Tag: ಸಾರಿಗೆ ಅಧಿಕಾರಿಗಳು

  • ಇನ್ಮುಂದೆ ವಾಹನಗಳ ಮೇಲೆ ಮಚ್ಚು ಹಿಡಿದ ಪೋಸ್ಟರ್ ಹಾಕಿದ್ರೆ ಬೀಳುತ್ತೆ ದಂಡ!

    ಇನ್ಮುಂದೆ ವಾಹನಗಳ ಮೇಲೆ ಮಚ್ಚು ಹಿಡಿದ ಪೋಸ್ಟರ್ ಹಾಕಿದ್ರೆ ಬೀಳುತ್ತೆ ದಂಡ!

    – ಪರಿಶೀಲನೆ ವೇಳೆ ಹಳೆಯ ಕೇಸುಗಳಿದ್ದರೆ ವಾಹನ ಜಪ್ತಿ

    ಬೆಂಗಳೂರು: ವಾಹನಗಳ ಮೇಲೆ ವಿವಾದಾತ್ಮಕ, ಕ್ರೌರ್ಯ, ಅಶ್ಲೀಲ ಪೋಸ್ಟರ್ ಹಾಕಿದರೆ ಇನ್ನು ಮುಂದೆ ದಂಡ ಬೀಳಲಿದೆ. ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಅಧಿಕಾರಿಗಳು ಕಣ್ಣಿಟ್ಟಿದ್ದು, ದಂಡದ ಜೊತೆ ಸೀಜ್ ಮಾಡುವ ಪ್ಲ್ಯಾನ್ ಮಾಡುತ್ತಿದ್ದಾರೆ.

    ಹೌದು, ಆಟೋ, ಟ್ಯಾಕ್ಸಿ, ಇತರೆ ವಾಹನ ಚಾಲಕರ ಗಮನದಲ್ಲಿರಲಿ. ವಾಹನಗಳ ಮೇಲೆ ನೆಚ್ಚಿನ ನಟರ ಫೋಟೋ ಹಾಕಿ, ಯಾವುದೋ ವಿವಾದಾತ್ಮಕ ಫೋಟೋ ಅಥವಾ ಬರಹಗಳನ್ನು ಹಾಕಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ಧ ಸಾರಿಗೆ ಇಲಾಖೆಯ ಅಧಿಕಾರಿಗಳು ಸಮರ ಸಾರಲು ಮುಂದಾಗಿದ್ದಾರೆ.ಇದನ್ನೂ ಓದಿ: ಯುದ್ಧವನ್ನು ಕೊನೆಗೊಳಿಸದಿದ್ದರೆ ಮತ್ತಷ್ಟು ನಿರ್ಬಂಧ, ಸುಂಕ – ಪುಟಿನ್‌ಗೆ ಟ್ರಂಪ್‌ ಬೆದರಿಕೆ

    ನಟರು ಮಚ್ಚು ಹಿಡಿಯುವ ಪೋಸ್ಟರ್ ಅಥವಾ ಕೆಲವರ ಭಾವನೆಗಳನ್ನು ಕೆರಳಿಸುವ ಬರಹಗಳು, ಫೋಟೋಗಳನ್ನು ಹಾಕಿದರೆ ಅಧಿಕಾರಿಗಳು ದಂಡಾಸ್ತ್ರ ಪ್ರಯೋಗ ಮಾಡಲಿದ್ದಾರೆ. ಆಯಾ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳ ತಂಡ ಇಂತಹ ವಾಹನಗಳ ಪರಿಶೀಲನೆಗೆ ಇಳಿಯಲಿದೆ. ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಚಾಲಕರು, ತಮ್ಮ ವಾಹನಗಳ ಮೇಲೆ ಯಾವುದಾದರೂ ಹಳೆಯ ಕೇಸುಗಳಿದ್ದರೆ ಅಂತ ವಾಹನಗಳನ್ನ ಅಧಿಕಾರಿಗಳು ಸೀಜ್ ಮಾಡಲಿದ್ದಾರೆ.

    ಅಶ್ಲೀಲ, ಅಸಭ್ಯ ಹಾಗೂ ಕ್ರೌರ್ಯವನ್ನು ಬಿಂಬಿಸುವ ಬರಹಗಳು, ಕೆಲವು ಪೋಸ್ಟರ್‌ಗಳನ್ನ ಆಟೋ, ಟ್ಯಾಕ್ಸಿಗಳ ಮೇಲೆ ಹಾಕಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿವೆ. ಇದು ನಕಾರಾತ್ಮಕ ಪರಿಣಾಮ ಬೀಳುತ್ತಿದ್ದು, ಸಾರಿಗೆ ನಿಯಮಗಳನ್ನ ಉಲ್ಲಂಘಿಸಿ ಇಂತಹ ಪೋಸ್ಟರ್‌ಗಳನ್ನು ಹಾಕುವುದನ್ನು ನಿಲ್ಲಿಸಿ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

    ಕೆಲವು ಕಂಪನಿ, ಸಂಸ್ಥೆಗಳ ಜಾಹೀರಾತುಗಳನ್ನು, ಪೋಸ್ಟರ್ ಕವರ್ ಹಾಕಿಕೊಳ್ಳಲು ನಗರ ಜಿಲ್ಲಾಧಿಕಾರಿಗಳು ಅನುಮತಿ ಕೊಟ್ಟಿದ್ದು, ಅದನ್ನ ಹೊರತುಪಡಿಸಿ ಇತರೆ ಪೋಸ್ಟರ್‌ಗಳನ್ನು ಹಾಕಿಕೊಳ್ಳುವುದು ಕೂಡ ನಿಯಮ ಉಲ್ಲಂಘನೆ. ಇಷ್ಟು ದಿನ ಸುಮ್ಮನಿದ್ದ ಸಾರಿಗೆ ಇಲಾಖೆಯ ಅಧಿಕಾರಿಗಳು, ಇದೀಗ ನಿಯಮ ಉಲ್ಲಂಘಿಸಿ ಪೋಸ್ಟರ್ ಹಾಕಿಕೊಂಡವರ ವಿರುದ್ಧ ದಂಡಾಸ್ತ್ರ ಪ್ರಯೋಗ ಮಾಡಲಿದ್ದಾರೆ.ಇದನ್ನೂ ಓದಿ: ದಿನ ಭವಿಷ್ಯ 23-01-2025

  • ಬಸ್ ಸಂಚಾರ ಆರಂಭ- ಸರ್ಕಾರದ ಮಾರ್ಗಸೂಚಿಗಾಗಿ ಕಾಯುತ್ತಿರುವ ಗದಗ ಸಾರಿಗೆ ಅಧಿಕಾರಿಗಳು

    ಬಸ್ ಸಂಚಾರ ಆರಂಭ- ಸರ್ಕಾರದ ಮಾರ್ಗಸೂಚಿಗಾಗಿ ಕಾಯುತ್ತಿರುವ ಗದಗ ಸಾರಿಗೆ ಅಧಿಕಾರಿಗಳು

    ಗದಗ: ಜಿಲ್ಲೆನಲ್ಲಿ ಬಸ್ ಸಂಚಾರಕ್ಕೆ ಎಲ್ಲ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸರ್ಕಾರದ ಮಾರ್ಗಸೂಚಿಗಾಗಿ ಸಾರಿಗೆ ಅಧಿಕಾರಿಗಳು ಕಾಯುತ್ತಿದ್ದಾರೆ.

    ಜಿಲ್ಲೆಯ ಒಟ್ಟು 7 ಘಟಕಗಳಿಂದ 136 ಬಸ್ ಬಿಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ವಿಭಾಗಿಯ ಘಟಕದಲ್ಲಿ ಸಿಬ್ಬಂದಿಗಳ ಸ್ಕ್ರೀನಿಂಗ್, ಬಸ್ ಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಇಲಾಖೆಯಲ್ಲಿ ಕೆಲಸ ಮಾಡುವ ಮೆಕ್ಯಾನಿಕ್, ಚಾಲಕ, ನಿರ್ವಾಹಕ ಹಾಗೂ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮಾಡಿದ್ದಾರೆ.

    ಬಸ್ ಆಸನಗಳಲ್ಲೂ ನಿಯಮಗಳ ಪಾಲನೆ ಕಡ್ಡಾಯವಾಗಿದೆ. ಅದಕ್ಕಾಗಿ ಬಸ್‍ನ ಆಸನಗಳಿಗೆ ಕೆಂಪು ಬಣ್ಣದಿಂದ ಮಾರ್ಕ್ ಮಾಡಲಾಗುತ್ತಿದೆ. ಮಾರ್ಕ್ ಮಾಡಿದ ಸ್ಥಳದಲ್ಲಿ ಕೂರದೆ ಅಂತರ ಕಾಯ್ದುಕೊಳ್ಳಲು ಒಂದು ಬಸ್‍ನಲ್ಲಿ 28 ಜನರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇನ್ನು ಬಸ್ ನಿಲ್ದಾಣದಲ್ಲೂ ಒಂದೇ ಗೇಟ್ ಮೂಲಕ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. 3 ಗೇಟ್ ಗಳ ಪೈಕಿ, 2 ಗೇಟ್ ಗೆ ಮುಳ್ಳಿನ ಬೇಲಿ ಹಾಕಿ ಮುಚ್ಚಲಾಗಿದೆ. ಒಂದೇ ಗೇಟ್ ತೆರೆಯಲಾಗಿದೆ. ಇದರಿಂದಾಗಿ ಪ್ರಯಾಣಿಕರ ಆರೋಗ್ಯ ತಪಾಸಣೆ ಅನುಕೂಲವಾಗತ್ತದೆ. ಸರ್ಕಾರದ ಮಾರ್ಗಸೂಚಿ ನೋಡಿಕೊಂಡು ಬಸ್ ಬಿಡುವುದಾಗಿ ಗದಗ ಸಾರಿಗೆ ಅಧಿಕಾರಿಗಳು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.