Tag: ಸಲಾಂ ಮಂಗಳಾರತಿ

  • ಸಲಾಂ ಮಂಗಳಾರತಿ ಹೆಸರು ಹೇಳಿ ಪೂಜೆ ನಡೆಯುವುದಿಲ್ಲ – ಕೊಲ್ಲೂರಿನ ಹಿರಿಯ ಅರ್ಚಕರು

    ಸಲಾಂ ಮಂಗಳಾರತಿ ಹೆಸರು ಹೇಳಿ ಪೂಜೆ ನಡೆಯುವುದಿಲ್ಲ – ಕೊಲ್ಲೂರಿನ ಹಿರಿಯ ಅರ್ಚಕರು

    ಉಡುಪಿ: ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದುಕೊಂಡು ಬರುತ್ತಿರುವ ಸಲಾಂ ಮಂಗಳಾರತಿಯ ಹೆಸರನ್ನು ಬದಲಾಯಿಸಬೇಕು. ಟಿಪ್ಪುಸುಲ್ತಾನ್ ಹೆಸರಿನಲ್ಲಿ ಆರತಿ ನಡೆಯಬಾರದು ಎಂದು ವಿಶ್ವಹಿಂದೂ ಪರಿಷತ್ತು ಸರ್ಕಾರಕ್ಕೆ ಮನವಿ ಮಾಡಿದೆ. ನಿಜ ಅರ್ಥದಲ್ಲಿ ಸಲಾಂ ಮಂಗಳಾರತಿ ಎಂದರೇನು ಪ್ರದೋಷ ಪೂಜೆ ಎಂದರೇನು ಎಂದು ಕೊಲ್ಲೂರಿನ ಹಿರಿಯ ಅರ್ಚಕ ಕೆ.ವಿ ಶ್ರೀಧರ್ ಅಡಿಗ ಮಾಹಿತಿ ನೀಡಿದ್ದಾರೆ.

    ಕೊಲ್ಲೂರು ದೇಗುಲದಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನ ಪ್ರದೋಷ, ಎರಡು ರಾತ್ರಿ ಕಾಲದಲ್ಲಿ ಪೂಜೆ ನಡೆಯುತ್ತದೆ. ಇದೊಂದು ಬಹಳ ಅರ್ಥಗರ್ಭಿತವಾದ ಪೂಜೆ. ಪ್ರದೋಷ ಕಾಲ ಎಂಬುದಕ್ಕೆ ಬಹಳ ಮಹತ್ವವಿದೆ. ಪ್ರದೋಷ ಕಾಲದಲ್ಲಿ ಎಲ್ಲಾ ದೇವಿ ದೇವತೆಗಳ ಸಾನಿಧ್ಯ ಇರುತ್ತದೆ ಎಂಬ ನಂಬಿಕೆಯಿದೆ. ಪ್ರದೋಷ ಕಾಲದಲ್ಲಿ ನಡೆಯುವ ಪೂಜೆಗಳ ವೈಶಿಷ್ಟ ಬೇರೆಯೇ ಇದೆ. ಇದನ್ನು ಓದಿ : ಕೆಲವು ಶಾಲೆಯಲ್ಲಿ ಹಿಜಬ್ ಯೂನಿಫಾರ್ಮ್ ಇದೆ, ಪರೀಕ್ಷೆಯಲ್ಲಿ ಹೇಗೆ ಮಾನಿಟರ್ ಮಾಡ್ತೀರಾ?: ದಿನೇಶ್ ಗುಂಡೂರಾವ್

    ನಾವು ಆ ಕಾಲದಲ್ಲಿ ದೇವಿಗೆ ಪೂಜೆಯನ್ನು ನಡೆಸುತ್ತೇವೆ. ವೈಭವೋಪೇತವಾಗಿ ರಾಗೋಪಚಾರ ದೀಪಾರಾಧನೆಗಳನ್ನು ನಡೆಸುತ್ತೇವೆ. ಕರುಣಾ ಕರುಣಿಕೆಯಲ್ಲಿ ಕೇಳಿಬಂದ ಪ್ರಕಾರ ಅಂದರೆ ವಾಡಿಕೆ ಪ್ರಕಾರ ದೊರೆ ಟಿಪ್ಪು ಪೂಜೆಯಲ್ಲಿ ಭಾಗವಹಿಸಿದ್ದ. ಪ್ರದೋಷ ಪೂಜೆ ಸಂದರ್ಭದಲ್ಲಿ ಸಲಾಮ್ ಮಾಡಿದ್ದ ಅಂತ ಕರುಣಾಕರುಣಿಕ ಅರ್ಥಾತ್ ವಾಡಿಕೆಯಾಗಿ ಬಂದಿದೆ. ಇದಕ್ಕೆ ಯಾವುದೇ ತರಹದ ದಾಖಲೆಗಳು ಇಲ್ಲ. ಇದೊಂದು ಹೇಳಿಕೊಂಡು ಬಂದಿರುವಂತಹ ಮಾತು. ಪ್ರದೋಷ ಪೂಜೆ ಪ್ರದೋಷ ಮಂಗಳಾರತಿ ಎಂದೇ ದಾಖಲೆಯಲ್ಲಿರುವ ಧಾರ್ಮಿಕ ಪ್ರಾಧಾನ್ಯತೆ ಪೂಜೆಗೆ ಇದೆ.

    ಇದು ಹಿಂದಿನಿಂದಲೂ ಇವತ್ತಿಗೂ ನಡೆದುಕೊಂಡು ಬಂದಿರುವಂತಹ ಆಚರಣೆ. ರಾಷ್ಟ್ರದ ಯೋಗಕ್ಷೇಮಕ್ಕೋಸ್ಕರ ಪೂಜೆ ಸಂದರ್ಭದಲ್ಲಿ ಪ್ರಾರ್ಥನೆ ನಡೆಯುತ್ತದೆ. ಪೂಜೆ ಸಂದರ್ಭ ಟಿಪ್ಪು ಭಾಗವಹಿಸಿದ್ದ ಎಂದು ಹೇಳಿಕೊಂಡು ಬಂದಿದ್ದಾರೆ. ಹಾಗಾಗಿ ಈ ಹೆಸರು ಬಂದಿರಬಹುದು ಎಂದು ತಿಳಿಸಿದ್ದಾರೆ. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

  • ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ – ಹೆಸರು ಬದಲಾಯಿಸುವಂತೆ ಕೊಲ್ಲೂರು ದೇವಾಲಯಕ್ಕೆ ಮನವಿ

    ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ ಬೇಡ – ಹೆಸರು ಬದಲಾಯಿಸುವಂತೆ ಕೊಲ್ಲೂರು ದೇವಾಲಯಕ್ಕೆ ಮನವಿ

    ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ನಡೆಯುತ್ತಿರುವ ಸಲಾಂ ಮಹಾಮಂಗಳಾರತಿಯ ಹೆಸರನ್ನು ತೆಗೆಸಬೇಕೆಂದು ವಿಶ್ವ ಹಿಂದೂ ಪರಿಷದ್ ಮನವಿ ಸಲ್ಲಿಸಿದೆ.

    ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ಸದಸ್ಯರು ಹೆಸರು ಬದಲಾಯಿಸುವಂತೆ ದೇವಾಲಯದ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ನಾಡಿನ ಮಠಾಧೀಶರ ಕ್ಷಮೆ ಕೇಳಬೇಕು: ಅಭಿನವ ಮಂಜುನಾಥ ಶ್ರೀ

    ಮನವಿಯಲ್ಲಿ ಏನಿದೆ?
    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಐತಿಹಾಸಿಕ ಹಿನ್ನೆಲೆ ಇರುವ ಪವಿತ್ರ ಕ್ಷೇತ್ರ ಭಾರತದ 108 ಶಕ್ತಿ ಪೀಠಗಳಲ್ಲಿ ಒಂದು. ಕೊಲ್ಲೂರು ಮೂಕಾಂಬಿಕಾ ಕ್ಷೇತ್ರ ಆದಿ ಶಂಕರಾಚಾರ್ಯರು ಮೂಕಾಂಬಿಕಾ ತಾಯಿಯನ್ನು ಇಲ್ಲಿ ನೆಲೆಗೊಳಿಸಿದ್ದಾರೆ. ಮೂಕಾಂಬಿಕಾ ತಾಯಿಯು ದುರ್ಗ, ಸರಸ್ವತಿ ಮತ್ತು ಮಹಾಲಕ್ಷ್ಮಿಯ ಒಂದು ಅವತಾರ, ಮೂಕಾಂಬಿಕಾ ದೇವಿಯ ದೇವಸ್ಥಾನದಲ್ಲಿ ಕೋಟ್ಯಂತರ ಭಕ್ತರು ಅತೀವ ನಂಬಿಕೆಯನ್ನು ಇರಿಸಿಕೊಂಡಿದ್ದಾರೆ.

    ಇಂತಹ ಪುಣ್ಯ ಕ್ಷೇತ್ರದಲ್ಲಿ ಒಬ್ಬ ಕ್ರೂರಿ, ಮತಾಂಧ, ಹಿಂದೂ ವಿರೋಧಿ, ಕನ್ನಡ ವಿರೋಧಿ ಸಾವಿರಾರು ಹಿಂದುಗಳನ್ನು ನರಮೇಧ ಮಾಡಿ, ನೂರಾರು ದೇವಸ್ಥಾನಗಳನ್ನು ದ್ವಂಸಗೊಳಿಸಿದಂತಹ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ರಾತ್ರಿ 8 ಗಂಟೆಗೆ ದೇವಿ ಮೂಕಾಂಬಿಕೆಗೆ ಸಲಾಂ ಎಂಬ ಹೆಸರಿನಲ್ಲಿ ಮಹಾಮಂಗಳಾರತಿಯಾಗುವುದು ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುತ್ತಿದೆ. ಇದರಿಂದ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿಯುಂಟುಮಾಡಿದೆ. ಸಲಾಂ ಎಂಬ ಹೆಸರಿನಲ್ಲಿ ಪ್ರತಿ ನಿತ್ಯ ದೇವಿಗೆ ಮಹಾಮಂಗಳಾರತಿಯಾಗುವುದು ಗುಲಾಮಗಿರಿಯ ಸಂಕೇತವಾಗಿದೆ ಆದರಿಂದ ತಕ್ಷಣ ಕ್ಷೇತ್ರದ ವ್ಯವಸ್ಥಾಪನಾ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಸಲಾಂ ಹಸರನ್ನು ತೆಗೆದು ಕೇವಲ ದೇವರ ಹೆಸರಲ್ಲಿ ಮಹಾಮಂಗಳಾರತಿ ಮಾಡಲು ಕ್ರಮತೆಗೆದುಕೊಳ್ಳಬೇಕೆಂದು ಶ್ರೀಕ್ಷೇತ್ರದ ಕೋಟ್ಯಂತರ ಭಕ್ತರ ಪರವಾಗಿ ವಿಶ್ವ ಹಿಂದೂ ಪರಿಷತ್ ಆಗ್ರಹಿಸುತ್ತದೆ.

    ಈ ಹಿನ್ನಲೆಯಲ್ಲಿ ನಾವು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ, ಕಾರ್ಯ ನಿರ್ವಹಣಾಧಿಕಾರಿಗಳಿಗೆ, ದತ್ತಿ ಇಲಾಖೆ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆಯವರಿಗೆ, ಮಾನ್ಯ ಜಿಲ್ಲಾಧಿಕಾರಿಗಳಿಗೆ, ದತ್ತಿ ಇಲಾಖೆ ಆಯುಕ್ತರಾದ ಮಾನ್ಯ ಶ್ರೀಮತಿ ರೋಹಿಣಿ ಸಿಂಧೂರಿಯವರಿಗೆ ಮನವಿಯನ್ನು ಸಲ್ಲಿಸಿದ್ದು ಕರ್ನಾಟಕ ಸರಕಾರ ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಲು ಬಲವಾಗಿ ಆಗ್ರಹಿಸುತ್ತವೆ. ಇದನ್ನೂ ಓದಿ: ಸ್ವಾಮೀಜಿಯವರೂ ತಲೆಯ ಮೇಲೆ ಬಟ್ಟೆ ಹಾಕ್ತಾರೆ ಅದನ್ನೇಕೆ ಪ್ರಶ್ನಿಸುತ್ತೀರಾ?: ಹಿಜಬ್ ಬೆಂಬಲಿಸಿದ ಸಿದ್ದು

    ಏನಿದು ಸಲಾಂ ಮಂಗಳಾರತಿ?
    ಟಿಪ್ಪು ಸುಲ್ತಾನ್ ಆಗಮಿಸಿದ ನೆನಪಿನಲ್ಲಿ ಇಂದಿಗೂ ನಿತ್ಯ ಕೊಲ್ಲೂರು ದೇವಾಲಯದಲ್ಲಿ ಸಲಾಂ ಮಂಗಳಾರತಿ ನಡೆಯುತ್ತಿದೆ. ಶ್ರೀ ಕ್ಷೇತ್ರಕ್ಕೆ 1765ರಿಂದ 1795ರ ನಡುವೆ ಟಿಪ್ಪು ಸುಲ್ತಾನ್ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದ. ದೇವಿ ದರ್ಶನ ಮಾಡುವಾಗ ಮೂಲ ವಿಗ್ರಹಗಳು ಟಿಪ್ಪು ಸುಲ್ತಾನನಿಗೆ ಸ್ಪಷ್ಟವಾಗಿ ಕಾಣಿಸಿರಲಿಲ್ಲವಂತೆ.

    ಟಿಪ್ಪು ಸುಲ್ತಾನ್ ಭೇಟಿ ಬಳಿಕ ಇಂದಿನವರೆಗೂ ಪ್ರತಿ ದಿನ ರಾತ್ರಿ 8 ರಿಂದ 8:15ರ ನಡುವೆ ಪರಿವಾರ ದೇವತೆಗಳ ಪೂಜೆ ಬಳಿಕ ನಡೆಯುವ ಮಂಗಳಾರತಿ (ಸುತ್ತು ಸಲಾಂ) ಪೂಜೆಗೆ ಸಲಾಂ ಮಂಗಳಾರತಿ ಎನ್ನುವ ಹೆಸರು ಉಳಿದಿದೆ. ಇದನ್ನೂ ಓದಿ: ಹಿಜಬ್, ದುಪ್ಪಟ್ಟ, ಪೇಟ ನಡುವಿನ ವ್ಯತ್ಯಾಸ ಅರಿತುಕೊಳ್ಳಿ: ಸಿದ್ದರಾಮಯ್ಯ ವಿರುದ್ಧ BJP ಕಿಡಿ

    ಕಟ್ಟಿಗೆ ಪಾಠಕರು ಧ್ವಜಸ್ತಂಭದ ಬಳಿ ಬಂದು ಸ್ತುತಿ ಮಾಡಿದ ಬಳಿಕ ದೇವರಿಗೆ ಒಂದು ಮಂಗಳಾರತಿ (ಸಲಾಂ ಪೂಜೆ) ಮಾಡುವವರನ್ನು ಸಲಾಂ ಅಡಿಗಳು ಎಂದೇ ಕರೆಯಲಾಗುತ್ತಿದೆ. ಅರ್ಚಕರ ಮೂಲಕ ಬಂದ ಪರಂಪರೆ ಈಗಲೂ ಮುಂದುವರಿಯುತ್ತಿದೆ.