Tag: ಸಹಾಯಕ ಪ್ರಾಧ್ಯಾಪಕರ ಹುದ್ದೆ

  • ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪಿಎಚ್‌ಡಿ ಕಡ್ಡಾಯವಲ್ಲ: ಯುಜಿಸಿ

    ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಪಿಎಚ್‌ಡಿ ಕಡ್ಡಾಯವಲ್ಲ: ಯುಜಿಸಿ

    ನವದೆಹಲಿ: ಸಹಾಯಕ ಪ್ರಾಧ್ಯಾಪಕರ (Assistant Professors Recruitment) ನೇಮಕಾತಿಗೆ ಪಿಹೆಚ್‌.ಡಿ (PhD) ಮಾನದಂಡ ಅಲ್ಲ ಎಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗ (UGC) ತಿಳಿಸಿದೆ.

    ಈ ಹುದ್ದೆ ನೇಮಕಾತಿಗೆ ಪಿಹೆಚ್‌.ಡಿ ಕಡ್ಡಾಯಗೊಳಿಸುವ ತನ್ನ ನಿರ್ಧಾರವನ್ನು ಯುಜಿಸಿ ಹಿಂತೆಗೆದುಕೊಂಡಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇರ ನೇಮಕಾತಿಗೆ ನೆಟ್‌, ಸೆಟ್‌, ಸ್ಲೆಟ್‌ನಂತಹ ಪರೀಕ್ಷೆಗಳು ಕನಿಷ್ಠ ಮಾನದಂಡವಾಗಿರುತ್ತದೆ ಎಂದು ಯುಜಿಸಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತದ ಹೊರಗೆ ಮೊದಲ ಐಐಟಿ ಸ್ಥಾಪನೆ: MEA

    ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿಗೆ ಇನ್ಮುಂದೆ ಪಿಎಚ್‌ಡಿ ಅರ್ಹತೆ ಐಚ್ಛಿಕವಾಗಿರುತ್ತದೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್), ರಾಜ್ಯ ಅರ್ಹತಾ ಪರೀಕ್ಷೆ (ಎಸ್‌ಇಟಿ) ಮತ್ತು ರಾಜ್ಯಮಟ್ಟದ ಅರ್ಹತಾ ಪರೀಕ್ಷೆ (ಎಸ್‌ಎಲ್‌ಇಟಿ)ಯು ಹುದ್ದೆಯ ನೇರ ನೇಮಕಾತಿಗೆ ಕನಿಷ್ಠ ಮಾನದಂಡವಾಗಿರುತ್ತದೆ ಎಂದು ಯುಜಿಸಿ ಅಧ್ಯಕ್ಷ ಎಂ. ಜಗದೇಶ್ ಕುಮಾರ್ ಹೇಳಿದ್ದಾರೆ.

    ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ 2018 ರಲ್ಲಿ ಅರ್ಹತಾ ಮಾನದಂಡಗಳನ್ನು ನಿಗದಿಪಡಿಸಿತ್ತು. ಅಭ್ಯರ್ಥಿಗಳು ತಮ್ಮ ಪಿಹೆಚ್‌.ಡಿ ಪೂರ್ಣಗೊಳಿಸಲು 3 ವರ್ಷಗಳ ಕಾಲಾವಕಾಶ ನೀಡಿತ್ತು. 2021-22ರ ಶೈಕ್ಷಣಿಕ ಅವಧಿಯಿಂದ ನೇಮಕಾತಿಗಾಗಿ ಹೊಸ ಮಾನದಂಡಗಳನ್ನು ಅನ್ವಯಿಸುವಂತೆ ಎಲ್ಲಾ ಕಾಲೇಜು ಮತ್ತು ವಿವಿಗಳಿಗೆ ಸೂಚನೆ ನೀಡಿತ್ತು. ಇದನ್ನೂ ಓದಿ: ಆದಿವಾಸಿ ವ್ಯಕ್ತಿ ಮೇಲೆ ಮೂತ್ರ ವಿಸರ್ಜನೆ ಪ್ರಕರಣ – ಸಂತ್ರಸ್ತನ ಕಾಲು ತೊಳೆದು ಗೌರವಿಸಿದ ಮಧ್ಯಪ್ರದೇಶ ಸಿಎಂ

    ಪಿಹೆಚ್‌.ಡಿ ಕಡ್ಡಾಯ ಮಾನದಂಡ ಜಾರಿಗೊಳಿಸುವುದನ್ನು ಯುಜಿಸಿ 2021ರ ಜುಲೈನಿಂದ 2023ರ ಜುಲೈವರೆಗೆ ವಿಸ್ತರಿಸಿತು. ಕೋವಿಡ್‌ ಸಂದರ್ಭದಲ್ಲಿ ಸಂಶೋಧನಾ ವಿದ್ಯಾರ್ಥಿಗಳು ಪಿಹೆಚ್‌.ಡಿ ಪೂರ್ಣಗೊಳಿಸುವುದು ಕಷ್ಟವಾಗಿದ್ದರಿಂದ 2021ರಲ್ಲಿ ಯುಜಿಸಿ ಈ ನಿರ್ಧಾರ ತೆಗೆದುಕೊಂಡಿತ್ತು.

    ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿಹೆಚ್‌.ಡಿ ಕಡ್ಡಾಯಗೊಳಿಸುವುದು ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಅನುಕೂಲಕರವಲ್ಲ ಎಂದು 2021 ರಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದರು. ಇದನ್ನೂ ಓದಿ: ದೆಹಲಿಗೆ ಮಾನ್ಸೂನ್ ಎಂಟ್ರಿ- ರಾಷ್ಟ್ರ ರಾಜಧಾನಿ ಕೂಲ್ ಕೂಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ಡ್ರೆಸ್ ಕೋಡ್ ಕಡ್ಡಾಯ!

    ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28ರಿಂದ hಣಣಠಿ://ಞeಚಿ.ಞಚಿಡಿ.ಟಿiಛಿ.iಟಿ ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. ಅಲ್ಲದೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗಧಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ.

    BIGG BREAKING NEWS: '1,242 ಸಹಾಯಕ ಪ್ರಾಧ್ಯಾಪಕರ ಹುದ್ದೆ'ಯ 'ಸ್ಪರ್ಧಾತ್ಮಕ ಪರೀಕ್ಷೆ'ಗೆ 'ಡ್ರೆಸ್ ಕೋಡ್' ನಿಗದಿ: ಈ ನಿಯಮಗಳು ಪಾಲನೆ ಕಡ್ಡಾಯ | Assistant Professor Recruitment - Kannada News ...

    ಪರೀಕ್ಷೆಯು ಮಾರ್ಚ್ 12 ರಿಂದ 16ರವರೆಗೆ ನಡೆಯಲಿದೆ. ಈ ಬಗ್ಗೆ ಶನಿವಾರ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇತ್ತೀಚಿನ 2 ಭಾವಚಿತ್ರ, ಪ್ರವೇಶಪತ್ರ, ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ತರಬೇಕು ಎಂದಿದ್ದಾರೆ. ಆದರೆ ಪರೀಕ್ಷಾ ಕೊಠಡಿಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು(ಮೊಬೈಲ್, ಪೆನ್ ಡ್ರೈವ್, ಇಯರ್ ಫೆÇೀನ್, ಮೈಕ್ರೋಫೆÇೀನ್, ಬ್ಲೂಟೂತ್, ಕೈ ಗಡಿಯಾರ), ಆಹಾರ ಪದಾರ್ಥಗಳು, ಸ್ಟೇಷನರಿ ವಸ್ತುಗಳು(ಪೆನ್ಸಿಲ್, ಕಾಗದ, ಎರೇಸರ್, ಇಂಚುಪಟ್ಟಿ, ಜಾಮಿಟ್ರಿ ಪೆಟ್ಟಿಗೆ, ಕ್ಯಾಲ್ಕುಲೇಟರ್, ಲಾಗ್ ಟೇಬಲ್) ಮತ್ತು ವೈಯಕ್ತಿಕ ವಸ್ತುಗಳನ್ನು (ವ್ಯಾಲೆಟ್, ಅಲಂಕಾರಿಕ ಕನ್ನಡಕ, ಬೆಲ್ಟ್, ಟೋಪಿ, ಕ್ಯಾಮರಾ, ಆಭರಣಗಳು) ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಎಸಿ ರೂಮ್‍ನಲ್ಲಿ ಕುಳಿತು ಬೇರೆಯವರಿಗೆ ತೊಂದರೆ ಕೊಡುವ ಕೌರವರ ಪಟ್ಟಿ ಸಿದ್ಧಪಡಿಸಿ: ರಾಗಾ ಕಿಡಿ

    ನಿಗಧಿತ ವಸ್ತ್ರ ಸಂಹಿತೆ ಕಡ್ಡಾಯ!
    ಪರೀಕ್ಷೆ ಬರೆಯಲಿರುವ ಪುರುಷ ಅಭ್ಯರ್ಥಿಗಳಿಗೆ ಕೋವಿಡ್ ಮಾರ್ಗದರ್ಶಿ ಸೂತ್ರಗಳ ಹಿನ್ನೆಲೆಯಲ್ಲಿ ಅರೆಪಾರದರ್ಶಕ ಸರ್ಜಿಕಲ್ ಮಾಸ್ಕ್(ಎನ್-95 ಮತ್ತು ಇತರ ಬಗೆಯ ಮಾಸ್ಕ್ ನಿಷಿದ್ಧ) ಅರೆದೋಳಿನ ಅಂಗಿ ಮತ್ತು ಸಾದಾ ಪ್ಯಾಂಟ್ ಹಾಗೂ ಚಪ್ಪಲಿಗಳನ್ನು ಕಡ್ಡಾಯಗೊಳಿಸಲಾಗಿದೆ. ಹಾಗೆಯೇ, ಮಹಿಳಾ ಅಭ್ಯರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಅರೆದೋಳಿನ ಉಡುಪುಗಳನ್ನು ಸೂಚಿಸಲಾಗಿದೆ.

    ಪುರುಷರಾಗಲಿ, ಮಹಿಳೆಯರಾಗಲಿ ತುಂಬುದೋಳಿನ ಉಡುಪು, ಶೂ, ಆಭರಣ(ಪದಕ, ಮೂಗುಬೊಟ್ಟು, ಕಿವಿಯೋಲೆ, ನೆಕ್ಲೇಸ್, ಬ್ರೇಸ್ಲೆಟ್) ಮತ್ತು ಅಲಂಕಾರಿಕ ಉಡುಪುಗಳನ್ನು ಧರಿಸಿಕೊಂಡು ಬರುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಬ್ರ್ಯಾಂಡ್ ನ ಹೆಸರಿಲ್ಲದ ಸಾದಾ ಬಾಟಲಿಯಲ್ಲಿ ಕುಡಿಯುವ ನೀರನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಬರಲು ಅವಕಾಶ ಕೊಡಲಾಗಿದೆ ಎಂದು ಪ್ರಾಧಿಕಾರವು ಮಾಹಿತಿ ನೀಡಿದೆ. ಇದನ್ನೂ ಓದಿ:  ಉಕ್ರೇನ್‍ನಿಂದ ತಾಯ್ನಾಡಿಗೆ ಬಂದ್ರು ಭಾರತೀಯರು – ಮುಂಬೈನಲ್ಲಿ ವಿಮಾನ ಲ್ಯಾಂಡಿಂಗ್