Tag: ಸಿಂಗಂದೂರು

  • ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ – ಸೋಮವಾರ ಸಿಗಂದೂರು ಸೇತುವೆ ಲೋಕಾರ್ಪಣೆ

    ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ – ಸೋಮವಾರ ಸಿಗಂದೂರು ಸೇತುವೆ ಲೋಕಾರ್ಪಣೆ

    – ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ

    ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ (Shivamogga) ಜಿಲ್ಲೆಗೆ ಮತ್ತೊಂದು ಪ್ರವಾಸಿ ತಾಣದ ಮುಕಟವೊಂದು ಸೇರ್ಪಡೆಯಾಗಲಿದ್ದು, ಸೋಮವಾರ (ಜು. 14) ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ (Nithin Gadkari) ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಲಿದ್ದಾರೆ.

     ಶಿವಮೊಗ್ಗ ಎಂದಾಕ್ಷಣ ಥಟ್ಟನೆ ನೆನಪಾಗೋದು ವಿಶ್ವ ವಿಖ್ಯಾತ ಜೋಗ ಜಲಪಾತ, ಕುವೆಂಪು ಕವಿ ಮನೆ, ಸಕ್ರೈಬೈಲು ಆನೆ ಬಿಡಾರ, ನಿಸರ್ಗ ತಾಣ ಆಗುಂಬೆ. ಹೀಗೆ ಹತ್ತಾರು ಪ್ರವಾಸಿ ತಾಣಗಳನ್ನ ತನ್ನ ಮಡಿಲಿನಲ್ಲಿ ಇಟ್ಟುಕೊಂಡಿರುವ ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಮುಕುಟ ಸೇರ್ಪಡೆಗೊಳ್ಳುತ್ತಿದೆ. ಅದೇ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣ ಆಗಿರುವ ಸಿಗಂದೂರಿನ ಹೊಸ ಸೇತುವೆ (Sigandur Bridge). ಇದನ್ನೂ ಓದಿ: ಲೈಂಗಿಕ ಬಯಕೆ ತೀರಿಸುವಂತೆ ಕಾಲೇಜು HODಯಿಂದ ಕಿರುಕುಳ – ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

    ಶರಾವತಿ ಹಿನ್ನೀರು ಪ್ರದೇಶಗಳಾದ ಕರೂರು ಬಾರಂಗಿ ಹೋಬಳಿಯ ನಾಲ್ಕು ಗ್ರಾಮ ಪಂಚಾತಿ ವ್ಯಾಪ್ತಿಯ ಜನರಿಗೆ ಹಾಗೂ ಪ್ರಸಿದ್ಧ ಸಿಗಂದೂರು, ಕೊಲ್ಲೂರು ದೇವಾಲಯಕ್ಕೆ ಸಂಪರ್ಕಕ್ಕಾಗಿ ಲಾಂಚ್ ಒಂದೇ ಆಧಾರವಾಗಿತ್ತು. ಹೀಗಾಗಿ ಕಳೆದ ಹಲವು ದಶಕಗಳಿಂದ ಈ ಭಾಗದ ಜನರು ಕಳಸವಳ್ಳಿ- ಅಂಬಾರಗೋಡ್ಲು- ಸಿಗಂದೂರು ಸೇತುವೆ ಮಾಡುವಂತೆ ಒತ್ತಾಯಿಸುತ್ತಿದ್ದರು. ಇದನ್ನೂ ಓದಿ: ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುತ್ತಲೇ ಕುಸಿದು ಬಿದ್ದು ಸೇಲ್ಸ್ ಎಕ್ಸಿಕ್ಯೂಟಿವ್ ಸಾವು

    ಹೀಗಾಗಿ 2019ರಲ್ಲಿ ಕೇಬಲ್ ಸೇತುವೆ ಕಾಮಗಾರಿ ಪ್ರಾರಂಭವಾಗಿತ್ತು. ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು 450 ಕೋಟಿ ರೂ. ವೆಚ್ಚದ ಕಾಮಗಾರಿಯ ಉದ್ಘಾಟನೆಯನ್ನು ಮಾಡಿದ್ದರು. 2020ರ ಡಿಸೆಂಬರ್‌ನಲ್ಲಿ ಪ್ರಾರಂಭವಾಗಿದ್ದ ಕಾಮಗಾರಿಯು ಅಂತ್ಯಗೊAಡಿದ್ದು, ನಾಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಸೇತುವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದನ್ನೂ ಓದಿ: Tamil Nadu | ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ

    ಈ ಸೇತುವೆಯು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕೊಲ್ಲೂರು ಮತ್ತು ಸಿಗಂದೂರು ದೇವಸ್ಥಾನಗಳನ್ನು ಸಂಪರ್ಕಿಸಲಿದೆ. 2.24 ಕಿ.ಮೀ ಉದ್ದದ ದೇಶದಲ್ಲೇ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಇದಾಗಿದೆ. ಈ ಸೇತುವೆಯ ಸುಮಾರು 2.24ಕಿ.ಮೀ. ಉದ್ದ ಹಾಗೂ 16 ಮೀಟರ್ ಅಗಲವನ್ನು ಹೊಂದಿದೆ. 740 ಮೀ. ಕೇಬಲ್‌ನ ಆಧಾರದ ಮೇಲೆ ನಿಂತಿರುವ ಸೇತುವೆ ಇದಾಗಿದೆ.

    ಶರಾವತಿ ಹಿನ್ನೀರು ಭಾಗದ ಜನರ ಕನಸು ಒಂದೆಡೆ ನನಸಾದ್ರೆ, ಮತ್ತೊಂದೆಡೆ ಮಲೆನಾಡು ಶಿವಮೊಗ್ಗ ಪ್ರವಾಸೋದ್ಯಮಕ್ಕೆ ಈ ಕೇಬಲ್ ಆಧಾರಿತ ಸೇತುವೆ ಮತ್ತೊಂದು ಹೆಮ್ಮೆಯ ಸಂಗತಿಯಾಗಿದೆ.

  • ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದ ಕಾರು ಅಪಘಾತ – ಯುವಕ ಸಾವು

    ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದ ಕಾರು ಅಪಘಾತ – ಯುವಕ ಸಾವು

    ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಗದ್ದೆಗೆ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವಿಗೀಡಾದ ಘಟನೆ ಕುಂಸಿ ಬಳಿ ನಡೆದಿದೆ. ಅಪಘಾತದಲ್ಲಿ ನಾಲ್ವರು ಯುವಕರು ಗಾಯಗೊಂಡಿದ್ದಾರೆ.

    ಮೃತಪಟ್ಟ ಯುವಕನನ್ನು ಬೆಂಗಳೂರಿನ ನೆಲಮಂಗಲ ನಿವಾಸಿ ಚಂದನ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೊಡಗು ಮೂಲದ ನಂದನ್‌, ಕೋಲಾರದ ಕೋದಂಡ, ಹಾಸನದ ಭರತ್‌, ಮಂಡ್ಯದ ಯೋಗೇಶ್‌ ಎನ್ನಲಾಗಿದೆ. ಐದು ಮಂದಿ ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ರಜೆ ಇದ್ದ ಕಾರಣ ಐವರು ಯುವಕರು ಬೆಂಗಳೂರಿನಿಂದ ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದರು.

    ಕುಂಸಿಯ ಕೆರೆಕೋಡಿ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ. ತಲೆಗೆ ಪೆಟ್ಟು ಬಿದ್ದಿದ್ದರಿಂದ ಕಾರು ಚಲಾಯಿಸುತ್ತಿದ್ದ ಚಂದನ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

  • ಕೋರ್ಟ್‌ನಿಂದ ರಾಜಿ ಸಂಧಾನ –  ಸಿಗಂದೂರು ದೇವಸ್ಥಾನ ವಿವಾದ ಸುಖಾಂತ್ಯ

    ಕೋರ್ಟ್‌ನಿಂದ ರಾಜಿ ಸಂಧಾನ – ಸಿಗಂದೂರು ದೇವಸ್ಥಾನ ವಿವಾದ ಸುಖಾಂತ್ಯ

    ಶಿವಮೊಗ್ಗ: ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಅರ್ಚಕರು ಮತ್ತು ಟ್ರಸ್ಟ್‌ನವರ ನಡುವಿನ ವಿವಾದ ಈಗ ಸುಖಾಂತ್ಯ ಕಂಡಿದೆ.

    ಸಾಗರ ನ್ಯಾಯಾಲಯದ ನ್ಯಾಯಾಧೀಶರಾದ ಫೆಲಿಕ್ಸ್ ಅಲ್ಪಾನ್ಸೋ ಆಂತೋನಿ ಅವರು ಅರ್ಚಕ ಶೇಷಗಿರಿ ಭಟ್ ಹಾಗೂ ಟ್ರಸ್ಟಿ ರಾಮಪ್ಪ ಇಬ್ಬರನ್ನು ವಕೀಲರ ಮೂಲಕ ನ್ಯಾಯಾಲಯಕ್ಕೆ ಕರೆಯಿಸಿ ರಾಜಿ ಸಂಧಾನ ನಡೆಸಿ ಪ್ರಕರಣವನ್ನು ಸುಖಾಂತ್ಯಗೊಳಿಸಿದ್ದಾರೆ.

    ದಸರಾ ಅಂಗವಾಗಿ ದೇವಸ್ಥಾನದಲ್ಲಿ ಹೋಮವನ್ನು ಶೇಷಗಿರಿ ಭಟ್ ಹಾಗೂ ರಾಮಪ್ಪ ಅವರ ಕುಟುಂಬದ ಸದಸ್ಯರ ಉಪಸ್ಥಿತಿಯಲ್ಲಿ ನಡೆಸಬೇಕು. ಕೋವಿಡ್ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸುವಂತೆ ನ್ಯಾಯಾಧೀಶರು ಅರ್ಚಕ ಹಾಗೂ ಟ್ರಸ್ಟಿ ಇಬ್ಬರಿಗೂ ಸೂಚಿಸಿದ್ದಾರೆ.

    ಕೋವಿಡ್-19 ಮುಗಿಯುವವರೆಗೂ ಗರ್ಭಗುಡಿಯಲ್ಲಿ ಏಕ ಕಾಲದಲ್ಲಿ 40 ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು ಎಂಬ ನಿರ್ದೇಶನವನ್ನು ಜಡ್ಜ್‌ ನೀಡಿದ್ದಾರೆ.

    ಏನಿದು ಪ್ರಕರಣ?
    ನವರಾತ್ರಿ ಸಂದರ್ಭದಲ್ಲಿ ಹೋಮ ನಡೆಸಲು ಅರ್ಚಕರಿಗೆ ಟ್ರಸ್ಟಿನವರು ಅವಕಾಶ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದಕ್ಕಾಗಿ ಅರ್ಚಕರು ಹಾಗೂ ಟ್ರಸ್ಟಿನವರ ನಡುವೆ ಘರ್ಷಣೆ ಸಹ ಉಂಟಾಗಿತ್ತು.

    ಈ ಸಂಬಂಧ ಭಕ್ತರಾದ ಸಂದೀಪ್ ಜೈನ್ ಹಾಗೂ ನವೀನ್ ಜೈನ್ ಎಂಬುವವರು ಸಾಗರ ನ್ಯಾಯಾಲಯದಲ್ಲಿ ಟ್ರಸ್ಟಿ ರಾಮಪ್ಪ ಹಾಗೂ ಅವರ ಪುತ್ರ ರವಿಕುಮಾರ್ ಅವರು ಅರ್ಚಕ ಶೇಷಗಿರಿ ಭಟ್ ಅವರಿಗೆ ದೇವಸ್ಥಾನದಲ್ಲಿ ಪೂಜೆ ಹಾಗೂ ಹೋಮ ನಡೆಸಲು ಅಡ್ಡಿ ಪಡಿಸುತ್ತಿದ್ದಾರೆ ಎಂದು ಆರೋಪಿಸಿ ದಾವೆ ಹೂಡಿದ್ದರು. ಅಲ್ಲದೇ ಪೂಜೆ ಹಾಗೂ ಹೋಮ ನಡೆಸಲು ಅಡ್ಡಿಪಡಿಸದಂತೆ ನ್ಯಾಯ ದೊರಕಿಸಿಕೊಡುವಂತೆ ನ್ಯಾಯಾಲಯದಲ್ಲಿ ಮನವಿ‌ ಮಾಡಿಕೊಂಡಿದ್ದರು.