Tag: ಸಿಂಹಾಸನ

  • ನಿರ್ಮಾಣಕ್ಕೆ ಮುಂದಾದ ನಟಿ ಸೀತಾ ಹರ್ಷವರ್ಧನ್

    ನಿರ್ಮಾಣಕ್ಕೆ ಮುಂದಾದ ನಟಿ ಸೀತಾ ಹರ್ಷವರ್ಧನ್

    ತ್ತೀಚಿಗೆ  ಕನ್ನಡ ಸೇರಿದಂತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ  ಚಿತ್ರಗಳು  ಸೆಟ್ಟೇರಿತ್ತಿವೆ. ಇದೀಗ ಅದರ ಸಾಲಿಗೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಕನ್ನಡ ಮತ್ತು ತೆಲುಗಿನಲ್ಲಿ ಎರಡು ಭಾಷೆಯಲ್ಲಿ ಬೇರೆ ಬೇರೆ  ಶೀರ್ಷಿಕೆಯಲ್ಲಿ ಚಿತ್ರ ಮೂಡಿ ಬರಲಿದೆ. ಕನ್ನಡದಲ್ಲಿ ‘ಯಾಕೆ’ (Yaake) ಎನ್ನುವ ಶೀರ್ಷಿಕೆ ಇಟ್ಟಿದ್ದು ತೆಲುಗಿನಲ್ಲಿ `ಸಿಂಹಾಸನಂ’ ಎಂದು ಹೆಸರು ಇಡಲಾಗಿದೆ. ಎರಡು ಭಾಷೆಯಲ್ಲಿ ಸೀತಾ ಹರ್ಷವರ್ಧನ್ (Seetha Harshvardhan) ಚಿತ್ರ ನಿರ್ಮಾಣ ಮಾಡುತ್ತಿದ್ದು ಪ್ರೇಮ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವುದು ವಿಶೇಷ.

    ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗಲಿರುವ ಎರಡು ಚಿತ್ರಗಳ ಶೀರ್ಷಿಕೆ ಅನಾವರಣ ಮತ್ತು ಸಿರಿ ಸಿನಿಮಾಸ್ ಹೊಸ ನಿರ್ಮಾಣ ಸಂಸ್ಥೆಯ ಉದ್ಘಾಟನಾ ಸಮಾರಂಭ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ನಡೆಯಿತು. ನಟರಾದ ಒರಟ ಪ್ರಶಾಂತ್ ಶ್ರೀನಗರ ಕಿಟ್ಟಿ , ನಿರ್ಮಾಪಕ ಟಿಪಿ ಸಿದ್ದರಾಜ್, ಕಲಾವಿದೆ ಅಂಬುಜಾ ಸೇರಿದಂತೆ ಹಲವು ಕಂಡಿರುವ ಆಗಮಿಸಿ ಶೀರ್ಷಿಕೆ ಅನಾವರಣ ಮಾಡಿ ತಂಡಕ್ಕೆ ಶುಭ ಹಾರೈಸಿದರು.

    ನಿರ್ಮಾಪಕಿ ಸೀತಾ ಹರ್ಷವರ್ಧನ್ ಮಾತನಾಡಿ ಕನ್ನಡದ ಹಲವು ಚಿತ್ರಗಳು ಮತ್ತು ಧಾರಾವಾಹಿಯಲ್ಲಿ ನಟಿಸಿದ್ದೇನೆ ಜೊತೆಗೆ ತೆಲುಗು ದಾರವಾಹಿಗಳಲ್ಲೂ ನಟಿಸಿದ್ದೇನೆ ಈ ನಡುವೆ ನಿರ್ದೇಶಕ ಪ್ರೇಮ್ ಅವರು ಹೇಳಿದ ಕಥೆ ಇಷ್ಟವಾಯಿತು ಹೀಗಾಗಿ ನಿರ್ಮಾಣಕ್ಕೆ ಮುಂದಾಗಿದ್ದೇವೆ ನವೆಂಬರ್ ನಲ್ಲಿ ಚಿತ್ರೀಕರಣ ಆರಂಭವಾಗಲಿದ್ದು ಮುಂದಿನ ವರ್ಷ ಏಪ್ರಿಲ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಉದ್ದೇಶ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

    ನಮ್ಮ ಪ್ರಯತ್ನಕ್ಕೆ ಅಮೆಜಾನ್ ಮತ್ತು ಹೈದರಾಬಾದಿನ ಖುಷಿ ಸಿನಿಮಾ ಸಂಸ್ಥೆ ಜೊತೆಗೂಡಿದೆ ಇದರಿಂದಾಗಿ ಚಿತ್ರ ನಿರ್ಮಾಣಕ್ಕೆ ಮತ್ತಷ್ಟು ಬಲ ಬಂದಿದೆ ಮುಂದಿನ ದಿನಗಳಲ್ಲಿ ಒಳ್ಳೆಯ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡುವ ಉದ್ದೇಶ ನಮ್ಮದು ಎಂದು ಅವರು ಹೇಳಿದರು. ನಿರ್ದೇಶಕ ಪ್ರೇಮ್ ಮಾತನಾಡಿ ಕನ್ನಡದಲ್ಲಿ ಮೊದಲ ಚಿತ್ರ ಒಳ್ಳೆಯ ಕಂಟೆಂಟ್ ಇದೆ ನವಂಬರ್ ಮಧ್ಯಭಾಗದಿಂದ ಚಿತ್ರಿಕರಣ ಆರಂಭ ಮಾಡುತ್ತೇವೆ ಎಲ್ಲರಿಗೂ ಇಷ್ಟವಾಗುವ ಕಥೆಯನ್ನು ಚಿತ್ರ ಒಳಗೊಂಡಿದೆ ಎಂದು ಮಾಹಿತಿ ನೀಡಿದರು

    ಇದೇ ಸಂದರ್ಭದಲ್ಲಿ ಖುಷಿ ಸಿನಿಮಾ ಸಂಸ್ಥೆಯ ಪಾಲುದಾರರು ಚಿತ್ರದ ಬಗ್ಗೆ ಮಾಹಿತಿ ನೀಡಿ ಹೊಸ ವರ್ಷ ಕಂಟೆಂಟ್ ಗಳು ಬಂದರೆ ಅವುಗಳನ್ನು ಚಿತ್ರ ನಿರ್ಮಾಣ ಮಾಡಲು ಸಂಸ್ಥೆ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು

  • ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ

    ಮೈಸೂರು ದಸರಾ: ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭ

    ಸಾಂದರ್ಭಿಕ ಚಿತ್ರ

    ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳಿದ್ದು, ಅರಮನೆಯಲ್ಲಿ ತಯಾರಿ ಕೆಲಸಗಳು ಜೋರಾಗಿ ನಡೆಯುತ್ತಿವೆ. ಇಂದು ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣೆ ಕಾರ್ಯ ಆರಂಭವಾಗಿದೆ.

    ನಾಡಹಬ್ಬ ದಸರಾಗೆ ಮೈಸೂರು ಸಜ್ಜಾಗುತ್ತಿದ್ದು, ದಸರಾದ ಪ್ರಮುಖ ಖಾಸಗಿ ಕಾರ್ಯಕ್ರಮದ ನಿಮಿತ್ತ ಅರಮನೆಯಲ್ಲಿ ದಸರಾ ತಯಾರಿ ಜೋರಾಗಿ ನಡೆಯುತ್ತಿದೆ. ಅಲ್ಲದೇ ದಸರಾ ದಿನ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಸಿಂಹಾಸದಲ್ಲಿ ಕುಳಿತು ಖಾಸಗಿ ದರ್ಬಾರ್ ನಡೆಸುತ್ತಾರೆ. ದಸರಾ ಸಂದರ್ಭದಲ್ಲಿ ಮಾತ್ರ ಸಿಂಹಾಸನ ಜೋಡಣೆ ಮಾಡಲಾಗುತ್ತದೆ.

    ಸಿಂಹಾಸನ ಜೋಡಣೆ ಕಾರ್ಯವನ್ನು ತಲೆತಲಾಂತರದಿಂದ ತಾಲೂಕಿನ ಗೆಜ್ಜಗಳ್ಳಿ ಗ್ರಾಮಸ್ಥರು ನಡೆಸುತ್ತಾ ಬಂದಿದ್ದಾರೆ. ಸಿಂಹಾಸ ಜೋಡಣೆ, ವಿಸರ್ಜನೆ ಸಂದರ್ಭದಲ್ಲಿ ಗೆಜ್ಜಗಳ್ಳಿಯ ಗ್ರಾಮಸ್ಥರನ್ನು ಅರಮನೆಗೆ ಕರೆಸಲಾಗುತ್ತದೆ.

    ಸಿಂಹಾಸನದಲ್ಲಿ ಸಿಂಹದ ಮುಖ ಇರುವ ಭಾಗವನ್ನು ದರ್ಬಾರ್ ದಿನ ಜೋಡಿಸಲಾಗುತ್ತದೆ. ಇನ್ನು ವರ್ಷಪೂರ್ತಿ ಸಿಂಹಾಸನ ಬಿಡಿಭಾಗಗಳನ್ನು ರಹಸ್ಯ ಸ್ಥಳದಲ್ಲಿ ಇರಿಸಲಾಗಿರುತ್ತದೆ. ಸಿಂಹಾಸನ ಜೋಡಣೆ ಕೆಲಸ ಇರುವುದರಿಂದ ಇಂದು ಅರಮನೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv