Tag: ಸವಾರ ಸಾವು

  • ಬೈಕ್‌ಗೆ ಕಾರು ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

    ಬೈಕ್‌ಗೆ ಕಾರು ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

    ಯಾದಗಿರಿ: ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

    ಬಳಿಚಕ್ರ ಗ್ರಾಮದ ಸಣ್ಣಸಾಬಯ್ಯ ಮೃತ ವ್ಯಕ್ತಿ. ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ರಾಯಚೂರಿನಿಂದ ಯಾದಗಿರಿ ಕಡೆ ತೆರಳುತ್ತಿದ್ದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಆ ಒಂದು ಸಾಫ್ಟ್‌ವೇರ್ ಒಂದು ತಿಂಗಳು ‘ಇ-ಸ್ವತ್ತು’ಗೆ ಕೈಕೊಡ್ತು!

    POLICE JEEP

    ಘಟನೆ ನಡೆದ ನಂತರ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಸೈದಾಪುರ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಸಂಡೂರು ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಪಟ್ಟು – ಸದನದ ಬಾವಿಗಿಳಿದು ಧರಣಿ

  • 40ಕ್ಕೂ ಹೆಚ್ಚು ಮಕ್ಕಳಿದ್ದ ಶಾಲಾ ಬಸ್ ಪಲ್ಟಿ- ಓರ್ವ ಸಾವು

    40ಕ್ಕೂ ಹೆಚ್ಚು ಮಕ್ಕಳಿದ್ದ ಶಾಲಾ ಬಸ್ ಪಲ್ಟಿ- ಓರ್ವ ಸಾವು

    ಮಂಡ್ಯ: ಬೆಳಗ್ಗೆ 40ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಶಾಲಾ ಬಸ್ ಅಯತಪ್ಪಿ ಹಳ್ಳಕ್ಕೆ ಬಿದ್ದಿದ್ದು, ಎದುರಿನಿಂದ ಬರುತ್ತಿದ್ದ ಸ್ಕೂಟಿ ಸವಾರ ಬಸ್ಸಿಗೆ ಗುದ್ದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಹೊರವಲಯದಲ್ಲಿ ನಡೆದಿದೆ.

    ಮದ್ದೂರು ಆರ್.ಕೆ ವಿದ್ಯಾ ಸಂಸ್ಥೆಯ ಶಾಲಾ ಬಸ್ ಹಳ್ಳಕ್ಕೆ ಬಿದ್ದಿದೆ. ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಈ ವೇಳೆ ಅಯತಪ್ಪಿ ಬಸ್ ಹಳ್ಳಕ್ಕೆ ಬಿದ್ದಿದೆ. ಅಪಘಾತದಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಮದ್ದೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ರವಾನಿಸಲಾಗಿದೆ.

    ಇದೇ ಸಂದರ್ಭದಲ್ಲಿ ಸ್ಕೂಟಿಯಲ್ಲಿ ಬರುತ್ತಿದ್ದ ವ್ಯಕ್ತಿಯೊರ್ವ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಡಿ.ಹೊಸುರು ಗ್ರಾಮದ ಕರಿಯಪ್ಪ ಅವರ ಪುತ್ರ ಮಧು(21) ಮೃತಪಟ್ಟ ದುರ್ದೈವಿ. ಬೆಳಗ್ಗೆ ಮಗುವನ್ನು ಸ್ಕೂಟಿಯಲ್ಲಿ ಶಾಲೆಗೆ ಬಿಟ್ಟು ಬರುತ್ತಿದ್ದ ವೇಳೆ ಈ ಅಪಘಾತವಾಗಿ ಸಾವನ್ನಪ್ಪಿದ್ದಾನೆ.

    ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೆ. ಹೊನ್ನಲಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv