Tag: ಸಿಂಗಪುರ

  • ಸಿಂಗಾಪುರದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬ್ಯಾನ್

    ಸಿಂಗಾಪುರದಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬ್ಯಾನ್

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದ ‘ದಿ ಕಾಶ್ಮೀರ್ ಫೈಲ್ಸ್’ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿತ್ತು. ದೇಶಕ್ಕೆ ದೇಶವೇ ಈ ಸಿನಿಮಾದ ಬೆನ್ನಿಗೆ ನಿಂತಿತ್ತು. ಪ್ರಧಾನಿ ನರೇಂದ್ರ ಮೋದಿ ಮತ್ತು ನಾನಾ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಈ ಸಿನಿಮಾದ ಬಗ್ಗೆ ಒಲವು ತೋರಿ, ತೆರಿಗೆ ವಿನಾಯಿತಿಯನ್ನೂ ಘೋಷಣೆ ಮಾಡಿದ್ದರು. ಹೀಗಾಗಿ ದೇಶಾದ್ಯಂತ ಈ ಸಿನಿಮಾ ಯಶಸ್ವಿ ಪ್ರದರ್ಶನ ಕಂಡಿತು. ಇದನ್ನೂ ಓದಿ : ಬೆಸ್ಟ್ ಆಕ್ಟರ್ ಅವಾರ್ಡ್ ಪಡೆದಿದ್ದ ‘ನಾನು ಮತ್ತು ಗುಂಡ’ ಸಿನಿಮಾದ ‌ಶ್ವಾನ ನಿಧನ

    ಇದೀಗ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಸಿಂಗಾಪುರದಲ್ಲಿ ಪ್ರದರ್ಶಿಸಲು ಚಿತ್ರತಂಡ ನಿರ್ಧರಿಸಿತ್ತು. ಆದರೆ, ಅದಕ್ಕೆ ಇನ್ಫೋಕಾಮ್ ಮಿಡಿಯಾ ಡೆವಲಪ್ ಮೆಂಟ್ ಅಥಾರಿಟಿ, ಸಂಸ್ಕೃತಿ, ಸಮುದಾಯ ಮತ್ತು ಯುವ ಸಚಿವಾಲಯ ಹಾಗೂ ಗೃಹ ಸಚಿವಾಲಯ ಇದಕ್ಕೆ ಸಮ್ಮತಿ ಸೂಚಿಸಿಲ್ಲ ಎಂದು ಹೇಳಲಾಗುತ್ತಿದೆ. ಈ ಸಿನಿಮಾವನ್ನು ಅಧಿಕಾರಿಗಳು ಮೌಲ್ಯಮಾಪನ ಮಾಡಲಾಗಿದ್ದು, ಇದು ಪ್ರದರ್ಶನಕ್ಕೆ ಯೋಗ್ಯವಾದ ಚಿತ್ರವಲ್ಲ ಎಂಬ ಅಭಿಪ್ರಾಯ ಬಂದ ಹಿನ್ನೆಲೆಯಲ್ಲಿ ಪ್ರದರ್ಶನಕ್ಕೆ ನಿರಾಕರಿಸಲಾಗಿದೆ ಎನ್ನುವ ಮಾಹಿತಿ ಇದೆ. ಇದನ್ನೂ ಓದಿ: ಫಸ್ಟ್ ಟೈಮ್ ಮಗಳ ಫೋಟೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ವರ್ಗೀಕರಣ ಮಾರ್ಗಸೂಚಿಯನ್ನೂ ಮೀರಿದೆ. ಏಕಮುಖವಾಗಿ ಚಿತ್ರೀಕರಿಸಲಾಗಿದೆ. ಅಲ್ಲದೇ, ಪ್ರಚೋದನಕಾರಿ ಆಗುವಂತಹ ಸಾಕಷ್ಟು ಅಂಶಗಳನ್ನು ಈ ಸಿನಿಮಾ ಹೊಂದಿದೆ. ಸಂಘರ್ಷಕ್ಕೆ ಕಾರಣವಾಗುವ ಅಂಶಗಳು ಈ ಸಿನಿಮಾದಲ್ಲಿ ಇರುವುದರಿಂದ ಚಿತ್ರ ಪ್ರದರ್ಶನಕ್ಕೆ ನಿರಾಕರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ ಎಂದು ವರದಿಗಳು ಬಹಿರಂಗವಾಗಿವೆ. ಇದನ್ನೂ ಓದಿ : ಜೂನ್ 9ಕ್ಕೆ ನಯನತಾರಾ ಮದುವೆ ಫಿಕ್ಸ್ – ತಿರುಪತಿಯಲ್ಲಿ ವಿವಾಹ

    1990ರಲ್ಲಿ ಕಾಶ್ಮೀರ ಕಣಿವೆಯಲ್ಲಿ ನಡೆದ ಹಿಂದೂಗಳ ಮಾರಣಹೋಮ ಕುರಿತಾದ ಸಿನಿಮಾ ಇದಾಗಿದೆ. ಕಾಶ್ಮೀರಿ ಪಂಡಿತರ ಹತ್ಯೆಯನ್ನು ಪ್ರಮುಖವಾಗಿ ಇಟ್ಟುಕೊಂಡು ತಯಾರಿಸಲಾದ ಚಿತ್ರ ಇದಾಗಿದ್ದು, ಇದೊಂದು ನೈಜಘಟನೆಯನ್ನು ಆಧರಿಸಿದ ಚಿತ್ರವೆಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ಹೀಗಾಗಿಯೇ ಸಿಂಗಾಪುರ ದೇಶದ ಸಿನಿಮಾ ನಿಯಮಾವಳಿಗಳಿಗೆ ಈ ಚಿತ್ರ ವಿರುದ್ಧವಾಗಿದೆ ಎಂದು ವರದಿ ನೀಡಲಾಗಿದೆಯಂತೆ.

  • ಕೋವಿಡ್ 19- ಭಾರತೀಯ ಮೂಲದ ನರ್ಸ್ ಗೆ ರಾಷ್ಟ್ರಪತಿ ಗೌರವ

    ಕೋವಿಡ್ 19- ಭಾರತೀಯ ಮೂಲದ ನರ್ಸ್ ಗೆ ರಾಷ್ಟ್ರಪತಿ ಗೌರವ

    ಸಿಂಗಪುರ: ಕೋವಿಡ್-19 ಸಮಯದಲ್ಲಿ ಫ್ರಂಟ್ ಲೈನ್ ವಾರಿಯರ್ ಆಗಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ ನರ್ಸ್ ಕಲಾ ನಾರಾಯಣಸ್ವಾಮಿ ಅವರಿಗೆ ಸಿಂಗಪುರದಲ್ಲಿ ರಾಷ್ಟ್ರಪತಿ ಪುರಸ್ಕಾರ ನೀಡಿ ಗೌರವಿಸಲಾಗಿದೆ.

    ಒಟ್ಟು ಐವರು ನರ್ಸ್ ಗಳು ಈ ಗೌರವಕ್ಕೆ ಪಾತ್ರರಾಗಿದ್ದು, ಐವರಲ್ಲಿ ಕಲಾ ನಾರಾಯಣಸ್ವಾಮಿ ಸಹ ಒಬ್ಬರಾಗಿದ್ದಾರೆ. ಸಿಂಗಪುರದ ಆರೋಗ್ಯ ಸಚಿವಾಲಯ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಿದೆ. ರಾಷ್ಟ್ರಪತಿಗಳ ಪುರಸ್ಕಾರಕ್ಕೆ ಪಾತ್ರವಾಗಿರುವ ನರ್ಸ್ ಗಳಿಗೆ ಸಿಂಗಪುರ ರಾಷ್ಟ್ರಪತಿ ಹಲಿಮಾ ಯಾಕೂಬ್ ಅವರ ಹಸ್ತಾಕ್ಷರವುಳ್ಳ ಪ್ರಮಾಣ ಪತ್ರ, ಒಂದು ಟ್ರೋಫಿ ಮತ್ತು 7,228 ಯುಎಸ್ ಡಾಲರ್ (5.40 ಲಕ್ಷ ರೂ.) ಹಣ ಬಹುಮಾನವಾಗಿ ಸಿಗಲಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಮೈಸೂರಿನ ವೈದ್ಯೆಗೆ ವಿಶೇಷ ಗೌರವ

    ಕಲಾ ನಾರಾಯಣಸ್ವಾಮಿ ವುಡ್ ಲ್ಯಾಂಡ್ಸ್ ಹೆಲ್ತ್ ಕ್ಯಾಂಪಸ್ ನಲ್ಲಿ ನರ್ಸಿಂಗ್ ವಿಭಾಗದ ಉಪ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಕೊರೊನಾ ನಿಯಂತ್ರಣ ಮಾಡುವಲ್ಲಿ ಕಲಾ ನಾರಾಯಣಸ್ವಾಮಿ ಯಶಸ್ವಿಯಾಗಿದ್ದರಿಂದ ಈ ಗೌರವಕ್ಕೆ ಪಾತ್ರರಾಗಿದ್ದಾರೆ. 2003ರಲ್ಲಿ ಸಾರ್ಸ್ ಕಾಣಿಸಿಕೊಂಡಾಗ ರೋಗವನ್ನು ನಿಯಂತ್ರಿಸುವುದನ್ನು (ಚೈನ್ ಕಟ್) ಕಲಾ ಅವರು ಕಲಿತಿದ್ದರು. ಇದನ್ನೂ ಓದಿ: ಬೆಂಗಳೂರಿನ ವೈದ್ಯನಿಗೆ ಅಮೆರಿಕದಲ್ಲಿ ಡ್ರೈವ್ ಆಫ್ ಹಾನರ್ ಗೌರವ