ಮುಂಬೈ: ಸಾಂಗ್ಲಿ (Sangli) ಜಿಲ್ಲೆಯ ಇಸ್ಲಾಮ್‌ಪುರವನ್ನು (Islampur) ಈಶ್ವರಪುರ (Ishwarpur) ಎಂದು ಮರುನಾಮಕರಣಕ್ಕೆ ಮಹಾರಾಷ್ಟ್ರ ಸರ್ಕಾರ (Maharashtra Govt) ನಿರ್ಧರಿಸಿದೆ.
ಮಳೆಗಾಲ ಅಧಿವೇಶನ ಸಂಬಂಧ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಂಭಾಜಿ ಭಿಡೆ ನೇತೃತ್ವದ ಹಿಂದುತ್ವ ಸಂಘಟನೆಯಾದ ಶಿವ ಪ್ರತಿಷ್ಠಾನವು ಇಸ್ಲಾಂಪುರದ ಹೆಸರನ್ನು ಬದಲಾಯಿಸಬೇಕೆಂದು ಒತ್ತಾಯಿಸಿ ಸಾಂಗ್ಲಿ ಜಿಲ್ಲಾಧಿಕಾರಿಗೆ ಜ್ಞಾಪಕ ಪತ್ರವೊಂದನ್ನು ಕಳುಹಿಸಿದ್ದರು. ಇದರ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ.ಇದನ್ನೂ ಓದಿ: ಮೋದಿ ವರ್ಚಸ್ಸು ಕಡಿಮೆಯಾಗಿರೋದಕ್ಕೆ ಬಿಜೆಪಿ ಫ್ರೀ ಗ್ಯಾರಂಟಿಗಳನ್ನ ಘೋಷಿಸ್ತಿದೆ – ಹೆಚ್.ಎಂ.ರೇವಣ್ಣ
ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ವಿಧಾನಸಭೆಯಲ್ಲಿ ಮಾತನಾಡಿ, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸದ್ಯ ರಾಜ್ಯ ಸರ್ಕಾರ ತೆಗೆದುಕೊಂಡ ಈ ನಿರ್ಧಾರದ ಅನುಮೋದನೆಗಾಗಿ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಇಸ್ಲಾಂಪುರದಿಂದ ಬಂದ ಶಿವಸೇನಾ ನಾಯಕರೊಬ್ಬರು ಮಾತನಾಡಿ, ಹೆಸರು ಬದಲಾವಣೆಯ ಈ ಬೇಡಿಕೆ 1986ರಿಂದಲೂ ಬಾಕಿ ಇದೆ. ಸಂಭಾಜಿ ಭಿಡೆ ನೇತೃತ್ವದಲ್ಲಿರುವ ಶಿವ ಪ್ರತಿಷ್ಠಾನದ ಬೆಂಬಲಿಗರು ತಮ್ಮ ಬೇಡಿಕೆ ಈಡೇರುವವರೆಗೂ ಸುಮ್ಮನಾಗುವುದಿಲ್ಲ ಎಂದರು.ಇದನ್ನೂ ಓದಿ:ಬೀಚ್‌ನಲ್ಲಿ ಡೀಪ್ ಕಿಸ್ – ಪತಿ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಿಯಾಂಕಾ
ಮುಂಬೈ: ಸಾಂಗ್ಲಿಯಲ್ಲಿ (Sangli) ರುತುಜಾ ರಾಜ್ಗೆ ಆತ್ಮಹತ್ಯೆ ಪ್ರಕರಣವು ಮಹಾರಾಷ್ಟ್ರದಾದ್ಯಂತ ತೀವ್ರ ರಾಜಕೀಯ ಮತ್ತು ಸಾಮಾಜಿಕ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮತಾಂತರ ಮಾಡುವವರನ್ನು ಕೊಲ್ಲುವವರಿಗೆ 11 ಲಕ್ಷ ಬಹುಮಾನ ನೀಡುತ್ತೇನೆ ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ಗೋಪಿಚಂದ್ ಪಡಲ್ಕರ್ (GopiChandh Padalkar) ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ರುತುಜಾ ರಾಜ್ಗೆ ಪ್ರಕರಣದಲ್ಲಿ, ಆಕೆಗೆ ಅತ್ತೆ-ಮಾವ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಒತ್ತಡ ಹೇರಿ, ಕಿರುಕುಳ ನೀಡುತ್ತಿದ್ದರು ಎಂಬ ಆರೋಪಗಳಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಗೋಪಿಚಂದ್ ಪಡಲ್ಕರ್ ಮತ್ತು ಮಾಜಿ ಶಾಸಕ ನಿತಿನ್ ಶಿಂಧೆ ಅವರು ರಾಜ್ಯದಲ್ಲಿ ಮತಾಂತರ ವಿರೋಧಿ ಕಾನೂನನ್ನು ತಕ್ಷಣ ಜಾರಿಗೆ ತರಬೇಕೆಂದು ಒತ್ತಾಯಿಸಿ ಮೌನ ಪಂಜಿನ ಮೆರವಣಿಗೆಯಲ್ಲಿ ನೇತೃತ್ವ ವಹಿಸಿದ್ದರು.
ಈ ವೇಳೆ ಮಾತನಾಡಿದ ಅವರು, ಮತಾಂತರ ಮಾಡುವವರನ್ನು ಕೊಲ್ಲುವವರಿಗೆ 11 ಲಕ್ಷ ಬಹುಮಾನ ನೀಡುತ್ತೇನೆ ಎಂಬ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.
ಏನಿದು ಪ್ರಕರಣ?
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ರುತುಜಾ ರಾಜ್ಗೆ (28) ಜೂ. 6ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ರುತುಜಾ ಅವರ ಪತಿ ಸುಕುಮಾರ್ ರಾಜ್ಗೆ ಕ್ರಿಶ್ಚಿಯನ್ ಧರ್ಮದವರಾಗಿದ್ದರು. ಆದ್ದರಿಂದ ರುತುಜಾ ಅವರಿಗೆ ಅತ್ತೆ-ಮಾವ, ವರದಕ್ಷಿಣೆ ಹಾಗೂ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಪೀಡಿಸುತ್ತಿದ್ದುದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂಬ ಆರೋಪಗಳು ಕೇಳಿಬರುತ್ತಿವೆ.
ಮುಂಬೈ: ಮೇಘಾಲಯದಲ್ಲಿ ರಾಜಾ ರಘುವಂಶಿ ಹನಿಮೂನ್ ಮರ್ಡರ್ ಕೇಸ್ ಮಾಸುವ ಮುನ್ನವೇ ಮತ್ತೊಂದು ಅಂತಹದೇ ಘಟನೆ ಮಹಾರಾಷ್ಟ್ರದ (Maharashtra) ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಮದುವೆಯಾದ ಮೂರೇ ವಾರಕ್ಕೆ ಪತ್ನಿಯೇ ಪತಿಯನ್ನು ಕೊಡಲಿಯಿಂದ ಹೊಡೆದು ಹತ್ಯೆಗೈದಿದ್ದಾಳೆ.
ಮೇ23ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ (Sangli) ರಾಧಿಕಾ ಹಾಗೂ ಅನಿಲ್ ಲೋಖಂಡೆ ವಿವಾಹವಾಗಿತ್ತು. ಮಂಗಳವಾರ (ಜೂ.10) ರಾತ್ರಿ, ಇಬ್ಬರೂ ತೀವ್ರವಾಗಿ ಜಗಳವಾಡಿದ್ದರು. ಬಳಿಕ ಮಧ್ಯರಾತ್ರಿ ವೇಳೆಗೆ ಅನಿಲ್ ಲೋಖಂಡೆ ನಿದ್ರೆಗೆ ಜಾರಿದ್ದರು. ಈ ವೇಳೆ ಕೋಪದಲ್ಲಿ ರಾಧಿಕಾ ಲೋಖಂಡೆ ಕೊಡಲಿಯಿಂದ ಪತಿ ಅನಿಲ್ ತಲೆಗೆ ಹೊಡೆದು ಕೊಂದಿದ್ದಳು. ಸ್ಪಲ್ಪ ಸಮಯದ ಬಳಿಕ ರಾಧಿಕಾ ತನ್ನ ಸೋದರಸಂಬಂಧಿಗೆ ಕರೆ ಮಾಡಿ ಕೊಲೆಯ ಬಗ್ಗೆ ತಿಳಿಸಿದ್ದಳು ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ
ಪೊಲೀಸರು ಬುಧವಾರ ಆರೋಪಿ ರಾಧಿಕಾಳನ್ನು ಬಂಧಿಸಿದ್ದಾರೆ. ಬಿಎನ್‌ಎಸ್ ಸೆಕ್ಷನ್ 103 (1) ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.
ಮುಂಬೈ: ಹೆರಿಗೆಗೂ ಮುನ್ನ ಒತ್ತಾಯಪೂರ್ವಕವಾಗಿ ಲಿಂಗಪರೀಕ್ಷೆಗೆ ಒಳಗಾದ 32 ವರ್ಷದ ಮಹಿಳೆಗೆ ಗರ್ಭಪಾತವಾಗಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ (Maharastra) ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ಸಾಂಗ್ಲಿ ನಗರದಲ್ಲಿ ಕಾರಿನಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದರು. ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕಾರಿನಿಂದ ಮೃತದೇಹವನ್ನು ವಶಕ್ಕೆ ಪಡೆದುಕೊಂಡರು. ಬಳಿಕ ತನಿಖೆ ನಡೆಸಿದ ವೇಳೆ ವಿಚಾರ ಬಯಲಿಗೆ ಬಂದಿದೆ. ಘಟನೆ ಸಂಬಂಧ ಮೃತ ಮಹಿಳೆಯ ಕುಟುಂಬದ ಮೂವರು ಸದಸ್ಯರನ್ನು ವಶಕ್ಕೆ ಪಡೆದು ಕರ್ನಾಟಕ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೀರಜ್ ತಾಲೂಕಿನ ನಿವಾಸಿಯಾಗಿರುವ ಮಹಿಳೆಗೆ ಇಬ್ಬರು ಮಕ್ಕಳಿದ್ದು, ಪತಿ ಸೇನೆಯಲ್ಲಿದ್ದಾರೆ. ಗರ್ಭಿಣಿಯನ್ನು ನೆರೆಯ ಕರ್ನಾಟಕದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆಕೆಯ ಕುಟುಂಬಸ್ಥರು ಪ್ರಸವಪೂರ್ವ ಲಿಂಗ ಪರೀಕ್ಷೆಗೆ ಒಳಗಾಗುವಂತೆ ಒತ್ತಾಯಿಸಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪೆನ್‍ಡ್ರೈವ್ ಪ್ರಕರಣದಿಂದ ಸೈಡ್ ಎಫೆಕ್ಟ್- ಫೋಟೋಗ್ರಾಫರ್‌ಗಳಿಗೆ ತಟ್ಟಿದ ಬಿಸಿ!
ಅಧಿಕಾರಿಗಳ ಪ್ರಕಾರ, ಪರೀಕ್ಷೆಯ ನಂತರ ಮಹಿಳೆಗೆ ಗರ್ಭಪಾತವಾಗಿದೆ. ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ. ಆದರೆ ಮಹಿಳೆ ಮಹಾರಾಷ್ಟ್ರದ ನಿವಾಸಿ ಎಂದು ಉಲ್ಲೇಖಿಸಿ ಮರಣ ಪ್ರಮಾಣಪತ್ರವನ್ನು ನೀಡಲು ಆಸ್ಪತ್ರೆ ನಿರಾಕರಿಸಿತು.
ನಾವು ಘಟನೆಯ ಬಗ್ಗೆ ಗಮನಹರಿಸಿದ್ದೇವೆ, ಆದರೆ ಪ್ರಕರಣವನ್ನು ದಾಖಲಿಸಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ನಾವು ಕರ್ನಾಟಕ ಪೊಲೀಸರಿಗೆ ತಿಳಿಸಿದ್ದೇವೆ. ಏಕೆಂದರೆ ಅವರ ವ್ಯಾಪ್ತಿಯಲ್ಲಿ ಸಾವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು.
ಮುಂಬೈ: ಅಧಿಕಾರದಲ್ಲಿರುವವರು ಸಮಾಜದಲ್ಲಿ ಕಹಿಯನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ದೇಶವನ್ನು ಮುನ್ನಡೆಸುವುದು ಮತ್ತು ಸಾಮರಸ್ಯವನ್ನು ಕಾಪಾಡುವುದು ದೊಡ್ಡ ಸವಾಲಾಗಿದೆ ಎಂದು ಬಿಜೆಪಿ ವಿರುದ್ಧ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ.
ಇಲ್ಲಿಂದ ಸುಮಾರು 230 ಕಿಮೀ ದೂರದಲ್ಲಿರುವ ಸಾಂಗ್ಲಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾ ಪರಿಷತ್ ಅಧ್ಯಕ್ಷರಾಗಿ ಶಿವಾಜಿರಾವ್ ಯಶಸ್ವಿಯಾಗಿದ್ದರು. ಅವರನ್ನು ಮರಳಿ ಎನ್‍ಸಿಪಿಗೆ ಸ್ವಾಗತಿಸುತ್ತೇನೆ. ಅವರ ಪರಿಣತಿಯನ್ನು ಮಹಾರಾಷ್ಟ್ರದ ಅಭ್ಯುದಯಕ್ಕೆ ಬಳಸಿಕೊಳ್ಳಲು ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ.
ಮಹಾರಾಷ್ಟ್ರವು ಅಭಿವೃದ್ಧಿಗಾಗಿ ಅಥವಾ ಜನರನ್ನು ಒಟ್ಟುಗೂಡಿಸಲು ಕೆಲಸ ಮಾಡುವ ನಾಯಕತ್ವವನ್ನು ಹೊಂದಿತ್ತು. ಆದರೆ ಇಂದು ದೇಶದಲ್ಲಿ ಧರ್ಮದ ಆಧಾರದ ಮೇಲೆ ಜನರನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ. ಮಹಾತ್ಮ ಗಾಂಧಿ, ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಮತ್ತು ದೇಶವನ್ನು ಕಟ್ಟಲು ಶ್ರಮಿಸಿದರು. ಆದರೆ ಪ್ರಸ್ತುತ ದೇಶದ ನಾಯಕತ್ವವು ಈ ಜನರನ್ನು ದೂಷಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಇಸ್ಲಾಂ ಸ್ಲೀಪರ್ ಸೆಲ್ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ
ಇತ್ತೀಚೆಗಷ್ಟೇ ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲಿ ಕೆಲ ಸಂಘಟನೆಗಳು ಫತ್ವಾ ಹೊರಡಿಸಿದ್ದು, ಅಲ್ಪಸಂಖ್ಯಾತ ಸಮುದಾಯದವರು ನಡೆಸುತ್ತಿರುವ ಅಂಗಡಿಗಳಲ್ಲಿ ಏನನ್ನೂ ಖರೀದಿಸದಂತೆ ಜನರಿಗೆ ಸೂಚಿಸಲಾಗಿತ್ತು. ಈ ರೀತಿಯ ಕಹಿಯ ಅಂಶಗಳನ್ನು ಹರಡಲಾಗುತ್ತಿದೆ. ಈ ರೀತಿ ಪಕ್ಷ ರಾಜ್ಯಗಳಲ್ಲಿ ಅಧಿಕಾರದ್ದರೆ, ಈ ದೇಶವು ಹೇಗೆ ಮುಂದುವರಿಯುತ್ತದೆ ಮತ್ತು ನಾವು ಹೇಗೆ ಸಾಮರಸ್ಯವನ್ನು ಕಾಪಾಡಿಕೊಳ್ಳುತ್ತೇವೆ ಎಂಬುದು ಒಂದು ಪ್ರಶ್ನೆಯಾಗಿದೆ ಅಸಮಾಧಾನ ಹೊರಹಾಕಿದ್ದಾರೆ.
ಬೆಳಗಾವಿ: ಕರ್ನಾಟಕದ ಗಡಿಯಲ್ಲಿರುವ ಮಹಾರಾಷ್ಟ್ರದ ಎರಡು ಜಿಲ್ಲೆಗಳಲ್ಲಿ ಬಿಜೆಪಿ ಮಕಾಡೆ ಮಲಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಪ್ರಚಾರ ನಡೆಸಿದ್ದ ಸಾಂಗ್ಲಿ ಹಾಗೂ ಕೋಲ್ಹಾಪುರ ಜಿಲ್ಲೆಗಳಲ್ಲಿ ಬಿಜೆಪಿಗೆ ಮತದಾರರು ಶಾಕ್ ನೀಡಿದ್ದಾರೆ.
ದಕ್ಷಿಣ ಮಹಾರಾಷ್ಟ್ರದ ಕೋಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಯ ಜನ ಈ ಬಾರಿ ಪ್ರವಾಹಕ್ಕೆ ತುತ್ತಾಗಿದ್ದರು. ಇನ್ನು ಕರ್ನಾಟಕದ ಗಡಿ ಹೊಂದಿಕೊಂಡಿದ್ದರಿಂದ ಕನ್ನಡದ ಜನತೆ ಸಹ ಅಲ್ಲಿ ವಾಸವಾಗಿದ್ದಾರೆ. ಈ ಹಿನ್ನೆಲೆ ಬಿಜೆಪಿಯಿಂದ ಯಡಿಯೂರಪ್ಪ, ಲಕ್ಷ್ಮಣ ಸವದಿ ನಾಯಕತ್ವದಲ್ಲಿ ಚುನಾವಣೆ ಪ್ರಚಾರ ನಡೆಸಲಾಗಿತ್ತು. ಇತ್ತ ಕಾಂಗ್ರೆಸ್ ನಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಚುನಾವಣೆ ಪ್ರಚಾರ ನಡೆದಿತ್ತು. ಇದೀಗ ಎರಡು ಜಿಲ್ಲೆಗಳ 18 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಹೊರ ಬಿದ್ದಿದೆ. 18ರಲ್ಲಿ ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಜನ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ.
ಸಾಂಗ್ಲಿ ಜಿಲ್ಲೆ: ಜಿಲ್ಲೆ ಎಂಟು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, 3 ಎನ್‍ಸಿಪಿ, 2 ಬಿಜೆಪಿ, 2 ಕಾಂಗ್ರೆಸ್ ಮತ್ತು ಒಂದರಲ್ಲಿ ಶಿವಸೇನೆ ಗೆಲುವು ಕಂಡಿದೆ. ಸಾಂಗ್ಲಿ ಮತ್ತು ಮಿರಜ್ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸುಧೀರ್ ಗಾಡಗಲಿ, ಸುರೇಶ್ ಖಾಡೆ ಗೆಲುವು ದಾಖಲಿಸಿದ್ದಾರೆ.