Tag: ಸಿಂದಗಿ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಂಧನ!

  • ಸಿಂದಗಿ ಕ್ಷೇತ್ರದ ಶಾಸಕ,  ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಬಂಧನ!

    ಸಿಂದಗಿ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಬಂಧನ!

    ವಿಜಯಪುರ: ಜಿಲ್ಲೆಯ ಸಿಂದಗಿ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಮಾದರಿ ಮತಪತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಕ್ರಮಸಂಖ್ಯೆ ಅದಲು ಬದಲು ಮಾಡಲಾಗಿತ್ತು. ಬಿಜೆಪಿ ತಯಾರಿಸಿದ ಮಾದರಿ ಮತಪತ್ರದಲ್ಲಿ ಉದ್ದೇಶಪೂರ್ವಕವಾಗಿ ಕ್ರಮಸಂಖ್ಯೆ ಅದಲು ಬದಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

    ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಅಭ್ಯರ್ಥಿ ಎಂ ಸಿ ಮನಗೂಳಿ ಚುನಾವಣಾ ಅಧಿಕಾರಿಗಳಿಗೆ ಶನಿವಾರ ರಾತ್ರಿ ದೂರು ನೀಡಲಾಗಿತ್ತು. ದೂರಿನ ಅನ್ವಯ ಸಿಂದಗಿ ಠಾಣೆ ಪೊಲೀಸರು ಇಂದು ಅಭ್ಯರ್ಥಿ ರಮೇಶ ಭೂಸನೂರ ಅವರ ಬಂಧಿಸಿದ್ದಾರೆ.