Tag: ಸಿಎಂ ಎಂಕೆ ಸ್ಟಾಲಿನ್

  • ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ತಮಿಳುನಾಡು ಸರ್ಕಾರದಿಂದ ಸನ್ಮಾನ – 5 ಕೋಟಿ ರೂ. ಬಹುಮಾನ!

    ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ತಮಿಳುನಾಡು ಸರ್ಕಾರದಿಂದ ಸನ್ಮಾನ – 5 ಕೋಟಿ ರೂ. ಬಹುಮಾನ!

    ಚೆನ್ನೈ: ವಿಶ್ವ ಚೆಸ್ ಚಾಂಪಿಯನ್ (World Chess Champion) ಡಿ.ಗುಕೇಶ್‌ಗೆ ಇಂದು (ಡಿ.17) ತಮಿಳುನಾಡು ಸರ್ಕಾರ ಸನ್ಮಾನ ಸಮಾರಂಭ ಹಮ್ಮಿಕೊಂಡಿದ್ದು, 5 ಕೋಟಿ ರೂ. ಬಹುಮಾನ ವಿತರಣೆ ಮಾಡಲಿದೆ.

    ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (MK Stalin) ಅವರು ಇಂದು 5 ಕೋಟಿ ರೂ. ಬಹುಮಾನ ಚೆಕ್ ಹಸ್ತಾಂತರಿಸಲಿದ್ದಾರೆ. ಅಭಿನಂದನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಹಾಗೂ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ (Viswanathan Anand) ಸಹ ಭಾಗವಹಿಸಲಿದ್ದಾರೆ.ಇದನ್ನೂ ಓದಿ: ದರ್ಶನ್ ಜೊತೆ ಪವಿತ್ರಾ ಚೆನ್ನಾಗಿರುತ್ತೇನೆ ಅಂದರೆ ಇರಲಿ: ಮಾಜಿ ಪತಿ ಸಂಜಯ್ ಸಿಂಗ್

    ಈ ಕುರಿತು ಸಿಎಂ ಎಂ.ಕೆ. ಸ್ಟಾಲಿನ್ ಡಿ.ಗುಕೇಶ್ ಐತಿಹಾಸಿಕ ಸಾಧನೆ ಗುರುತಿಸಿ 5 ಕೋಟಿ ನಗದು ಬಹುಮಾನವನ್ನು ನೀಡುವುದಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು.

    ಸೋಮವಾರ (ಡಿ.16) ತವರಿಗೆ ಬಂದಿಳಿದದ ಗುಕೇಶ್ ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಅವರ ಅಭಿಮಾನಿಗಳು ಸೇರಿದಂತೆ ಇನ್ನಿತರರು ಅದ್ದೂರಿಯಾಗಿ ಸ್ವಾಗತಿಸಿದರು.

    18ರ ಹರೆಯದ ಹುಡುಗ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದರು. ಕಳೆದ ವಾರ ನಡೆದ ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ವಿಶ್ವ್ ಚಾಂಪಿಯನ್‌ಶಿಪ್‌ನ ಕೊನೆಯ 14ನೇ ನಿರ್ಣಾಯಕ ಪಂದ್ಯದಲ್ಲಿ 6.5-6.5 ಸಮಬಲಗೊಂಡು, ಬಳಿಕ 7.5-6.5 ಅಂಕಗಳೊಂದಿಗೆ ಗುಕೇಶ್ ಗೆಲುವು ಸಾಧಿಸುವ ಮೂಲಕ ಅಮೋಘ ಪ್ರದರ್ಶನ ನೀಡಿದ್ದರು. ವಿಶ್ವನಾಥನ್ ಆನಂದ್ ನಂತರ ಚೆಸ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ಎರಡನೇ ಭಾರತೀಯನಾಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಗುಕೇಶ್ ಅವರು ಮುಂದಿನ ವರ್ಷ ನಾರ್ವೆ ಚೆಸ್ ಟೂರ್ನಮೆಂಟ್‌ನಲ್ಲಿ ವಿಶ್ವದ ಅತಿ ಹೆಚ್ಚು ಶ್ರೇಯಾಂಕದ ಆಟಗಾರ ಮ್ಯಾಗ್ನಸ್ ಕಾರ್ಲ್ಸೆನ್ ಅವರನ್ನು ಎದುರಿಸಲಿದ್ದಾರೆ.ಇದನ್ನೂ ಓದಿ: ಔತಣಕೂಟ ಮಾಡಿ ಬೆನ್ನಿಗೆ ಚಾಕು ಹಾಕೋದಲ್ಲ, ಇದ್ರಲ್ಲಿ ಬಿಎಸ್‌ವೈ ಕುತಂತ್ರ ಇದ್ದೇ ಇರುತ್ತೆ – ಯತ್ನಾಳ್ ಕಿಡಿ

  • Tamil nadu | ಟಾಟಾ ಮೋಟಾರ್ಸ್ ಉತ್ಪಾದನಾ ಘಟಕಕ್ಕೆ ಶಂಕುಸ್ಥಾಪನೆ – 9,000 ಕೋಟಿ ಹೂಡಿಕೆ

    Tamil nadu | ಟಾಟಾ ಮೋಟಾರ್ಸ್ ಉತ್ಪಾದನಾ ಘಟಕಕ್ಕೆ ಶಂಕುಸ್ಥಾಪನೆ – 9,000 ಕೋಟಿ ಹೂಡಿಕೆ

    ಚೆನ್ನೈ: ರಾಜ್ಯದ ಸಿಪ್‌ಕಾಟ್‌ನಲ್ಲಿರುವ (SIPCOT) ಪಣಪಕ್ಕಂನ (Panapakkam) ಟಾಟಾ ಮೋಟಾರ್ಸ್ (TATA Motors) ಉತ್ಪಾದನಾ ಘಟಕಕ್ಕೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ (CM MK Stalin) ಶನಿವಾರ ಶಂಕು ಸ್ಥಾಪನೆ ನೇರವೇರಿಸಿದರು.

    ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿದ ಅವರು, ಇಂದು ಟಾಟಾ ಮೋಟಾರ್ಸ್‌ನ ಉತ್ಪಾದನಾ ಘಟಕಕ್ಕೆ ಶಂಕು ಸ್ಥಾಪನೆ ನೇರವೇರಿಸಿರುವುದು ತುಂಬಾ ಸಂತೋಷವನ್ನುಂಟು ಮಾಡಿದೆ. ಇದು ರಾಜ್ಯದಲ್ಲಿ ಕಂಪನಿಗಳಿಗೆ ಮಾತ್ರವಲ್ಲದೇ ಜಾಗತಿಕವಾಗಿ ಇದು ಸ್ಪರ್ಧಿಸಲಿದೆ. ಜೊತೆಗೆ ಟಾಟಾ ಮೋಟಾರ್ಸ್ ತಮಿಳುನಾಡಿನಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮಾಡಬೇಕು ಎಂದು ಆಶಯ ವ್ಯಕ್ತಪಡಿಸಿದರು.ಇದನ್ನೂ ಓದಿ: ಬೈರೂತ್ ದಾಳಿಯಲ್ಲಿ ಹಿಜ್ಬುಲ್ಲಾ‌ ಮುಖ್ಯಸ್ಥನ ಪುತ್ರಿಯೂ ಸಾವು; ನಸ್ರಲ್ಲಾ ಬಳಿಕ ಮತ್ತೊಬ್ಬ ಟಾಪ್‌ ಲೀಡರ್‌ ಟಾರ್ಗೆಟ್‌!

    ರಾಣಿಪೇಟ್‌ನ್ನು ಟಾಟಾ ಮೋಟಾರ್ಸ್ ಉತ್ಪಾದನಾ ಘಟಕದ ಹೂಡಿಕೆಯ ಸ್ಥಳವನ್ನಾಗಿ ಆಯ್ಕೆ ಮಾಡಿದಕ್ಕೆ ಧನ್ಯವಾದಗಳು. ಇದು ಉದ್ಯೋಗ ಸೃಷ್ಟಿಯಲ್ಲಿ ಹಾಗೂ ಆರ್ಥಿಕ ಬೆಳವಣಿಗೆಯಲ್ಲಿ ಗಂಭೀರವಾಗಿ ಧನಾತ್ಮಕ ಪರಿಣಾಮ ಬೀಳಲಿದೆ ಎಂದು ತಿಳಿಸಿದರು.

    ಈ ಉತ್ಪಾದನಾ ಘಟಕಕ್ಕಾಗಿ 9,000 ಕೋಟಿ ರೂ. ಹೂಡಿಕೆ ಮಾಡಲಾಗಿದ್ದು, ಇದರಿಂದ 5,000 ಉದ್ಯೋಗ ಸೃಷ್ಟಿಯಾಗಲಿದೆ ಎಂಬ ನಿರೀಕ್ಷೆಯಿದೆ. ಜೊತೆಗೆ ಇದು ಈ ಪ್ರದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆಯಾಗಿ ಪರಿಣಮಿಸಲಿದೆ ಎಂದು ಹೇಳಿದರು.

    ಟಾಟಾ ಮೋಟಾರ್ಸ್ನ ಉತ್ಪಾದನಾ ಘಟಕದ ನಿರ್ಮಾಣ ಪೂರ್ಣಗೊಂಡ ನಂತರ ಈ ಸ್ಥಾವರ ಉದ್ಘಾಟನೆಗಾಗಿ ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ (N Chandrashekaran) ಅವರನ್ನು ವೈಯಕ್ತಿಕವಾಗಿ ಆಹ್ವಾನಿಸಲು ಅವಕಾಶ ಕೋರುತ್ತೇನೆ. ಇದು ರಾಜ್ಯ ಹಾಗೂ ಭಾರತದ ಅತಿದೊಡ್ಡ ಕೈಗಾರಿಕಾ ಸಂಸ್ಥೆಗಳ ನಡುವಿನ ಮಹತ್ವವನ್ನು ಸೂಚಿಸುತ್ತದೆ ಎಂದರು.ಇದನ್ನೂ ಓದಿ: BBK 11: ದೊಡ್ಮನೆಯ 4ನೇ ಸ್ಪರ್ಧಿಯಾಗಿ ಗೋಲ್ಡ್‌ ಸುರೇಶ್‌

    ಶೀಘ್ರದಲ್ಲೇ ಯೋಜನೆ ಪೂರ್ಣಗೊಳ್ಳುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇನೆ ಹಾಗೂ ಉದ್ಘಾಟನೆಗೆ ಚಂದ್ರಶೇಖರನ್ ಅವರನ್ನು ಖುದ್ದಾಗಿ ಆಹ್ವಾನಿಸಲು ಬಯಸುತ್ತೇನೆ ಎಂದು ತಿಳಿಸಿದರು.