Tag: ಸಲಾರ್

  • ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್‌

    ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್‌

    ಕೆಜಿಎಫ್, ಕೆಜಿಎಫ್‌ 2, ಕಾಂತಾರ ಸಿನಿಮಾಗಳನ್ನು ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮ್ಸ್‌ (Hombale Fims) ಇದೀಗ ಸಲಾರ್‌ ಬಳಿಕ ಮತ್ತೆ ಪ್ರಭಾಸ್ ಜೊತೆ ಕೈ ಜೋಡಿಸಿದೆ. ಪ್ರಭಾಸ್ (Prabhas) ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳನ್ನು ಮಾಡೋದಾಗಿ ಹೊಂಬಾಳೆ ಸಂಸ್ಥೆ ಅಧಿಕೃತವಾಗಿ ತಿಳಿಸಿದೆ.

    ಈ ಹಿಂದೆ ಪ್ರಭಾಸ್‌ ನಟನೆಯ ಸಲಾರ್‌ ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಿಸಿತ್ತು. ಇದೀಗ ಮತ್ತೆ ನಟನ ಜೊತೆ 3 ಚಿತ್ರಗಳನ್ನು ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡಲಿದೆ. ಮುಂದಿನ 3 ವರ್ಷಗಳಲ್ಲಿ ಅಂದರೆ 2026, 2027, ಮತ್ತು 2028ಗೆ ಸಾಲು ಸಾಲು 3 ಸಿನಿಮಾಗಳು ರಿಲೀಸ್ ಆಗಲಿದೆ ಎಂದು ಹೊಂಬಾಳೆ ಸಂಸ್ಥೆ ಘೋಷಿಸಿದೆ. ಇದನ್ನೂ ಓದಿ:ಅನುಷ್ಕಾ ಶೆಟ್ಟಿ ಫ್ಯಾನ್ಸ್‌ಗೆ ಡಬಲ್ ಧಮಾಕ- ‘ಘಾಟಿ’ ಚಿತ್ರದ ಫಸ್ಟ್ ಲುಕ್ ಔಟ್

     

    View this post on Instagram

     

    A post shared by Hombale Films (@hombalefilms)

    ರೆಬಲ್ ಸ್ಟಾರ್ ಜೊತೆಗೆ ಕೈಜೋಡಿಸುತ್ತಿರುವುದು ನಮಗೆ ಹೆಮ್ಮೆಯ ವಿಷಯ. ಭಾರತೀಯ ಸಿನಿಮಾದ ಸಾರವನ್ನು ಸಂಭ್ರಮಿಸುವ ಹಾಗೂ ಅದನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಲು ಈ ಕೈಜೋಡಿಸುವಿಕೆ ಅತ್ಯಂತ ಮಹತ್ವದ್ದಾಗಲಿದೆ. ಸಿನಿಮಾ ಪ್ರೇಮಿಗಳಿಗೆ ಮರೆಯಲಾಗದ ಸಿನಿಮಾ ಅನುಭವವನ್ನು ಕೊಡುವುದು ನಮ್ಮ ಘೋಷಣೆಯಾಗಿದೆ. ವೇದಿಕೆ ಸಜ್ಜಾಗಿದೆ, ಮುಂದಿನ ಹಾದಿ ಮಿತಿಯಿಲ್ಲದ್ದಾಗಿದೆ. ‘ಸಲಾರ್ 2’ (Salaar 2) ಸಿನಿಮಾದ ಜೊತೆಗೆ ನಮ್ಮ ಈ ಪಯಣ ಪ್ರಾರಂಭ ಆಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಗುಡ್ ನ್ಯೂಸ್ ಹಂಚಿಕೊಂಡಿದೆ.

  • ‘ಕೆಜಿಎಫ್ 2’ ನಿರ್ದೇಶಕನನ್ನು ಹಾಡಿ ಹೊಗಳಿದ ಪ್ರಭಾಸ್

    ‘ಕೆಜಿಎಫ್ 2’ ನಿರ್ದೇಶಕನನ್ನು ಹಾಡಿ ಹೊಗಳಿದ ಪ್ರಭಾಸ್

    ತೆಲುಗು ನಟ ಪ್ರಭಾಸ್ (Prabhas) ಇದೀಗ ‘ಸಲಾರ್’ ನಿರ್ದೇಶಕ ಪ್ರಶಾಂತ್ ನೀಲ್‌ರನ್ನು ಹಾಡಿ ಹೊಗಳಿದ್ದಾರೆ. ನೀವು ಹೀರೋನೇ ಎಂದು ನಿರ್ದೇಶಕ ಪ್ರಶಾಂತ್ ನೀಲ್‌ ಸ್ಟೈಲೀಶ್‌ ಲುಕ್‌ಗೆ (Prashanth Neel) ಪ್ರಭಾಸ್ ಕೊಂಡಾಡಿದ್ದಾರೆ. ಇದನ್ನೂ ಓದಿ:‘ರಕ್ಕಸಪುರದೋಳ್’ ರಾಜ್ ಬಿ ಶೆಟ್ಟಿ ಆರ್ಭಟ

    ಹೈದರಾಬಾದ್‌ನಲ್ಲಿ ಪ್ರಭಾಸ್ ನಟನೆಯ ‘ಫೌಜಿ’ ಸಿನಿಮಾದ ಮುಹೂರ್ತ ನಡೆದಿದೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಪ್ರಶಾಂತ್ ನೀಲ್‌ ಕೂಡ ಭಾಗಿಯಾಗಿದ್ದರು. ಈ ವೇಳೆ, ಬ್ಲ್ಯಾಕ್ ಔಟ್ ಫಿಟ್‌ನಲ್ಲಿ ಸ್ಟೈಲೀಶ್‌ ಆಗಿ ಎಂಟ್ರಿ ಕೊಟ್ಟ ನಿರ್ದೇಶಕನನ್ನು ನೋಡಿ ಆ ಕ್ಷಣವೇ ‘ಲುಕ್ ಲೈಕ್ ಹೀರೋ’ ಅಂತ ಪ್ರಭಾಸ್ ಮೆಚ್ಚುಗೆ ಸೂಚಿಸಿದ್ದರು. ಆಗ ನಗು ನಗುತ್ತಲೇ ನಟನನ್ನು ಪ್ರಶಾಂತ್ ನೀಲ್ ತಬ್ಬಿಕೊಂಡರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್‌ ಸದ್ದು ಮಾಡುತ್ತಿದೆ. ಇಬ್ಬರ ಸ್ನೇಹ ಕಂಡು ಫ್ಯಾನ್ಸ್‌ ಖುಷಿಪಟ್ಟಿದ್ದಾರೆ.

     

    View this post on Instagram

     

    A post shared by Manav Manglani (@manav.manglani)

    ಅಂದಹಾಗೆ, ಇಂದಿಗೂ ಇಬ್ಬರ ಒಡನಾಟ ಚೆನ್ನಾಗಿದೆ ಎಂಬುದಕ್ಕೆ ಈ ಸಂದರ್ಭ ಸಾಕ್ಷಿಯಾಗಿದೆ. ಈ ಹಿಂದೆ ಇಬ್ಬರ ಬಾಂಧವ್ಯ ಚೆನ್ನಾಗಿಲ್ಲ. ‘ಸಲಾರ್ 2’ (Salaar 2)  ಸೆಟ್ಟೇರಲ್ಲ ಎಂದೆಲ್ಲಾ ಕಿಡಿಗೇಡಿಗಳು ಸುದ್ದಿ ಹಬ್ಬಿಸಿದ್ದರು. ಅದಕ್ಕೆ, ಪ್ರಶಾಂತ್ ನೀಲ್ ಪತ್ನಿ ಪರೋಕ್ಷವಾಗಿ ಟೀಕೆಗಳಿಗೆ ಉತ್ತರ ಕೊಟ್ಟಿದ್ದರು. ಈಗ ಮತ್ತೊಮ್ಮೆ ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಜೊತೆಯಾಗಿರೋದು ಈ ಹಿಂದೆ ಹರಿದಾಡುತ್ತಿದ್ದ ವದಂತಿಗಳಿಗೆ ತಕ್ಕ ಉತ್ತರ ಸಿಕ್ಕಿದೆ.

    ಪ್ರಭಾಸ್ ಈಗಾಗಲೇ ಒಪ್ಪಿಕೊಂಡಿರುವ ಸಿನಿಮಾಗಳನ್ನು ಮುಗಿಸಿದ ಬಳಿಕ ‘ಸಲಾರ್ 2’ ಚಿತ್ರದ ಶೂಟಿಂಗ್ ಶುರುವಾಗಲಿದೆ. ಇನ್ನೂ ಕಳೆದ ವಾರ ‘ಕೆಜಿಎಫ್ 2’ (KGF 2) ನಿರ್ದೇಶಕನ ಜೊತೆಗಿನ ಜ್ಯೂ.ಎನ್‌ಟಿಆರ್ ಹೊಸ ಚಿತ್ರದ ಮುಹೂರ್ತ ಸರಳವಾಗಿ ಜರುಗಿದೆ. ಸೆಪ್ಟೆಂಬರ್‌ನಿಂದ ಶೂಟಿಂಗ್ ಆರಂಭವಾಗಲಿದೆ. ಈ ಸಿನಿಮಾದ ಬಳಿಕ ಪ್ರಭಾಸ್ ಜೊತೆ ಪ್ರಶಾಂತ್ ನೀಲ್ ಕೈಜೋಡಿಸಲಿದ್ದಾರೆ.

  • ಪ್ರಶಾಂತ್‌ ನೀಲ್‌ ಬರ್ತ್‌ಡೇಗೆ ಪ್ರಭಾಸ್‌ ಲವ್ಲಿ ವಿಶ್

    ಪ್ರಶಾಂತ್‌ ನೀಲ್‌ ಬರ್ತ್‌ಡೇಗೆ ಪ್ರಭಾಸ್‌ ಲವ್ಲಿ ವಿಶ್

    ‘ಕೆಜಿಎಫ್’, ‘ಸಲಾರ್’ ನಿರ್ದೇಶಕ ಪ್ರಶಾಂತ್ ನೀಲ್‌ಗೆ (Prashanth Neel) ಇಂದು (ಜೂನ್.4) ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಡಾರ್ಲಿಂಗ್ ಪ್ರಭಾಸ್ (Prabhas) ವಿಶೇಷವಾಗಿ ಶುಭಕೋರಿದ್ದಾರೆ. ಪ್ರಭಾಸ್‌ ಬಳಿಕ ಅನೇಕ ಸ್ಟಾರ್‌ ನಟ- ನಟಿಯರು ಪ್ರಶಾಂತ್‌ ನೀಲ್‌ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಇದನ್ನೂ ಓದಿ:ಹೆಣ್ಣು ಮಗುವಿಗೆ ಜನ್ಮ ನೀಡಿದ ವರುಣ್ ಧವನ್ ಪತ್ನಿ ನತಾಶಾ

    43ನೇ ವರ್ಷಕ್ಕೆ ಕಾಲಿಟ್ಟಿರುವ ಪ್ರಶಾಂತ್ ನೀಲ್ ‘ಲವ್ ಯೂ ಸರ್’ ಎಂದು ಸ್ವೀಟ್ ಆಗಿ ಪ್ರಭಾಸ್ ವಿಶ್ ಮಡಿದ್ದಾರೆ. ಸುಂದರವಾದ ಜನ್ಮದಿನದ ಶುಭಾಶಯಗಳು ಎಂದಿದ್ದಾರೆ. ಪ್ರಶಾಂತ್ ನೀಲ್‌ಗೆ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್, ಹೊಂಬಾಳೆ ಸಂಸ್ಥೆ ಸೇರಿದಂತೆ ಅನೇಕರು ಬರ್ತ್‌ಡೇಗೆ ವಿಶ್ ಮಾಡಿದ್ದಾರೆ.

    ಅಂದಹಾಗೆ, ಸಲಾರ್ (Salaar) ಸಿನಿಮಾದ ನಂತರ ಇತ್ತೀಚೆಗೆ  ‘ಸಲಾರ್ 2’ ಸಿನಿಮಾ ನಿಂತು ಹೋಗಿದೆ. ಇಬ್ಬರ ನಡುವೆ ಉತ್ತಮ ಬಾಂಧವ್ಯವಿಲ್ಲ ಎಂದು ಎಂದೆಲ್ಲಾ ಸುದ್ದಿ ಹಬ್ಬಿತ್ತು. ಇದೀಗ ಪ್ರಭಾಸ್ ವಿಶ್ ಮಾಡಿರುವ ರೀತಿ ನೋಡಿ ಹಬ್ಬಿರುವ ವದಂತಿಗಳಿಗೆ ತೆರೆ ಬಿದ್ದಿದೆ.

    ಪ್ರಶಾಂತ್ ನೀಲ್ ಸದ್ಯ ‘ದೇವರ’ (Devara Film) ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಜ್ಯೂ.ಎನ್‌ಟಿಆರ್‌ಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಳಿಕ ‘ಸಲಾರ್ 2’ ಸಿನಿಮಾದತ್ತ ಗಮನ ಕೊಡಲಿದ್ದಾರೆ.

  • ‘ಸಲಾರ್ 2’ ಸಿನಿಮಾ ನಿಂತೇ ಹೋಯ್ತು ಎಂದವರಿಗೆ ಖಡಕ್ ಉತ್ತರ ಕೊಟ್ಟ ಹೊಂಬಾಳೆ ಸಂಸ್ಥೆ

    ‘ಸಲಾರ್ 2’ ಸಿನಿಮಾ ನಿಂತೇ ಹೋಯ್ತು ಎಂದವರಿಗೆ ಖಡಕ್ ಉತ್ತರ ಕೊಟ್ಟ ಹೊಂಬಾಳೆ ಸಂಸ್ಥೆ

    ಹೊಂಬಾಳೆ ಸಂಸ್ಥೆ ನಿರ್ಮಾಣದ ‘ಸಲಾರ್’ (Salaar) ಸಿನಿಮಾ ಥಿಯೇಟರ್‌ನಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. ಇದೀಗ ಕಿರುತೆರೆಯಲ್ಲೂ ಪ್ರಸಾರವಾಗುತ್ತಿದೆ. ಹೀಗಿರುವಾಗ ಕೆಲ ದಿನಗಳಿಂದ ‘ಸಲಾರ್ -2’ (Salaar 2)  ಸಿನಿಮಾ ನಿಂತು ಹೋಗಿದೆ ಎಂಬ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಈ ವಿಚಾರವಾಗಿ ಹೊಂಬಾಳೆ ಸಂಸ್ಥೆ ಖಡಕ್ ಆಗಿ ಉತ್ತರ ನೀಡಿದೆ. ಇದನ್ನೂ ಓದಿ:ಟ್ರೋಲ್‌ಗಳ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ನೇಹಾ ಶೆಟ್ಟಿ

    ಡೈರೆಕ್ಟರ್ ಪ್ರಶಾಂತ್ ನೀಲ್ (Prashanth Neel) ಮತ್ತು ಪ್ರಭಾಸ್ ನಡುವೆ ಭಿನ್ನಾಭಿಪ್ರಾಯವಿದೆ ಎನ್ನಲಾದ ಕೆಲ ಸುದ್ದಿಗಳು ಹರಿದಾಡಿತ್ತು. ಇದರಿಂದ ಸಲಾರ್ 2 ಸಿನಿಮಾ ನಿಂತಿದೆ ಎಂದು ಬಿಂಬಿಸಲಾಗಿತ್ತು. ಇದೀಗ ಪ್ರಶಾಂತ್ ನೀಲ್ ಮತ್ತು ನಟ ಪ್ರಭಾಸ್ (Prabhas) ಖುಷಿಯಿಂದ ಸ್ಮೈಲ್ ಮಾಡುತ್ತಿರುವ ಫೋಟೋ ಶೇರ್ ಮಾಡಿ ಹೊಂಬಾಳೆ ಟೀಮ್ ಪರೋಕ್ಷವಾಗಿ ಉತ್ತರಿಸಿದೆ.

     

    View this post on Instagram

     

    A post shared by Salaar (@salaarthesaga)

    ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಒಟ್ಟಿಗೆ ಜೋರಾಗಿ ನಗುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದು, ಅವರು ನಗು ನಿಲ್ಲಿಸುವುದಿಲ್ಲ ಎಂದು ಬರೆಯಲಾಗಿದೆ.  ಈ ಮೂಲಕ ‘ಸಲಾರ್ 2’ ನಿಂತು ಹೋಗಿದೆ ಎಂಬ ಸುದ್ದಿ ಸುಳ್ಳು ಎಂಬುದನ್ನು ಖಾತ್ರಿ ಪಡಿಸಿದೆ. ಈ ಪೋಸ್ಟ್ ನೋಡಿ ಫ್ಯಾನ್ಸ್ ಕೂಡ ಖುಷಿಪಟ್ಟಿದ್ದಾರೆ.

    ಅಂದಹಾಗೆ, ಪ್ರಭಾಸ್ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದಲ್ಲಿ ಬ್ಯುಸಿಯಿರುವ ಕಾರಣ, ಪ್ರಶಾಂತ್ ನೀಲ್ ಅವರು ಜ್ಯೂ.ಎನ್‌ಟಿಆರ್ ನಟನೆಯ ‌’ಡ್ರ್ಯಾಗನ್’ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಇದೇ ಆಗಸ್ಟ್‌ನಿಂದ ‘ಡ್ರ್ಯಾಗನ್’ ಚಿತ್ರದ ಶೂಟಿಂಗ್ ಶುರುವಾಗಲಿದೆ. ಈ ಚಿತ್ರ ಪೂರ್ಣಗೊಳಿಸಲು 2 ವರ್ಷಗಳು ಸಮಯ ಬೇಕಿದೆ. ಇದಾದ ಬಳಿಕ ‘ಸಲಾರ್ 2’ ಕೈಗೆತ್ತಿಕೊಳ್ಳಲಿದ್ದಾರೆ ಪ್ರಶಾಂತ್ ನೀಲ್.

  • ನಾನು ಸಿಂಗಲ್‌, ಹೊಸ ಸಂಬಂಧಕ್ಕೆ ಸಿದ್ಧಳಾಗಿದ್ದೇನೆ ಎಂದು ಬ್ರೇಕಪ್‌ ಬಗ್ಗೆ ತಿಳಿಸಿದ ‘ಸಲಾರ್‌’ ನಟಿ

    ನಾನು ಸಿಂಗಲ್‌, ಹೊಸ ಸಂಬಂಧಕ್ಕೆ ಸಿದ್ಧಳಾಗಿದ್ದೇನೆ ಎಂದು ಬ್ರೇಕಪ್‌ ಬಗ್ಗೆ ತಿಳಿಸಿದ ‘ಸಲಾರ್‌’ ನಟಿ

    ‘ಸಲಾರ್’ (Salaar) ಬೆಡಗಿ ಶ್ರುತಿ ಹಾಸನ್ (Shruti Hasaan) ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇತ್ತೀಚೆಗೆ ಅವರ ಬ್ರೇಕಪ್ ಮ್ಯಾಟರ್ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ಇದೀಗ ಮೊದಲ ಬಾರಿಗೆ ಶಾಂತನು ಜೊತೆಗಿನ ಬ್ರೇಕಪ್ ಬಗ್ಗೆ ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:‘ಮಾರಿಗೆ ದಾರಿ’ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್

    ‘ಸಲಾರ್’ ನಟಿ ಶ್ರುತಿ ಅವರು ಶಾಂತನು ಹಜಾರಿಕಾ (Shantanu Hazarika) ಜೊತೆ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಅವರ ಪ್ರೀತಿ ಬ್ರೇಕಪ್‌ನಲ್ಲಿ ಕೊನೆ ಆಗಿದೆ. ಈ ವಿಚಾರವನ್ನು ಅವರೇ ಅಧಿಕೃತ ಮಾಡಿದ್ದಾರೆ. ಬಹುದಿನಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ‘ಆಸ್ಕ್ ಮಿ ಅನಿಥಿಂಗ್’ ಸೆಷನ್ ಅನ್ನು ಶ್ರುತಿ ಮಾಡಿದ್ದಾರೆ. ಈ ವೇಳೆ, ಅಭಿಮಾನಿಯೊಬ್ಬರು ಶ್ರುತಿಗೆ ಸಿಂಗಲ್ ಅಥವಾ ಕಮಿಟೆಡ್ ಎಂದು ಕೇಳಿದ್ದಾರೆ.

    ನಾನು ಇಂತಹ ಪ್ರಶ್ನೆಗಳನ್ನು ಉತ್ತರಿಸಲು ಸಿದ್ಧವಾಗಿಲ್ಲ. ನಾನು ಸಿಂಗಲ್. ಹೊಸ ಸಂಬಂಧಕ್ಕೆ ಸಿದ್ಧಳಾಗಿದ್ದೇನೆ. ಸದ್ಯ ಕೆಲಸ ಮಾತ್ರ. ಜೀವನವನ್ನು ಎಂಜಾಯ್ ಮಾಡುತ್ತಿದ್ದೇನೆ ಎಂದು ‘ಸಲಾರ್’ ನಟಿ ಅಭಿಮಾನಿಯ ಪ್ರಶ್ನೆಗೆ ಉತ್ತರಿಸಿದ್ದಾರೆ. ಬ್ರೇಕಪ್ ಬಗ್ಗೆ ಪರೋಕ್ಷವಾಗಿ ನಟಿ ಹೇಳಿದ್ದಾರೆ.

    ಶ್ರುತಿ ಹಾಸನ್ ನಟನೆಯ ಡಕಾಯಿಟ್, ಚೆನ್ನೈ ಸ್ಟೋರಿಸ್, ಸಲಾರ್ 2 ಸೇರಿದಂತೆ ಹಲವು ಸಿನಿಮಾಗಳು ಶ್ರುತಿ ಹಾಸನ್ ಕೈಯಲ್ಲಿವೆ.

  • ಜಪಾನ್‌ನತ್ತ ‌’ಸಲಾರ್‌’- ಜುಲೈ 5ರಂದು ಪ್ರಭಾಸ್‌ ಸಿನಿಮಾ ರಿಲೀಸ್

    ಜಪಾನ್‌ನತ್ತ ‌’ಸಲಾರ್‌’- ಜುಲೈ 5ರಂದು ಪ್ರಭಾಸ್‌ ಸಿನಿಮಾ ರಿಲೀಸ್

    ಪ್ರಭಾಸ್ (Actor Prabhas) ನಟನೆಯ ‘ಸಲಾರ್’ (Salaar) ಸಿನಿಮಾ ಕಳೆದ ವರ್ಷ ಡಿಸೆಂಬರ್ 22ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗಿ ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡಿತ್ತು. ಇದೀಗ ‘ಸಲಾರ್’ ಚಿತ್ರ ಜಪಾನ್‌ನಲ್ಲಿ ಜುಲೈ 5ರಂದು ರಿಲೀಸ್ ಆಗಲಿದೆ. ಇದನ್ನೂ ಓದಿ:ಚುನಾವಣೆಯಲ್ಲಿ ಗೆದ್ದರೆ ಬಾಲಿವುಡ್ ಗೆ ಗುಡ್ ಬೈ ಘೋಷಿಸಿದ ಕಂಗನಾ

    ಪ್ರಶಾಂತ್ ನೀಲ್ ನಿರ್ದೇಶನ ಮತ್ತು ಹೊಂಬಾಳೆ ಸಂಸ್ಥೆ ನಿರ್ಮಾಣದ ‘ಸಲಾರ್ ಪಾರ್ಟ್ 1’ ಚಿತ್ರ 700 ಕೋಟಿ ರೂ.ಗಿಂತ ಅಧಿಕ ಕಲೆಕ್ಷನ್ ಮಾಡುವ ಮೂಲಕ ಗಮನ ಸೆಳೆದಿತ್ತು. ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಜುಗಲ್‌ಬಂದಿ ನೋಡುಗರಿಗೆ ಮೋಡಿ ಮಾಡಿತ್ತು. ಜಪಾನ್‌ನತ್ತ ಸಲಾರ್‌ ಮೆರವಣಿಗೆ ಹೊರಟಿದೆ.

    ಇದೇ ಜುಲೈ 5ರಂದು ಸಲಾರ್ ಜಪಾನ್‌ನಲ್ಲಿ ರಿಲೀಸ್ ಆಗುತ್ತಿರುವ ಬಗ್ಗೆ ಖುದ್ದು ಚಿತ್ರತಂಡ ಮಾಹಿತಿ ನೀಡಿದೆ. ಸದ್ಯ ಈ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಅಂದಹಾಗೆ, ಸಲಾರ್ ಪಾರ್ಟ್ 2 (Salaar 2) ಶೂಟಿಂಗ್ ಮಾಡಲು ಕೂಡ ಸಿದ್ಧತೆ ನಡೆಯುತ್ತಿದೆ.

    ಇತ್ತೀಚೆಗೆ ರಕ್ಷಿತ್ ಶೆಟ್ಟಿ ನಟನೆಯ `777 ಚಾರ್ಲಿ’ ಸಿನಿಮಾ ಜೂನ್ 28ರಂದು ಜಪಾನ್‌ನಲ್ಲಿ ರಿಲೀಸ್ ಆಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು.

  • ಕಿರುತೆರೆಗೆ ಬಂತು ಸೂಪರ್ ಹಿಟ್ ಚಿತ್ರ ‘ಸಲಾರ್’

    ಕಿರುತೆರೆಗೆ ಬಂತು ಸೂಪರ್ ಹಿಟ್ ಚಿತ್ರ ‘ಸಲಾರ್’

    ನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು (TV) ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು ನೀಡುತ್ತಾ ಬಂದಿದೆ. ವಿಶ್ವ-ವಿಖ್ಯಾತಿ ಪಡೆದ ಕಾಂತಾರ, ಹೊಯ್ಸಳ, ಜೇಮ್ಸ್ ನಂತಹ ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ಪ್ರಸಾರ ಮಾಡಿ ಪ್ರೇಕ್ಷಕರ ಮನಗೆದ್ದ ಸುವರ್ಣ ವಾಹಿನಿಯಲ್ಲಿ ಇದೀಗ 2023ರ ಬ್ಲಾಕ್ ಬಸ್ಟರ್ ಹಿಟ್ ‘ಸಲಾರ್’ (Salaar) ಸಿನಿಮಾ ಪ್ರಸಾರವಾಗಲಿದೆ. ಜೊತೆಗೆ ವೀಕ್ಷಕರಿಗೆ ಬೈಕ್ ಗೆಲ್ಲುವ ಅವಕಾಶವನ್ನು ಸುವರ್ಣ ವಾಹಿನಿಯು ನೀಡುತ್ತಿದೆ.

    ರೆಬಲ್ ಸ್ಟಾರ್ ಪ್ರಭಾಸ್ ಅಭಿನಯದ ‘ಸಲಾರ್’ ಸಿನಿಮಾವು ಬಾಕ್ಸ್ ಆಫೀಸ್​ನಲ್ಲಿ 700 ಕೋಟಿ ರೂಪಾಯಿ ಕಮಾಯಿ ಮಾಡಿತ್ತು. ಇದೀಗ ಈ ಸಿನಿಮಾವು ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಸುವರ್ಣ ವರ್ಲ್ಡ್ ಪ್ರೀಮಿಯರ್ ಆಗುತ್ತಿದ್ದು. ಈ ಸಿನಿಮಾದಲ್ಲಿ ವೀಕ್ಷಕರಿಗೆ ಪ್ರಭಾಸ್ ಅವರ ಲುಕ್ ಜೊತೆಗೆ ಸಿನಿಮಾದಲ್ಲಿ ಬಳಸಲಾಗಿದ್ದ ಬೈಕ್ ದೊಡ್ಡ ಮಟ್ಟದ ಕ್ರೇಜ್ ಸೃಷ್ಟಿ ಮಾಡಿತ್ತು. ಇದೀಗ ಆ ಬೈಕ್ ಗೆಲ್ಲೋ ಅವಕಾಶವನ್ನು ನೋಡುಗರಿಗೆ ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆಯು ನೀಡುತ್ತಿದೆ. ‘ಸಲಾರ್’ ಸಿನಿಮಾ ನೋಡ್ತಾ ನೋಡ್ತಾ, ಅಲ್ಲಿ ಕೇಳೊ ಪ್ರಶ್ನೆಗಳಿಗೆ ಆದಷ್ಟು ಬೇಗ ಸರಿಯಾದ ಉತ್ತರ ಕೊಟ್ರೆ, ಅದೃಷ್ಟಶಾಲಿ ವಿಜೇತರಿಗೆ ‘ಸಲಾರ್’ ನಲ್ಲಿ ಪ್ರಭಾಸ್ ಬಳಸಿರೋ ಬೈಕ್ ಬಹುಮಾನವಾಗಿ ಸಿಗಲಿದೆ.

    ಕನ್ನಡದ ಹೆಸರಾಂತ ನಿರ್ದೇಶಕ ಪ್ರಶಾಂತ್ ನೀಲ್ ‘ಸಲಾರ್’ ಸಿನಿಮಾವನ್ನು ನಿರ್ದೇಶಿಸಿದ್ದು, ಹೊಂಬಾಳೆ ಫಿಲಂಸ್ ಈ ಸಿನಿಮಾವನ್ನು ನಿರ್ಮಿಸಿದೆ. ಇನ್ನು ಈ ಸಿನಿಮಾದ ಹಾಡುಗಳು ಅದ್ಭುತ ರೀತಿಯಲ್ಲಿ ಮೂಡಿ ಬಂದಿದ್ದು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ನಲ್ಲಿತ್ತು.

     

    ಬರ್ತಿದೆ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ “ಸಲಾರ್” ಇದೇ ಭಾನುವಾರ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ. ತಪ್ಪದೇ ವೀಕ್ಷಿಸಿ ಮಿಸ್ಸ್ ಮಾಡದೆ ಕಾಂಟೆಸ್ಟ್ ನಲ್ಲಿ ಭಾಗವಹಿಸಿ.

  • ‘ರಾಜಾ ಸಾಬ್’ ಚಿತ್ರದಲ್ಲಿನ ಪ್ರಭಾಸ್ ಲುಕ್ ಲೀಕ್

    ‘ರಾಜಾ ಸಾಬ್’ ಚಿತ್ರದಲ್ಲಿನ ಪ್ರಭಾಸ್ ಲುಕ್ ಲೀಕ್

    ‘ಸಲಾರ್’ (Salaar) ಸಿನಿಮಾದ ಸಕ್ಸಸ್ ನಂತರ ಇದೀಗ ‘ರಾಜಾ ಸಾಬ್’ (Raja Saab) ಸಿನಿಮಾದ ಶೂಟಿಂಗ್‌ನಲ್ಲಿ ಪ್ರಭಾಸ್ (Prabhas) ಬ್ಯುಸಿಯಾಗಿದ್ದಾರೆ. ಚಿತ್ರೀಕರಣಕ್ಕೆ ಹಾಜರಿ ಹಾಕಿರುವ ಪ್ರಭಾಸ್ ರಾಜಾ ಸಾಬ್ ಲುಕ್ ಲೀಕ್ ಆಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಸಿನಿಮಾದಿಂದ ಸಿನಿಮಾಗೆ ವಿಭಿನ್ನ ಎಂದೆನಿಸುವ ಕಥೆಗಳಲ್ಲಿ ಪ್ರಭಾಸ್ ನಟಿಸುತ್ತಾರೆ. ‘ಸಲಾರ್’ ಬಳಿಕ ರಾಜಾ ಸಾಬ್ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಡಿಫರೆಂಟ್ ಲುಕ್‌ನಲ್ಲಿ ಪ್ರಭಾಸ್ ಕಾಣಿಸಿಕೊಳ್ತಿದ್ದಾರೆ. ಉದ್ದನೆಯ ಕೂದಲು ಬಿಟ್ಟು ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ನಟನ ಹೊಸ ಲುಕ್ ಇದೀಗ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಇದನ್ನೂ ಓದಿ:18 ವರ್ಷಗಳ ನಂತರ ಒಂದಾದ ಸೂರ್ಯ, ಜ್ಯೋತಿಕಾ

    ಪ್ರಭಾಸ್‌ಗೆ ನಾಯಕಿಯಾಗಿ ಬೆಂಗಳೂರಿನ ಬೆಡಗಿ ನಿಧಿ ಅಗರ್ವಾಲ್ (Nidhi Aggerwal) ನಟಿಸುತ್ತಿದ್ದಾರೆ. ಚಿತ್ರದಲ್ಲಿ ಮಾಳವಿಕಾ, ರಿದ್ಧಿ ಕುಮಾರ್, ಕೆಜಿಎಫ್ 2 ಅಧೀರ ಸಂಜಯ್ ದತ್, ಯೋಗಿ ಬಾಬು ಕೂಡ ಚಿತ್ರದ ಭಾಗವಾಗವಾಗಿದ್ದಾರೆ.

    ‘ರಾಜಾ ಸಾಬ್’ ಚಿತ್ರವನ್ನು ಮಾರುತಿ ನಿರ್ದೇಶನ ಮಾಡುತ್ತಿದ್ದಾರೆ. ಈ ವರ್ಷದ ಅಂತ್ಯ ಡಿಸೆಂಬರ್‌ನಲ್ಲಿ ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.

  • ಪ್ರಭಾಸ್ ನಟನೆಯ ‘ಸಲಾರ್’ ಇಂಗ್ಲಿಷ್ ನಲ್ಲೂ ರಿಲೀಸ್

    ಪ್ರಭಾಸ್ ನಟನೆಯ ‘ಸಲಾರ್’ ಇಂಗ್ಲಿಷ್ ನಲ್ಲೂ ರಿಲೀಸ್

    ಲಾರ್ ಸಿನಿಮಾವನ್ನು ನೆಟ್ ಫ್ಲಿಕ್ಸ್ (OTT) ಖರೀದಿಸಿದ್ದು ಈಗಾಗಲೇ ಹಲವು ಭಾಷೆಗಳಲ್ಲಿ ಅದು ಸ್ಟ್ರೀಮಿಂಗ್ ಆರಂಭಿಸಿದೆ. ಇದರ ಜೊತೆ ಜೊತೆಗೆ ಸಲಾರ್ ಸಿನಿಮಾ ಇಂಗ್ಲಿಷ್ (English) ನಲ್ಲೂ ರಿಲೀಸ್ ಆಗಿದೆ. ಜೊತೆಗೆ ಸ್ಪ್ಯಾನಿಷ್ (Spanish) ಭಾಷೆಯಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಸ್ಪ್ಯಾನಿಷ್ ಭಾಷೆಗೆ ಚಿತ್ರವನ್ನು ಡಬ್ ಮಾಡಲಾಗುತ್ತಿದ್ದು, ಮಾರ್ಚ್ 7 ರಂದು ಈ ಚಿತ್ರವನ್ನು ರಿಲೀಸ್ ಮಾಡುವುದಾಗಿ ಸಂಸ್ಥೆ ತಿಳಿಸಿದೆ.

    ಸಲಾರ್ ಸಿನಿಮಾ ಬಾಕ್ಸಾಫೀಸಿನಲ್ಲಿ ಈವರೆಗೂ 627 ಕೋಟಿ ರೂಪಾಯಿಗೂ ಅಧಿಕ ಗಳಿಸಿ, ಇನ್ನೂ ಮುನ್ನುಗ್ಗುತ್ತಿದೆ. ಈ ನಡುವೆ ಸಲಾರ್ 2 ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳು ಹೊರ ಬಿದ್ದಿವೆ. ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರು (Vijaya Kirgandur) ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದು, ಅದರ ಪ್ರಕಾರ ಸಲಾರ್ 2 ಸಿನಿಮಾ 2025ರಲ್ಲಿ ಬಿಡುಗಡೆ ಆಗಿದೆ. ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈಗಾಗಲೇ ಸಲಾರ್ 2 ಸಿನಿಮಾದ ಸ್ಕ್ರಿಪ್ಟ್ ರೆಡಿಯಾಗಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಸಲಾರ್ 2 ಸಿನಿಮಾದ ಕುರಿತಂತೆ ನಿರ್ದೇಶಕ ಪ್ರಶಾಂತ್ ನೀಲ್ ಕೆಲಸ ಕೂಡ ಶುರು ಮಾಡಲಿದ್ದಾರಂತೆ. ಸಲಾರ್ ಸಿನಿಮಾಗಿಂತಲೂ ಸಲಾರ್ 2 ಇನ್ನೂ ಅದ್ಧೂರಿಯಾಗಿ ಇರಲಿದೆ ಎಂದು ವಿಜಯ್ ತಿಳಿಸಿದ್ದಾರೆ.

    ಹೊಂಬಾಳೆ ಫಿಲ್ಮ್ಸ್ (Hombale Films) ನಿರ್ಮಾಣದ ಸಲಾರ್ (Salaar) ಸಿನಿಮಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಈ ಸಿನಿಮಾ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿಶ್ವದಾದ್ಯಂತ  ಕೋಟಿ ಕೋಟಿ ಹಣವನ್ನು ಗಳಿಸಿದೆ. ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ಹಣ ಹರಿದು ಬರುತ್ತಿದೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ, ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೊಸ ದಾಖಲೆಯನ್ನು ಮಾಡಿದೆ. ಕನ್ನಡದ ನಿರ್ಮಾಣದ ಸಂಸ್ಥೆಯೊಂದು ರಾಷ್ಟ್ರೀಯ ಮಟ್ಟದಲ್ಲಿ ಇಂಥದ್ದೊಂದು ದಾಖಲೆ ಮಾಡಿರುವುದು ಕನ್ನಡ ಚಿತ್ರರಂಗಕ್ಕೆ ಮತ್ತು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

    ಕನ್ನಡದಲ್ಲಿ ‘ಮಾಸ್ಟರ್ ಪೀಸ್‍’, ‘ರಾಜಕುಮಾರ’, ‘ಯುವರತ್ನ’, ‘ಕೆಜಿಎಫ್‍ 1 ಮತ್ತು 2’, ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್’ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್, ತನ್ನ ನಿರ್ಮಾಣದ ಚಿತ್ರಗಳ ಮೂಲಕ ಜಗತ್ತಿನ ಗಮನ ಸೆಳೆದಿರುವುದಷ್ಟೇ ಅಲ್ಲ, ಕನ್ನಡ ಚಿತ್ರಗಳನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಮೂಲಕ ಎಲ್ಲರ ಗಮನ ಸೆಳೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

     

    ಸಲಾರ್’ ಪ್ಯಾನ್‍ ಇಂಡಿಯಾ ಚಿತ್ರವಾದರೂ, ಈ ಚಿತ್ರದ ಹಿಂದಿರುವ ತಾಂತ್ರಿಕ ತಂಡದವರೆಲ್ಲರೂ ಕನ್ನಡದವರಾಗಿದ್ದಾರೆ. ನಿರ್ಮಾಪಕರಾದ ವಿಜಯ್‍ ಕಿರಗಂದೂರು, ನಿರ್ದೇಶಕ ಪ್ರಶಾಂತ್‍ ನೀಲ್‍ (Prashant Neel), ಛಾಯಾಗ್ರಾಹಕ ಭುವನ್‍ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಚಿತ್ರದಲ್ಲಿ ಕೆಲಸ ಮಾಡಿರುವ ಹಲವು ತಂತ್ರಜ್ಞರು ಹಾಗೂ ಕಲಾವಿದರು  ಈ ನೆಲದ ಮಣ್ಣಿನವರಾಗಿದ್ದು, ಇದು ಕನ್ನಡದ ಪ್ರತಿಭಾ ಸಂಪತ್ತಿನ ಒಂದು ಉದಾಹರಣೆಯಷ್ಟೇ.

  • ಕಮಲ್ ಹಾಸನ್ ಪುತ್ರಿಗೆ ‘ವಿಕ್ರಮ್’ ಡೈರೆಕ್ಟರ್ ಆ್ಯಕ್ಷನ್ ಕಟ್

    ಕಮಲ್ ಹಾಸನ್ ಪುತ್ರಿಗೆ ‘ವಿಕ್ರಮ್’ ಡೈರೆಕ್ಟರ್ ಆ್ಯಕ್ಷನ್ ಕಟ್

    ‘ಸಲಾರ್’ ಬೆಡಗಿ ಶ್ರುತಿ ಹಾಸನ್ (Shruti Haasan) ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ‘ಸಲಾರ್’ (Salaar) ಸಕ್ಸಸ್ ನಂತರ ಶ್ರುತಿ, ‘ವಿಕ್ರಮ್’ ಡೈರೆಕ್ಟರ್ ಲೋಕೇಶ್ ಕನಕರಾಜ್ ಜೊತೆ ಸಾಥ್ ನೀಡಿದ್ದಾರೆ.

    ಕಮಲ್ ಹಾಸನ್ (Kamal Haasan) ನಟನೆಯ ‘ವಿಕ್ರಮ್’ ಚಿತ್ರಕ್ಕೆ ಲೋಕೇಶ್ ನಿರ್ದೇಶನ ಮಾಡುವ ಮೂಲಕ ಸೈ ಎನಿಸಿಕೊಂಡಿದ್ದರು. ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. ಹಿಟ್ ಲಿಸ್ಟ್‌ಗೆ ವಿಕ್ರಮ್ ಸಿನಿಮಾ ಸೇರಿತ್ತು. ಈ ಚಿತ್ರಕ್ಕೆ ಕಮಲ್‌ ಹಾಸನ್‌ ನಿರ್ಮಾಣ ಮಾಡಿದ್ದರು. ಇದನ್ನೂ ಓದಿ:ಎಂಗೇಜ್‌ಮೆಂಟ್ ಸಂಭ್ರಮದಲ್ಲಿ ನಿರ್ದೇಶಕ ಅಭಿಷೇಕ್ ಶೆಟ್ಟಿ

    ಇದೀಗ ಮಗಳು ಶ್ರುತಿ ನಟನೆಯ ಸಿನಿಮಾಗೆ ತಂದೆ ಕಮಲ್ ಹಾಸನ್ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಶ್ರುತಿ ಮತ್ತು ಲೋಕೇಶ್ ಜೊತೆಯಿರುವ ಬ್ಲ್ಯಾಕ್ & ವೈಟ್ ಫೋಟೋ ಹಂಚಿಕೊಂಡು, ಇಬ್ಬರ ಕಾಂಬಿನೇಷನ್ ಸಿನಿಮಾ ಬಗ್ಗೆ ಚಿತ್ರತಂಡ ಅಧಿಕೃತ ಅಪ್‌ಡೇಟ್ ನೀಡಿದೆ.

    ಈ ಮೂಲಕ ಅಪ್ಪ ಕಮಲ್ ಮತ್ತು ಮಗಳು ಶೃತಿ ಜೊತೆಯಾಗಿ ಕೆಲಸ ಮಾಡುತ್ತಿದ್ದಾರೆ. ವಿಭಿನ್ನ ಕಥೆಯನ್ನು ತೆರೆಯ ಮೇಲೆ ತರಲು ಸಕಲ ತಯಾರಿ ನಡೆಯುತ್ತಿದೆ. ಸದ್ಯ ಈ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಸಿನಿಮಾ ಹೇಗಿರಲಿದೆ ಎಂದು ಕೌತುಕದಿಂದ ಫ್ಯಾನ್ಸ್ ಎದುರು ನೋಡ್ತಿದ್ದಾರೆ.