Tag: ಸರ್ವೋಚ್ಚ ನ್ಯಾಯಾಲಯ

  • ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ: ಸಿಎಂ

    ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ: ಸಿಎಂ

    ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂಬುದು ಒಮ್ಮತದ ತೀರ್ಮಾನವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಸರ್ವಪಕ್ಷಗಳ ನಾಯಕರ ಸಭೆಯ ನಂತರ ಮಾಧ್ಯಮದವರೊಂದಿಗೆ ಬೊಮ್ಮಾಯಿ ಅವರು  ಮಾತನಾಡಿದರು. ಈ ವೇಳೆ ಅವರು, ಎಲ್ಲ ಆಯಾಮಗಳಲ್ಲಿ ವಿಚಾರ ಮಾಡಿ ಹಿಂದುಳಿದ ವರ್ಗಗಳಿಗೆ ರಾಜಕೀಯವಾಗಿ ಹಿಂದುಳಿದಿರುವುದನ್ನು ಗುರುತಿಸಬೇಕು. ಅದಕ್ಕಾಗಿ ಸಮಿತಿ ರಚಿಸಬೇಕು. ಒಟ್ಟಾರೆ ಮೀಸಲಾತಿ ಶೇ 50% ನ್ನು ಮೀರಬಾರದು ಎನ್ನುವ ಸರ್ವೋಚ್ಚ ನ್ಯಾಯಾಲಯದ ಷರತ್ತುಗಳನ್ವಯ ಕ್ರಮಗಳನ್ನು ತೆಗೆದು ಕೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ `ರೋಬೋ’ 

    ಈ ತಿಂಗಳ ಅಂತ್ಯದೊಳಗೆ ಮುಂದಿನ ಸಭೆ ನಿಗದಿಪಡಿಸಲಾಗುವುದು. ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಹಾಜರಾತಿಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

    ಇತ್ತೀಚಿನ ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು, ಯಾವ ರೀತಿ ಚುನಾವಣೆ ನಡೆಯಬೇಕು ಎಂಬ ವಿಚಾರದಲ್ಲಿ ಸುದೀರ್ಘ ಚರ್ಚೆಯಾಗಿದೆ. ಅಡ್ವೊಕೇಟ್ ಜನರಲ್ ಅವರು ಕಾನೂನಿನ ವಸ್ತುಸ್ಥಿತಿಯ ವಿವರಗಳನ್ನು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಟ್ರಾನ್ಸ್ ಫಾರ್ಮರ್ ಸ್ಫೋಟ ತಂದೆ ಸಾವು – ಮಗಳ ಸ್ಥಿತಿ ಗಂಭೀರ

    ಈ ಕುರಿತು ಆಯೋಗ ರಚಿಸಿ ವರದಿ ಪಡೆದು ಚುನಾವಣೆಗೆ ಹೋಗಬೇಕೆ ಅಥವಾ ಸರ್ವೋಚ್ಚ ನ್ಯಾಯಾಲಯದಲ್ಲಿ ಪುನರ್ ಪರಿಶೀಲನಾ ಅರ್ಜಿ ಹಾಕಬೇಕೆ ಎನ್ನುವ ಆಯ್ಕೆ ನಮ್ಮ ಮುಂದಿದೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡದೆ ಚುನಾವಣೆಗೆ ಹೋಗಲು ಸಾಧ್ಯವಿಲ್ಲ ಎಂದರು.

  • ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಕ್ರಮವಹಿಸಬೇಕು: ಕಾರಜೋಳ

    ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಕ್ರಮವಹಿಸಬೇಕು: ಕಾರಜೋಳ

    ಬೆಂಗಳೂರು: ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಕ್ರಮವಹಿಸಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಧಾನಸಭೆಯಲ್ಲಿ ಇಂದು ತಿಳಿಸಿದರು.

    ಕೃಷ್ಣಾ ನ್ಯಾಯಾಧೀಕರಣ ಅಂತಿಮ ಐತೀರ್ಪು ಗೆಜೆಟ್ ಅಧಿಸೂಚನೆ ಪ್ರಕಟಣೆಯಾದ ನಂತರ ಯೋಜನೆಯ ವಿವರವಾದ ವರದಿಗೆ ಸಕ್ಷಮ ಪ್ರಾಧಿಕಾರಗಳ ತಿರುವಳಿ ಮೂಲಕ ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519.60 ಮೀ.ದಿಂದ 524.256 ಮೀ.ಗೆ ಎತ್ತರಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ:  ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಹೆಚ್‍ಡಿಕೆ

    ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಆಗಸ್ಟ್ 25 ರಂದು ನವದೆಹಲಿಗೆ ಭೇಟಿ ನೀಡಿದ್ದೇವು. ಆ ವೇಳೆ ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯದ ಮಾನ್ಯ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪುನ್ನು ಆದ್ಯತೆ ಮೇರೆಗೆ ಗೆಜೆಟ್ ಪ್ರಕಟಣೆ ಮಾಡುವಂತೆ ಕೋರಲಾಗಿದೆ ಎಂದು ತಿಳಿಸಿದರು.

     

    ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಬಾಕಿ ಇರಿಸಿ ರಾಜ್ಯವು ಸಲ್ಲಿಸಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ವಿವರವಾದ ಯೋಜನಾ ವರದಿಯ ಅಪ್ರೈಸಲ್ ಕಾರ್ಯವನ್ನು ಕೈಗೆತ್ತಿಕೊಳ್ಳುವಂತೆ ಕೇಂದ್ರ ಜಲ ಆಯೋಗಕ್ಕೆ ನಿರ್ದೇಶನ ನೀಡಲು ಈ ಸಂದರ್ಭದಲ್ಲಿ ಮನವಿ ಮಾಡಲಾಯಿತು ಎಂದು ಬಸವನಬಾಗೇವಾಡಿ ಶಾಸಕ ಶಿವಾನಂದ ಎಸ್.ಪಾಟೀಲ್ ಅವರ ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು. ಇದನ್ನೂ ಓದಿ:  ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟಕ್ಕೆ ಜೀವಗಳು ಬಲಿ

    2013 ರಿಂದ 2019ರವರೆಗೆ ಕಾಂಗ್ರೆಸ್ ಸರ್ಕಾರ ಮತ್ತು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಏನು ಮಾಡಲಿಲ್ಲ. ಮಹಾರಾಷ್ಟ್ರದೊಂದಿಗೆ ಮಾತನಾಡಿ ಕೃಷ್ಣಾ ಜಲವಿವಾದದ ವಿಷಯದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಜಂಟಿಯಾಗಿ ಪ್ರಮಾಣ ವಚನ ಸಲ್ಲಿಸಿದ್ದೇವೆ ಎಂದು ಟಾಂಗ್ ಕೊಟ್ಟರು.

     

    ಸರ್ವೋಚ್ಛ ನ್ಯಾಯಾಲಯದ 2011 ಸೆಪ್ಟೆಂಬರ್ 16ರ ತೀರ್ಪಿನಂತೆ ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ್ಪನ್ನು ಗೆಜೆಟ್ ಪ್ರಕಟಣೆ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಲಾಗಿದೆ. ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನ ಕುರಿತಾಗಿ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರ ಪ್ರದೇಶದ ರಾಜ್ಯಗಳು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿರುವ ವಿಶೇಷ ಅನುಮತಿ ಅರ್ಜಿಗಳು ಇತ್ಯರ್ಥವಾಗಬೇಕಿದೆ ಎಂದಿದ್ದಾರೆ. ಇದನ್ನೂ ಓದಿ:  ಶಾರುಖ್ ಅಭಿಮಾನಿಗೆ ಕೊನೆಗೂ ಸುಪ್ರೀಂನಲ್ಲಿ ಸಿಕ್ತು ಜಯ

    ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಮಾರ್ಪಡಿಸುವಂತೆ ಮತ್ತು ನ್ಯಾಯಾಧೀಕರಣ ತೀರ್ಪನ್ನು ಗೆಜೆಟ್ ಪ್ರಕಟಣೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ 2019ರ ಫೆಬ್ರವರಿ 18 ರಂದು ಸುಪ್ರೀಂಗೆ ರಾಜ್ಯ ಸರ್ಕಾರವು ಮಧ್ಯಕಾಲಿನ ಅರ್ಜಿಯನ್ನು ಸಲ್ಲಿಸಿದೆ. ಸದರಿ ಅರ್ಜಿಯಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿವಾದಿಯಾಗಿ ಅನುಮತಿ ಕೋರಿ 2020ರ ಜನವರಿ 23 ರಂದು ಅರ್ಜಿ ಸಲ್ಲಿಸಲಾಗಿದೆ ಎಂದು ಸಚಿವರು ವಿವರವಾಗಿ ಉತ್ತರಿಸಿದರು.

  • ಹುಬ್ಬಳ್ಳಿಯಲ್ಲಿ ಹೈಟೆಕ್ ಕೋರ್ಟ್ ಸಂಕೀರ್ಣ ಉದ್ಘಾಟನೆ

    ಹುಬ್ಬಳ್ಳಿಯಲ್ಲಿ ಹೈಟೆಕ್ ಕೋರ್ಟ್ ಸಂಕೀರ್ಣ ಉದ್ಘಾಟನೆ

    ಹುಬ್ಬಳ್ಳಿ: ವಾಣಿಜ್ಯ ನಗರಿಯ ಹೈಟೆಕ್ ಕೋರ್ಟ್ ಸಂಕೀರ್ಣ ಉದ್ಘಾಟನೆ ಮಾಡಲು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು ಇಂದು ಆಗಮಿಸಿದ್ದಾರೆ.

    ದೆಹಲಿಯಿಂದ ವಿಶೇಷ ವಿಮಾನ ನಿಲ್ದಾಣದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಸಿಜೆ ದೀಪಕ್ ಮಿಶ್ರಾ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದ ಹಳೇ ಗೇಟ್ ನಿಂದ ನಗರದ ಖಾಸಗಿ ಹೋಟೆಲ್‍ಗೆ ಆಗಮಿಸಿದ್ದಾರೆ. ದಿನೇಶ್ ಮಾಹೇಶ್ವರಿ ಹಾಗೂ ಜಿಲ್ಲಾಡಳಿತದಿಂದ ದೀಪಕ್ ಮಿಶ್ರಾರವರನ್ನು ರಾಜ್ಯ ಉಚ್ಛ ನ್ಯಾಯಲಯದ ನ್ಯಾಯಮೂರ್ತಿ ಸ್ವಾಗತಿಸಿ ಬರಮಾಡಿಕೊಂಡರು.

    ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ದೀಪಕ್ ಮಿಶ್ರಾ ಜೊತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಮೋಹನ್ ಶಾಂತನಗೌಡರ್, ಎಸ್ ಅಬ್ದುಲ್ ನಜೀರ್ ಕೂಡಾ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದಾರೆ.  ಇದನ್ನು ಓದಿ: ಏಷ್ಯಾದ ವಿಶಿಷ್ಟ ನ್ಯಾಯಾಲಯ ಸಂಕೀರ್ಣ ಭಾನುವಾರ ಹುಬ್ಬಳ್ಳಿಯಲ್ಲಿ ಲೋಕಾರ್ಪಣೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews