Tag: ಸಾತನೂರು

  • ಗೋ ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ – ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು

    ಗೋ ಸಾಗಾಣಿಕೆ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣ – ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು

    ರಾಮನಗರ: ಗೋಸಾಗಣೆ ಆರೋಪದಲ್ಲಿ ಇದ್ರೀಶ್ ಪಾಷಾ ಎಂಬುವರು ಅನುಮಾನಾಸ್ಪದ ರೀತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ (Puneeth Kerehalli) ಸೇರಿ ಐವರು ಆರೋಪಿಗಳಿಗೆ ಹೈಕೋರ್ಟ್ (High Court) ಷರತ್ತುಬದ್ಧ ಜಾಮೀನು (Bail) ಮಂಜೂರು ಮಾಡಿದೆ.

    ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಆರೋಪಿಗಳಾದ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಪವನ್ ಕುಮಾರ್ ಎ.ಎನ್.ಪಿ ಲಿಂಗಪ್ಪ ಎಂಬವರಿಗೆ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶಿಸಿದೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನದಿಂದ ವೈಎಸ್‌ವಿ ದತ್ತ ಸೋಲಿನ ಪ್ರಾಯಶ್ಚಿತ್ತ ಪಾದಯಾತ್ರೆ

    ವಿಚಾರಣೆ ವೇಳೆ ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ ಶ್ಯಾಮ್, ಮರಣೋತ್ತರ ಪರೀಕ್ಷೆಯಲ್ಲಿ ಇದ್ರೀಶ್ ಪಾಷಾ ಅವರ ದೇಹದಲ್ಲಿ ತರಚಿದ ಗಾಯಗಳ ಬಗ್ಗೆ ಮಾತ್ರ ಉಲ್ಲೇಖವಾಗಿದ್ದು, ಗಂಭೀರ ಗಾಯಗಳ ಬಗ್ಗೆ ಏನೂ ಮಾಹಿತಿ ಇಲ್ಲ. ಪ್ರಕರಣವು ಸಾತನೂರು (Sathanur) ಠಾಣೆಯ 100 ಮೀಟರ್ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಹೀಗಿದ್ದಾಗ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಗಲೇಬೇಕಿತ್ತು. ಈಗ ತನಿಖೆ ಪೂರ್ಣಗೊಂಡಿದ್ದು, ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ಪೂರ್ಣಗೊಳಿಸಲಾಗಿದೆ. ತನಿಖೆಯಲ್ಲಿ ಏನೇನು ವಶಪಡಿಸಿಕೊಳ್ಳಬೇಕು ಎಲ್ಲವೂ ಪೂರ್ಣಗೊಂಡಿದೆ. ಇನ್ನು ಆರೋಪ ಪಟ್ಟಿ ಸಲ್ಲಿಕೆಯಾಗಿ ವಿಚಾರಣೆ ನಡೆಯಬೇಕಿದೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಗ್ಯಾರಂಟಿ ಸಿಎಂ ಭಾಗ್ಯ ಕೊಡಿ – ಹೈಕಮಾಂಡ್‌ ಮುಂದೆ ಸಿದ್ದು, ಡಿಕೆಶಿ ವಾದ ಏನು?

    ಮಾರ್ಚ್ 31ರಂದು ಮಂಡ್ಯದಿಂದ (Mandya) ಬೆಂಗಳೂರಿನತ್ತ (Bengaluru) ಆಗಮಿಸುತ್ತಿದ್ದ ಜಾನುವಾರು ಸಾಗಣೆ ವಾಹನವೊಂದನ್ನು ಸಾತನೂರು ಪೊಲೀಸ್ ಠಾಣೆ ಸಮೀಪ ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರು ಅಡ್ಡಗಟ್ಟಿದ್ದರು. ಬಳಿಕ ವಾಹನದಲ್ಲಿ ಇದ್ದವರ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಏಪ್ರಿಲ್ 1ರಂದು ಬೆಳಗ್ಗೆ ಘಟನಾ ಸ್ಥಳದಿಂದ 100 ಮೀಟರ್ ದೂರದಲ್ಲಿ ಇದ್ರೀಶ್ ಪಾಷಾ ಅವರ ಶವ ಪತ್ತೆಯಾಗಿತ್ತು. ಪುನೀತ್ ಮತ್ತು ಸಹಚರರಿಂದ ಹಲ್ಲೆ ನಡೆದಿದೆ ಎಂದು ಪಾಷಾ ಅವರ ಸಹೋದರ ಯೂನುಸ್ ಪಾಷಾ ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಗಳ ವಿರುದ್ಧ ಸಾತನೂರು ಠಾಣೆಯಲ್ಲಿ ಐಪಿಸಿ ಸೆಕ್ಷನ್ 302, 324, 341, 504, 506 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಏಪ್ರಿಲ್ 5ರಂದು ರಾಮನಗರ (Ramanagara) ಪೊಲೀಸರು ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಿದ್ದರು. ಇದನ್ನೂ ಓದಿ: ನಾನು ತಪ್ಪು ಮಾಡಿದ್ರೆ ನನ್ನ ವಂಶ ನಿರ್ವಂಶವಾಗಲಿ – ಮಳವಳ್ಳಿ ಬಿಜೆಪಿ ಪರಾರ್ಜಿತ ಅಭ್ಯರ್ಥಿ

  • ಜಾನುವಾರು ರಕ್ಷಣೆ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣ – ಸಾತನೂರಿಗೆ ಐಜಿಪಿ ಭೇಟಿ

    ಜಾನುವಾರು ರಕ್ಷಣೆ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣ – ಸಾತನೂರಿಗೆ ಐಜಿಪಿ ಭೇಟಿ

    ರಾಮನಗರ: ಕನಕಪುರ (Kanakapura) ತಾಲೂಕಿನ ಸಾತನೂರಿನಲ್ಲಿ (Sathanur) ಗೋವುಗಳ ಸಾಗಣೆ ವೇಳೆ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣದ ತನಿಖೆ ಚುರುಕು ಗೊಂಡಿದೆ. ಈ ಬೆನ್ನಲ್ಲೇ ಸೋಮವಾರ ಸಂಜೆ ಐಜಿಪಿ (IGP) ರವಿಕಾಂತೇಗೌಡ ಸಾತನೂರಿಗೆ ಭೇಟಿ ನೀಡಿ ಘಟನಾ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಜಿಲ್ಲಾ ವರಿಷ್ಠಾಧಿಕಾರಿ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದು, ಸಾರ್ವಜನಿಕರಿಂದಲೂ ಮಾಹಿತಿ ಸಂಗ್ರಹಿಸಿದ್ದಾರೆ.

    ಮಂಡ್ಯ (Mandya) ಮೂಲದ ಇದ್ರೀಷ್ ಪಾಷಾ ಸಾವಿಗೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಕಾರಣ ಎಂದು ಪಾಷಾ ಕುಟುಂಬಸ್ಥರ ದೂರಿನ ಅನ್ವಯ ಎಫ್‌ಐಆರ್ (FIR) ದಾಖಲಾಗಿದ್ದು, ಪುನೀತ್ ಕೆರೆಹಳ್ಳಿ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಂಧಿಸುವಂತೆ ಒತ್ತಾಯಿಸಿ, ಕೂಡಲೇ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅಬಕಾರಿ ಇಲಾಖೆ ಅಧಿಕಾರಿಗಳಿಂದ ಲಕ್ಷಾಂತರ ರೂ. ಮೌಲ್ಯದ ಮದ್ಯ ವಶಕ್ಕೆ 

    ಇತ್ತ ತನಿಖೆ ಚುರುಕುಗೊಳ್ಳುತ್ತಿದ್ದಂತೆಯೇ ಪುನೀತ್ ಕೆರೆಹಳ್ಳಿ ಕೂಡಾ ಪ್ರಕರಣ ಕುರಿತು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿಬಿಟ್ಟಿದ್ದಾರೆ. ಇಡೀ ಪ್ರಕರಣದ ಯಾವುದೇ ರೀತಿಯ ತನಿಖೆಗೆ ನಾನು ಸಿದ್ಧನಿದ್ದೇನೆ. ಅನವಶ್ಯಕವಾಗಿ ನನ್ನನ್ನು ತಪ್ಪಿತಸ್ಥ ಎಂದು ದೂರಲಾಗುತ್ತಿದೆ. ಜೆಡಿಎಸ್ (JDS) ಹಾಗೂ ಕಾಂಗ್ರೆಸ್ (Congress) ನಾಯಕರು ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಇಡೀ ಘಟನೆಯನ್ನು ನಾನು ಫೇಸ್‌ಬುಕ್ (Facebook) ಲೈವ್ ಮಾಡಿದ್ದೇನೆ. ಆದರೆ ಪೊಲೀಸರು ನನ್ನ ಲೈವ್ ವೀಡಿಯೋ ಡಿಲೀಟ್ ಮಾಡಿದ್ದಾರೆ. ಎಫ್‌ಐಆರ್ ಅನ್ನು ಎಡಿಟ್ ಮಾಡಿ ನನ್ನ ಮೇಲೆ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ VIP ಅಭ್ಯರ್ಥಿ ಹಾಕಲು ತಯಾರಿ