Tag: ಸಲಾರ್‌ 2

  • ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್‌

    ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್‌

    ಕೆಜಿಎಫ್, ಕೆಜಿಎಫ್‌ 2, ಕಾಂತಾರ ಸಿನಿಮಾಗಳನ್ನು ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮ್ಸ್‌ (Hombale Fims) ಇದೀಗ ಸಲಾರ್‌ ಬಳಿಕ ಮತ್ತೆ ಪ್ರಭಾಸ್ ಜೊತೆ ಕೈ ಜೋಡಿಸಿದೆ. ಪ್ರಭಾಸ್ (Prabhas) ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳನ್ನು ಮಾಡೋದಾಗಿ ಹೊಂಬಾಳೆ ಸಂಸ್ಥೆ ಅಧಿಕೃತವಾಗಿ ತಿಳಿಸಿದೆ.

    ಈ ಹಿಂದೆ ಪ್ರಭಾಸ್‌ ನಟನೆಯ ಸಲಾರ್‌ ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಿಸಿತ್ತು. ಇದೀಗ ಮತ್ತೆ ನಟನ ಜೊತೆ 3 ಚಿತ್ರಗಳನ್ನು ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡಲಿದೆ. ಮುಂದಿನ 3 ವರ್ಷಗಳಲ್ಲಿ ಅಂದರೆ 2026, 2027, ಮತ್ತು 2028ಗೆ ಸಾಲು ಸಾಲು 3 ಸಿನಿಮಾಗಳು ರಿಲೀಸ್ ಆಗಲಿದೆ ಎಂದು ಹೊಂಬಾಳೆ ಸಂಸ್ಥೆ ಘೋಷಿಸಿದೆ. ಇದನ್ನೂ ಓದಿ:ಅನುಷ್ಕಾ ಶೆಟ್ಟಿ ಫ್ಯಾನ್ಸ್‌ಗೆ ಡಬಲ್ ಧಮಾಕ- ‘ಘಾಟಿ’ ಚಿತ್ರದ ಫಸ್ಟ್ ಲುಕ್ ಔಟ್

     

    View this post on Instagram

     

    A post shared by Hombale Films (@hombalefilms)

    ರೆಬಲ್ ಸ್ಟಾರ್ ಜೊತೆಗೆ ಕೈಜೋಡಿಸುತ್ತಿರುವುದು ನಮಗೆ ಹೆಮ್ಮೆಯ ವಿಷಯ. ಭಾರತೀಯ ಸಿನಿಮಾದ ಸಾರವನ್ನು ಸಂಭ್ರಮಿಸುವ ಹಾಗೂ ಅದನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಲು ಈ ಕೈಜೋಡಿಸುವಿಕೆ ಅತ್ಯಂತ ಮಹತ್ವದ್ದಾಗಲಿದೆ. ಸಿನಿಮಾ ಪ್ರೇಮಿಗಳಿಗೆ ಮರೆಯಲಾಗದ ಸಿನಿಮಾ ಅನುಭವವನ್ನು ಕೊಡುವುದು ನಮ್ಮ ಘೋಷಣೆಯಾಗಿದೆ. ವೇದಿಕೆ ಸಜ್ಜಾಗಿದೆ, ಮುಂದಿನ ಹಾದಿ ಮಿತಿಯಿಲ್ಲದ್ದಾಗಿದೆ. ‘ಸಲಾರ್ 2’ (Salaar 2) ಸಿನಿಮಾದ ಜೊತೆಗೆ ನಮ್ಮ ಈ ಪಯಣ ಪ್ರಾರಂಭ ಆಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಗುಡ್ ನ್ಯೂಸ್ ಹಂಚಿಕೊಂಡಿದೆ.

  • ಮದುವೆಯಾದ್ರೂ ಮಕ್ಕಳಾಗಲ್ಲ- ಆರೋಗ್ಯ ಸಮಸ್ಯೆ ಬಗ್ಗೆ ಬಾಯ್ಬಿಟ್ಟ ಶ್ರುತಿ ಹಾಸನ್

    ಮದುವೆಯಾದ್ರೂ ಮಕ್ಕಳಾಗಲ್ಲ- ಆರೋಗ್ಯ ಸಮಸ್ಯೆ ಬಗ್ಗೆ ಬಾಯ್ಬಿಟ್ಟ ಶ್ರುತಿ ಹಾಸನ್

    ಸೌತ್ ನಟಿ ಶ್ರುತಿ ಹಾಸನ್ (Shruti Haasan) ಇತ್ತೀಚೆಗೆ ಬಹುಕಾಲದ ಗೆಳೆಯ ಶಾಂತನು (Santanu Hazarika) ಜೊತೆಗಿನ ಸಂಬಂಧಕ್ಕೆ ಅಂತ್ಯ ಹಾಡಿದರು. ತಮ್ಮ ಖಾಸಗಿ ಬದುಕಿನ ವಿಚಾರವಾಗಿ ಸಿಕ್ಕಾಪಟ್ಟೆ ಸುದ್ದಿಯಾದ ಬೆನ್ನಲ್ಲೇ ಈಗ ತಮಗಿರುವ ಆರೋಗ್ಯ ಸಮಸ್ಯೆ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ವಿವರಿಸಿದ್ದಾರೆ.

    ತನಗೆ ಪಿಸಿಓಎಸ್ ಸಮಸ್ಯೆ ಇದೆ ಎಂಬ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಮೊದಲ ಪಿರಿಯಡ್ ಆದಾಗಲೇ ದೊಡ್ಡ ಹೆಣಗಾಟವಾಗಿತ್ತು. ಈಗಲೂ ಆ ನೋವನ್ನು ಭರಿಸುತ್ತಿದ್ದೇನೆ ಎಂದಿದ್ದಾರೆ. ಈ ಪಿರಿಯಡ್ ಸಮಯದಲ್ಲಿ ಯಾವುದೇ ಕೆಲಸವನ್ನು ಸರಿಯಾಗಿ ಮಾಡಲಾಗುವುದಿಲ್ಲ. ಇದರಿಂದಾಗಿ ನಾನು ಸಾಕಷ್ಟು ದೊಡ್ಡ ದೊಡ್ಡ ಆಫರ್‌ಗಳನ್ನು ಕಳೆದುಕೊಂಡಿದ್ದೇನೆ. ಆದರೆ ಕೆಲವು ನಿರ್ಮಾಪಕರು ಕೋಟಿಗಟ್ಟಲೆ ಖರ್ಚು ಮಾಡಿ ಶೂಟಿಂಗ್ ಮಾಡುತ್ತಿರುವಾಗ ನಿಮ್ಮ ಆರೋಗ್ಯ ಸಮಸ್ಯೆಯಿಂದ ಮುಂದೂಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು.‌ ಇದನ್ನೂ ಓದಿ:ತಮಿಳು ನಟ ರಜನಿಕಾಂತ್ ಟೆಂಪಲ್ ರನ್

    ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ (ಪಿಸಿಓಎಸ್) ಮಹಿಳೆಯರಲ್ಲಿ ಭಾರೀ ರಕ್ತಸ್ರಾವವನ್ನು ಉಂಟುಮಾಡುತ್ತದೆ. ಅಲ್ಲದೇ ಈ ಕಾಯಿಲೆ ಇರುವವರಲ್ಲಿ ಅನೇಕರಿಗೆ ಮಕ್ಕಳೂ ಸಹ ಆಗುವುದಿಲ್ಲ ಎಂದು ತಮ್ಮ ಆರೋಗ್ಯ ಸಮಸ್ಯೆಯ ಬಗ್ಗೆ ನಟಿ ಹೇಳಿಕೊಂಡಿದ್ದಾರೆ.

    ಅಂದಹಾಗೆ, ಚೆನ್ನೈ ಸ್ಟೋರಿಸ್, ಸಲಾರ್ 2 ಸೇರಿದಂತೆ ಹಲವು ಸಿನಿಮಾಗಳು ಶ್ರುತಿ ಹಾಸನ್ ಕೈಯಲ್ಲಿವೆ.

  • ‘ಸಲಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ- ಕೊನೆಗೂ ಸಿಕ್ತು ಸ್ಪಷ್ಟನೆ

    ‘ಸಲಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ- ಕೊನೆಗೂ ಸಿಕ್ತು ಸ್ಪಷ್ಟನೆ

    ಬಾಲಿವುಡ್ ನಟಿ ಕಿಯಾರಾ ಅಡ್ವಾಣಿಗೆ (Kiara Advani) ಹಿಂದಿ ಮತ್ತು ತೆಲುಗಿನಲ್ಲಿ ಭಾರೀ ಬೇಡಿಕೆಯಿದೆ. ಇತ್ತೀಚೆಗೆ ಸಲಾರ್-2 (Salaar 2) ಸಿನಿಮಾದಲ್ಲಿ ಕಿಯಾರಾ ಕಾಣಿಸಿಕೊಳ್ತಾರೆ ಎಂಬ ಸುದ್ದಿ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿತ್ತು. ಅಸಲಿಗೆ ಅವರು ಇರುತ್ತಾರಾ? ಎಂಬುದು ಸ್ಪಷ್ಟನೆ ಸಿಕ್ಕಿರಲಿಲ್ಲ. ಇದೀಗ ಉತ್ತರ ಸಿಕ್ಕಿದೆ. ಇದನ್ನೂ ಓದಿ:ಗಮನ ಸೆಳೆದ ಭೂಮಿ ಪೆಡ್ನೇಕರ್ ಧರಿಸಿದ ಕಾಸ್ಟ್ಯೂಮ್

    ‘ಸಲಾರ್’ ಪಾರ್ಟ್ 2ನಲ್ಲಿ ಕಿಯಾರಾ ಅಡ್ವಾಣಿ ಸಿನಿಮಾದಲ್ಲಿ ನಟಿಸುತ್ತಿಲ್ಲ. ಹರಿದಾಡುತ್ತಿರುವ ಸುದ್ದಿ ಸುಳ್ಳು ಎನ್ನಲಾಗುತ್ತಿದೆ. ನಾಯಕಿಯ ಆಯ್ಕೆ ವಿಚಾರದಲ್ಲಿ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಐಟಂ ಡ್ಯಾನ್ಸ್‌ಗೆ ಹೆಜ್ಜೆ ಹಾಕಲಿದ್ದಾರೆ ಎಂದು ಸುದ್ದಿಯಾಗಿತ್ತು. ಇದು ಕೂಡ ಸುಳ್ಳು ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಚಿತ್ರತಂಡ ಯಾವ ಮಾಹಿತಿ ರಿವೀಲ್ ಮಾಡಲಿದೆ ಎಂದು ಕಾಯಬೇಕಿದೆ.

    ಕಿಯಾರಾ ಸದ್ಯ ರಾಮ್ ಚರಣ್ ಜೊತೆಗಿನ ‘ಗೇಮ್ ಚೇಂಜರ್’ ಸಿನಿಮಾ ರಿಲೀಸ್‌ಗಾಗಿ ಎದುರು ನೋಡ್ತಿದ್ದಾರೆ. ಕೆಲವು ಬಾಲಿವುಡ್ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಇನ್ನೊಂದು ಕಡೆ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ಕಿಯಾರಾ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಇದೆ. ಚಿತ್ರತಂಡದ ಅಧಿಕೃತ ಮಾಹಿತಿಗಾಗಿ ಕಾಯಬೇಕಿದೆ.

    ಸಲಾರ್‌ ಪಾರ್ಟ್‌ 1ರಲ್ಲಿ ಪ್ರಭಾಸ್‌, ಪೃಥ್ವಿರಾಜ್‌ ಸುಕುಮಾರನ್‌, ಶ್ರುತಿ ಹಾಸನ್‌ ನಟಿಸಿದ್ದರು. ಚಿತ್ರಕ್ಕೆ ಉತ್ತಮ ಪ್ರಶಂಸೆ ವ್ಯಕ್ತವಾಗಿತ್ತು. ಈ ಸಿನಿಮಾವನ್ನು ಪ್ರಶಾಂತ್‌ ನೀಲ್‌ ನಿರ್ದೇಶನ ಮಾಡಿದ್ದಾರೆ.

  • ಸದ್ಯಕ್ಕೆ ‘ಸಲಾರ್ 2’ ಅನುಮಾನ: ಪ್ರಭಾಸ್ ಇದಕ್ಕೆ ಕಾರಣ

    ಸದ್ಯಕ್ಕೆ ‘ಸಲಾರ್ 2’ ಅನುಮಾನ: ಪ್ರಭಾಸ್ ಇದಕ್ಕೆ ಕಾರಣ

    ಪ್ರಭಾಸ್ (Prabhas) ನಟನೆಯ ಸಲಾರ್ ಸಿನಿಮಾ ಬಾಕ್ಸಾಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಈಗಲೂ ಕೆಲವರು ಸಲಾರ್ ಸಿನಿಮಾದ ಗುಂಗಿನಲ್ಲೇ ಇದ್ದಾರೆ. ಈ ನಡುವೆ ಸಲಾರ್ 2 (Salaar 2) ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳು ಹೊರ ಬಿದ್ದಿದ್ದವು. ಇದೇ ಏಪ್ರಿಲ್ ಕೊನೆಯ ವಾರದಿಂದ ಸಲಾರ್ 2 ಚಿತ್ರದ ಶೂಟಿಂಗ್ ಕೆಲಸದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ (Prashant Neel) ತೊಡಗಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸದ್ಯಕ್ಕೆ ಸಲಾರ್ ಅನುಮಾನ ಎನ್ನುವ ಮಾಹಿತಿ ಹೊರ ಬಿದ್ದಿದೆ.

    ಸದ್ಯ ಪ್ರಭಾಸ್ ಕಲ್ಕಿ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಕಲ್ಕಿ ಮುಗಿಯುತ್ತಿದ್ದಂತೆಯೇ ‘ದಿ ರಾಜ ಸಾಬ್’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಬೇಕಿದೆ. ಇದರ ನಂತರ ಸ್ಪಿರಿಟ್ ಚಿತ್ರಕ್ಕೆ ಅವರು ಕಾಲ್ ಶೀಟ್ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎರಡೂ ಸಿನಿಮಾ ಮುಗಿಯೋಕೆ ಕನಿಷ್ಠ ಎರಡು ವರ್ಷಗಳಾದರೂ ಬೇಕು. ಹಾಗಾಗಿ ಸದ್ಯಕ್ಕೆ ಸಲಾರ್ 2 ಸೆಟ್ಟೇರುವುದು ಅನುಮಾನ.

    ಈ ಹಿಂದೆ ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರು (Vijaya Kirgandur) ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದರು. ಅದರ ಪ್ರಕಾರ ಸಲಾರ್ 2 ಸಿನಿಮಾ 2025ರಲ್ಲಿ ಬಿಡುಗಡೆ ಆಗಲಿದೆಯಂತೆ. ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈಗಾಗಲೇ ಸಲಾರ್ 2 ಸಿನಿಮಾದ ಸ್ಕ್ರಿಪ್ಟ್ ರೆಡಿಯಾಗಿದ್ದು, ಸಲಾರ್ ಸಿನಿಮಾಗಿಂತಲೂ ಸಲಾರ್ 2 ಇನ್ನೂ ಅದ್ಧೂರಿಯಾಗಿ ಇರಲಿದೆ ಎಂದು ವಿಜಯ್ ತಿಳಿಸಿದ್ದರು.

     

    ‘ಸಲಾರ್ ’ ಪ್ಯಾನ್‍ ಇಂಡಿಯಾ ಚಿತ್ರವಾದರೂ, ಈ ಚಿತ್ರದ ಹಿಂದಿರುವ ತಾಂತ್ರಿಕ ತಂಡದವರೆಲ್ಲರೂ ಕನ್ನಡದವರಾಗಿದ್ದರು. ನಿರ್ಮಾಪಕರಾದ ವಿಜಯ್‍ ಕಿರಗಂದೂರು, ನಿರ್ದೇಶಕ ಪ್ರಶಾಂತ್‍ ನೀಲ್‍ , ಛಾಯಾಗ್ರಾಹಕ ಭುವನ್‍ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಚಿತ್ರದಲ್ಲಿ ಕೆಲಸ ಮಾಡಿರುವ ಹಲವು ತಂತ್ರಜ್ಞರು ಹಾಗೂ ಕಲಾವಿದರು  ಈ ನೆಲದ ಮಣ್ಣಿನವರಾಗಿದ್ದು, ಇದು ಕನ್ನಡದ ಪ್ರತಿಭಾ ಸಂಪತ್ತಿನ ಒಂದು ಉದಾಹರಣೆಯಷ್ಟೇ.

  • ಜ್ಯೂನಿಯರ್ ಎನ್.ಟಿ.ಆರ್ ಸಿನಿಮಾಗಿಂತ ಮುಂಚೆ ಸಲಾರ್ 2

    ಜ್ಯೂನಿಯರ್ ಎನ್.ಟಿ.ಆರ್ ಸಿನಿಮಾಗಿಂತ ಮುಂಚೆ ಸಲಾರ್ 2

    ಅಂದುಕೊಂಡಂತೆ ಆಗಿದ್ದರೆ ಜ್ಯೂನಿಯರ್ ಎನ್.ಟಿ.ಆರ್ (Jr NTR) ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಹೊಸ ಸಿನಿಮಾ ಕುರಿತಂತೆ ಅಪ್ ಡೇಟ್ ಸಿಗಬೇಕಿತ್ತು. ಆದರೆ, ಈ ಸಿನಿಮಾಗೂ ಮುಂಚೆ ಸಲಾರ್ 2 ಚಿತ್ರದ ಚಿತ್ರೀಕರಣ ಶುರುವಾಗಲಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಸಲಾರ್ 2 ಚಿತ್ರದ ನಂತರ ಜ್ಯೂನಿಯರ್ ಎನ್.ಟಿ.ಆರ್ ಗಾಗಿ ಸಿನಿಮಾ ಮಾಡಲಿದ್ದಾರಂತೆ.

    ಪ್ರಭಾಸ್ ನಟನೆಯ ಸಲಾರ್ ಸಿನಿಮಾ ಬಾಕ್ಸಾಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಈಗಲೂ ಕೆಲವರು ಸಲಾರ್ ಸಿನಿಮಾದ ಗುಂಗಿನಲ್ಲೇ ಇದ್ದಾರೆ. ಈ ನಡುವೆ ಸಲಾರ್ 2 (Salaar 2) ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳು ಹೊರ ಬಿದ್ದಿವೆ. ಏಪ್ರಿಲ್ ನಿಂದ ಸಲಾರ್ 2 ಚಿತ್ರದ ಶೂಟಿಂಗ್ ಕೆಲಸದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ (Prashant Neel) ತೊಡಗಿಕೊಳ್ಳಲಿದ್ದಾರಂತೆ.

    ಈ ಹಿಂದೆ ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರು (Vijaya Kirgandur) ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದರು. ಅದರ ಪ್ರಕಾರ ಸಲಾರ್ 2 ಸಿನಿಮಾ 2025ರಲ್ಲಿ ಬಿಡುಗಡೆ ಆಗಲಿದೆಯಂತೆ. ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈಗಾಗಲೇ ಸಲಾರ್ 2 ಸಿನಿಮಾದ ಸ್ಕ್ರಿಪ್ಟ್ ರೆಡಿಯಾಗಿದ್ದು, ಸಲಾರ್ ಸಿನಿಮಾಗಿಂತಲೂ ಸಲಾರ್ 2 ಇನ್ನೂ ಅದ್ಧೂರಿಯಾಗಿ ಇರಲಿದೆ ಎಂದು ವಿಜಯ್ ತಿಳಿಸಿದ್ದರು.

    ಕನ್ನಡದಲ್ಲಿ ‘ಮಾಸ್ಟರ್ ಪೀಸ್‍’, ‘ರಾಜಕುಮಾರ’, ‘ಯುವರತ್ನ’, ‘ಕೆಜಿಎಫ್‍ 1 ಮತ್ತು 2’, ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್’, ಯುವ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್, ತನ್ನ ನಿರ್ಮಾಣದ ಚಿತ್ರಗಳ ಮೂಲಕ ಜಗತ್ತಿನ ಗಮನ ಸೆಳೆದಿರುವುದಷ್ಟೇ ಅಲ್ಲ, ಕನ್ನಡ ಚಿತ್ರಗಳನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಮೂಲಕ ಎಲ್ಲರ ಗಮನ ಸೆಳೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

     

    ‘ಸಲಾರ್ ’ ಪ್ಯಾನ್‍ ಇಂಡಿಯಾ ಚಿತ್ರವಾದರೂ, ಈ ಚಿತ್ರದ ಹಿಂದಿರುವ ತಾಂತ್ರಿಕ ತಂಡದವರೆಲ್ಲರೂ ಕನ್ನಡದವರಾಗಿದ್ದರು. ನಿರ್ಮಾಪಕರಾದ ವಿಜಯ್‍ ಕಿರಗಂದೂರು, ನಿರ್ದೇಶಕ ಪ್ರಶಾಂತ್‍ ನೀಲ್‍ (Prashant Neel), ಛಾಯಾಗ್ರಾಹಕ ಭುವನ್‍ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಚಿತ್ರದಲ್ಲಿ ಕೆಲಸ ಮಾಡಿರುವ ಹಲವು ತಂತ್ರಜ್ಞರು ಹಾಗೂ ಕಲಾವಿದರು  ಈ ನೆಲದ ಮಣ್ಣಿನವರಾಗಿದ್ದು, ಇದು ಕನ್ನಡದ ಪ್ರತಿಭಾ ಸಂಪತ್ತಿನ ಒಂದು ಉದಾಹರಣೆಯಷ್ಟೇ.

  • ಏಪ್ರಿಲ್ ನಿಂದ ‘ಸಲಾರ್ 2’ ಚಿತ್ರದ ಕೆಲಸದಲ್ಲಿ ಪ್ರಶಾಂತ್ ನೀಲ್ ಬ್ಯುಸಿ

    ಏಪ್ರಿಲ್ ನಿಂದ ‘ಸಲಾರ್ 2’ ಚಿತ್ರದ ಕೆಲಸದಲ್ಲಿ ಪ್ರಶಾಂತ್ ನೀಲ್ ಬ್ಯುಸಿ

    ಪ್ರಭಾಸ್ ನಟನೆಯ ಸಲಾರ್ ಸಿನಿಮಾ ಬಾಕ್ಸಾಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು. ಈಗಲೂ ಕೆಲವರು ಸಲಾರ್ ಸಿನಿಮಾದ ಗುಂಗಿನಲ್ಲೇ ಇದ್ದಾರೆ. ಈ ನಡುವೆ ಸಲಾರ್ 2 (Salaar 2) ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳು ಹೊರ ಬಿದ್ದಿವೆ. ಏಪ್ರಿಲ್ ನಿಂದ ಸಲಾರ್ 2 ಚಿತ್ರದ ಶೂಟಿಂಗ್ ಕೆಲಸದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ (Prashant Neel) ತೊಡಗಿಕೊಳ್ಳಲಿದ್ದಾರಂತೆ.

    ಈ ಹಿಂದೆ ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರು (Vijaya Kirgandur) ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದರು. ಅದರ ಪ್ರಕಾರ ಸಲಾರ್ 2 ಸಿನಿಮಾ 2025ರಲ್ಲಿ ಬಿಡುಗಡೆ ಆಗಲಿದೆಯಂತೆ. ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈಗಾಗಲೇ ಸಲಾರ್ 2 ಸಿನಿಮಾದ ಸ್ಕ್ರಿಪ್ಟ್ ರೆಡಿಯಾಗಿದ್ದು, ಸಲಾರ್ ಸಿನಿಮಾಗಿಂತಲೂ ಸಲಾರ್ 2 ಇನ್ನೂ ಅದ್ಧೂರಿಯಾಗಿ ಇರಲಿದೆ ಎಂದು ವಿಜಯ್ ತಿಳಿಸಿದ್ದರು.

    ಕನ್ನಡದಲ್ಲಿ ‘ಮಾಸ್ಟರ್ ಪೀಸ್‍’, ‘ರಾಜಕುಮಾರ’, ‘ಯುವರತ್ನ’, ‘ಕೆಜಿಎಫ್‍ 1 ಮತ್ತು 2’, ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್’, ಯುವ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್, ತನ್ನ ನಿರ್ಮಾಣದ ಚಿತ್ರಗಳ ಮೂಲಕ ಜಗತ್ತಿನ ಗಮನ ಸೆಳೆದಿರುವುದಷ್ಟೇ ಅಲ್ಲ, ಕನ್ನಡ ಚಿತ್ರಗಳನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಮೂಲಕ ಎಲ್ಲರ ಗಮನ ಸೆಳೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

    ‘ಸಲಾರ್ ’ ಪ್ಯಾನ್‍ ಇಂಡಿಯಾ ಚಿತ್ರವಾದರೂ, ಈ ಚಿತ್ರದ ಹಿಂದಿರುವ ತಾಂತ್ರಿಕ ತಂಡದವರೆಲ್ಲರೂ ಕನ್ನಡದವರಾಗಿದ್ದರು. ನಿರ್ಮಾಪಕರಾದ ವಿಜಯ್‍ ಕಿರಗಂದೂರು, ನಿರ್ದೇಶಕ ಪ್ರಶಾಂತ್‍ ನೀಲ್‍ (Prashant Neel), ಛಾಯಾಗ್ರಾಹಕ ಭುವನ್‍ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಚಿತ್ರದಲ್ಲಿ ಕೆಲಸ ಮಾಡಿರುವ ಹಲವು ತಂತ್ರಜ್ಞರು ಹಾಗೂ ಕಲಾವಿದರು  ಈ ನೆಲದ ಮಣ್ಣಿನವರಾಗಿದ್ದು, ಇದು ಕನ್ನಡದ ಪ್ರತಿಭಾ ಸಂಪತ್ತಿನ ಒಂದು ಉದಾಹರಣೆಯಷ್ಟೇ.

  • ‘ಸಲಾರ್ 2’ ಚಿತ್ರದ ಶೂಟಿಂಗ್, ರಿಲೀಸ್ ಮಾಹಿತಿ ನೀಡಿದ ವಿಜಯ್ ಕಿರಗಂದೂರು

    ‘ಸಲಾರ್ 2’ ಚಿತ್ರದ ಶೂಟಿಂಗ್, ರಿಲೀಸ್ ಮಾಹಿತಿ ನೀಡಿದ ವಿಜಯ್ ಕಿರಗಂದೂರು

    ಪ್ರಭಾಸ್ ನಟನೆಯ ಸಲಾರ್ ಸಿನಿಮಾ ಬಾಕ್ಸಾಫೀಸಿನಲ್ಲಿ ಈವರೆಗೂ 627 ಕೋಟಿ ರೂಪಾಯಿ ಗಳಿಸಿ, ಇನ್ನೂ ಮುನ್ನುಗ್ಗುತ್ತಿದೆ. ಈ ನಡುವೆ ಸಲಾರ್ 2 ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳು ಹೊರ ಬಿದ್ದಿವೆ. ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರು (Vijaya Kirgandur) ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದು, ಅದರ ಪ್ರಕಾರ ಸಲಾರ್ 2 ಸಿನಿಮಾ 2025ರಲ್ಲಿ ಬಿಡುಗಡೆ ಆಗಿದೆ.

    ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈಗಾಗಲೇ ಸಲಾರ್ 2 ಸಿನಿಮಾದ ಸ್ಕ್ರಿಪ್ಟ್ ರೆಡಿಯಾಗಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಸಲಾರ್ 2 ಸಿನಿಮಾದ ಕುರಿತಂತೆ ನಿರ್ದೇಶಕ ಪ್ರಶಾಂತ್ ನೀಲ್ ಕೆಲಸ ಕೂಡ ಶುರು ಮಾಡಲಿದ್ದಾರಂತೆ. ಸಲಾರ್ ಸಿನಿಮಾಗಿಂತಲೂ ಸಲಾರ್ 2 ಇನ್ನೂ ಅದ್ಧೂರಿಯಾಗಿ ಇರಲಿದೆ ಎಂದು ವಿಜಯ್ ತಿಳಿಸಿದ್ದಾರೆ.

    ಹೊಂಬಾಳೆ ಫಿಲ್ಮ್ಸ್ (Hombale Films) ನಿರ್ಮಾಣದ ಸಲಾರ್ (Salaar) ಸಿನಿಮಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಈ ಸಿನಿಮಾ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿಶ್ವದಾದ್ಯಂತ  ಕೋಟಿ ಕೋಟಿ ಹಣವನ್ನು ಗಳಿಸಿದೆ. ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ಹಣ ಹರಿದು ಬರುತ್ತಿದೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ, ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೊಸ ದಾಖಲೆಯನ್ನು ಮಾಡಿದೆ. ಕನ್ನಡದ ನಿರ್ಮಾಣದ ಸಂಸ್ಥೆಯೊಂದು ರಾಷ್ಟ್ರೀಯ ಮಟ್ಟದಲ್ಲಿ ಇಂಥದ್ದೊಂದು ದಾಖಲೆ ಮಾಡಿರುವುದು ಕನ್ನಡ ಚಿತ್ರರಂಗಕ್ಕೆ ಮತ್ತು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.

    ಕನ್ನಡದಲ್ಲಿ ‘ಮಾಸ್ಟರ್ ಪೀಸ್‍’, ‘ರಾಜಕುಮಾರ’, ‘ಯುವರತ್ನ’, ‘ಕೆಜಿಎಫ್‍ 1 ಮತ್ತು 2’, ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್’ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್, ತನ್ನ ನಿರ್ಮಾಣದ ಚಿತ್ರಗಳ ಮೂಲಕ ಜಗತ್ತಿನ ಗಮನ ಸೆಳೆದಿರುವುದಷ್ಟೇ ಅಲ್ಲ, ಕನ್ನಡ ಚಿತ್ರಗಳನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಮೂಲಕ ಎಲ್ಲರ ಗಮನ ಸೆಳೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

    ‘ಸಲಾರ್’ ಪ್ಯಾನ್‍ ಇಂಡಿಯಾ ಚಿತ್ರವಾದರೂ, ಈ ಚಿತ್ರದ ಹಿಂದಿರುವ ತಾಂತ್ರಿಕ ತಂಡದವರೆಲ್ಲರೂ ಕನ್ನಡದವರಾಗಿದ್ದಾರೆ. ನಿರ್ಮಾಪಕರಾದ ವಿಜಯ್‍ ಕಿರಗಂದೂರು, ನಿರ್ದೇಶಕ ಪ್ರಶಾಂತ್‍ ನೀಲ್‍ (Prashant Neel), ಛಾಯಾಗ್ರಾಹಕ ಭುವನ್‍ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಚಿತ್ರದಲ್ಲಿ ಕೆಲಸ ಮಾಡಿರುವ ಹಲವು ತಂತ್ರಜ್ಞರು ಹಾಗೂ ಕಲಾವಿದರು  ಈ ನೆಲದ ಮಣ್ಣಿನವರಾಗಿದ್ದು, ಇದು ಕನ್ನಡದ ಪ್ರತಿಭಾ ಸಂಪತ್ತಿನ ಒಂದು ಉದಾಹರಣೆಯಷ್ಟೇ.

     

    ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದಲ್ಲಿ ಪ್ರಭಾಸ್‍ (Prabhas) ಜೊತೆಗೆ ಪೃಥ್ವಿರಾಜ್‍ ಸುಕುಮಾರನ್‍, ಶ್ರುತಿ ಹಾಸನ್‍, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಪ್ರಶಾಂತ್ ನೀಲ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

  • Salaar ರಿಲೀಸ್‌ಗೂ ಮುನ್ನವೇ ಹೊರಬಿತ್ತು ಪಾರ್ಟ್‌ 2 ಅಪ್‌ಡೇಟ್

    Salaar ರಿಲೀಸ್‌ಗೂ ಮುನ್ನವೇ ಹೊರಬಿತ್ತು ಪಾರ್ಟ್‌ 2 ಅಪ್‌ಡೇಟ್

    ‘ಸಲಾರ್’ (Salaar) ಮೊದಲ ಭಾಗವೇ ಇನ್ನೂ ರಿಲೀಸ್ ಆಗಿಲ್ಲ. ಅದಾಗಲೇ ಎರಡನೇ ಭಾಗದ ಬಿಡುಗಡೆ ದಿನಾಂಕ ಗೊತ್ತಾಗಿ ಬಿಡುತ್ತದಾ? ಅನುಮಾನ ಎದ್ದಿದೆ. ಈಗಾಗಲೇ ಹಲವು ಬಾರಿ ಬಿಡುಗಡೆ ಮುಂದೆ ಹೋಗಿದೆ. ಹೀಗಿರುವಾಗ ಎರಡನೇ ಭಾಗದ Salaar 2) ಬಿಡುಗಡೆ ದಿನಾಂಕ ಎಲ್ಲಿ ಹೇಗೆ ಗೊತ್ತಾಗಲಿದೆ? ಅದು ನಿಜವಾ? ಇಲ್ಲಿದೆ ಮಾಹಿತಿ.

    ಸಲಾರ್ ಇನ್ನೇನು ಎರಡು ತಿಂಗಳಲ್ಲಿ ಹಾಜರಾಗಲಿದೆ. ಈಗಾಗಲೇ ಎರಡು ಬಾರಿ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ. ಪ್ರಭಾಸ್ (Prabhas) ಫ್ಯಾನ್ಸ್ ಕೊತ ಕೊತ ಕುದಿಯುತ್ತಿದ್ದಾರೆ. ಆದರೆ ಬೇಸರ ಮಾಡಿಕೊಂಡಿಲ್ಲ. ಕಾರಣ ಸಿನಿಮಾ ಅದ್ಭುತವಾಗಿ ಮೂಡಬೇಕೆಂದು ಪ್ರಶಾಂತ್ ನೀಲ್ ಒದ್ದಾಡುತ್ತಿದ್ದಾರೆ. ಇದು ಎಲ್ಲರಿಗೂ ಗೊತ್ತು. ಈ ಹೊತ್ತಲ್ಲೇ ‘ಸಲಾರ್’ (Salaar 2) ಎರಡನೇ ಭಾಗದ ಬಿಡುಗಡೆ ದಿನಾಂಕವನ್ನು ಸಲಾರ್ ಮೊದಲ ಭಾಗದ ಕೊನೆಯಲ್ಲಿ ಅನೌನ್ಸ್ ಮಾಡಲಿದೆ ನಿರ್ಮಾಣ ಸಂಸ್ಥೆ ಎನ್ನುವ ಸುದ್ದಿ ಕಿಡಿ ಹೊತ್ತಿಸಿದೆ. ಇದನ್ನೂ ಓದಿ:Breaking: ಬಿಗ್ ಬಾಸ್ ಮನೆಯಿಂದ ರಕ್ಷಕ್ ಬುಲೆಟ್ ಔಟ್

    ‘ಸಲಾರ್’ ಸಿನಿಮಾದ ಕೊನೆಯಲ್ಲಿ ಇದು ಅನೌನ್ಸ್ ಆಗಲಿದೆಯಂತೆ. ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ಸಲಾರ್ ಎರಡನೇ ಭಾಗ ಬರಲಿದೆ ಎನ್ನುವುದು ಸದ್ಯಕ್ಕೆ ಸಿಕ್ಕ ಮಾಹಿತಿ. ಇದರ ಅರ್ಥ ಏನು? ಈಗಾಗಲೇ ಎರಡನೇ ಭಾಗದ ಶೂಟಿಂಗ್ ಮುಗಿದಿದೆಯಾ? ಅಥವಾ ಸ್ವಲ್ಪ ಮಟ್ಟಿಗೆ ಮುಗಿಸಿದ್ದಾರಾ? ಬಾಕಿಯನ್ನು ಸದ್ಯದಲ್ಲೇ ಆರಂಭ ಮಾಡಲಿದ್ದಾರಾ? ಎಲ್ಲವೂ ಪ್ರಶ್ನೆಗಳೇ. ಹೀಗಿರುವಾಗ ಮೊದಲು ಮೊದಲ ಭಾಗ ಬರಲಿ, ಆಮೇಲೆ ಎರಡರ ಕತೆ ನೋಡೋಣ ಅಂತಿದ್ದಾರೆ ಫ್ಯಾನ್ಸ್.