Tag: ಸಿಂದಗಿ

  • ಸಿಂದಗಿಯಲ್ಲಿ ಲಿಂಗಾಯತರು ಮತ ಹಾಕಿಲ್ಲ, ರಾಷ್ಟ್ರೀಯ ಪಕ್ಷಗಳು ಹಣದ ಹೊಳೆ ಹರಿಸಿ ಗೆದ್ದಿವೆ: ಹೆಚ್‍ಡಿಡಿ ಆರೋಪ

    ಸಿಂದಗಿಯಲ್ಲಿ ಲಿಂಗಾಯತರು ಮತ ಹಾಕಿಲ್ಲ, ರಾಷ್ಟ್ರೀಯ ಪಕ್ಷಗಳು ಹಣದ ಹೊಳೆ ಹರಿಸಿ ಗೆದ್ದಿವೆ: ಹೆಚ್‍ಡಿಡಿ ಆರೋಪ

    ನವದೆಹಲಿ: ಉಪ ಚುನಾವಣೆಯಲ್ಲಿ ಬಿಜೆಪಿ ಪ್ರತಿ ಮತಕ್ಕೆ ಹತ್ತು ಸಾವಿರ ರೂಪಾಯಿ ನೀಡಿದೆ, ಕಾಂಗ್ರೆಸ್ ಕೂಡ ಈ ವಿಚಾರದಲ್ಲೂ ಹಿಂದೆ ಉಳಿದಿಲ್ಲ. ಹೀಗಾಗಿ ಎರಡು ಕ್ಷೇತ್ರದಲ್ಲಿ ತಲಾ ಒಂದೊಂದು ಸ್ಥಾನಗಳನ್ನು ಉಭಯ ಪಕ್ಷಗಳು ಗೆದ್ದುಕೊಂಡಿವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.

    ಉಪ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಮಾತಮಾಡಿದ ಅವರು, ಸಿಂದಗಿಯಲ್ಲಿ ಹಿಂದೂ ಮುಸ್ಲಿಂ ಬೇಧ ಇರಲಿಲ್ಲ. ಹೀಗಾಗಿ ಮುಸ್ಲಿ ಅಭ್ಯರ್ಥಿಗೆ ಟಿಕೇಟ್ ನೀಡಿದ್ದೆವು. ಆದರೆ ನಮಗೆ ಲಿಂಗಾಯತರು ಮತ ಹಾಕಿಲ್ಲ ಎಂದು ಆರೋಪಿಸಿದರು.

    HDD

    ಸಿಂದಗಿ ಮತ್ತು ನನಗೂ ಹಿಂದಿನಿಂದ ಸಂಬಂಧ ಇದೆ. ಈ ಹಿನ್ನೆಲೆ ಉಪ ಚುನಾವಣೆಗೆ ಪ್ರಚಾರ ಮಾಡಲು ತೆರಳಿದ್ದೆ. 40 ವರ್ಷದ ಹಿಂದೆ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಹೇಳಿದೆ. ಮತ ಹಾಕುವ ಭರವಸೆ ಜನರು ನೀಡಿದ್ದರು. ಆದರೆ ಎರಡು ರಾಷ್ಟ್ರೀಯ ಪಕ್ಷಗಳ ಹಣ ರಾಜಕೀಯ ಎದುರು ನಮಗೆ ಸೋಲಾಗಿದೆ ಎಂದರು. ಇದನ್ನೂ ಓದಿ: ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

    ಈ ಸೋಲಿನಿಂದ ನಾವು ಧೃತಿಗೆಡುವುದಿಲ್ಲ, ನಾವು 2023ರ ಚುನಾವಣೆಗೆ ಸಿದ್ಧವಾಗುತ್ತೇವೆ. ರಾಷ್ಟ್ರೀಯ ಪಕ್ಷಗಳ ಸಾರ್ವತ್ರಿಕ ಚುನಾವಣೆಗೆ ಹೆಚ್ಚು ಹಣ ಖರ್ಚು ಮಾಡಲು ಸಾಧ್ಯವಿಲ್ಲ. ಆಗ ನಾವು ಗೆಲ್ಲಲ್ಲಿದ್ದೇವೆ. ಇನ್ನು ಒಂದೂವರೆ ವರ್ಷ ಸಮಯ ಇದೆ. ಈ ಅವಧಿಯಲ್ಲಿ ಪಕ್ಷ ಕಟ್ಟುತ್ತೆವೆ, ಈಗಾಗಲೇ ಮಿಷನ್ 123 ಹೆಸರಿನಲ್ಲಿ ಸಮಾವೇಶ ಮಾಡಿದ್ದೇವೆ ಸಂಘಟನೆ ಬಲಗೊಳಿಸುತ್ತಿದ್ದೇವೆ ಎಂದರು.

    ಹಳೆ ಮೈಸೂರು ಭಾಗದಲ್ಲಿ ಹೆಚ್.ಡಿ ಕುಮಾರಸ್ವಾಮಿ ಪಕ್ಷವನ್ನು ಸಂಘಟಿಸಲಿದ್ದಾರೆ. ನಾನು ಉತ್ತರ ಕರ್ನಾಟಕದ ಜವಬ್ದಾರಿ ತೆಗೆದುಕೊಳ್ಳಲಿದ್ದೇನೆ. ತಿಂಗಳಿಗೆ ಎರಡು ಜಿಲ್ಲೆಗಳ ಪ್ರವಾಸ ಮಾಡಲಿದ್ದೇವೆ. ಮೈಸೂರು ಭಾಗದಲ್ಲಿ ಜಿ.ಟಿ ದೇವೇಗೌಡ, ಪುತ್ರ ಕುಮಾರಸ್ವಾಮಿ ಪುತ್ರನ ಜೊತೆಗೆ ಮಾತುಕತೆ ನಡೆಸಿದ್ದು ನಾವು ಯುವಕರ ನಿರ್ಧಾರಕ್ಕೆ ಒಪ್ಪಿಗೆ ನೀಡಲಿದ್ದೇವೆ. ಇಡೀ ರಾಜ್ಯದಲ್ಲಿ ಪಕ್ಷ ಸಂಘಟನೆಗೊಳ್ಳಲಿದೆ ಎಂದು ಹೆಚ್.ಡಿ ದೇವೇಗೌಡ ಭರವಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಗೆಲುವು – ತವರು ಜಿಲ್ಲೆಯಲ್ಲೇ ಸಿಎಂಗೆ ಮುಖಭಂಗ

  • ಜನ ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ: ಡಿಕೆ ಶಿವಕುಮಾರ್

    ಜನ ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ: ಡಿಕೆ ಶಿವಕುಮಾರ್

    ಬೆಂಗಳೂರು: ಈ ಬಾರಿ ಉಪಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದ್ದರೂ ಹಾನಗಲ್‍ನಲ್ಲಿ ಪಕ್ಷದ ಸಾಧನೆ ಉತ್ತಮವಾಗಿದೆ. ಇದು ಒಳ್ಳೆಯ ಬೆಳವಣಿಗೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

    ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆದ್ದಿಲ್ಲ ಗೆಲ್ಲುವ ಹಾದಿಯಲ್ಲಿದೆ. ಈಗಷ್ಟೇ ನಾನು ಶ್ರೀನಿವಾಸ ಮಾನೆ ಅವರ ಹತ್ತಿರ ಮಾತನಾಡಿದೆ. ಈ ಚುನಾವಣೆಯ ಫಲಿತಾಂಶವನ್ನು ನಾನು ವಿಶ್ಲೇಷಣೆ ಮಾಡಬೇಕಿಲ್ಲ. ಮಾನೆಯವರು ಹಿಂದೆ 6 ಸಾವಿರ ಮತಗಳ ಅಂತರದಿಂದ ಸೋತಿದ್ದರು. ಸರ್ಕಾರ, ಸಿಎಂ, ಅಭಿವೃದ್ಧಿ ಕಾರ್ಯ ಎಲ್ಲ ಬಿಜೆಪಿ ಅವರ ಪರವಾಗಿತ್ತು. ನಮ್ಮ ಫ್ರೆಂಡ್ಸ್ ಎಲ್ಲಾ ಬ್ಯಾಗ್ ಎಲ್ಲಾ ತೆಗೆದುಕೊಂಡು ಹೋಗಿ ಎಲ್ಲಾ ತರ ಕೆಲಸ ಮಾಡಿದ್ದರು. ಆದರೂ ಮಾನೆ ಇದೀಗ 13 ಸಾವಿರ ವೋಟ್‍ಗಳಿಂದ ಮುಂದಿದ್ದಾರೆ ಎಂದು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಗೆಲುವು – ತವರು ಜಿಲ್ಲೆಯಲ್ಲೇ ಸಿಎಂಗೆ ಮುಖಭಂಗ

    ಕಳೆದ ಚುನಾವಣೆಯಲ್ಲಿ ಸಿಂದಗಿಯಲ್ಲಿ ಕಾಂಗ್ರೆಸ್ 3ನೇ ಸ್ಥಾನದಲ್ಲಿತ್ತು. ಅಶೋಕ್ ಮನಗೊಳಿ ಅವರ ಪಕ್ಷದಿಂದ ನಿಲ್ಲುತ್ತೇವೆ ಅಂದಿದ್ದರೆ ನಮ್ಮದೇನು ಇರಲಿಲ್ಲ. ಅವರು ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡುತ್ತೇನೆ ಎಂದರು ನಾವು ಟಿಕೆಟ್ ನೀಡಿದೆವು. ಈ ಬಾರಿ ಸೋತರೂ ಪಕ್ಷದ ಸಾಧನೆ ಉತ್ತಮವಾಗಿದೆ. ಒಳ್ಳೆಯ ಬೆಳವಣಿಗೆ. ಒಟ್ಟಾರೆ ಎರಡೂ ಕ್ಷೇತ್ರದಲ್ಲಿನ ಬದಲಾವಣೆಯನ್ನು ನೋಡಿದರೆ ಜನ ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ. ಒಂದು ಬಿಜೆಪಿ ಒಂದು ಜೆಡಿಎಸ್ ಸೀಟ್ ಇತ್ತು ಈಗ ಅದರಲ್ಲಿ ನಮಗೆ ಒಂದು ಸೀಟ್ ಬಂದಿದೆ.

    ಮತದಾರರು ಬಿಜೆಪಿ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಇದು ಕೊರೊನಾ ವಿಚಾರವಾಗಿ ಮಾತ್ರವಲ್ಲ. ಸಂಪೂರ್ಣ ಆಡಳಿತ ವ್ಯವಸ್ಥೆಯಿಂದಾಗಿ ಈ ಪರಿಸ್ಥಿತಿ ಬಂದಿದೆ. ಇದು ಇಡೀ ದೇಶಕ್ಕೆ ಒಂದು ಸಂದೇಶವಾಗಿದೆ ಎಂದು ನುಡಿದರು. ಇದನ್ನೂ ಓದಿ: ಹಾನಗಲ್‌ ಉಪ ಚುನಾವಣೆ: ಕಾಂಗ್ರೆಸ್‌ ಕಾರ್ಯಕರ್ತರಿಂದ ಸಂಭ್ರಮಾಚರಣೆ

  • ಸಿಂದಗಿ ಉಪ ಚುನಾವಣೆ; ಜಯದ ನಗೆ ಬೀರಿದ ಬಿಜೆಪಿ

    ಸಿಂದಗಿ ಉಪ ಚುನಾವಣೆ; ಜಯದ ನಗೆ ಬೀರಿದ ಬಿಜೆಪಿ

    ವಿಜಯಪುರ: ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಭಾರೀ ಅಂತರದ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ರಮೇಶ್‌ ಭೂಸನೂರ ಜಯದ ನಗೆ ಬೀರಿದ್ದಾರೆ.

    22 ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ 31,185 ಮತಗಳ ಅಂತರದಿಂದ ಜಯಗಳಿಸಿದೆ.

    ಬಿಜೆಪಿ ಒಟ್ಟು 93,865, ಕಾಂಗ್ರೆಸ್ 62,680 ಮತಗಳನ್ನು ಗಳಿಸಿದರೆ, ಜೆಡಿಎಸ್ 4,353 ಮತ ಗಳಿಸಲಷ್ಟೇ ಶಕ್ತವಾಗಿದೆ. ಜೆಡಿಎಸ್‌ ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾಗಿದ್ದ ಶಾಸಕ ಸ್ಥಾನಕ್ಕೆ ಉಪ ಚುನಾವಣೆ ನಿಗದಿಪಡಿಸಲಾಗಿತ್ತು. ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ಉದ್ದೇಶದಿಂದ ಮನಗೂಳಿ ಅವರ ಪುತ್ರನಿಗೆ ಟಿಕೆಟ್‌ ನೀಡದೇ ಜೆಡಿಎಸ್‌ ನಾಜಿಯಾ ಅಂಗಡಿ ಅವರಿಗೆ ಟಿಕೆಟ್‌ ನೀಡಿತ್ತು. ಇದನ್ನೂ ಓದಿ: ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಗೆಲುವು – ತವರು ಜಿಲ್ಲೆಯಲ್ಲೇ ಸಿಎಂಗೆ ಮುಖಭಂಗ

    ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭರ್ಥಿ ಗೆಲುವು ಸಾಧಿಸಿರುವುದಕ್ಕೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಟ್ವೀಟ್‌ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ಸಮಾಧಿಗೆ ಹಾಲು ತುಪ್ಪ ಕಾರ್ಯ ನೆರವೇರಿಸಿದ ಕುಟುಂಬಸ್ಥರು

     

    sindagi

    “ಸಿಂದಗಿ ಉಪ ಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

  • ಸಿಂದಗಿ ಉಪ ಚುನಾವಣೆ: 4,031 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ

    ಸಿಂದಗಿ ಉಪ ಚುನಾವಣೆ: 4,031 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ

    ವಿಜಯಪುರ: ತೀವ್ರ ಕುತೂಹಲ ಮೂಡಿಸಿರುವ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, 4,031 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

    ಎರಡನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದೆ. ಬಿಜೆಪಿ ಅಭ್ಯರ್ಥಿ ರಮೇಶ್‌ ಭೂಸನೂರ 9,645, ಕಾಂಗ್ರೆಸ್‌ನ ಅಶೋಕ ಮನಗೂಳಿ 5,614 ಹಾಗೂ ಜೆಡಿಎಸ್‌ನ ಅಭ್ಯರ್ಥಿ ನಾಜಿಯಾ ಅಂಗಡಿ 282 ಮತಗಳನ್ನು ಪಡೆದುಕೊಂಡಿದ್ದಾರೆ. 16 ಟೇಬಲ್‌ನಲ್ಲಿ 22 ಸುತ್ತು ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಸಿಂದಗಿಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಅಭ್ಯರ್ಥಿ ರಮೇಶ್ ಭೂಸನೂರು ಹರ್ಷ

    ಮೊದಲನೇ ಸುತ್ತಿನಲ್ಲಿ ಬಿಜೆಪಿ 5,255, ಕಾಂಗ್ರೆಸ್‌ 2,054 ಹಾಗೂ ಜೆಡಿಎಸ್‌ 73 ಮತಗಳನ್ನು ಪಡೆದಿತ್ತು.

    ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ಹೊತ್ತಿಗೆಲ್ಲಾ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ. ವಿಜಯಪುರದ ಸೈನಿಕ ಶಾಲೆಯಲ್ಲಿ ಮತ ಎಣಿಕೆ ನಡೆಯುತ್ತಿದೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಹಿನ್ನಡೆ – ಕಾಂಗ್ರೆಸ್‌ ಮುನ್ನಡೆ

    ಅಕ್ಟೋಬರ್ 30 ರಂದು ನಡೆದ ಉಪ ಚುನಾವಣೆಯಲ್ಲಿ ಸಿಂದಗಿಯಲ್ಲಿ ಶೇಕಡಾ 69.41ರಷ್ಟು ಮತದಾನ ನಡೆದಿತ್ತು. ಕಾಂಗ್ರೆಸ್‍ನ ಅಶೋಕ್ ಮನಗೂಳಿ, ಬಿಜೆಪಿಯ ರಮೇಶ್ ಭೂಸನೂರ, ಜೆಡಿಎಸ್‌ನ ನಾಜಿಯಾ ನಡುವೆ ತ್ರಿಕೋನ ಪೈಪೋಟಿ ಕಂಡುಬಂದಿತ್ತು.

  • ಸಿಂದಗಿಯಲ್ಲಿ  25 ಸಾವಿರಕ್ಕೂ ಹೆಚ್ಚು ಮತಗಳ ವಿಜಯ:  ರಮೇಶ್ ಭೂಸನೂರ ವಿಶ್ವಾಸ

    ಸಿಂದಗಿಯಲ್ಲಿ 25 ಸಾವಿರಕ್ಕೂ ಹೆಚ್ಚು ಮತಗಳ ವಿಜಯ: ರಮೇಶ್ ಭೂಸನೂರ ವಿಶ್ವಾಸ

    ವಿಜಯಪುರ: ಸಿಂದಗಿ ಬೈ ಎಲೆಕ್ಷನ್‍ನ ಮತಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಅಭ್ಯರ್ಥಿ ರಮೇಶ್ ಭೂಸನೂರ ಸಂತಸ ವ್ಯಕ್ತಪಡಿಸಿದ್ದಾರೆ.

    ಮತ ಎಣಿಕೆ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದೇವೆ. ಮೊದಲ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ್ದೇನೆ. ಕಳೆದ ಬಾರಿ ನಾನು ಕಳೆದುಕೊಂಡಿದ್ದೆ. ಈ ಬಾರಿ ಪಡೆದುಕೊಳ್ಳುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಇದೇ ವೇಳೆ ಮೊಸಳೆ ಕಣ್ಣೀರು ಸುರಿಸುವ ಕಾಲ ಹೋಯ್ತು. ಜನರಿಗೆ ಕೊಟ್ಟ ಭರವಸೆ ಯಾರು ಈಡೇರಿಸುತ್ತಾರೆ. ನಾವೀಗ ಭರವಸೆ ಕಾಲದಲ್ಲಿದ್ದೇವೆ. ಕಳೆದ ಬಾರಿ ಕಳೆದುಕೊಂಡಿರುವ ಅನುಕಂಪ ನನ್ನ ಮೇಲಿದೆ. ಜನರ ಒಲವು ನನ್ನ ಕಡೆ ಇದೆ. ಕಾಂಗ್ರೆಸ್‍ಗೆ ಅನುಕಂಪ ಇಲ್ಲ. 25 ಸಾವಿರ ಮತಗಳ ಅಂತರದಿಂದ ಗೆಲುವಿನ ವಿಶ್ವಾಸ ನನಗಿದೆ. ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿಎಸ್‍ವೈ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಧನೆ ಗೆಲುವಿಗೆ ಕಾರಣ ಎಂದು ಹೇಳಿದ್ದಾರೆ.

    basavaraj bommai

    ಚುನಾವಣೆಯಲ್ಲಿ ಹಣದ ಹೊಳೆ ಹರಿದಿದೆ ಎಂಬ ಕಾಂಗ್ರೆಸ್ ಆರೋಪ ಮಾಡಿದೆ. ನಾವು ಪ್ರತ್ಯಾರೋಪ ಮಾಡಿದ್ದೇವೆ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ವತಃ ಹಣ ಹಂಚಿದ್ದು ನೀವು ನೋಡಿದ್ದೀರಿ. ನಾನು ಗ್ರಾಮ ಪಂಚಾಯಿತಿಯಿಂದ ವಿಧಾನಸಭೆಯವರೆಗೆ ಹೋಗಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಹಿನ್ನಡೆ – ಕಾಂಗ್ರೆಸ್‌ ಮುನ್ನಡೆ

    ಇದೀಗ ಮತ ಎಣಿಕೆ ಬಳಿ ಬಿಜೆಪಿ ಕಾರ್ಯಕರ್ತರು ಜೈಕಾರ ಹಾಕಿದ್ದರಿಂದ ಪೊಲೀಸರು ಕಾರ್ಯಕರ್ತರನ್ನು ಹೊರ ಕಳುಹಿಸಿ, ಮತ ಎಣಿಕೆ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

  • ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟ

    ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟ

    ಬೆಂಗಳೂರು: ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್, ಜೆಡಿಎಸ್ ಪಾಲಿಗೆ ಪ್ರತಿಷ್ಠೆಯ ಕಣವಾಗಿರುವ ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.

    ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಲಿದ್ದು, ಮಧ್ಯಾಹ್ನದ ಸಮಯದಲ್ಲಿ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ. ಹಾನಗಲ್ ಕ್ಷೇತ್ರದ ಮತ ಎಣಿಕೆಗಾಗಿ ಹಾವೇರಿ ಸರ್ಕಾರಿ ಎಂಜಿನಿರಿಂಗ್ ಕಾಲೇಜ್‌ ಮತ್ತು ಸಿಂದಗಿ ಕ್ಷೇತ್ರದ ಮತ ಎಣಿಕೆಗಾಗಿ ವಿಜಯಪುರದ ಸೈನಿಕ ಶಾಲೆಯಲ್ಲಿ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಎಲ್ಲರ ಚಿತ್ತ ಉಪಚುನಾವಣೆ ಫಲಿತಾಂಶದತ್ತ – ಮತ ಎಣಿಕೆಗೆ ಸರ್ವ ಸಿದ್ಧತೆ

    ಅಕ್ಟೋಬರ್ 30 ರಂದು ನಡೆದ ಉಪ ಚುನಾವಣೆಯಲ್ಲಿ ಹಾನಗಲ್‍ನಲ್ಲಿ ಶೇ. 83ರಷ್ಟು, ಸಿಂದಗಿಯಲ್ಲಿ ಶೇ.69.41ರಷ್ಟು ಮತದಾನ ನಡೆದಿತ್ತು. ಹಾನಗಲ್‍ನಲ್ಲಿ ಬಿಜೆಪಿಯ ಶಿವರಾಜ್ ಸಜ್ಜನರ್ ಮತ್ತು ಕಾಂಗ್ರೆಸ್‍ನ ಶ್ರೀನಿವಾಸ ಮಾನೆ ನಡುವೆ ನೆಕ್ ಟು ನೆಕ್ ಫೈಟ್ ಇದ್ರೆ, ಸಿಂದಗಿಯಲ್ಲಿ ಕಾಂಗ್ರೆಸ್‍ನ ಅಶೋಕ್ ಮನಗೂಳಿ, ಬಿಜೆಪಿಯ ರಮೇಶ್ ಭೂಸನೂರ, ಜೆಡಿಎಸ್ ನ ನಾಜಿಯಾ ನಡುವೆ ತ್ರಿಕೋನ ಪೈಪೋಟಿ ಕಂಡುಬಂದಿತ್ತು. ಮೂರು ಪಕ್ಷಗಳು ನಮ್ಮದೇ ಗೆಲುವು ಎನ್ನುತ್ತಿವೆ. ಆದರೆ ಮತಪ್ರಭುಗಳ ನಿರ್ಣಯ ಏನು ಎಂಬುದು ಕೆಲವೇ ಗಂಟೆಗಳಲ್ಲಿ ಗೊತ್ತಾಗಲಿದೆ.

  • ಎಲ್ಲರ ಚಿತ್ತ ಉಪಚುನಾವಣೆ ಫಲಿತಾಂಶದತ್ತ – ಮತ ಎಣಿಕೆಗೆ ಸರ್ವ ಸಿದ್ಧತೆ

    ಎಲ್ಲರ ಚಿತ್ತ ಉಪಚುನಾವಣೆ ಫಲಿತಾಂಶದತ್ತ – ಮತ ಎಣಿಕೆಗೆ ಸರ್ವ ಸಿದ್ಧತೆ

    ವಿಜಯಪುರ: ರಾಜ್ಯದಲ್ಲಿ ನಡೆದ ಸಿಂದಗಿ ಮತ್ತು ಹಾನಗಲ್ ಉಪಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ವಿಜಯಪುರ ನಗರದ ಸೈನಿಕ ಶಾಲೆ ಯಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತ ಇಂದಿನಿಂದಲೇ ಸಕಲ ವ್ಯವಸ್ಥೆ ಮಾಡಿಕೊಂಡಿದೆ.

    ಸೈನಿಕ್ ಶಾಲೆಯ ಒಡೆಯರ ಸದನದಲ್ಲಿ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ. ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪಿ ಸುನೀಲ್ ಕುಮಾರ್, ಎಸ್‍ಪಿ ಆನಂದ್‍ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಎರಡು ಪ್ರತ್ಯೇಕ ಕೋಣೆಗಳಲ್ಲಿ ಮತಎಣಿಕೆ ಕಾರ್ಯ ನಡೆಯಲಿದ್ದು, 16 ಟೇಬಲ್‍ನಲ್ಲಿ 22 ಸುತ್ತು ಮತ ಎಣಿಕೆ ಕಾರ್ಯ ನಡೆಯಲಿದೆ. ಮತ ಎಣಿಕೆ ಕೇಂದ್ರದ ಸುತ್ತ 100 ಮೀ. ಅಂತರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಶಾಂತಿಯುತವಾಗಿ ನಡೆಯಿತು ಉಪಚುನಾವಣೆ – ನ.2ಕ್ಕೆ ಫಲಿತಾಂಶ

    ಅಕ್ಟೋಬರ್ 30 ರಂದು ಎರಡು ಕ್ಷೇತ್ರದಲ್ಲಿ ಉಪಚುನಾವಣೆ ಶಾಂತಿಯುತವಾಗಿ ನಡೆದಿತ್ತು. ಹಾನಗಲ್‍ನಲ್ಲಿ ಶೇಕಡಾ 80 ರಷ್ಟು ಮತ್ತು ಸಿಂದಗಿಯಲ್ಲಿ ಶೇಕಡಾ 70 ರಷ್ಟು ಮತದಾನವಾಗಿತ್ತು. ಇದೀಗ ನಾಳೆ ಫಲಿತಾಂಶ ಹೊರಬೀಳಲಿದ್ದು, ಎಲ್ಲರ ಚಿತ್ತ ಉಪಚುನಾವಣೆಯ ಫಲಿತಾಂಶದತ್ತ ನೆಟ್ಟಿದೆ. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

  • ಶಾಂತಿಯುತವಾಗಿ ನಡೆಯಿತು ಉಪಚುನಾವಣೆ – ನ.2ಕ್ಕೆ ಫಲಿತಾಂಶ

    ಶಾಂತಿಯುತವಾಗಿ ನಡೆಯಿತು ಉಪಚುನಾವಣೆ – ನ.2ಕ್ಕೆ ಫಲಿತಾಂಶ

    ಬೆಂಗಳೂರು: ಪ್ರತಿಷ್ಠೆಯ ಕಣವಾಗಿದ್ದ ಹಾನಗಲ್ ಮತ್ತು ಸಿಂದಗಿ ಬೈ ಎಲೆಕ್ಷನ್ ಇಂದು ಯಶಸ್ವಿಯಾಗಿ ಮುಗಿದಿದೆ. ಸಣ್ಣಪುಟ್ಟ ಘಟನೆ ಹೊರತುಪಡಿಸಿ ಉಪಚುನಾವಣೆ ಶಾಂತಿಯುತವಾಗಿ ನಡೆದಿದೆ.

    ಹಾನಗಲ್‍ನಲ್ಲಿ ಶೇಕಡಾ 80 ರಷ್ಟು ಮತ್ತು ಸಿಂದಗಿಯಲ್ಲಿ ಶೇಕಡಾ 70 ರಷ್ಟು ಮತದಾನವಾಗಿದೆ. ಹಾನಗಲ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ, ಜೆಡಿಎಸ್ ಅಭ್ಯರ್ಥಿ ರಿಯಾಜ್ ಶೇಖ್ ಮತ್ತು ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಕುಟುಂಬ ಸಮೇತ ತಮ್ಮ ಹಕ್ಕು ಚಲಾಯಿಸಿದರು. ಇದನ್ನೂ ಓದಿ: ಒಟ್ಟು 347 ಕೊರೊನಾ ಪ್ರಕರಣ – 10 ಮಂದಿ ಸಾವು

    ದೇವಣಗಾಂವದಲ್ಲಿ ಸಿಂದಗಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ, ಮಲಘಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೊಕ್ ಮನಗೂಳಿ ವೋಟ್ ಹಾಕಿದರು. ಸಿಂದಗಿಯ ಬೊರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಫೋಟೋ ಚಿನ್ಹೆ ಇರುವ ಮತ ಸಂಖ್ಯೆ ಚೀಟಿ ನೀಡಿದ ಆರೋಪ ಮೇಲೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2 ಕ್ಷೇತ್ರಗಳ ಉಪಚುನಾವಣೆ ರಾಜ್ಯದಲ್ಲಿ ಪಕ್ಷಗಳ ನಾಯಕರ ವಾಕ್ಸಮರಕ್ಕೆ ವೇದಿಕೆಯಾಗಿತ್ತು. ಇಂದು ಅಂತಿಮವಾಗಿ ಮತದಾನದ ಮೂಲಕ ತೆರೆಬಿದ್ದಿದ್ದು, ನವೆಂಬರ್ 2ಕ್ಕೆ ಫಲಿತಾಂಶ ಬರಲಿದೆ. ಇದನ್ನೂ ಓದಿ: ಪುನೀತ್‌ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಅಭಿಮಾನಿ ಸಾವು

  • 1 ವೋಟಿಗೆ 1 ಸಾವಿರ ರೂ. – ಹಣ ಹಂಚಿಕೆಯ ವಿಡಿಯೋ ವೈರಲ್

    1 ವೋಟಿಗೆ 1 ಸಾವಿರ ರೂ. – ಹಣ ಹಂಚಿಕೆಯ ವಿಡಿಯೋ ವೈರಲ್

    ಬೆಂಗಳೂರು: ಹಾವೇರಿಯ ಹಾನಗಲ್, ವಿಜಯಪುರದ ಸಿಂದಗಿ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ನಾಳೆವರೆಗೆ ಮನೆ ಮನೆ ಪ್ರಚಾರ ಆಗಲಿದೆ. ಈ ಹೊತ್ತಲ್ಲೇ, ಕುರುಡು ಕಾಂಚಾಣದ ಸದ್ದು ಜೋರಾಗ್ತಿದೆ.

    ಸಿಂದಗಿಯ ಡಂಬಳದಲ್ಲಿ 1 ವೋಟಿಗೆ 1,000 ರೂಪಾಯಿ ಹಂಚುತ್ತಿರುವ ದೃಶ್ಯ ವೈರಲ್ ಅಗಿದೆ. ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಿಜೆಪಿಯವರು 30-40 ಲಕ್ಷ ಹಂಚಿಕೆ ಮಾಡ್ತಿದ್ದು, 1 ಬೂತ್‍ಗೆ 5 ಲಕ್ಷ ಕೊಡ್ತಿದ್ದಾರೆ. ಹಳ್ಳಿ-ಹಳ್ಳಿಯಲ್ಲೂ ಹಣ ವಿತರಿಸ್ತಿದ್ದಾರೆ ಅಂತ ದೂರಿದ್ದಾರೆ. ಡಿಕೆ ಶಿವಕುಮಾರ್ ಮಾಧ್ಯಮಗಳ ಮುಂದೆ ಬಿಜೆಪಿ ಬಿಜೆಪಿ ಕಾರ್ಯಕರ್ತರು ಹಣ ಹಂಚುತ್ತಿರುವ ವಿಡಿಯೋ ದೃಶ್ಯವನ್ನು ತೋರಿಸಿದ್ದಾರೆ.

    ಮತ್ತೊಂದು ಕಡೆ, ಅಬ್ಬರದ ಪ್ರಚಾರ ಮುಗಿಸಿರುವ ಅಗ್ರನಾಯಕರು ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯ ನಿವಾಸದಲ್ಲಿ ರಿಲ್ಯಾಕ್ಸ್ ಆಗಿದ್ದು, 2 ಕ್ಷೇತ್ರದಲ್ಲೂ ನಾವೇ ಗೆಲ್ಲೋದು ಅಂದಿದ್ದಾರೆ.

    ವಿಪಕ್ಷ ನಾಯಕ ಸಿದ್ದರಾಮಯ್ಯ, ಧಾರವಾಡದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನ ಮಗನ ಮದುವೆಯಲ್ಲಿ ಭಾಗಿಯಾಗಿದ್ದರು. ಬಳಿಕ ಮಾತನಾಡಿ, ಎರಡೂ ಕಡೆ ನಾವು ಗೆಲ್ಲುತ್ತೇವೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ರು. ಬೊಮ್ಮಾಯಿ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ರಸ್ತೆ ಮಾಡಿದ್ದು ತೋರಿಸಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಗಾಳಿಯಲ್ಲಿ ಮಾತನಾಡುವುದನ್ನು ನಿಲ್ಲಿಸಿ ರೈತರ ಮಧ್ಯೆ ಬನ್ನಿ ಸುಧಾಕರ್​ಗೆ ರಮೇಶ್ ಕುಮಾರ್ ಟಾಂಗ್

  • ಬಹಿರಂಗ ಪ್ರಚಾರ ಅಂತ್ಯ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಂದ ಮನೆ-ಮನೆ ಕ್ಯಾಂಪೇನ್

    ಬಹಿರಂಗ ಪ್ರಚಾರ ಅಂತ್ಯ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಂದ ಮನೆ-ಮನೆ ಕ್ಯಾಂಪೇನ್

    ಹಾವೇರಿ: ರಾಜ್ಯದ ಎರಡು ಕ್ಷೇತ್ರಗಳಾದ ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ನಿನ್ನೆ ಹಾನಗಲ್ ಮತ್ತು ಸಿಂದಗಿ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರ ಸಂಜೆ ಮುಕ್ತಾಯವಾಗಿದೆ. ಇಂದು ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕರ್ಯಕರ್ತರು ಮನೆ ಮನೆ ತೆರಳಿ ಪ್ರಚಾರ ನಡೆಸಿದ್ದಾರೆ.

    ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ಕ್ಷೇತ್ರ ವ್ಯಾಪ್ತಿಯ ಶೀಗಿಹಳ್ಳಿ, ಸಿಂಗಾಪುರ, ಜಕ್ಕನಾಯಕನಕೊಪ್ಪ ಗ್ರಾಮಗಳಲ್ಲಿ ಮನೆ ಮನೆ ತೆರಳಿ ಪ್ರಚಾರ ನಡೆಸಿದರು. ಮನೆ ಮನೆ ಪ್ರಚಾರದ ಜೊತೆಗೆ ಪಕ್ಷದ ಮುಖಂಡರ ಮನೆ, ಗ್ರಾಮದಲ್ಲಿನ ದೇವಸ್ಥಾನಗಳಿಗೆ ಭೇಟಿ ನೀಡಿದರು. ಗ್ರಾಮದ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ಪ್ರಚಾರ ಮುಂದುವರಿಸಿದರು. ಇದನ್ನೂ ಓದಿ: ಹಾನಗಲ್‍ನಲ್ಲಿ ಹರೀತಿದ್ಯಾ ಹಣದ ಹೊಳೆ..? – ಸಿದ್ದರಾಮಯ್ಯ, ಡಿಕೆಶಿ ಬಳಿಕ ಹೆಚ್‍ಡಿಕೆ ಆರೋಪ

    ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಕೂಡ ಮನೆ ಮನೆ ಪ್ರಚಾರ ನಡೆಸಿದ್ದಾರೆ. ಹಾನಗಲ್ ಕ್ಷೇತ್ರ ವ್ಯಾಪ್ತಿಯ ಆಡೂರು ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ನಿನ್ನೆ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದರಿಂದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಯ ಕಾರ್ಯಕರ್ತರು ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿ ಪ್ರಚಾರದ ಜೊತೆಗೆ ಮುಖಂಡರ ಮನೆಗೆ ಭೇಟಿ ನೀಡಿ ಮುಖಂಡರ ಜೊತೆ ಚರ್ಚೆ ನಡೆಸಿದ್ದಾರೆ. ಮತದಾನಕ್ಕೆ ಒಂದು ದಿನ ಬಾಕಿ ಉಳಿದಿದ್ದು, ಮತಗಳ ಲೆಕ್ಕಾಚಾರದ ಮೇಲೆ ರಣತಂತ್ರವನ್ನು ಅಭ್ಯರ್ಥಿಗಳು ರೂಪಿಸುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನಲ್ಲಿ ಯಂಕ, ನಾಣಿ, ಸೀನ ಅನ್ನೋ ಎಂಪಿಗಳಿದ್ದಾರೆ ಅಷ್ಟೇ: ಬಿಎಸ್‍ವೈ