ್ರೆ ಇಲ್ಲಿನ ಜನರ ಬಳಿ ಬಹುತೇಕ 4ಜಿ ಮೊಬೈಲ್‌ಗಳಿವೆ ನೆಟ್‌ವರ್ಕ್‌ ಸಮಸ್ಯೆ ಕೂಡ ಕಾಡುತ್ತಿರೋದ್ರಿಂದ, ಆ್ಯಪ್‌ ಡೌನ್‌ಲೋಡ್‌ ಮಾಡೋದು ಕೂಡ ಸಮಸ್ಯೆಯಾಗ್ತಿದೆ. ಸಾರ್ವಜನಿಕರ ಮನೆಗಳ ಲೊಕೆಷನ್ ಮಾಹಿತಿಯೂ ನೆಟ್‌ವರ್ಕ್ ಸಮಸ್ಯೆಯಿಂದ ಸರಿಯಾಗಿ ನಮೂದಾಗುತ್ತಿಲ್ಲ. ಇನ್ನೂ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಸಂಜೆ 5 ಗಂಟೆ ನಂತರವೇ ಮನೆಗೆ ಬರ್ತಾರೆ. ಆದ್ರೆ ಸಂಜೆಯಾಗ್ತಿದ್ದಂತೆ ಕಾಡಾನೆಗಳ ಕಾಡ ಶುರುವಾಗುತ್ತಿದೆ ಎಂದು ಅಲವತ್ತುಕೊಂಡಿದ್ದಾರೆ.

    ಕೊಡಗು ಜಿಲ್ಲೆಯಲ್ಲಿ ಒಟ್ಟು 1,38,112 ಸಮೀಕ್ಷೆ ಮಾಡಲು ಗುರಿ ನೀಡಲಾಗಿದೆ. ಆದ್ರೆ ಕಳೆದ 3-4 ದಿನಗಳಲ್ಲಿ ಕೇವಲ 1,133 ಮನೆಗಳು ಮಾತ್ರ ಗಣತಿಯಾಗಿದೆ. ಈ ಬಗ್ಗೆ ವಕ್ಫ್‌ ಇಲಾಖೆಯ ಅಧಿಕಾರಿಯೊಬ್ಬರು ಮಾತನಾಡಿ, ರಾಜ್ಯದಲ್ಲಿ ಈ ರೀತಿಯ ಸಮಸ್ಯೆಯಾಗಿದೆ. ಪ್ರತಿನಿತ್ಯ ಇದರ ಬಗ್ಗೆ ಜಮೀರ್‌ ಅಹ್ಮದ್‌ ಅಹಮದ್‌ ಮಾಹಿತಿ ಪಡೆಯುತ್ತಿದ್ದಾರೆ. ಸರ್ವರ್ ಸಮಸ್ಯೆ ಬಗ್ಗೆ ಹರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

  • ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಸರ್ವರ್‌ನಲ್ಲಿ ಸಮಸ್ಯೆ; ಸಿಬ್ಬಂದಿ ಹೈರಾಣು

    ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಸರ್ವರ್‌ನಲ್ಲಿ ಸಮಸ್ಯೆ; ಸಿಬ್ಬಂದಿ ಹೈರಾಣು

    ಗದಗ: ಸೆ.22 ರಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (Caste Census Survey) ಆರಂಭವಾಗಿದೆ. 2ನೇ ದಿನವೂ ಸರ್ವೆ ಕಾರ್ಯಕ್ಕೆ ವಿಘ್ನ ಎದುರಾಗಿದೆ. ಗದಗ (Gadag) ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಿಬ್ಬಂದಿ ಸರ್ವರ್ ಸಮಸ್ಯೆಯಿಂದ ಪರದಾಡಿದ್ದಾರೆ.

    ಸಮೀಕ್ಷೆಯ ಆಪ್ ಓಪನ್ ಆಗುತ್ತಿರಲಿಲ್ಲ. ಇನ್ನು ಕೆಲವು ಮೊಬೈಲ್‌ನಲ್ಲಿ ಓಪನ್ ಆದ್ರೂ ಓಟಿಪಿ ಬರುತ್ತಿರಲಿಲ್ಲ. ಅಪ್ಡೇಟ್ ಕೇಳಿ ತಂತಾನೆ ಆಪ್ ಕ್ಲೋಸ್ ಆಗುತ್ತಿತ್ತು. ಸರ್ವೆ ಸಂಬಂಧಿಸಿದ ಯುಹೆಚ್‌ಐಡಿ ಸ್ಟಿಕ್ಕರ್ ಸರಿಯಾಗಿ ಅಂಟಿಸಿರಲಿಲ್ಲ ಈ ರೀತಿಯಾದ ಸಮಸ್ಯೆಯನ್ನು ಸಿಬ್ಬಂದಿ ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಟಾರ್ಗೆಟ್‌ 20 ಲಕ್ಷ, ನಡೆದಿದ್ದು 10 ಸಾವಿರ ಮಂದಿ ಗಣತಿ – ಮೊದಲ ದಿನವೇ ನೀರಸ ಆರಂಭ

    ಕೆಲವು ಕಡೆಗಳಲ್ಲಿ ಸರಿಯಾಗಿ ಲೊಕೇಷನ್ ತೋರಿಸದೇ ಎಲ್ಲೆಲ್ಲೋ ತೋರಿಸುತ್ತಿದೆ. ಒಂದು ಮನೆ ಅರ್ಜಿ ಭರ್ತಿ ಮಾಡಲು 2 ರಿಂದ 3 ಗಂಟೆ ತೆಗೆದುಕೊಳ್ಳುತ್ತಿದೆ. ನಾಲ್ಕೈದು ಬಾರಿ ಒಟಿಪಿ ತೆಗೆದುಕೊಳ್ಳುತ್ತದೆ. ಪದೇಪದೇ ಒಟಿಪಿ ಹೇಳಲು ಜನರು ಹಿಂದೇಟು ಹಾಕ್ತಿದ್ದಾರೆ. ಇದನ್ನೂ ಓದಿ: ಹಾವೇರಿ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆಪ್‌ನಲ್ಲಿ ಮೊದಲ ದಿನವೇ ತಾಂತ್ರಿಕ ದೋಷ – ಸಿಬ್ಬಂದಿ ಪರದಾಟ

    ಇನ್ನು ಕೆಲವು ಮನೆಗಳಲ್ಲಿ ಸ್ಟಿಕ್ಕರ್ ಕಿತ್ತು ಹಾಕಿದ್ದಾರೆ. ಕೆಲವು ಮನೆಗಳಲ್ಲಿ ಬರಬೇಡಿ ಹೋಗಿ ಅಂತಾರೆ. ಇನ್ನು ಕೆಲವರು ಎಷ್ಟು ಸಮಯಬೇಕು ನಿಮಗೆ ಸಾಕು ಎದ್ದು ಹೋಗಿ ಎನ್ನುತ್ತಿದ್ದಾರೆಂದು ಸಿಬ್ಬಂದಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ.

    ಕಷ್ಟಪಟ್ಟು ಅರ್ಜಿ ಭರ್ತಿ ಮಾಡಿದಾಗ ಕೊನೆ ಕ್ಷಣದಲ್ಲಿ ಸಬ್ಮಿಟ್ ತೆಗೆದುಕೊಳ್ಳುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದ್ರೂ ಯಾರೂ ಸೂಕ್ತ ಪರಿಹಾರ ಹೇಳುತ್ತಿಲ್ಲ. ಈ ಎಲ್ಲದರಿಂದ ನಾವೆಲ್ಲ ಗೊಂದಲಕ್ಕೀಡಾಗಿದ್ದೇವೆ. ಮೊದಲು ಸಮಸ್ಯೆ ಬಗೆಹರಿಸಿ, ನಂತರ ಕೆಲಸಕ್ಕೆ ಬರುತ್ತೇವೆ ಎಂದು ಸಿಬ್ಬಂದಿ ಹೇಳಿದ್ದಾರೆ.

  • DCSನಲ್ಲಿ ಸರ್ವರ್‌ ಸಮಸ್ಯೆ, KSRTC ಬಸ್‌ಗಳಿಗೆ ತಟ್ಟಿದ ಬಿಸಿ – ಮಡಿಕೇರಿಯಲ್ಲಿ ಪ್ರಯಾಣಿಕರು ಹೈರಾಣು

    DCSನಲ್ಲಿ ಸರ್ವರ್‌ ಸಮಸ್ಯೆ, KSRTC ಬಸ್‌ಗಳಿಗೆ ತಟ್ಟಿದ ಬಿಸಿ – ಮಡಿಕೇರಿಯಲ್ಲಿ ಪ್ರಯಾಣಿಕರು ಹೈರಾಣು

    ಮಡಿಕೇರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬಸ್‌ಗಳಿಗೆ ಸೋಮವಾರ ಬೆಳಗ್ಗೆಯಿಂದ DCS (ಘಟಕದ ಗಣಕಯಂತ್ರದ ತಂತ್ರಾಂಶ) ಸಾಫ್ಟ್‌ವೇರ್‌ ಸರ್ವರ್ ಸಮಸ್ಯೆಯಿಂದಾಗಿ ಪ್ರಯಾಣಿಕರು ಹೈರಾಣಾಗಿರುವ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.

    ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಟಿಕೆಟ್ ಮಾಡುವ DCS (ಘಟಕದ ಗಣಕಯಂತ್ರದ ತಂತ್ರಾಂಶ) ಸಾಫ್ಟ್‌ವೇರ್‌ ಸರ್ವರ್ ಸಮಸ್ಯೆಯಿಂದ ವಿವಿಧ ಜಿಲ್ಲೆಗಳಿಗೆ ಸಂಚಾರ ಮಾಡಬೇಕಿರುವ ಬಸ್‌ಗಳು ಮಡಿಕೇರಿ ಡಿಪೋದಲ್ಲೇ ಸರತಿ ಸಾಲಿನಲ್ಲಿ ನಿಂತಿವೆ. ಹೀಗಾಗಿ ಬಸ್‌ಗಳಿಗಾಗಿ ಕಾದು ಕಾದು ನೂರಾರು ಪ್ರಯಾಣಿಕರು ಹೈರಾಣಾಗಿದ್ದಾರೆ.

    ಅಲ್ಲದೇ ಸುಮಾರು 15 ಮಾರ್ಗಗಳಲ್ಲಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕುಶಾಲನಗರ, ಸೋಮವಾರಪೇಟೆ, ಮೈಸೂರು ಸೇರಿದಂತೆ ಹಲವೆಡೆಗಳಲ್ಲಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಇದನ್ನೂ ಓದಿ: `ಏಕ್ ಹೈ ತೊ ಸೇಫ್ ಹೈ’ ಪ್ರಧಾನಿ ಘೋಷಣೆಗೆ ಟೀಕೆ – ಮೋದಿ, ಅದಾನಿ ಫೋಟೋ ತೋರಿಸಿ ರಾಗಾ ವ್ಯಂಗ್ಯ

    ಇನ್ನೂ ಈ ಬಗ್ಗೆ ʻಪಬ್ಲಿಕ್ ಟಿವಿʼ, ಡಿಪೋ ಮ್ಯಾನೇಜರ್ ಮೆಹಬೂಬ್ ಅಲಿ ಅವರನ್ನ ಕೇಳಿದ್ರೆ, ಬೆಳಗ್ಗೆಯಿಂದಲ್ಲೂ ಇಂಟರ್ನೆಟ್‌ ಸಮಸ್ಯೆಯಿಂದ ಘಟಕದ ಗಣಕಯಂತ್ರದ ತಂತ್ರಾಂಶದಲ್ಲಿ ಸಮಸ್ಯೆಯಾಗಿತ್ತು. ಹೀಗಾಗಿ ಮೈಸೂರು ಸೋಮವಾರಪೇಟೆ ಸೇರಿದಂತೆ ಸುಮಾರು ಹದಿನೈದು ಕಡೆಗಳಲ್ಲಿ ರೂಟ್‌ ಅಪರೇಟ್ ಅಗಿಲ್ಲ. ಸದ್ಯದಲ್ಲೇ ತಾಂತ್ರಿಕದೋಷ ಸರಿಪಡಿಸಿ ಬಸ್‌ ಸಂಚಾರಕ್ಕೆ ಆರಂಭಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 40% ಕಮಿಷನ್‌ ಆರೋಪದಂತೆ ಕೋವಿಡ್‌ನಲ್ಲೂ ಕ್ಲೀನ್ ಚಿಟ್ ಸಿಗಲಿದೆ: ಸೋಮಣ್ಣ ವಿಶ್ವಾಸ