Tag: ಸಾರಾ ಮಹೇಶ್

  • ಪಕ್ಷದ ಉಳಿವಿಗಾಗಿ ನಿಖಿಲ್ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಬೇಕು: ಸಾ.ರಾ ಮಹೇಶ್

    ಪಕ್ಷದ ಉಳಿವಿಗಾಗಿ ನಿಖಿಲ್ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಬೇಕು: ಸಾ.ರಾ ಮಹೇಶ್

    ಬೆಂಗಳೂರು: ಪಕ್ಷದ ಉಳಿವಿಗಾಗಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಚನ್ನಪಟ್ಟಣದಿಂದ (Channapatna) ಸ್ಪರ್ಧೆ ಮಾಡಬೇಕು ಎಂದು ಮಾಜಿ ಸಚಿವ ಸಾ.ರಾ ಮಹೇಶ್ (SR Mahesh) ಮನವಿ ಮಾಡಿದ್ದಾರೆ.

    ಚನ್ನಪಟ್ಟಣ ಅಭ್ಯರ್ಥಿ ಕುರಿತು ಜೆಪಿ ಭವನದಲ್ಲಿ ಮಾತನಾಡಿದ ಅವರು, ಚನ್ನಚನ್ನಪಟ್ಟಣದಿಂದ ನಿಖಿಲ್ ನಿಲ್ಲಬೇಕು ಎಂದು ಕಾರ್ಯಕರ್ತರು, ಮುಖಂಡರು ಒತ್ತಾಯ ಮಾಡುತ್ತಿದ್ದಾರೆ. ಆದರೆ ನಿಖಿಲ್ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂದು ಹೇಳುತ್ತಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಅವರು ನಿಖಿಲ್ ಜೊತೆ ಮಾತನಾಡುತ್ತಿದ್ದಾರೆ. ಎಲ್ಲರು ನಿಖಿಲ್ ಅಭ್ಯರ್ಥಿ ಆಗಬೇಕು ಎಂದು ಹೇಳುತ್ತಿದ್ದಾರೆ. ಇವತ್ತು ಕುಮಾರಸ್ವಾಮಿ ಸಭೆ ಕರೆದಿದ್ದಾರೆ. ಸಭೆಯಲ್ಲಿ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಜಮ್ಮು-ಕಾಶ್ಮೀರ| ಕಾರ್ಮಿಕನ ಮೇಲೆ ಭಯೋತ್ಪಾದಕರ ಗುಂಡಿನ ದಾಳಿ

    ಪಕ್ಷ ಉಳಿಯಬೇಕಾದರೆ ನಿಖಿಲ್ ಸ್ಪರ್ಧೆ ಆಗಬೇಕು ಎಂದು ನಾವು ಹೇಳುತ್ತಿದ್ದೇವೆ. ನಿಖಿಲ್ ನಿಂತರೆ ದೇವೇಗೌಡರ ಕುಟುಂಬ ಮಾತ್ರ ಇರೋದಾ ಎನ್ನುತ್ತಾರೆ. ಅನಿತಾ ಕುಮಾರಸ್ವಾಮಿ ನಿಂತಿದ್ದರೂ ಇದೇ ಹೇಳಿದ್ದರು. ಈಗ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಿಗೆ ಕೊಡಿ ಎಂದರೆ ನಿಖಿಲ್‌ಗೆ ಭಯ ಎನ್ನುತ್ತಾರೆ. ವಯನಾಡ್‌ನಲ್ಲಿ ರಾಜೀನಾಮೆ ಕೊಟ್ಟು ಪ್ರಿಯಾಂಕಾ ನಿಂತರೆ ಅದು ಕುಟುಂಬ ರಾಜಕೀಯ ಅಲ್ಲ. ಇಲ್ಲಿ ಮಾತ್ರ ನಿಖಿಲ್ ನಿಂತರೆ ಕುಟುಂಬ ರಾಜಕೀಯ ಎನ್ನುತ್ತಾರೆ. ಇದು ಹೇಗೆ ಎಂದು ಕಾಂಗ್ರೆಸ್‌ಗೆ ಪ್ರಶ್ನಿಸಿದರು. ಇದನ್ನೂ ಓದಿ: ಸಿಜೆಐ ಸೋಗಿನಲ್ಲಿ ವೃದ್ಧನಿಗೆ 1.26 ಕೋಟಿ ವಂಚನೆ – ನಾಲ್ವರು ಆರೋಪಿಗಳ ಬಂಧನ

    ಜೆಡಿಎಸ್‌ಗೆ ಇದು ಸಂದಿಗ್ಧ ಪರಿಸ್ಥಿತಿ. ನೋಡೋಣ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ನಾವು ಸೋಲು, ಗೆಲುವು ಎರಡೂ ನೋಡಿದ್ದೇವೆ. ಜೆಡಿಎಸ್ ಮುಗಿದೇ ಹೋಯಿತು ಎಂದಾಗಲೂ ಜೆಡಿಎಸ್ ಗೆದ್ದಿದೆ. ಪಕ್ಷದ ಉಳಿವಿಗಾಗಿ ಇಂದು ಸಭೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಪರಿಷತ್‌ ಉಪ ಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್‌ಗೆ ಭರ್ಜರಿ ಜಯ

  • ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಬೇಡ ಅಂತ ನಿಖಿಲ್ ನನ್ನ ಬಳಿ ಹೇಳಿಕೊಂಡಿದ್ದಾರೆ: ಸಾರಾ ಮಹೇಶ್

    ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಬೇಡ ಅಂತ ನಿಖಿಲ್ ನನ್ನ ಬಳಿ ಹೇಳಿಕೊಂಡಿದ್ದಾರೆ: ಸಾರಾ ಮಹೇಶ್

    ರಾಮನಗರ: ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಬೇಡ, ಇನ್ನೂ ಮೂರು ವರ್ಷ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ಮಾಜಿ ಸಚಿವ ಸಾ.ರಾ ಮಹೇಶ್ (SR Mahesh) ಹೇಳಿಕೆ ನೀಡಿದ್ದಾರೆ.

    ಬಿಡದಿಯ (Bidadi) ಹೆಚ್‌ಡಿಕೆ (HD Kumaraswamy) ತೋಟದ ಮನೆಯಲ್ಲಿ ನಡೆದ ಜೆಡಿಎಸ್ (JDS) ಸಭೆಯಲ್ಲಿ ಭಾಗಿಯಾಗಿದ್ದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಚನ್ನಪಟ್ಟಣ (Channapatna) ಹೆಚ್‌ಡಿ ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದ ಕ್ಷೇತ್ರವಾಗಿದೆ. ಈಗ ಎನ್‌ಡಿಎ ಅಭ್ಯರ್ಥಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು. ಇವತ್ತು ಪೂರ್ವಭಾವಿಯಾಗಿ ಚರ್ಚೆ ಮಾಡಿದ್ದೇವೆ. ಅಭ್ಯರ್ಥಿ ಆಯ್ಕೆ ಬಗ್ಗೆ ಎರಡೂ ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ. ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲಬೇಕು ಅಷ್ಟೇ. ಕಾಂಗ್ರೆಸ್ ಸರ್ಕಾರ ಸಾಕಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರಿಂದ ಜನ ಬೇಸತ್ತಿದ್ದಾರೆ. ಹಾಗಾಗಿ ಈ ಮೂರು ಕ್ಷೇತ್ರ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು. ಇದನ್ನೂ ಓದಿ: ಧಾರವಾಡ| ಮಳೆ ಅವಾಂತರ- ಕೊಚ್ಚಿ ಹೋಯ್ತು ನಿರ್ಮಾಣ ಹಂತದಲ್ಲಿದ್ದ ರಸ್ತೆ

    ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಹೆಚ್ಚಳದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಸಾಕಷ್ಟು ಜನ ನನಗೂ ಕರೆ ಮಾಡಿ ಈ ಬಗ್ಗೆ ಮಾತನಾಡಿದ್ದಾರೆ. ಕಾರ್ಯಕರ್ತರ ಒತ್ತಡ ಇದ್ದರೂ ಅದನ್ನು ತೀರ್ಮಾನ ಮಾಡೋದು ನಿಖಿಲ್. ನಿಖಿಲ್ ಕುಮಾರಸ್ವಾಮಿ ಕೂಡ ಈ ಬಗ್ಗೆ ನನ್ನ ಜೊತೆ ಅನೇಕ ಬಾರಿ ಮಾತನಾಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಬೇಡ, ಸಂಘಟನೆ ಮಾಡಬೇಕು ಎಂದಿದ್ದಾರೆ. ಕುಮಾರಸ್ವಾಮಿ ಕೂಡ ದೆಹಲಿಯಲ್ಲಿ ಇರುತ್ತಾರೆ. ಇರೋ ಮೂರೂವರೆ ವರ್ಷದಲ್ಲಿ ನಿಖಿಲ್ ಪಕ್ಷ ಸಂಘಟನೆ ಮಾಡಬೇಕು. ಹಾಗಾಗಿ ವೈಯಕ್ತಿಕವಾಗಿ ಚುನಾವಣೆಗೆ ಆಸಕ್ತಿ ಇಲ್ಲ ಎಂದಿದ್ದಾರೆ. ಈ ಬಗ್ಗೆ ನಿಖಿಲ್ ಅನೇಕ ಬಾರಿ ಚರ್ಚೆ ಮಾಡಿದ್ದಾರೆ. ಮೈತ್ರಿ ಪಕ್ಷ ಏನು ತೀರ್ಮಾನ ಮಾಡುತ್ತೋ ನೋಡೊಣ ಎಂದು ತಿಳಿಸಿದರು. ಇದನ್ನೂ ಓದಿ: Lokmanya Tilak Express | ಇಂಜಿನ್‌ ಸೇರಿ ಹಳಿತಪ್ಪಿದ 8 ಬೋಗಿಗಳು

  • ದರ್ಶನ್ ಪ್ರಕರಣದಿಂದ ನಾವೆಲ್ಲ ತಲೆ ತಗ್ಗಿಸುವಂತಾಗಿದೆ: ಸಾ.ರಾ ಮಹೇಶ್

    ದರ್ಶನ್ ಪ್ರಕರಣದಿಂದ ನಾವೆಲ್ಲ ತಲೆ ತಗ್ಗಿಸುವಂತಾಗಿದೆ: ಸಾ.ರಾ ಮಹೇಶ್

    ಮೈಸೂರು: ನಟ ದರ್ಶನ್ ನಮ್ಮ ಜಿಲ್ಲೆಯವರು, ಸಾಕಷ್ಟು ಹೆಸರು ಮಾಡಿದ್ದಾರೆ. ಆದರೆ ಈ ಘಟನೆಯಿಂದ ನಾವೆಲ್ಲ ತಲೆ ತಗ್ಗಿಸುವಂತಾಗಿದೆ ಎಂದು ಮಾಜಿ ಸಚಿವ ಸಾರಾ ಮಹೇಶ್ (Sara Mahesh) ಹೇಳಿದ್ದಾರೆ.

    ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಬಂಧನ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ನಮ್ಮ ಜಿಲ್ಲೆಯವರು. ಸಾಕಷ್ಟು ಎತ್ತರಕ್ಕೆ ಬೆಳೆದು ಒಳ್ಳೆಯ ಹೆಸರು ಮಾಡಿದ್ದರು. ಆದರೆ ಇದೀಗ ಘಟನೆಯಿಂದ ನಾವೆಲ್ಲ ತಲೆ ತಗ್ಗಿಸುವಂತಾಗಿದೆ. ಪ್ರಕರಣದಿಂದ ವೈಯಕ್ತಿಕವಾಗಿ ನನಗೆ ನೋವಾಗಿದೆ. ಈ ರೀತಿಯ ಘಟನೆ ನಡೆಯಬಾರದಿತ್ತು ಎಂದರು.

    ರಾಜ್‍ಕುಮಾರ್, ಯಶ್, ಸುದೀಪ್, ಶಿವಕುಮಾರ್ ಇವರೆಲ್ಲರಿಗೂ ಅಭಿಮಾನಿಯಾಗಿದ್ದೆ. ದರ್ಶನ್ ನಮ್ಮ ಜಿಲ್ಲೆಯವರು ಎನ್ನುವ ಕಾರಣಕ್ಕೆ ಅವೆ ಮೇಲೆ ವಿಶೇಷ ಅಭಿಮಾನ ಇತ್ತು. ದರ್ಶನ್‍ಗೆ ಸಾಕಷ್ಟು ಜನ ಅಭಿಮಾನಿಗಳು ಇದ್ದಾರೆ. ನನಗೆ ಅಭಿಮಾನ ಅಷ್ಟೇ ಅಲ್ಲ, ವೈಯಕ್ತಿಕವಾಗಿ ಕೂಡ ಸಾಕಷ್ಟು ಬಾರಿ ಮಾತನಾಡಿಸಿದ್ದೆ ಎಂದು ಹೇಳಿದರು.

    ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿರುವುದು ಸತ್ಯವೇ ಆದರೆ ತಕ್ಕ ಶಿಕ್ಷೆ ಆಗಲಿ ಎಂದು ಸಾರಾ ಮಹೇಶ್ ತಿಳಿಸಿದರು. ಇದನ್ನೂ ಓದಿ: ದರ್ಶನ್‌ ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಜೈಲಿಗೆ

  • ಕಿಡ್ನಾಪ್ ಪ್ರಕರಣದಲ್ಲಿ FIR ಮುನ್ನವೇ ಸತೀಶ್ ಬಾಬು ವಶಕ್ಕೆ- ಸಾರಾ ಮಹೇಶ್ ಹೊಸ ಬಾಂಬ್

    ಕಿಡ್ನಾಪ್ ಪ್ರಕರಣದಲ್ಲಿ FIR ಮುನ್ನವೇ ಸತೀಶ್ ಬಾಬು ವಶಕ್ಕೆ- ಸಾರಾ ಮಹೇಶ್ ಹೊಸ ಬಾಂಬ್

    ಮೈಸೂರು: ಮಹಿಳೆ ಕಿಡ್ನಾಪ್ (Woman Kidnap Case) ಪ್ರಕರಣದಲ್ಲಿ ಎಫ್‍ಐಆರ್ ದಾಖಲಾಗುವ ಮುನ್ನವೇ ಸತೀಶ್ ಬಾಬುವನ್ನು ವಶಕ್ಕೆ ಪಡೆದಿದ್ದಾರೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ (SaRa Mahesh) ಹೊಸ ಬಾಂಬ್ ಸಿಡಿಸಿದ್ದಾರೆ.

    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಎಫ್‍ಐಆರ್ ಆಗುತ್ತೆ ಎಂದು ಇವರಿಗೆ ಕನಸು ಬಿದ್ದಿತ್ತಾ..?. ರಾತ್ರಿ 9.5 ರ ಸುಮಾರಿಗೆ ಎಫ್‍ಐಆರ್ ಆಗಿದೆ. ಆದರೆ ಮಧ್ಯಾಹ್ನ 12 ಗಂಟೆಗೆ ಸತೀಶ್ ಬಾಬುರನ್ನ ಕರೆದುಕೊಂಡು ಹೋಗಿದ್ದಾರೆ. ಬೇಕರಿಯೊಂದರ ಸಿಸಿ ಕ್ಯಾಮೆರಾದಲ್ಲಿ ಇದು ಸೆರೆಯಾಗಿದೆ. ಇದು ಗೊತ್ತಾಗುತ್ತಿದ್ದಂತೆ ಬೇಕರಿಯ ಹಾರ್ಡ್ ಡಿಸ್ಕ್ ತೆಗೆದುಕೊಂಡು ಹೋಗಿ ಈಗ ಡಿಲೀಟ್ ಮಾಡಿ ಕೊಟ್ಟಿದ್ದಾರೆ ಎಂದರು.

    ಆದರೆ ಈ ದೃಶ್ಯಗಳನ್ನು ಮತ್ತೊಬ್ಬ ಮೊಬೈಲ್ ವೀಡಿಯೋ ಮಾಡಿ ಅದನ್ನ ಬೇರೊಬ್ಬರಿಗೆ ಕಳುಹಿಸಿದ್ದಾನೆ. ಇದನ್ನು ಇಂದು ನಮ್ಮ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಇದಕ್ಕಾಗಿ ಮೈಸೂರಿನಿಂದ ಸಬ್ ಇನ್ಸ್ ಪೆಕ್ಟರ್ ಆಲ್ಟೊ ಕಾರಿನಲ್ಲಿ ಹೋಗಿದ್ದರು. ಇದೆಲ್ಲ ದಾಖಲೆಗಳು ನಮ್ಮ ಬಳಿ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಿಡ್ನ್ಯಾಪ್‌ ಕೇಸ್‌ಗೆ ಟ್ವಿಸ್ಟ್; ಭವಾನಿ ಅಕ್ಕ, ರೇವಣ್ಣ, ಪ್ರಜ್ಜು ಅಣ್ಣನಿಂದ ಏನೂ ತೊಂದ್ರೆ ಆಗಿಲ್ಲವೆಂದ ಸಂತ್ರಸ್ತೆ!

    ದೂರು ಕೊಟ್ಟ ಹುಡುಗ ಅಮಾಯಕ. ಆತನಿಗೆ ಹಣ ಕೊಟ್ಟು ಖಾಲಿ ಪೇಪರ್ ನಲ್ಲಿ ಸಹಿ ಪಡೆದಿದ್ದಾರೆ. ದೂರು ಕೊಟ್ಟ ಯುವಕ ಎಲ್ಲಿದ್ದಾನೆ. ಈವರೆಗೂ ಆತ ಎಲ್ಲಿ ಹೋಗಿದ್ದಾನೆ ಎಂದು ಗೊತ್ತಿಲ್ಲ. ಆ ಮಹಿಳೆ ಬಳಿಯೂ ಈವರೆಗೂ 164 ಹೇಳಿಕೆ ಏಕೆ ದಾಖಲಿಸಿಲ್ಲ. ಕುರಿ ಮೇಯಿಸುತ್ತಿದ್ದರು ಎಂದು ತೋಟದಲ್ಲಿದ್ದವರು ಹೇಳಿದ್ದಾರೆ. ಆಕೆ ಅಲ್ಲಿ ಹೋಗಿದ್ದು ಸತ್ಯ. ಕುರಿ ಮೇಯಿಸುತ್ತಿದ್ದ ಮೇಲೆ ಕಿಡ್ನಾಪ್ ಹೇಗೆ ಆಗುತ್ತದೆ ಎಂದು ಮಾಜಿ ಸಚಿವರು ಪ್ರಶ್ನಿಸಿದ್ದಾರೆ.

  • ಸಂತ್ರಸ್ತೆಯನ್ನು ತೋಟದ ಮನೆಯಿಂದ ರಕ್ಷಿಸಿದ್ದು ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಾರಾ ಮಹೇಶ್

    ಸಂತ್ರಸ್ತೆಯನ್ನು ತೋಟದ ಮನೆಯಿಂದ ರಕ್ಷಿಸಿದ್ದು ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಾರಾ ಮಹೇಶ್

    ಮೈಸೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ (H.D Revanna) ಕಿಡ್ನಾಪ್ ಮಾಡಿದ್ದಾರೆ ಎನ್ನಲಾದ ಮಹಿಳೆಯ ತೋಟದ ಮನೆಯಲ್ಲಿ ಸಿಕ್ಕಿಲ್ಲ ಎಂದು ಶಾಸಕ ಸಾರಾ ಮಹೇಶ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

    ಇಂದು ಮೈಸೂರಿನಲ್ಲಿ ಮಾಜಿ ಸಚಿವ ಜಿ.ಟಿ. ದೇವೇಗೌಡ (G.T Devegowda), ಶಾಸಕ ಸಾರಾ ಮಹೇಶ್ (Sara Mahesh) ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕರು, ರೇವಣ್ಣ ವಿರುದ್ಧ ಕೆ.ಆರ್. ನಗರದಲ್ಲಿ ಕೇಸ್ ದಾಖಲು ಆಗವುದಕ್ಕೆ ಮುಂಚೆಯೇ ಮಾಧ್ಯಮಗಳಿಗೆ ಹೇಗೆ ಗೊತ್ತಾಯ್ತು? ತೋಟದಲ್ಲಿ ಆ ಮಹಿಳೆ ಇದ್ದರು ಎಂಬುದರ ಒಂದು ವೀಡಿಯೋ ಯಾಕೆ ಬಂದಿಲ್ಲ?. ಅಷ್ಟಕ್ಕೂ ಸಂತ್ರಸ್ತ ಮಹಿಳೆ ತೋಟದಲ್ಲಿ ಸಿಕ್ಕಿಲ್ಲ. ಹುಣಸೂರಿನ ಕರಿಗೌಡ ರಸ್ತೆಯಲ್ಲಿರುವ ಸಂತ್ರಸ್ತೆಯ ಸಂಬಂಧಿ ಮನೆಯಿಂದ ಆಕೆಯನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

    ರಾಜಗೋಪಾಲ್ ತೋಟದಿಂದ ಸಂತ್ರಸ್ತ ಮಹಿಳೆಯನ್ನು ರಕ್ಷಿಸಿದ್ದು ಸಾಬೀತು ಮಾಡಿದ್ರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಈ ಕ್ಷಣವೇ ಜೆಡಿಎಸ್ ಗೂ ರಾಜೀನಾಮೆ ಕೊಡುತ್ತೇನೆ ಎಂದು ಸವಾಲೆಸೆದರು. ಇದನ್ನೂ ಓದಿ: ವೀಡಿಯೋದಲ್ಲಿ ನಮ್ಮ ಕುಟುಂದವರೇ ಇದ್ದರೂ ರಕ್ಷಣೆ ಮಾಡಲ್ಲ: ಹೆಚ್‍ಡಿಕೆ

    ಪೆನ್ ಡ್ರೈವ್ ಹಂಚಿದವರನ್ನು ಯಾಕೆ ಇನ್ನೂ ಬಂಧಿಸಿಲ್ಲ. ಎಸ್‍ಐಟಿಯಲ್ಲಿ ಇರುವ ಕೆಲ ಅಧಿಕಾರಿಗಳು ಕಾಂಗ್ರೆಸ್‍ನ ಕೈ ಗೊಂಬೆ ರೀತಿ ವರ್ತಿಸುತ್ತಿದ್ದಾರೆ. ಜೆಡಿಎಸ್ ಮುಖಂಡರನ್ನು ಹತ್ತಿಕುವ ಕೆಲಸ ಈ ಪ್ರಕರಣದ ಮೂಲಕ ಆಗ್ತಿದೆ. ಸಂತ್ರಸ್ತ ಮಹಿಳೆಯನ್ನು ಇನ್ನೂ ಯಾಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ?. ಆ ಸಂತ್ರಸ್ತ ಮಹಿಳೆಯನ್ನು ಎಲ್ಲಿಗೆ ಕರೆದುಕೊಂಡು ಹೋಗಿದ್ದಿರಾ?. ಎಸ್‍ಐಟಿ ಅಧಿಕಾರಿಗಳನ್ನು ಇಟ್ಟುಕೊಂಡು ನಮ್ಮ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

    ಡಿಕೆಶಿ ಅಪ್ಪಣೆ ಪಡೆದು ಕಾರ್ತಿಕ್ ಪೆನ್‍ಡ್ರೈವ್ ಹಂಚಿಕೆ: ಇದೇ ಮಾತನಾಡಿದ ಜಿಟಿಡಿ, ಡ್ರೈವರ್ ಕಾರ್ತಿಕ್ ನನ್ನು ಹೊರ ದೇಶಕ್ಕೆ ಕಳಿಸಿದ್ದು ಕಾಂಗ್ರೆಸಿಗರು. ಡಿ.ಕೆ ಶಿವಕುಮಾರ್ ಅಪ್ಪಣೆ ಪಡೆದು ಕಾರ್ತಿಕ್ ಪೆನ್ ಡ್ರೈವ್ ಹಂಚಿದ್ದಾನೆ. ಯಾರನ್ನು ಬಂಧಿಸಬೇಕು, ಯಾರನ್ನು ಎ.1 ಮಾಡಬೇಕು ಯಾರನ್ನು ಎ. 2 ಮಾಡಬೇಕು ಎಂಬ ನಿರ್ದೇಶನ ಸಿಎಂ ಹಾಗೂ ಡಿಸಿಎಂ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಹಾಲಿ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆ ಆಗಬೇಕು. ಡಿಸಿಎಂ ಈ ವಿಚಾರದಲ್ಲಿ ಸಂಪೂರ್ಣ ನೇತೃತ್ವ ವಹಿಸಿದ್ದಾರೆ. ಅವರು ಇದರಲ್ಲಿ ತಪ್ಪಿಸ್ಥರ ರೀತಿ ಕಾಣುತ್ತಿದ್ದಾರೆ. ಡಿಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವೇ ಸರಕಾರ ಅವರನ್ನು ವಜಾ ಮಾಡಲಿ ಎಂದು ಆಗ್ರಹಿಸಿದರು.

  • ನಾನು ಆಕಾಂಕ್ಷಿಯಲ್ಲ, ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ- ಸಾರಾ ಮಹೇಶ್ ವೈರಾಗ್ಯದ ಮಾತು

    ನಾನು ಆಕಾಂಕ್ಷಿಯಲ್ಲ, ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ- ಸಾರಾ ಮಹೇಶ್ ವೈರಾಗ್ಯದ ಮಾತು

    ಮೈಸೂರು: ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸಾರಾ ಮಹೇಶ್ (Sara Mahesh) ಕಣಕ್ಕೆ ಇಳಿಯುತ್ತಾರೆ ಎಂಬ ಮಾತು ಕಳೆದ ನಾಲ್ಕು ದಿನಗಳಿಂದ ದಟ್ಟವಾಗಿ ಶುರುವಾಗಿತ್ತು. ಈ ಹಬ್ಬಿದ ವೇಗದಲ್ಲೇ ಈ ಮಾತನ್ನು ಖುದ್ದು ಸಾರಾ ಮಹೇಶ್ ಕಡಿಮೆ ಮಾಡುವ ಮಾತಾಡಿದ್ದಾರೆ. ಅಷ್ಟು ಮಾತ್ರವಲ್ಲ ತಮಗೆ ಚುನಾವಣಾ ರಾಜಕೀಯವೇ ಸಾಕಾಗಿದೆ ಎಂಬ ರೀತಿ ವೈರಾಗ್ಯದ ಮಾತನ್ನು ಹೇಳಿ ಅಚ್ಚರಿ ಮೂಡಿಸಿದ್ದಾರೆ.

    ನಾನು ಲೋಕಸಭಾ ಚುನಾವಣೆಯ (Loksabha Elections 2024) ಆಕಾಂಕ್ಷಿಯಲ್ಲ. ನಾನು ಆರ್ಥಿಕವಾಗಿ, ದೈಹಿಕವಾಗಿ, ಮಾನಸಿಕವಾಗಿ ಕುಸಿದಿದ್ದೇನೆ. ನನಗೆ ರೆಸ್ಟ್ ಬೇಕಿದೆ. ಹೀಗಾಗಿ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದು ಸ್ಪಷ್ಟವಾಗಿ ಹೇಳುವ ಮೂಲಕ ವಿಧಾನಸಭಾ ಚುನಾವಣೆಯ ಸೋಲು ತಮ್ಮನ್ನು ಮಾನಸಿಕವಾಗಿ ಕುಗ್ಗಿಸಿದೆ ಎಂಬುದನ್ನು ಬಹಿರಂಗವಾಗಿಯೆ ಒಪ್ಪಿಕೊಂಡಿದ್ದಾರೆ.

    ಇದೇ ವೇಳೆ ನರೇಂದ್ರ ಮೋದಿ ಮತ್ತೊಮ್ಮೆ ಪಿಎಂ ಆಗಬೇಕು. ಸಂಸದ ಪ್ರತಾಪ್ ಸಿಂಹ 10 ವರ್ಷ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ಮುಖಂಡರು ನನ್ನ ಅಭ್ಯರ್ಥಿಯಾಗುವ ವಿಚಾರದಲ್ಲಿ ಸಂಪರ್ಕಿಸಿದ್ದಾರೆ ಎಂಬುದೆಲ್ಲಾ ಊಹಾಪೋಹ ಎನ್ನುವ ಮೂಲಕ ಪ್ರತಾಪ್ ಸಿಂಹ ಪರವೂ ಬ್ಯಾಟ್ ಬೀಸಿದ್ದಾರೆ.

    ಸದ್ಯಕ್ಕೆ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರದಲ್ಲಿ ಊಹಾಪೋಹಗಳದ್ದೇ ಕಾರುಬಾರು. ಆದ್ರೆ ಸಾರಾ ಮಹೇಶ್ ಬ್ರೇಕ್ ಹಾಕಿ ಗಾಸಿಪ್‍ಗಳು ಹುಟ್ಟುವುದನ್ನು ಕಡಮೆ ಮಾಡಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ – ಬಿಜೆಪಿ ನಾಯಕರ ವಿರುದ್ಧ ನಲಪಾಡ್ ದೂರು

  • ಪ್ರಕಟಿಸಿದ ಫೋಟೋಗಳು ಸ್ಯಾಂಪಲ್‌ ಅಷ್ಟೇ: ರೋಹಿಣಿ ವಿರುದ್ಧ ರೂಪಾ ಕೆಂಡ

    ಪ್ರಕಟಿಸಿದ ಫೋಟೋಗಳು ಸ್ಯಾಂಪಲ್‌ ಅಷ್ಟೇ: ರೋಹಿಣಿ ವಿರುದ್ಧ ರೂಪಾ ಕೆಂಡ

    ಬೆಂಗಳೂರು: ರೋಹಿಣಿ ಸಿಂಧೂರಿಯ (Rohin Sindhuri) ಫೋಟೋ ಪ್ರಕಟ ಮಾಡಿದ್ದು ಕೇವಲ ಸ್ಯಾಂಪಲ್‌ ಅಷ್ಟೇ. ಅವರು ಕಳುಹಿಸಬಾರದಂತಹ ಫೋಟೋಗಳನ್ನು ಕೆಲ ಐಎಎಸ್ ಅಧಿಕಾರಿಗಳಿಗೆ (IAS Officer) ಕಳುಹಿಸಿದ್ದಾರೆ ಎಂದು ಐಪಿಎಸ್‌ ಅಧಿಕಾರಿ ರೂಪಾ (Roopa IPS) ಸ್ಫೋಟಕ ಆರೋಪ ಮಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ರೂಪಾ, ಐಎಎಸ್‌ ಜವಾಬ್ದಾರಿಯುತ ಹುದ್ದೆಯಾಗಿದೆ. ಹೀಗಿರುವಾಗ ಸ್ಪಾ, ತಲೆ ದಿಂಬಿನ ಫೋಟೋ ಕಳುಹಿಸುತ್ತಾರೆ ಅಂದರೆ ಏನು ಅರ್ಥ? ಒಂದು ತಿಂಗಳ ಹಿಂದೆ ನನಗೆ ಫೋಟೋ ಸಿಕ್ಕಿದ್ದು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ತನಿಖೆ ನಡೆಯುತ್ತದೆ. ಕ್ರಮ ಏನಾಗುತ್ತದೆ ಎಂದು ಕಾದು ನೋಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮನುಷ್ಯತ್ವ ಇರೋರು ಜನ ಸಾಯುತ್ತಿದ್ದಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ –  ರೋಹಿಣಿ ವಿರುದ್ಧ ರೂಪಾ ಕಿಡಿ

    ಗೌರವಾನ್ವಿತ ಶಾಸಕರ ಜೊತೆ ರೋಹಿಣಿ ಸಿಂಧೂರಿ ಸಂಧಾನಕ್ಕೆ ಹೋಗಿದ್ದಾರೆ ಎಂದರೆ ಏನು ಅರ್ಥ? ರೋಹಿಣಿ ಸಿಂಧೂರಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ (ಸಿಎಟಿ) ಮೊರೆ ಹೋದಾಗ ಅದರ ಕರಡನ್ನು ಬರೆದುಕೊಟ್ಟವರು ನನ್ನ ಪತಿ. ಆರಂಭದಲ್ಲಿ ಇವರ ನಡವಳಿಕೆ ಹೇಗಿತ್ತು ಗೊತ್ತಿಲ್ಲ. ಸಂಧಾನ ವಿಷಯ ಬಂದಾಗ ಮೈ ಉರಿದು ಹೋಯ್ತು. ಜನ ಸಾಯುತ್ತಿದ್ದರೂ ತನ್ನ ಮೋಜಿಗೆ ಸ್ವಿಮ್ಮಿಂಗ್‍ಪೂಲ್ ಮಾಡಿಸಿಕೊಂಡರು ಅಂದರೆ ಏನರ್ಥ? ಆಕೆಗೆ ಮಾನವೀಯತೆ ಇದೆಯೇ ಎಂದು ನೇರವಾಗಿಯೇ ಪ್ರಶ್ನಿಸಿದರು. ಇದನ್ನೂ ಓದಿ: ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟು – ನಮ್ಮ ದೇಶ ದಿವಾಳಿಯಾಗಿದೆ ಎಂದ ರಕ್ಷಣಾ ಸಚಿವ

    ನಾನು ನಮ್ಮ ಮನೆಯವರು ಸಾಕಷ್ಟು ಸಹಾಯ ಮಾಡಿದ್ದೇವೆ. ಆದರೆ ಬರ ಬರುತ್ತಾ ಆಕೆಯ ವರ್ತನೆ ಸರಿ ಇಲ್ಲ ಎನ್ನುವುದು ಗೊತ್ತಾಯಿತು. ಆಕೆ ಪ್ರೊಬೇಷನರಿ ಅವಧಿಯಲ್ಲಿದ್ದಾಗ ಜಿಲ್ಲಾಧಿಕಾರಿ ಹಾಗೂ ಅವರ ಪತ್ನಿಯ ಸಂಬಂಧ ಹಾಳಾಗಿದೆ. ಇದರ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿದ್ಯಾರ್ಥಿಯಿಂದ ಅವಾಚ್ಯ ಪೋಸ್ಟ್- ಕಾಲೇಜು ವೇದಿಕೆಯಲ್ಲೇ ಕಣ್ಣೀರಿಟ್ಟ ಸಾ.ರಾ ಮಹೇಶ್

    ವಿದ್ಯಾರ್ಥಿಯಿಂದ ಅವಾಚ್ಯ ಪೋಸ್ಟ್- ಕಾಲೇಜು ವೇದಿಕೆಯಲ್ಲೇ ಕಣ್ಣೀರಿಟ್ಟ ಸಾ.ರಾ ಮಹೇಶ್

    ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಕಾರ್ಯ ವೈಖರಿ ಬಗ್ಗೆ ಅವಾಚ್ಯ ಪದಗಳಲ್ಲಿ ವಿದ್ಯಾರ್ಥಿ ಪ್ರಶ್ನೆ ಮಾಡಿದ ಹಿನ್ನೆಲೆಯಲ್ಲಿ ಕಾಲೇಜು ವೇದಿಕೆಯಲ್ಲಿ ಶಾಸಕ ಸಾರಾ ಮಹೇಶ್ ಕಣ್ಣೀರು ಹಾಕುತ್ತಾ ಎಚ್ಚರಿಕೆ ನೀಡಿದ್ದಾರೆ.

    ಮೈಸೂರು ಜಿಲ್ಲೆಯ ಕೆ.ಆರ್. ನಗರ ಕ್ಷೇತ್ರದ ಸರಕಾರಿ ಕಾಲೇಜು ಕಟ್ಟಡ ಉದ್ಘಾಟನೆ ವಿಚಾರವಾಗಿ ಅವಹೇಳಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿ ಪೋಸ್ಟ್ ಹಾಕಿದ್ದ. ಕಾಲೇಜು ಕಟ್ಟಡ ಉದ್ಘಾಟಿಸಿ ಕಾಲೇಜು ವೇದಿಕೆಯಲ್ಲೇ ಕಣ್ಣೀರು ಹಾಕಿದ ಶಾಸಕ ಸಾ.ರಾ. ಮಹೇಶ್, ವಿದ್ಯಾರ್ಥಿ ಹಾಕಿದ್ದ ಪೋಸ್ಟ್ ಓದುತ್ತಾ ವಿದ್ಯಾರ್ಥಿಗೆ ಎಚ್ಚರಿಕೆ ನೀಡಿದರು. ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದರೂ ಯಾಕೆ ಈ ರೀತಿ ಮಾತನಾಡುತ್ತೀರಾ ಎಂದು ಪ್ರಶ್ನಿಸಿದ್ದಾರೆ.

    ಇಂತಹ ಆಯೋಗ್ಯನನ್ನು ಇಟ್ಟುಕೊಂಡಿದ್ದರಲ್ಲ ಎಂದು ಪ್ರಾಂಶುಪಾಲರಿಗೆ ಪ್ರಶ್ನಿಸಿದರು. ನಾನು ಮನಸ್ಸು ಮಾಡಿದ್ರೆ ಸಸ್ಪಂಡ್ ಮಾಡಿಸುತ್ತಿದ್ದೆ. ನಮ್ಮ ಅಪ್ಪ-ಅಮ್ಮ ನನಗೆ ಸಂಸ್ಕಾರ ಕಲಿಸಿದ್ದಾರೆ. ನಾನು ನಿಮ್ಮ ಜಾತಿಯವನಲ್ಲ ಎಂಬ ಕಾರಣಕ್ಕೆ ಕೆಟ್ಟ ಪದ ಉಪಯೋಗಿಸಿದ್ದೀರಾ. ನನಗೂ ಸ್ವಾಭಿಮಾನ ಇದೆ. ಪ್ರತಿ ನಿತ್ಯ ಟಿಫನ್ ಬಾಕ್ಸ್ ತೆಗೆದುಕೊಂಡು ಹೋಗುವ ಮೂಲಕ ವಿದ್ಯಾರ್ಥಿಗಳ ರೀತಿ ಕೆಲಸ ಮಾಡುತ್ತಿದ್ದೇನೆ. ಇಷ್ಟೆಲ್ಲ ಕೆಲಸ ಮಾಡಿದ್ದೇನೆ. ಮನಃಸಾಕ್ಷಿ ಬೇಡ ನಿಮಗೆ ಎಂದು ಕಣ್ಣೀರು ಹಾಕುತ್ತಾ ಪ್ರಶ್ನಿಸಿದರು. ಇದನ್ನೂ ಓದಿ: ನಾಳೆಯಿಂದ ಲಾಲ್‌ಬಾಗ್‌ನಲ್ಲಿ ಅಪ್ಪು ನೆನಪಿನ ಫಲಪುಷ್ಪ ಪ್ರದರ್ಶನ

    ನಾನು ನಿಮಗೆ ಏನು ಅನ್ಯಾಯ ಮಾಡಿದ್ದೇನೆ. ಜಿಲ್ಲಾ ಪಂಚಾಯ್ತಿಯಲ್ಲಿ ಮೂರು ಬಾರಿ ಗೆದ್ದು ಏನೇನು ಮಾಡಿದ್ದಾನೆ ಅಂತ ಕೇಳು ಹೋಗಿ, ಹುಷಾರ್ ಎಂದು ಪರೋಕ್ಷವಾಗಿ ಕಾಂಗ್ರೆಸ್ ಮುಖಂಡ ಡಿ.ರವಿಶಂಕರ್ ವಿರುದ್ಧ ವಾಗ್ದಾಳಿ ನಡೆಸಿದರು. ನನಗೂ ಇವನಷ್ಟುದ್ದದ ಮಗನಿದ್ದಾನೆ. ಮೊದಲನೇಯವನು ಅವರ ಅಮ್ಮನ ರೀತಿ ಒಳ್ಳೆಯವನು. ಎರಡನೇಯವನು ನನ್ ಥರಾ ಕೆಟ್ಟವನು ಹುಷಾರ್ ಎಂದು ಹೇಳಿದರು.

    ನನಗೆ ಬೈರಿ, ನನ್ನ ತಾಯಿಗೆ ಬೈದ್ರೆ ಹೇಗೆ ಎಂದು ಪ್ರಶ್ನಿಸಿದರು. ಎಷ್ಟು ನೋಯಿಸಿದ್ರು ಅಷ್ಟೇ ಪಣ್ಯಾತ್ಮರು ನನ್ನ ಕೈ ಹಿಡಿಯುತ್ತಾರೆ. ನಿನ್ನಂತವರು ಎಷ್ಟು ಬೊಗಳಿದ್ರು ನಾನು ಏನೂ ಆಗಲ್ಲ. ನಾನು ಹುಟ್ಟುತ್ತಲೇ ಶ್ರೀಮಂತ ಅಲ್ಲ, ಸೈಕಲ್ ಹೊಡ್ಕೊಂಡೆ ಬೆಳೆದದ್ದು. ದೇವರು ನನ್ನ ಚೆನ್ನಾಗಿ ಇಟ್ಟಿದ್ದಾನೆ. ವಿದ್ಯಾರ್ಥಿಗಳು ಸೈಕಲ್ ಮತ್ತು ಸ್ಕೂಟರ್ ಗಳನ್ನ ಸ್ಟ್ಯಾಂಡ್ ನಲ್ಲೇ ನಿಲ್ಲಿಸಬೇಕು. ಕಾಲೇಜಿನ ಕಾರಿಡಾರ್ ನಲ್ಲಿ ಕಂಡ್ರೆ ನೀವ್ ಹುಬ್ಬಳ್ಳಿ, ಅಥವಾ ಧಾರವಾಡದಲ್ಲಿರ್ತೀರಾ ಎಂದು ಹೇಳುತ್ತಾ ವೇದಿಕೆಯಲ್ಲೇ ಪ್ರಾಂಶುಪಾಲರಿಗೆ ಎಚ್ಚರಿಕೆ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ಅಂದು ಕಿತ್ತಾಡಿಕೊಂಡಿದ್ದ ಸಾರಾ ಮಹೇಶ್, ಎಚ್. ವಿಶ್ವನಾಥ್ ಇಂದು ದೋಸ್ತಿಗಳು

    ಅಂದು ಕಿತ್ತಾಡಿಕೊಂಡಿದ್ದ ಸಾರಾ ಮಹೇಶ್, ಎಚ್. ವಿಶ್ವನಾಥ್ ಇಂದು ದೋಸ್ತಿಗಳು

    ಮೈಸೂರು: ಒಂದು ವರ್ಷದ ಹಿಂದೆ ನಾನಾ-ನೀನಾ ಎಂದು ಪರಸ್ಪರ ದಿನವೂ ಕಿತ್ತಾಡಿಕೊಂಡು ಆಣೆ ಪ್ರಮಾಣ ಮಾಡಲು ಹೊರಟಿದ್ದ ಮೈಸೂರಿನ ಎಚ್.ವಿಶ್ವನಾಥ್ ಹಾಗೂ ಸಾರಾ ಮಹೇಶ್ ಈಗ ದೋಸ್ತಿಗಳು.

    ಹೌದು, ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣಕ್ಕೆ ಹೋಗಿದ್ದ ಸಾರಾ ಮಹೇಶ್ ಈಗ ಎಚ್. ವಿಶ್ವನಾಥ್ ಅವರ 75ನೇ ವರ್ಷದ ಹುಟ್ಟುಹಬ್ಬ ಆಚರಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಕೆ.ಆರ್. ನಗರದಲ್ಲಿ ಎರಡು ದಿನ ಅದ್ಧೂರಿಯಾಗಿ ಎಚ್. ವಿಶ್ವನಾಥ್ ಹುಟ್ಟುಹಬ್ಬ ನಡೆಯಲಿದೆ. ಈ ಸಮಾರಂಭ ಆಯೋಜನೆಗೆ ಸಾರಾ ಮಹೇಶ್ ಅಧ್ಯಕ್ಷರಾಗಿ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಇದನ್ನೂ ಓದಿ: ಆಣೆ ಪ್ರಮಾಣವಾದ 1 ವರ್ಷಕ್ಕೆ ನ್ಯಾಯದೇವತೆಯಿಂದ ವಿಶ್ವನಾಥ್‌ಗೆ ಶಿಕ್ಷೆ – ಸಾರಾ ಮಹೇಶ್‌

    H. Vishwanath

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಾರಾ ಮಹೇಶ್, ಇದು ರಾಜಕೀಯ ದೋಸ್ತಿಯಲ್ಲ. ಮಾನವೀಯವಾದ ಸ್ನೇಹ. ಎಚ್. ವಿಶ್ವನಾಥ್ ಕೆ.ಆರ್. ನಗರದ ಹಿರಿಯ ರಾಜಕಾರಣಿ. ಅವರ 75ನೇ ಹುಟ್ಟುಹಬ್ಬ ಮಾಡುವುದು ನಮ್ಮ ಕರ್ತವ್ಯ ಇದರಲ್ಲಿ ರಾಜಕಾರಣ ಇಲ್ಲ. ನಮ್ಮಷ್ಟು ರಾಜಕೀಯವಾಗಿ ಕಿತ್ತಾಡಿಕೊಂಡವರು ಯಾರು ಇಲ್ಲ. ಅಷ್ಟು ಬೈಯ್ದಾಡಿಕೊಂಡಿದ್ದೇವೆ. ಆದರೆ, ಇದು ಸ್ನೇಹ ಪೂರ್ವಕವಾಗಿ ಸಮಾರಂಭ ಮಾಡುತ್ತಿದ್ದೇವೆ. ರಾಜಕಾರಣದ ಬಂದಾಗ ಮತ್ತೆ ಹೇಳಿಕೆ ಪ್ರತಿ ಹೇಳಿಕೆ ಇರುತ್ತದೆ ಎಂದರು. ಇದನ್ನೂ ಓದಿ: ಮಸೀದಿಗಳಿಗೆ ಶ್ರೀರಾಮುಲು ದೇಣಿಗೆ- ಇದು ಓಲೈಕೆ ರಾಜಕಾರಣ ಎಂದ ಮುಸ್ಲಿಮರು

  • ಹಳೆ ಮೈಸೂರು ಭಾಗದಲ್ಲಿ ಇನ್ನೂ ಜೆಡಿಎಸ್ ಶಕ್ತಿ ಇದೆ: ಸಾರಾ ಮಹೇಶ್

    ಹಳೆ ಮೈಸೂರು ಭಾಗದಲ್ಲಿ ಇನ್ನೂ ಜೆಡಿಎಸ್ ಶಕ್ತಿ ಇದೆ: ಸಾರಾ ಮಹೇಶ್

    ಮೈಸೂರು: ಸಂದೇಶ್ ನಾಗರಾಜ್ ಕುಟುಂಬಕ್ಕೆ ಜೆಡಿಎಸ್ ಯಾವುದೇ ಮೋಸ ಮಾಡಿಲ್ಲ. ಅವರು ಯಾಕೆ ನಮ್ಮ ಪಕ್ಷವನ್ನು ದೂರುತ್ತಿದ್ದಾರೆ ಗೊತ್ತಿಲ್ಲ ಎಂದು ಜೆಡಿಎಸ್‌ನ ಮಾಜಿ ಸಚಿವ ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.

    ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ ಯಾರೂ ಅನಿವಾರ್ಯವಲ್ಲ. ಜೆಡಿಎಸ್ ನಮಗೆ ಅನಿವಾರ್ಯ. ಹಾಗೆಯೇ ನಮಗೇ ಹೆಚ್.ಡಿ ದೇವೆಗೌಡರೇ ಯಾವತ್ತಿದ್ದರೂ ನಾಯಕ. ನೀವು ನೆನಪಿಟ್ಟುಕೊಳ್ಳಿ ಪಕ್ಷದ ಕಾರ್ಯಕರ್ತರ ದುಡಿಮೆಯಿಂದ ನೀವು ಶಾಸಕರಾಗಿರುವುದು. ನಿಮ್ಮ ಅವಧಿ ಮುಗಿಯೋವರೆಗೂ ನೀವು ಪಕ್ಷದ ಪರವಾಗಿ ಇರಿ ಎಂದು ಜಿ.ಟಿ ದೇವೆಗೌಡರಿಗೆ ಸಾರಾ ಮಹೇಶ್ ತಿರುಗೇಟು ಕೊಟ್ಟಿದ್ದಾರೆ.

    ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸದಸ್ಯರು ಮತದಾನದಿಂದ ವಂಚಿತರಾಗಿದ್ದಾರೆ ನಿಜ. ಆದರೆ ಕೆಲ ವ್ಯಕ್ತಿಗಳಿಂದ ನಮಗೆ ಗೆಲುವು ಕಷ್ಠ ಆಯಿತು ಎಂಬುವುದು ಸುಳ್ಳು. ಜೆಡಿಎಸ್ ಶಕ್ತಿ ಹಳೆ ಮೈಸೂರು ಭಾಗದಲ್ಲಿ ಇನ್ನೂ ಇದೇ. ಮುಂದಿನ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಂದ ದೂರ ಇರಬೇಕೋ ಅಥವಾ ಯಾರ ಜೊತೆ ಮೈತ್ರಿ ಮಾಡಿಕೊಳ್ಳಬೇಕು ಎಂಬುವುದು ಹೆಚ್.ಡಿ ದೇವೇಗೌಡ ಮಾಡುತ್ತಾರೆ. ಆದರೆ ಎರಡು ಪಕ್ಷಗಳಿಂದ ದೂರ ಇರಬೇಕು ಎಂಬುವುದು ನನ್ನ ವೈಯುಕ್ತಿಕ ತೀರ್ಮಾನ ಎಂದು ತಿಳಿಸಿದರು. ಇದನ್ನೂ ಓದಿ: ನಾಳೆ ಹೆಚ್‍ಡಿಕೆ ಹುಟ್ಟುಹಬ್ಬ- ಕಾರ್ಯಕರ್ತರಲ್ಲಿ ಮಾಜಿ ಸಿಎಂ ಮನವಿ

    ವಿಧಾನ ಪರಿಷತ್‌ನಲ್ಲಿ ಗೆದ್ದ ಅಭ್ಯರ್ಥಿಯು ಜೆಡಿಎಸ್ ವರಿಷ್ಠಿಗೆ ವರದಿ ಕೊಡುತ್ತಾರೆ. ಬಳಿಕ ವರದಿಯ ಅನುಸಾರವಾಗಿ ನಮ್ಮ ಪಕ್ಷದ ಶಾಸಕರಿಂದಲೇ ಆದ ತೊಂದರೆ ಬಗ್ಗೆಯೂ ವಿವರಿಸಿ ಜೆಡಿಎಸ್ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ ಎಂದು ಸಾರಾ ಮಹೇಶ್ ಹೇಳಿದ್ದಾರೆ. ಇದನ್ನೂ ಓದಿ: ಸುಧಾಕರ್ ನಮ್ಮ ಲೀಡರ್ ಅಲ್ಲ, ಮಂಡ್ಯದ ಬಗ್ಗೆ ಅವರಿಗೇನ್ ಮಾಹಿತಿ ಇದೆ?: ನಾರಾಯಣ ಗೌಡ