ಬಾಲಿವುಡ್ ನಲ್ಲಿ ರಾಮಾಯಣ (Ramayana) ಸಿನಿಮಾ ಆಗುತ್ತಿರುವ ವಿಚಾರ ಹಲವಾರು ತಿಂಗಳಿಂದ ಹರಿದಾಡುತ್ತಲೇ ಇದೆ. ಅದರಲ್ಲೂ ಈ ಸಿನಿಮಾದಲ್ಲಿ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ, ಈ ಸುದ್ದಿ ಹರಿದಾಡುವುದು ತಪ್ಪಿಲ್ಲ.

ಯಶ್ ಏನೂ ಹೇಳದೇ ಇದ್ದರೂ, ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದೂ ಮಾತನಾಡಿದ್ದರು. ಅದು ಈಗ ನಿಜವಾದಂತೆ ಕಾಣುತ್ತಿದೆ. ಈಗಾಗಲೇ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಸಿನಿಮಾಗಾಗಿ ಅವರು 15 ದಿನಗಳ ಕಾಲ ಕಾಲ್ ಶೀಟ್ ಕೂಡ ನೀಡಿದ್ದಾರೆ ಎನ್ನುವುದು ತಾಜಾ ಮಾಹಿತಿ.

ನಿತಿಶ್ ತಿವಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಸತತ ಮೂರ್ನಾಲ್ಕು ವರ್ಷಗಳಿಂದ ಈ ಚಿತ್ರಕ್ಕಾಗಿ ತಿವಾರಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 2024ರಲ್ಲಿ ಈ ಸಿನಿಮಾ ಸೆಟ್ಟೇರಬಹುದು ಎಂದು ಅಂದಾಜಿಸಲಾಗಿದೆ. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್ (Ranbir Kapoor) ನಿರ್ವಹಿಸಲಿದ್ದಾರೆ. ಸೀತೆ ಪಾತ್ರವು ಸಾಯಿ ಪಲ್ಲವಿ (Sai Pallavi)ಅವರ ಪಾಲಾಗಿದೆ.
ಸದ್ಯ ಯಶ್ ಹೊಸ ಸಿನಿಮಾದ ಕೆಲಸದಲ್ಲಿ ಬ್ಯೂಸಿಯಾಗಿದ್ದಾರೆ. ಅಲ್ಲದೇ ದೇಶ ವಿದೇಶ ಸುತ್ತುತ್ತಿದ್ದಾರೆ. ಸದ್ಯದಲ್ಲೇ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ರಾಮಾಯಣ ಸಿನಿಮಾ ಶುರುವಾಗುವ ಹೊತ್ತಿಗೆ ಹೊಸ ಸಿನಿಮಾದ ಬಹುತೇಕ ಕೆಲಸ ಮುಗಿಯುವ ಸಾಧ್ಯತೆ ಇದ್ದು, ಅದಕ್ಕಾಗಿ ಈ ಸಿನಿಮಾವನ್ನು ಯಶ್ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ, ನನಗೆ ನಾಗಚೈತನ್ಯ ಎಂದರೆ ತುಂಬಾ ಇಷ್ಟ. ಅವರನ್ನು ಮದುವೆಯಾಗೋದೇ ನನ್ನ ಜೀವನದ ಟಾರ್ಗೆಟ್ ಆಗಿದೆ. ಡಿವೋರ್ಸ್ ಆಗಿರುವ ವ್ಯಕ್ತಿಯನ್ನು ಮತ್ತೆ ಮದುವೆ ಆಗೋದಕ್ಕೆ ನನಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಸದ್ಯ ರೀತು ಚೌಧರಿ ನೀಡಿರುವ ಹೇಳಿಕೆ ಸಖತ್ ವೈರಲ್ ಆಗಿದೆ. ನಟಿಯ ಮಾತಿಗೆ ನಾಗಚೈತನ್ಯ ಕಡೆಯಿಂದ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಂದಹಾಗೆ, ರೀತು ಚೌಧರಿ ‘ಗೋರಿಂಟಕು’ ಸೀರಿಯಲ್‌ನಲ್ಲಿ ಗಾಯತ್ರಿ ಎಂಬ ಪಾತ್ರದಲ್ಲಿ ನಟಿಸಿದ್ದಾರೆ.

ಮದುವೆ (Wedding) ಕುರಿತು ಟ್ವೀಟ್ಟರ್‌ನಲ್ಲಿ ಸಿಟ್ಟಿನಿಂದಲೇ ಪ್ರತಿಕ್ರಿಯೆ ನೀಡಿರುವ ನಟಿ, ಸಾಮಾನ್ಯವಾಗಿ, ನಾನು ವದಂತಿಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆ ಬಗ್ಗೆ ನನಗೆ ಭಯವೂ ಇಲ್ಲ. ಆದರೆ ಆ ಸುದ್ದಿಗಳು ನನ್ನ ಕುಟುಂಬವೇ ಆಗಿರುವ ಸ್ನೇಹಿತರನ್ನು ಒಳಗೊಂಡು ಅವರ ಮೇಲೆ ಪರಿಣಾಮ ಬೀರುತ್ತಿದೆ ಎಂದಾಗ ನಾನು ಮಾತನಾಡಲೇ ಬೇಕಾಗಿದೆ.




ನಾಗಚೈತನ್ಯ- ಸಾಯಿ ಪಲ್ಲವಿ ಹೊಸ ಸಿನಿಮಾಗೆ ಅಲ್ಲು ಅರವಿಂದ್ (Allu Aravind) ನಿರ್ಮಾಣ ಮಾಡ್ತಿದ್ದಾರೆ. ಈ ಚಿತ್ರಕ್ಕೆ ಚಂದು ಮೊಂಡೇಟಿ ನಿರ್ದೇಶನ ಮಾಡಲಿದ್ದಾರೆ. ಸದ್ಯ ಅವರು ಕಾರ್ತಿಕೇಯ 3 ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಿದ್ದಾರೆ. ಬಳಿಕ ನಾಗಚೈತನ್ಯ ಜೊತೆಗಿನ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ. ಇದನ್ನೂ ಓದಿ:
ಈ ಸಿನಿಮಾದ ಕುರಿತು ಸಾಯಿ ಪಲ್ಲವಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡ್ತಿದ್ದಾರೆ. ಇಷ್ಟು ಪ್ರೀತಿಸುವ ತಂಡವನ್ನು ಸೇರಿಕೊಳ್ಳುತ್ತಿರುವುದು ಬಹಳ ಖುಷಿಯ ವಿಷಯ. ಬೆಚ್ಚನೆಯ ಸ್ವಾಗತಕ್ಕೆ ಗೀತಾ ಆರ್ಟ್ಸ್, ಬನ್ನಿ ವಾಸು, ಚಂದು ಮೊಂಡೇಟಿಗೆ ಧನ್ಯವಾದ. ನಾಗ ಚೈತನ್ಯ ಅವರೇ ನಿಮ್ಮೊಂದಿಗೆ ಮತ್ತೊಂದು ಸಿನಿಮಾ ಮಾಡುತ್ತಿರುವುದು ಖುಷಿಯ ಸಂಗತಿ. ನನ್ನ ಪ್ರಿಯವಾದ ತೆಲುಗು ಪ್ರೇಕ್ಷಕರೇ, ನಿಮ್ಮನ್ನು ನಾನು ಬಹಳ ಮಿಸ್ ಮಾಡಿಕೊಂಡಿದ್ದೆ. ಈಗ NC 23 ಸಿನಿಮಾ ಮೂಲಕ ನಿಮ್ಮನ್ನು ಭೇಟಿ ಆಗುತ್ತಿರುವುದು ಬಹಳ ಖುಷಿ ನೀಡಿದೆ ಎಂದು ಬರೆದುಕೊಂಡಿದ್ದಾರೆ. ‘ಲವ್‌ಸ್ಟೋರಿ’ ಸಕ್ಸಸ್ ನಂತರ ಮತ್ತೆ ಒಂದಾಗ್ತಿರೋ ಈ ಜೋಡಿ ಮಗದೊಮ್ಮೆ ಗೆದ್ದು ಬೀಗುತ್ತಾರಾ ಕಾಯಬೇಕಿದೆ.











