Tag: ಸಾವರ್ಕರ್

  • ರಾಹುಲ್‌ಗಾಂಧಿ ಪೋಸ್ಟರ್‌ಗೆ `ಚಪ್ಪಲಿ ಎಸೆಯಿರಿ’ ಆಂದೋಲನಕ್ಕೆ ಕರೆ ಕೊಟ್ಟ ಬಿಜೆಪಿ ನಾಯಕ

    ರಾಹುಲ್‌ಗಾಂಧಿ ಪೋಸ್ಟರ್‌ಗೆ `ಚಪ್ಪಲಿ ಎಸೆಯಿರಿ’ ಆಂದೋಲನಕ್ಕೆ ಕರೆ ಕೊಟ್ಟ ಬಿಜೆಪಿ ನಾಯಕ

    ಮುಂಬೈ: ಕಾಂಗ್ರೆಸ್ ನಾಯಕ (Congress Leader) ರಾಹುಲ್‌ಗಾಂಧಿ (Rahul Gandhi) ಅವರ ಪೋಸ್ಟರ್‌ಗೆ ಬಿಜೆಪಿ  ಕಾರ್ಯಕರ್ತರು ಚಪ್ಪಲಿ ಎಸೆಯುವ ಮೂಲಕ ಪ್ರತಿಭಟನೆ (Protest) ನಡೆಸಿದ್ದಾರೆ.

    `ಸಾವರ್ಕರ್ (VD Savarkar) ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದರು. ಇದರಿಂದಾಗಿಯೇ ಅವರು ಪಿಂಚಣಿ ಪಡೆದುಕೊಳ್ಳುತ್ತಿದ್ದರು’ ಎಂಬ ರಾಹುಲ್‌ಗಾಂಧಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ (BJP) ಕಾರ್ಯಕರ್ತರು ಪೋಸ್ಟರ್‌ಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕ ರಾಮ್‌ಕದಮ್ ಪಕ್ಷದ ಇತರ ಕಾರ್ಯಕರ್ತರೊಂದಿಗೆ `ಚಪ್ಪಲಿ ಎಸೆಯಿರಿ’ ಆಂದೋಲನ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ದಲಿತರ ವಿರೋಧಿ, ದ್ವೇಷ ಹಬ್ಬಿಸುವ ಸರ್ಕಾರ: ರಾಹುಲ್ ಗಾಂಧಿ

    ರಾಹುಲ್‌ಗಾಂಧಿ ಅವರು ಸ್ವಾತಂತ್ರ್ಯ ಹೋರಾಟಗಾರನೊಬ್ಬನನ್ನು ಅವಮಾನಿಸಿದ್ದಾರೆ. ಪದೇ ಪದೇ ಈ ರೀತಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ಸಹಿಸಲಾಗುವುದಿಲ್ಲ. ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಹಿಮಪಾತ – ಬೆಂಗಳೂರಿನ ಇಬ್ಬರು ಸೇರಿದಂತೆ 29 ಮಂದಿ ಸಾವು

    ಕರ್ನಾಟಕದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ (Bharath Jodo Yatra) ವೇಳೆ ರಾಹುಲ್ ಗಾಂಧಿ ಅವರು, `ಗಾಂಧಿ, ನೆಹರು ದೇಶಕ್ಕಾಗಿ ಹೋರಾಡಿದರು. ಆರ್‌ಎಸ್‌ಎಸ್ (RSS) ಹಾಗೂ ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದರು. ಬ್ರಿಟಿಷರಿಗೆ ಸಹಾಯ ಮಾಡಿದ್ದಕ್ಕಾಗಿಯೇ ಅವರಿಗೆ ಸ್ಟೈಫಂಡ್‌ ಸಿಕ್ಕಿತ್ತು ಎಂದು ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಕೊಡುಗೆ ನೆನೆಯದಿದ್ದರೆ ನರಕಕ್ಕೆ ಹೋಗ್ತೀರಾ: ಬಿ.ಎಲ್. ಸಂತೋಷ್‌

    ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಕೊಡುಗೆ ನೆನೆಯದಿದ್ದರೆ ನರಕಕ್ಕೆ ಹೋಗ್ತೀರಾ: ಬಿ.ಎಲ್. ಸಂತೋಷ್‌

    ಹುಬ್ಬಳ್ಳಿ: ದೇಶಕ್ಕೆ ಗಾಂಧೀಜಿ (Gandhiji) ಒಬ್ಬರಿಂದಲೇ ಸ್ವಾತಂತ್ರ್ಯ ಬಂದಿದ್ದಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ವೀರ ಸಾವರ್ಕರ್ (Veer Savarkar) ಕೊಡುಗೆ ನೆನೆಯದಿದ್ದರೆ ನರಕಕ್ಕೆ ಹೋಗ್ತೀರಾ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ (BL Santosh)  ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ನಡೆದ ಸ್ವರಾಜ್-75 ಪುಸ್ತಕ ಬಿಡುಗಡೆ ಸಮಾರಂಭದ ಭಾಷಣದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಗಾಂಧೀಜಿ ಒಬ್ಬರೇ ಹೋರಾಟವನ್ನು ಮಾಡಿಲ್ಲ. ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ದೇಶದ ಮೂಲೆ ಮೂಲೆಗಳಲ್ಲಿ ಸ್ವಾತಂತ್ರ್ಯ ಹೋರಾಟ ರೂಪುಗೊಂಡಿತ್ತು. ಅನೇಕ ಮಹನೀಯರು ತ್ಯಾಗ-ಬಲಿದಾನದಿಂದ ಸ್ವಾತಂತ್ರ್ಯ ಬಂದದ್ದು. ಆದರೆ ಕೆಲವು ಇತಿಹಾಸಕಾರರು ಸತ್ಯವನ್ನು ಹೇಳಲೇ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಪೋಸ್ಟ್‌ ಮಾಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

    ನೇತಾಜಿ ಸುಭಾಷ್ ಚಂದ್ರ ಬೋಸ್ ಪುತ್ಥಳಿ ಸ್ಥಾಪಿಸಲು 2014ನೇ ಇಸವಿ ಬರಬೇಕಾಯಿತು. ಈ ದೇಶ ವಾಮ ಪಂಥೀಯರಿಂದಲೇ ಹಾಳಾಗಿದ್ದು ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: BJP ಹಿಂದೂ-ಮುಸ್ಲಿಂ, ದಲಿತ-ಬ್ರಾಹ್ಮಣರ ನಡುವೆ ಜಗಳ ತಂದಿಡುತ್ತಿದೆ: ಸುರ್ಜೇವಾಲಾ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಭಾರತ್ ಜೋಡೋ ಯಾತ್ರೆ – ಮಂಡ್ಯದಲ್ಲಿ ಕಾಣಿಸಿಕೊಂಡಿತು ಸಾವರ್ಕರ್ ಫೋಟೋ

    ಭಾರತ್ ಜೋಡೋ ಯಾತ್ರೆ – ಮಂಡ್ಯದಲ್ಲಿ ಕಾಣಿಸಿಕೊಂಡಿತು ಸಾವರ್ಕರ್ ಫೋಟೋ

    ಮಂಡ್ಯ: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ (Savarkar) ಅವರನ್ನು ಎಂದಿಗೂ ಸ್ವಾತಂತ್ರ್ಯ ಹೋರಾಟಗಾರನಲ್ಲ ಎಂದು ವಾದಿಸುವ ಕಾಂಗ್ರೆಸ್ (Congress) ಮತ್ತೊಮ್ಮೆ ಗೊಂದಲಕ್ಕೆ ಸಿಲುಕಿಕೊಂಡಿದೆ. ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ (Bharat Jodo Yatra) ಪೋಸ್ಟರ್‌ನಲ್ಲಿ (Poster) ಮತ್ತೊಮ್ಮೆ ಸಾವರ್ಕರ್ ಫೋಟೋ ಕಾಣಿಸಿಕೊಂಡಿದೆ. ಆದರೆ ಇದು ದುಷ್ಕರ್ಮಿಗಳ ಕೃತ್ಯ ಎಂದು ಕಾಂಗ್ರೆಸ್ ಆರೋಪಿಸಿದೆ.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಜೋಡೋ ಯಾತ್ರೆ ಇದೀಗ ಕರ್ನಾಟಕದ ಮಂಡ್ಯ (Mandya) ಜಿಲ್ಲೆಯನ್ನು ತಲುಪಿದೆ. ಆದರೆ ಅಲ್ಲಿ ಈ ಯಾತ್ರೆಗೆ ಸಂಬಂಧಪಟ್ಟ ಒಂದು ಪೋಸ್ಟರ್‌ನಲ್ಲಿ ಸಾವರ್ಕರ್ ಫೋಟೋ ಕಾಣಿಸಿಕೊಂಡಿದೆ. ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಫೋಟೋಗಳೂ ಕಂಡುಬಂದಿವೆ.

    ಈ ಪೋಸ್ಟರ್ ಶಾಂತಿನಗರ ಶಾಸಕ ಹ್ಯಾರಿಸ್‌ಗೆ ಸೇರಿದ್ದು ಎಂದು ಸುದ್ದಿ ಹಬ್ಬುತ್ತಲೇ ಅವರು ಮಾತನಾಡಿ, ಇದು ಕೆಲ ಕಿಡಿಗೇಡಿಗಳ ಕೃತ್ಯ, ನಾವು ಮಾಡಿರುವುದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಂಡ್ಯ ಜಿಲ್ಲೆಯಲ್ಲಿ ದೂರು ದಾಖಲಿಸುವುದಾಗಿಯೂ ಹ್ಯಾರಿಸ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮಸೀದಿ ಮೇಲೆ ಭಗವಾಧ್ವಜದ ಫೋಟೋ- ಸ್ಟೇಟಸ್ ಹಾಕಿದ್ದ 8 ಮಂದಿ ವಿರುದ್ಧ ಪ್ರಕರಣ

    ಇದಕ್ಕೂ ಮೊದಲು ಸೆಪ್ಟೆಂಬರ್ 21 ರಂದು ಕೇರಳದಲ್ಲಿ ಭಾರತ್ ಜೋಡೋ ಯಾತ್ರೆಯ ಪೋಸ್ಟರ್‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳ ಸಾಲಿನಲ್ಲಿ ಸಾವರ್ಕರ್ ಫೋಟೋ ಕೂಡಾ ಕಾಣಿಸಿಕೊಂಡಿತ್ತು. ಬಳಿಕ ಅದು ಪ್ರಿಂಟಿಂಗ್ ಮಿಸ್ಟೇಕ್ ಎಂದು ಸ್ಪಷ್ಟನೆ ನೀಡಿದ ಕಾಂಗ್ರೆಸ್ ಕಾರ್ಯಕರ್ತರು, ಅದರ ಮೇಲೆ ಮಹಾತ್ಮಾ ಗಾಂಧೀಜಿಯವರ ಫೋಟೋ ಅಂಟಿಸಿ ಸಾವರ್ಕರ್ ಫೋಟೋವನ್ನು ಮುಚ್ಚಿ ಹಾಕಿದ್ದರು. ಇದನ್ನೂ ಓದಿ: ದಸರಾ ಮೆರವಣಿಗೆ ವೇಳೆ ಮದರಸಾಗೆ ನುಗ್ಗಿ ಪೂಜೆ – 9 ಜನರ ವಿರುದ್ಧ ಎಫ್‌ಐಆರ್

    Live Tv
    [brid partner=56869869 player=32851 video=960834 autoplay=true]

  • ‘ಸಾವರ್ಕರ್’ ಸಿನಿಮಾದ ಶೂಟಿಂಗ್ ಶುರು: ನಿರ್ದೇಶನದ ಜೊತೆ ನಟಿಸಲಿರುವ ರಣದೀಪ್

    ‘ಸಾವರ್ಕರ್’ ಸಿನಿಮಾದ ಶೂಟಿಂಗ್ ಶುರು: ನಿರ್ದೇಶನದ ಜೊತೆ ನಟಿಸಲಿರುವ ರಣದೀಪ್

    ಕೆಲವು ತಿಂಗಳ ಹಿಂದೆ ವೀರ ಸಾವರ್ಕರ್ (Savarkar) ಬದುಕಿನ ಕುರಿತಾದ ಸಿನಿಮಾವೊಂದು ಬಾಲಿವುಡ್ ನಲ್ಲಿ ಮೂಡಿ ಬರಲಿದೆ ಎಂದು ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿ ಮಾಡಿತ್ತು. ಈ ಸಿನಿಮಾದಲ್ಲಿ ಸಾವರ್ಕರ್ ಪಾತ್ರವನ್ನು ಬಾಲಿವುಡ್ ನಟ ರಣದೀಪ್ ಹೂಡ ಮಾಡಲಿದ್ದಾರೆ ಎಂದೂ ಹೇಳಲಾಗಿತ್ತು. ಇದೀಗ ಆ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಸಿನಿಮಾದ ಮುಹೂರ್ತ ಮುಗಿಸಿಕೊಂಡು ಶೂಟಿಂಗ್ ಶುರು ಮಾಡಿರುವುದಾಗಿ ಚಿತ್ರತಂಡ ತಿಳಿಸಿದೆ.

    ಈ ಸಿನಿಮಾ (Cinema) ತಂಡದಿಂದ ಸಿಕ್ಕಿರುವ ಮತ್ತೊಂದು ಅಪ್ ಡೇಟ್ ಏನೆಂದರೆ, ಸಾವರ್ಕರ್ ಅವರ ಪಾತ್ರವನ್ನು ನಿರ್ವಹಿಸುತ್ತಿರುವ ರಣದೀಪ್ ಹೂಡಾ (Randeep Hooda) ಅವರೇ ಈ ಸಿನಿಮಾದ ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದಾರೆ. ರಣದೀಪ್ ನಟಿಸಿ, ನಿರ್ದೇಶನ ಮಾಡುತ್ತಿರುವ ಸಿನಿಮಾ ಇದಾಗಿದೆ. ಈ ಕುರಿತು ಸ್ವತಃ ಹೂಡಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ತಾವು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವುದು ನಿಜ ಎಂದು ಖಚಿತ ಪಡಿಸಿದ್ದಾರೆ.

    ಕೈಯಲ್ಲಿ ಕ್ಲಾಪ್ ಬೋರ್ಡ್ ಹಿಡಿದುಕೊಂಡು ನಿರ್ಮಾಪಕರ ಜೊತೆ ಫೋಟೋ ತಗೆಸಿಕೊಂಡಿರುವ ರಣದೀಪ್, ಸಾವರ್ಕರ್ ಚಿತ್ರಕ್ಕೆ ಚಾಲನೆ ನೀಡಲಾಗಿದೆ. ಈ ಸಿನಿಮಾದ ನಿರ್ದೇಶನದ ಜವಾಬ್ದಾರಿ ನನ್ನ ಹೆಗಲ ಮೇಲೆ ಬಿದ್ದಿದೆ ಎಂದೂ ಬರೆದುಕೊಂಡಿದ್ದಾರೆ. ಈ ಸಿನಿಮಾ ನನ್ನಷ್ಟೇ ಎಲ್ಲರನ್ನೂ ಪ್ರಭಾವಿಸಲಿದೆ ಎಂದೂ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ರಚಿತಾ ರಾಮ್ @30: ಹ್ಯಾಪಿ ಬರ್ತ್‌ಡೇ ರಚ್ಚು ಅಂದ್ರು ಫ್ಯಾನ್ಸ್

    ಬಾಲಿವುಡ್ ಸಿನಿಮಾ ರಂಗದಲ್ಲಿ ಅನೇಕ ಬಯೋಪಿಕ್ ಗಳು ಬರುತ್ತಿವೆ. ಒಂದು ಕಡೆ ಸಾವರ್ಕರ್ ಸಿನಿಮಾ ಸೆಟ್ಟೇರಿದ್ದರೆ, ಮತ್ತೊಂದು ಕಡೆ ಕಂಗನಾ ರಾಣಾವತ್ (Kangana Ranaut) ಎಮರ್ಜನ್ಸಿ (Emergency) ಘಟನೆಯನ್ನಿಟ್ಟುಕೊಂಡು ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಇಂದಿರಾ ಗಾಂಧಿ ಆಗಿ ಅವರು ನಟಿಸುತ್ತಿದ್ದಾರೆ. ರಾಜಕೀಯ ನಾಯಕರ ಬದುಕನ್ನೇ ಆಧಾರಾವಾಗಿಟ್ಟುಕೊಂಡು ಹಲವು ಸಿನಿಮಾಗಳು ಬರುತ್ತಿವೆ. ಈ ಎಲ್ಲದರ ನಡುವೆ ಸದ್ಯ ಸಾವರ್ಕರ್ ಸಿನಿಮಾ ಸೆಟ್ಟೇರಿದೆ.

    Live Tv
    [brid partner=56869869 player=32851 video=960834 autoplay=true]

  • PFI ನಾಯಕನ ಮನೆಯಲ್ಲಿ ಸಾವರ್ಕರ್‌ ಪುಸ್ತಕ – ಶಿವಮೊಗ್ಗದಲ್ಲಿ 19 ಲಕ್ಷ ಪತ್ತೆ

    PFI ನಾಯಕನ ಮನೆಯಲ್ಲಿ ಸಾವರ್ಕರ್‌ ಪುಸ್ತಕ – ಶಿವಮೊಗ್ಗದಲ್ಲಿ 19 ಲಕ್ಷ ಪತ್ತೆ

    ಬೆಂಗಳೂರು: ಗುರುವಾರ ರಾಜ್ಯಾದ್ಯಂತ ಪಿಎಫ್‌ಐ(PFI) ನಾಯಕರ ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ(NIA) ಮತ್ತು ರಾಜ್ಯ ಪೊಲೀಸ್‌ ದಾಳಿ ನಡೆಸಿತ್ತು. ದಾಳಿ ಸಂದರ್ಭದಲ್ಲಿ ಪಿಎಫ್‌ಐ ನಾಯಕನ ಮನೆಯಲ್ಲಿ ಸಾವರ್ಕರ್‌(Savarkar) ಕುರಿತ ಪುಸ್ತಕ ಲಭ್ಯವಾಗಿದೆ.

    ಸದ್ಯ ಈ ಪುಸ್ತಕ, ಧರ್ಮ ಸಂಬಂಧಿ ಪುಸ್ತಕಗಳು ಮೊಬೈಲ್‌ಗಳು, ಬ್ಯಾಂಕ್ ಪಾಸ್ ಬುಕ್‌, ಹೀಗೆ ಎಲ್ಲವುಗಳನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟೆಕ್ಕಿ ಸೇರಿ 7 ಮಂದಿ ಪಿಎಫ್‌ಐ ನಾಯಕರು ಅರೆಸ್ಟ್‌: ಆರೋಪಿಗಳ ಕೆಲಸ ಏನು?

    ಕಲಬುರಗಿಯ ಶೇಖ್ ಇಲಿಯಾಜ್ ಅಲಿ ಮನೆಯಲ್ಲಿ 14.3 ಲಕ್ಷ ರೂ. ನಗದು ಹಾಗೂ ಶಿವಮೊಗ್ಗದಲ್ಲಿ ಸೆರೆಸಿಕ್ಕ ಶಾಹಿದ್ ಮನೆಯಲ್ಲಿ 19 ಲಕ್ಷ ರೂ. ನಗದು ಪತ್ತೆಯಾಗಿದೆ. ನಗದಿನ ಮೂಲ, ಹಣಕಾಸು ವ್ಯವಹಾರದ ಬಗ್ಗೆ ತನಿಖೆ ಆರಂಭವಾಗಿದೆ. ಎಲೆಕ್ಟ್ರಾನಿಕ್ ಡಿವೈಸ್‌ಗಳ ಡಿಕೋಡಿಂಗ್ ಆರಂಭವಾಗಿದೆ. ಇದನ್ನೂ ಓದಿ: ಭಾರತ ಇಸ್ಲಾಮಿಕ್ ರಾಷ್ಟ್ರವಾಗಬೇಕು, ಪೂರ್ಣ ಸ್ವಾತಂತ್ರ್ಯಕ್ಕೆ ಬಾಂಬ್‌ ತಯಾರಿ: ಶಿವಮೊಗ್ಗ ಆರೋಪಿಗಳಿಗಿದೆ ಐಸಿಸ್‌ ಲಿಂಕ್‌

    Live Tv
    [brid partner=56869869 player=32851 video=960834 autoplay=true]

  • ಭಾರತ್ ಜೋಡೋ ಪೋಸ್ಟರ್‌ನಲ್ಲಿ ಸಾವರ್ಕರ್ ಫೋಟೋ – ಪ್ರಿಂಟಿಂಗ್ ಮಿಸ್ಟೇಕ್ ಎಂದ ಕಾಂಗ್ರೆಸ್

    ಭಾರತ್ ಜೋಡೋ ಪೋಸ್ಟರ್‌ನಲ್ಲಿ ಸಾವರ್ಕರ್ ಫೋಟೋ – ಪ್ರಿಂಟಿಂಗ್ ಮಿಸ್ಟೇಕ್ ಎಂದ ಕಾಂಗ್ರೆಸ್

    ತಿರುವನಂತಪುರಂ: ಸಾವರ್ಕರ್ (Savarkar) ಅವರನ್ನು ಸ್ವಾತಂತ್ರ್ಯ ಹೋರಾಟಗಾರ (Freedom Fighter) ಎಂದು ಪರಿಗಣಿಸದ ಕಾಂಗ್ರೆಸ್ (Congress) ಇಂದು ಒಂದು ನಿರೀಕ್ಷೆಯೇ ಮಾಡಿರದ ಪ್ರಮಾದವನ್ನು ಎದುರಿಸಿದೆ. ಕಾಂಗ್ರೆಸ್ ಜೋಡೋ ಯಾತ್ರೆಯ (Bharat Jodo Yatra) ಹಿನ್ನೆಲೆ ಮಾಡಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಪೋಸ್ಟರ್‌ನಲ್ಲಿ (Poster) ಸಾವರ್ಕರ್ ಅವರ ಚಿತ್ರವೂ ಕಂಡುಬಂದಿದೆ. ಆದರೆ ಕಾಂಗ್ರೆಸ್ ಇದನ್ನು ಪ್ರಿಂಟಿಂಗ್ ಮಿಸ್ಟೇಕ್ (Printing Mistake) ಎಂದು ಸಮರ್ಥಿಸಿಕೊಂಡಿದೆ.

    ಕಾಂಗ್ರೆಸ್‌ನ ಮಹಾತ್ವಾಕಾಂಕ್ಷೆಯ ರ‍್ಯಾಲಿ ಭಾರತ್ ಜೋಡೋ ಯಾತ್ರೆ ಕೇರಳದ (Kerala) ಎರ್ನಾಕುಲಂ ಜಿಲ್ಲೆ ತಲುಪಿದಾಗ ಸ್ವಾತಂತ್ರ್ಯ ಹೋರಾಟಗಾರರ ಪೋಸ್ಟರ್‌ನಲ್ಲಿ ಸಾವರ್ಕರ್ ಫೋಟೋ ಬಳಸಿರುವುದು ಕಂಡುಬಂದಿದೆ. ಆದರೆ ಕಾಂಗ್ರೆಸ್ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ, ಅವರು ಬ್ರಿಟಿಷರ ವಿರುದ್ಧ ಹೋರಾಡುವ ಬದಲು ಅವರಿಗೆ ಕ್ಷಮೆ ಯಾಚಿಸಿದವರು ಎಂದು ವಾದಿಸಿದ್ದಾರೆ.

    ಕೇರಳದ ಸ್ವತಂತ್ರ ಶಾಸಕ ಪಿ.ವಿ ಅನ್ವರ್ ಅವರು ಈ ಪೋಸ್ಟರ್ ಅನ್ನು ಗಮನಿಸಿ, ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ಅಂಗವಾಗಿ ಚೆಂಗಮನಾಡಿನಲ್ಲಿ ಇರಿಸಲಾದ ಪೋಸ್ಟರ್‌ನಲ್ಲಿ ಸಾವರ್ಕರ್ ಅವರ ಫೋಟೋವನ್ನು ಹಾಕಲಾಗಿದೆ. ಈ ವಿಚಾರ ಕಾರ್ಯಕರ್ತರ ಗಮನಕ್ಕೆ ಬರುತ್ತಿದ್ದಂತೆ ಸಾವರ್ಕರ್ ಅವರ ಫೋಟೋ ಮೇಲೆ ಮಹಾತ್ಮ ಗಾಂಧೀಜಿಯವರ ಚಿತ್ರವನ್ನು ಅಂಟಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಹೃದಯ ಸಮಸ್ಯೆ- ಮೆಗ್ಗಾನ್ ಆಸ್ಪತ್ರೆಗೆ ಮುರುಘಾ ಶ್ರೀ ಶಿಫ್ಟ್

    ತಕ್ಷಣವೇ ಈ ಬಗ್ಗೆ ಸ್ಪಷ್ಟನೆ ನೀಡಿದ ಕಾಂಗ್ರೆಸ್, ಇದು ಪ್ರಿಂಟಿಂಗ್ ಮಿಸ್ಟೇಕ್‌ನಿಂದ ಆಗಿದೆ. ನಾವು ಮುದ್ರಕರಿಗೆ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳಿರುವ ಪೋಸ್ಟರ್ ತಯಾರಿಸಲು ಹೇಳಿದಾಗ ಅವರು ಕ್ರಾಸ್ ಚೆಕ್ ಮಾಡದೇ ಆನ್‌ಲೈನ್‌ನಲ್ಲಿ ಲಭ್ಯವಿದ್ದ ಎಲ್ಲಾ ಫೋಟೋಗಳನ್ನೂ ಹಾಕಿ ಪೋಸ್ಟರ್ ಮಾಡಿದ್ದಾರೆ. ಬಳಿಕ ಸಾವರ್ಕರ್ ಫೋಟೋ ಮೇಲೆ ಗಾಂಧೀಜಿಯವರ ಚಿತ್ರವನ್ನು ಹಾಕುವ ಮೂಲಕ ತಪ್ಪನ್ನು ಸರಿಪಡಿಸಿದ್ದೇವೆ ಎಂದು ತಿಳಿಸಿದೆ. ಇದನ್ನೂ ಓದಿ: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

    Live Tv
    [brid partner=56869869 player=32851 video=960834 autoplay=true]

  • ಬ್ಲೇಡ್‍ನಿಂದ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು!

    ಬ್ಲೇಡ್‍ನಿಂದ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು!

    ದಾವಣಗೆರೆ: ಸಾವರ್ಕರ್ ಪೋಸ್ಟರ್ ಅನ್ನು ಕಿಡಿಗೇಡಿಗಳು ಬ್ಲೇಡ್‍ನಿಂದ ಹರಿದು ಹಾಕಿ ವಿಕೃತಿ ಮೆರೆದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ದಾವಣಗೆರೆ ಜಿಲ್ಲೆಯ ಹೊನ್ನಾಳಿ ನಗರದಾದ್ಯಂತ ಗಣಪತಿ ಪ್ರತಿಷ್ಠಾಪನೆ ಹಿನ್ನೆಲೆ ಸಾವರ್ಕರ್ ಹಾಗೂ ರೇಣುಕಾಚಾರ್ಯ ಫ್ಲೆಕ್ಸ್ ಗಳನ್ನು ಬೆಂಬಲಿಗರು ಹಾಕಿದ್ದರು. ಇದೀಗ ಈ ಫ್ಲೆಕ್ಸ್‌ ಗಳನ್ನು ಕಿಡಿಗೇಡಿಗಳು ಹರಿದುಹಾಕಿದ್ದಾರೆ.

    ಹೊನ್ನಾಳಿ ಪಟ್ಟಣ ಹಾಗೂ ಗೊಲ್ಲರಹಳ್ಳಿಯಿಂದ ಹೊನ್ನಾಳಿ ಮಾರ್ಗವಾಗಿ ಈ ಫ್ಲೆಕ್ಸ್ ಗಳನ್ನು ಹಾಕಲಾಗಿತ್ತು. ಇದೀಗ ಈ ರೀತಿ ವಿಕೃತಿ ಮೆರೆದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

    ಹೊನ್ನಾಳಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ 91.50 ರೂ. ಇಳಿಕೆ

    Live Tv
    [brid partner=56869869 player=32851 video=960834 autoplay=true]

  • 8ನೇ ತರಗತಿ ಪಠ್ಯದಲ್ಲಿ ಸಾವರ್ಕರ್‌ ಪಾಠ

    8ನೇ ತರಗತಿ ಪಠ್ಯದಲ್ಲಿ ಸಾವರ್ಕರ್‌ ಪಾಠ

    ಬೆಂಗಳೂರು: ಸಾವರ್ಕರ್ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಾಗಲೇ ರಾಜ್ಯ ಸರ್ಕಾರ ಪಠ್ಯಪುಸ್ತಕದಲ್ಲಿ ವೀರ ಸಾವರ್ಕರ್ ಕುರಿತಾದ ಪಠ್ಯವನ್ನು ಸೇರ್ಪಡೆ ಮಾಡಿದೆ.

    2022 ರಲ್ಲಿ ರೋಹಿತ್ ಚಕ್ರತೀರ್ಥ ಸಮಿತಿ ಮಾಡಿರುವ ಪರಿಷ್ಕರಣೆ ಪಠ್ಯದಲ್ಲಿ ಸಾವರ್ಕರ್ ಅವರ ಕುರಿತಾದ ಪಠ್ಯ ಸೇರ್ಪಡೆ ಮಾಡಲಾಗಿದೆ. 8ನೇ ತರಗತಿ ಕನ್ನಡ ವಿಷಯದಲ್ಲಿ ಕೆ.ಟಿ. ಗಟ್ಟಿ ರಚನೆಯ ʼಕಾಲವನ್ನು ಗೆದ್ದವರುʼ ಎಂಬ ಪಠ್ಯವನ್ನು ಸೇರಿಸಲಾಗಿದೆ. ಇದನ್ನೂ ಓದಿ: ಸ್ವಾತಂತ್ರ ಹೋರಾಟಗಾರರಲ್ಲ, ಸಾವರ್ಕರ್‌ ಒಬ್ಬ ಮೂಲಭೂತವಾದಿ: ಯತೀಂದ್ರ ಸಿದ್ದರಾಮಯ್ಯ

    ಈ ಪಠ್ಯದಲ್ಲಿ ಸಾವರ್ಕರ್ ಅವರು ಅಂಡಮಾನ್ ಜೈಲಿ‌ನಲ್ಲಿ ಇದ್ದ ವಿವರ, ಅವರಿಗೆ ನೀಡಿದ ಶಿಕ್ಷೆ, ಅವರ ಹೋರಾಟಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ. 2017-18 ರಲ್ಲಿ ಬರಗೂರು ರಾಮಚಂದ್ರಪ್ಪ ಸಮಿತಿ ಪಠ್ಯದಲ್ಲಿದ್ದ ವಿಜಯಮಾಲಾ ರಂಗನಾಥ್ ರಚಿತ ಬ್ಲಡ್ ಗ್ರೂಪ್ ಪಠ್ಯವನ್ನು ಕೈ ಬಿಟ್ಟು ಹೊಸದಾಗಿ ಕಾಲವನ್ನು ಗೆದ್ದವರು ಎಂಬ ಸಾವರ್ಕರ್ ಪಠ್ಯ ಸೇರ್ಪಡೆ ಮಾಡಲಾಗಿದೆ. ಇದನ್ನೂ ಓದಿ: ಸಾವರ್ಕರ್‌ರನ್ನು ಭಾರತದಲ್ಲಿ ಬಿಟ್ಟರೆ ನಾವು ದೇಶ ಬಿಡಬೇಕಾಗುತ್ತೆ ಅನ್ನೋದು ಬ್ರಿಟಿಷರಿಗೆ ಗೊತ್ತಿತ್ತು: ಬೊಮ್ಮಾಯಿ

    ಸ್ವಾತಂತ್ರ್ಯ ದಿನಾಚರಣೆಯಿಂದ ಪ್ರಾರಂಭ ಆಗಿರುವ ಸಾವರ್ಕರ್ ಕುರಿತ ವಾರ್‌ಗೆ ಈಗ ಪಠ್ಯ ಸೇರ್ಪಡೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪರ/ ವಿರೋಧ ಚರ್ಚೆಗೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಂದೂಧರ್ಮವನ್ನು ಪುನರ್ ಸಂಘಟಿಸುವ ಕೆಲಸ ಆಗಬೇಕಿದೆ: ಚಕ್ರವರ್ತಿ ಸೂಲಿಬೆಲೆ

    ಹಿಂದೂಧರ್ಮವನ್ನು ಪುನರ್ ಸಂಘಟಿಸುವ ಕೆಲಸ ಆಗಬೇಕಿದೆ: ಚಕ್ರವರ್ತಿ ಸೂಲಿಬೆಲೆ

    ಬೆಳಗಾವಿ: ಹಿಂದೂ ಕಾರ್ಯಕರ್ತರ ಹತ್ಯೆ ಹೆಚ್ಚಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಹಿಂದೂಧರ್ಮವನ್ನು ಪುನರ್‌ ಸಂಘಟಿಸುವ ಕೆಲಸ ಆಗಬೇಕಿದೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.

    ನಗರದ ಸಮಾದೇವಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಕರ್ ಗಣೇಶೋತ್ಸವ ಅಂತಾ ಇಡೀ ರಾಜ್ಯ ಆಚರಣೆ ಮಾಡುತ್ತಿದೆ. ಹಿಂದೂಧರ್ಮವನ್ನು ಪುನರ್ ಸಂಘಟಿಸುವ ಕೆಲಸ ಆಗಬೇಕಿದೆ. ಇತ್ತೀಚಿನ ದಿನಗಳಲ್ಲಿ ನೋಡಿದಾಗ ಹಿಂದೂಧರ್ಮದ ಕಾರ್ಯಕರ್ತರನ್ನು ದಾರಿಯಲ್ಲಿ ಹೇಗೆ ಬೇಕಾದರೂ ಕೊಲ್ಲಬಹುದು ಅಂದುಕೊಂಡಿದ್ದಾರೆ. ಹೀಗಾಗಿ ಹಿಂದೂಧರ್ಮವನ್ನು ಪುನರ್ ಸಂಘಟಿಸುವ ಅಗತ್ಯತೆ ಇದೆ. ನಮ್ಮಲ್ಲಿರುವ ನ್ಯೂನತೆಯನ್ನು ಸರಿಪಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ದೆಹಲಿಗೆ ಹೊರಟ ಬಿಎಸ್‌ವೈ – ಇಂದು ಸಂಜೆ ಮೋದಿ ಭೇಟಿ

    ಹಿಂದೂಧರ್ಮವನ್ನು ಪುನರ್‌ ಸಂಘಟಿಸಲು ಸಾವರ್ಕರ್ ಮತ್ತೆ ಜೀವಂತಗೊಂಡಿದ್ದಾರೆ. ಸಾವರ್ಕರ್, ತಿಲಕ್‌ರು ಇಲ್ಲದೇ ಏನಿಲ್ಲ. ಎಲ್ಲರೂ ಸೇರಿ ವಿಶಿಷ್ಠವಾಗಿ ಗಣೇಶೋತ್ಸವ ಆಚರಣೆ ಮಾಡೋಣ. ಸಾವರ್ಕರ್ ಯಾರಿಗೋ ಒಬ್ಬರಿಗೆ ಸೇರಿದವರಲ್ಲ. ದೇಶಕ್ಕೆ ಸೇರಿರುವ ಸಾರ್ವಕರ್ ಅವರನ್ನು ಎಲ್ಲರೂ ಪ್ರತಿಷ್ಠಾಪನೆ ಮಾಡಬೇಕು ಎಂದು ಕರೆ ನೀಡಿದರು.

    ಸತೀಶ ಜಾರಕಿಹೊಳಿ‌ ಅವರು ದೇವರ ಪೂಜೆಯನ್ನು ಧಿಕ್ಕರಿಸುತ್ತಾರೆ. ಆದರೆ ದೇಹವಿಲ್ಲದ ಸಾರ್ವಕರ್ ಅವರು ಸತೀಶ ಜಾರಕಿಹೊಳಿ‌ ಅವರನ್ನು ಗಣೇಶೋತ್ಸವ ಪೆಂಡಾಲ್ ವರೆಗೂ ಕರೆದುಕೊಂಡು ಬಂದಿದ್ದಾರೆ. ಸಾರ್ವಕರ್ ಬದುಕಿದ್ದಾಗ ಪ್ರೇರಣೆ ಕೊಟ್ಟಿದ್ದರಲ್ಲದೇ ಸತ್ತ ಮೇಲೂ ಅವರ ಆತ್ಮ ಪ್ರೇರಣೆ ಕೊಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಶಿವಮೊಗ್ಗ SDPI ಕಚೇರಿ ಮೇಲೆ ಪೊಲೀಸರ ದಾಳಿ – ಮಹತ್ವದ ದಾಖಲೆ ವಶಕ್ಕೆ

    Live Tv
    [brid partner=56869869 player=32851 video=960834 autoplay=true]

  • ಗಣೇಶೋತ್ಸವ ಫ್ಲೆಕ್ಸ್‌ನಲ್ಲಿದ್ದ ಸಾವರ್ಕರ್ ಫೋಟೋ ಹರಿದುಹಾಕಿದ ಕಿಡಿಗೇಡಿಗಳು

    ಗಣೇಶೋತ್ಸವ ಫ್ಲೆಕ್ಸ್‌ನಲ್ಲಿದ್ದ ಸಾವರ್ಕರ್ ಫೋಟೋ ಹರಿದುಹಾಕಿದ ಕಿಡಿಗೇಡಿಗಳು

    ದಾವಣಗೆರೆ: ಸಾವರ್ಕರ್ ಫೋಟೋ ವಿವಾದ ದಾವಣಗೆರೆವರೆಗೂ ತಲುಪಿದೆ. ಗಣೇಶ ಹಬ್ಬದ ಪ್ರಯುಕ್ತ ಹೊನ್ನಾಳಿಯಲ್ಲಿ ಹಿಂದೂ ಮಹಾಸಭಾ ಗಣೇಶ ಸೇವಾ ಸಮಿತಿ ಹಾಕಿದ್ದ ಸಾವರ್ಕರ್ ಫೋಟೋವನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.

    ಗಣೇಶೋತ್ಸವದ ಅಂಗವಾಗಿ ನಗರದಲ್ಲಿ ಫ್ಲೆಕ್ಸ್ ಅಳವಡಿಸಲಾಗಿತ್ತು. ಫ್ಲೆಕ್ಸ್‌ನಲ್ಲಿದ್ದ ಸಾವರ್ಕರ್ ಫೋಟೋ ಜೊತೆಗೆ ಬಾಲಗಂಗಾಧನಾಥ ತಿಲಕರ ಫೋಟೋವನ್ನು ಸಹ ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮುಂಬೈನ ಗಣಪತಿಗೆ 316.40 ಕೋಟಿ ರೂ. ವಿಮೆ

    ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಸಾರ್ವಕರ್ ಸಮರ ಸಾರಿರುವ ಬಿಜೆಪಿ ಮೊದಲಿಗೆ ಸಿದ್ದು ಅಖಾಡದಿಂದಲೇ ಯುದ್ಧ ಆರಂಭಿಸಿದೆ. ರಾಜ್ಯ ಬಿಜೆಪಿಯ ರಾಜಾಹುಲಿ ಕೈಯಲ್ಲಿ ಹಿಂದುತ್ವ ಅಸ್ತ್ರ ಕೊಟ್ಟು, ರಥಯಾತ್ರೆಗೆ ಚಾಲನೆ ನೀಡಲಾಗಿದೆ. ಮುಂಬರುವ ಚುನಾವಣೆಗೆ ಬಿಜೆಪಿಯಿಂದ ಸಾವರ್ಕರ್ ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆದಿದೆ. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ಯಡಿಯೂರಪ್ಪರನ್ನೇ ಮುಂದೆ ಬಿಡಲು ಹೈಕಮಾಂಡ್ ಪ್ಲಾನ್ ಮಾಡಿದೆ. ಈ ಮೂಲಕ ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ರಾಜ್ಯ ಬಿಜೆಪಿಗೆ ರಾಜಾಹುಲಿ ಬಲ ಸಿಗಲಿದೆ. ರಥಯಾತ್ರೆಗೆ ಚಾಲನೆ ಕೊಟ್ಟಿರುವ ಯಡಿಯೂರಪ್ಪ ಆಗಸ್ಟ್ 30ರ ರಥಯಾತ್ರೆಯ ಸಮಾರೋಪದಲ್ಲಿ ಭಾಗಿ ಆಗಿ ಕಾಂಗ್ರೆಸ್ ವಿರುದ್ಧ ಗುಡುಗಲಿದ್ದಾರೆ. ಉಳಿದ ಜಿಲ್ಲೆಗಳಲ್ಲೂ ಸಾವರ್ಕರ್ ರಥಯಾತ್ರೆ ಮೂಲಕ ಪಕ್ಷದ ಪರ ಟ್ರೆಂಡ್ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದೆ. ಇನ್ನು ಇಂದು ಮೈಸೂರು, ನಾಳೆ ಎಚ್.ಡಿ.ಕೋಟೆ, ಸರಗೂರು, 25, 26ರಂದು ನಂಜನಗೂಡು ಮೂಲಕ ಚಾಮರಾಜನಗರ ಜಿಲ್ಲೆ, 27 ರಿಂದ 29ರವರೆಗೆ ಮಂಡ್ಯ ಜಿಲ್ಲೆಯಲ್ಲಿ ರಥಯಾತ್ರೆ ಸಾಗಲಿದ್ದು. 30ಕ್ಕೆ ಮೈಸೂರಿನಲ್ಲಿ ಕೊನೆಗೊಳ್ಳಲಿದೆ. ಇದನ್ನೂ ಓದಿ: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ಕೋರಿ ಸಿಟಿ ರವಿ ಪತ್ರ

    Live Tv
    [brid partner=56869869 player=32851 video=960834 autoplay=true]