Tag: ಸಿಂಗಾಪೂರ್

  • ಸಿಂಗಾಪೂರ್ ವಿಶ್ವ ಕನ್ನಡ ಹಬ್ಬದಲ್ಲಿ ನಟ ಶಿವರಾಜ್ ಕುಮಾರ್

    ಸಿಂಗಾಪೂರ್ ವಿಶ್ವ ಕನ್ನಡ ಹಬ್ಬದಲ್ಲಿ ನಟ ಶಿವರಾಜ್ ಕುಮಾರ್

    ರ್ನಾಟಕ ಪ್ರೆಸ್‍ ಕ್ಲಬ್‍ ಕೌನ್ಸಿಲ್‍ ಸಂಸ್ಥೆಯು ಕನ್ನಡವನ್ನು ವಿದೇಶದಲ್ಲೂ ಬೆಳೆಸಬೇಕು ಎಂಬ ನಿಟ್ಟಿನಲ್ಲಿ ಕಳೆದ ವರ್ಷ ದುಬೈನಲ್ಲಿ ವಿಶ್ವ ಕನ್ನಡ ಹಬ್ಬವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಸಿಕ್ಕ ಅಭೂತಪೂರ್ವ ಯಶಸ್ಸಿನಿಂದ ಪ್ರೇರೀತರಾಗಿರುವ ಕೌನ್ಸಿಲ್, ಸೆಪ್ಟೆಂಬರ್‍ 28ರಂದು ಎರಡನೇ ವಿಶ್ವ ಕನ್ನಡ ಹಬ್ಬವನ್ನು ಸಿಂಗಾಪೂರ್‍ನಲ್ಲಿ ಆಯೋಜಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡುವುದಕ್ಕಾಗಿ ಇತ್ತೀಚೆಗೆ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಕರ್ನಾಟಕ ಪ್ರೆಸ್‍ ಕ್ಲಬ್‍ ಕೌನ್ಸಿಲ್‍ನ ಅಧ್ಯಕ್ಷ ಡಾ. ಶಿವಕುಮಾರ್‍ ನಾಗರ ನವಿಲೆ, ಮಹರ್ಷಿ ಡಾ. ಆನಂದ್ ಗುರೂಜಿ, ಉತ್ಸವದ ರಾಯಭಾರಿ ವಸಿಷ್ಠ ಸಿಂಹ, 2ನೇ ವಿಶ್ವ ಕನ್ನಡ ಹಬ್ಬದ ಸರ್ವಾಧ್ಯಕ್ಷರಾದ ಡಾ.ಸಿ. ಸೋಮಶೇಖರ್‍, ಸಾಂಸ್ಕೃತಿಕ ಅಧ್ಯಕ್ಷರಾದ ನಟಿ ರೂಪಿಕಾ ಮುಂತಾದವರು ಈ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

    ಹೊರನಾಡ ಕನ್ನಡಿಗರನ್ನು ಬೆಸೆಯುವ ಸಲುವಾಗಿ ಪ್ರತೀ ವರ್ಷ ಒಂದೊಂದು ದೇಶದಲ್ಲಿ ಈ ಹಬ್ಬವನ್ನು ಆಯೋಜಿಸಲಾಗುತ್ತಿದೆ. ಈ ವರ್ಷ ಸಿಂಗಾಪೂರ್‍ನಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ನಗರದ ಕಲಾವಿದರಲ್ಲದೆ ರಾಜ್ಯದ ಮೂಲೆಮೂಲೆಯಲ್ಲಿರುವ ಜಾನಪದ ಕಲಾವಿದರನ್ನು ಹೆಕ್ಕಿ ಅಲ್ಲಿಗೆ ಕರೆದೊಯ್ಯಲಾಗುತ್ತಿದೆ. ಹಾಗೆಯೇ, ಈ ಬಾರಿಯೂ ಸಾಧನೆ ಮಾಡಿದ ಇಬ್ಬರಿಗೆ ವಿಶ್ವಮಾನವ ಮತ್ತು ಒಂಬತ್ತು ಸಾಧಕರಿಗೆ ವಿಶ್ವಮಾನ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಈ ಹಬ್ಬದಲ್ಲಿ ರಾಜ್ಯ, ದೇಶ ಮತ್ತು ವಿದೇಶಗಳಲ್ಲಿ ನೆಲೆಸಿರುವ ನೂರಾರು ಕನ್ನಡಿಗರು ಭಾಗವಹಿಸುವುದರ ಜೊತೆಗೆ ಮುಖ್ಯ ಅತಿಥಿಯಾಗಿ ‘ಕರುನಾಡ ಚಕ್ರವರ್ತಿ’ ಶಿವರಾಜಕುಮಾರ್ ಮತ್ತ ಗೀತಾ ಶಿವರಾಜಕುಮಾರ್‍ ‍ಭಾಗವಹಿಸಲಿದ್ದಾರೆ.

    ಇಸ್ರೋ ವಿಜ್ಞಾನಿ ಎಸ್‍. ಕಿರಣ್‍ ಕುಮಾರ್‍ ಮತ್ತು ರಾಜ್ಯಸಭಾ ಸದಸ್ಯರಾದ ಸುಧಾ ಮೂರ್ತಿ (ಇನ್ಫೋಸಿಸ್‍ ಫೌಂಡೇಶನ್‍) ಅವರಿಗೆ 2024ನೇ ಸಾಲಿನ ವಿಶ್ವ ಮಾನವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಜೊತೆಗೆ ಪ್ರಸಾದ್‍ ಗುರುಜಿ, ನಟ ದೊಡ್ಡಣ್ಣ, ಸಂಗೀತ ನಿರ್ದೇಶಕ ಗುರುಕಿರಣ್, ಗಾಯಕಿ ಮಂಗ್ಲಿ, ಜಾನಪದ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ, ಮಿಕ್ಕಂಗತೆ ಬೇರೆ ವಿಭಾಗಗಳಲ್ಲಿ ಆಶಾ, ಪದ್ಮಾ ನಾಗರಾಜ್‍, ಹರೀಶ್ ಕುಮಾರ್‍ ಮತ್ತು ಉಮೇಶ್‍ ಕುಮಾರ್‍ ಅವರಿಗೆ ‘ವಿಶ್ವ ಮಾನ್ಯ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

     

    ಈ ಕುರಿತು ಮಾತನಾಡಿದ ಕರ್ನಾಟಕ ಪ್ರೆಸ್‍ ಕ್ಲಬ್‍ ಕೌನ್ಸಿಲ್‍ನ ಅಧ್ಯಕ್ಷ ಡಾ. ಶಿವಕುಮಾರ್‍ ನಾಗರ ನವಿಲೆ, ‘ಈ ಬಾರಿ ಸಿಂಗಾಪುರದಲ್ಲಿ ವಿಶ್ವ ಕನ್ನಡ ಹಬ್ಬವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಕನ್ನಡವನ್ನು ವಿದೇಶದಲ್ಲೂ ಬೆಳೆಸಬೇಕು ಎಂಬುದು ಈ ಹಬ್ಬದ ಉದ್ದೇಶವಾಗಿದೆ. ವಿದೇಶಗಳಲ್ಲಿ ಕನ್ನಡ ಉಳಿಸಿ, ಬೆಳೆಸುವ ಕನ್ನಡಿಗರಿಗೆ ಗೌರವ ಸಲ್ಲಿಸುವುದರ ಜೊತೆಗೆ, ಕನ್ನಡಿಗರಿಗೆ ವಿದೇಶದಲ್ಲಿ ಕೆಲಸ ಮತ್ತು ವಿದ್ಯಾಭ್ಯಾಸ ಕೊಡಿಸುವ ನಿಟ್ಟಿನಲ್ಲಿ ಸಂಸ್ಥೆಯು ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಸಂಸ್ಥೆಯಲ್ಲಿ ಹಲವು ಘಟಕಗಳಿದ್ದು, ಪರಿಸರ ಸಂರಕ್ಷಣೆ, ರಕ್ತದಾನ, ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಮೂಲಕ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದರು. ಸಮಾರಂಭದಲ್ಲಿ ಹಾಜರಿದ್ದ ಹಲವು ಗಣ್ಯರು 2ನೇ ವಿಶ್ವ ಕನ್ನಡ ಹಬ್ಬದ ಕುರಿತು ಮಾತನಾಡಿದರು.

  • ಶಶಿ ತರೂರು ಒಬ್ಬ ಮೂರ್ಖ: ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನ ಖಡಕ್ ಉತ್ತರ

    ಶಶಿ ತರೂರು ಒಬ್ಬ ಮೂರ್ಖ: ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನ ಖಡಕ್ ಉತ್ತರ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಸಿಂಗಪೂರನಲ್ಲಿ ಬ್ಯಾನ್ ಮಾಡಿರುವ ವಿಚಾರ ನಿನ್ನೆಯಿಂದ ನಾನಾ ರೂಪ ಪಡೆದುಕೊಳ್ಳುತ್ತಿದೆ. ಬ್ಯಾನ್ ಮಾಡಿರುವ ಸುದ್ದಿಯನ್ನು ಶಶಿ ತರೂರು ಟ್ವಿಟ್ ಮಾಡಿದ್ದರು. ಇದೊಂದು ಸರಕಾರಿ ಪ್ರಯೋಜಿತ ಸಿನಿಮಾ ಎಂದು ಟೀಕಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟ ಅನುಪಮ್ ಖೇರ್ ಕೂಡ ಶಶಿ ತರೂರ್ ಗೆ ಚಾಟಿ ಬೀಸಿದ್ದರು. ಇದೀಗ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೂಡ ಕಿಡಿಕಾರಿದ್ದಾರೆ. ಇದನ್ನೂ ಓದಿ : ಮಗುವಿಗಾಗಿ ಪ್ಲ್ಯಾನ್ ಮಾಡಿದ್ದಾರಂತೆ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್

    ದಿ ಕಾಶ್ಮೀರ್ ಫೈಲ್ಸ್ ದೇಶಾದ್ಯಂತ ಭರ್ಜರಿ ಪ್ರದರ್ಶನ ಕಂಡಿದೆ. ಇದೀಗ ಓಟಿಟಿಯಲ್ಲೂ ಪ್ರರ್ದಶನಕ್ಕೆ ಸಿದ್ಧವಾಗಿದೆ. ಈ ಹೊತ್ತಿನಲ್ಲಿ ಸಿನಿಮಾವನ್ನು ಸಿಂಗಾಪೂರನಲ್ಲಿ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿತ್ತು ಚಿತ್ರತಂಡ. ಸಿಂಗಾಪೂರನಲ್ಲಿ ಪ್ರದರ್ಶನವಾಗಬೇಕಾದರೆ, ಅಲ್ಲಿಯೂ ಸೆನ್ಸಾರ್ ಆಗಬೇಕು. ಆಗ ಈ ಸಿನಿಮಾ ಸಿಂಗಾಪೂರನಲ್ಲಿ ಪ್ರದರ್ಶನಕ್ಕೆ ಯೋಗ್ಯವಾಗಿಲ್ಲ ಎಂದು ಅಭಿಪ್ರಾಯ ಪಟ್ಟಿತ್ತು. ಅದನ್ನೇ ಶಶಿ ತರೂರು ಟ್ವಿಟ್ ಮಾಡಿದ್ದರು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ವಿವಾದ : ಶಶಿ ತರೂರು ಮತ್ತು ಅನುಪಮ್ ಖೇರ್ ಜಟಾಪಟಿ

    ಶಶಿ ತರೂರು ಟ್ವಿಟ್ ಗೆ ಪ್ರತಿಕ್ರಿಯೆ ನೀಡಿರುವ ವಿವೇಕ್ ಅಗ್ನಿಹೋತ್ರಿ,, ‘ಶಶಿ ತರೂರು ಸದಾ ತಪ್ಪು ಹುಡುಕುವ ಒಬ್ಬ ಮೂರ್ಖ. ದೂರುವುದೇ ಚಟ ಮಾಡಿಕೊಂಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸುವುದಕ್ಕೆ ಸಾಧ್ಯ?’ ಎಂದು ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ‘ಶಶಿ ತರೂರು ಪತ್ನಿ ಕಾಶ್ಮೀರಿ ಎನ್ನುವುದು ನಿಜವಾದರೆ, ಅವರ ಗೌರವಕ್ಕಾದರೂ ಒಳ್ಳೆಯದನ್ನು ಯೋಚಿಸಿ’ ಎಂದು ಸಲಹೆಯನ್ನೂ ಅವರು ನೀಡಿದ್ದಾರೆ. ಇದನ್ನೂ ಓದಿ : ಜ್ಯೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿ ನಾರಾಯಣ್ ನಿಧನ

    ಸಿಂಗಪೂರ ಸಿನಿಮಾ ಕಾನೂನು ಬಗ್ಗೆಯೂ ವಿವರಿಸಿರುವ ವಿವೇಕ್ ಅಗ್ನಿಹೋತ್ರಿ, ‘ಅದೊಂದು ಪುರಾತನ, ಅತೀ ಹಿಂದುಳಿದ ಸೆನ್ಸಾರ್ ಬೋರ್ಡ್. ಇನ್ನೂ ಪುರಾತನ ಆಲೋಚನೆಗಳನ್ನೇ ಮುಂದುವರೆಸಿಕೊಂಡು ಹೋಗುತ್ತಿದೆ. ಅದು ಅಪ್ ಗ್ರೇಡ್ ಆಗಬೇಕು’ ಎಂದು ಅವರು ಹೇಳಿದ್ದಾರೆ.

  • ದಿ ಕಾಶ್ಮೀರ್ ಫೈಲ್ಸ್ ವಿವಾದ : ಶಶಿ ತರೂರು ಮತ್ತು ಅನುಪಮ್ ಖೇರ್ ಜಟಾಪಟಿ

    ದಿ ಕಾಶ್ಮೀರ್ ಫೈಲ್ಸ್ ವಿವಾದ : ಶಶಿ ತರೂರು ಮತ್ತು ಅನುಪಮ್ ಖೇರ್ ಜಟಾಪಟಿ

    ಕಾಂಗ್ರೆಸ್ ಸಂಸತ್ ಸದಸ್ಯ ಶಶಿ ತರೂರ್ ನಿನ್ನೆಯಷ್ಟೇ ‘ದಿ ಕಾಶ್ಮೀರ್ ಫೈಲ್ಸ್’ ಕುರಿತಾಗಿ ಟ್ವಿಟ್ ವೊಂದನ್ನು ಮಾಡಿದ್ದರು. ನ್ಯೂಸ್ ಚಾನೆಲ್ ವೊಂದರ ವರದಿಯನ್ನು  ಲಿಂಕ್ ಮಾಡಿ, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಸಿಂಗಪುರದ‍ಲ್ಲಿ ಬ್ಯಾನ್ ಮಾಡಲಾಗಿದೆ. ಭಾರತದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷದ ಪ್ರಯೋಜಿತ ಸಿನಿಮಾ ದಿ ಕಾಶ್ಮೀರ್ ಫೈಲ್ಸ್’ ಎಂದು ಬರೆದುಕೊಂಡಿದ್ದರು. ಈ ಟ್ವಿಟ್ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದನ್ನೂ ಓದಿ : ಬೆಸ್ಟ್ ಆಕ್ಟರ್ ಅವಾರ್ಡ್ ಪಡೆದಿದ್ದ ‘ನಾನು ಮತ್ತು ಗುಂಡ’ ಸಿನಿಮಾದ ‌ಶ್ವಾನ ನಿಧನ

    ಈ ಟ್ವಿಟ್ ಗೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿರುವ ಅನುಪಮ್ ಖೇರ್ ತೀವ್ರ ತರಹದಲ್ಲಿ ಪ್ರತಿಕ್ರಿಯೆ ನೀಡಿದ್ದರು. ತರೂರು ಅವರ ದಿವಂಗತ ಪತ್ನಿ ಸುನಂದಾ ಪುಷ್ಕರ್ ಅವರು ಈ ಹಿಂದೆ ಟ್ವಿಟ್ ಮಾಡಿದ್ದ ಪೋಸ್ಟ್ ವೊಂದನ್ನು ಟ್ಯಾಗ್ ಮಾಡಿ, ಮಡಿದ ಪತ್ನಿಗೋಸ್ಕರವಾದರೂ ಶಶಿ ತರೂರು, ನಿರ್ಭಾವುಕತೆಯನ್ನು ಬಿಡಬೇಕಿತ್ತು. ತರೂರು ಪತ್ನಿ ಮೂಲತಃ ಕಾಶ್ಮೀರಿ. ಹಾಗಾಗಿ ಈ ಸಿನಿಮಾ ಬಗ್ಗೆ ಸಂವೇದನಾಶೀಲತೆ ತೋರಬೇಕಿತ್ತು ಎಂದು ಅನುಪಮ್ ಖೇರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಟ್ವಿಟ್ ಗಳು ಈಗ ಜಟಾಪಟಿಗೆ ಕಾರಣವಾಗಿವೆ.

    ಯಾವುದೋ ಒಂದು ದೇಶ ಕಾಶ್ಮೀರ್ ಫೈಲ್ಸ್ ಅನ್ನು ಬ್ಯಾನ್ ಮಾಡಿದೆ ಎಂದ ಮಾತ್ರಕ್ಕೆ ಅದು ಜಗತ್ತಿನ ಗೆಲುವು ಎನ್ನುವಂತೆ ತರೂರು ಸಂಭ್ರಮಿಸುತ್ತಿದ್ದಾರೆ. ಇದು ದುರಂತ ಎನ್ನುವ ಅರ್ಥದಲ್ಲಿ ಅನುಪಮ್ ಖೇರ್ ಬರೆದುಕೊಂಡಿದ್ದಕ್ಕೆ, ಶಶಿ ತರೂರು ಕೂಡ ಅಷ್ಟೇ ಖಾರವಾಗಿಯೇ ಮತ್ತೊಂದು ಟ್ವಿಟ್ ಮಾಡಿದ್ದಾರೆ. ವಿನಾಕಾರಣ ನನ್ನ ದಿವಗಂತ ಪತ್ನಿಯನ್ನು ಎಳೆದು ತಂದಿರುವುದು ಅವರ ನಿರ್ಲಜ್ಜೆತನ ತೋರಿಸುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ಯಾವುದೇ ಕಾಮೆಂಟ್ ಸೇರಿಸದೆ, ವರದಿಯಾದ ಸುದ್ದಿಯನ್ನು ಮಾತ್ರ ಪೋಸ್ಟ್ ಮಾಡಿದ್ದೇನೆ ಎಂದು ಸಮಜಾಯಿಸಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಮ್ ಮಗಳ ಫೋಟೋ ಶೇರ್ ಮಾಡಿದ ಪ್ರಿಯಾಂಕಾ ಚೋಪ್ರಾ

    ತಮ್ಮ ದಿವಗಂತ ಪತ್ನಿಯ ಊರಿಗೂ ಹೋಗಿದ್ದ ವಿಷಯವನ್ನೂ ಪ್ರಸ್ತಾಪಿಸಿರುವ ತರೂರು, ಸುನಂದಾ ಮನೆಯ ಅಕ್ಕಪಕ್ಕದವರನ್ನು ಮಾತನಾಡಿಸಿದ್ದೆ. ಅಲ್ಲಿ ಹಿಂದೂ ಮತ್ತು ಮುಸಲ್ಮಾನರು ಒಟ್ಟಾಗಿಯೇ ಇದ್ದರು. ಈಗ ಏನೇ ಹೇಳಿದರೂ, ನನ್ನ ಮಾತುಗಳನ್ನು ಅನುಮೋದಿಸುವುದಕ್ಕೆ ಸುನಂದಾ ಇಲ್ಲವೆಂದೂ ಅವರು ಮತ್ತೊಂದು ಫೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

    ಅನುಪಮ್ ಖೇರ್ ಮತ್ತು ತರೂರ್ ಟ್ವಿಟ್ ಗಳು ಈಗ ಭಾರೀ ಸದ್ದು ಮಾಡುತ್ತಿವೆ. ದಿ ಕಾಶ್ಮೀರ್ ಫೈಲ್ಸ್ ಕುರಿತು ಹೆಮ್ಮೆಯಿಂದ ಅನುಪಮ್ ಖೇರ್ ಮಾತನಾಡುತ್ತಿದ್ದರೆ, ಶಶಿ ತರೂರು ಸಿನಿಮಾ ಬಗ್ಗೆ ಕಾಮೆಂಟ್ ಮಾಡದೇ ಸುದ್ದಿಯನ್ನು ಮಾತ್ರ ಪೋಸ್ಟ್ ಮಾಡಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ, ಅದೊಂದು ಆಡಳಿತ ಸರಕಾರದ  ಕೃಪಾಪೋಷಿತ ಸಿನಿಮಾ ಎನ್ನುವುದನ್ನು ಒಪ್ಪಿಕೊಳ್ಳಬೇಕಾದ ಕಟುಸತ್ಯ ಎಂದೂ ಹೇಳಿದ್ದಾರೆ. ಇದನ್ನೂ ಓದಿ : ಜೂನ್ 9ಕ್ಕೆ ನಯನತಾರಾ ಮದುವೆ ಫಿಕ್ಸ್ – ತಿರುಪತಿಯಲ್ಲಿ ವಿವಾಹ

    ಸಿಂಗಪೂರ ಸಿನಿಮಾ ಕಾನೂನಿನ ಅಂಶಗಳಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಾರದೇ ಇರುವ ಕಾರಣಕ್ಕಾಗಿ ಸಿಂಗಾಪೂರದಲ್ಲಿ ಸಿನಿಮಾವನ್ನು ಬ್ಯಾನ್ ಮಾಡಲಾಗಿದೆ. ಇದೊಂದು ಹಿಂಸೆಯನ್ನು ಪ್ರಚೋದಿಸುವಂತಹ ಸಿನಿಮಾವಾಗಿದ್ದರಿಂದ ಪ್ರದರ್ಶನಕ್ಕೆ ಯೋಗ್ಯವಾಗಿಲ್ಲ ಎಂದು ಅಲ್ಲಿ ಪ್ರಸಾರ ಖಾತೆಯು ತಿಳಿಸಿದೆ ಎಂದು ಸುದ್ದಿಯಾಗಿದೆ.