Tag: ಸಾರಿಗೆ ಬಸ್

  • ಇಂದಿನಿಂದ BMTC, KSRTC ಬಸ್‍ಗಳ ಓಡಲ್ಲ – ರಾಜ್ಯದ 31 ಜಿಲ್ಲೆಗಳಲ್ಲೂ ಸಂಚಾರ ಸ್ತಬ್ಧ

    ಇಂದಿನಿಂದ BMTC, KSRTC ಬಸ್‍ಗಳ ಓಡಲ್ಲ – ರಾಜ್ಯದ 31 ಜಿಲ್ಲೆಗಳಲ್ಲೂ ಸಂಚಾರ ಸ್ತಬ್ಧ

    ಬೆಂಗಳೂರು: ಇಂದಿನಿಂದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಮುಷ್ಕರ ಆರಂಭಿಸುತ್ತಿದ್ದು, ಬಸ್‍ಗಳು ರಸ್ತೆಗಿಳಿಯಲ್ಲ.

    ಇಂದಿನಿಂದ ಅನಿರ್ದಿಷ್ಟಾವಧಿಗೆ ಬಸ್ ಮುಷ್ಕರ ನಡೆಯುತ್ತಿದ್ದು, ಮನೆಯಿಂದ ಹೊರಡುವ ಮುನ್ನ ಎಚ್ಚರವಾಗಿರಿ. ಬಸ್ ಸಿಗಲ್ಲ, ಬಸ್ ಸಿಗದೇ ಪರದಾಡಬೇಡಿ. ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲೂ ಸರ್ಕಾರಿ ಬಸ್‍ಗಳ ಓಡಾಟ ಇಲ್ಲ. ಇಂದು ಸುಮಾರು 24,400 ಸರ್ಕಾರಿ ಬಸ್‍ಗಳು ರಸ್ತೆಗೆ ಇಳಿಯಲ್ಲ.

    ಡಿಸೆಂಬರ್‍ನಲ್ಲಿ 4 ದಿನ ಸಾರಿಗೆ ನೌಕರರ ಮುಷ್ಕರ ನಡೆದಿತ್ತು. ಇದೀಗ ಮತ್ತೆ ಇಂದಿನಿಂದ ಅನಿರ್ದಿಷ್ಟಾವಧಿಗೆ ಬಸ್ ಮುಷ್ಕರ ನಡೆಯಲಿದೆ. ಹೀಗಾಗಿ ಮನೆಯಿಂದ ಹೊರಡುವ ಮುನ್ನ ಎಚ್ಚರವಾಗಿರಿ. ಅಲ್ಲದೆ ಹೀಗಾಗಿ ದೂರದ ಊರಿಗೆ ಪ್ರಯಾಣಿಸುವ ಮೊದಲು ಯೋಚಿಸಿ.

    ಎಷ್ಟು ಬಸ್ ರಸ್ತೆಗೆ ಇಳಿಯಲ್ಲ..?
    ಬಿಎಂಟಿಸಿ – 6536, ಕೆಎಸ್‌ಆರ್‌ಟಿಸಿ – 8360,  ವಾಯುವ್ಯ ಸಾರಿಗೆ – 4868 , ಈಶಾನ್ಯ ಸಾರಿಗೆ – 4600 ಒಟ್ಟು 24,400 ಬಸ್ ರಸ್ತೆಗೆ ಇಳಿಯಲ್ಲ.

  • ಸಾರಿಗೆ ಬಸ್ಸಿನಲ್ಲಿರಲಿಲ್ಲ ಕೊರೊನಾ ರೂಲ್ಸ್- ಪ್ರಯಾಣಿಕರು ಆಕ್ರೋಶ

    ಸಾರಿಗೆ ಬಸ್ಸಿನಲ್ಲಿರಲಿಲ್ಲ ಕೊರೊನಾ ರೂಲ್ಸ್- ಪ್ರಯಾಣಿಕರು ಆಕ್ರೋಶ

    – ಬದಲಿ ವ್ಯವಸ್ಥೆ ಮಾಡಿದ ಸಿಬ್ಬಂದಿ

    ರಾಯಚೂರು: ಸಾರಿಗೆ ಬಸ್ಸಿನಲ್ಲಿ ಕೊವಿಡ್ ನಿಯಮಪಾಲನೆ ಇಲ್ಲದ ಹಿನ್ನೆಲೆಯಲ್ಲಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂತ್ರಾಲಯ ಬಸ್ ನಿಲ್ದಾಣದಲ್ಲಿ ನಡೆದಿದೆ.

    ತುಂಗಭದ್ರಾ ಪುಷ್ಕರ ಹಿನ್ನೆಲೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಬಂದಿದ್ದರು. ಆದರೆ ಇವರು ರಾಯಚೂರು- ಬೆಂಗಳೂರು ಮಾರ್ಗದ ಸ್ಲೀಪರ್ ಬಸ್ಸಿನಲ್ಲಿ ಪ್ರಯಾಣಿಸಲು ನಿರಾಕರಿಸಿದ್ದಾರೆ. ಅಲ್ಲದೆ ಸಾರಿಗೆ ಸಿಬ್ಬಂದಿಯೊಂದಿಗೆ ಪ್ರಯಾಣಿಕರ ಮಾತಿನ ಚಕಮಕಿ ನಡೆಸಿದ್ದಾರೆ. ಬಸ್ಸಿನಲ್ಲಿ ಸ್ವಚ್ಛತೆಯಿಲ್ಲ, ಸೀಟುಗಳು ಹಾಳಾಗಿರುವುದರಿಂದ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

    ಎರಡು ಬಸ್ಸುಗಳನ್ನ ಪ್ರಯಾಣಿಕರು ನಿಲ್ಲಿಸಿದ್ದಾರೆ. ಬಸ್ ಬದಲಿಸುವಂತೆ ಒತ್ತಾಯ, ರಿಸರ್ವೇಷನ್ ಆಗಿದ್ದರೂ ಪ್ರಯಾಣಿಕರು ಬಸ್ ಹತ್ತಲಿಲ್ಲ. ಹೀಗಾಗಿ ಸಾರಿಗೆ ಸಿಬ್ಬಂದಿ ಕೊನೆಗೆ ಬದಲಿ ಬಸ್ ವ್ಯವಸ್ಥೆ ಮಾಡಿದರು.

  • ಬೆಂಗಳೂರು ಲಾಕ್‍ಡೌನ್-800 ಹೆಚ್ಚುವರಿ ಬಸ್‍ಗಳ ವ್ಯವಸ್ಥೆ

    ಬೆಂಗಳೂರು ಲಾಕ್‍ಡೌನ್-800 ಹೆಚ್ಚುವರಿ ಬಸ್‍ಗಳ ವ್ಯವಸ್ಥೆ

    ಬೆಂಗಳೂರು: ಮಂಗಳವಾರ ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಲಾಕ್‍ಡೌನ್ ಆಗಲಿದೆ. ಈ ಹಿನ್ನೆಲೆ ಬೆಂಗಳೂರಿನಿಂದ ಹೊರ ಹೋಗುತ್ತಿರುವ ಜನ ಅನಕೂಲಕ್ಕಾಗಿ 800 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

    ಇಂದು (ಸೋಮವಾರ) ಮತ್ತು ನಾಳೆ (ಮಂಗಳವಾರ) ಪ್ರತಿದಿನ 800 ಹೆಚ್ಚುವರಿ ಬಸ್ಸುಗಳನ್ನು ಅಂದರೆ ಒಟ್ಟು 1600 ಬಸ್ಸುಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಕಾರ್ಯಾಚರಣೆಗೊಳಿಸಲಾಗುತ್ತಿದೆ. ಇದಲ್ಲದೇ ಅಗತ್ಯವಿದ್ದರೆ ಮತ್ತಷ್ಟು (200) ಬಸ್ಸುಗಳನ್ನು ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಜೊತೆಗೆ ಪ್ರಯಾಣಿಕರ ಹಿತದೃಷ್ಟಿಯಿಂದ ಇತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.

    ಕೊರೊನಾ ಆತಂಕ ಮತ್ತು ಲಾಕ್‍ಡೌನ್ ನಿಂದಾಗಿ ಇಂದು ಬೆಳಗ್ಗೆಯಿಂದಲೇ ಬೆಂಗಳೂರು ಬಿಡುತ್ತಿದ್ದಾರೆ. ಸಿಕ್ಕ ಸಿಕ್ಕ ವಾಹನಗಳಲ್ಲಿ ಊರು ಸೇರಿಕೊಳ್ಳುವ ಅವಸರದಲ್ಲಿ ಜನರಿದ್ದಾರೆ. ಇನ್ನು ಕೆಲವರು ಮನೆಗಳನ್ನು ಖಾಲಿ ಮಾಡಿಕೊಂಡು ಗಂಟು ಮೂಟೆ ಸಹಿತ ಊರಿನತ್ತ ಪ್ರಯಾಣ ಬೆಳೆಸುತ್ತಿದ್ದಾರೆ.

  • ಬಸ್ ಸಂಚಾರ ಪುನರಾರಂಭಕ್ಕೆ ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಸಿದ್ಧತೆಗಳು ಪೂರ್ಣ

    ಬಸ್ ಸಂಚಾರ ಪುನರಾರಂಭಕ್ಕೆ ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಸಿದ್ಧತೆಗಳು ಪೂರ್ಣ

    ಹುಬ್ಬಳ್ಳಿ: ಬಸ್ ಸಂಚಾರ ಪುನರಾರಂಭಕ್ಕೆ ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ.

    ಬಸ್ ಸಂಚಾರ ಪುನರಾರಂಭಿಸಲು ರಾಜ್ಯ ಸರ್ಕಾರದಿಂದ ನಿರ್ದೇಶನಗಳು ಬಂದ ನಂತರ ಮಾರ್ಗದರ್ಶಿ ಸೂಚನೆಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳನ್ನು ರಸ್ತೆ ಗಿಳಿಸಲು ಹುಬ್ಬಳ್ಳಿ ಸಾರಿಗೆ ವಿಭಾಗದಲ್ಲಿ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿಭಾಗದಲ್ಲಿ 2166 ಸಿಬ್ಬಂದಿಗಳಿದ್ದು ಎಲ್ಲರಿಗೂ ಕರ್ತವ್ಯಕ್ಕೆ ಸಿದ್ಧರಾಗಿರುವಂತೆ ಸೂಚಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ್ ತಿಳಿಸಿದ್ದಾರೆ.

    ಈಗಾಗಲೇ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ, ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ ಮತ್ತು ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಒಂದೇ ಪ್ರವೇಶ ಹಾಗೂ ಒಂದೇ ನಿರ್ಗಮನ ವ್ಯವಸ್ಥೆ, ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ಮೂಲಕ ದೇಹದ ಉಷ್ಣತೆ ಪರೀಕ್ಷೆ, ಸ್ಯಾನಿಟೈಸರ್, ಮಾಸ್ಕ್ ಧರಿಸಿರುವ ಬಗ್ಗೆ ಪರಿಶೀಲನೆ ಮಾಡಲು ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಈ ಎಲ್ಲ ಪ್ರಕ್ರಿಯೆಗಳ ಸುಗಮ ನಿರ್ವಹಣೆಗಾಗಿ ಮೂರು ಪಾಳಿಯಲ್ಲಿ ಸಿಬ್ಬಂದಿ ಮತ್ತು ಮೇಲ್ವಿಚಾರಣೆಗಾಗಿ ಪ್ರತಿ ಬಸ್ ನಿಲ್ದಾಣಕ್ಕೂ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗಿದೆ.

    ವಿಭಾಗದಲ್ಲಿ 462 ಬಸ್ಸುಗಳಿದ್ದು, ಲಾಕ್‍ಡೌನ್ ಪೂರ್ವದಲ್ಲಿ ಜಿಲ್ಲೆಯೊಳಗಡೆ, ಅಂತರ ಜಿಲ್ಲೆಗಳು ಮತ್ತು ಅಂತರರಾಜ್ಯಗಳ ಪ್ರದೇಶಗಳಲ್ಲಿ ಸಾಮಾನ್ಯ, ವೇಗಧೂತ, ತಡೆರಹಿತ, ರಾಜಹಂಸ, ಹವಾನಿಯಂತ್ರಣರಹಿತ ಸ್ಲೀಪರ್, ಹವಾನಿಯಂತ್ರಣ ಸಹಿತ ಸ್ಲೀಪರ್ ಮತ್ತು ವೋಲ್ವೊ ಮಾದರಿ ಬಸ್ಸಗಳು ಸೇರಿದಂತೆ ಒಟ್ಟು 419 ಅನುಸೂಚಿಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿತ್ತು.

    ಸರ್ಕಾರದ ನಿರ್ದೇಶನಗಳು ಬಂದ ನಂತರ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಯಾವ ಮಾದರಿಯ ಬಸ್ಸುಗಳನ್ನು ಕಾರ್ಯಾಚರಣೆ ಮಾಡಬೇಕು? ಯಾವ ಮಾರ್ಗಗಳಲ್ಲಿ ಎಷ್ಟು ಬಸ್ಸುಗಳನ್ನು ರಸ್ತೆಗಿಳಿಸಬೇಕು ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ್ ತಿಳಿಸಿದ್ದಾರೆ.

  • ಸಾರಿಗೆ ಬಸ್ಸಿನಲ್ಲಿ ದಿಢೀರ್ ಬೆಂಕಿ – ಸಮಯಪ್ರಜ್ಞೆ ತೋರಿದ ಚಾಲಕ

    ಸಾರಿಗೆ ಬಸ್ಸಿನಲ್ಲಿ ದಿಢೀರ್ ಬೆಂಕಿ – ಸಮಯಪ್ರಜ್ಞೆ ತೋರಿದ ಚಾಲಕ

    ತುಮಕೂರು: ನಗರದ ಶಿವಕುಮಾರ್ ಸ್ವಾಮೀಜಿ ಸರ್ಕಲ್ ಬಳಿ ತುಮಕೂರು ನಗರ ಸಾರಿಗೆ ಬಸ್ಸೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

    ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದನ್ನು ಅರಿತ ಚಾಲಕ ತಕ್ಷಣವೇ ಪ್ರಯಾಣಿಕರನ್ನು ಕೆಳಗೆ ಇಳಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ದಳ ಸ್ಥಳಕ್ಕ ಧಾವಿಸಿ ಬೆಂಕಿ ನಂದಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ತೊಂದರೆ ಸಂಭವಿಸಿಲ್ಲ.

    ಶಾರ್ಟ್ ಸರ್ಕ್ಯೂಟ್​ನಿಂದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಮೊದಲು ಬಸ್ಸಿನಲ್ಲಿ ಹೋಗೆ ಕಾಣಿಸಿಕೊಂಡಿತ್ತು. ಬಳಿಕ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು.

    ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

  • ಸರ್ಕಾರಿ ಬಸ್ಸುಗಳ ಅವಾಂತರ- ಚಾಲಕ ನಿರ್ವಾಹಕರಿಂದ ಬಸ್ ತಳ್ಳಾಟ, ನೂಕಾಟ

    ಸರ್ಕಾರಿ ಬಸ್ಸುಗಳ ಅವಾಂತರ- ಚಾಲಕ ನಿರ್ವಾಹಕರಿಂದ ಬಸ್ ತಳ್ಳಾಟ, ನೂಕಾಟ

    ಬೆಂಗಳೂರು: ಸಾರಿಗೆ ವ್ಯವಸ್ಥೆ ಒಂದು ಗ್ರಾಮದ ಅಭಿವೃದ್ಧಿ ಸೂಚಕ ಅಂತಾರೇ, ಆದರೆ ಗ್ರಾಮಾಂತರ ಸರ್ಕಾರಿ ಬಸ್ಸುಗಳ ಕಥೆ ದೇವರೇ ಗತಿ ಎನ್ನುವಂತಿದೆ.

    ಹೌದು. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನಲ್ಲಿ ಹಳೆಯ ಕೆಎಸ್ಆರ್‌ಟಿಸಿ ಬಸ್ಸುಗಳ ಸಂಚಾರ ಹೆಚ್ಚಾಗಿದ್ದು, ಚಾಲಕ ನಿರ್ವಾಹಕರಿಂದ ಬಸ್ ತಳ್ಳಾಟ, ನೂಕಾಟ ಸಾಮಾನ್ಯವಾಗಿ ಬಿಟ್ಟಿದೆ. ದಿನನಿತ್ಯವೂ ಕೆಟ್ಟು ನಿಲ್ಲುವ ಸರ್ಕಾರಿ ಕೆಎಸ್ಆರ್‌ಟಿಸಿ ಬಸ್ಸುಗಳಿಂದ ಚಾಲಕ ನಿರ್ವಾಹಕರು ಹೈರಾಣಾಗಿದ್ದಾರೆ.

    ಇದನ್ನೆಲ್ಲಾ ನೋಡಿದರೆ ಸಾರಿಗೆ ಇಲಾಖೆಯಲ್ಲಿ ಬಸ್ಸುಗಳ ನಿರ್ವಹಣೆಗೆ ಹಣವಿಲ್ಲವಾ ಎಂಬ ಪ್ರಶ್ನೆ ಮೂಡುವುದು ಸಹಜವಾಗಿದೆ. ನೆಲಮಂಗಲ ಬಸ್ ನಿಲ್ದಾಣದಲ್ಲಿ ಸಿಬ್ಬಂದಿಗಳ ಪರದಾಟ ಹೇಳತೀರದಾಗಿದ್ದು, ಹಿಂದೆ ಮುಂದೆ ತಳ್ಳಿದರೂ ಸ್ಟಾರ್ಟ್ ಆಗದ ಬಸ್ಸುಗಳು ಇಲಾಖೆಗೆ ಹಾಗೂ ಪ್ರಯಾಣಿಕರಿಗೆ ಕಿರಿ ಕಿರಿ ಉಂಟುಮಾಡುತ್ತಿದೆ.

    ಕೆಟ್ಟು ನಿಲ್ಲುವ ಬಸ್ಸುಗಳನ್ನು ಮತ್ತೊಂದು ಬಸ್ಸಿನ ಸಹಾಯ ಪಡೆದು ಸ್ಟಾರ್ಟ್ ಮಾಡಿ ಸಿಬ್ಬಂದಿ ಕೊಂಡಯ್ಯುತ್ತಿದ್ದಾರೆ. ಕೆಲವು ಬಸ್ಸುಗಳಂತೂ ಟ್ರಾಫಿಕ್‍ನಲ್ಲಿ ಕೆಟ್ಟು ನಿಲ್ಲುತ್ತಿದ್ದು ಪ್ರಯಾಣಿಕರು, ಸಾರಿಗೆ ಸಿಬ್ಬಂದಿ ಪರದಾಟವಂತಾಗಿದೆ.

  • ಪದೇ ಪದೇ ಸಂಭವಿಸುವ ಅಪಘಾತ – ಮುಂಜಾಗ್ರತಾ ಕ್ರಮಕ್ಕೆ ಜನರ ಆಗ್ರಹ

    ಪದೇ ಪದೇ ಸಂಭವಿಸುವ ಅಪಘಾತ – ಮುಂಜಾಗ್ರತಾ ಕ್ರಮಕ್ಕೆ ಜನರ ಆಗ್ರಹ

    ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕು ಮರಿಯಮ್ಮನಹಳ್ಳಿ ಬಳಿಯ ಬೈಪಾಸ್‍ನಲ್ಲಿ ಸಾರಿಗೆ ಬಸ್‍ಗೆ ಖಾಸಗಿ ವಾಹನವೊಂದು ಡಿಕ್ಕಿ ಹೊಡೆದಿದೆ.

    ಡಿಕ್ಕಿ ಹೊಡೆದ ರಭಸಕ್ಕೆ ಸಾರಿಗೆ ಬಸ್ಸಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶುಕ್ರವಾರ ಈ ಘಟನೆ ನಡೆದಿದೆ. ಹೊಸಪೇಟೆಯಿಂದ ಹಗರಿಬೊಮ್ಮನಹಳ್ಳಿ ಕಡೆಗೆ ಸರ್ಕಾರಿ ಬಸ್ ಹೊರಟಿದ್ದು ಮಾರ್ಗ ಮಧ್ಯದಲ್ಲಿ ಈ ಅಪಘಾತ ಸಂಭವಿಸಿದೆ.

    ಈ ಘಟನೆ ಪಕ್ಕದ ಹೋಟೆಲ್‍ನಲ್ಲಿ ಹಾಕಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸಲು ಲಾರಿ ಚಾಲಕನ ಅಜಾಗರೂಕತೆ ಕಾರಣ ಎಂದು ಹೇಳಲಾಗಿದೆ. ಇದೇ ಜಾಗದಲ್ಲಿ ಪದೇ ಪದೇ ಅಪಘಾತ ಸಂಭವಿಸುತಿದ್ದು, ಒಂದೇ ವಾರದಲ್ಲಿ ನಡೆದ ಮೂರನೇ ಅಪಘಾತ ಇದಾಗಿದೆ.

    ಅಪಘಾತದಿಂದ ಪ್ರಯಾಣಿಕರು ತಮ್ಮ ಪ್ರಾಣ ಕೈಯಲ್ಲಿ ಹಿಡಿದು ಸಂಚಾರ ಮಾಡುವಂತಾಗಿದೆ. ಹೀಗಾಗಿ ಇಲ್ಲಿ ಸೂಕ್ತ ಸಂಚಾರಿ ಫಲಕ ಅಳವಡಿಸಲು ಜನರು ಆಗ್ರಹಿಸಿದ್ದಾರೆ. ಈ ಸಂಬಂಧ ಹೊಸಪೇಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕನಸುಗಳನ್ನು ಹೊತ್ತು ಬೆಂಗ್ಳೂರಿಗೆ ಬರ್ತಿದ್ದವ ಶವವಾದ

    ಕನಸುಗಳನ್ನು ಹೊತ್ತು ಬೆಂಗ್ಳೂರಿಗೆ ಬರ್ತಿದ್ದವ ಶವವಾದ

    ಹಾಸನ: ಕನಸುಗಳನ್ನು ಹೊತ್ತು ಹೊಸ ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬರುತ್ತಿದ್ದ ಬಂಟ್ವಾಳದ ಯುವಕ ತಡರಾತ್ರಿ ಹಾಸನದ ಬಳಿ ನಡೆದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಅಪಘಾತದ ದೃಶ್ಯಾವಳಿಗಳು ಬೆಚ್ಚಿಬೀಳಿಸುವಂತಿದೆ.

    ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅಭಿಷೇಕ್(29) ಅವರಿಗೆ ಬೆಂಗಳೂರಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಕೆಲಸ ಸಿಕ್ಕಿತ್ತು. ಹೀಗಾಗಿ ಅವರು ಭಾನುವಾರ ರಾತ್ರಿ ಮಾಣಿಯಿಂದ ಸಾರಿಗೆ ಬಸ್ ಹತ್ತಿದ್ದರು. ಬೆಳಗ್ಗೆ ಹೊಸ ಕೆಲಸಕ್ಕೆ ಹೋಗುವ ಖುಷಿಯಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದರು. ಆದರೆ ದುರಾದೃಷ್ಟವಶಾತ್ ತಡರಾತ್ರಿ ಅವರು ಜಿಲ್ಲೆಯ ಚನ್ನರಾಯಪಟ್ಟಣದ ಹಿರೀಸಾವೆ ಗ್ರಾಮದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

    ಬೆಂಗಳೂರಿನಲ್ಲಿಯೇ ಅಭಿಷೇಕ್ ಕುಟುಂಬ ನೆಲೆಸಿತ್ತು. ಆದರೆ ಸಂಬಂಧಿಯ ಮದುವೆಗೆಂದು ಅಭಿಷೇಕ್ ಹಾಗೂ ಅವರ ಕುಟುಂಬ ಮಾಣಿಗೆ ತೆರೆಳಿತ್ತು. ಹೀಗೆ ಮದುವೆ ಮುಗಿಸಿಕೊಂಡು ಅಭಿಷೇಕ್ ಹಾಗೂ ಅವರ ತಮ್ಮ ಬೆಂಗಳೂರಿಗೆ ವಾಪಸ್ ಬರುತ್ತಿದ್ದರು. ಈ ವೇಳೆ ಬಸ್ ಅಪಘಾತಕ್ಕೀಡಾಗಿ ಅಭಿಷೇಕ್ ಸ್ಥಳದಲ್ಲೇ ಸಾವನ್ನಪ್ಪಿದರು. ಅವರ ತಮ್ಮ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಮಂಗಳೂರು ಕಡೆಯಿಂದ ಬೆಂಗಳೂರಿನ ಕಡೆಗೆ ಸಾರಿಗೆ ಬಸ್ಸು ವೇಗದಿಂದ ಬರುತ್ತಿತ್ತು. ಈ ವೇಳೆ ಹಿರಿಸಾವೆ ಗ್ರಾಮದ ಬಸ್ ನಿಲ್ದಾಣದ ಬಳಿ ಇನ್ನೋವಾ ಕಾರು, ಬಸ್ ಎದುರು ಬಂದು ನಿಂತಿರುವುದನ್ನು ಕಂಡ ಬಸ್ ಚಾಲಕ ತಕ್ಷಣ ಬ್ರೇಕ್ ಹಾಕಿದ್ದಾರೆ. ಆದರೆ ಸಾಕಷ್ಟು ವೇಗದಲ್ಲಿ ಬರುತ್ತಿದ್ದ ಬಸ್ ಬ್ರೇಕ್ ಹಾಕಿದ ರಭಸಕ್ಕೆ ಒಮ್ಮೆಲೆ ಪಲ್ಟಿಯಾಗಿದೆ. ಅಪಘಾತದ ಭೀಕರತೆಯ ಸಿಸಿಟಿವಿ ದೃಶ್ಯಾವಳಿಗಳು ಭಯಹುಟ್ಟಿಸುವಂತಿದೆ.

    ತಡರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಒಟ್ಟು 46 ಮಂದಿ ಪ್ರಯಾಣಿಕರು ಬಸ್ಸಿನಲ್ಲಿ ಇದ್ದರು. ಸದ್ಯ ಗಾಯಾಳುಗಳನ್ನು ಚಿಕಿತ್ಸೆ ನೀಡಿ ಪರ್ಯಾಯ ವ್ಯವಸ್ಥೆಯೊಂದಿಗೆ ಕಳಹಿಸಿಕೊಡಲಾಗಿದೆ. ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಚಾಲಕನ ನಿಯಂತ್ರಣ ತಪ್ಪಿ ಜೋಳದ ಹೊಲಕ್ಕೆ ಉರುಳಿದ ಸಾರಿಗೆ ಬಸ್

    ಚಾಲಕನ ನಿಯಂತ್ರಣ ತಪ್ಪಿ ಜೋಳದ ಹೊಲಕ್ಕೆ ಉರುಳಿದ ಸಾರಿಗೆ ಬಸ್

    ಹಾಸನ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ರಸ್ತೆಯಿಂದ ಜೋಳದ ಹೊಲಕ್ಕೆ ಉರುಳಿದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಚೌಡೇನಹಳ್ಳಿ ನಡೆದಿದೆ.

    ಬಸ್ ಹಾಸನದಿಂದ ಬೆಂಗಳೂರಿಗೆ ಹೊರಟಿತ್ತು. ಚಾಲಕ ಬಸ್ ಇಳಿಜಾರಿನಲ್ಲಿ ನ್ಯೂಟ್ರಲ್ ಮಾಡಿಕೊಂಡು ಹೋಗುತ್ತಿದ್ದನು. ಈ ವೇಳೆ ಬಸ್ ನಿಯಂತ್ರಣಕ್ಕೆ ಸಿಗದೇ ರಸ್ತೆಯಿಂದ ಜೋಳದ ಹೊಲಕ್ಕೆ ಉರುಳು ಬಿದ್ದಿದೆ. ಈ ಬಸ್ ಹಾಸನದ ಡಿಪೋಗೆ ಸೇರಿದೆ.

    10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಚನ್ನರಾಯಪಟ್ಟಣ ಹಾಗೂ ಉದಯಪುರ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎನ್ನುವ ಮಾತುಗಳು ಕೇಳಿ ಬಂದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸಾರಿಗೆ ಬಸ್‍ನಲ್ಲಿಯೇ ಮೈಮರೆತ ಜೋಡಿ – ಒಬ್ಬರಿಗೊಬ್ಬರು ಚುಂಬನದ ಸುರಿಮಳೆ

    ಸಾರಿಗೆ ಬಸ್‍ನಲ್ಲಿಯೇ ಮೈಮರೆತ ಜೋಡಿ – ಒಬ್ಬರಿಗೊಬ್ಬರು ಚುಂಬನದ ಸುರಿಮಳೆ

    ಹಾಸನ: ಯುವ ಪ್ರೇಮಿಗಳು ಬಸ್ ನಲ್ಲಿಯೇ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಹಾಸನ-ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಪ್ರೇಮಿಗಳ ಸರಸ ಸಲ್ಲಾಪದ ವಿಡಿಯೋ ವೈರಲ್ ಆಗಿದೆ. ಬಸ್‍ನಲ್ಲಿ ಅಕ್ಕ-ಪಕ್ಕ ಕುಳಿತು ಜೋಡಿ ಪ್ರಯಾಣಿಕರು ಕುಳಿತಿದ್ದರೂ ಒಬ್ಬರಿಗೊಬ್ಬರು ತಬ್ಬಿಕೊಂಡು ಚುಂಬನ ನೀಡುತ್ತಾ ಮೈ ಮರೆತಿದ್ದಾರೆ. ಜೋಡಿ ಕುಳಿತಿದ್ದ ಪಕ್ಕದ ಸೀಟ್ ನಲ್ಲಿ ಕುಳಿತಿದ್ದ ಸಹ ಪ್ರಯಾಣಿಕರೊಬ್ಬರು ಪ್ರೇಮಿಗಳು ವರ್ತನೆಯನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದುಕೊಂಡಿದ್ದಾರೆ. ಇದನ್ನೂ ಓದಿ:  ಹೊರಗಿನಿಂದ ಸುಂದರ ಪಾರ್ಕ್-ಒಳಗೆ ಪ್ರೇಮಿಗಳ ಅಸಭ್ಯ ವರ್ತನೆ

    ಯುವಕ-ಯುವತಿ ಯಾರು ಎಂಬುದರ ಬಗ್ಗೆ ತಿಳಿದು ಬಂದಿಲ್ಲ. ವಿಡಿಯೋ ಸ್ಥಳೀಯ ಮಟ್ಟದಲ್ಲಿ ವೈರಲ್ ಆಗಿದ್ದು, ಸಾರಿಗೆ ವಾಹನದಲ್ಲಿ ಎಲ್ಲ ವರ್ಗದ ಜನರು ಪ್ರಯಾಣಿಸುತ್ತಿರುತ್ತಾರೆ. ಈ ರೀತಿ ಜೋಡಿಗಳು ಅಸಭ್ಯವಾಗಿ ವರ್ತಿಸಿದ್ರೆ ಸಹ ಪ್ರಯಾಣಿಕರು ಮುಜುಗರಕೊಳ್ಳಗಾಗುತ್ತಾರೆ. ಬಸ್ ನಲ್ಲಿ ಮಕ್ಕಳು ಸಹ ಪ್ರಯಾಣ ಮಾಡುತ್ತಿರುತ್ತಾರೆ. ಇಂತಹ ಘಟನೆಗಳು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಜೋಡಿಯ ನಡವಳಿಕೆಯನ್ನು ಸಾರ್ವಜನಿಕರು ಖಂಡಿಸಿದ್ದಾರೆ. ಇದನ್ನೂ ಓದಿ: ಕಬ್ಬನ್ ಪಾರ್ಕ್ ನಲ್ಲಿ ರೊಮ್ಯಾನ್ಸ್ ಮಾಡುವ ಪ್ರೇಮಿಗಳೇ ಹುಷಾರ್..!

    ಈ ಮೊದಲು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಕಾಲೇಜು ವಿದ್ಯಾರ್ಥಿಗಳದ್ದು ಎಂದು ಹೇಳಲಾದ ವಿಡಿಯೋ ವೈರಲ್ ಆಗಿತ್ತು. ಕಾಲೇಜಿಗೆ ಚಕ್ಕರ್ ಹಾಕಿದ್ದ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ರೊಮ್ಯಾನ್ಸ್ ನಲ್ಲಿ ತೊಡಗಿಕೊಂಡಿದ್ದರು. ರಸ್ತೆಯ ಎರಡು ಬದಿ ಇಬ್ಬರನ್ನು ಕಾವಲು ನಿಲ್ಲಿಸಿ ಹುಡುಗ ಹುಡುಗಿಯನ್ನು ಕಿಸ್ ಮಾಡಿದ್ದನು. ವಿಡಿಯೋದಲ್ಲಿ 4 ಜನ ವಿದ್ಯಾರ್ಥಿಗಳು ಅಂದರೆ ಇಬ್ಬರು ವಿದ್ಯಾರ್ಥಿಯರು ಹಾಗೂ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಬದಿಯಲ್ಲಿ ಕಾಣಿಸಿಕೊಂಡಿದ್ದರು. ಅದರಲ್ಲಿ ಇಬ್ಬರು ವಿದ್ಯಾರ್ಥಿಯರು ಮುಚ್ಚಿದ್ದ ಅಂಗಡಿಯ ಮುಂದೆ ಕುಳಿತ್ತಿದ್ದು, ಇನ್ನೂ ಇಬ್ಬರು ವಿದ್ಯಾರ್ಥಿಗಳು ಅವರಿಗೆ ಕಾವಲು ಆಗಿ ರಸ್ತೆಯ ಬದಿ ನಿಂತಿದ್ದರು. ಇದನ್ನೂ ಓದಿ: ಸಾರ್ವಜನಿಕ ಸ್ಥಳದಲ್ಲೇ ಕಿಸ್ ಮಾಡಿ, ಮೈಮೇಲೆ ಕೈ ಹಾಕ್ತಾ, ತಳ್ಳಾಡಿದ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು!

    ಹುಡುಗ ತನ್ನ ಪ್ರೇಯಸಿಯನ್ನು ಕಿಸ್ ಮಾಡಲು ಪ್ರಯತ್ನಿಸುತ್ತಿರುತ್ತಾನೆ. ಈ ವೇಳೆ ಆ ರಸ್ತೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ತಿರುಗಾಡುತ್ತಿದ್ದು, ಆತ ಸುಮ್ಮನಾಗುತ್ತಾನೆ. ನಂತರ ರಸ್ತೆಯಲ್ಲಿ ಯಾರೂ ಇಲ್ಲದ ವೇಳೆ ಹುಡುಗ ಆ ಹುಡುಗಿಯನ್ನು ಕಿಸ್ ಮಾಡಿ ಅಲ್ಲಿಂದ ಹೋಗಿದ್ದನು. ಕಿಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. 2018ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೇಟೆಯ ಹೃದಯಭಾಗದಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಸಾರ್ವಜನಿಕ ಜಾಗದಲ್ಲಿ ಕಿಸ್ ಮಾಡುತ್ತಾ, ಮೈ ಮೇಲೆ ಕೈಹಾಕುತ್ತಾ, ತಳ್ಳಾಡುತ್ತಾ ಅಸಭ್ಯ ವರ್ತನೆ ತೋರಿದ್ದ ವಿಡಿಯೋ ವೈರಲ್ ಆಗಿತ್ತು. ಇದನ್ನೂ ಓದಿ: ಬೇಲೂರಿನಲ್ಲಿ ಟ್ಯೂಶನ್ ಗೆಂದು ಹೇಳಿ ಶಾಲೆಯ ಹಿಂಭಾಗದಲ್ಲಿಯೇ ಲವ್ವಿ-ಡವ್ವಿ!