Tag: ಸಾರಿಗೆ ನೌಕರ

  • Kolar | ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ಸಾವು

    Kolar | ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ಸಾವು

    ಕೋಲಾರ: ಗಾಳಿ ಮಳೆಯಿಂದ ವಿದ್ಯುತ್ ಕಂಬ ನೆಲಕ್ಕುರಳಿದ್ದನ್ನು ಗಮನಿಸದೇ ಬೈಕ್ ಚಾಲನೆ ಮಾಡಿದ ಸಾರಿಗೆ ನೌಕರ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಮುಳಬಾಗಿಲು (Mulabagilu) ತಾಲೂಕಿನ ರಾಜೇಂದ್ರ ಹಳ್ಳಿಯಲ್ಲಿಂದು ಮುಂಜಾನೆ ಈ ಘಟನೆ ನಡೆದಿದ್ದು, ಗ್ರಾಮದ ರೆಡ್ಡಪ್ಪ (58) ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. ಕಳೆದ ರಾತ್ರಿ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದ್ದವು. ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುವ ವೇಳೆ ಬೈಕ್‌ಗೆ ತಂತಿ ಸ್ಪರ್ಶವಾಗಿ ರೆಡ್ಡಪ್ಪ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಡಿಕೆಶಿಗೆ ಮಾನ, ಮರ್ಯಾದೆ ಇದ್ರೆ ಕೂಡ್ಲೇ ಮಂಜುನಾಥ್ ಉಚ್ಚಾಟಿಸಿ: ಶರಣು ಸಲಗರ್

    ರೆಡ್ಡಪ್ಪ ಮುಳಬಾಗಿಲು ಕೆಎಸ್‌ಆರ್‌ಟಿಸಿ ಘಟಕದಲ್ಲಿ ಸಂಚಾರಿ ನಿಯಂತ್ರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬೆಸ್ಕಾಂ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ವಿದ್ಯುತ್ ತಂತಿಗಳ ತೆರವು ಕಾರ್ಯ ಮಾಡಲಾಗಿದೆ. ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೊತ್ತೂರು ಮಂಜುನಾಥ್ ಅಬ್‌ನಾರ್ಮಲ್ ಪರ್ಸನ್, ಕಾಂಗ್ರೆಸ್ ಸಸ್ಪೆಂಡ್ ಮಾಡ್ಬೇಕು: ಎನ್.ಮಹೇಶ್ ಆಗ್ರಹ

  • ಸಾರಿಗೆ ನೌಕರರ ವೇತನ ಕುರಿತು ಬಿಜೆಪಿ ಟ್ವೀಟ್- ಸಚಿವರು ಕಿಡಿ

    ಸಾರಿಗೆ ನೌಕರರ ವೇತನ ಕುರಿತು ಬಿಜೆಪಿ ಟ್ವೀಟ್- ಸಚಿವರು ಕಿಡಿ

    ಬೆಂಗಳೂರು: ಸಾರಿಗೆ ನೌಕರರಿಗೆ ಸಂಬಳ ಆಗಿದ್ರೂ, ಬಿಜೆಪಿಯಿಂದ (BJP) ವೇತನ ಆಗಿಲ್ಲ ಎಂದು ಟ್ವೀಟ್ ಮಾಡಲಾಗಿದೆ. ಬಿಜೆಪಿಯ ಈ ಟ್ವೀಟ್‍ಗೆ ಕೆಂಡಾಮಂಡಲರಾಗಿರೋ ಸಾರಿಗೆ ಸಚಿವರು, ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ ಎಂದು ಕಿಡಿಕಾರಿದ್ದಾರೆ.

    ಸಾರಿಗೆ ನೌಕರರಿಗೆ ವೇತನ ವಿಳಂಬ ಮಾಡಲಾಗ್ತಿದೆ ಎಂದು ಬಿಜೆಪಿ ಸಾರಿಗೆ ಇಲಾಖೆಯನ್ನ ಟಾರ್ಗೆಟ್ ಮಾಡಿ ಟ್ವೀಟ್ ಮಾಡಿದೆ. ಕಳೆದ ಎರಡು ವಾರಗಳಿಂದ ನಡೆಯುತ್ತಿರೋ ಈ ಟ್ವೀಟ್ ವಾರ್ ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಪ್ರತಿಕ್ರಿಯಿಸಿದ್ದು, ಬಿಜೆಪಿಗೆ ಮಾನ ಇಲ್ಲ, ಮರ್ಯಾದೆ ಇಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ರಾತ್ರಿ ವೇಳೆ ವಾಹನ ನಿಲ್ಲಿಸಿದ್ರೆ ಬರ್ತಾರೆ ದರೋಡೆಕೋರರು

    ಕಳೆದ ಹತ್ತು ದಿನಗಳ ಹಿಂದೆ ಸಾರಿಗೆ ನೌಕರರಿಗೆ ಅರ್ಧ ಸಂಬಳ ನೀಡಲಾಗಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿದ್ದ ರಾಮಲಿಂಗಾರೆಡ್ಡಿ, ಸಂಬಳ ವಿಳಂಬ ಮಾಡಿಲ್ಲ ಎಂದು ಗುಡುಗಿದ್ರು. ಮತ್ತೆ ಇಂದು ಬಿಜೆಪಿ ಅಧಿಕೃತ ಪೇಜ್ ನಿಂದ ಟ್ವೀಟ್ (Tweet) ಮಾಡಿರೋದಕ್ಕೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವರು, ಬಿಜೆಪಿಗೆ ಶಕ್ತಿ ಯೋಜನೆಯಿಂದ ಲಕ್ಷಗಟ್ಟಲೇ ಮಹಿಳೆಯರು ಓಡಾಡೋದು ಸಹಿಸಿಕೊಳ್ಳೋಕೆ ಆಗ್ತಿಲ್ಲ. ಅದಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ. ಕೆಎಸ್‍ಆರ್ ಟಿಸಿ ನೌಕರರಿಗೆ ಒಂದನೇ ತಾರೀಖಿಗೆ ಸಂಬಳ ಆಗುತ್ತೆ. ಆಗಸ್ಟ್ 7ರಂದು ಬಿಎಂಟಿಸಿ ನೌಕರರಿಗೆ ಸಂಬಳ ಆಗುತ್ತೆ. ಈಗಾಗಲೇ ಸಂಬಳ ನೀಡಲಾಗಿದೆ. ಆದರೂ ಬಿಜೆಪಿ ಜನರಿಗೆ ತಪ್ಪು ಸಂದೇಶ ನೀಡ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಸಾರಿಗೆ ನೌಕರರನ್ನೇ ಟಾರ್ಗೆಟ್ ಮಾಡಿ ಬಿಜೆಪಿ ಸರಣಿ ಟ್ವೀಟ್ ದಾಳಿ ಮಾಡ್ತಿದೆ. ಸಂಬಳ ಕೊಟ್ಟರು ಜನರಿಗೆ ತಪ್ಪು ಸಂದೇಶ ಕೊಡುವ ಬಿಜೆಪಿದು ಕೆಟ್ಟಬುದ್ದಿ ಅಂತ ಸಾರಿಗೆ ಸಚಿವರು ಫುಲ್ ಗರಂ ಆಗಿದ್ದಾರೆ. ಅದೇನೆ ಆಗ್ಲಿ ಈ ಟ್ವೀಟ್ ವಾರ್ ಎಲ್ಲಿ ತಲುಪುತ್ತೋ ಕಾದು ನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಪೋ ಆವರಣದಲ್ಲಿ ನೇಣಿಗೆ ಶರಣಾದ ಸಾರಿಗೆ ನೌಕರ

    ಡಿಪೋ ಆವರಣದಲ್ಲಿ ನೇಣಿಗೆ ಶರಣಾದ ಸಾರಿಗೆ ನೌಕರ

    ಹಾವೇರಿ: ಬಸ್ ಡಿಪೋದ (Bus Depot) ಆವರಣದಲ್ಲಿಯೇ ಸಾರಿಗೆ ನೌಕರ (Transport Employee) ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾದ ಘಟನೆ ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರಿನ (Ranebennur) ಬಸ್ ಡಿಪೋದಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಶರಣಾದ ಚಾಲಕ ಕಂ ನಿರ್ವಾಹಕನನ್ನ ಮಲ್ಲಿಕಾರ್ಜುನ ಬಡಿಗೇರ (49) ಎಂದು ಗುರುತಿಸಲಾಗಿದೆ. ಮೂಲತಃ ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ತಾಲೂಕು ದಾವಳಗಿ ಗ್ರಾಮದ ನಿವಾಸಿಯಾಗಿದ್ದ ಇವರು, ಕಳೆದ ಹತ್ತು ವರ್ಷದಿಂದ ಹಾವೇರಿ ಜಿಲ್ಲೆ ರಾಣೇಬೆನ್ನೂರು ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಮದುವೆ ನಿರಾಕರಣೆ- ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ

    ಕಳೆದ ಎರಡು ವರ್ಷಗಳ ಹಿಂದೆ ಹೃದಯ ಆಪರೇಷನ್ ಸಹ ಆಗಿತ್ತು. ಕಳೆದ ಒಂದು ವಾರದಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು ಎನ್ನಲಾಗಿದೆ. ಆದರೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಹಲಗೇರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: 20ರ ಯುವಕನಿಗೆ ಚಾಕು ಇರಿತ- ಪೊಲೀಸರ ಮುಂದೆ ಮೃತನ ತಾಯಿ ಹೇಳಿದ್ದೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇದು ಕೊಲೆಗಡುಕ ಸರ್ಕಾರ: ಎಚ್‍ಡಿಕೆ ಕಿಡಿ

    ಇದು ಕೊಲೆಗಡುಕ ಸರ್ಕಾರ: ಎಚ್‍ಡಿಕೆ ಕಿಡಿ

    ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಹಾಗೂ ಆಕೆಯ ಮಕ್ಕಳ ಆತ್ಮಹತ್ಯೆ ಘಟನೆ ಹೃದಯ ವಿದ್ರಾವಕ ಎಂದು ನೊಂದು ನುಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಈ ಸಾವುಗಳಿಗೆ ಸರ್ಕಾರವೇ ನೇರ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.

    ಬಿಡದಿಯ ತೋಟದಲ್ಲಿ ಇಂದು ಬೆಳಗ್ಗೆ ಆರಂಭವಾದ ಎರಡನೇ ಹಂತದ ‘ಜನತಾ ಪರ್ವ’ ಹಾಗೂ ‘ಮಿಷನ್ 123’ ಕಾರ್ಯಾಗಾರಕ್ಕೆ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರ್ತವ್ಯದಲ್ಲಿ ಇದ್ದಾಗಲೇ ಕೊರೊನಾ ಮಹಾಮಾರಿಗೆ ತುತ್ತಾಗಿ ಸಾವನ್ನಪ್ಪಿದ ಸಾರಿಗೆ ನೌಕರನ ಕುಟುಂಬಕ್ಕೆ ಸರ್ಕಾರ ಅರು ತಿಂಗಳ ಒಳಗಾಗಿ ಅನುಕಂಪದ ಉದ್ಯೋಗ ನೀಡಿ ಪರಿಹಾರದ ಹಣವನ್ನು ನೀಡಬೇಕು. ಅಲ್ಲದೆ ಕೋವಿಡ್ ವಾರಿಯರ್ಸ್‍ಗಳಿಗೆ ನೀಡುವ ಪರಿಹಾರವನ್ನು ಕೂಡ ನೀಡಿಲ್ಲ. ಗಂಡನನ್ನು ಕಳೆದುಕೊಂಡ ಆ ಹೆಣ್ಣು ಮಗಳಿಗೆ ಕೆಲಸವೂ ಕೊಟ್ಟಿಲ್ಲ ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಶಾಸಕರ ಸಮಸ್ಯೆ ಕೇಳಲು ನನ್ನ ಮನೆ ಬಾಗಿಲು ಸದಾ ತೆರೆದಿದೆ: ಹೆಚ್‌ಡಿಕೆ

    ಆ ಹೆಣ್ಣು ಮಗಳು ಎಷ್ಟು ನೊಂದಿರಬಹುದು. ಈ ಸರ್ಕಾರಕ್ಕೆ ಯಾವ ಗಮನವೂ ಇರಲಿಲ್ಲ. ಆ ಮುಗ್ದ ಮಕ್ಕಳೂ ಸೇರಿ ಆ ಇಡೀ ಕುಟುಂಬವನ್ನು ಬಲಿ ತೆಗೆದುಕೊಂಡ ಈ ಸರ್ಕಾರ ಕೊಲೆಗಡುಕ ಸರ್ಕಾರ ಅಂದರೆ ತಪ್ಪಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಇದನ್ನೂ ಓದಿ: ಅರಸೀಕೆರೆಯಲ್ಲಿ ಆಕ್ಸಿಜನ್ ಘಟಕ ಉದ್ಘಾಟನೆ ವೇಳೆ ಜೆಡಿಎಸ್, ಬಿಜೆಪಿ ನಡುವೆ ವಾಕ್ಸಮರ

    ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದ ಕುಮಾರಸ್ವಾಮಿ ಅವರು, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

    ಟ್ವೀಟ್‍ನಲ್ಲಿ ಏನಿದೆ?
    ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು ಕೊಲೆಗಡುಕ ಸರ್ಕಾರ.

    ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರ್ಕಾರ ಇಂತವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ. ಇದನ್ನೂ ಓದಿ: ಮಮತಾಗೆ ಭರ್ಜರಿ ಜಯ – 2024ರಲ್ಲಿ ದೆಹಲಿಯಲ್ಲಿ ನಮ್ಮದೇ ಸರ್ಕಾರ ಎಂದ ಟಿಎಂಸಿ

    ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೊನ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೆರವುನೀಡಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ.

     

  • ಇದು ‘ಕೊಲೆಗೆಡುಕ ಸರ್ಕಾರ’  – ಹೆಚ್‍ಡಿಕೆ ಕಿಡಿ

    ಇದು ‘ಕೊಲೆಗೆಡುಕ ಸರ್ಕಾರ’ – ಹೆಚ್‍ಡಿಕೆ ಕಿಡಿ

    ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ‘ಕೊಲೆಗೆಡುಕ ಸರ್ಕಾರ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದರೆ, ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು ‘ಕೊಲೆಗೆಡುಕ ಸರ್ಕಾರ’ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಆರ್ಥಿಕ ಸಂಕಷ್ಟದಿಂದ ಮನನೊಂದು KSRTC ನೌಕರ ವಿಷ ಸೇವಿಸಿ ಆತ್ಮಹತ್ಯೆ

    ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರ್ಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲೇ ಆದ್ಯತೆ ನೀಡಬೇಕಿತ್ತು. ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ. ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:  ಗೋಕಾಕ್ ಫಾಲ್ಸ್ ಬಳಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ 140 ಅಡಿ ಕಂದಕಕ್ಕೆ ಬಿದ್ದವ ಪವಾಡ ಸದೃಶ್ಯ ರೀತಿ ಪಾರು

    ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೊನಾ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೆರವಾಗಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ

     

  • ವರ್ಗಾವಣೆ ವಿರೋಧಿಸಿ ಸಾರಿಗೆ ನೌಕರ ಆತ್ಮಹತ್ಯೆಗೆ ಯತ್ನ

    ವರ್ಗಾವಣೆ ವಿರೋಧಿಸಿ ಸಾರಿಗೆ ನೌಕರ ಆತ್ಮಹತ್ಯೆಗೆ ಯತ್ನ

    ರಾಯಚೂರು: ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ನಡೆದಿದೆ.

    ವರ್ಗಾವಣೆ ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದ ಬಸ್ ಚಾಲಕ ಸೈಯದ್ ಯೂನೂಸ್ ಆತ್ಮಹತ್ಯೆಗೆ ಯತ್ನಿಸಿದ್ದಾಋಏ. ಸ್ಥಳದಲ್ಲಿದ್ದವರು ವಿಷ ಬಾಟಲಿಯನ್ನ ಕಸಿದುಕೊಂಡು ಎಸೆದಿದ್ದಾರೆ.

    ಈ ಹಿಂದೆ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ. ಬೀದರ್ ಜಿಲ್ಲೆಯ ಬಾಲ್ಕಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಏಳು ಮಕ್ಕಳನ್ನ ಕಟ್ಟಿಕೊಂಡು ಬಾಲ್ಕಿಗೆ ಹೇಗೆ ಹೋಗಲಿ ಅಂತ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದಾನೆ. ಏಕಾಏಕಿ ವರ್ಗಾವಣೆ ಶಿಕ್ಷೆಗೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

    ಮಾರ್ಚ್ ತಿಂಗಳಿನಿಂದ ವೇತನವೂ ನೀಡದೇ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಅಂತ ಚಾಲಕ ಸೈಯದ್ ಯೂನೂಸ್ ಆರೋಪಿಸಿದ್ದಾರೆ. ವಿಷಯ ತಿಳಿದು ಕಚೇರಿಗೆ ಬಂದ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಸಿಬ್ಬಂದಿಯನ್ನ ಸಮಾಧಾನ ಪಡಿಸಲು ಯತ್ನಿಸಿದರು. ಕೇಂದ್ರ ಕಚೇರಿಯಿಂದ ಆದೇಶ ಬಂದಿದೆ ನಮ್ಮಿಂದ ಕಿರುಕುಳ ಆಗಿಲ್ಲ ಅಂತ ಡಿವಿಷನಲ್ ಕಂಟ್ರೋಲರ್ ವೆಂಕಟೇಶ್ ಹೇಳಿದ್ದಾರೆ.

  • ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ – ಸಾರಿಗೆ ನೌಕರರ ಪತ್ರಕ್ಕೆ ಯಶ್ ಉತ್ತರ

    ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ – ಸಾರಿಗೆ ನೌಕರರ ಪತ್ರಕ್ಕೆ ಯಶ್ ಉತ್ತರ

    ಬೆಂಗಳೂರು: ತಮ್ಮನ್ನು ಬೆಂಬಲಿಸುವಂತೆ ಸಾರಿಗೆ ನೌಕರರು ರಾಕಿಂಗ್ ಸ್ಟಾರ್ ಯಶ್ ಅವರಿಗೆ ಬರೆದ ಪತ್ರಕ್ಕೆ ಇದೀಗ ನಟ ಉತ್ತರ ನೀಡಿದ್ದಾರೆ.

    ಈ ಸಂಬಂಧ ಪತ್ರ ಬರೆದಿರುವ ಯಶ್, ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು ಎಂದು ಹೇಳಿದ್ದಾರೆ.

    ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು, ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ. ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿದ್ದೇನೆ. ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ ಎಂದರು.

    ಸಮಾಧಾನದ ವಿಷಯ ಅಂದ್ರೆ ಲಕ್ಷ್ಮಣ್ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಅರಿವು ಮತ್ತು ಕಳಕಳಿ ಇದೆ. ಜೊತೆಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದಾರೆ. ಇದು ನನಗೆ ಮತ್ತಷ್ಟು ಖುಷಿ ಕೊಟ್ಟಿದೆ ಎಂದು ಭರವಸೆ ನೀಡಿದರು.

    ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ ಎಂದು ಯಶ್ ಅವರು ಸಾರಿಗೆ ನೌಕರರಿಗೆ ಪರಿಸ್ಥಿತಿ ಮನವರಿಕೆ ಮಾಡಿದರು.

    ಪತ್ರ:

    ರವರಿಗೆ,
    ಕರ್ನಾಟಕ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಪ್ರೀತಿಯ ಸಾರಿಗೆ ಸಂಸ್ಥೆ ನೌಕರರ ಕುಟುಂಬಕ್ಕೆ ನಿಮ್ಮ ಯಶ್ ಮಾಡುವ ನಮಸ್ಕಾರಗಳು. ಇಂದು ನಿಮ್ಮ ಯಶ್ ಏನೇ ಆಗಿರಬಹುದು. ಆದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ.

    ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿಯೇ ಬರೋ ಪ್ರಯಾಣಿಕರಿಗೆ ಟ್ರೈನ್ ಮಿಸ್ ಆಗುತ್ತೇನೋ.. ಆಫೀಸ್ ಗೆ ಲೇಟ್ ಆಗುತ್ತೇನೋ..ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೇ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ. ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ…ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸಾರಿಗೆ ನೌಕರರುಗಳ ದಿನಚರಿ ಹೀಗೆ ಇರುತ್ತೆ..

    ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ… ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯ ವಿರಬಹುದು.. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು.. ಓವರ್ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು. ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ.

    ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ. ಸಮಾಧಾನದ ವಿಷಯ ಅಂದ್ರೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ, ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಡು…

    ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ.

    ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ.

    ವಂದನೆಗಳೊಂದಿಗೆ
    ನಿಮ್ಮ ಪ್ರೀತಿಯ
    ಯಶ್

  • ಸಾರಿಗೆ ನೌಕರ ಆತ್ಮಹತ್ಯೆಗೆ ಶರಣು

    ಸಾರಿಗೆ ನೌಕರ ಆತ್ಮಹತ್ಯೆಗೆ ಶರಣು

    ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲಿ ಸಾರಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಶಿವಕುಮಾರ್ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡ ನೌಕರ. ಇವರು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

    ಬೆಳಗಾವಿ ಜಿಲ್ಲೆಯ ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು. ಸವದತ್ತಿಯಲ್ಲಿರುವ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ವಾಕರಾರಸಾ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಳೆದ 12 ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದರು.

    ಸದ್ಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಇಂದು ಸಿದ್ದರಾಮಯ್ಯ ಅವರು ಸವದತ್ತಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಪ್ರಕರಣ ಸಂಬಂಧ ಮುಷ್ಕರ ನಿರತ ಸಾರಿಗೆ ನೌಕರರು ಇಂದು ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಲಿದ್ದಾರೆ.

  • ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡಬೇಕು: ಲಕ್ಷ್ಮಣ್ ಸವದಿ

    ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡಬೇಕು: ಲಕ್ಷ್ಮಣ್ ಸವದಿ

    ಕಲಬುರಗಿ: ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ ಮಾಡಿದ್ದಾರೆ.

    ಸಾರಿಗೆ ನೌಕರರ ಪ್ರತಿಭಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಯವಿಟ್ಟು ಕೊರೊನಾ ಸಂಕಷ್ಟದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ನೀತಿ ಸಂಹಿತೆಯಿಂದಾಗಿ ಬೇಡಿಕೆ ಈಡೇರಿಕೆಗೆ ಸಾಧ್ಯವಿಲ್ಲ. ಘೋಷಣೆ ಮಾಡುವ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು.

    ನೀತಿ ಸಂಹಿತೆ ಜಾರಿ ಇರೋದ್ರಿಂದ ಏನು ಹೇಳಲು ಆಗೋದಿಲ್ಲ. ಇಂದು ಸಾರಿಗೆ ನೌಕರರ ಜೊತೆ ಜೊತೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ ಎಂದರು.

    ಇದೇ ವೇಳೆ ಮಸ್ಕಿ, ಬಸವಕಲ್ಯಾಣ, ಬೆಳಗಾವಿಯಲ್ಲಿ ಪ್ರಚಾರ ಮಾಡುತ್ತಿದ್ದೇವೆ. ಮೂರು ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲುತ್ತದೆ. ನಮ್ಮಲ್ಲಿ ಸಣ್ಣಪುಟ್ಟ ಗೊಂದಲಗಳು ಇವೆ ವರಿಷ್ಠರು ಸರಿಪಡಿಸುತ್ತಾರೆ. ಆದರೆ ಕಾಂಗ್ರೆಸ್ಸಿನಲ್ಲಿ ಮನೆ ಒಂದು ಮೂರು ಬಾಗಿಲು ಆಗಿದೆ ಎಂದು ತಿಳಿಸಿದರು.

  • ಬೇಡಿಕೆ ಈಡೇರಿಸದ ಸರ್ಕಾರ ವಿರುದ್ಧ ಸಾರಿಗೆ ನೌಕರರಿಂದ ಮತ್ತೆ ಸಮರ

    ಬೇಡಿಕೆ ಈಡೇರಿಸದ ಸರ್ಕಾರ ವಿರುದ್ಧ ಸಾರಿಗೆ ನೌಕರರಿಂದ ಮತ್ತೆ ಸಮರ

    ಬೆಂಗಳೂರು: ಪಂಚಮಸಾಲಿಗಳ ಧರಣಿ ಅಂತ್ಯ ಕಂಡ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆ ಎದುರಾಗೋ ಎಲ್ಲಾ ಲಕ್ಷಣಗಳು ಕಾಣ್ತಿವೆ. ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೊಂದು ಹೋರಾಟಕ್ಕೆ ಸಿದ್ಧರಾಗಿದ್ದಾರೆ.

    ಯಡಿಯೂರಪ್ಪ ಸರ್ಕಾರಕ್ಕೆ ಸಾರಿಗೆ ನೌಕರರು ಕೊಟ್ಟ ಗಡುವು ನಿನ್ನೆಗೆ ಮುಗಿದಿದ್ದು, ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಈ ಹಿನ್ನೆಲೆ ಮತ್ತೊಮ್ಮೆ ಬಸ್ ಸಂಚಾರ ಬಂದ್ ಮಾಡಿ ಸರ್ಕಾರವನ್ನ ಎಚ್ಚರಿಸಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ. ಈ ಸಂಬಂಧ ಇಂದು ಕೊಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ.

    ಸಭೆಯಲ್ಲಿ ಚರ್ಚಿಸಿದ ಬಳಿಕವಷ್ಟೆ ಮುಂದಿನ ನಿರ್ಧಾರದ ಬಗ್ಗೆ ಸ್ಪಷ್ಟನೆ ಸಿಗಲಿದೆ. ಈಗಾಗಲೇ ಟ್ರೇಡ್ ಯೂನಿಯನ್ ಆಕ್ಟ್ ಅಡಿಯಲ್ಲಿ ಸರ್ಕಾರ ಹಾಗೂ ಕಾರ್ಮಿಕ ಇಲಾಖೆಗೆ ತಿಳುವಳಿಕೆ ಪತ್ರ ನೀಡಲು ಸಾರಿಗೆ ನೌಕರರ ಸಂಘಟನೆ ಸಜ್ಜಾಗಿದೆ. ಈ ಪ್ರಕಾರ ಸರ್ಕಾರ ಹಾಗೂ ಕಾರ್ಮಿಕ ಇಲಾಖೆಗೆ ತಿಳುವಳಿಕೆ ಪತ್ರ ನೀಡಿದ ಬಳಿಕ 22 ದಿನಗಳಲ್ಲಿ ಉತ್ತರವನ್ನ ನೀಡಲೇಬೇಕಿದೆ. ಈ ಅವಧಿಯಲ್ಲಿ ಸ್ಪಂದಿಸದಿದ್ರೆ ಮತ್ತೊಂದು ಆಯಾಮದ ಹೋರಾಟಕ್ಕೂ ಸಿದ್ಧತೆ ನಡೆಸಲು ಸಾರಿಗೆ ನೌಕರರು ತೀರ್ಮಾನಿಸಿದ್ದಾರೆ.