Tag: ಸಿಎಂ

  • ಪರಮೇಶ್ವರ್ ಪರ ಆಂಧ್ರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಂದ ಮುಂದಿನ ಸಿಎಂ ಘೋಷಣೆ

    ಪರಮೇಶ್ವರ್ ಪರ ಆಂಧ್ರ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಂದ ಮುಂದಿನ ಸಿಎಂ ಘೋಷಣೆ

    ಬೆಂಗಳೂರು: ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ಅವರು ಹುಟ್ಟುಹಬ್ಬದ ನಿಮಿತ್ತ ತಿರುಪತಿಗೆ ಹೋಗುವ ಮಾರ್ಗದಲ್ಲಿ ಆಂಧ್ರಪ್ರದೇಶ (Andhra Pradesh) ಕಾಂಗ್ರೆಸ್ (Congress) ಕಾರ್ಯಕರ್ತರು ಅವರನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.

    ತಿರುಪತಿ ಜಿಲ್ಲಾ ಗಾದಂಕಿ ಗ್ರಾಮದ ಹೆದ್ದಾರಿ ಟೋಲ್ ಬಳಿ ಸ್ಥಳೀಯ ಶಾಸಕ ಗಂಗಾಲಪನಿ ಶ್ರೀನಿವಾಸಲು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪರಮೇಶ್ವರ್ ಅವರಿಗೆ ಶುಭಕೋರಿದರು. ಇದನ್ನೂ ಓದಿ: ಮೂರಂತಸ್ತಿನ ಕಟ್ಟಡದಿಂದ ಬಿದ್ದು ಯುವತಿ ಅನುಮಾನಾಸ್ಪದ ಸಾವು

    ಈ ವೇಳೆ ಆಂಧ್ರಪ್ರದೇಶ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಗೃಹ ಸಚಿವ ಪರಮೇಶ್ವರ್ ಅವರಿಗೆ, ‘ಸಿಎಂ, ಸಿಎಂ, ಸಿಎಂ’ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು. ಇದನ್ನೂ ಓದಿ: ಆ.6ಕ್ಕೆ ರಾಯಚೂರಿಗೆ ಸಿಎಂ, ಡಿಸಿಎಂ – ಹಟ್ಟಿ ಚಿನ್ನದಗಣಿಯ 998 ಕೋಟಿ ಕಾಮಗಾರಿಗೆ ಶಂಕುಸ್ಥಾಪನೆ

  • ಸಿದ್ದು ಫುಲ್ ಟರ್ಮ್ ಸಿಎಂ ಅಸ್ತ್ರಕ್ಕೆ ಡಿಕೆಶಿ ನೆಕ್ಸ್ಟ್ ಸಿಎಂ ಬ್ರಹ್ಮಾಸ್ತ್ರ: ಸಂಖ್ಯಾಬಲ ಡಿಸಿಎಂಗೆ ಇದೆ – ಇಕ್ಬಾಲ್ ಹುಸೇನ್

    ಸಿದ್ದು ಫುಲ್ ಟರ್ಮ್ ಸಿಎಂ ಅಸ್ತ್ರಕ್ಕೆ ಡಿಕೆಶಿ ನೆಕ್ಸ್ಟ್ ಸಿಎಂ ಬ್ರಹ್ಮಾಸ್ತ್ರ: ಸಂಖ್ಯಾಬಲ ಡಿಸಿಎಂಗೆ ಇದೆ – ಇಕ್ಬಾಲ್ ಹುಸೇನ್

    ಬೆಂಗಳೂರು: ಸಿದ್ದು (Siddaramaiah) ಫುಲ್ ಟರ್ಮ್ ಸಿಎಂ ಅಸ್ತ್ರಕ್ಕೆ ಡಿಕೆಶಿ (DK Shivakumar) ನೆಕ್ಸ್ಟ್ ಸಿಎಂ ಬ್ರಹ್ಮಾಸ್ತ್ರ ಬಿಡುತ್ತಾರೆ. ಡಿಸಿಎಂ ಡಿಕೆಶಿಗೆ ಸಂಖ್ಯಾಬಲ ಜಾಸ್ತಿಯಿದೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಬಾಂಬ್ ಸಿಡಿಸಿದ್ದಾರೆ.

    ಹೌದು, ರಾಜ್ಯ ಕಾಂಗ್ರೆಸ್‌ನಲ್ಲಿ ನೀವು ಮಾತಾಡಿದರೆ ನಾವು ಮಾತನಾಡುತ್ತೇವೆ ಎಂಬ ಮುಯ್ಯಿಗೆ ಮುಯ್ಯಿ ಪಾಲಿಟಿಕ್ಸ್ ಶುರುವಾಗಿದೆ. ಸಿದ್ದು ಟೀಂ ಮೇಲೆ ಇಕ್ಬಾಲ್ ಹುಸೇನ್ ಬಲಾಬಲ ಬ್ರಹ್ಮಾಸ್ತ್ರ ಬಿಟ್ಟಿದ್ದಾರೆ. ಇತ್ತ ಸುರ್ಜೇವಾಲಾ ವಾರ್ನ್ ಮಾಡಿದ್ದು, ನೀವು ಕೈ ಹಿಡಿದು ನಿಂತಿದ್ದು ಸರಿ. ನಿಮ್ಮ ಆಪ್ತರ ರಿಪೇರಿ ಯಾವಾಗ ಎಂದು ಪ್ರಶ್ನಿಸಿದ್ದಾರೆ.

    ಯಾರೇ ಕೂಗಾಡಲಿ, ಯಾರೇ ವಾರ್ನ್ ಮಾಡ್ಲಿ, ನಾವ್ ಏನ್ ಹೇಳ್ಬೇಕೋ ಹೇಳ್ತೀವಿ. ಇದು ಕಾಂಗ್ರೆಸ್ ಒಳಗಿನ ಎಸ್‌ಟೀಂ, ಡಿಟೀಂ, ಡಿಸಿಎಂ ಸಿಎಂ ಆಗ್ಬೇಕು, ಆಗುತ್ತಾರೆ ಎಂದು ಇಕ್ಬಾಲ್ ಹುಸೇನ್ ತುಪ್ಪ ಸುರಿಯುತ್ತಲೇ ಇದ್ದಾರೆ. ಸಿದ್ದರಾಮಯ್ಯ ಆಪ್ತ ಸಚಿವರು, ಶಾಸಕರು ಫುಲ್ ಟರ್ಮ್ ಸಿಎಂ ಅಸ್ತ್ರಕ್ಕೆ ಡಿಕೆಶಿ ನೆಕ್ಸ್ಟ್‌ ಸಿಎಂ ಬ್ರಹ್ಮಾಸ್ತ್ರ ಪ್ರಯೋಗ ಮಾಡಿದ್ದಾರೆ ಎಂದಿದ್ದಾರೆ.

    ರಾಮನಗರದಲ್ಲಿ ಇಕ್ಬಾಲ್ ಹುಸೇನ್ ಮಾತನಾಡಿ, ಕ್ರಾಂತಿ ಹೇಳಿದವರೇ ಡೇಟ್ ಕೊಟ್ಟಿದ್ದಾರೆ, ಡಿಸಿಎಂ ಸಿಎಂ ಆಗುವ ಕಾಲ ಹತ್ತಿರ ಇದೆ. ಶಾಸಕರ ಸಂಖ್ಯಾಬಲವೂ ಇದೆ ಎಂದು ಬಾಂಬ್ ಹಾಕಿದ್ದಾರೆ. ಇನ್ನೊಂದೆಡೆ ಸಿಎಂ ಆಪ್ತ ಶಾಸಕ ರಾಘವೇಂದ್ರ ಹಿಟ್ನಾಳ್ ಮಾತನಾಡಿ, ಸಿದ್ದರಾಮಯ್ಯ ಬದಲಾಗಲ್ಲ, ಫುಲ್ ಟರ್ಮ್ ಸಿಎಂ ಎಂದಿದ್ದಾರೆ. ಆದರೆ ಯಾರ ಸಹವಾಸವೂ ಬೇಡ, ಸಿದ್ದು, ಡಿಕೆಶಿ ನಮ್ಮ ಎರಡು ಕಣ್ಣು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಶಾಸಕ ನಂಜೇಗೌಡ ಜಾಣತನದ ಹೇಳಿಕೆ ಕೊಟ್ಟಿದ್ದಾರೆ.

    ಅಂದಹಾಗೆ ಸೋಮವಾರ ಸುರ್ಜೇವಾಲಾ ನೇತೃತ್ವದಲ್ಲಿ ಸಿಎಂ, ಡಿಸಿಎಂ ಸಭೆ ನಡೆಯಿತು. ಸಭೆಯಲ್ಲಿ ಸಿಎಂ, ಡಿಸಿಎಂ ಆಪ್ತರಿಗೆ ಬಿಸಿ ಮುಟ್ಟಿಸುವ ಸಂದೇಶ ಹೊರಬಿತ್ತು ಎನ್ನಲಾಗಿದೆ. ಮೈಸೂರು ಏರ್‌ಪೋರ್ಟ್ನಲ್ಲಿ ನಡೆದ ಘಟನೆಯ ವಿಡಿಯೋ ಬಗ್ಗೆ ಸುರ್ಜೇವಾಲಾ ಸಭೆಯಲ್ಲಿ ಪ್ರಸ್ತಾಪ ಆಗಿದೆ.

    ಸಿದ್ದರಾಮಯ್ಯ ಡಿಕೆಶಿಯ ಕೈ ಎತ್ತಿ ಹಿಡಿದ ವಿಡಿಯೋ ಬಗ್ಗೆ ಪ್ರಸ್ತಾಪಿಸಿ, ನಾನು ವಿಡಿಯೋ ನೋಡಿದೆ, ಕೆಪಿಸಿಸಿ ಕಚೇರಿಯಲ್ಲಿ ತೋರಿಸಿದರು. ಒಳ್ಳೆಯ ಬೆಳವಣಿಗೆ. ನೀವಿಬ್ಬರು ಒಗ್ಗಟ್ಟು ಪ್ರದರ್ಶಿಸಿದ್ದು ಓಕೆ, ಆದರೆ ಕೆಲ ಮಿನಿಸ್ಟರ್ಸ್, ಶಾಸಕರು ಗೊಂದಲದ ಹೇಳಿಕೆಗಳು ಯಾಕೆ? ಎಂದು ಸುರ್ಜೇವಾಲಾ ಪ್ರಶ್ನಿಸಿದ್ರು ಎನ್ನಲಾಗಿದೆ. ಮೊದಲು ಅವರನ್ನ ಸರಿಮಾಡಬೇಕಿದೆ, ನೀವು ನಿಮ್ಮ ಆಪ್ತರನ್ನ ಎಂಟರ್ಟೈನ್ ಮಾಡ್ಬೇಡಿ. ಆಪ್ತರಿಗೆ ನೀವು ಬುದ್ಧಿ ಹೇಳಿ ಎಂದಿದ್ದಾರೆ. ನಾವು ವಾರ್ನ್ ಮಾಡುತ್ತೇವೆ, ನಾವು ಎಂಟರ್ಟೈನ್ ಮಾಡಲ್ಲ, ಮಾತಾಡ್ತೀವಿ ಎಂದು ಸಿಎಂ, ಡಿಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.

    ಇನ್ನೂ ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಮಾತನಾಡಿ ಕಾಂಗ್ರೆಸ್ ಒಳಗೆ ಕದನಕ್ಕೆ ಮುನ್ನುಡಿ ಬರೆದಿದ್ದ ರಾಜಣ್ಣ ಈಗ ಸೈಲೆಂಟ್ ಆಗಿದ್ದಾರೆ. ಇವತ್ತು ಏನನ್ನೂ ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ. ಒಟ್ನಲ್ಲಿ ಡಿಕೆಶಿ ಆಪ್ತ ಶಾಸಕನಿಂದ ಮತ್ತೆ ಬಹಿರಂಗ ಹೇಳಿಕೆ ಹೊರಬಿದ್ದಿದ್ದು, ಯಾರೂ ಹೇಳಿದ್ರೂ ನಿಲ್ಲೋದಿಲ್ಲವಾ? ಸೆಪ್ಟೆಂಬರ್ ಕ್ರಾಂತಿಗೂ ಮುನ್ನವೇ ಬಲಾಬಲ ಆಟ ನಡೆಯಲು ಶುರುವಾಯ್ತಾ? ಎಂಬ ಪ್ರಶ್ನೆಗಳಿಗೆ ಕಾಲವೇ ಉತ್ತರಿಸಬೇಕಿದೆ.

  • 76ನೇ ಗಣರಾಜ್ಯೋತ್ಸವದ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

    76ನೇ ಗಣರಾಜ್ಯೋತ್ಸವದ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 76ನೇ ಗಣರಾಜ್ಯೋತ್ಸವದ (Republic Day 2025) ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಮಾಣೆಕ್ಷಾ ಪರೇಡ್ ಮೈದಾನದಲ್ಲಿ (Manekshaw Parade Ground) ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.

    ನಂತರ ಪೊಲೀಸರಿಂದ ವಂದನಾ ಗೌರವ ಸ್ವೀಕರಿಸಿ, ಪರೇಡ್‌ ವೀಕ್ಷಿಸಿದ ರಾಜ್ಯಪಾಲರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ ಕೆಂಪುಕೋಟೆ ಸಜ್ಜು – 10,000 ಗಣ್ಯರಿಗೆ ಆಹ್ವಾನ, ಮಿಲಿಟರಿ ಶಕ್ತಿ ಅನಾವರಣ

    ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದು, 8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ ಸೇರಿ 1051 ಪೊಲೀಸರ ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ 114 ಪಿಎಸ್​​ಐ, 58 ಎಎಸ್ಐ, 80 ಸಿಬ್ಬಂದಿ, 30 ಕ್ಯಾಮೆರಾ ಸಿಬ್ಬಂದಿಯಿಂದ ಭದ್ರತೆ ಒದಗಿಸಲಾಗಿದೆ. ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡನ್ನು ನಿಯೋಜನೆ ಮಾಡಲಾಗಿದೆ.

    ಅಲ್ಲದೆ, ಮೈದಾನದ ಸುತ್ತ ಒಟ್ಟು 103 ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, ಕಲರ್ ಕೋಡ್​ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಇದ್ದವರು ಗೇಟ್-2ರ ಮೂಲಕ ಪ್ರವೇಶಿಸಬಹುದು. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ. ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

    ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್​ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಗಣರಾಜ್ಯೋತ್ಸವ 2025 – ದೇಶದ ಜನತೆಗೆ ಶುಭಕೋರಿದ ಪ್ರಧಾನಿ, ಸಿಎಂ

  • ಜೈಲಿನಿಂದ ಹೊರ ಬಂದ ಬಳಿಕ ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ

    ಜೈಲಿನಿಂದ ಹೊರ ಬಂದ ಬಳಿಕ ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ

    ರಾಂಚಿ: ಮೂರನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ (Hemanth Soren) ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಇವರಿಗೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಿದರು.

    ಈ ಮೂಲಕ‌ ಹೇಮಂತ್ ಸೊರೇನ್ ಅವರು ಜಾರ್ಖಂಡ್‌ನ 13 ನೇ ಮುಖ್ಯಮಂತ್ರಿಯಾದರು. ಈ ಸಂದರ್ಭದಲ್ಲಿ ಹೇಮಂತ್ ಸೊರೇನ್ ಅವರ ತಂದೆ ಶಿಬು ಸೊರೇನ್, ತಾಯಿ ರೂಪಿ ಸೊರೇನ್, ಕಾಂಗ್ರೆಸ್, ಜೆಎಂಎಂ ಮತ್ತು ಆರ್‌ಜೆಡಿ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಇದನ್ನೂ ಓದಿ: ರಾಜಸ್ಥಾನದ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ಮೀನಾ ರಾಜೀನಾಮೆ

    ಇದಕ್ಕೂ ಮುನ್ನ ಸೊರೇನ್ ಅವರು ಇಂದು ಮಧ್ಯಾಹ್ನ ಉನ್ನತ ನಾಯಕರೊಂದಿಗೆ ರಾಜಭವನಕ್ಕೆ ತಲುಪಿದರು. ಹೇಮಂತ್ ಸೊರೇನ್ ಅವರು ರಾಜ್ಯಪಾಲರ ಮುಂದೆ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು. ಅಲ್ಲದೇ ತಮ್ಮ ಶಾಸಕರ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದರು.

    ಅಕ್ರಮ ಹಣ ವರ್ಗಾವಣೆ, ಭೂ ಹಗರಣದ ಆರೋಪದ ಮೇಲೆ ಜೈಲು ಪಾಲಾದ ನಂತರ ಚಂಪೈ ಸೊರೇನ್ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು. ಹೇಮಂತ್ ಸೊರೇನ್ ಅವರನ್ನು ಬಂಧಿಸಿದ ಎರಡು ದಿನಗಳ ನಂತರ ಚಂಪೈ ಪ್ರಮಾಣವಚನ ಸ್ವೀಕರಿಸಿದ್ದರು. ಇದೇ ಜೂನ್ 28ರಂದು ಹೇಮಂತ್‌ ಸೊರೇನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ 5 ತಿಂಗಳ ಬಳಿಕ ಚಂಪೈ ಅವರು ಬುಧವಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

  • ಸ್ವಾಮೀಜಿಗಳು ವೇದಿಕೆ, ಸಂದರ್ಭ ನೋಡಿ ಮಾತಾಡಿದ್ರೆ ಒಳ್ಳೆಯದು: ಪರಂ

    ಸ್ವಾಮೀಜಿಗಳು ವೇದಿಕೆ, ಸಂದರ್ಭ ನೋಡಿ ಮಾತಾಡಿದ್ರೆ ಒಳ್ಳೆಯದು: ಪರಂ

    ಬೆಂಗಳೂರು: ಸ್ವಾಮೀಜಿಗಳು ವೇದಿಕೆ, ಸಂದರ್ಭ ನೋಡಿ ಮಾತಾಡಿದ್ರೆ ಒಳ್ಳೆಯದು. ಸ್ವಾಮೀಜಿಗಳ ಹೇಳಿಕೆ ತಪ್ಪು ಅಂತ ಹೇಳಕ್ಕಾಗಲ್ಲ, ಅವರಿಗೂ ಕಾಳಜಿ ಇರಬಹುದು. ಅವರು ಅವರ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಹುದ್ದೆಗಳ ವಿಚಾರ ಪ್ರಸ್ತುತ ಅಪ್ರಸ್ತುತ ಅಂತ ಅಲ್ಲ. ಹೈಕಮಾಂಡ್ ನವರು ಆ ರೀತಿ ಬದಲಾವಣೆ ಮಾಡುವುದಾದರೆ ವೀಕ್ಷಕರನ್ನು ಕಳುಹಿಸಿ ಅಭಿಪ್ರಾಯ ಪಡೆಯುತ್ತಾರೆ ಎಂದು ಹೇಳಿದರು.

    ನಾವು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರನ್ನೂ ಭೇಟಿ ಮಾಡಿದ್ದೆವು. ರಾಜಕೀಯವಾಗಿ ಚರ್ಚೆ ಮಾಡಲಾಯಿತು. ಸೌಹಾರ್ದಯುತವಾಗಿ ಚರ್ಚೆ ಮಾಡಲಾಯ್ತು. ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಪ್ರಸ್ತಾಪ ಮಾಡಲಿಲ್ಲ. ಹೆಚ್ಚುವರಿ ಡಿಸಿಎಂ ಬಗ್ಗೆ ಅವರವರು ಅವರವರ ಅಭಿಪ್ರಾಯ ಹೇಳ್ತಾರೆ. ಆದರೆ ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ತಿಳಿಸಿದರು. ಇದನ್ನೂ ಓದಿ: CM ಸ್ಥಾನವನ್ನು ಡಿಕೆಶಿಗೆ ಸಿದ್ದರಾಮಯ್ಯ ಬಿಟ್ಟುಕೊಡಬೇಕು- ಸಿಎಂ ಸಮ್ಮುಖದಲ್ಲೇ ಸ್ವಾಮೀಜಿ ಹೇಳಿಕೆ

    ಇತ್ತೀಚೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515ನೇ ಜಯಂತೋತ್ಸವ ಸಮಾರಂಭದಲ್ಲಿ ಮಾತನಾಡಿದ್ದ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ (Chandrashekharnath Swamiji), ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದರು.

    ಸಿದ್ದರಾಮಯ್ಯನವರು (Siddaramaiah) ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ (D.K Shivakumar) ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ತಿಳಿಸಿದ್ದರು. ಸ್ವಾಮೀಜಿ ಈ ಹೇಳಿಕೆ ನೀಡುತ್ತಿದ್ದಂತೆಯೇ ಪರ-ವಿರೋಧ ಮಾತುಗಳು ಆರಂಭವಾಗಿದೆ.

  • ಆಕಾಂಕ್ಷಿಯೂ ಅಲ್ಲದೆ ಕೊನೇ ಸಾಲಿನಲ್ಲಿದ್ದ ಭಜನ್ ಲಾಲ್ ಸಿಎಂ ಆಗಿದ್ದು ಹೇಗೆ?

    ಆಕಾಂಕ್ಷಿಯೂ ಅಲ್ಲದೆ ಕೊನೇ ಸಾಲಿನಲ್ಲಿದ್ದ ಭಜನ್ ಲಾಲ್ ಸಿಎಂ ಆಗಿದ್ದು ಹೇಗೆ?

    – ಕರಸೇವೆಯಲ್ಲಿ ಭಾಗಿಯಾಗಿದ್ದ ರಾಜಸ್ಥಾನದ ನೂತನ ಮುಖ್ಯಮಂತ್ರಿ

    ಜೈಪುರ: ಛತ್ತೀಸ್‌ಗಢ, ಮಧ್ಯಪ್ರದೇಶದ ರೀತಿಯಲ್ಲೇ ರಾಜಸ್ಥಾನದಲ್ಲೂ (Rajasthan) ಬಿಜೆಪಿ ಹೈಕಮಾಂಡ್ ಅಚ್ಚರಿಯ ನಿರ್ಧಾರ ಕೈಗೊಂಡಿದೆ. ಸಿಎಂ ಆಯ್ಕೆಗೂ ಮುನ್ನ ಕೊನೇ ಸಾಲಿನಲ್ಲಿದ್ದ ಭಜನ್ ಲಾಲ್ ಶರ್ಮಾ (Bhajan Lal Sharma) ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿರುವುದೇ ಅಚ್ಚರಿಯಾಗಿದೆ.

    ಭಜನ್ ಲಾಲ್ ಶರ್ಮಾ 1992ರಲ್ಲಿ ಅಯೋಧ್ಯೆಯಲ್ಲಿ ನಡೆದ ಕರಸೇವೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು. ಆರ್‌ಎಸ್‌ಎಸ್ ಕಾರ್ಯಕರ್ತರೂ ಆಗಿದ್ದರು. ಶರ್ಮಾ ಕರಸೇವೆಯಲ್ಲಿ ಭಾಗಿಯಾಗುವ ಮೂಲಕ ರಾಜಕೀಯ ಜೀವನವನ್ನು ಆರಂಭಿಸಿದ್ದರು. ಕರಸೇವೆಯಲ್ಲಿ ಭಾಗಿಯಾಗಿದ್ದಕ್ಕೆ ಅವರು ಜೈಲು ಶಿಕ್ಷೆಯನ್ನೂ ಅನುಭವಿಸಿದ್ದರು.

    ಇದಕ್ಕೂ ಮೊದಲು ಗ್ರಾಮ ಸರಪಂಚರಾಗಿದ್ದ ಇವರು ಬಳಿಕ ಹಂತಹಂತವಾಗಿ ಬಿಜೆಪಿಯಲ್ಲಿ (BJP) ವಿವಿಧ ಸ್ಥಾನಗಳಿಗೆ ಆಯ್ಕೆಯಾದರು. ಬಳಿಕ 2023ರಲ್ಲಿ ಜೈಪುರದ ಸಂಗನೇರ್‌ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾದ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಎಣ್ಣೆ ಶಾಕ್ ಫಿಕ್ಸ್ – ಜನವರಿಯಿಂದ ಮದ್ಯದ ಬೆಲೆಯಲ್ಲಿ ಭಾರೀ ಏರಿಕೆ

    ಚುನಾವಣೆ ಬಳಿಕ ಸಿಎಂ ಆಯ್ಕೆಗೂ ಮುನ್ನ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಎಲ್ಲಾ 115 ಶಾಸಕರ ಫೋಟೋ ಸೆಷನ್ ಹಮ್ಮಿಕೊಳ್ಳಲಾಗಿತ್ತು. ಸಿಎಂ ಸ್ಥಾನ ಆಕಾಂಕ್ಷಿಗಳೆಲ್ಲರೂ ಮೊದಲ ಸಾಲಿನಲ್ಲಿ ಕುಳಿತಿದ್ದರೆ, ಭಜನ್ ಲಾಲ್ ಶರ್ಮಾ ಮಾತ್ರ ಹಿಂದಿನ ಸಾಲಿನಲ್ಲಿ ನಿಂತಿದ್ದರು. ಆದರೆ ಶಾಸಕಾಂಗ ಪಕ್ಷದ ಸಭೆ ಬಳಿಕ ಎಲ್ಲವೂ ಉಲ್ಟಾ ಆಯ್ತು. ಹಿಂದಿನ ಸಾಲಿನಲ್ಲಿದ್ದ ಶರ್ಮಾ ಮುಂದಿನ ಸಾಲಿಗೆ ಆಗಮಿಸಿ ಅಚ್ಚರಿ ಮೂಡಿಸಿದರು.

    ಭಜನ್ ಲಾಲ್ ಶರ್ಮಾ ಮೂಲತಃ ರಾಜಸ್ಥಾನದ ಭರತ್‌ಪುರದವರು. ಎಬಿವಿಪಿ ಮೂಲದವರಾಗಿದ್ದರಿಂದ ಅವರು ಬಿಜೆಪಿಯಲ್ಲಿ ಗುರುತಿಸಿಕೊಂಡು ಹಲವು ವರ್ಷಗಳಿಂದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ಈ ಹಿನ್ನೆಲೆ ಶರ್ಮಾ ಭರತ್‌ಪುರದಿಂದಲೇ ಸ್ಪರ್ಧಿಸುವ ಇಚ್ಛೆಯಿಂದ ಟಿಕೆಟ್ ಕೇಳಿದ್ದರು. ಆದರೆ ಪಕ್ಷದ ವರಿಷ್ಠರು ಭರತ್‌ಪುರದಲ್ಲಿ ಬ್ರಾಹ್ಮಣರ ಸಂಖ್ಯೆ ಕಡಿಮೆಯಿದೆ. ಅಲ್ಲಿ ನೀವು ಗೆಲ್ಲುವ ಸಾಧ್ಯತೆ ಇಲ್ಲ ಎಂದು ಸಾಂಗಾನೇರ್ ಕ್ಷೇತ್ರದಿಂದ ಟಿಕೆಟ್ ಕೊಡಿಸಿದ್ದರು. ಇದನ್ನೂ ಓದಿ: ನಿರುದ್ಯೋಗ ಯುವಕ-ಯುವತಿಯರಿಗೆ ಗುಡ್‌ನ್ಯೂಸ್ – ಡಿ.21ರಿಂದ `ಯುವ ನಿಧಿ’ಗೆ ನೋಂದಣಿ

  • ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಆಯ್ಕೆ – ʼಮೋದಿ ಕಿ ಗ್ಯಾರಂಟಿʼ ಈಡೇರಿಸೋ ಭರವಸೆ

    ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಆಯ್ಕೆ – ʼಮೋದಿ ಕಿ ಗ್ಯಾರಂಟಿʼ ಈಡೇರಿಸೋ ಭರವಸೆ

    ನವದೆಹಲಿ: ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ (Chhattisgarh CM) ವಿಷ್ಣು ದೇವ್ ಸಾಯಿ (Vishnu Deo Sai) ಅವರನ್ನು ಬಿಜೆಪಿ ಕೇಂದ್ರ ನಾಯಕತ್ವವು ಭಾನುವಾರ ಅಧಿಕೃತವಾಗಿ ಆಯ್ಕೆ ಮಾಡಿದೆ. ಈ ಮೂಲಕ ರಾಜ್ಯದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.

    ರಾಯ್‌ಪುರದಲ್ಲಿ ಬಿಜೆಪಿಯ (BJP) ಹೊಸದಾಗಿ ಚುನಾಯಿತರಾದ 54 ಶಾಸಕರ ಪ್ರಮುಖ ಸಭೆಯ ನಂತರ ವಿಷ್ಣು ದೇವ್ ಸಾಯಿಯನ್ನು ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿ ಘೋಷಿಸಲಾಯಿತು.

    ಛತ್ತೀಸ್‌ಗಢ ಸಿಎಂ ಆಗಿ ಆಯ್ಕೆಯಾದ ಬಳಿಕ ವಿಷ್ಣು ದೇವ್ ಅವರು ‘ಮೋದಿ ಕಿ ಗ್ಯಾರಂಟಿ’ ಅಡಿಯಲ್ಲಿ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವುದಾಗಿ ಹೇಳಿದ್ದಾರೆ. ವಸತಿ ಯೋಜನೆಯ ಫಲಾನುಭವಿಗಳಿಗೆ 18 ಲಕ್ಷ ಮನೆಗಳನ್ನು ಮಂಜೂರು ಮಾಡುವುದು ಛತ್ತೀಸ್‌ಗಢ ಸರ್ಕಾರದ ಮೊದಲ ಆದೇಶವಾಗಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಬುಡಕಟ್ಟು ಜನಾಂಗದ ನಾಯಕ, ಕೇಂದ್ರದ ಮಾಜಿ ಮಂತ್ರಿಗೆ ಛತ್ತೀಸ್‌ಗಢ ಸಿಎಂ ಪಟ್ಟ

    ಬಿಷ್ಣು ದೇವ್ ಸಾಯಿ ಯಾರು?:
    2023 ರ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ವಿಷ್ಣು ದೇವ ಸಾಯಿ ಕುಂಕೂರಿಯಿಂದ ಗೆದ್ದಿದ್ದಾರೆ. ಸಾಯಿ ಅವರು 2020 ರಿಂದ 2022 ರವರೆಗೆ ಭಾರತೀಯ ಜನತಾ ಪಕ್ಷದ (BJP) ಛತ್ತೀಸ್‌ಗಢ ರಾಜ್ಯ ಅಧ್ಯಕ್ಷರಾಗಿದ್ದರು. ಅವರು ಮೊದಲ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಉಕ್ಕು, ಗಣಿ, ಕಾರ್ಮಿಕ ಮತ್ತು ಉದ್ಯೋಗದ ರಾಜ್ಯ (MoS) ಸಚಿವರಾಗಿದ್ದರು. ವಿಷ್ಣು ದೇವು 1999, 2004, 2009 ಮತ್ತು 2014 ರಲ್ಲಿ ರಾಯಗಢ ಕ್ಷೇತ್ರದಿಂದ ಸತತ 4 ಲೋಕಸಭಾ ಚುನಾವಣೆಗಳನ್ನು ಗೆದ್ದರು. ಈ ಚುನಾವಣೆಯಲ್ಲಿ ಸಾಯಿ ಅವರು ಕಾಂಗ್ರೆಸ್ ಅಭ್ಯರ್ಥಿಗಳಾದ ಪುಷ್ಪಾ ದೇವಿ ಸಿಂಗ್, ರಾಮ್ಪುಕರ್ ಸಿಂಗ್, ಹೃದಯರಾಮ್ ರಾಥಿಯಾ ಮತ್ತು ಆರ್ತಿ ಸಿಂಗ್ ಅವರನ್ನು ಸೋಲಿಸಿದರು.

    ಸಾಯಿ 1990 ಮತ್ತು 1993 ರಲ್ಲಿ ಅವಿಭಜಿತ ಮಧ್ಯಪ್ರದೇಶದ ತಪ್ಕರಾ ಕ್ಷೇತ್ರದಿಂದ ಸತತ ಎರಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದರು. 2023ರ ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ವಿಷ್ಣು ದೇವು ಈ ಬಾರಿ ಕಾಂಗ್ರೆಸ್‌ನ ಹಾಲಿ ಶಾಸಕ ಯುಡಿ ಮಿಂಜ್ ಅವರನ್ನು ಸೋಲಿಸಿದ್ದಾರೆ. ಇದನ್ನೂ ಓದಿ: ಮದ್ಯಸೇವಿಸಿ ಕಾರ್ಯಕ್ರಮಕ್ಕೆ ಹೋಗ್ತಾರೆ, ನಮ್ಮನ್ನು ನಿರ್ಲಕ್ಷಿಸಿದ್ದಾರೆ – ಪಂಜಾಬ್ ಸಿಎಂ ವಿರುದ್ಧ ಪುತ್ರಿ ಕೆಂಡ

  • ಬುಡಕಟ್ಟು ಜನಾಂಗದ ನಾಯಕ, ಕೇಂದ್ರದ ಮಾಜಿ ಮಂತ್ರಿಗೆ ಛತ್ತೀಸ್‌ಗಢ ಸಿಎಂ ಪಟ್ಟ

    ಬುಡಕಟ್ಟು ಜನಾಂಗದ ನಾಯಕ, ಕೇಂದ್ರದ ಮಾಜಿ ಮಂತ್ರಿಗೆ ಛತ್ತೀಸ್‌ಗಢ ಸಿಎಂ ಪಟ್ಟ

    ನವದೆಹಲಿ: ಕೇಂದ್ರದ ಮಾಜಿ ಮಂತ್ರಿ, ಬುಡಕಟ್ಟು ಜನಾಂಗದ ನಾಯಕ ವಿಷ್ಣು ದೇವ್ ಸಾಯಿ (Vishnu Deo Sai) ಛತ್ತೀಸ್‌ಗಢ (Chhattisgarh) ಮುಖ್ಯಮಂತ್ರಿಯಾಗಿ (CM) ಆಯ್ಕೆಯಾಗಿದ್ದಾರೆ.

    ಪಂಚರಾಜ್ಯ ಚುನಾವಣೆಯ ಫಲಿತಾಂಶ ಹೊರಬಿದ್ದು ವಾರ ಕಳೆದಿದೆ. ಈ ಪೈಕಿ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದು ಮುಖ್ಯಮಂತ್ರಿ ಆಯ್ಕೆಯ ಕಸರತ್ತನ್ನು ಹೈಕಮಾಂಡ್ ಆರಂಭಿಸಿದೆ. ಭಾನುವಾರ ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ವರದಿ ಮಾಡಿವೆ.

    ಬಿಷ್ಣು ದೇವ್ ಸಾಯಿ ಯಾರು?:
    2023 ರ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ವಿಷ್ಣು ದೇವ ಸಾಯಿ ಕುಂಕೂರಿಯಿಂದ ಗೆದ್ದಿದ್ದಾರೆ. ಸಾಯಿ ಅವರು 2020 ರಿಂದ 2022 ರವರೆಗೆ ಭಾರತೀಯ ಜನತಾ ಪಕ್ಷದ (BJP) ಛತ್ತೀಸ್‌ಗಢ ರಾಜ್ಯ ಅಧ್ಯಕ್ಷರಾಗಿದ್ದರು. ಅವರು ಮೊದಲ ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಉಕ್ಕು, ಗಣಿ, ಕಾರ್ಮಿಕ ಮತ್ತು ಉದ್ಯೋಗದ ರಾಜ್ಯ (MoS) ಸಚಿವರಾಗಿದ್ದರು. ವಿಷ್ಣು ದೇವು 1999, 2004, 2009 ಮತ್ತು 2014 ರಲ್ಲಿ ರಾಯಗಢ ಕ್ಷೇತ್ರದಿಂದ ಸತತ 4 ಲೋಕಸಭಾ ಚುನಾವಣೆಗಳನ್ನು ಗೆದ್ದರು. ಈ ಚುನಾವಣೆಯಲ್ಲಿ ಸಾಯಿ ಅವರು ಕಾಂಗ್ರೆಸ್ ಅಭ್ಯರ್ಥಿಗಳಾದ ಪುಷ್ಪಾ ದೇವಿ ಸಿಂಗ್, ರಾಮ್ಪುಕರ್ ಸಿಂಗ್, ಹೃದಯರಾಮ್ ರಾಥಿಯಾ ಮತ್ತು ಆರ್ತಿ ಸಿಂಗ್ ಅವರನ್ನು ಸೋಲಿಸಿದರು. ಇದನ್ನೂ ಓದಿ: ಮದ್ಯಸೇವಿಸಿ ಕಾರ್ಯಕ್ರಮಕ್ಕೆ ಹೋಗ್ತಾರೆ, ನಮ್ಮನ್ನು ನಿರ್ಲಕ್ಷಿಸಿದ್ದಾರೆ – ಪಂಜಾಬ್ ಸಿಎಂ ವಿರುದ್ಧ ಪುತ್ರಿ ಕೆಂಡ

    ಸಾಯಿ 1990 ಮತ್ತು 1993 ರಲ್ಲಿ ಅವಿಭಜಿತ ಮಧ್ಯಪ್ರದೇಶದ ತಪ್ಕರಾ ಕ್ಷೇತ್ರದಿಂದ ಸತತ ಎರಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದರು. 2023ರ ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ವಿಷ್ಣು ದೇವು ಈ ಬಾರಿ ಕಾಂಗ್ರೆಸ್‌ನ ಹಾಲಿ ಶಾಸಕ ಯುಡಿ ಮಿಂಜ್ ಅವರನ್ನು ಸೋಲಿಸಿದ್ದಾರೆ. ಇದನ್ನೂ ಓದಿ: ಸಿಎಂ ಜೊತೆ ಹರಿಪ್ರಸಾದ್ ಜಟಾಪಟಿ – ಮಧು ಬಂಗಾರಪ್ಪ ಜೊತೆ ಮುಸುಕಿನ ಗುದ್ದಾಟ!

  • ABVPಯಿಂದ ತೆಲಂಗಾಣ ಸಿಎಂ ಹುದ್ದೆಯವರೆಗೆ – ರೇವಂತ್ ರೆಡ್ಡಿ ಹಿನ್ನೆಲೆ ಏನು?

    ABVPಯಿಂದ ತೆಲಂಗಾಣ ಸಿಎಂ ಹುದ್ದೆಯವರೆಗೆ – ರೇವಂತ್ ರೆಡ್ಡಿ ಹಿನ್ನೆಲೆ ಏನು?

    ನವದೆಹಲಿ: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ (CM) ರೇವಂತ್ ರೆಡ್ಡಿ (Revanth Reddy) ಆಯ್ಕೆಯಾಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೇರಿದ್ದ ಕಾಂಗ್ರೆಸ್ (Congress) ಮಂಗಳವಾರ ಎಐಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಸುದೀರ್ಘ ಚರ್ಚೆ ಬಳಿಕ ಶಾಸಕರ ಅಭಿಪ್ರಾಯದ ಮೇರೆಗೆ ರೇವಂತ್ ರೆಡ್ಡಿ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ.

    ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ರೇವಂತ್ ರೆಡ್ಡಿ ಹೆಸರು ಘೋಷಿಸಿದರು. ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಈ ನಡುವೆ ರೇವಂತ್ ರೆಡ್ಡಿ ಯಾರು? ಅವರ ರಾಜಕೀಯ ಪ್ರಭಾವ ಎಷ್ಟಿದೆ? ಅವರನ್ನು ಸಿಎಂ ಮಾಡಲು ಕಾರಣಗಳೇನು? ಎಂದು ಚರ್ಚೆಯಾಗುತ್ತಿದೆ.

    ಸದ್ಯ ತೆಲಂಗಾಣ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ರೇವಂತ್ ರೆಡ್ಡಿ ಅವರು 1967ರ ನವೆಂಬರ್ 8 ರಂದು ಅವಿಭಜಿತ ಆಂಧ್ರಪ್ರದೇಶದ ನಾಗರ್‌ಕರ್ನೂಲ್‌ನ ಕೊಂಡರೆಡ್ಡಿ ಪಲ್ಲಿ ಎಂಬ ಸ್ಥಳದಲ್ಲಿ ಜನಿಸಿದರು. ರೇವಂತ್ ತಂದೆಯ ಹೆಸರು ಅನುಮುಲ ನರಸಿಂಹ ರೆಡ್ಡಿ ಮತ್ತು ತಾಯಿ ಅನುಮುಲಾ ರಾಮಚಂದ್ರಮ್ಮ. ಅವರು ಹೈದರಾಬಾದಿನ ಎವಿ ಕಾಲೇಜಿನಲ್ಲಿ (ಉಸ್ಮಾನಿಯಾ ವಿಶ್ವವಿದ್ಯಾನಿಲಯ) ಲಲಿತಕಲೆಯಲ್ಲಿ ಪದವಿ ಪಡೆದಿದ್ದಾರೆ. ಕಾಲೇಜಿನ ಬಳಿಕ ಪ್ರಿಂಟಿಂಗ್ ಪ್ರೆಸ್ ಆರಂಭಿಸಿದರು.

    1992ರ ಮೇ 7 ರಂದು ರೇವಂತ್ ರೆಡ್ಡಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಜೈಪಾಲ್ ರೆಡ್ಡಿ ಅವರ ಸೋದರ ಸೊಸೆ ಅನುಮುಲಾ ಗೀತಾ ಅವರನ್ನು ವಿವಾಹವಾದರು. ಆದರೆ ಆರಂಭದಲ್ಲಿ ವೃತ್ತಿ ಆಯ್ಕೆಯಿಂದಾಗಿ ಕುಟುಂಬ ಸದಸ್ಯರು ಈ ಸಂಬಂಧವನ್ನು ವಿರೋಧಿಸಿದ್ದರು. ಬಳಿಕ ಮನೆಯವರು ಒಪ್ಪಿ ಗೀತಾ ಜತೆ ವೈವಾಹಿಕ ಸಂಬಂಧ ಆರಂಭಿಸಿದ್ದರು. ಅವರಿಗೆ ನ್ಯಾಮಿಷಾ ಎಂಬ ಮಗಳಿದ್ದಾಳೆ.

    ಮದುವೆಯ ನಂತರ ರೇವಂತ್ ರೆಡ್ಡಿ ಅವರ ರಾಜಕೀಯ ಪಯಣ ಆರಂಭವಾಯಿತು. ವಿದ್ಯಾರ್ಥಿ ದಿನಗಳಲ್ಲಿ ಅವರು ಆರ್‌ಎಸ್‌ಎಸ್‌ನ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನೊಂದಿಗೆ ಗುರುತಿಸಿಕೊಂಡಿದ್ದರು. 2006ರಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಿಡ್ಜಿಲ್ ಮಂಡಲದಿಂದ ಜಿಲ್ಲಾ ಪರಿಷತ್ ಪ್ರಾದೇಶಿಕ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು.

    ನಂತರ 2007 ರಲ್ಲಿ ಆಂಧ್ರಪ್ರದೇಶದ ವಿಧಾನ ಪರಿಷತ್ತಿನ ಸದಸ್ಯರಾದರು. ಈ ಅವಧಿಯಲ್ಲಿ ಅವರು ಎನ್ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷದ ಭಾಗವಾದರು. 2009 ರಲ್ಲಿ ರೇವಂತ್ ಟಿಡಿಪಿ ಟಿಕೆಟ್‌ನಲ್ಲಿ ತಮ್ಮ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರು ಮತ್ತು 6,989 ಮತಗಳಿಂದ ಗೆದ್ದರು. ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ರೇವಂತ್ 5 ಬಾರಿ ಕಾಂಗ್ರೆಸ್ ಶಾಸಕರಾಗಿದ್ದ ಗುರುನಾಥರೆಡ್ಡಿ ಅವರನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ ಶಾಸಕರಾದರು. ಇದನ್ನೂ ಓದಿ: ಡಾಲಿ ‘ಲಿಡ್ಕರ್’ಗೆ ರಾಯಭಾರಿ: ಸಿಎಂ ಅಧಿಕೃತ ಘೋಷಣೆ

    ತೆಲಂಗಾಣ ರಚನೆಗೂ ಮುನ್ನ 2014ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರೇವಂತ್ ಮತ್ತೊಮ್ಮೆ ಕೊಡಂಗಲ್‌ನಿಂದ ಟಿಡಿಪಿ ಅಭ್ಯರ್ಥಿಯಾದರು. ಟಿಆರ್‌ಎಸ್ ಅಭ್ಯರ್ಥಿಯಾಗಿದ್ದ ಗುರುನಾಥರೆಡ್ಡಿ ಅವರನ್ನು ಸೋಲಿಸಿದರು. 2014ರ ವಿಧಾನಸಭಾ ಚುನಾವಣೆಯಲ್ಲಿ ರೇವಂತ್ 14,614 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದಾದ ನಂತರ ಟಿಡಿಪಿ ರೇವಂತ್ ಅವರನ್ನು ತೆಲಂಗಾಣ ವಿಧಾನಸಭೆಯ ನಾಯಕನನ್ನಾಗಿ ಮಾಡಿತು. ಆದಾಗ್ಯೂ 2017ರ ಅಕ್ಟೋಬರ್ 25 ರಂದು ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಬಹಿರಂಗವಾದ ನಂತರ ಟಿಡಿಪಿ ರೇವಂತ್ ಅವರನ್ನು ಹುದ್ದೆಯಿಂದ ವಜಾಗೊಳಿಸಿತು. ಅಂತಿಮವಾಗಿ 2017ರ ಅಕ್ಟೋಬರ್ 31 ರಂದು ರೇವಂತ್ ಕಾಂಗ್ರೆಸ್ ಸದಸ್ಯರಾದರು.

    2018ರ ಸೆಪ್ಟೆಂಬರ್ 20 ರಂದು ಅವರು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ 3 ಕಾರ್ಯಾಧ್ಯಕ್ಷರಲ್ಲಿ ಒಬ್ಬರಾಗಿ ನೇಮಕಗೊಂಡರು. 2018ರ ತೆಲಂಗಾಣ ವಿಧಾನಸಭೆಯಲ್ಲಿ, ರೇವಂತ್ 3ನೇ ಬಾರಿಗೆ ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ರೇವಂತ್ ಬಿಆರ್‌ಎಸ್‌ನ ಪಟ್ನಂ ನರೇಂದ್ರ ರೆಡ್ಡಿ ಅವರ ಕೈಯಲ್ಲಿ ಮೊದಲ ಸೋಲು ಅನುಭವಿಸಿದರು.

    ಅಸೆಂಬ್ಲಿ ಸೋಲಿನ ನಂತರ ರೇವಂತ್ 2019ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಿದರು. 2019ರ ಚುನಾವಣೆಯಲ್ಲಿ ಗೆದ್ದ ತೆಲಂಗಾಣದ ಮೂವರು ಕಾಂಗ್ರೆಸ್ ಸಂಸದರಲ್ಲಿ ರೇವಂತ್ ಒಬ್ಬರು. ಮಲ್ಕಾಜ್‌ಗಿರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿಆರ್‌ಎಸ್‌ನ ಎಂ ರಾಜಶೇಖರ ರೆಡ್ಡಿ ಅವರನ್ನು 10,000ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದಾರೆ. 2021ರ ಜೂನ್‌ನಲ್ಲಿ ರೇವಂತ್ ಅವರನ್ನು ಕಾಂಗ್ರೆಸ್ ತನ್ನ ತೆಲಂಗಾಣ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಿದಾಗ ದೊಡ್ಡ ಜವಾಬ್ದಾರಿಯನ್ನು ಪಡೆದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರೇವಂತ್ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಈ ಸ್ಪರ್ಧೆ ಏರ್ಪಟ್ಟಿತ್ತು. ಇದನ್ನೂ ಓದಿ: ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಕಮಲ್ ನಾಥ್ ರಾಜೀನಾಮೆ?

  • ಹೆಚ್‌.ಡಿ.ಕೋಟೆ, ಪ್ರಾಣ ಕಳೆದುಕೊಂಡ ಜಾಗದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣ: ಸಿಎಂ

    ಹೆಚ್‌.ಡಿ.ಕೋಟೆ, ಪ್ರಾಣ ಕಳೆದುಕೊಂಡ ಜಾಗದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣ: ಸಿಎಂ

    ಬೆಂಗಳೂರು: ದಸರಾ ಆನೆ ಅರ್ಜುನ (Dasara Elephant Arjuna) ಪ್ರಾಣ ಕಳೆದುಕೊಂಡ ಜಾಗ ಹಾಗೂ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಅಂಬಾರಿ ಹೊತ್ತ ಅರ್ಜುನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅರ್ಜುನನ ಸಾವಿನ ಕುರಿತು ಸಂಪೂರ್ಣ ಮಾಹಿತಿ ಕೇಳಿದ್ದೇನೆ. ಅರ್ಜುನ ಆನೆ ಸಕಲೇಶಪುರದಲ್ಲಿ ಎಲ್ಲಿ ಪ್ರಾಣ ಕಳೆದುಕೊಂಡಿದ್ನೋ ಅಲ್ಲಿಯೇ ಸ್ಮಾರಕ ಮಾಡುತ್ತೇವೆ. ಹಾಗೂ ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕ ಮಾಡಲು ತಿಳಿಸಿದ್ದೇವೆ ಎಂದರು.

    ಅರ್ಜುನ ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದವನ ಅಚಾನಕ್ ಸಾವಾಗಿದೆ. ಆತ ಇನ್ನೂ ಹೆಚ್ಚು ಕಾಲ ಬದುಕಬೇಕಿತ್ತು, ಇನ್ನೊಂದು ಆನೆ ಕಾರ್ಯಾಚರಣೆಗೆ ಅರ್ಜುನ ನನ್ನ ಉಪಯೋಗಿಸಿದ ಕಾರಣ ಸಾವನಪ್ಪಿದೆ ಎಂದು ಸಿಎಂ ಹೇಳಿದರು. ಇದನ್ನೂ ಓದಿ: ಅರ್ಜುನನ ದುರಂತ ಅಂತ್ಯ – ಕಾಡಾನೆ ಸೆರೆ ಕಾರ್ಯಾಚರಣೆ ಸ್ಥಗಿತ

    ಇತ್ತ ಹಾಸನದಲ್ಲಿ ಮಾವುತ ವಿನು ಮಾತನಾಡುತ್ತಾ, ಅರ್ಜುನನ್ನು ನೆನೆದು ಕಣ್ಣೀರು ಹಾಕಿದರು. ಕಾದಾಟದ ವೇಳೆ ಕಾಲಿನಲ್ಲಿ ರಕ್ತ ಬಂತು. ಆದರೂ ಮದಗಜದ ಜೊತೆಗೆ ಹೋರಾಡಿದ. ನಂತರ ಮಿಸ್ ಫೈರ್ ಆಗಿ ಕಾಲಿಗೆ ಗುಂಡು ಬಿತ್ತು. ಪ್ರಶಾಂತ ಇಲ್ಲದಿದ್ದರೂ ಅರ್ಜುನ ಹೋರಾಡಿ ಗೆಲ್ಲುತ್ತಿದ್ದನು. ಆದರೆ ಕಾಲಿಗೆ ಬಿದ್ದ ಗಾಯದಿಂದ ಆಗಲಿಲ್ಲ. ಕಾಡಾನೆ ತಿವಿದು ಸಾಯಿಸಿತು. ಅರ್ಜುನ ಹತ್ತು ಜನರ ಪ್ರಾಣ ಉಳಿಸಿ ಸಾವನ್ನಪ್ಪಿದ್ದಾನೆ. ಹೀಗಾಗಿ ಮೈಸೂರಿನಲ್ಲೇ ಆತನ ಸ್ಮಾರಕ ಮಾಡಬೇಕು ಎಂದು ಕಣ್ಣೀರಿಡುತ್ತಲೇ ಸರ್ಕಾರಕ್ಕೆ ಒತ್ತಾಯಿಸಿದರು.