Tag: ಸಾಕುಪ್ರಾಣಿ

  • ರಾಜ್ಯದ ಅರಣ್ಯಗಳಲ್ಲಿ ಸಾಕುಪ್ರಾಣಿ, ದನಕರುಗಳನ್ನ ಮೇಯಿಸುವುದು ನಿಷೇಧಿಸಲು ಈಶ್ವರ ಖಂಡ್ರೆ ಆದೇಶ

    ರಾಜ್ಯದ ಅರಣ್ಯಗಳಲ್ಲಿ ಸಾಕುಪ್ರಾಣಿ, ದನಕರುಗಳನ್ನ ಮೇಯಿಸುವುದು ನಿಷೇಧಿಸಲು ಈಶ್ವರ ಖಂಡ್ರೆ ಆದೇಶ

    ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶದೊಳಗೆ (Forest) ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ.

    ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೇ ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕನ್ವರ್ ಯಾತ್ರೆಯ ಮಾರ್ಗದಲ್ಲಿ ಹೋಟೆಲ್‌ಗಳಿಗೆ ಕ್ಯೂಆರ್ ಕೋಡ್ ಕಡ್ಡಾಯ – ಆದೇಶ ಎತ್ತಿ ಹಿಡಿದ ಸುಪ್ರೀಂ

    ದೊಡ್ಡ ಸಂಖ್ಯೆಯ ಸಾಕುಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ. ಅರಣ್ಯ ಸಂವರ್ಧನೆಯಾಗದಿದ್ದರೆ ಅದು ಆ ಅರಣ್ಯದಲ್ಲಿ ಹರಿಯುವ ನದಿಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗುತ್ತದೆ. ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶ ಇರುವುದಿಲ್ಲ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು, ಪರಿಸರವಾದಿಗಳು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಕಾನೂನು ರೀತಿಯ ಕ್ರಮವಹಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಿಂದ ಮೂರು ಅಪಾಚೆ ಹೆಲಿಕಾಪ್ಟರ್‌ಗಳ ಮೊದಲ ಬ್ಯಾಚ್ ಆಗಮನ

    ಕಾಡಿನಲ್ಲಿರುವ ವನ್ಯಜೀವಿಗಳು ಮೇಯಲು ಹೋದ ದನಕರುಗಳನ್ನು ಕೊಂದಾಗ, ಆಕ್ರೋಶಗೊಂಡು ಕೆಲವರು ಮೃತ ಜಾನುವಾರುಗಳಿಗೆ ವಿಷಹಾಕುವ ಕಾರಣ ವನ್ಯಜೀವಿಗಳು ಸಾವಿಗೀಡಾಗುತ್ತವೆ. ಇದಕ್ಕೆ ಇತ್ತೀಚೆಗೆ ಹೂಗ್ಯಂ ವಲಯದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಸಾವಿಗೀಡಾಗಿರುವುದೇ ಸಾಕ್ಷಿಯಾಗಿದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯಪಟ್ಟಿರುತ್ತಾರೆ ಎಂದು ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅಣ್ಣ ಬುದ್ಧಿ ಹೇಳಿದ್ದಕ್ಕೆ ಮಗುವನ್ನು ಬರ್ಬರವಾಗಿ ಕೊಂದ ಚಿಕ್ಕಪ್ಪ

    ಮಿಗಿಲಾಗಿ ಮದ್ರಾಸ್ ಹೈಕೋರ್ಟ್ ತಮಿಳುನಾಡಿನ ಅರಣ್ಯದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದರ ವಿರುದ್ಧ ನೀಡಿದ ತೀರ್ಪಿನ ಬಳಿಕ, ನೆರೆಯ ರಾಜ್ಯದಿಂದಲೂ ನಮ್ಮ ರಾಜ್ಯಕ್ಕೆ ದನಕರುಗಳನ್ನು ತಂದು ಕಾಡಿನಲ್ಲಿ ಮೇಯಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯದ ಅರಣ್ಯಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಲು ಬಿಡುವುದನ್ನು ನಿರ್ಬಂಧಿಸಲು ಮತ್ತು ನಿಷೇಧಿಸಲು ನಿಯಮಾನುಸಾರ ಕ್ರಮವಹಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ಶೀಘ್ರವೇ ಧರ್ಮಸ್ಥಳ ಪ್ರಕರಣಗಳ ತನಿಖೆ ಆರಂಭ; ಎಸ್‌ಐಟಿ ತಂಡದಿಂದ ಯಾರೂ ಹೊರಗುಳಿಯಲ್ಲ: ಪರಮೇಶ್ವರ್

  • ಸಾಕು ಪ್ರಾಣಿಗಳಿಂದ ತೊಂದರೆ ಉಂಟಾದ್ರೆ ಮಾಲೀಕರಿಗೆ ಬೀಳುತ್ತೆ 10,000 ರೂ. ದಂಡ – ಎಲ್ಲಿ ಗೊತ್ತಾ?

    ಸಾಕು ಪ್ರಾಣಿಗಳಿಂದ ತೊಂದರೆ ಉಂಟಾದ್ರೆ ಮಾಲೀಕರಿಗೆ ಬೀಳುತ್ತೆ 10,000 ರೂ. ದಂಡ – ಎಲ್ಲಿ ಗೊತ್ತಾ?

    ಲಕ್ನೋ: ಶ್ವಾನಗಳ ಹಾವಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ನೋಯ್ಡಾ (Noida) ಪ್ರಾಧಿಕಾರವು ಸಾಕುಪ್ರಾಣಿಗಳಿಗೆ (Pet Animals) ಸಂಬಂಧಿಸಿದಂತೆ ಹೊಸ ನೀತಿಯನ್ನು ರೂಪಿಸಿದೆ. ಇನ್ಮುಂದೆ ಸಾಕುಪ್ರಾಣಿಗಳಿಂದ ತೊಂದರೆ ಉಂಟಾದರೆ, ಮಾಲೀಕರು 10,000 ರೂ. ದಂಡ ಪಾವತಿಸಬೇಕಾಗುತ್ತದೆ.

    ಪ್ರಾಧಿಕಾರವು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ಸಾಕುಪ್ರಾಣಿಗಳ ಮಾಲೀಕರು ತಮ್ಮ ಶ್ವಾನ (Dog) ಅಥವಾ ಬೆಕ್ಕುಗಳನ್ನು ಮುಂದಿನ ವರ್ಷ ಜನವರಿ 31 ರೊಳಗೆ ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ದಂಡವನ್ನು ಪಾವತಿಸಬೇಕಾಗುತ್ತದೆ. ಇದಲ್ಲದೆ ಸಾಕು ನಾಯಿ ಅಥವಾ ಬೆಕ್ಕುಗಳಿಂದ (Cat) ಯಾವುದೇ ಅನಾಹುತ ಉಂಟಾದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಇದನ್ನೂ ಓದಿ: ಗಾಂಧಿ ಕುಟುಂಬಕ್ಕೆ ಕ್ಷಮೆ ಕೋರುವೆ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ

    ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ (AWBI) ಮಾರ್ಗಸೂಚಿಗಳಿಗೆ ಅನುಗುಣವಾಗಿ ನೋಯ್ಡಾ ಪ್ರಾಧಿಕಾರದ 207 ನೇ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಗರದಲ್ಲಿ ಶ್ವಾನಗಳ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ.

    ನೋಯ್ಡಾ ಪ್ರಾಧಿಕಾರದ ಹೊಸ ನೀತಿಯ ಪ್ರಕಾರ, ಸಾಕು ನಾಯಿಗಳು ಅಥವಾ ಬೆಕ್ಕುಗಳ ನೋಂದಣಿಯು ಜನವರಿ 31, 2023 ರವರೆಗೆ ಕಡ್ಡಾಯವಾಗಿದೆ. ನೋಂದಣಿಯಾಗದಿದ್ದಲ್ಲಿ ದಂಡವನ್ನು ವಿಧಿಸಲಾಗುತ್ತದೆ ಎಂದು ಎಚ್ಚರಿಸಿದೆ. ಅಷ್ಟೇ ಅಲ್ಲದೆ ಸಾಕು ನಾಯಿಗಳಿಗೆ ಕ್ರಿಮಿನಾಶಕ ಅಥವಾ ಆ್ಯಂಟಿರೇಬಿಸ್ ಲಸಿಕೆಯನ್ನು ಕಡ್ಡಾಯಗೊಳಿಸಲಾಗಿದ್ದು, ಉಲ್ಲಂಘಿಸಿದರೆ ಪ್ರತಿ ತಿಂಗಳು 2,000 ರೂಪಾಯಿ ದಂಡ ವಿಧಿಸಲು ಅವಕಾಶವಿದೆ. ಇದನ್ನೂ ಓದಿ: ದ್ರೌಪದಿ ಮುರ್ಮು ನೋಡಲು ಹೇಗಿದ್ದಾರೆ ಗೊತ್ತಲ್ಲ- ವಿವಾದವಾಗ್ತಿದ್ದಂತೆ ಟಿಎಂಸಿ ಸಚಿವ ಕ್ಷಮೆ

    ಸಾರ್ವಜನಿಕ ಸ್ಥಳದಲ್ಲಿ ಸಾಕು ಪ್ರಾಣಿಯಿಂದ ಮಲೀನವಾದರೆ, ಅದನ್ನು ಸ್ವಚ್ಛಗೊಳಿಸುವ ಜವಾಬ್ದಾರಿ ಪ್ರಾಣಿಗಳ ಮಾಲೀಕರ ಮೇಲಿದೆ. ಒಂದು ವೇಳೆ ಸಾಕುಪ್ರಾಣಿ ದಾಳಿಯಿಂದ ವ್ಯಕ್ತಿ ಗಾಯಗೊಂಡರೆ, ಅವರ ಚಿಕಿತ್ಸೆಯ ವೆಚ್ಚವನ್ನು ಪ್ರಾಣಿ ಮಾಲೀಕರೇ ಭರಿಸಬೇಕಾಗುತ್ತದೆ ಎಂದು ಪ್ರಾಧಿಕಾರ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಕೋಳಿಗಳೊಂದಿಗೆ ನೃತ್ಯ ಮಾಡಿದ ವ್ಯಕ್ತಿಯ ವೀಡಿಯೋ ವೈರಲ್

    ಕೋಳಿಗಳೊಂದಿಗೆ ನೃತ್ಯ ಮಾಡಿದ ವ್ಯಕ್ತಿಯ ವೀಡಿಯೋ ವೈರಲ್

    ಮೂರು ಕೋಳಿಗಳೊಂದಿಗೆ ವ್ಯಕ್ತಿಯೊಬ್ಬರು ನೃತ್ಯ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಸೋಶಿಯಲ್ ಮೀಡಿಯಾ ಸ್ಕ್ರಾಲ್ ಮಾಡುತ್ತಾ ಹೋಗುವಾಗ ಕಾಣಸಿಗುವ ಕೆಲವೊಂದು ದೃಶ್ಯಗಳು ನಮ್ಮನ್ನು ನಗಿಸಿಬಿಡುತ್ತದೆ. ಅದರಲ್ಲಂತೂ ಪ್ರಾಣಿ, ಪಕ್ಷಿಗಳಿಗೆ ಸಂಬಂಧಿಸಿದ ಕೆಲವೊಂದು ದೃಶ್ಯಗಳು ತಟ್ಟನೆ ನಮ್ಮಲ್ಲಿ ಮುಗುಳ್ನಗೆ ಮೂಡಿಸುತ್ತದೆ. ಇದನ್ನೂ ಓದಿ: ಮೋದಿ ಕನಸಿನ ಯೋಜನೆ ಕಾಶಿ ವಿಶ್ವನಾಥ ಕಾರಿಡಾರ್ ವಿಶೇಷತೆ ಏನು?

    ಸಾಂದರ್ಭಿಕ ಚಿತ್ರ

    ನಾಯಿ, ಆನೆ, ಬೆಕ್ಕು, ದನಗಳು ಸೇರಿದಂತೆ ಕೆಲ ಪ್ರಾಣಿಗಳು ಮಾಲೀಕರು ಹೇಳಿದಂತೆ ವರ್ತಿಸುವ ದೃಶ್ಯಗಳು ಕಾಣಸಿಗುವುದು ಸಾಮಾನ್ಯ. ಆದರೆ ಇಲ್ಲಿ ಕೋಳಿಗಳು ಮಾಲೀಕನ ಮಾತು ಕೇಳುವುದು ಒಂದು ಅಚ್ಚರಿ ಎನಿಸುವಂತಹ ಘಟನೆ. ವೀಡಿಯೋದಲ್ಲಿ ವ್ಯಕ್ತಿಯೊಬ್ಬರು ಮೂರು ಕೋಳಿಗಳೊಂದಿಗೆ ಡ್ಯಾನ್ಸ್ ಮಾಡುವ ಭಂಗಿ ನೋಡಿದರೆ ವಿಸ್ಮಯ ಅನಿಸಿಬಿಡುತ್ತದೆ. ಇದನ್ನೂ ಓದಿ: ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ- ಮೂವರು ಅಸ್ವಸ್ಥ

     

    View this post on Instagram

     

    A post shared by hepgul5 (@hepgul5)

    ವೀಡಿಯೋ ವೈರಲ್ ಆಗುತ್ತಿದ್ದಂತೆ ಇದು ಅನೇಕ ನೆಟ್ಟಿಗರ ಗಮನ ಸೆಳೆದಿದೆ. 14,000ಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದ್ದು, ಕಾಮೆಂಟ್‌ಗಳ ಸುರಿಮಳೆ ಹರಿದು ಬಂದಿದೆ. ಕೆಲವರು ವಿಡಿಯೋ ನೋಡಿ ಅಚ್ಚರಿ, ಖುಷಿ, ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.