Tag: ಸಾಮಾಜಿಕ ಮಾಧ್ಯಮ

  • ತನ್ನ ಪ್ರಾಣ ಅರ್ಪಿಸಲು ಸಿದ್ಧವೆಂದು ಭಯೋತ್ಪಾದನಾ ಗುಂಪಿಗೆ ಬೆಂಬಲ ಸೂಚಿಸಿದ್ದ ವಿದ್ಯಾರ್ಥಿ ಅರೆಸ್ಟ್

    ತನ್ನ ಪ್ರಾಣ ಅರ್ಪಿಸಲು ಸಿದ್ಧವೆಂದು ಭಯೋತ್ಪಾದನಾ ಗುಂಪಿಗೆ ಬೆಂಬಲ ಸೂಚಿಸಿದ್ದ ವಿದ್ಯಾರ್ಥಿ ಅರೆಸ್ಟ್

    ದಿಸ್ಪುರ್: `ನಾನು ಯಾವಾಗಲೂ ಉಲ್ಫಾ-ಐ ಗುಂಪನ್ನು ಬೆಂಬಲಿಸುತ್ತೇನೆ. ಉಲ್ಫಾ-ಐ ಮತ್ತು ಗುಂಪಿನ ನಾಯಕ ಪರೇಶ್‌ಗಾಗಿ ನನ್ನ ಪ್ರಾಣವನ್ನೂ ಅರ್ಪಿಸಲು ಸಿದ್ಧನಿದ್ದೇನೆ’ ಎಂದು ಫೆಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದ 22 ವರ್ಷದ ವಿದ್ಯಾರ್ಥಿಯೊಬ್ಬನನ್ನು ದೇಶದ್ರೋಹ ಪ್ರಕರಣದ ಅಡಿಯಲ್ಲಿ ಬಂಧಿಸಲಾಗಿದೆ.

    ಉಲ್ಫಾ-ಐ ಭಯೋತ್ಪಾದಕ ಗುಂಪನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ತಂಗ್ಲಾ ಕಾಲೇಜಿನ ವಿದ್ಯಾರ್ಥಿ ಪ್ರಮೋದ್ ಕಲಿತಾ (22)ನನ್ನು ಅಸ್ಸಾಂನ ಉದಲ್ಗುರಿ ಜಿಲ್ಲಾ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ. ಇದನ್ನೂ ಓದಿ: ಸುಮ್ಮನೆ ವಾಹನ ತಡೆ ಹಿಡಿಯುತ್ತಿದ್ದ ಟ್ರಾಫಿಕ್ ಪೊಲೀಸ್ ಅಮಾನತು

    ಇಂಗ್ಲಿಷ್ ಮತ್ತು ಅಸ್ಸಾಮಿ ಭಾಷೆಯಲ್ಲಿ ಪೋಸ್ಟ್ ಮಾಡಿದ್ದ ವಿದ್ಯಾರ್ಥಿ ಹಾಗೂ ಉದಲಗುರಿಯ ಬೋರಂಗಬರಿಯ ನಿವಾಸಿ `ಉಲ್ಫಾ-ಐ ಮತ್ತು ಗುಂಪಿನ ನಾಯಕ ಪರೇಶ್ ಬರುವಾಗಾಗಿ ನನ್ನ ಪ್ರಾಣ ಅರ್ಪಿಸಲೂ ಸಿದ್ಧನಿದ್ದೇನೆ. ನಾನು ಯಾವಾಗಲೂ ಉಲ್ಫಾವನ್ನು ಬೆಂಬಲಿಸುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾನೆ.

    court order law

    ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು, ಬಂಧಿಸುವಂತೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು. ಇದರಿಂದ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ದೇಶದ್ರೋಹ ಪ್ರಕರಣದ ಅಡಿಯಲ್ಲಿ ಬಂಧಿಸಿದ್ದಾರೆ. ಆತ ಭಯೋತ್ಪಾದಕ ಗುಂಪಿನ ಸದಸ್ಯನಾಗಿರಲಿಲ್ಲ. ಆದರೆ ಬಂಧನದಲ್ಲಿದ್ದರೂ ಉಲ್ಫಾ ಭಯೋತ್ಪಾದಕ ಗುಂಪಿನ ಪರವಾಗಿಯೇ ಇದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಂಕಿಪಾಕ್ಸ್ ಭೀತಿ – ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ

    ಆರೋಪಿ ಕಲಿತಾ ವಿರುದ್ಧ IPC ಮತ್ತು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA)ಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಕಲೈಗಾಂವ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

    ಕಳೆದ 2 ತಿಂಗಳಲ್ಲಿ ಇದು ಅಸ್ಸಾಂನಲ್ಲಿ 2ನೇ ದೇಶದ್ರೋಹದ ಪ್ರಕರಣವಾಗಿದೆ. ಮೇ 18ರಂದು 19 ವರ್ಷದ ವಿದ್ಯಾರ್ಥಿನಿ ಬರ್ಷಶ್ರೀ ಬುರಾಗೊಹೈನ್ ಭಯೋತ್ಪಾದಕ ಸಂಘಟನೆ ಬೆಂಬಲಿಸಿದ್ದಕ್ಕಾಗಿ ದೇಶದ್ರೋಹ ಪ್ರಕರಣದ ಅಡಿ ಬಂಧಿಸಲಾಗಿದೆ. ಈಗ ಆಕೆ ಜಾಮೀನು ಅರ್ಜಿ ಸಲ್ಲಿಸಿದ್ದು ಇದೇ ಜುಲೈ 21ರಂದು ಗುವಹಾಟಿ ಹೈ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ತುಂಬಾ ಒಳ್ಳೇ ಕೆಲಸ ಮಾಡಿದ್ದೀಯಾ ಸಹೋದರ – ಕನ್ಹಯ್ಯ ಹತ್ಯೆ ಬೆಂಬಲಿಸಿದ ಮುಸ್ಲಿಂ ವ್ಯಕ್ತಿ ಅರೆಸ್ಟ್

    ತುಂಬಾ ಒಳ್ಳೇ ಕೆಲಸ ಮಾಡಿದ್ದೀಯಾ ಸಹೋದರ – ಕನ್ಹಯ್ಯ ಹತ್ಯೆ ಬೆಂಬಲಿಸಿದ ಮುಸ್ಲಿಂ ವ್ಯಕ್ತಿ ಅರೆಸ್ಟ್

    ಲಕ್ನೋ: ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾಲಾಲ್ ಹತ್ಯೆ ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಬೆನ್ನಲ್ಲೇ ಟೈಲರ್ ಹತ್ಯೆಯ ನೈಜ ಘಟನೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ತೆಗೆದುಹಾಕಲಾಗಿದೆ.

    ಇದಕ್ಕೂ ಮುನ್ನ ಕನ್ಹಯ್ಯಾಲಾಲ್ ಹತ್ಯೆಯ ವೀಡಿಯೋವನ್ನು ಲೈಕ್ ಮಾಡಿದ್ದಲ್ಲದೇ, ಹತ್ಯೆಯನ್ನು ಹೊಗಳಿ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಛಪ್ರೌಲಿ ನಿವಾಸಿಯನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಅಪಾಯವನ್ನು ಲೆಕ್ಕಿಸದೇ ಡೇಂಜರ್ ಟ್ರಾಕ್ಟರ್ ಗೇಮ್

    ಕನ್ಹಯ್ಯಾಲಾಲ್ ಶಿರಚ್ಛೇದನದ ವಿಡಿಯೋ ಕುರಿತು ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಆರೋಪಿ ಯೂಸುಫ್ ಖಾನ್ ವಿರುದ್ಧ ಐಪಿಸಿ ಸೆಕ್ಷನ್‌ 505(2)/295ಂ (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆಗಳು ಹಾಗೂ ಅಪರಾಧಿಕ ಭಯೋತ್ಪಾದನೆಗೆ ದಂಡನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಯೂಸುಫ್‌ಖಾನ್ ಫೇಸ್‌ಬುಕ್‌ನಲ್ಲಿ ವೀಡಿಯೋವನ್ನು ಲೈಕ್ ಮಾಡಿದ್ದು, `ತುಂಬಾ ಒಳ್ಳೆ ಕೆಲಸ ಮಾಡಿದ್ದೀಯಾ ನನ್ನ ಸಹೋದರ’ ಎಂದು ಕಾಮೆಂಟ್ ಮಾಡಿದ್ದಾನೆ. ಇದನ್ನು ವಿರೋಧಿಸಿ ಅದೇ ಗ್ರಾಮದ ನಿವಾಸಿಯೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ವೀಡಿಯೋ ಕುರಿತು ಕಾಮೆಂಟ್ ಮಾಡಲು ಬಳಸಿದ್ದ ಮೊಬೈಲ್ ಫೋನ್ ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಬಾಗ್ಪತ್ ಜಿಲ್ಲೆಯ ಛಪ್ರೌಲಿ ಗ್ರಾಮದ ನಿವಾಸಿಗಳು ಆರೋಪಿ ಬಗ್ಗೆ ಲಿಖಿತ ದೂರು ಸಲ್ಲಿಸಿದ್ದಾರೆ ಎಂದು ನೋಯ್ಡಾ ವಲಯ ಎಡಿಸಿಪಿ ರಣವಿಜಯ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಪತಿಯೊಂದಿಗೆ ವಾಸಿಸಲು 30 ಬಾರಿ ಅವಳಿ ಸಹೋದರಿಯ ಪಾಸ್‍ಪೋರ್ಟ್ ಬಳಕೆ

    ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ: ನಗರದ ವಾತಾವರಣ ಪರಿಶೀಲಿಸಲು ಪೊಲೀಸರು ಸಾಮಾಜಿಕ ಮಾಧ್ಯಮಗಳ ಮೇಲೆ ನಿರಂತರ ನಿಗಾ ವಹಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಪ್ರಚೋದನಕಾರಿ ಸಂದೇಶಗಳು ಮತ್ತು ವೀಡಿಯೋಗಳಿಗೆ ಗಮನ ಕೊಡಬೇಡಿ ಎಂದೂ ಸಹ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

    Live Tv

  • ಗಂಗಾನದಿಗೆ ಸೇತುವೆಯಿಂದ ಜಿಗಿದ 75ರ ವೃದ್ಧೆ – ಸಾಹಸ ಕಂಡು ಬೆರಗಾದ ಜನ

    ಗಂಗಾನದಿಗೆ ಸೇತುವೆಯಿಂದ ಜಿಗಿದ 75ರ ವೃದ್ಧೆ – ಸಾಹಸ ಕಂಡು ಬೆರಗಾದ ಜನ

    ಡೆಹ್ರಾಡೂನ್: ಸಾಧಿಸುವ ಛಲವೊಂದಿದ್ದರೆ ಸಾಕು ಅದಕ್ಕೆ ವಯಸ್ಸಿನ ಅಂತರ ಅಡ್ಡಿ ಬರುವುದಿಲ್ಲ. ಎನ್ನುವುದಕ್ಕೆ ಅನೇಕ ನಿದರ್ಶನಗಳು ಸಾಕ್ಷಿಯಾಗಿವೆ. ಹಾಗೆಯೇ ಉತ್ತರಾಖಂಡದ ಹರಿದ್ವಾರದಲ್ಲಿ 75 ವರ್ಷದ ವೃದ್ಧೆಯೊಬ್ಬರು ಸೇತುವೆಯ ಮೇಲಿನಿಂದ ಗಂಗಾನದಿಗೆ ಧುಮುಕಿ ಈಜುವ ಮೂಲಕ ಜನರನ್ನು ನಿಬ್ಬೆರಗಾಗಿಸಿದ್ದಾರೆ.

    ಹಿಂದೂಗಳ ಪವಿತ್ರ ಹಾಗೂ ಧಾರ್ಮಿಕ ಕ್ಷೇತ್ರವಾದ ಹರಿದ್ವಾರದ ಹರ್ ಕಿಪುರಿ ಘಾಟ್‌ನ ಸೇತುವೆಯಲ್ಲಿ ಈ ಘಟನೆ ನಡೆದಿದೆ. ಮೂಲತಃ ಹರಿಯಾಣದ ಸೋನಿಪತ್ ಬಂದೇಪುರ ಗ್ರಾಮದ 75 ವರ್ಷದ ವೃದ್ಧೆ ಈ ಸಾಹಸ ಮಾಡಿದ್ದಾರೆ. ಇದನ್ನೂ ಓದಿ: 16 ವರ್ಷಗಳಿಂದ ಅಳಿಯನನ್ನೇ ಪ್ರೀತಿಸ್ತಿದ್ದ ಅತ್ತೆ- ಒಟ್ಟಿಗೆ ಇರಲು ಸಾಧ್ಯವಾಗದೇ ಇಬ್ಬರೂ ಆತ್ಮಹತ್ಯೆ

    ಹರಿದ್ವಾರದಲ್ಲಿ ಗಂಗಾನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಮೇಲಿನಿಂದ ವೃದ್ಧೆಯೊಬ್ಬರು ತುಂಬಿ ಹರಿಯುತ್ತಿರುವ ಆಳವಾದ ಗಂಗಾನದಿಗೆ ಹಾರಿ ಈಜಿದ್ದಾರೆ. ತಾನು ಸೇತುವೆಗೆ ಧುಮುಕಲು ಹೊರಟಾಗ ಯಾರೂ ತನ್ನನ್ನು ಹಿಂಬಾಲಿಸದಂತೆ ನೋಡಿಕೊಂದ್ದಾರೆ. ಆದರೂ ಸೇತುವೆ ಮೇಲಿದ್ದವರೆ ಯಾರೋ ಈ ಘಟನೆಯನ್ನು ಸೆರೆ ಹಿಡಿದು, ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು ವೀಡಿಯೋ ವೈರಲ್ ಆಗಿದೆ.

    Live Tv

  • ಸಾಮಾಜಿಕ ಮಾಧ್ಯಮವನ್ನು ಜವಾಬ್ದಾರಿಯುತವಾಗಿಸಲು ಕಾನೂನು ಬದಲಾವಣೆಗೆ ಕೇಂದ್ರ ಯೋಜನೆ

    ಸಾಮಾಜಿಕ ಮಾಧ್ಯಮವನ್ನು ಜವಾಬ್ದಾರಿಯುತವಾಗಿಸಲು ಕಾನೂನು ಬದಲಾವಣೆಗೆ ಕೇಂದ್ರ ಯೋಜನೆ

    ನವದೆಹಲಿ: ಸಾಮಾಜಿಕ ಮಾಧ್ಯಮವನ್ನು ಹೆಚ್ಚು ಜವಾಬ್ದಾರಿಯುತವಾಗಿಸಲು ಕಾನೂನು ಬದಲಾವಣೆಗಳನ್ನು ತರಲು ಯೋಜಿಸಲಾಗಿದೆ ಎಂದು ಕೇಂದ್ರ ಮಾಹಿತಿ ಹಾಗೂ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

    ಸಾಮಾಜಿಕ ಜಾಲತಾಣ ಪ್ಲಾಟ್‌ಫಾರ್ಮ್‌ಗಳನ್ನು ಹೆಚ್ಚು ಜವಾಬ್ದಾರಿಯುತವಾಗಿಸಬೇಕು ಎಂದು ದೇಶದಲ್ಲಿ ಒಮ್ಮತವಿದೆ. ಮೊಬೈಲ್ ಫೋನ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಇಂಟರ್‌ನೆಟ್ ಪರಿವರ್ತಕ ಬದಲಾವಣೆಗಳನ್ನು ಮಾಡಿದೆ. ಆದರೆ ಅವರೂ ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

    ಸಾಮಾಜಿಕ ಜಾಲತಾಣಗಳಿಗೆ ಕಾನೂನು ಬದಲಾವಣೆಗಳ ಅಗತ್ಯವಿದೆ, ಅದನ್ನು ನಾವು ಜಾರಿಗೊಳಿಸುತ್ತೇವೆ. ಮಾಧ್ಯಮ ಗುಂಪುಗಳಲ್ಲಿ ಸ್ವಯಂ ನಿಯಂತ್ರಣದ ಅಗತ್ಯವಿದೆ, ಸ್ವಯಂ ನಿಯಂತ್ರಣವನ್ನೂ ಮಾಡಿಸುತ್ತೇವೆ. ಅಗತ್ಯವಿರುವಲ್ಲೆಲ್ಲಾ ನಾವು ಸಾಮಾಜಿಕ ಮಾಧ್ಯಮವನ್ನು ಹೆಚ್ಚು ಜವಾಬ್ದಾರಿಯುತವಾಗಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ವರ್ಕ್ ಔಟ್ ಆಯ್ತು ಮೋದಿಯ ಮನ್ ಕೀ ಬಾತ್ ಐಡಿಯಾ – ಎಂ.ಟೆಕ್ ಪದವೀಧರೆಯ ಬಾಳು ಬೆಳಗುತ್ತಿದೆ ಬಾಳೆ ದಿಂಡು

    ಬದಲಾವಣೆ ಏನು?
    ಕೇಂದ್ರ ಸರ್ಕಾರ ಈ ಹಿಂದಿನ ಸಾಮಾಜಿಕ ಮಾಧ್ಯಮದ ನಿಯಮಗಳನ್ನು ಅಂತಿಮಗೊಳಿಸುವಲ್ಲಿ ಕೆಲಸ ಮಾಡುತ್ತಿದೆ. ಹೊಸದಾಗಿ ಜಾರಿಗೆ ತರಲಿರುವ ನಿಯಮಗಳು ಅನಿಯಂತ್ರಿತ ಕಂಟೆಂಟ್ ಮಾಡರೇಶನ್, ನಿಷ್ಟ್ರಿಯತೆ ಅಥವಾ ಯಾವುದೇ ವಿವರಣೆಯಿಲ್ಲದ ಟ್ವಿಟ್ಟರ್ ಹಾಗೂ ಫೇಸ್‌ಬುಕ್‌ನಂತಹ ದೊಡ್ಡ ಟೆಕ್ ಕಂಪನಿಗಳು ಮಾಡಿದ ಪೋಸ್ಟ್‌ಗಳನ್ನು ತೆಗೆದು ಹಾಕುವ ನಿರ್ಧಾರದ ವಿರುದ್ಧವಾಗಿದೆ ಹಾಗೂ ಬಳಕೆದಾರರು ಕುಂದುಕೊರತೆಗಳನ್ನು ಎತ್ತಿ ತೋರಿಸುವ ಅವಕಾಶವನ್ನು ಪಡೆಯುತ್ತಾರೆ ಎನ್ನಲಾಗಿದೆ.

    ಈ ತಿಂಗಳ ಆರಂಭದಲ್ಲಿ ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾಮಾಜಿಕ ಮಾಧ್ಯಮ ಬಳಕೆದಾರರು ಕಂಪನಿಗಳಿಗೆ ಮಾಡಿದ ದೂರುಗಳ ವಿರುದ್ಧ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಪಡೆಯುವಂತಹ ಹೊಸ ಕರಡು ನಿಯಮವನ್ನು ಬಿಡುಗಡೆ ಮಾಡಿತು. ಇದರ ಪ್ರಕಾರ ಸಾಮಾಜಿಕ ಮಾಧ್ಯಮಗಳ ನಿರ್ಧಾರಗಳ ವಿರುದ್ಧ ಮೇಲ್ಮನವಿಗೆ ಸಲ್ಲಿಸಲು ಬಳಕೆದಾರರಿಗೆ ಅವಕಾಶ ಒದಗಿಸುತ್ತದೆ. ಪ್ರಸ್ತುತ ಯಾವುದೇ ದೊಡ್ಡ ಸಾಮಾಜಿಕ ಮಾಧ್ಯಮ ಕಂಪನಿಗಳು ಮೇಲ್ಮನವಿ ಕಾರ್ಯವಿಧಾನವನ್ನು ಹೊಂದಿಲ್ಲ. ಇದನ್ನೂ ಓದಿ: ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಲ್ಲ: ಫಾರೂಕ್ ಅಬ್ದುಲ್ಲಾ

    ವರದಿಗಳ ಪ್ರಕಾರ ಈ ಹೊಸ ನಿಯಮ ಜುಲೈ ಕೊನೆಯಲ್ಲಿ ಅಂತಿಮಗೊಳಿಸಲು ಸರ್ಕಾರ ಯೋಜಿಸಿದೆ.

    Live Tv

  • ಕಾಂಡೋಮ್ ಧರಿಸುವ ಬಗ್ಗೆ ತರಗತಿಯಲ್ಲಿ ಪಾಠ ಮಾಡಿದ ಶಿಕ್ಷಕ- ವೀಡಿಯೋ ವೈರಲ್

    ಕಾಂಡೋಮ್ ಧರಿಸುವ ಬಗ್ಗೆ ತರಗತಿಯಲ್ಲಿ ಪಾಠ ಮಾಡಿದ ಶಿಕ್ಷಕ- ವೀಡಿಯೋ ವೈರಲ್

    ಮೆಕ್ಸಿಕೊ: ಚಿಕ್ಕ ಮಕ್ಕಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಹೇಳಿಕೊಡುವ ಪದ್ಧತಿ ಅನೇಕ ದೇಶಗಳಲ್ಲಿ ಜಾರಿಯಲ್ಲಿದೆ. ಅದರಲ್ಲೂ ಅಮೆರಿಕದಂತ ದೇಶಗಳಲ್ಲಿ ಇದಕ್ಕಾಗಿ ಪ್ರತ್ಯೇಕ ಕೋರ್ಸ್‌ಗಳನ್ನೇ ನಡೆಸುತ್ತಿದ್ದಾರೆ. ಮಕ್ಕಳ ಹಂತದಿಂದಲೇ ಲೈಂಗಿಕ ಶಿಕ್ಷಣದ ಬಗ್ಗೆ ತಿಳುವಳಿಕೆ ಮೂಡಿಸುವುದರಿಂದ ಅವರು ಹೆಚ್ಚು ಜಾಗೃತರಾಗುತ್ತಾರೆ ಎನ್ನುವ ಉದ್ದೇಶವೂ ಇದಾಗಿದೆ.

    ಹಾಗೆಯೇ ಉತ್ತರ ಅಮೆರಿಕದ ಮೆಕ್ಸಿಕೊ ಶಾಲೆಯೊಂದರಲ್ಲಿ ತರತಿಯಲ್ಲೇ ಶಿಕ್ಷಕನೊಬ್ಬ ಮಕ್ಕಳಿಗೆ ಕಾಂಡೋಮ್ ಧರಿಸುವ ಬಗ್ಗೆ ಪಾಠ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ವೀಡಿಯೋ ಈಗ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ರಷ್ಯಾ 2 ಲಕ್ಷ ಉಕ್ರೇನ್ ಮಕ್ಕಳನ್ನು ಅಪಹರಿಸಿದೆ – ಝಲೆನ್ಸ್ಕಿ ಗಂಭೀರ ಆರೋಪ

    EDUCATION
    ಸಾಂದರ್ಭಿಕ ಚಿತ್ರ

    ಶಿಕ್ಷಕನು ಕಾಂಡೋಮ್ ಧರಿಸುವ ಬಗ್ಗೆ ಹೇಳಿಕೊಡುತ್ತಿದ್ದಂತೆ ವಿದ್ಯಾರ್ಥಿಗಳು ಬಿದ್ದು-ಬಿದ್ದು ನಗಲು ಪ್ರಾರಂಭಿಸಿದ್ದಾರೆ. ಮೊದಲಿಗೆ ಶಿಕ್ಷಕರು ಮಾನವ ಗಾತ್ರದ ಬಟ್ಟೆಯನ್ನು ವಿದ್ಯಾರ್ಥಿಯೊಬ್ಬನಿಗೆ ಸುತ್ತಿದ್ದಾರೆ ನಂತರ ಅದನ್ನು ನಿಖರವಾಗಿ ಕಾಂಡೋಮ್ ಹೇಗೆ ಧರಿಸುತ್ತಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಇದನ್ನೂ ಓದಿ: 1 ಲೀಟರ್ ಅಡುಗೆ ಎಣ್ಣೆ 555 ರೂ., ಕೆಜಿ ತುಪ್ಪ 605 ರೂ.ಗೆ ದಿಢೀರ್ ಏರಿಕೆ

    ಗರ್ಭನಿರೋಧಕ ಸಾಧನವನ್ನು ಹೇಗೆ ಸುಲಭವಾಗಿ ಬಳಸಬಹುದು ಎಂಬುದನ್ನು ಪ್ರದರ್ಶಿಸಲು ಶಿಕ್ಷಕರು ಸ್ವಯಂಸೇವಕ ವಿದ್ಯಾರ್ಥಿಯ ಕುತ್ತಿಗೆ ಮತ್ತು ದೇಹದ ಕೆಳಗೆ ದೈತ್ಯ ಬಟ್ಟೆಯ ಹೊದಿಕೆಯನ್ನು ಸುತ್ತಿ ಗುಪ್ತಾಂಗದ ಬಗ್ಗೆ ತಿಳಿಸಿದ್ದಾರೆ.

    ಈಗಾಗಲೇ ಜಾಲತಾಣದಲ್ಲಿ ವೀಡಿಯೋ ಹರಿದಾಡಿದ್ದು, ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಕೆಲವರು ಮಕ್ಕಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಚಿಕ್ಕ ವಯಸ್ಸಿನಿಂದಲೇ ತಿಳಿಸಿಕೊಡುವುದರಿಂದ ಅವರು ಜಾಗೃತರಾಗುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

  • ಪಾಕ್ ಸೇನಾ ಮುಖ್ಯಸ್ಥರಿಗೆ ಅವಮಾನ – ಇಮ್ರಾನ್ ಖಾನ್ ಸಾಮಾಜಿಕ ಮಾಧ್ಯಮ ತಂಡ ಅರೆಸ್ಟ್

    ಪಾಕ್ ಸೇನಾ ಮುಖ್ಯಸ್ಥರಿಗೆ ಅವಮಾನ – ಇಮ್ರಾನ್ ಖಾನ್ ಸಾಮಾಜಿಕ ಮಾಧ್ಯಮ ತಂಡ ಅರೆಸ್ಟ್

    ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ತೆಹ್ರಿಕ್-ಇ-ಇನ್ಸಾಫ್ ಪಕ್ಷದ ಸಾಮಾಜಿಕ ಮಾಧ್ಯಮದ 8 ಸದಸ್ಯರನ್ನು ಬಂಧಿಸಲಾಗಿದೆ.

    ಇಮ್ರಾನ್ ಖಾನ್ ಅವರ ಸಾಮಾಜಿಕ ಮಾಧ್ಯಮ ತಂಡ ಪಾಕಿಸ್ತಾನ ಸೇನಾ ಮುಖ್ಯಸ್ಥರನ್ನು ಅವಮಾನಿಸಿರುವುದಾಗಿ ಆರೋಪ ಹೊರಿಸಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಮಾಧ್ಯಮದ 8 ಸದಸ್ಯರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಈಶ್ವರಪ್ಪನನ್ನು ವಜಾಗೊಳಿಸಿ – ಅಮಿತ್ ಶಾ ನಿವಾಸದ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ

    ತೆಹ್ರಿಕ್-ಇ-ಇನ್ಸಾಫ್‌ನ ಸಾಮಾಜಿಕ ಮಾಧ್ಯಮ ತಂಡ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಅವರನ್ನು ಅವಮಾನಿಸಿದ್ದಾಗಿ ಆರೋಪಿಸಲಾಗಿತ್ತು. ಇಮ್ರಾನ್ ಖಾನ್ ಪ್ರಧಾನಿ ಪಟ್ಟದಿಂದ ಇಳಿದ ಬಳಿಕ ಪಾಕಿಸ್ತಾನ ಸೇನೆಯನ್ನು ಗುರಿಯಾಗಿಸಿಕೊಂಡಿರುವ ಸಾಮಾಜಿಕ ಮಾಧ್ಯಮ ತಂಡ ನಿರಂತರವಾಗಿ ಟ್ವಿಟ್ಟರ್‌ನಲ್ಲಿ ಸೇನೆಯ ವಿರುದ್ಧ ಹೇಳಿಕೆಯನ್ನು ನೀಡುತ್ತಿತ್ತು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಭೀಕರ ಚಂಡಮಾರುತಕ್ಕೆ 58 ಮಂದಿ ಸಾವು – ಫಿಲಿಪೈನ್ಸ್‌ನಲ್ಲಿ ಬಿಡುವಿಲ್ಲದೇ ನಡೀತಿದೆ ಕಾರ್ಯಾಚರಣೆ

    ಸೇನಾ ಮುಖ್ಯಸ್ಥ ಮತ್ತು ಉನ್ನತ ನ್ಯಾಯಾಲಯದ ನ್ಯಾಯಾಧೀಶರನ್ನು ತೆಹ್ರಿಕ್-ಇ-ಇನ್ಸಾಫ್ ಪಕ್ಷದ ಸಾಮಾಜಿಕ ಮಾಧ್ಯಮ ಅವಮಾನ ಮಾಡುತ್ತಿದೆ. ಇದರಲ್ಲಿ ಭಾಗಿಯಾಗಿರುವ 50 ಶಂಕಿತರನ್ನು ಗುಪ್ತಚರ ಸಂಸ್ಥೆ ಪಟ್ಟಿ ಮಾಡಿದೆ. ಈ ಪೈಕಿ ಇದುವರೆಗೆ 8 ಸದಸ್ಯರನ್ನು ಬಂಧಿಸಲಾಗಿದೆ ಎಂದು ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿ(ಎಫ್‌ಐಎ) ತಿಳಿಸಿದೆ.