Tag: ಸಲಗ ಸಿನಿಮಾ

  • ಯುವರಾಜ್‌ಕುಮಾರ್‌ಗೆ ಜೊತೆಯಾದ ‘ಸಲಗ’ ಖ್ಯಾತಿಯ ಸಂಜನಾ ಆನಂದ್

    ಯುವರಾಜ್‌ಕುಮಾರ್‌ಗೆ ಜೊತೆಯಾದ ‘ಸಲಗ’ ಖ್ಯಾತಿಯ ಸಂಜನಾ ಆನಂದ್

    ದೊಡ್ಮನೆ ಕುಡಿ ಯುವರಾಜ್‌ಕುಮಾರ್ (Yuva Rajkumar) ಅವರು ‘ಯುವ’ ಸಿನಿಮಾ ಬಳಿಕ ಎರಡನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ‘ಎಕ್ಕ’ ಸಿನಿಮಾದಲ್ಲಿ ಯುವಗೆ ನಾಯಕಿ ಯಾರು? ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ. ‘ಸಲಗ’ ಬ್ಯೂಟಿ ಸಂಜನಾ ಆನಂದ್ (Sanjana Anand) ಹೀರೋಯಿನ್ ಆಗಿದ್ದಾರೆ.

    ‘ಎಕ್ಕ’ ಸಿನಿಮಾ ಶೂಟಿಂಗ್ ಭರದಿಂದ ನಡೆಯುತ್ತಿದೆ. ಈಗಾಗಲೇ ಯುವನ ರಕ್ತಸಿಕ್ತ ಅವತಾರದ ಪೋಸ್ಟರ್ ನೋಡಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಹೀಗಿರುವಾಗ ‘ಎಕ್ಕ’ (Ekka) ಅಡ್ಡಾಗೆ ನಾಯಕಿಯಾಗಿ ‘ಸಲಗ’ ನಟಿ ಸಂಜನಾ ಎಂಟ್ರಿ ಕೊಟ್ಟಿದ್ದಾರೆ. ಯುವ ಮತ್ತು ಸಂಜನಾ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿರುವ ಪೋಸ್ಟರ್ ಅನ್ನು ಸಂಕ್ರಾಂತಿ ಹಬ್ಬದಂದು ಚಿತ್ರತಂಡ ರಿವೀಲ್ ಮಾಡಿದೆ. ‘ತೊದಲು ಪ್ರೀತಿಯ ಮೊದಲ ಪರಿಚಯ’ ಎಂದು ಪೋಸ್ಟರ್‌ಗೆ ಅಡಿಬರಹ ನೀಡಿದ್ದಾರೆ.

     

    View this post on Instagram

     

    A post shared by PRK Productions (@prk.productions)

    ಇನ್ನೂ ರೋಹಿತ್ ಪದಕಿ ನಿರ್ದೇಶನದ ‘ಎಕ್ಕ’ ಒಬ್ಬ ಯುವಕನ ಕಥೆಯನ್ನು ಹೇಳುತ್ತದೆ. ಒಬ್ಬ ಮನುಷ್ಯನು ಭೂಗತ ಲೋಕಕ್ಕೆ ತುತ್ತಾದಾಗ, ಆತನಿಗೆ ಆಗುವ ಅನುಭವಗಳನ್ನು ಹೇಳುವ ಕಥೆಯೇ ‘ಎಕ್ಕ’ ಸಿನಿಮಾ. ‘ಎಕ್ಕ’ ಚಿತ್ರದಲ್ಲಿ ಯುವ ರಾಜ್ ಕುಮಾರ್, ಸಂಪದಾ, ಅತ್ತುಲ್ ಕುಲಕರ್ಣೀ, ಶ್ರುತಿ ಕೃಷ್ಣ, ರಾಹುಲ್ ದೇವ್ ಶೆಟ್ಟಿ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಿಕಥೆಯನ್ನು ರೋಹಿತ್ ಪದಕಿ ಮತ್ತು ವಿಕ್ರಮ್ ಹತ್ವಾರ್ ರಚಿಸಿದ್ದಾರೆ.

    ಈ ಚಿತ್ರವನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪಿ.ಆರ್.ಕೆ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ, ಜಯಣ್ಣ ಮತ್ತು ಭೋಗೇಂದ್ರ ಜಯಣ್ಣ ಫಿಲಂಸ್ ಲಾಂಛನದಡಿಯಲ್ಲಿ ಹಾಗು ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಕೆ.ಆರ್.ಜಿ.ಸ್ಟುಡಿಯೋಸ್ ಲಾಂಛನದಡಿಯಲ್ಲಿ ನಿರ್ಮಿಸಲ್ಲಿದ್ದಾರೆ. ಈ ಚಿತ್ರವು ಈ ವರ್ಷ ಜೂನ್ 6ರಂದು ರಿಲೀಸ್‌ ಆಗಲಿದೆ.

  • ‘ಭೀಮ’ ಸಕ್ಸಸ್ ಬೆನ್ನಲ್ಲೇ ಹೊಸ ಸಿನಿಮಾ ಘೋಷಿಸಿದ ದುನಿಯಾ ವಿಜಯ್

    ‘ಭೀಮ’ ಸಕ್ಸಸ್ ಬೆನ್ನಲ್ಲೇ ಹೊಸ ಸಿನಿಮಾ ಘೋಷಿಸಿದ ದುನಿಯಾ ವಿಜಯ್

    ಲಗ (Salaga), ಭೀಮ ಸಿನಿಮಾ ಎರಡು ಸೂಪರ್ ಸಕ್ಸಸ್ ಕಂಡಿದೆ. ‘ಭೀಮ’ (Bheema) ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಹೊಸ ಪ್ರಾಜೆಕ್ಟ್ ಅನ್ನು ದುನಿಯಾ ವಿಜಯ್ ಅನೌನ್ಸ್ ಮಾಡಿದ್ದಾರೆ. ವಿಜಯ್‌ ಮುಂಬರುವ ಸಿನಿಮಾದ ಫಸ್ಟ್ ಲುಕ್ ಕೂಡ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ಮತ್ತೆ ಬಾಲಿವುಡ್‌ಗೆ ಕಮ್‌ಬ್ಯಾಕ್‌ ಆಗ್ತಾರಾ ಪ್ರಿಯಾಂಕಾ ಚೋಪ್ರಾ- ಇನ್ಸ್ಟಾದಲ್ಲಿ ಕೊಟ್ಟ ಹಿಂಟ್ ಏನು?

    ‘ವಿಕೆ 30’ ಎಂದು ಪೋಸ್ಟರ್ ಅನಾವರಣ ಆಗಿದೆ. ಖಡಕ್ ಲುಕ್‌ನಲ್ಲಿ ವಿಜಯ್ ಕಾಣಿಸಿಕೊಂಡಿದ್ದು, ಸಿನಿಮಾದ ಬಗ್ಗೆ ಫ್ಯಾನ್ಸ್‌ಗೆ ನಿರೀಕ್ಷೆ ಮೂಡಿಸಿದೆ. ಈ ಹಿಂದೆ ಸಲಗ, ಭೀಮ ಸಿನಿಮಾದಲ್ಲಿ ಅಸೋಸಿಯೇಟ್ ಆಗಿ ಕೆಲಸ ಮಾಡ್ತಿದ್ದ ಆರ್. ವೆಟ್ರಿವೇಲ್ (ತಂಬಿ) ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

     

    View this post on Instagram

     

    A post shared by Duniya Vijay (@duniyavijayofficial)

    ಈ ಸಿನಿಮಾದಲ್ಲಿ ಡಿಫರೆಂಟ್ ರೋಲ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ಆದರೆ ಕಥೆಯ ಬಗ್ಗೆ ಎಲ್ಲೂ ರಿವೀಲ್ ಆಗಿಲ್ಲ. ಆದರೆ ಈ ಸಿನಿಮಾದ ಮೂಲಕ ಪ್ರೇಕ್ಷಕರಿಗೆ ಉತ್ತಮ ಸಂದೇಶ ಸಿಗಲಿದೆಯಂತೆ.

    ತಂಡದ ಜೊತೆ ವಿಜಯ್ ಸಕಲೇಶಪುರದಲ್ಲಿರುವ ಫೋಟೋವನ್ನು ವಿಜಯ್ ಶೇರ್ ಮಾಡಿದ್ದರು. ಎರಡು ಹೊಸ ಸಿನಿಮಾಗಳಿಗೆ ತಯಾರಿ ಮಾಡಿಕೊಳ್ಳತ್ತಿದ್ದು, ಅವರೇ ಕಥೆ ರೆಡಿ ಮಾಡುತ್ತಿದ್ದಾರೆ ಎಂದು ತಿಳಿಸಿದ್ದರು. ಈ ಬೆನ್ನಲ್ಲೇ ‘ವಿಕೆ 30’ (VK 30) ಚಿತ್ರದ ಅಧಿಕೃತ ಘೋಷಣೆ ಮಾಡಿರೋದು ಅಭಿಮಾನಿಗಳಿಗೆ ಕುತೂಹಲ ಮೂಡಿಸಿದೆ.

  • ದುನಿಯಾ ವಿಜಯ್ ಫ್ಯಾನ್ಸ್‌ಗೆ ಗುಡ್ ನ್ಯೂಸ್

    ದುನಿಯಾ ವಿಜಯ್ ಫ್ಯಾನ್ಸ್‌ಗೆ ಗುಡ್ ನ್ಯೂಸ್

    ದುನಿಯಾ ವಿಜಯ್ ಫ್ಯಾನ್ಸ್‌ಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಅವರ ಚಿತ್ರಕ್ಕಾಗಿ ಎದುರು ನೋಡ್ತಾ ಇರುವ ಅಭಿಮಾನಿಗಳಿಗೆ ಈಗ ಶುಭ ಸುದ್ದಿ ಸಿಕ್ಕಿದೆ. ವಿಜಯ್ ನಟನೆಯ ‘ಭೀಮ’ (Bheema) ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಸತ್ಯ ಬಿಚ್ಚಿಟ್ಟ ‘ಸೂರ್ಯವಂಶ’ ನಟಿ

    2021ರಲ್ಲಿ ‘ಸಲಗ’ ಸಿನಿಮಾ ದುನಿಯಾ ವಿಜಯ್ (Duniya Vijay) ನಟಿಸಿ, ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿತ್ತು. ಅದೇ ರೀತಿಯ ರೌಡಿಸಂ ಥೀಮ್ ಕಥೆ ಇಟ್ಟುಕೊಂಡು ಭೀಮ ಚಿತ್ರ ಡೈರೆಕ್ಷನ್ ಮಾಡಿದ್ದಾರೆ ವಿಜಯ್. ಇದೇ ಆಗಸ್ಟ್ 9ರಂದು ಸಿನಿಮಾ ರಿಲೀಸ್ ಆಗಲಿದೆ. ಇದನ್ನೂ ಓದಿ:‘ಕೆಂಪೇಗೌಡ’ ಪಾತ್ರದಲ್ಲಿ ಡಾಲಿ- ಟಿ.ಎಸ್‌ ನಾಗಾಭರಣ ಆ್ಯಕ್ಷನ್ ಕಟ್

     

    View this post on Instagram

     

    A post shared by Krishna Sarthak (@krishnasarthak)

    ‘ಸಲಗ’ ಬಳಿಕ ಬಾಲಯ್ಯ ನಟನೆಯ ‘ವೀರ ಸಿಂಹ ರೆಡ್ಡಿ’ ಚಿತ್ರದಲ್ಲಿ ಖಡಕ್ ವಿಲನ್ ಆಗಿ ದುನಿಯಾ ವಿಜಯ್ ನಟಿಸಿದ್ದರು. ಸಲಗ ಆದ್ಮೇಲೆ ಸತತ ಮೂರು ವರ್ಷಗಳ ನಂತರ ಕನ್ನಡದ ಭೀಮ ಚಿತ್ರದ ವಿಜಯ್ ಮಾಸ್ ಎಂಟ್ರಿ ಕೊಡ್ತಿದ್ದಾರೆ. ಇದು ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

    ‘ಭೀಮ’ ಚಿತ್ರದಲ್ಲಿ ಅಶ್ವಿನಿ ಅಂಬರೀಷ್, ಕಾಕ್ರೋಚ್ ಸುಧಿ, ರಂಗಾಯಣ ರಘು, ಅಚ್ಯುತ್ ಕುಮಾರ್ ಮೊದಲಾದವರು ನಟಿಸಿದ್ದಾರೆ. ಕೃಷ್ಣ ಸಾರ್ಥಕ್, ಜಗದೀಶ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಈ ಚಿತ್ರಕ್ಕೆ ಇದೆ.

  • ಮಾಲೂರಿನಲ್ಲಿ ನಟ ದುನಿಯಾ ವಿಜಯ್ ನೋಡಲು ಕಿಕ್ಕಿರಿದು ಸೇರಿದ ಅಭಿಮಾನಿಗಳು

    ಮಾಲೂರಿನಲ್ಲಿ ನಟ ದುನಿಯಾ ವಿಜಯ್ ನೋಡಲು ಕಿಕ್ಕಿರಿದು ಸೇರಿದ ಅಭಿಮಾನಿಗಳು

    ಟ ದುನಿಯಾ ವಿಜಯ್ ‘ಸಲಗ’ ಚಿತ್ರದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ನಟನೆ ಜೊತೆ ‘ಸಲಗ’ ಮೂಲಕ ಡೈರೆಕ್ಟರ್ ಕ್ಯಾಪ್ ಕೂಡ ತೊಟ್ಟಿದ್ದಾರೆ ಬ್ಲ್ಯಾಕ್ ಕೋಬ್ರಾ. ಸದ್ಯ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸ ಹಾಗೂ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇರುವ ದುನಿಯಾ ವಿಜಿ ತಮ್ಮ ಬ್ಯುಸಿ ಶೆಡ್ಯೂಲ್ ನಡುವೆಯೂ ಮಾಲೂರಿನ ತಮ್ಮ ಅಭಿಮಾನಿಗಳು ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಭಾಗಿಯಾಗಿದ್ದಾರೆ.

    ಮಾಲೂರಿನ ಹೋಂಡಾ ಕ್ರೀಡಾಂಗಣದಲ್ಲಿ ವಿಜಯ್ ಅಭಿಮಾನಿಗಳ ಸೇವಾ ಸಮಿತಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ‘ಸಲಗ’ ಚಿತ್ರತಂಡ ಕ್ರಿಕೆಟ್ ಪಂದ್ಯವನ್ನಾಡಿ ವಿಜಯ ಸಾಧಿಸಿದೆ. ದುನಿಯಾ ವಿಜಿ ಮಾಲೂರಿಗೆ ಬರುವ ವಿಚಾರ ತಿಳಿದ ವಿಜಯ್ ಅಭಿಮಾನಿಗಳು ಹೋಂಡಾ ಕ್ರೀಡಾಂಗಣಕ್ಕೆ ಜಮಾಯಿಸಿದ್ದರು. ಕೋಲಾರದ ಸುತ್ತಮುತ್ತಲಿನ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿ ನೆಚ್ಚಿನ ನಟ ದುನಿಯಾ ವಿಜಿಯನ್ನು ಕಣ್ತುಂಬಿಕೊಂಡಿದ್ದಾರೆ.

    ಅಭಿಮಾನಿಗಳ ಜೊತೆ ಸಮಯ ಕಳೆದ ದುನಿಯಾ ವಿಜಿ ನಂತರ ಮಾಲೂರಿನಲ್ಲಿರುವ ಡಾ.ರಾಜ್‍ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಪುತ್ಥಳಿಗೆ ಹೂವಿನ ಮಾಲೆ ಅರ್ಪಿಸಿ ಗೌರವ ಸಲ್ಲಿಸಿದ್ದಾರೆ. ದುನಿಯಾ ವಿಜಯ್ ಹಾಗೂ ಚಿತ್ರತಂಡದ ಜೊತೆ ಚಿತ್ರದ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಕೂಡ ಮಾಲೂರಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದರು.

    ದುನಿಯಾ ವಿಜಯ್ ನಿರ್ದೇಶನದ ‘ಸಲಗ’ ಸಿನಿಮಾ ಸ್ಯಾಂಡಲ್‍ವುಡ್ ಅಂಗಳದಲ್ಲಿ ಬಹು ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಎಲ್ಲರೂ ಕಾತರದಿಂದ ಸಿನಿಮಾಗಾಗಿ ಎದುರು ನೋಡುತ್ತಿದ್ದಾರೆ. ಚಿತ್ರದಲ್ಲಿ ದುನಿಯಾ ವಿಜಿಗೆ ಜೋಡಿಯಾಗಿ ಸಂಜನಾ ಆನಂದ್ ಸ್ಕ್ರೀನ್ ಶೇರ್ ಮಾಡಿದ್ದಾರೆ. ಟಗರು ಖ್ಯಾತಿಯ ಸಂಗೀತ ನಿರ್ದೇಶಕ ಚರಣ್ ರಾಜ್ ಸಂಗೀತ ನಿರ್ದೇಶನದಲ್ಲಿ ಚಿತ್ರದ ಹಾಡುಗಳು ಮೂಡಿಬಂದಿದ್ದು, ಚಿತ್ರದ ಟೈಟಲ್ ಟ್ರ್ಯಾಕ್ ಸೂಪರ್ ಹಿಟ್ ಆಗಿದೆ. ಶಿವಸೇನಾ ಛಾಯಾಗ್ರಹಣ ‘ಸಲಗ’ ಚಿತ್ರಕ್ಕಿದೆ. ಡಾಲಿ ಧನಂಜಯ್ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದು, ಅಚ್ಯುತ್ ಕುಮಾರ್, ರಂಗಾಯಣ ರಘು, ಯಶ್ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.