ಹತ್ತು ಹಲವು ವಿಶೇಷತೆಗಳನ್ನು ಒಳಗೊಂಡಿರುವ ‘ಕಾಣದಂತೆ ಮಾಯವಾದನು’ ಚಿತ್ರ ಸ್ಯಾಂಡಲ್‍ವುಡ್‍ನಲ್ಲಿ ಸಖತ್ ಟಾಕ್ ಕ್ರಿಯೇಟ್ ಮಾಡಿದೆ. ನಿರ್ದೇಶಕರಾಗಿದ್ದ ವಿಕಾಸ್ ನಟನಾಗಿ ಗಾಂಧಿನಗರದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ವಿಕಾಸ್, ಸಿಂಧು ಲೋಕನಾಥ್ ಜೋಡಿಯಾಗಿ ನಟಿಸಿರುವ ಚಿತ್ರದ ಟ್ರೈಲರ್ ಗೆ ಸಿನಿ ಪ್ರೇಕ್ಷಕ ಕ್ಲೀನ್ ಬೋಲ್ಡ್ ಆಗಿದ್ದು, ಚಿತ್ರ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ.
ಚಿತ್ರದಲ್ಲಿ ಲವರ್ ಬಾಯ್, ಆ್ಯಕ್ಷನ್ ಹೀರೋ ಆಗಿ ಮಿಂಚಿರುವ ವಿಕಾಸ್‍ಗೆ ಈ ಚಿತ್ರವನ್ನು ಒಪ್ಪಿಕೊಳ್ಳಲು ಕಥೆಯೇ ಪ್ರೇರಣೆ. ರಾಜ್ ಪಾತ್ತಿಪಾಟಿ ಚಿತ್ರದ್ರ ಸೂತ್ರಧಾರ. ಇನೋಸೆಂಟ್ ಪ್ರೇಮಕಥೆ ಚಿತ್ರದಲ್ಲಿದ್ದು, ಅದ್ರ ಜೊತೆಗೆ ಹಾರಾರ್, ಸಸ್ಪೆನ್ಸ್ ಹಾಗೂ ಥ್ರಿಲ್ ಕೊಡೊ ಎಲಿಮೆಂಟ್‍ಗಳು ಚಿತ್ರದಲ್ಲಿವೆ. ಒಟ್ಟಿನಲ್ಲಿ ಸಿನಿಮಾ ನೋಡಲು ಚಿತ್ರಮಂದಿರದ ಒಳಗೆ ಹೋದ ಪ್ರೇಕ್ಷಕರನಿಗೆ ಮನೋರಂಜನೆಯ ಮಹಾಪೂರದ ಜೊತೆ ಬೇರೆಯದ್ದೆ ಪ್ರಪಂಚ ಕಾಣಸಿಗಲಿದೆ ಎನ್ನುವುದು ಚಿತ್ರತಂಡದ ಮಾತು.
ಕಥೆ ಈ ಚಿತ್ರದ ಜೀವಾಳವಾದರೆ ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಚಿತ್ರದ ಮತ್ತೊಂದು ಶಕ್ತಿ. ಚಿತ್ರದ ಎಲ್ಲಾ ಹಾಡುಗಳು ಸೂಪರ್ ಹಿಟ್ ಆಗಿದ್ದು ಗುಮ್ಮಿನೇನಿ ವಿಜಯ್ ಮ್ಯೂಸಿಕ್ ಗಾನಪ್ರಿಯರ ಮನಸೆಳೆದಿದೆ. ಚಿತ್ರದ ಮೆಲೋಡಿ ಹಾಡೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ದನಿಯಾಗಿದ್ದು ಈ ಹಾಡು ಸಖತ್ ವೈರಲ್ ಆಗೋದ್ರ ಜೊತೆ ಎಲ್ಲರ ಫೇವರೇಟ್ ಆಗಿದೆ.
ಚಿತ್ರದ ಪ್ರತಿ ತುಣುಕಿಗಳು ಸೋಶಿಯಲ್ ಮೀಡಿಯಾದಲ್ಲಿ ಬೊಂಬಾಟ್ ರೆಸ್ಪಾನ್ಸ್ ಪಡೆದುಕೊಂಡಿದ್ದು ಚಿತ್ರದ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ. ಅಚ್ಯುತ್ ಕುಮಾರ್, ಭಜರಂಗಿ ಲೋಕಿ, ರಾಘವ್ ಉದಯ್ ಚಿತ್ರದ ತಾರಾಬಳಗದಲ್ಲಿದ್ದಾರೆ.
ಕಾಣದಂತೆ ಮಾಯಾವಾದನು ಸಿನಿಮಾದ ಟೈಟಲ್ ಕೇಳಿದಾಕ್ಷಣ ಪುನೀತ್ ರಾಜ್‍ಕುಮಾರ್ ಬಾಲ ನಟನಾಗಿ ನಟಿಸಿದ್ದ ‘ಚಲಿಸುವ ಮೋಡಗಳು’ ಸಿನಿಮಾ ನೆನಪಾಗುತ್ತೆ. ಆ ಸಿನಿಮಾದಲ್ಲಿ ಕಾಣದಂತೆ ಮಾಯಾವಾದನು, ನಮ್ಮ ಶಿವ ಕೈಲಾಸ ಸೇರಿಕೊಂಡನು ಅನ್ನೋ ಹಾಡು ಈಗಲೂ ಚಾಲ್ತಿಯಲ್ಲಿದೆ. ಆ ಹಾಡಿನ ಒಂದು ಎಳೆಯನ್ನೇ ಸಿನಿಮಾದ ಶೀರ್ಷಿಕೆ ಮಾಡಿರುವುದು ವಿಶೇಷ. ಸಿನಿಮಾಗೆ ಹಾರಾರ್ ಟಚ್ ಇದ್ರು ಕೂಡ ಫೆಂಟಾಸ್ಟಿಕ್ ಲವ್ ಸ್ಟೋರಿ ಇದೆ. ಹಿಂದೆಂದೂ ಈ ರೀತಿಯ ಕಥೆಯನ್ನ ನೋಡಿಲ್ಲ ಎಂಬ ಫೀಲ್ ಈಗಾಗಲೇ ಟ್ರೇಲರ್ ನೋಡಿದವರಿಗೆ ಅನ್ನಿಸಿದೆ. ಇದೀಗ ಸಿನಿಮಾದ ಲಿರಿಕಲ್ ಸಾಂಗ್ ರಿಲೀಸ್ ಆಗಿದ್ದು, ಎಲ್ಲರ ಮನಸ್ಸನ್ನು ತಣಿಸುವಂತಿದೆ. ‘ಕೊನೆಯಿರದಂತ ಪ್ರೀತಿಗೆ’ ಹಾಡು ಮತ್ತೆ ಮತ್ತೆ ಕೇಳಬೇಕೆನ್ನಿಸುತ್ತಿದೆ. ಅನಿರುದ್ಧ್ ಶಾಸ್ತ್ರಿ ಬರೆದಿರುವ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿಯಾಗಿದ್ದಾರೆ.
ಸಿನಿಮಾ ಆರಂಭವಾದಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಸದ್ದು ಮಾಡುತ್ತಿದೆ. ಸಿನಿಮಾದ ಟೈಟಲ್ ಕೊಟ್ಟು ಇದಕ್ಕೊಂದು ಟ್ಯಾಗ್‍ಲೈನ್ ಕೊಟ್ಟವರಿಗೊಂದು ಬಹುಮಾನ ಅಂತ ಚಿತ್ರತಂಡ ಪ್ರಚಾರ ಮಾಡಿತ್ತು. ಹೀಗಾಗಿ ಸಾಕಷ್ಟು ಮಂದಿ ಟೈಟಲ್ ಕೊಡುವಲ್ಲಿ ನಿರತರಾಗಿದ್ದರು. ಕಡೆಗೆ ‘ಗೋರಿಯಾದ್ಮೇಲ್ ಹುಟ್ಟಿದ್ ಸ್ಟೋರಿ’ ಕೊಟ್ಟವರಿಗೆ ಬಹುಮಾನವನ್ನು ಕೊಟ್ಟು ಸಿನಿಮಾದ ಮೇಲೆ ಜನರಿಗೆ ಮತ್ತಷ್ಟು ನಿರೀಕ್ಷೆ ಹುಟ್ಟಿಸಿದೆ.
ಸಿನಿಮಾದ ಮತ್ತೊಂದು ವಿಶೇಷತೆ ಎಂದರೆ ‘ಕಳೆದೋದಾ ಕಾಳಿದಾಸ’ ಎಂಬ ಹಾಡನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಡಿದ್ದಾರೆ. ಈ ಹಾಡು ಕೂಡ ಈಗಾಗಲೇ ಹಿಟ್ ಆಗಿದೆ. ನಿರ್ದೇಶಕರಾಗಿಯೂ ಹೆಸರು ಮಾಡಿದ್ದ ವಿಕಾಸ್ ಮೊದಲ ಬಾರಿಗೆ ನಟನಾಗಿ ಬೆಳ್ಳಿತೆರೆಗೆ ಜಿಗಿದಿದ್ದಾರೆ. ವಿಕಾಸ್ ಗೆ ಸಿಂಧು ಲೋಕನಾಥ್ ನಾಯಕಿಯಾಗಿದ್ದಾರೆ.
ರಾಜ್ ಪತ್ತಿಪಾಟಿ ನಿರ್ದೇಶನ ಮಾಡಿದ್ದು, ಚಂದ್ರಶೇಖರ್ ನಾಯ್ಡು, ಸೋಮಸಿಂಗ್, ಪುಷ್ಪಾ ಸೋಮಸಿಂಗ್ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಗುಮ್ಮಿನೇನಿ ವಿಜಯ್ ಸಂಗೀತವಿದ್ದು, ವಿ. ನಾಗೇಂದ್ರ ಪ್ರಸಾದ್, ಅನಿರುದ್ಧ್ ಶಾಸ್ತ್ರಿ, ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ಅಚ್ಯತ್ ಕುಮಾರ್, ರಾಘವ್ ಉದಯ್, ಭಜರಂಗಿ ಲೋಕಿ ಸೇರಿದಂತೆ ಅನೇಕರು ತಾರಾಬಳಗದಲ್ಲಿದ್ದಾರೆ.
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಿಂಧು ಲೋಕನಾಥ್ ಅವರು ಇದೀಗ ನಿರ್ಮಾಪಕರೊಬ್ಬರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. “ಹೀಗೊಂದು ದಿನ” ಚಿತ್ರದ ನಿರ್ಮಾಪಕ ಚಂದ್ರಶೇಖರ್ ವಿರುದ್ಧ ಆರೋಪ ಮಾಡಿರುವ ಸಿಂಧು ಲೋಕನಾಥ್ ಅವರ ಮೇಲೆ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದಾರೆ.
ನಿರ್ಮಾಪಕರು ಸಿಂಧೂ ಅವರಿಗೆ ಎರಡು ಲಕ್ಷ ರೂ. ಸಂಭಾವನೆಯ ಚೆಕ್ ನೀಡಿದ್ದರು. ಆದ್ರೆ ಚೆಕ್ ಅನ್ನು ಸಿಂಧು ಅವರು ಬ್ಯಾಂಕ್‍ಗೆ ಸಲ್ಲಿಸಿದಾಗ ಬೌನ್ಸ್ ಆಗಿದೆ. ಹೀಗಾಗಿ ನಟಿ, ನಿರ್ಮಾಪಕರ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ.
ಸಿನಿಮಾ ಮಾರ್ಚ್ ನಲ್ಲೇ ರಿಲೀಸ್ ಆದ್ರೂ ಸಂಭಾವನೆ ಮಾತ್ರ ಇನ್ನೂ ಕ್ಲಿಯರ್ ಆಗಿಲ್ಲ ಅಂತ ನಟಿ ಆರೋಪ ಮಾಡುತ್ತಿದ್ದಾರೆ. ಸಿಂಪಲ್ಲಾಗ್ ಇನ್ನೊಂದು ಲವ್ ಸ್ಟೋರಿಯ ಪ್ರವೀಣ್, ಹಿರಿಯ ನಟಿ ಗಿರಿಜಾ ಲೋಕೇಶ್, ಪದ್ಮಜಾ ರಾವ್, ಗುರುಪ್ರಸಾದ್, ಶೋಭರಾಜ್, ಮಿತ್ರ, ಗಿರಿ, ಬಾಲಾಜಿ ಮನೋಹರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಗುಪ್ತ ಸಂಗೀತ ನೀಡಿದ್ದಾರೆ. ರಾಮಕೃಷ್ಣ ರಣಗಟ್ಟಿ ಗೀತ ಸಾಹಿತ್ಯ ನೀಡಿದ್ದಾರೆ. ವಿಕಾಸ್ ಅವರ ಕಥೆಗೆ, ನಿರ್ದೇಶಕ ವಿಕ್ರಮ್ ಯೋಗಾನಂದ್ ಅವರೇ ಛಾಯಾಗ್ರಹಕರು, ಸಂಕಲನಕಾರರು ಹಾಗೂ ವಿಷುವಲ್ ಎಫೆಕ್ಟ್ ಸಹ ನೀಡಿದ್ದಾರೆ. ಇದನ್ನೂ ಓದಿ: ಮದ್ವೆ ನಂತರ ಸಿಂಧು ಲೋಕನಾಥ್ ಬಾಳಲ್ಲಿ ‘ಹೀಗೊಂದು ದಿನ’
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಹೊಸಾ ಆಲೋಚನೆ, ಹೊಸಾ ಪ್ರಯೋಗಗಳ ಪರ್ವ ಕಾಲವೊಂದು ಶುರುವಾಗಿದೆಯಲ್ಲಾ? ಅದರ ಕೊಂಡಿಯಂತೆ ತಯಾರಾಗಿ ಈ ವಾರ ರಾಜ್ಯಾದ್ಯಂತ ತೆರೆಗೆ ಬರುತ್ತಿರುವ ಚಿತ್ರ `ಹೀಗೊಂದ್ ದಿನ’!
ಸದಭಿರುಚಿಯ ಸಿನಿಮಾಸಕ್ತರ ವಲಯದಲ್ಲಿ ಸಣ್ಣಗೆ ಈ ಸಿನಿಮಾ ಕುರಿತಾಗಿ ನಿರೀಕ್ಷೆ ಜೀವ ಪಡೆದುಕೊಳ್ಳುತ್ತಿದೆ. ಯಾವುದೇ ಚಿತ್ರದ ಪಾಲಿಗಾದರೂ ತಾನೇ ತಾನಾಗಿ ಹುಟ್ಟಿಕೊಳ್ಳುವ ಇಂಥಾ ನಿರೀಕ್ಷೆಯೇ ಗೆಲುವಿನ ಮೊದಲ ಮೆಟ್ಟಿಲು. ಅಂಥಾದ್ದೊಂದು ಮೆಟ್ಟಿಲೇರಿ ನಿಂತಿರುವ ಖುಷಿಯಲ್ಲಿ ನಿರ್ಮಾಪಕ ದಿವ್ಯದೃಷ್ಟಿ ಚಂದ್ರಶೇಖರ್ ಸೇರಿದಂತೆ ಚಿತ್ರತಂಡ ಈ ವಾರ ತೆರೆಗೆ ಬರುತ್ತಿರುವ ಸಿನಿಮಾದ ಫಲಿತಾಂಶಕ್ಕಾಗಿ ಕಾದಿದ್ದಾರೆ.
ಹಾಗೆ ನೋಡಿದರೆ, ಹೀಗೊಂದು ದಿನ ಹೆಚ್ಚು ಸೌಂಡ್ ಮಾಡಲು ಕಾರಣ ಇದು ಅನ್ ಕಟ್ ಮೂವಿ ಅನ್ನೋದಕ್ಕೆ. ಅಂದಹಾಗೆ ಅನ್ ಕಟ್ ಮೆಥಡ್ಡಿನಲ್ಲಿ ಒಂದು ಚಿತ್ರವನ್ನು ರೂಪಿಸೋದು ನಿಜಕ್ಕೂ ಸವಾಲಿನ ಕೆಲಸ. ಅದನ್ನು ನಿರ್ದೇಶಕರು ಸೇರಿದಂತೆ ಇಡೀ ಚಿತ್ರತಂಡ ಸಮರ್ಥವಾಗಿ ನಿಭಾಯಿಸಿದ ಖುಷಿಯಲ್ಲಿದೆ. ಇದು ಎರಡು ಗಂಟೆಯಲ್ಲಿ ನಡೆಯೋ ಕಥಾ ಹಂದರ ಹೊಂದಿರೋ ಚಿತ್ರ. ಒಂದ್ಯಾವುದೋ ಗುರಿಯಿಟ್ಟುಕೊಂಡು ಮನೆಯಿಂದ ಹೊರ ಬೀಳೋ ಹುಡುಗಿಯ ಸುತ್ತಾ ಎರಡು ಘಂಟೆಗಳ ಕಾಲ ನಡೆಯುವ ವಿದ್ಯಮಾನ ಈ ಚಿತ್ರದ ಮುಖ್ಯ ವಿಚಾರ.
ಇದಕ್ಕಾಗಿ ದಿನಾ ಬೆಳಗ್ಗೆ ಆರರಿಂದ ಎಂಟು ಘಂಟೆವರೆಗೆ ಶೂಟ್ ಮಾಡಲಾಗುತ್ತಿತ್ತಂತೆ. ಅಷ್ಟೂ ಜನ ಕಲಾವಿದರು ಹೊಸಾ ಪ್ರಯೋಗವೆಂಬ ಕಾರಣದಿಂದ ಸಾಥ್ ನೀಡಿದ್ದಾರೆಂಬ ತೃಪ್ತಿ ನಿರ್ಮಾಪಕ ದಿವ್ಯದೃಷ್ಟಿ ಚಂದ್ರಶೇಖರ್ ಅವರದ್ದು.
ಸಿಂಧು ಲೋಕನಾಥ್ ಮುಖ್ಯಭೂಮಿಕೆಯಲ್ಲಿರುವ ಹೀಗೊಂದು ದಿನ ಪಕ್ಕಾ ಮಹಿಳಾ ಪ್ರಧಾನವಾದ ಚಿತ್ರ. ಕಥಾ ಹಂದರವೂ ಸೇರಿದಂತೆ ಎಲ್ಲ ವಿಚಾರಗಳಲ್ಲಿಯೂ ಹೊಸತನ ಹೊಂದಿದೆ. ಈವರೆಗೆ ಒಂದಷ್ಟು ಪಾತ್ರಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದ ಸಿಂಧು ಲೋಕನಾಥ್ ಈ ಚಿತ್ರದಲ್ಲಿ ಇಲ್ಲಿವರೆಗಿನ ಅಷ್ಟೂ ಪಾತ್ರಗಳಿಗಿಂತಲೂ ಭಿನ್ನವಾದ, ಸವಾಲಾದ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರಂತೆ.
ಅಂದಹಾಗೆ ವಿಕ್ರಂ ಯೋಗಾನಂದ್ ನಿರ್ದೇಶನದ ಈ ಚಿತ್ರವನ್ನು ನಿರ್ಮಾಣ ಮಾಡಿರುವವರು ದಿವ್ಯದೃಷ್ಟಿ ಚಂದ್ರಶೇಖರ್. ಕನ್ನಡ ಚಿತ್ರರಂಗದಲ್ಲಿ ಹತ್ತು ವರ್ಷಗಳಿಂದ ಸಕ್ರಿಯರಾಗಿರುವ ಚಂದ್ರಶೇಖರ್ ಅಭಿರುಚಿಯ ಚಿತ್ರ ಮಾಡಬೇಕೆಂಬ ಉದ್ದೇಶದಿಂದ ಎರಡ್ಮೂರು ವರ್ಷಗಳಿಂದಲೂ ತಯಾರಿ ನಡೆಸಿದ್ದರು. ಕಡೆಗೂ ‘ಹೀಗೊಂದು ದಿನ’ ಚಿತ್ರದ ಮೂಲಕ ಆ ಕನಸು ನನಸಾಗಿಸಿಕೊಂಡಿದ್ದಾರೆ. ನಿರ್ಮಾಪಕರೂ ಸೇರಿದಂತೆ ಇಡೀ ಚಿತ್ರ ತಂಡ ಟ್ರೈಲರ್‍ಗೆ ಸಿಕ್ಕ ವ್ಯಾಪಕ ಪ್ರತಿಕ್ರಿಯೆ ಕಂಡು ಖುಷಿಗೊಂಡಿದ್ದಾರೆ. ಯಾರೇ ಯಶಸ್ವೀ ಪುರುಷರ ಹಿಂದೆ ಒಬ್ಬಳು ಹೆಣ್ಣಿರುತ್ತಾಳೆಂಬುದು ಲೋಕ ರೂಢಿಯ ಮಾತು. ಯಶಸ್ವೀ ಪುರುಷರ ಹಿಂದಿರುವ ಇಂಥಾ ಹೆಣ್ಣಿನ ತ್ಯಾಗವನ್ನು, ಕಷ್ಟವನ್ನು ಯಾರೂ ಮುನ್ನೆಲೆಗೆ ತಂದು ಮಾತಾಡೋದಿಲ್ಲ. ಆದರೆ ಈ ಚಿತ್ರದಲ್ಲಿ ಅಂಥಾ ಹೆಣ್ಣಿನ ಸೂಕ್ಷ್ಮ ಸಂಗತಿಗಳನ್ನು ರೋಚಕವಾದ ತಿರುವುಗಳ ಮೂಲಕ, ಚೆಂದದ ಕಥಾ ಹಂದರದ ಮೂಲಕ ವಿವರಿಸಲಾಗಿದೆಯಂತೆ. ಇನ್ನುಳಿದಂತೆ ಈ ಚಿತ್ರದಲ್ಲಿ ಘಟಾನುಘಟಿಗಳಾದ ನಟ ನಟಿಯರೇ ಅಭಿನಯಿಸಿದ್ದಾರೆ. ಶೋಭರಾಜ್, ಪದ್ಮಜಾ ರಾವ್, ಮಿತ್ರಾ ಮುಂತಾದ ನಟ ನಟಿಯರ ದಂಡೇ ಈ ಚಿತ್ರದಲ್ಲಿದೆ. ಈಗಾಗಲೇ ಟ್ರೈಲರ್ ಕೂಡಾ ಚಿತ್ರದ ಬಗ್ಗೆ ಕೌತುಕ ಹುಟ್ಟಿಸುವಲ್ಲಿ ಯಶ ಕಂಡಿದೆ. ಈ ಚಿತ್ರವನ್ನು ಪ್ರೇಕ್ಷಕರು ಯಾವ ರೀತಿ ಸ್ವೀಕರಿಸುತ್ತಾರೆಂಬುದಷ್ಟೇ ಸದ್ಯದ ಕುತೂಹಲ.
ವಿಕಾಸ್ ಅವರ ಕಥೆಗೆ, ನಿರ್ದೇಶಕ ವಿಕ್ರಮ್ ಯೋಗಾನಂದ್ ಅವರೇ ಛಾಯಾಗ್ರಹಕರು, ಸಂಕಲನಕಾರರು ಹಾಗೂ ವಿಷುವಲ್ ಎಫ್ಫೆಕ್ಟ್ ಸಹ ನೀಡಿದ್ದಾರೆ, ಅಭಿಲಾಷ್ ಗುಪ್ತ ಸಂಗೀತ, ರಾಮಕೃಷ್ಣ ರಣಗಟ್ಟಿ ಗೀತ ಸಾಹಿತ್ಯ ನೀಡಿದ್ದಾರೆ.
ಬೆಂಗಳೂರು: ಈ ವರ್ಷದ ಮಹಿಳಾ ದಿನದಂದೇ ‘ಹೀಗೊಂದು ದಿನ’ ಅಂತಾ ಬರ್ತಿದ್ದಾರೆ ಸ್ವಲ್ಪ ಕಾಲದಿಂದ ಸ್ಯಾಂಡಲ್ ವುಡ್ ನಿಂದ ಮರೆಯಾಗಿದ್ದ ಸಿಂಧು ಲೋಕನಾಥ್. ಹೀಗೊಂದು ದಿನ ಎಂಬ ಹೆಸರಿನ ಈ ಸಿನೆಮಾ ಬಗ್ಗೆ ಪ್ರೇಕ್ಷಕರಲ್ಲೊಂದು ಕುತೂಹಲ ಹುಟ್ಟಿದೆ.
ಮದುವೆಯಾದ ನಂತರ ಸಿನಿಲೋಕದಿಂದ ನಾಪತ್ತೆಯಾದಂತಿದ್ದ ಸಿಂಧು ಲೋಕನಾಥ್ ಪ್ರಧಾನ ಪಾತ್ರದದಲ್ಲಿರುವ ಈ ಚಿತ್ರದ ಕಥೆಯ ಎಳೆ ಹೇಗಿರಬಹುದು ಎಂಬ ಪ್ರಶ್ನೆ ಪ್ರೇಕ್ಷಕರದ್ದು. ಯಾವುದೇ ಚಿತ್ರದ ಪಾಲಿಗಾದರೂ ತಾನೇ ತಾನಾಗಿ ಹುಟ್ಟಿಕೊಳ್ಳುವ ಇಂಥಾ ನಿರೀಕ್ಷೆಯೇ ಗೆಲುವಿನ ಮೊದಲ ಮೆಟ್ಟಿಲು. ಅಂಥಾದ್ದೊಂದು ಮೆಟ್ಟಿಲೇರಿ ನಿಂತಿರುವ ಖುಷಿಯಲ್ಲಿ ನಿರ್ಮಾಪಕ ದಿವ್ಯದೃಷ್ಟಿ ಚಂದ್ರಶೇಖರ್ ನೇತೃತ್ವದ ಚಿತ್ರತಂಡ ಮಿಂದೇಳುತ್ತಿದೆ!
‘ಹೀಗೊಂದು ದಿನ’ ಅನ್ ಕಟ್ ಮೂವಿ ಎಂಬ ಕಾರಣದಿಂದಲೇ ಭಾರೀ ಸದ್ದು ಮಾಡುತ್ತಿದೆ. ಅಂದಹಾಗೆ ಅನ್‍ಕಟ್ ಮೆಥಡ್ ನಲ್ಲಿ ಒಂದು ಚಿತ್ರವನ್ನು ರೂಪಿಸೋದು ನಿಜಕ್ಕೂ ಸವಾಲಿನ ಕೆಲಸ. ಅದನ್ನು ನಿರ್ದೇಶಕರು ಸೇರಿದಂತೆ ಇಡೀ ಚಿತ್ರತಂಡ ಸಮರ್ಥವಾಗಿ ನಿಭಾಯಿಸಿದ ಖುಷಿಯಲ್ಲಿದೆ. ಇದು ಎರಡು ಘಂಟೆಯಲ್ಲಿ ನಡೆಯೋ ಕಥಾ ಹಂದರ ಹೊಂದಿರೋ ಚಿತ್ರ. ವಿಶೇಷ ಕಾರಣವೊಂದರ ಬೆನ್ನು ಬಿದ್ದು ಮನೆಯಿಂದ ಹೊರ ಬೀಳೋ ಹುಡುಗಿಯ ಸುತ್ತಾ ಎರಡು ಗಂಟೆಗಳ ಕಾಲ ನಡೆಯುವ ವಿದ್ಯಮಾನ ಈ ಚಿತ್ರದ ಮುಖ್ಯ ವಿಚಾರ.
ಇದಕ್ಕಾಗಿ ಪ್ರತಿನಿತ್ಯ ಬೆಳಗ್ಗೆ ಆರರಿಂದ ಎಂಟು ಗಂಟೆವರೆಗೆ ಶೂಟ್ ಮಾಡಿದ್ದರಂತೆ. ಎಲ್ಲಾ ಕಲಾವಿದರು ಹೊಸ ಪ್ರಯೋಗವೆಂಬ ಕಾರಣದಿಂದ ಸಾಥ್ ನೀಡಿದ್ದಾರೆಂಬ ತೃಪ್ತಿ ನಿರ್ಮಾಪಕ ದಿವ್ಯದೃಷ್ಟಿ ಚಂದ್ರಶೇಖರ್ ಅವರದ್ದು. ಮೊದಲ ಚಿತ್ರದಲ್ಲಿಯೇ ಸವಾಲಿನ ಕಥಾ ಹಂದರವನ್ನು ಕೈಗೆತ್ತಿಕೊಂಡು ಚಿತ್ರವನ್ನು ಮಾಡಿ ಮುಗಿಸಿರುವ ನಿರ್ಮಾಪಕ ಚಂದ್ರಶೇಖರ್ ಸದ್ಯ ಭರ್ಜರಿ ಗೆಲುವೊಂದರ ನಿರೀಕ್ಷೆಯಲ್ಲಿದ್ದಾರೆ.
ಬೆಂಗಳೂರು: ನಟಿ ಸಿಂಧು ಲೋಕನಾಥ್ ಮದುವೆಯ ನಂತರ ಬಣ್ಣದ ಲೋಕದಿಂದ ದೂರ ಉಳಿದ್ರಾ ಎಂಬ ಪ್ರಶ್ನೆಯೊಂದು ಎಲ್ಲ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿತ್ತು. ಆದ್ರೆ ಅವರ ಮದುವೆ ಮುಂಚೆಯೇ ಸೆಟ್ಟೇರಿದ್ದ ‘ಹೀಗೊಂದು ದಿನ’ ಚಿತ್ರ ಬಿಡುಗಡೆಗೆ ರೆಡಿಯಾಗಿದೆ.
‘ಲವ್ ಇನ್ ಮಂಡ್ಯ’ ಚಿತ್ರದ ಬಳಿಕ ನಾಪತ್ತೆಯಾಗಿದ್ದ ಸಿಂಧು ಕೆಲ ವೆಬ್ ಸಿರೀಸ್ ನಲ್ಲಿ ಕಾಣಿಸಿಕೊಂಡಿದ್ದರು. ಅದಾದ ನಂತರ ಸದ್ದಿಲ್ಲದೇ ಮಂಗಳೂರು ಮೂಲದ ಶ್ರೇಯಸ್ ಕೊಡಿಯಾಲ್ ಅವರೊಂದಿಗೆ ಸಾಂಸರಿಕ ಜೀವನಕ್ಕೆ ಕಾಲಿರಿಸಿದ್ದರು. ವಿಭಿನ್ನ ಕಥಾ ಹಂದರವುಳ್ಳ ‘ಹೀಗೊಂದು ದಿನ’ ಚಿತ್ರದಲ್ಲಿ ಹೊಸ ಕಲಾವಿದರೊಂದಿಗೆ ಸಿಂಧು ಲೋಕನಾಥ್ ತೆರೆ ಹಂಚಿಕೊಂಡಿದ್ದಾರೆ. ಈ ಸಿನಿಮಾದ ಮೂಲಕ ವಿಕ್ರಮ್ ಯೋಗಾನಂದ್ ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳಿದ್ರೆ, ವಿಕಾಸ್ ಕಥೆಯನ್ನು ಹೆಣೆದಿದ್ದಾರೆ. ನಿರ್ಮಾಪಕ ಚಂದ್ರಶೇಖರ್ ಬಂಡವಾಳ ಹೂಡಿದ್ದಾರೆ.
ಎರಡು ಗಂಟೆಯಲ್ಲಿ ನಡೆಯುವ ಕಥೆಯನ್ನು ಹೀಗೊಂದು ದಿನ ಚಿತ್ರ ಒಳಗೊಂಡಿದೆ. ಒಂದು ಗುರಿ ಇಟ್ಟುಕೊಂಡು ಮನೆಯಿಂದ ಯುವತಿ ಹೊರ ನಡೆಯುತ್ತಾಳೆ. ಈ ವೇಳೆ ಕಥಾ ನಾಯಕಿ ತನ್ನ ಗುರಿ ತಲುಪಲು ಎರಡು ಗಂಟೆಯಲ್ಲಿ ಯಾವ ತೊಂದರೆಗಳನ್ನು, ಕಷ್ಟಗಳನ್ನು ಎದುರಿಸ್ತಾಳೆ ಎಂಬುವುದು ಕಥೆಯ ತಿರುಳು. ಕಥೆಯಲ್ಲಿ ನಾಯಕಿಯ ಬೆಳಗ್ಗೆ 6 ಗಂಟೆಯಿಂದ 8 ಗಂಟೆಯವರೆಗಿನ ಸನ್ನಿವೇಶವನ್ನು ಹೊಂದಿದೆ. ಹೀಗಾಗಿ ಚಿತ್ರೀಕರಣವನ್ನು ಬೆಳಗಿನ ಜಾವ 6 ಗಂಟೆಯಿಂದ 8 ಗಂಟೆಯ ಮಧ್ಯ ಭಾಗದಲ್ಲಿ ಶೂಟ್ ಮಾಡಲಾಗಿದೆ.
Heegondhu Dina | Kannada Movie | Sindhu Loknath | Vikram Yoganand
ಸಿಂಪಲ್ಲಾಗ್ ಇನ್ನೊಂದು ಲವ್ ಸ್ಟೋರಿಯ ಪ್ರವೀಣ್, ಹಿರಿಯ ನಟಿ ಗಿರಿಜಾ ಲೋಕೇಶ್, ಪದ್ಮಜಾ ರಾವ್, ಗುರುಪ್ರಸಾದ್, ಶೋಭರಾಜ್, ಮಿತ್ರ, ಗಿರಿ, ಬಾಲಾಜಿ ಮನೋಹರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅಭಿಲಾಶ್ ಗುಪ್ತ ಸಂಗೀತ ನೀಡಿದ್ದಾರೆ.
ಈಗಾಗಲೇ ಚಿತ್ರದ ಟ್ರೇಲರ್ ಹಿಟ್ ಆಗಿದ್ದು, ಮನೆ ಬಿಟ್ಟು ಹೊರಡುವ ಯುವತಿ ಮುಂದೆ ಏನು ಮಾಡ್ತಾಳೆ? ಎಂಬ ಸಸ್ಪೆನ್ಸ್ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳಲು ಯಶಸ್ವಿಯಾಗಿದೆ. ಪ್ರಯೋಗಾತ್ಮಕ ಸಿನಿಮಾ ಇದಾಗಿದ್ದು, ಆನ್‍ಕಟ್ ಫಿಲ್ಮ್ ಎಂಬುವುದು ಚಿತ್ರತಂಡದ ಹೆಮ್ಮೆ. ಸಿನಿಮಾ ಇದೇ ತಿಂಗಳು 9ರಂದು ರಿಲೀಸ್ ಆಗಲಿದೆ.
ಬೆಂಗಳೂರು: ನಟಿ ಸಿಂಧು ಲೋಕನಾಥ್ ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮಂಗಳೂರು ಮೂಲದ ಶ್ರೇಯಸ್ ಕೊಡಿಯಾಲ್ ಅವರನ್ನ ಕಳೆದ ಭಾನುವಾರ ಸಿಂಧು ಲೋಕನಾಥ್ ಮದುವೆಯಾಗಿದ್ದಾರೆ. ಶ್ರೇಯಸ್ ಪೂಮಾ ಕಂಪನಿಯಲ್ಲಿ ಹೆಚ್‍ಆರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕುಟುಂಬದ ಸಮ್ಮುಖದಲ್ಲಿ ಮಡಿಕೇರಿಯ ಕಾವೇರಿ ಹಾಲ್‍ನಲ್ಲಿ ಸಿಂಧು ವಿವಾಹ ನೆರವೇರಿದೆ.
ಡ್ರಾಮಾ, ಲೈಫು ಇಷ್ಟೇನೆ, ಯಾರೇ ಕೂಗಾಡಲಿ ಇನ್ನೂ ಮುಂತಾದ ಸಿನಿಮಾಗಳಲ್ಲಿ ಸಿಂಧು ಲೋಕನಾಥ್ ಅಭಿನಯಿಸಿದ್ದಾರೆ.