Tag: ಸವಾರ

  • ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ದುರ್ಮರಣ- 8 ಮೊಬೈಲ್‍ಗಳು ಪತ್ತೆ

    ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ದುರ್ಮರಣ- 8 ಮೊಬೈಲ್‍ಗಳು ಪತ್ತೆ

    ಬೆಂಗಳೂರು: ಡಿವೈಡರ್ ಗೆ ಡಿಕ್ಕಿ ಹೊಡೆದು (Bike Accident) ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಮಾರ್ಕೆಟ್ ಫ್ಲೈಓವರ್ ಮೇಲೆ ಈ ಅಪಘಾತ ನಡೆದಿದೆ. ಸಾವನ್ನಪ್ಪಿದ ಬೈಕ್ ಸವಾರನನ್ನು ಕಬೀರ್ ಪಾಷ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕೆಕೆಆರ್‌ಟಿಸಿ ಪರೀಕ್ಷೆಯಲ್ಲೂ ಅಕ್ರಮ – ತೂಕ ಹೆಚ್ಚಳಕ್ಕೆ ಒಳ ಉಡುಪಿನಲ್ಲಿ ಕಬ್ಬಿಣದ ಕಲ್ಲಿಟ್ಟುಕೊಂಡ ಅಭ್ಯರ್ಥಿಗಳು

    ಮೃತನ ಬೈಕ್ ನಲ್ಲಿ ಎಂಟು ಮೊಬೈಲ್‍ (Mobile) ಗಳು ಪತ್ತೆಯಾಗಿವೆ. ಘಟನೆಯಿಂದ ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾನೆ. ಮೊಬೈಲ್ ಕಳ್ಳತನ ಮಾಡಿ ಎಸ್ಕೇಪ್ ಆಗುವ ವೇಳೆ ಆಕ್ಸಿಡೆಂಟ್ ಆಗಿರುವ ಶಂಕೆ ವ್ಯಕ್ತವಾಗಿದೆ.

    ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೊಬೈಲ್ ಕಳ್ಳರು ಅನ್ನುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಸಿಟಿ ಮಾರ್ಕೆಟ್ ಪೊಲೀಸರು ಸ್ಥಳಪರಿಶೀಲನೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೈಕರ್ ಗುಂಪಿನೊಂದಿಗೆ ಮಾತಿನ ಚಕಮಕಿ – ಸವಾರನಿಗೆ ಬೇಕೆಂದು ಸ್ಕಾರ್ಪಿಯೋ ಡಿಕ್ಕಿ

    ಬೈಕರ್ ಗುಂಪಿನೊಂದಿಗೆ ಮಾತಿನ ಚಕಮಕಿ – ಸವಾರನಿಗೆ ಬೇಕೆಂದು ಸ್ಕಾರ್ಪಿಯೋ ಡಿಕ್ಕಿ

    ನವದೆಹಲಿ: ಬೈಕರ್ ಗುಂಪಿನೊಂದಿಗೆ ತೀವ್ರ ಮಾತಿನ ಚಕಮಕಿ ನಡೆದ ಹಿನ್ನೆಲೆ ಉದ್ದೇಶಪೂರ್ವಕವಾಗಿಯೇ ಸ್ಕಾರ್ಪಿಯೋ ಡ್ರೈವರ್, ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾನೆ. ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

    ದೆಹಲಿಯ ಅರ್ಜನ್ ಗಢ್ ಮೆಟ್ರೋ ನಿಲ್ದಾಣದ ಬಳಿ ಬೈಕ್ ರೈಡ್ ಮಾಡುತ್ತಿದ್ದ ಗುಂಪಿನೊಂದಿಗೆ ಸ್ಕಾರ್ಪಿಯೋ ಡ್ರೈವರ್ ಮಾತಿಗೆ ಮಾತು ಬೆಳೆಸಿ ಜಗಳವಾಡಲು ಮುಂದಾಗಿದ್ದಾನೆ. ಇದು ಅತಿರೇಕಕ್ಕೆ ಹೋಗಿದ್ದು, ಆಕ್ರೋಶಗೊಂಡ ಡ್ರೈವರ್ ಬೇಕೆಂದು ಬೈಕ್‍ಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯ ಸಂಪೂರ್ಣ ವೀಡಿಯೋವನ್ನು ಬೈಕ್ ಗುಂಪಿನ ಸವಾರರೊಬ್ಬರು ಫೋನ್‍ನಲ್ಲಿ ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹ: ಕೆರೆಗೆ ಹಾರಿದ ಒಂದೇ ಕುಟುಂಬದ ಮೂವರು ಮಹಿಳೆಯರು

    ಬೈಕರ್ ಅನುರಾಗ್ ಐ ಅಯ್ಯರ್ ಟ್ವೀಟ್‍ನಲ್ಲಿ, ಸ್ಕಾರ್ಪಿಯೋ ಕಾರ್ ಡ್ರೈವರ್ ನಮ್ಮ ಕೆಲವು ಸವಾರರನ್ನು ಕೊಲ್ಲುವುದಾಗಿ ಬೆಂದರಿಕೆ ಹಾಕಿದ್ದಾನೆ. ಅಲ್ಲದೇ ನಮ್ಮ ಸ್ನೇಹಿತನಿಗೆ ಬೇಕೆಂದು ಡಿಕ್ಕಿ ಹೊಡೆದಿದ್ದಾನೆ. ಈ ಘಟನೆಯಿಂದ ಯಾರಿಗೂ ತೀವ್ರವಾಗಿ ಗಾಯವಾಗಿಲ್ಲ ಎಂದು ಬರೆದು ವೀಡಿಯೋ ಟ್ವೀಟ್ ಮಾಡಿದ್ದಾರೆ.

    ಅನುರಾಗ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಿಎಂ ನರೇಂದ್ರ ಮೋದಿ ಮತ್ತು ದೆಹಲಿಯ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಅವರಿಗೆ ವೀಡಿಯೋ ಟ್ಯಾಗ್ ಮಾಡಿದ್ದು, ಇದಕ್ಕಾಗಿ ನಾವು ಮತ ಹಾಕುವುದಿಲ್ಲ ಮತ್ತು ತೆರಿಗೆ ಪಾವತಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆಯ ನಂತರ, ದೆಹಲಿ ಪೊಲೀಸರು ವಿಷಯದ ಬಗ್ಗೆ ಗಮನ ಹರಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ:  ಅನುಭವ ಮಂಟಪ ದಾಖಲೆಗಳನ್ನು ಪುರಾತತ್ವ ಇಲಾಖೆ ಪರಿಶೀಲಿಸಲಿದೆ: ಬೊಮ್ಮಾಯಿ

    ಗಾಯಗೊಂಡ ಬೈಕ್ ಸವಾರನ ಸ್ನೇಹಿತ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾನು ನನ್ನ 8 ರಿಂದ 10 ಸ್ನೇಹಿತರೊಂದಿಗೆ ಗುರುಗ್ರಾಮ್‍ನಿಂದ ದೆಹಲಿಗೆ ಹಿಂದಿರುಗುತ್ತಿದ್ದೆ. ಕಾರ್ ಡ್ರೈವರ್ ನಮ್ಮ ಬಳಿ ಬಂದು ರಾಶ್ ಡ್ರೈವಿಂಗ್ ಪ್ರಾರಂಭಿಸಿದನು. ಆತ ನನ್ನ ಸ್ನೇಹಿತನಿಗೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಹಿನ್ನೆಲೆ ನನ್ನ ಸ್ನೇಹಿತರು ಸ್ವಲ್ಪ ನಿಧಾನವಾಗಿ ರೈಡ್ ಮಾಡುತ್ತಿದ್ದೆವು. ಅವನೇ ವೇಗವಾಗಿ ಮುಂದೆ ಬಂದು ನನ್ನ ಸ್ನೇಹಿತನಿಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿಸಿದರು.

  • ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಡಿಕ್ಕಿ – ಸವಾರನನ್ನು ಒದ್ದು ಕೊಂದ ಕಿರಾತಕ

    ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಡಿಕ್ಕಿ – ಸವಾರನನ್ನು ಒದ್ದು ಕೊಂದ ಕಿರಾತಕ

    ಬೆಳಗಾವಿ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಡಿಕ್ಕಿಗೊಂಡ ಬಳಿಕ ಬೈಕ್ ಸವಾರನನ್ನು ಕಾಲಿನಿಂದ ಒದ್ದು ಹಲ್ಲೆ ನಡೆಸಿ ಕೊಂದ ಅಮಾಯಕ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪಟ್ಟಣದ ಚೌಕಿ ಕ್ರಾಸ್ ಬಳಿ ನಡೆದಿದೆ.

    ವಿಜಯ ಮಹಾಂತೇಶ್ ಹಿರೇಮಠ್ (67) ಬೈಕ್‍ನಲ್ಲಿ ಸಂಚರಿಸುತ್ತಿದ್ದಾಗ ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆಯುತ್ತಿದ್ದಂತೆ ಪಾದಚಾರಿಗೆ ಹೋಗಿ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಡಿಕ್ಕಿ ಹೊಡೆದರಿಂದ ಆಕ್ರೋಶಗೊಂಡ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದ ಅದೃಶ್ಯ ಎಂಬಾತ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಲೂ ಸಾಧ್ಯವಾಗದಷ್ಟು ಸರ್ಕಾರ ದಿವಾಳಿಯಾಗಿದೆಯೇ? – ಎಎಪಿ ಪ್ರಶ್ನೆ

    ಹಲ್ಲೆಯಿಂದ ಗಾಯಗೊಂಡ ಮಹಾಂತೇಶ್ ಸ್ಥಳದಲ್ಲೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಕಿತ್ತೂರು ಪೊಲೀಸರು ಹಲ್ಲೆ ನಡೆಸಿದ ಅದೃಶ್ಯನನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ. ಈ ಕುರಿತು ಕಿತ್ತೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪಟಾಕಿ ನಿಷೇಧಿಸಿದರೆ ನಿರ್ದಿಷ್ಟ ಸಮುದಾಯ ವಿರೋಧಿ ಎಂದರ್ಥವಲ್ಲ- ಸುಪ್ರೀಂ ಕೋರ್ಟ್‌

  • ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲಿಯೇ ಸಾವು

    ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲಿಯೇ ಸಾವು

    ತುಮಕೂರು: ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಎಚ್.ಬೈರಾಪುರ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಮೃತ ವ್ಯಕ್ತಿಯನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಹೋಬಳಿಯ ಲಕ್ಷ್ಮೀಪುರ ಗ್ರಾಮದ ಶ್ರೀಧರ್ (25) ಎಂದು ಗುರುತಿಸಲಾಗಿದೆ. ತಿಪಟೂರಿನ ಹುಚ್ಚನಟ್ಟಿ ಚಿಪ್ಪು ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಧರ್, ಬುಧವಾರ ರಾತ್ರಿ ಕೆಲಸ ಮುಗಿಸಿಕೊಂಡು ತಮ್ಮ ಬೈಕಿನಲ್ಲಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಎಚ್.ಬೈರಾಪುರ ಗೇಟ್ ಬಳಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

    ಘಟನೆಯಲ್ಲಿ ಬೈಕ್ ಚಲಾಯಿಸುತ್ತಿದ್ದ ಶ್ರೀಧರ್, ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಅದೇ ಗ್ರಾಮದ ನಿವಾಸಿ ಮಂಜುನಾಥ್ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗೆ ತಿಪಟೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೊನ್ನವಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇದನ್ನೂ ಓದಿ:ತಂದೆಯಿಂದಲೇ ಮಗನ ಬರ್ಬರ ಹತ್ಯೆ!

  • ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗ್ತಿದ್ದ ಸವಾರನ ರಕ್ಷಣೆ

    ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗ್ತಿದ್ದ ಸವಾರನ ರಕ್ಷಣೆ

    ಕೊಪ್ಪಳ: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಸವಾರನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

    ಕೊಪ್ಪಳ ತಾಲೂಕಿನ ಶಿವಪುರ ಗ್ರಾಮದ ಹಳ್ಳದಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿ ತನ್ನ ಬೈಕಿನಲ್ಲಿ ಹುಲಿಗಿಯಿಂದ ಶಿವುಪುರ ಗ್ರಾಮಕ್ಕೆ ತೆರಳುತ್ತಿದ್ದನು. ಈ ವೇಳೆ ಅವಘಡ ಸಂಭವಿಸಿದೆ.

    ಶಿವುಪುರ ಮತ್ತು ಹುಲಿಗಿ ಮಧ್ಯದಲ್ಲಿರುವ ಹಳ್ಳ ರಭಸವಾಗಿ ಹರಿಯುತ್ತಿದ್ದು, ರಸ್ತೆ ಮೇಲೆಯೂ ನೀರು ಬಂದಿತ್ತು. ಬೈಕ್ ಸವಾರ ನೀರು ಹರಿಯುವುದನ್ನು ನೋಡಿಯೂ ಬೈಕ್ ತೆಗೆದುಕೊಂಡು ಹೋಗಿದ್ದಾನೆ. ಈ ಸಮಯದಲ್ಲಿ ಬೈಕ್ ಸಮೇತ ಜಾರಿ ಬಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.

    ವ್ಯಕ್ತಿ ಸಣ್ಣ ಗೀಡವನ್ನು ಹಿಡಿದುಕೊಂಡು ಪ್ರಾಣ ಉಳಿಸಿಕೊಂಡಿದ್ದಾನೆ. ಈತನನ್ನು ಗಮನಿಸಿದ ಸ್ಥಳೀಯರು ಹಗ್ಗ ಕೊಟ್ಟು ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ.

  • ಸ್ವಿಫ್ಟ್ ಕಾರ್ ಡಿಕ್ಕಿಯ ರಭಸಕ್ಕೆ 50 ಮೀ ದೂರ ಬಿದ್ದ ಬೈಕ್ ಸಾವಾರ ಸಾವು

    ಸ್ವಿಫ್ಟ್ ಕಾರ್ ಡಿಕ್ಕಿಯ ರಭಸಕ್ಕೆ 50 ಮೀ ದೂರ ಬಿದ್ದ ಬೈಕ್ ಸಾವಾರ ಸಾವು

    ಗದಗ: ಸ್ವಿಫ್ಟ್ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪಿದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರಾಜೂರ ಗ್ರಾಮದ ಬಳಿ ನಡೆದಿದೆ.

    ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬಿಳೇಕಲ್ ಗ್ರಾಮದ ರಂಗನಗೌಡ ಭಾವಿಮನಿ(27) ಮೃತ ಬೈಕ್ ಸವಾರ. ಕಾರ್ ಚಾಲಕ ನಾಗರಾಜ್ ಅಜಾಗರುಕತೆಯಿಂದ ಘಟನೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ.

    ರಂಗನಗೌಡ ಭಾವಿಮನಿ ಅವರು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ನಿಲೋಗಲ್ ಕೆವಿಜಿ ಬ್ಯಾಂಕ್‍ನಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲಸ ನಿಮಿತ್ತ ಇಂದು ಗಜೇಂದ್ರಗಡದಿಂದ ರೋಣಕ್ಕೆ ತೆರಳುತ್ತಿದ್ದಾಗ ವೇಗವಾಗಿ ಸ್ವಿಫ್ಟ್ ಕಾರು ಚಾಲನೆ ಮಾಡಿಕೊಂಡು ಬಂದ ಚಾಲಕ ನಾಗರಾಜ್ ನಿಯಂತ್ರಣ ತಪ್ಪಿ, ರಂಗನಗೌಡ ಅವರ ಬೈಕ್‍ಗೆ ಡಿಕ್ಕಿಹೊಡೆದಿದೆ.

    ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಂಗನಗೌಡ ಸ್ಥಳದಿಂದ ಸುಮಾರು 50 ಮೀಟರ್ ಗೂ ಅಧಿಕ ದೂರ ಬಿದ್ದಿದ್ದಾರೆ. ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ರಂಗನಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಗಜೇಂದ್ರಗಡ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರು ಚಾಲಕ ನಾಗರಾಜ್ ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬಿಸಿದ್ದಾರೆ.

  • ಚಿಕನ್ ಅಂಗಡಿಗಳ ತ್ಯಾಜ್ಯ ತಿನ್ನಲು ಬಂದ ನಾಯಿಗೆ ಸ್ಕೂಟಿ ಡಿಕ್ಕಿ- ಸವಾರ ಸಾವು

    ಚಿಕನ್ ಅಂಗಡಿಗಳ ತ್ಯಾಜ್ಯ ತಿನ್ನಲು ಬಂದ ನಾಯಿಗೆ ಸ್ಕೂಟಿ ಡಿಕ್ಕಿ- ಸವಾರ ಸಾವು

    ಬೆಂಗಳೂರು: ರಸ್ತೆ ಬದಿಗೆ ಹಾಕಿದ್ದ ಚಿಕನ್ ಅಂಗಡಿಗಳ ತ್ಯಾಜ್ಯ ತಿನ್ನಲು ಬಂದಿದ್ದ ನಾಯಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಸಮೀಪದ ಗುಡ್ನಹಳ್ಳಿ ಕೆರೆಯ ಬಳಿ ನಡೆದಿದೆ.

    ಹೊಸೂರು ರಸ್ತೆಯ ಕುಮಾರನಹಳ್ಳಿ ನಿವಾಸಿ ಮುನಿಯಲ್ಲಪ್ಪ ಮೃತ ಸವಾರ. ಮುನಿಯಲ್ಲಪ್ಪ ಶನಿವಾರ ರಾತ್ರಿ ಆನೇಕಲ್ ಪಟ್ಟಣದಿಂದ ಕುಮಾರನಹಳ್ಳಿ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ಗುಡ್ನಹಳ್ಳಿ ಕೆರೆಯ ಮೇಲೆ ನಾಯಿಗಳು ಅಡ್ಡಲಾಗಿ ಬಂದ ಪರಿಣಾಮ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದಿದ್ದಾರೆ. ತಲೆ ಹಾಗೂ ಎದೆಯ ಭಾಗಕ್ಕೆ ಪೆಟ್ಟು ಬಿದ್ದು, ತೀವ್ರ ರಕ್ತಸ್ರಾವದಿಂದ ಮುನಿಯಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಈ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಆನೇಕಲ್ ಪೋಲಿಸರು ಪರಿಶೀಲನೆ ನಡೆಸಿದರು. ಬಳಿಕ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.

    ಗುಡ್ನಹಳ್ಳಿ ಕೆರೆ ಏರಿ ಮೇಲೆ ಪಟ್ಟಣದ ಚಿಕನ್ ಅಂಗಡಿಗಳ ತ್ಯಾಜ್ಯವನ್ನು ತಂದು ಹಾಕಲಾಗುತ್ತಿದೆ. ಇದರಿಂದಾಗಿ ವಾಸನೆ ಹಿಡಿದು ಬರುವ ನಾಯಿಗಳು ರಸ್ತೆಯಲ್ಲಿ ಓಡಾಡುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಚಿಕನ್ ಅಂಗಡಿಗಳ ತ್ಯಾಜ್ಯವನ್ನು ಎಸೆದು ಹೋಗುತ್ತಿರುವುದರಿಂದ ಸಾಕಷ್ಟು ಅಪಘಾತ ಪ್ರಕರಣಗಳು ನಡೆಯುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ.

  • ಪೊಲೀಸ್ ಜೀಪ್, ಬೈಕ್ ಮುಖಾಮುಖಿ ಡಿಕ್ಕಿ- ಸವಾರ ಸಾವು

    ಪೊಲೀಸ್ ಜೀಪ್, ಬೈಕ್ ಮುಖಾಮುಖಿ ಡಿಕ್ಕಿ- ಸವಾರ ಸಾವು

    ಹುಬ್ಬಳ್ಳಿ: ಪೊಲೀಸ್ ಜೀಪ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ನಗರದ ವಿಮಾನ ನಿಲ್ದಾಣದ ರಸ್ತೆಯ ಪೊಲೀಸ್ ಕ್ವಾಟರ್ಸ್ ಬಳಿ ನಡೆದಿದೆ.

    ಹುಬ್ಬಳ್ಳಿ ನಿವಾಸಿ ಪ್ರಸಾದ್ ಶೆಟ್ಟಿ (36) ಮೃತ ದುರ್ದೈವಿ. ಪ್ರಸಾದ್ ಶೆಟ್ಟಿ ಪತ್ನಿ ವನಿತಾ ಶೆಟ್ಟಿ ಘಟನೆ ಗಾಯಗೊಂಡಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಪ್ರಸಾದ್ ಶೆಟ್ಟಿ ದಂಪತಿಯ ಮಕ್ಕಳ ಶಾಲೆಯಲ್ಲಿ ಇಂದು ಪೋಷಕರ ಸಭೆ ಕರೆಯಲಾಗಿತ್ತು. ಹೀಗಾಗಿ ಇಬ್ಬರೂ ಬೈಕ್ ಮೇಲೆ ಶಾಲೆಗೆ ಹೋಗಿ, ಸಭೆಗೆ ಹಾಜರಾಗಿ ಮನೆಗೆ ಮರಳುತ್ತಿದ್ದರು. ಈ ವೇಳೆ ವಿಮಾನ ನಿಲ್ದಾಣದ ರಸ್ತೆಯ ಪೊಲೀಸ್ ಕ್ವಾಟರ್ಸ್ ಬಳಿ ಪೊಲೀಸ್ ಜೀಪ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಸವಾರ ಪ್ರಸಾದ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಘಟನಾ ಸ್ಥಳದಲ್ಲಿದ್ದ ಕೆಲವರು ತಕ್ಷಣವೇ ವನಿತಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸ್ ಜೀಪ್ ಜಾಲಕ ವೇಗವಾಗಿ ಬರುತ್ತಿದ್ದ. ಪರಿಣಾಣ ನಿಯಂತ್ರಣ ತಪ್ಪಿ ಪ್ರಸಾದ್ ಶೆಟ್ಟಿ ಅವರ ಬೈಕ್‍ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

    ಪ್ರಸಾದ್ ಶೆಟ್ಟಿ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಆಸ್ಪತ್ರೆಯಿಂದ ಮನೆಗೆ ಹೊರಟವರು ಮಸಣಕ್ಕೆ

    ಆಸ್ಪತ್ರೆಯಿಂದ ಮನೆಗೆ ಹೊರಟವರು ಮಸಣಕ್ಕೆ

    – ಗ್ರಾ.ಪಂ ಸದಸ್ಯ ಸೇರಿ ಇಬ್ಬರು ಬೈಕ್ ಸವಾರರ ದರ್ಮರಣ

    ಮಂಗಳೂರು: ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಸವಾರ ಹಾಗೂ ಸಹಸವಾರ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಬಳಿಯ ಕನ್ಯಾನದಲ್ಲಿ ನಡೆದಿದೆ.

    ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ, ಕನ್ಯಾನ ಗ್ರಾಮ ಪಂಚಾಯತ್ ಸದಸ್ಯ ವಾಲ್ಟರ್ ಡಿಸೋಜಾ (45) ಹಾಗೂ ಕನ್ಯಾನದ ಪಂಜಾಜೆ ನಿವಾಸಿ ವಿಲ್ಸನ್ ಡಿಸೋಜಾ (52) ಮೃತಪಟ್ಟ ದುರ್ದೈವಿಗಳು. ಇವರಿಬ್ಬರೂ ಬುಧವಾರ ಕನ್ಯಾನದ ಸರ್ಕಾರಿ ಆಸ್ಪತ್ರೆಗೆ ತೆರಳಿ, ಬಳಿಕ ಅಲ್ಲಿಂದ ಮನೆಯ ಕಡೆಗೆ ತಮ್ಮ ಬೈಕ್‍ನಲ್ಲಿ ಸಾಗುತ್ತಿದ್ದರು. ಈ ವೇಳೆ ಸವಾರನ ನಿಯಂತ್ರಣ ತಪ್ಪಿ ಬೈಕ್ ರಸ್ತೆಯಲ್ಲೇ ಸ್ಕಿಡ್ ಆಗಿ ಬಿದ್ದಿದ್ದರು.

    ಈ ವೇಳೆ ಇಬ್ಬರ ತಲೆಗೆ ಬಲವಾದ ಹೊಡೆತ ಬಿದ್ದು ರಕ್ತಸ್ರಾವವಾಗಿತ್ತು. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಕ್ರಷರ್ ಲಾರಿ ಹರಿದು ಬೈಕ್ ಸವಾರ ಸಾವು – ಬೆಂಗ್ಳೂರು ಹೈವೇ 2 ಕಿ.ಮೀ ಜಾಮ್

    ಕ್ರಷರ್ ಲಾರಿ ಹರಿದು ಬೈಕ್ ಸವಾರ ಸಾವು – ಬೆಂಗ್ಳೂರು ಹೈವೇ 2 ಕಿ.ಮೀ ಜಾಮ್

    ತುಮಕೂರು: ಕ್ರಷರ್ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ತಾಲೂಕಿನ ಊರ್ಡಿಗೆರೆ ಬಳಿಯ ಕುರುವಲ್ಲು ಬಳಿ ನಡೆದಿದೆ.

    ತಾಲೂಕಿನ ಅರೇಬಿದ್ದನಹಳ್ಳಿ ನಿವಾಸಿ ರವಿಕುಮಾರ್ ಮೃತ ದುರ್ದೈವಿ. ಅಪಘಾತಕ್ಕೆ ಕ್ರಷರ್ ಲಾರಿಗಳ ಅತಿವೇಗವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೇ ಲಾರಿ-ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ. ಪರಿಣಾಮ ಬೆಂಗಳೂರು-ಕೊರಟಗೆರೆ ಹೆದ್ದಾರಿಯಲ್ಲಿ ಸುಮಾರು 3 ಕಿ.ಮೀ ಸಂಚಾರ ಅಸ್ತವ್ಯಸ್ತವಾಗಿತ್ತು. ಕ್ಯಾತ್ಸಂದ್ರ ಪೊಲೀಸ್ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

    ಊರ್ಡಿಗೆರೆ ಹಾಗೂ ಕುರುವಲ್ಲು ಸುತ್ತಮುತ್ತ ಅಕ್ರಮ ಗಣಿಗಾರಿಕೆ ಹೆಚ್ಚಾಗಿದ್ದು ಸಾರ್ವಜನಿಕರ ಪ್ರಾಣಕ್ಕೆ ಸಂಚಕಾರ ತಂದೊಡ್ಡುತ್ತಿದೆ. ಜಿಲ್ಲಾಡಳಿತ ಈ ಭಾಗದ ಕ್ರಷರ್ ಗಳ ಪರವಾನಗಿ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ.