Tag: ಸಾಮೂಹಿಕ ಭೋಜನ

  • ಉರುಸ್‍ನಲ್ಲಿ ಸಾಮೂಹಿಕ ಭೋಜನ – 450ಕ್ಕೂ ಹೆಚ್ಚು ಜನ ಅಸ್ವಸ್ಥ

    ಉರುಸ್‍ನಲ್ಲಿ ಸಾಮೂಹಿಕ ಭೋಜನ – 450ಕ್ಕೂ ಹೆಚ್ಚು ಜನ ಅಸ್ವಸ್ಥ

    ಬಳ್ಳಾರಿ: ವಿಷ ಆಹಾರ ಸೇವಿಸಿ ಸುಮಾರು 450ಕ್ಕೂ ಹೆಚ್ಚು ಜನರ ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನ ಮಾಲ್ವಿಯಲ್ಲಿ ನಡೆದಿದೆ.

    ಮಾಲ್ವಿ ಗ್ರಾಮದಲ್ಲಿ ನಡೆದ ಪೀರ್ ಸಾಬ್ ಉರುಸ್‍ನಲ್ಲಿ ಅವಘಡ ನಡೆದಿದ್ದು, ಪೀರ್ ಸಾಬ್ ಉರುಸ್‍ನಲ್ಲಿ ಗ್ರಾಮಸ್ಥರು ಸಾಮೂಹಿಕ ಭೋಜನ ಮಾಡಿದ್ದಾರೆ. ಬಳಿಕ ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಸಂಜೆ ಆಗುತ್ತಿದ್ದಂತೆ ಜನರಲ್ಲಿ ವಾಂತಿ ಬೇದಿ ಹೆಚ್ಚಾಗಿದೆ. ಹೀಗಾಗಿ ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಗರಿ ಬೊಮ್ಮನಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

    450ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಕಾರಣ ಆಸ್ಪತ್ರೆಯಲ್ಲಿ ಬೆಡ್ ಸಿಗದೆ ನೆಲದಲ್ಲಿ ರೋಗಿಗಳನ್ನು ಹಾಕಿ ಚಿಕಿತ್ಸೆ ನೀಡಲಾಗಿದೆ. ಇಬ್ಬರಿಗೆ ಸ್ಥಿತಿ ಗಂಭೀರವಾಗಿರುವ ಕಾರಣ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಷಯ ತಿಳಿದ ಹಗರಿ ಬೊಮ್ಮನಹಳ್ಳಿ ಕಾಂಗ್ರೆಸ್ ಶಾಸಕ ಬೀಮಾ ನಾಯಕ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜನರು ಭಯ ಪಡುವ ಅವಶ್ಯಕತೆ ಇಲ್ಲ ಎಂದು ಧೈರ್ಯ ತುಂಬಿದ್ದಾರೆ.