Tag: ಸಾಲ

  • 1 ರೂಪಾಯಿ ಬಡ್ಡಿಗೆ ಲೋನ್‌ ಕೊಡಿಸ್ತೀವಿ ಅಂತ ಬರ್ತಾರೆ ಹುಷಾರ್‌ – ಬೆಂಗಳೂರಲ್ಲೊಂದು ಖತರ್ನಾಕ್ ಲೇಡಿ ಗ್ಯಾಂಗ್

    1 ರೂಪಾಯಿ ಬಡ್ಡಿಗೆ ಲೋನ್‌ ಕೊಡಿಸ್ತೀವಿ ಅಂತ ಬರ್ತಾರೆ ಹುಷಾರ್‌ – ಬೆಂಗಳೂರಲ್ಲೊಂದು ಖತರ್ನಾಕ್ ಲೇಡಿ ಗ್ಯಾಂಗ್

    – 15 ಜನರ ವಿರುದ್ಧ ಬಿತ್ತು ಕೇಸ್‌; ಕಿಂಗ್‌ಪಿನ್‌ ನಯನಾ ಅರೆಸ್ಟ್‌

    ಬೆಂಗಳೂರು: ನಗರದಲ್ಲೊಂದು ಖತರ್ನಾಕ್‌ ಗ್ಯಾಂಗ್‌ ಹುಟ್ಟಿಕೊಂಡಿದೆ. ಕಡಿಮೆ ಬಡ್ಡಿಗೆ ಲೋನ್‌ (Loan) ಕೊಡಿಸ್ತೀವಿ ಅಂತ ಬಂದು ಗ್ರಾಹಕರಿಂದ ಹಣ ಪೀಕಿ ಎಸ್ಕೇಪ್‌ ಆಗ್ತಾರೆ. ಇದೇ ರೀತಿ ಜನರನ್ನ ಯಾಮಾರಿಸುತ್ತಿದ್ದ ಖತರ್ನಾಕ್‌ ಲೇಡಿ ಗ್ಯಾಂಗ್‌ವೊಂದು ಪೊಲೀಸರ ಬಲೆಗೆ ಬಿದ್ದಿದೆ. ಪ್ರಕರಣ ಕಿಂಗ್‌ಪಿನ್‌ ಲೇಡಿಯನ್ನ (Lady Gang) ಬಂಧಿಸಿರುವ ಪೊಲೀಸರು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

    ಹೌದು.. ಸುಬ್ಬಲಕ್ಷ್ಮಿ ಚಿಟ್‌ ಫಂಡ್‌ (Chit Fund) ಹೆಸರಿನಲ್ಲಿ 1 ರೂಪಾಯಿ ಬಡ್ಡಿಗೆ ಲೋನ್‌ ಕೊಡಿಸ್ತೀವಿ ಅಂತ ನಂಬಿಸಿದ್ದ ಲೇಡಿಗ್ಯಾಂಗ್‌ ಗ್ರಾಹಕರೊಬ್ಬರಿಗೆ 30 ರೂ. ಪಡೆದು ವಂಚನೆ ಎಸಗಿತ್ತು. ದೂರು ಪಡೆದು ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕಿಂಗ್‌ಪಿನ್‌ ಲೇಡಿಯನ್ನ ಬಂಧಿಸಿದ್ದಾರೆ. ವಿಚಾರಣೆ ಬಳಿಕ ಒಟ್ಟು 15 ಜನರ ವಿರುದ್ಧ ಕೇಸ್‌ ದಾಖಲಿಸಿದ್ದಾರೆ. ಇದನ್ನೂ ಓದಿ: ಹೆಂಡ್ತಿ ಕೊಂದು ಕೊಳವೆ ಬಾವಿಯಲ್ಲಿ ಹಾಕಿ, ದೇವರಿಗೆ ಮೂರು ಪ್ರಾಣಿ ಬಲಿ ಅರ್ಪಿಸಿದ್ದ ಕೇಡಿ ಗಂಡ!

    ಈ ಗ್ಯಾಂಗ್‌ ಪಂಗನಾಮ ಹಾಕಿದ್ದು ಹೇಗೆ?
    1 ರೂ.ಪಾಯಿಗೆ ಲೋನ್‌ ಕೊಡ್ತಿಸ್ತೀವಿ ಅಂದಿದ್ದ ಈ ಗ್ಯಾಂಗ್‌ ಗ್ರಾಹಕರಿಂದ ಲೋನ್‌ ಪ್ರೊಸೆಸಿಂಗ್‌ಗೆ 30 ರೂ. ಹಣ ಪಡೆದುಕೊಂಡಿತ್ತು. ಕಿಂಗ್‌ ಪಿನ್‌ ನಯನಾ ನಮ್ಮ ಸಂಬಂಧಿ ಸುಬ್ಬಲಕ್ಷ್ಮಿ ಚಿಟ್ ಫಂಡ್‌ನಲ್ಲಿ ಕೆಲ್ಸ ಮಾಡ್ತಿದ್ದಾರೆ. 10 ಲಕ್ಷ ಲೋನ್ ಕೊಡಿಸ್ತಾರೆ, ಬರೀ 1 ರೂಪಾಯಿ ಬಡ್ಡಿ ಅಷ್ಟೇ ಅಂತ ಹೇಳಿದ್ದಾಳೆ. ನಂತ್ರ ಲೋನ್‌ ಮಂಜೂರಾಗಬೇಕಾದ್ರೆ, ಮೊದಲೇ 3 ಇಎಂಐ ಕಟ್ಟಬೇಕು. ತಿಂಗಳಿಗೆ 10 ಸಾವಿರದಂತೆ 30 ಸಾವಿರ ರೂ. ಇಎಂಐ, ಜೊತೆಗೆ ಪ್ರೊಸೆಸಿಂಗ್‌ ಶುಲ್ಕ 5 ಸಾವಿರ ರೂ. ಕಟ್ಟಬೇಕು ಅಂತ ಹೇಳಿದ್ದಾರೆ. ಕೊನೆಗೆ ಎಲ್ಲರಿಗೂ ಒಟ್ಟಿಗೆ ಲೋನ್‌ ರಿಲೀಸ್‌ ಮಾಡ್ತೇವೆ ಅಂತ ಹೇಳಿ ಅಬೇಸ್‌ ಆಗಿದ್ದಾರೆ. ಇದನ್ನೂ ಓದಿ: ದುರ್ಗಾಪುರ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್‌ – ಜೊತೆಗಿದ್ದ ಸ್ನೇಹಿತನೇ 6ನೇ ಆರೋಪಿ

    ನಯನಾ ಗೌಡ ಈ ಲೇಡಿಗ್ಯಾಂಗ್‌ನ ಕಿಂಗ್‌ ಪಿನ್‌ ಆಗಿದ್ದು, ಕವನಾ, ಗಿರೀಜಾ ಎಂಬ ಮಹಿಳೆಯರೂ ಸೇರಿಕೊಂಡಿದ್ದಾರೆ. ಗ್ರಾಹಕರಿಂದ ಹಣ ಕಟ್ಟಿಸಿಕೊಂಡ ಬಳಿಕ ಲೋನ್‌ ಕೊಡಿಸದೇ, ಹಣವನ್ನೂ ವಾಪಸ್‌ ಕೊಡದೇ ವಂಚಿಸಿದ್ದಾರೆ. ಈ ಕುರಿತು ಸಂತ್ರಸ್ತರು ಬಸವೇಶ್ವರನಗರ, ಕೆ.ಪಿ. ಅಗ್ರಹಾರ, ಶ್ರೀರಾಮ್ ಪುರ, ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ತನಿಖೆ ಬಳಿಕ ಕಿಂಗ್‌ ಪಿನ್‌ ನಯನಾಳನ್ನ ಬಂಧಿಸಿರುವ ಪೊಲೀಸರು ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳನ್ನ ಬಯಲಿಗೆಳೆದಿದ್ದಾರೆ. ವಿಚಾರಣೆ ವೇಳೆ ನಯನಾ ಹಲವರ ಹೆಸರು ಬಾಯ್ಬಿಟ್ಟಿದ್ದಿ, ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 15 ಜನರ ಮೇಲೆ ಕೇಸ್ ದಾಖಲಾಗಿದೆ. ಇದನ್ನೂ ಓದಿ: ನೂರಾರು ಶವಗಳ ಹೂತಿಟ್ಟ ಕೇಸ್ – ಕೋರ್ಟ್‌ನಲ್ಲಿ ಹೊಸ ಕಥೆ ಬಿಚ್ಚಿಟ್ಟ `ಬುರುಡೆ’ ಚಿನ್ನಯ್ಯ

  • ಒಂದು ತಿಂಗಳ ಒಳಗೆ ಫ್ರೆಂಚ್‌ ಪ್ರಧಾನಿ ಪಟ್ಟದಿಂದ ಇಳಿದ ಲೆಕೋರ್ನು – 3 ವರ್ಷದಲ್ಲಿ 7 ಮಂದಿ ರಾಜೀನಾಮೆ

    ಒಂದು ತಿಂಗಳ ಒಳಗೆ ಫ್ರೆಂಚ್‌ ಪ್ರಧಾನಿ ಪಟ್ಟದಿಂದ ಇಳಿದ ಲೆಕೋರ್ನು – 3 ವರ್ಷದಲ್ಲಿ 7 ಮಂದಿ ರಾಜೀನಾಮೆ

    ಪ್ಯಾರಿಸ್: ಮೂರು ವಾರಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದ ಫ್ರಾನ್ಸ್‌ (France) ಪ್ರಧಾನಿ ಸೆಬಾಸ್ಟಿಯನ್ ಲೆಕೋರ್ನು (Sebastien Lecornu) ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) ಸೋಮವಾರ ಲೆಕೋರ್ನು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

    ರಕ್ಷಣಾ ಸಚಿವರಾಗಿದ್ದ 39 ವರ್ಷದ ಲೆಕೋರ್ನು ಸೆ.9 ರಂದು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸೆಬಾಸ್ಟಿಯನ್ ಲೆಕೋರ್ನು ಹೊಸ ಕ್ಯಾಬಿನೆಟ್‌ ಘೋಷಣೆ ಮಾಡಿ ಸೋಮವಾರ ಪ್ರಥಮ ಸಭೆ ನಡೆಸಬೇಕಿತ್ತು. ಆದರೆ ಹೊಸ ಕ್ಯಾಬಿನೆಟ್‌ಗೆ ಆಡಳಿತ ಪಕ್ಷದಿಂದ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದ 3 ವರ್ಷಗಳಲ್ಲಿ ಫ್ರಾನ್ಸ್‌ನಲ್ಲಿ ಏಳು ಪ್ರಧಾನಿಗಳು ರಾಜೀನಾಮೆ ಸಲ್ಲಿಸಿದ್ದಾರೆ.

    ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್
    ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

    ರಾಜೀನಾಮೆ ಯಾಕೆ?
    ಫ್ರಾನ್ಸ್‌ ಸಂಸತ್ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ. ಸದ್ಯ ಫ್ರಾನ್ಸ್‌ನಲ್ಲಿ ಅಲ್ಪಮತದ ಸರ್ಕಾರವಿದೆ. 2026ರಲ್ಲಿ ಬಜೆಟ್ ಮಂಡಿಸಬೇಕಿದ್ದು, ಅದಕ್ಕೆ ಬಹುಮತದ ಅಂಗೀಕಾರ ಪಡೆಯಬೇಕಿದೆ. ಬಜೆಟ್‌ಗೆ ಅಂಗೀಕಾರ ಪಡೆಯಲು ವಿಫಲವಾದ ಬೆನ್ನಲ್ಲೇ ಸೆಬಾಸ್ಟಿಯನ್ ಲೆಕೋರ್ನು ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೊದಲಿದ್ದ ಪ್ರಧಾನಿಗಳಿಗೆ ಮಿತ್ರ ಕೂಟದಿಂದ ಬೆಂಬಲ ಸಿಗದ ಕಾರಣ ಅವರು ರಾಜೀನಾಮೆ ಸಲ್ಲಿಸಿದ್ದರು.  ಇದನ್ನೂ ಓದಿ:  ಅಮೆಜಾನ್‌ ಕಾಡಿನ ಮರಗಳು ದಪ್ಪ ಆಗ್ತಿವೆಯಂತೆ – ಇದು ಗುಡ್‌ ನ್ಯೂಸ್‌ or ಬ್ಯಾಡ್‌ ನ್ಯೂಸ್?

    ಎಡಪಂಥೀಯರ ಕೂಟ ಅಧ್ಯಕ್ಷರ ಚುನಾವಣೆಗೆ ಆಗ್ರಹಿಸುತ್ತಿದ್ದರೆ ಬಲಪಂಥೀಯರ ಆರ್‌ಎನ್ ಕೂಟವು ಸಂಸತ್ತನ್ನು ವಿಸರ್ಜಿಸಿ ಚುನಾವಣೆಗೆ ಆಗ್ರಹಿಸುತ್ತಿದೆ. ಆದರೆ ಮ್ಯಾಕ್ರನ್ 2027ರವರೆಗೆ ನಾನೇ ಅಧ್ಯಕ್ಷನಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.

    ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ನಡೆಯುವುದು ಅನುಮಾನ. ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಪಡೆಯದಿರುವ ಸಾಧ್ಯತೆಯೇ ಹೆಚ್ಚಿದೆ. ಹೀಗಾಗಿ ಮುಂದಿನ ಅಧ್ಯಕ್ಷೀಯ ಚುನಾವಣೆ ನಡೆಯುವ 2027 ರವರೆಗೆ ರಾಜಕೀಯ ಅಸ್ಥಿರತೆ ಹೀಗೆಯೇ ಮುಂದುವರಿಯುವ ಸಾಧ್ಯತೆಯಿದೆ.

    ಫ್ರಾನ್ಸ್‌ನ ಸಾರ್ವಜನಿಕ ಸಾಲವು (Debt) ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ. ಫ್ರಾನ್ಸ್‌ನ ಸಾಲ-ಜಿಡಿಪಿ ಅನುಪಾತವು ಈಗ ಗ್ರೀಸ್ ಮತ್ತು ಇಟಲಿಯ ನಂತರ ಯುರೋಪಿಯನ್ ಒಕ್ಕೂಟದ ಮೂರನೇ ಅತ್ಯಧಿಕವಾಗಿದೆ ಮತ್ತು ಯುರೋಪಿಯನ್‌ ನಿಯಮಗಳ ಅಡಿಯಲ್ಲಿ ಅನುಮತಿಸಲಾದ 60 ಪ್ರತಿಶತಕ್ಕಿಂತ ಎರಡು ಪಟ್ಟು ಹತ್ತಿರದಲ್ಲಿದೆ.

    ಕೋವಿಡ್‌ ಬಳಿಕ ಫ್ರಾನ್ಸ್‌ ಸಾಲದ ಸುಳಿಗೆ ತಲುಪಿದೆ. ದೇಶದಲ್ಲಿ ದುಡಿಯುವ ಯುವ ಜನತೆ ಪ್ರಮಾಣ ಕಡಿಮೆ ಇದ್ದರೆ ಪಿಂಚಣಿ ಪಡೆಯುವ ಹಿರಿಯರ ಸಂಖ್ಯೆ ಹೆಚ್ಚಾಗಿದ್ದಾರೆ. ಕೋವಿಡ್‌ ಬಳಿಕ ಸರ್ಕಾರದ ಖರ್ಚು ಹೆದ್ದಾಗಿದ್ದು ಆದಾಯ ಕಡಿಮೆಯಿದೆ. ಹೀಗಾಗಿ ವಿಪರೀತ ಪ್ರಮಾಣದಲ್ಲಿ ಸಾಲ ಮಾಡಿದ್ದರಿಂದ ಈಗ ಫ್ರಾನ್ಸ್‌ ಆರ್ಥಿಕ ಸಮಸ್ಯೆಗೆ ಸಿಲುಕಿದೆ.

  • ಮನೆ ಖರೀದಿಸುವಾಗ ರಾಧಿಕಾ ಕುಮಾರಸ್ವಾಮಿ 2 ಕೋಟಿ ಸಾಲ ಕೊಟ್ಟಿದ್ದರು: ಜಮೀರ್‌

    ಮನೆ ಖರೀದಿಸುವಾಗ ರಾಧಿಕಾ ಕುಮಾರಸ್ವಾಮಿ 2 ಕೋಟಿ ಸಾಲ ಕೊಟ್ಟಿದ್ದರು: ಜಮೀರ್‌

    ಬೆಂಗಳೂರು: ಮನೆ ಖರೀದಿಸುವಾಗ ರಾಧಿಕಾ ಕುಮಾರಸ್ವಾಮಿ (Radhika Kumaraswamy) ನನಗೆ 2 ಕೋಟಿ ರೂ. ಸಾಲ ನೀಡಿದ್ದರು ಎಂದು ವಸತಿ ಸಚಿವ ಜಮೀರ್‌ ಅಹಮದ್‌ (Zameer Ahmed Khan) ತಿಳಿಸಿದ್ದಾರೆ.

    ರಾಧಿಕಾ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆ ಎದುರಿಸಿದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಾಲ ಕೊಟ್ಟಿರುವುದನ್ನು ನಾನು ಆದಾಯ ತೆರಿಗೆಯಲ್ಲಿ ತೋರಿಸಿದ್ದೇನೆ. ರಾಧಿಕಾ ಕುಮಾರಸ್ವಾಮಿ ಅವರು ಅವರ ಆದಾಯ ತೆರಿಗೆ ಫೈಲ್‌ ಮಾಡುವಾಗ ತೋರಿಸಿದ್ದಾರೆ. ಇಡಿ ದಾಳಿ ನಂತರ ಈಗ ಲೋಕಾಯುಕ್ತದಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಾಗಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.

    ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಸಾಲ ನೀಡಿದ ವ್ಯಕ್ತಿಗಳ ಪಟ್ಟಿ ಸಿಕ್ಕಿತ್ತು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಇದ್ದ ಕಾರಣ ಪೊಲೀಸರು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ರಾಧಿಕಾ, ದಶಕದ ಹಿಂದೆ ತಾವು ಸಚಿವ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಒಪ್ಪಿಕೊಂಡು ಹೇಳಿಕೆ ದಾಖಲಿಸಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ ಈದ್ ಮಿಲಾದ್ ಹೆಸರಲ್ಲಿ ಧರ್ಮಪ್ರಚಾರ ಸಚಿವ ಜಮೀರ್ ನೇತೃತ್ವದ ಕಾರ್ಯಕ್ರಮಕ್ಕೆ ಭಾರಿ ವಿರೋಧ

     

    ಏನಿದು ಪ್ರಕರಣ?
    2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್‌ ಅಹಮದ್‌ ಅವರ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿತ್ತು.

    ಇಡಿ ವರದಿಯ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ಖಾನ್‌ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಅಸ್ತಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ತನಿಖೆಯೂ ಲೋಕಾಯುಕ್ತ ಪೊಲೀಸರಿಗೆ (Lokayukta Police) ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು ಹಲವರ ವಿಚಾರಣೆ ನಡೆಸುತ್ತಿದ್ದಾರೆ.

    ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್‌ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು. ಇದನ್ನೂ ಓದಿ: ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್‌ ಆಪ್ತನಿಂದ ಜಾತಿ ಅಸ್ತ್ರ

    ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್‌ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ.ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್‌ ಅಹ್ಮದ್‌ ಅವರಿಗೆ 2.5 ಕೋಟಿ ರೂಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿರುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು.

  • ಹಣ ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿ ದರ್ಪ

    ಹಣ ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿ ದರ್ಪ

    ವಿಜಯಪುರ: ಸಾಲದ ಹಣ ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿಹಾಕಿರುವ ಅಮಾನವೀಯ ಘಟನೆ ಜಿಲ್ಲೆಯ ಚಡಚಣ (Chadachan) ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ನಡೆದಿದೆ.

    ಕುಮಾರ್‌ಗೌಡ ಬಿರಾದಾರ್ ಎಂಬಾತ ಓರ್ವ ವ್ಯಕ್ತಿಯ ಕಾಲಿಗೆ ಸರಪಳಿ ಕಟ್ಟಿ ಅಮಾನುಷವಾಗಿ ನಡೆದುಕೊಂಡಿದ್ದಾನೆ.ಇದನ್ನೂ ಓದಿ: ಮೈದುನನ ಜೊತೆ ಲವ್ವಿಡವ್ವಿ – ಪತಿ ಕೊಂದು ಆಕಸ್ಮಿಕ ಸಾವು ಅಂತ ಬಿಂಬಿಸಿದ್ದ ಮಹಿಳೆ ಬಂಧನ

    ಕುಮಾರ್‌ಗೌಡನ ಬಳಿ ವ್ಯಕ್ತಿಯೋರ್ವ 20 ಸಾವಿರ ರೂ. ಸಾಲ ಪಡೆದಿದ್ದ. ಇದೀಗ ಸಾಲದ ಹಣವನ್ನು ವಾಪಸ್ ಕೊಡದಿದ್ದಕ್ಕೆ ಆತನ ಕಾಲಿಗೆ ಸರಪಳಿ ಹಾಕಿ ಕಂಬಕ್ಕೆ ಕಟ್ಟಿ ಹಾಕಿದ್ದಾನೆ. ಕುಮಾರ್ ಗೌಡನ ಈ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಭಾರತೀಯ ವಿಮಾನಗಳಿಗೆ ವಾಯು ಮಾರ್ಗ ಬಂದ್ – ಆ.24ರವರೆಗೆ ವಿಸ್ತರಿಸಿದ ಪಾಕ್

  • ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ತಾಯಿ, ಅಂಗವಿಕಲೆ ಮಗಳು ಆತ್ಮಹತ್ಯೆ

    ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ತಾಯಿ, ಅಂಗವಿಕಲೆ ಮಗಳು ಆತ್ಮಹತ್ಯೆ

    ದಾವಣಗೆರೆ: ಸಾಲ ಮರುಪಾವತಿಸುವಂತೆ ಮೈಕ್ರೋ ಫೈನಾನ್ಸ್ (Micro Finance) ಹಾಗೂ ಸ್ವಸಹಾಯ ಸಂಘಗಳ ಕಿರುಕುಳಕ್ಕೆ ಬೇಸತ್ತು ತಾಯಿ ಹಾಗೂ ಅಂಗವಿಕಲೆ ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ (Harihara) ನಗರದ ಬಳಿ ಇರುವ ತುಂಗಭದ್ರ ನದಿ ಸೇತುವೆ ಬಳಿ ನಡೆದಿದೆ.

    ಗಂಗನರಸಿ ಗ್ರಾಮದ ಸುವರ್ಣಮ್ಮ (56), ಅಂಗವಿಕಲ ಮಗಳು ಗೌರಮ್ಮ (26) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಕೂಲಿ ಮಾಡಿ ಜೀವನ ನಡೆಸುತ್ತಿದ್ದ ಸುವರ್ಣಮ್ಮ, ಕೆಲ ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಮೂವರು ಪುತ್ರಿಯರಲ್ಲಿ ಇಬ್ಬರ ವಿವಾಹವಾಗಿದ್ದು, ಅಂಗವಿಕಲೆಯಾದ ಗೌರಮ್ಮ ತಾಯಿಯೊಂದಿಗೆ ನೆಲೆಸಿದ್ದರು. ಕೂಲಿ ಮಾಡಿಕೊಂಡು ಸಂಸಾರ ಸಾಗಿಸುತ್ತಿದ್ದ ಸುವರ್ಣಮ್ಮ, ಸಾಲದ ಹೊರೆಗೆ ಬಳಲಿದ್ದರು ಎನ್ನಲಾಗುತ್ತಿದ್ದು, ಮೈಕ್ರೊ ಫೈನಾನ್ಸ್ ಮತ್ತು ಸ್ವಸಹಾಯ ಸಂಘಗಳಲ್ಲಿ 3 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು. 2 ಸಾಲಕ್ಕೆ ವಾರಕ್ಕೊಮ್ಮೆ ಹಾಗೂ 1 ಸಾಲಕ್ಕೆ ತಿಂಗಳ ಕಂತುಗಳಲ್ಲಿ ಮರುಪಾವತಿ ಮಾಡಬೇಕಿತ್ತು. ಸಾಲದ ಕಂತು ಸರಿಯಾಗಿ ಪಾವತಿಸಲು ಕಷ್ಟಪಡುತ್ತಿದ್ದರು. ಇದನ್ನೂ ಓದಿ: ಕಲಬುರಗಿ | ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ಕಾಲ್ತುಳಿತ – ಮಹಿಳೆ ಸಾವು

    ಸಾಲಗಾರರ ಕಾಟ ತಾಳಲಾರದೆ ಇಂದು ತುಂಗಾಭದ್ರಾ ನದಿಗೆ ನಿರ್ಮಿಸಿದ ರೈಲ್ವೆ ಸೇತುವೆಯ ಮೇಲೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮೃತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಮುಡಾ ಹಗರಣ | ಸಿಎಂ ಪತ್ನಿಗೆ ಹೈಕೋರ್ಟ್ ನೋಟಿಸ್

  • ಆರ್ಥಿಕತೆಯಲ್ಲಿ ಮುನ್ನುಗ್ಗುತ್ತಿದೆ ಭಾರತ- ಮಧ್ಯಮ ವರ್ಗದ ಜನರು ಹಣಕ್ಕಾಗಿ ಇನ್ನೂ ಸಾಲದಾತರನ್ನೇ ಅವಲಂಬಿಸಿದ್ದಾರೆ ಯಾಕೆ?

    ಆರ್ಥಿಕತೆಯಲ್ಲಿ ಮುನ್ನುಗ್ಗುತ್ತಿದೆ ಭಾರತ- ಮಧ್ಯಮ ವರ್ಗದ ಜನರು ಹಣಕ್ಕಾಗಿ ಇನ್ನೂ ಸಾಲದಾತರನ್ನೇ ಅವಲಂಬಿಸಿದ್ದಾರೆ ಯಾಕೆ?

    ವಿಶ್ವದ ಅತಿ ದೊಡ್ಡ ಆರ್ಥಿಕತೆ ರಾಷ್ಟ್ರಗಳ ಸಾಲಿನಲ್ಲಿ ಭಾರತ ಗಮನಾರ್ಹ ಸ್ಥಾನವನ್ನೇ ಹೊಂದಿದೆ. ಹಲವಾರು ಜಾಗತಿಕ ವಿದ್ಯಮಾನಗಳು, ಸವಾಲುಗಳ ನಡುವೆ ಇದೊಂದು ಸಾಧನೆಯೇ ಸರಿ. ಆದರೆ, ತಲಾ ಆದಾಯ, ಜಿಡಿಪಿ ವಿಚಾರದಲ್ಲಿ ಭಾರತ ಹಿಂದುಳಿದಿದೆ. ಹೆಚ್ಚಿನ ಜನರು ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ದೈನಂದಿನ ವಹಿವಾಟಿನಲ್ಲಿ ಡಿಜಿಟಲ್ ಪಾವತಿಗೆ ತೆರೆದುಕೊಂಡಿದ್ದಾರೆ. ಜೊತೆಗೆ ಫಿನ್‌ಟೆಕ್ ಹಣಕಾಸು ಸೇವೆಗಳಿಗೆ ಪ್ರವೇಶಿಸುವುದೂ ಸುಲಭವಾಗಿದೆ. ಹೀಗಿದ್ದರೂ, ಕಡಿಮೆ ಮತ್ತು ಮಧ್ಯಮ ಆದಾಯದ ಕುಟುಂಬಗಳು (ವಿಶೇಷವಾಗಿ ವರ್ಷಕ್ಕೆ 5 ಲಕ್ಷಕ್ಕಿಂತ ಕಡಿಮೆ ಆದಾಯ ಗಳಿಸುವವರು) ಮತ್ತೊಬ್ಬರಿಂದ ಸಾಲ ಪಡೆಯುವ ಪರಿಪಾಠ ಕಡಿಮೆಯಾಗಿಲ್ಲ. ಸಾಲಗಾರರು ಎಂಬ ಹಣೆಪಟ್ಟಿಯಿಂದ ಮುಕ್ತ ಮಾಡುವುದೇ ಸವಾಲಾಗಿ ಉಳಿದಿದೆ.

    ಸಿಎಂಐಇ ಸಮೀಕ್ಷೆಯನ್ನು ಆಧರಿಸಿದ ಪಿರಾಮಲ್ ಎಂಟರ್‌ಪ್ರೈಸಸ್‌ನ ವರದಿಯು ಈ ವಿಚಾರವನ್ನು ಬಹಿರಂಗಪಡಿಸಿದೆ. ಈ ಎಂಟರ್‌ಪ್ರೈಸಸ್‌ನ ಮುಖ್ಯ ಅರ್ಥಶಾಸ್ತ್ರಜ್ಞ ದೇಬೋಪಮ್ ಚೌಧರಿ ಅವರು, ಬ್ಯಾಂಕಿಂಗ್ ವ್ಯವಸ್ಥೆಗೆ ಜನರ ಪ್ರವೇಶ ಸುಧಾರಿಸಿದೆ. ಆದರೆ, ಸಾಲದ ವಿಚಾರದಲ್ಲಿ ಅಸಮಾನರಾಗಿಯೇ ಉಳಿದಿದ್ದಾರೆಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾಲ್ಕೂ ಅಲ್ಲ, ಐದೂ ಅಲ್ಲ; ಭಾರತ ವಿಶ್ವದ 3ನೇ ಅತಿ ದೊಡ್ಡ ಆರ್ಥಿಕತೆಯೇ?- ಆರ್ಥಿಕ ತಜ್ಞರು ಹೇಳೋದೇನು?

    ಅನೌಪಚಾರಿಕವಾಗಿ ಸಾಲ ಪಡೆಯುವವರೇ ಹೆಚ್ಚು
    ಕಡಿಮೆ ಆದಾಯದ ಕುಟುಂಬಗಳಲ್ಲಿ ಅನೌಪಚಾರಿಕ ಸಾಲಗಳೇ ಹೆಚ್ಚಾಗಿವೆ. 2021ರ ಅಂಕಿಅಂಶದಂತೆ ಈ ಕುಟುಂಬಗಳು ಔಪಚಾರಿಕವಾದ ಬ್ಯಾಂಕುಗಳು ಅಥವಾ ಎನ್‌ಬಿಎಫ್‌ಸಿ ಗಿಂತ, ಅನೌಪಚಾರಿಕ ಮೂಲಗಳಿಂದಲೇ 2.6 ಪಟ್ಟು ಹೆಚ್ಚು ಸಾಲ ಪಡೆದಿವೆ. ಬ್ರೆಜಿಲ್‌ನಲ್ಲಿ 0.6 ಮತ್ತು ಯುಎಸ್ ನಲ್ಲಿ ಕೇವಲ 0.27 ಪರ್ಸೆಂಟ್ ಜನರು ಮಾತ್ರ ಅನೌಪಚಾರಿಕವಾಗಿ ಸಾಲ ಪಡೆಯುತ್ತಿದ್ದಾರೆ. ಈ ದೇಶಗಳಿಗೆ ಹೋಲಿಸಿದರೆ ಭಾರತದ ಪ್ರಮಾಣವೇ ಹೆಚ್ಚಿದೆ.

    ಸಾಲದ ಲೆಕ್ಕಾಚಾರ ಏನು?
    ಆದಾಯದ ಏಣಿಯ ಕೆಳಭಾಗದಲ್ಲಿರುವವರು ಸಾಲದ ವಿಚಾರದಲ್ಲಿ ಚಿಂತಾಜನಕ ಹಂತಕ್ಕೆ ತಲುಪಿದ್ದಾರೆ. ವರ್ಷಕ್ಕೆ 2 ಲಕ್ಷ ರೂ.ಗಿಂತ ಕಡಿಮೆ ಆದಾಯ ಗಳಿಸುವ ಕುಟುಂಬಗಳ ಹಣಕಾಸು ವರ್ಷ 19 ಮತ್ತು 23 ರ ನಡುವೆ ಔಪಚಾರಿಕ ಸಾಲವು ವರ್ಷಕ್ಕೆ 4% ಕ್ಕಿಂತ ಕುಸಿತ ಕಂಡಿದೆ. ಅವರ ಅನೌಪಚಾರಿಕ ಸಾಲವು ಪ್ರತಿ ವರ್ಷ ಸುಮಾರು 6% ರಷ್ಟು ಹೆಚ್ಚಾಗಿದೆ. 2-10 ಲಕ್ಷ ರೂ. ಸಂಪಾದಿಸುವ ಹೆಚ್ಚಿನ ಕುಟುಂಬಗಳು ಔಪಚಾರಿಕ ಮತ್ತು ಅನೌಪಚಾರಿಕ ಸಾಲಗಳೆರಡರತ್ತಲೂ ತಿರುಗುತ್ತಿವೆ. ಆದರೆ, ಬ್ಯಾಂಕ್‌ಗಳಿಂದ ಹಣದಾಹಿಗಳನ್ನು ಬದಲಾಯಿಸಲು ಸಾಧ್ಯವಾಗಿಲ್ಲ. ಇದನ್ನೂ ಓದಿ: ಜಪಾನ್‌ ಹಿಂದಿಕ್ಕಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾದ ಭಾರತ

    ಬ್ಯಾಂಕ್ ಸಾಲದಿಂದ ದೂರ ಯಾಕೆ?
    ಈ ವರ್ಗದ ಸಾಲಗಾರರು ಬ್ಯಾಂಕಿಂಗ್ ವ್ಯವಸ್ಥೆಗೆ ಹೊಂದಿಕೊಳ್ಳುವುದಿಲ್ಲ. ಸ್ಥಿರ ಉದ್ಯೋಗ ಇಲ್ಲದಿರುವುದು, ಪೇಸ್ಲಿಪ್ ಮತ್ತು ಸರಿಯಾದ ಕ್ರೆಡಿಟ್ ವ್ಯವಸ್ಥೆ ಇಲ್ಲದಿರುವುದು ಅವರು ಬ್ಯಾಂಕಿಂಗ್ ಸಾಲದಿಂದ ದೂರ ಇರಲು ಪ್ರಮುಖ ಕಾರಣವಾಗಿದೆ. ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸಾಕಷ್ಟು ಮಂದಿ ಕೆಲಸಗಳನ್ನು ಬಿಟ್ಟು ತಮ್ಮ ಊರುಗಳಿಗೆ ಮರಳಿದರು. ಇದರಿಂದ ಕೃಷಿ ಮತ್ತು ಅನೌಪಚಾರಿಕ ಕೆಲಸದಲ್ಲಿರುವ ಜನರ ಸಂಖ್ಯೆ ಹೆಚ್ಚಾಯಿತು. ಈ ಜನರಿಗೆ ಸಾಲ ನೀಡಲು ಬ್ಯಾಂಕ್‌ಗಳು ಹಿಂದೆ ಸರಿಯುತ್ತಿವೆ. ಹೀಗಾಗಿ, ಅವರು ಅನೌಪಚಾರಿಕ ಸಾಲದ ಕಡೆ ಮುಖಮಾಡಿದರು.

    ಏನಿದು ಅನೌಪಚಾರಿಕ ಸಾಲ?
    ಅಧಿಕೃತವಲ್ಲದ ಮೂಲಗಳಿಂದ ಪಡೆಯುವುದೇ ಅನೌಪಚಾರಿಕ ಸಾಲ. ನೆರೆಹೊರೆಯ ಹಣವಂತ ಜನರು, ನೋಂದಣಿಯಾಗದ ಸಂಘಗಳು, ಅಧಿಕೃತ ಅಲ್ಲದ ಮೈಕ್ರೋ ಫೈನಾನ್ಸ್ ಮೊದಲಾದ ಕಡೆಯಿಂದ ಸಾಲ ಪಡೆಯುವ ಪರಿಪಾಠ ಇದಾಗಿದೆ. ಇದರಲ್ಲಿ ಬಡ್ಡಿದರಗಳು ಹೆಚ್ಚಿರುತ್ತವೆ. ಸಾಲ ನೀಡುವವರು ಮತ್ತು ಪಡೆಯುವವರ ಮಧ್ಯೆ ಯಾವುದೇ ಸ್ಪಷ್ಟ ನಿಯಮಗಳಿರುವುದಿಲ್ಲ. ಏನಾದರು ತಪ್ಪಾದಲ್ಲಿ ಸಾಲಗಾರರಿಗೆ ರಕ್ಷಣೆ ಇರುವುದಿಲ್ಲ. ಈ ಪ್ರವೃತ್ತಿ ಕುಟುಂಬಗಳನ್ನು ಸಾಲದ ಚಕ್ರಗಳಲ್ಲಿ ಸಿಲುಕಿಸಬಹುದು. ಇದರಿಂದ ತಪ್ಪಿಸಿಕೊಳ್ಳುವುದು ಕಷ್ಟವಾಗುತ್ತದೆ. ಕಿರುಕುಳ, ಆತ್ಮಹತ್ಯೆಯಂತಹ ಸನ್ನಿವೇಶಗಳಿಗೆ ಇದು ದಾರಿ ಮಾಡಿಕೊಡಬಹುದು.

    ದಕ್ಷಿಣ ರಾಜ್ಯಗಳಲ್ಲಿ ಪರಿಸ್ಥಿತಿ ಹೇಗಿದೆ?
    ಸಾಲದ ವಿಚಾರದಲ್ಲಿ ಭೌಗೋಳಿಕತೆಯೂ ಒಂದು ಪಾತ್ರವನ್ನು ವಹಿಸುತ್ತದೆ. ಕೇರಳ, ತಮಿಳುನಾಡು ಮತ್ತು ಕರ್ನಾಟಕದಂತಹ ದಕ್ಷಿಣ ರಾಜ್ಯಗಳು ಹೆಚ್ಚಿನ ಮಟ್ಟದಲ್ಲಿ ಔಪಚಾರಿಕ ಸಾಲಕ್ಕೆ ಆದ್ಯತೆ ನೀಡುತ್ತವೆ. ಚಿನ್ನದ ಸಾಲಗಳ ಜನಪ್ರಿಯತೆ ಮತ್ತು ವ್ಯಾಪಕವಾದ ಫಿನ್‌ಟೆಕ್ ಬಳಕೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಆದರೆ ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ, ಅರ್ಧಕ್ಕಿಂತ ಹೆಚ್ಚು ಕುಟುಂಬಗಳು ಇನ್ನೂ ಅನೌಪಚಾರಿಕ ಮೂಲಗಳನ್ನೇ ಅವಲಂಬಿಸಿವೆ. ಸಾಂಪ್ರದಾಯಿಕವಾಗಿ ಹೆಚ್ಚು ಸ್ಥಿರವಾದ ಕ್ರೆಡಿಟ್ ಪ್ರೊಫೈಲ್ ಹೊಂದಿದ್ದ ಪಂಜಾಬ್ ರಾಜ್ಯವೇ ಈಗ ಅನೌಪಚಾರಿಕ ಸಾಲಗಳ ಕಡೆಗೆ ವಾಲುತ್ತಿದೆ. ಇಲ್ಲಿ ಉದ್ಯೋಗವೂ ಸಹ ಮುಖ್ಯವಾಗಿದೆ. ದಿನಗೂಲಿ ಕಾರ್ಮಿಕರು ಬ್ಯಾಂಕ್‌ಗಳಿಂದ ಹೆಚ್ಚು ಹೊರಗಿಡಲ್ಪಟ್ಟವರಲ್ಲಿ ಸೇರಿದ್ದಾರೆ. ಈ ಗುಂಪಿನಲ್ಲಿ 55% ಕ್ಕಿಂತ ಹೆಚ್ಚು ಕುಟುಂಬಗಳು ಅನೌಪಚಾರಿಕ ಸಾಲಗಳನ್ನೇ ಅವಲಂಬಿಸಿವೆ. ಏಕೆಂದರೆ ಬ್ಯಾಂಕುಗಳು ಅವುಗಳನ್ನು ತುಂಬಾ ಅಪಾಯಕಾರಿ ಎಂದು ನೋಡುತ್ತವೆ. ಸ್ವಯಂ ಉದ್ಯೋಗಿಗಳು, ವಿಶೇಷವಾಗಿ ಸಣ್ಣ ವ್ಯವಹಾರಗಳನ್ನು ನಡೆಸುವವರಿಗೆ ಬ್ಯಾಂಕುಗಳು ಸಾಲ ನೀಡಲು ಹಿಂಜರಿಯುತ್ತವೆ. ಪರಿಣಾಮವಾಗಿ ಕುಟುಂಬಗಳಲ್ಲಿ ಹೆಚ್ಚಿನವು ಸಾಂಸ್ಥಿಕವಲ್ಲದ ಸಾಲವನ್ನು ಅವಲಂಬಿಸಿವೆ. ಇದನ್ನೂ ಓದಿ: Budget 2025: ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಭಾರತೀಯ ಅಂಚೆ ಸೇವೆಗಳ ಕಾರ್ಯನಿರ್ವಹಣೆ

    ಸಂಬಳ ಪಡೆಯುವ ವೃತ್ತಿಪರರು ಮತ್ತು ಕೈಗಾರಿಕಾ ಕಾರ್ಮಿಕರು ಔಪಚಾರಿಕ ಸಾಲಗಳನ್ನು ಪಡೆಯುತ್ತಿದ್ದಾರೆ. ಡಿಜಿಟಲ್ ಸಾಲ ಪ್ಲಾಟ್‌ಫಾರ್ಮ್‌ಗಳು ಇವರಿಗೆ ಹೆಚ್ಚು ಅವಕಾಶ ಕಲ್ಪಿಸಿವೆ. ಈ ಸಾಲಗಾರರು ಸಾಮಾನ್ಯವಾಗಿ ಹೆಚ್ಚಿನ ದಾಖಲೆಗಳು, ಉತ್ತಮ ಕ್ರೆಡಿಟ್ ಸ್ಕೋರ್‌ಗಳು ಮತ್ತು ಉತ್ತಮ ಆದಾಯವನ್ನು ಹೊಂದಿರುತ್ತಾರೆ. ಹೀಗಾಗಿ, ಅವರಿಗೆ ಬ್ಯಾಂಕ್‌ಗಳು ಸಾಲ ನೀಡುತ್ತಿವೆ. ಬ್ಯಾಂಕ್‌ಗಳು ಕೈಬಿಟ್ಟ ಸ್ಥಾನಗಳನ್ನು ಎನ್‌ಬಿಎಫ್‌ಸಿ ಮತ್ತು ಮೈಕ್ರೋಫೈನಾನ್ಸ್‌ಗಳು ತುಂಬಿವೆ. ಇವುಗಳು ಹೆಚ್ಚಾಗಿ ಸಣ್ಣ ಪಟ್ಟಣಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತವೆ. ಆದರೆ, ಇವುಗಳಿಗೆ ಮಿತಿ ಇರುತ್ತದೆ. ದೇಬೋಪಮ್ ಚೌಧರಿ ವರದಿಯಲ್ಲಿ, ‘ಸಕಾಲಿಕ, ಕೈಗೆಟುಕುವ ಮತ್ತು ಸೂಕ್ತವಾದ ಸಾಲ ನೀಡಿಕೆ ಮುಖ್ಯವಾಗಿದೆ. ಲಕ್ಷಾಂತರ ಅನೌಪಚಾರಿಕ ಕಾರ್ಮಿಕರು, ಸಣ್ಣ ಉದ್ಯಮಿಗಳು ಮತ್ತು ಗ್ರಾಮೀಣ ಕುಟುಂಬಗಳಿಗೆ, NBFCಗಳು ಔಪಚಾರಿಕ ಹಣಕಾಸಿನ ಏಕೈಕ ಸೇತುವೆಯಾಗಿದೆ. ಸಾಲದ ಅಂತರವನ್ನು ಮುಚ್ಚಲು ಅವುಗಳನ್ನು ಬಲಪಡಿಸುವುದು ಅತ್ಯಗತ್ಯ’ ಎಂದಿದೆ.

    ಸಲಹೆ ಏನು?
    ಸ್ವ ಉದ್ಯೋಗಿಗಳು, ಬ್ಲೂ-ಕಾಲರ್ ಕೆಲಸಗಾರರು ಸಾಲದ ಸುಳಿಯಲ್ಲಿ ಸಿಲುಕಿ ನರಳುವಂತಾಗಿದೆ. ಅನೌಪಚಾರಿಕ ಸಾಲವು ಅವರಿಗೆ ಹೆಚ್ಚಿನ ವೆಚ್ಚದ ಹೊರೆ ಉಂಟು ಮಾಡಿದೆ. ಇದು ಅವರ ಮನೆಯ ಆರ್ಥಿಕ ಪರಿಸ್ಥಿತಿಯನ್ನೂ ಹದಗೆಡಿಸುತ್ತಿದೆ. ಈ ಸಾಲದಾತರನ್ನು ಬಲಪಡಿಸಲು ಹೆಚ್ಚಿನ ಬೆಂಬಲದ ಅಗತ್ಯವಿದೆ. NBFCಗಳಿಗೆ ಹಣವನ್ನು ಸಂಗ್ರಹಿಸಲು ಹೆಚ್ಚಿನ ಆಯ್ಕೆಗಳನ್ನು ನೀಡುವುದು ಮತ್ತು ಸಣ್ಣ ಸಾಲಗಾರರಿಗೆ ಸಾಲ ವಸೂಲಾತಿಯ ಸುತ್ತಲಿನ ನಿಯಮಗಳನ್ನು ಸರಳಗೊಳಿಸುವಂತಹ ಕ್ರಮಗಳು ಬೇಕಾಗಿವೆ. ಈ ಕ್ರಮವು ಪ್ರಸ್ತುತ ಔಪಚಾರಿಕ ವ್ಯವಸ್ಥೆಯಿಂದ ಹೊರಗುಳಿದಿರುವ ಹೆಚ್ಚಿನ ಜನರನ್ನು ತಲುಪಲು ಅವರಿಗೆ ಸಹಾಯ ಮಾಡಬಹುದು.

    ಸರ್ಫೆಸಿ ಕಾಯ್ದೆಯಡಿಯಲ್ಲಿ ಭದ್ರತಾ ಹಿತಾಸಕ್ತಿಗಳನ್ನು ಜಾರಿಗೊಳಿಸಲು ಸಾಲದ ಮೊತ್ತದ ಮಿತಿಯನ್ನು 20 ಲಕ್ಷದಿಂದ 1 ಲಕ್ಷ ರೂ.ಗೆ ಇಳಿಸುವ ಮೂಲಕ ಈ ಸಂಸ್ಥೆಗಳಿಗೆ ವ್ಯವಹಾರ ಮಾಡುವ ಸುಲಭ ಮಾರ್ಗ ಕಲ್ಪಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ. ಈ ಸುಧಾರಣೆಗಳು NBFCಗಳನ್ನು ತಮ್ಮ ವ್ಯಾಪ್ತಿಯನ್ನು ವಿಸ್ತರಿಸಲು ಹೆಚ್ಚಿನ ಸಾಮರ್ಥ್ಯವನ್ನು ಕಲ್ಪಿಸುತ್ತದೆ. ಔಪಚಾರಿಕ ಹಣಕಾಸು ಸೇವೆಗಳನ್ನು ಪಡೆದುಕೊಳ್ಳಲು ಇನ್ನೂ ಹೆಣಗಾಡುತ್ತಿರುವ ಭಾರತದ ಜನಸಂಖ್ಯೆಯ ಹೆಚ್ಚಿನ ಭಾಗಕ್ಕೆ ಸೇವೆ ಸಲ್ಲಿಸುತ್ತವೆ ಎಂದು ವರದಿಯು ಆಶಯ ವ್ಯಕ್ತಪಡಿಸಿದೆ.

  • ಸಾಲಬಾಧೆಗೆ ಬೇಸತ್ತು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

    ಸಾಲಬಾಧೆಗೆ ಬೇಸತ್ತು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

    ಮಡಿಕೇರಿ: ವ್ಯಕ್ತಿಯೊಬ್ಬರು ಮಂಗಳವಾರ ಬೆಳಗ್ಗೆ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ಮಡಿಕೇರಿ (Madikeri) ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.

    ನೆಲಜಿ ಗ್ರಾಮದ ನಿವಾಸಿ ಚಿಯಕಪೂವಂಡ ರಂಜು ತಿಮ್ಮಯ್ಯ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇದನ್ನೂ ಓದಿ: ಬಾಲಿವುಡ್‌ ನಟ ಸೋನು ಸೂದ್ ಪತ್ನಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

    ರಂಜು ತಿಮ್ಮಯ್ಯ ಅವರು ಸಾಲಬಾಧೆಯಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದಾಗಿ ಮಾ. 25ರಂದು ಬೆಳಗ್ಗೆ ನೆಲಜಿ ಗ್ರಾಮದ ತಮ್ಮ ಮನೆ ಸಮೀಪದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಹನಿಟ್ರ‍್ಯಾಪ್ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ: ವಿನಯ್ ಕುಲಕರ್ಣಿ

    ರಂಜು ತಿಮ್ಮಯ್ಯ ಅವರ ಪತ್ನಿ ತಾರಾಮಣಿ ಅವರು ನೀಡಿದ ದೂರಿನ ಅನ್ವಯ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ (Napoklu Police Station) ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸಾಕು ನಾಯಿ ದಾಳಿ – ಮಹಿಳೆಯ ಮುಖಕ್ಕೆ ಬಿತ್ತು 20 ಸ್ಟಿಚ್

  • ಮೈಕ್ರೋ ಫೈನಾನ್ಸ್‌ನಿಂದ ಮುಂದುವರಿದ ಕಿರುಕುಳ – ಗ್ರಾಮವನ್ನೇ ತೊರೆದ 7-8 ಕುಟುಂಬಗಳು

    ಮೈಕ್ರೋ ಫೈನಾನ್ಸ್‌ನಿಂದ ಮುಂದುವರಿದ ಕಿರುಕುಳ – ಗ್ರಾಮವನ್ನೇ ತೊರೆದ 7-8 ಕುಟುಂಬಗಳು

    ದಾವಣಗೆರೆ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಸಿಬ್ಬಂದಿ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಗೊಳಿಸಿದೆ. ಅಲ್ಲದೇ ಅಧಿಕ ಬಡ್ಡಿ ಪಡೆಯುವುದನ್ನ ತಡೆಯುವ ವಿಧೇಯಕ್ಕೆ ತಿದ್ದುಪಡಿ ತರಲು ತಯಾರಿ ನಡೆಸಿದೆ. ಹೀಗಿದ್ದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಕಿರುಕುಳ ಮುಂದುವರಿದಿದೆ.

    ಕಿರುಕುಳದಿಂದ ಬೇಸತ್ತ ಏಳೆಂಟು ಕುಟುಂಬಗಳು ಊರು ಬಿಟ್ಟಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ ತಾಲೂಕಿನ ಶಿವಗಂಗನಾಳ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ಹಿಂದೂ ನೌಕರರು ಉಪವಾಸ ಆಚರಣೆಗೆ ಮನವಿ ಮಾಡಿದ್ರೆ ಸರ್ಕಾರಿ ಕಚೇರಿಗಳೇ ಖಾಲಿ ಖಾಲಿ – ಮುತಾಲಿಕ್

    ಗ್ರಾಮದ ಹಲವು ಕುಟುಂಬಗಳಿಗೆ ಸಾಲದ ಕಂತು ಪಾವತಿಸುವಂತೆ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಪದೇ ಪದೇ ಕಿರುಕುಳ ನೀಡುತ್ತಾ ಬಂದಿದ್ದಾರೆ. ನಿಮಗೆ ಸಿಬಿಲ್ ಸ್ಕೋರ್ ಬರದಿದ್ದರೆ ಎಲ್ಲೂ ನಯಾ ಪೈಸೆ ಸಾಲ ಹುಟ್ಟಲ್ಲ ಅಂತ ಹೆದರಿಸಿದ್ದಾರೆ. ಕೆಲವರನ್ನ ಪೊಲೀಸ್‌ ಠಾಣೆಗೆ ಕರೆಸಿ ಬೆದರಿಸುವಂತೆ ಮಾಡಿದ್ದಾರೆ. ಯಾರ ಕೈ-ಕಾಲು ಹಿಡಿದಾದರೂ ಸಾಲ ತಂದುಕೊಡು ಅಂತ ಮಾನಸಿಕ ಹಿಂಸೆ ನೀಡಿದ್ದಾರೆ.

    ಇದರಿಂದ ಬೇಸತ್ತ ಶಿವಗಂಗನಾಳ ಗ್ರಾಮದ ಕುಟುಂಬಗಳು ಮನೆಗೆ ಬೀಗ ಹಾಕಿಕೊಂಡು ಊರು ಬಿಟ್ಟಿವೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೈಕ್ರೋ ಫೈನಾನ್ಸ್‌ನಿಂದ ಸಾಲ ಪಡೆದ ಕುಟುಂಬಳದ್ದೂ ಇದೇ ಪರಿಸ್ಥಿತಿ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಹಬ್ಬದ ಸಂಭ್ರಮದಲ್ಲಿ ಮಾರಕಾಸ್ತ್ರ ಹಿಡಿದು ಮಧ್ಯರಾತ್ರಿ ವ್ಹೀಲಿಂಗ್ ಮಾಡಿದ್ದ ಪುಂಡರು ಅರೆಸ್ಟ್

  • Tumakuru| 4.66 ಲಕ್ಷಕ್ಕೆ 7.20 ಲಕ್ಷ ಬಡ್ಡಿ – ಹೃದಯಾಘಾತದಿಂದ ವ್ಯಕ್ತಿ ಸಾವು

    Tumakuru| 4.66 ಲಕ್ಷಕ್ಕೆ 7.20 ಲಕ್ಷ ಬಡ್ಡಿ – ಹೃದಯಾಘಾತದಿಂದ ವ್ಯಕ್ತಿ ಸಾವು

    ತುಮಕೂರು: ಮೈಕ್ರೋ ಫೈನಾನ್ಸ್‌ನಿಂದ (Micro Finance) ಸಾಲ ಪಡೆದಕ್ಕಿಂತ ಹೆಚ್ಚು ಬಡ್ಡಿಯನ್ನೇ (Interest) ಕಟ್ಟಿ ಹೃದಯಾಘಾತದಿಂದ (Heart Attack) ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.

    ತುಮಕೂರು ನಗರದ ಲೇಬರ್ ಕಾಲೋನಿಯ ಸೈಯದ್ ಸಮಿವುಲ್ಲಾ ಸಾವಿಗಿಡಾದ ವ್ಯಕ್ತಿ. ಇವರು ಫೈಸ್ ಸ್ಟಾರ್ ಫೈನಾನ್ಸ್‌ನಿಂದ 2019ರಲ್ಲಿ 4.66 ಮನೆ ಸಾಲ ಪಡೆದಿದ್ದರು. 2024 ಮೇವರೆಗೆ ಬರೊಬ್ಬರಿ 7.20 ಲಕ್ಷ ಬಡ್ಡಿ ಕಟ್ಟಿದ್ದರು. ಆದರೆ ಅಸಲು ಹಾಗೆಯೇ ಉಳಿದಿತ್ತು. ಮತ್ತೆ ಅಸಲು ಕಟ್ಟುವಂತೆ ಫೈನಾನ್ಸ್‌ನವರು ಕಿರುಕುಳ ಕೊಡುತ್ತಿದ್ದರು. ಈ ಕಿರುಕುಳ ತಾಳಲಾರದೆ ಹೃದಯಾಘಾತದಿಂದ ಸಮೀವುಲ್ಲಾ ಮೇ ತಿಂಗಳಲ್ಲಿ ಸಾವಿಗೀಡಾಗಿದ್ದಾರೆ. ಇವರಿಗೆ ಸುಮಾರು 24.55 % ಬಡ್ಡಿ ಹಾಕಲಾಗಿತ್ತು. ಇದನ್ನೂ ಓದಿ: Kolar| ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಾ ಸರ್ಕಾರಿ ಬಸ್ ಚಾಲನೆ – ವೀಡಿಯೋ ವೈರಲ್

    ಈಗ ಫೈನಾನ್ಸ್‌ನವರು ಸಮೀವುಲ್ಲಾ ಮನೆಗೆ ಬಂದು ಅವರ ಪತ್ನಿ ಬಳಿ ಸಾಲ ಮರುಪಾವತಿ ಮಾಡುವಂತೆ ಕಿರುಕುಳ ನೀಡುತ್ತಿದ್ದಾರೆ. ಪತಿಯಂತೆ ನಾನೂ ಮಕ್ಕಳೊಂದಿಗೆ ಸಾಯಬೇಕಾಗುತ್ತದೆ ಎಂದು ಪತ್ನಿ ತಬಸಮ್ ಬಾನು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರು| ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ಬೆಂಕಿ ಅವಘಡ

     

  • ಬೆಳಗಾವಿ| ಫೈನಾನ್ಸ್ ಕಿರುಕುಳ – ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

    ಬೆಳಗಾವಿ| ಫೈನಾನ್ಸ್ ಕಿರುಕುಳ – ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

    ಬೆಳಗಾವಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಕಿರುಕುಳಕ್ಕೆ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಕಿರುಕುಳ ತಾಳಲಾರದೆ ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಯಮನಾಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

    ಹುಕ್ಕೇರಿ (Hukkeri) ತಾಲೂಕಿನ ಶಿರೂರ ಗ್ರಾಮದ ಸರೋಜಾ ಕಿರಬಿ (52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೈನಾನ್ಸ್ನಲ್ಲಿ ಸಬ್ಸಿಡಿ ಎಂದು ಹೇಳಿ ಹೊಳೆಪ್ಪ ದಡ್ಡಿ 2.30 ಲಕ್ಷ ರೂ. ಕೊಡಿಸಿದ್ದ. ಕೊಡಿಸಿದ ಅರ್ಧದಷ್ಟು ಸಾಲ ತನಗೆ ಕೊಟ್ಟರೆ ತಾನೇ ಸಾಲ ಕಟ್ಟುವುದಾಗಿ ಹೇಳಿದ್ದ. ಆದರೆ ಆತನ ನಂಬಿ ಸಾಲ ಪಡೆದು ಅರ್ಧದಷ್ಟು ಹಣವನ್ನು ಸರೋಜಾ ಹೊಳೆಪ್ಪಗೆ ನೀಡಿದ್ದರು. ಅರ್ಧ ಸಾಲ ಕಟ್ಟಿದ ಬಳಿಕ ಫೈನಾನ್ಸ್ನಿಂದ ಪೂರ್ತಿ ಸಾಲ ಕಟ್ಟಲು ಸೂಚನೆ ನೀಡಿದ್ದಾರೆ. ಈ ವೇಳೆ ತಾನೂ ಹಣ ಕಟ್ಟುವುದಿಲ್ಲ, ಸಬ್ಸಿಡಿಯಾಗಿ ಸಾಲ ಪಡೆದಿದ್ದೇನೆ ಎಂದು ಸರೋಜ ಹೇಳಿದ್ದಾರೆ. ತಾವು ಸಬ್ಸಿಡಿ ಸಾಲ ಕೊಟ್ಟಿಲ್ಲ ಪೂರ್ತಿ ಹಣ ಕಟ್ಟಿ ಎಂದು ಫೈನಾನ್ಸ್ ಸಿಬ್ಬಂದಿ ನಿತ್ಯ ಕಿರುಕುಳ ನೀಡಿದ್ದಾರೆ. ಈ ವೇಳೆ ಅರ್ಧ ಸಾಲ ಪಡೆದ ಹೊಳೆಪ್ಪ ಸಹ ಸಾಲ ಕಟ್ಟುವುದಿಲ್ಲವೆಂದು ಕೈ ಎತ್ತಿದ್ದಾನೆ. ಇದನ್ನೂ ಓದಿ: ತುಮುಲ್ ಚುನಾವಣೆಯಲ್ಲಿ ಸಿಎಂ ಬಣ ಮೇಲುಗೈ – ಗುಬ್ಬಿ ಶಾಸಕ ಬಹಿರಂಗ ಅಸಮಾಧಾನ

    ಈ ಎಲ್ಲಾ ಕಿರುಕುಳ ತಾಳಲಾರದೇ ಸರೋಜಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮಧ್ಯಸ್ಥಿಕೆ ವಹಿಸಿ ಸಾಲ ಕೊಡಿಸಿದ್ದ ಹೊಳೆಪ್ಪನ ವಿರುದ್ಧ ಕಾಕತೀ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಲಾಗಿದೆ. ಇದನ್ನೂ ಓದಿ: ಕ್ಲಾಸ್‌ ನಡೆಯುತ್ತಿದ್ದಾಗಲೇ ತರಗತಿಯಿಂದ ಹೊರಬಂದು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ