Tag: ಸಿಎಂ ಎಂ.ಕೆ ಸ್ಟಾಲಿನ್

  • ನಯನತಾರಾ ಮದುವೆಗೆ ಬರಲಿದ್ದಾರೆ ಸಿಎಂ ಸ್ಟಾಲಿನ್

    ನಯನತಾರಾ ಮದುವೆಗೆ ಬರಲಿದ್ದಾರೆ ಸಿಎಂ ಸ್ಟಾಲಿನ್

    ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಹಲವು ವರ್ಷಗಳಿಂದ ಪ್ರೀತಿಸಿ ಮದುವೆಯಾದ ಈ ಜೋಡಿ ಈಗ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಮದುವೆ ದಿನಗಣನೆ ಶುರುವಾಗಿದ್ದು, ಯಾರಿಗೆಲ್ಲ ನಯನಾತಾರಾ ಮದುವೆಗೆ ಆಮಂತ್ರಣವಿದೆ ಯಾರೆಲ್ಲ ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ ಎಂಬುದೇ ವಿಶೇಷ.

    ಕಾಲಿವುಡ್‌ನ ಮುದ್ದಾದ ಜೋಡಿಗಳಲ್ಲಿ ಒಂದಾಗಿರೋ ನಯನತಾರಾ ಮತ್ತು ವಿಘ್ನೇಶ್ ಶಿವನ್ ೭ ವರ್ಷಗಳ ಡೇಟಿಂಗ್ ನಂತರ ಈಗ ಗುರು ಹಿರಿಯರ ಸಮ್ಮುಖದಲ್ಲಿ ಜೂನ್ 9ರಂದು ತಿರುಪತಿ ಸನ್ನಿಧಿಯಲ್ಲಿ ಹಸೆಮನೆ ಏರಲು ಸಜ್ಜಾಗಿದ್ದಾರೆ. ಆಪ್ತರಿಗೆ ಈಗಾಗಲೇ ಆಹ್ವಾನಿಸುವುದರಲ್ಲಿ ಬ್ಯುಸಿಯಿರೋ ಈ ಜೋಡಿ ಈಗ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರಿಗೂ ಮದುವೆಗೆ ಆಮಂತ್ರಣ ನೀಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ಮೂಸೆವಾಲಾ ರೀತಿಯಲ್ಲೇ ಹತ್ಯೆ ಮಾಡೋದಾಗಿ ಸಲ್ಮಾನ್‌ಖಾನ್‌ಗೆ ಬೆದರಿಕೆ – ಕೃಷ್ಣಮೃಗ ಬೇಟೆಯೇ ಮುಳುವಾಯ್ತ?

     

    View this post on Instagram

     

    A post shared by Nayanthara Team (@nayantharateam)

    ಇನ್ನು ನಯನತಾರಾ ಅದ್ದೂರಿ ಮದುವೆಯಲ್ಲಿ ಕಮಲ್ ಹಾಸನ್, ರಜನೀಕಾಂತ್ ಸಮಂತಾ, ವಿಜಯ್ ಸೇತುಪತಿ, ಅನುಷ್ಕಾ ಶೆಟ್ಟಿ, ದಳಪತಿ ವಿಜಯ್ ಸೇರಿದಂತೆ ಸಾಕಷ್ಟು ಗಣ್ಯರಿಗೆ ಆಮಂತ್ರಣ ನೀಡಿಲಾಗಿದೆ. ಇನ್ನು ಮದುವೆಗೆ ಆಪ್ತರಿಗಷ್ಟೇ ಆಹ್ವಾನವಿದೆ. ಮದುವೆ ಪ್ರಸಾರದ ಹಕ್ಕನ್ನು ಓಟಿಟಿ ನೀಡಲಾಗಿದೆ ಎಂನ ಮಾಹಿತಿ ಹೊರಬಿದ್ದಿದೆ. ಇನ್ನು ಮದುವೆ ಸಿದ್ಧತೆ ಭರದಿಂದ ಸಾಗುತ್ತಿದ್ದು, ನೆಚ್ಚಿನ ಜೋಡಿಯ ಮದುವೆ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.

  • ಮೇಕೆದಾಟು ಯೋಜನೆ – ಮೂರು ಮಹತ್ವದ ನಿರ್ಣಯಗಳಿಗೆ ತಮಿಳುನಾಡು ಅಂಗೀಕಾರ

    ಮೇಕೆದಾಟು ಯೋಜನೆ – ಮೂರು ಮಹತ್ವದ ನಿರ್ಣಯಗಳಿಗೆ ತಮಿಳುನಾಡು ಅಂಗೀಕಾರ

    ಚೆನೈ: ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ ಬೆನ್ನಲೆ ತಮಿಳುನಾಡು ಸರ್ಕಾರ ಸರ್ಕಾರ ಸಕ್ರಿಯವಾಗಿದ್ದು, ಯೋಜನೆಯನ್ನು ವಿರೋಧಿಸಲು ಹಲವು ತಂತ್ರಗಳನ್ನು ಮಾಡುತ್ತಿದೆ.

    ರಾಜ್ಯ ಸರ್ಕಾರದ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಲು ಇಂದು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, ಬಿಜೆಪಿ, ಎಡಪಕ್ಷಗಳು ಸೇರಿ ಒಟ್ಟು 13 ಪಕ್ಷಗಳ ಪ್ರತಿನಿಧಿಗಳು ಭಾಗಿಯಾಗಿದ್ದರು.

    ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, ಮೂರು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ನಿರ್ಣಯವನ್ನು ವಿರೋಧಿಸುವುದು, ಯೋಜನೆಗೆ ತಡೆ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು, ಇದರ ಜೊತೆಗೆ ಸುಪ್ರೀಂಕೋರ್ಟ್‍ನಲ್ಲಿ ಕಾನೂನು ಹೋರಾಟ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.

    ತಮಿಳುನಾಡು ಸರ್ಕಾರದ ಈ ನಿರ್ಧಾರಕ್ಕೆ ಎಲ್ಲ ಪಕ್ಷಗಳು ಬೆಂಬಲ ಸೂಚಿಸಿದ್ದು, ಮೇಕೆದಾಟು ಅಣೆಕಟ್ಟು ನಿರ್ಮಾಣವಾಗದಂತೆ ನೋಡಿಕೊಳ್ಳಲು ಸಲಹೆ ನೀಡಿದ್ದು, ಎಲ್ಲ ರೀತಿಯ ಸಹಕಾರ ನೀಡುವ ಭರವಸೆ ಉಳಿದ ಪಕ್ಷಗಳು ನೀಡಿವೆ. ಶೀಘ್ರದಲ್ಲಿ ಸರ್ವ ಪಕ್ಷ ಸದಸ್ಯರ ನಿಯೋಗ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗುವ ಸಾಧ್ಯತೆ ಇದ್ದು, ಯೋಜನೆಗೆ ತಡೆ ಕೋರಿ ಮನವಿ ಮಾಡಲಿದ್ದಾರೆ. ಇದನ್ನೂ ಓದಿ:ಸುಮಲತಾ ಬೇಬಿ ಬೆಟ್ಟಕ್ಕೆ ಬನ್ನಿ ಅಂದ್ರೆ ಬರುತ್ತೇನೆ: ಪುಟ್ಟರಾಜು

  • ರೇಷನ್ ಕಾರ್ಡ್ ಇರುವವರಿಗೆ 2 ಸಾವಿರ ಪರಿಹಾರ- ತಮಿಳುನಾಡು ಸಿಎಂ ಭರ್ಜರಿ ಗಿಫ್ಟ್

    ರೇಷನ್ ಕಾರ್ಡ್ ಇರುವವರಿಗೆ 2 ಸಾವಿರ ಪರಿಹಾರ- ತಮಿಳುನಾಡು ಸಿಎಂ ಭರ್ಜರಿ ಗಿಫ್ಟ್

    – ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಪರಿಹಾರ ಘೋಷಣೆ

    ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಎಂ.ಕೆ.ಸ್ಟಾಲಿನ್ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಜನತೆಗೆ ಭರ್ಜರಿ ಗಿಫ್ಟ್ ನೀಡಿದ್ದು, ಪಡಿತರ ಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ 2 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

    ಶುಕ್ರವಾರ 68 ವರ್ಷದ ಎಂ.ಕೆ.ಸ್ಟಾಲಿನ್ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ರಾಜ ಭವನದಲ್ಲಿ ಪ್ರಮಾಣವಚನ ಬೋಧಿಸಿದ್ದಾರೆ. ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಮಹತ್ವದ ಘೋಷಣೆ ಹೊರಡಿಸಿದ್ದು, ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬಕ್ಕೆ ಕೊರೊನಾ ಸಂಕಷ್ಟದ ಪರಿಹಾರವಾಗಿ ಮೊದಲ ಕಂತಿನಲ್ಲಿ 2 ಸಾವಿರ ರೂ. ಪರಿಹಾರ ಧನ ನೀಡಲಾಗುವುದು. ಇದಕ್ಕಾಗಿ ಒಟ್ಟು 4,153.39 ಕೋಟಿ ರೂ. ಮೀಸಲಿರಿಸಲಾಗಿದ್ದು, 2.07 ಕೋಟಿ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳು ಇದರ ಪ್ರಯೋಜನ ಪಡೆಯಲಿವೆ ಎಂದು ಘೋಷಿಸಿದ್ದಾರೆ.

    ಡಿಎಂಕೆ ಅಧಿಕಾರಕ್ಕೆ ಬಂದರೆ ಕೋವಿಡ್ ಸಂಕಷ್ಟ ಕಾಲದಲ್ಲಿ ಪ್ರತಿ ಕುಟುಂಬಕ್ಕೆ 4 ಸಾವಿರ ರೂ. ನೀಡುವುದಾಗಿ ಅವರು ಅಶ್ವಾಸನೆ ನೀಡಿದ್ದರು. ಅದರಂತೆ ಇದೀಗ ಮೊದಲ ಕಂತಿನಲ್ಲಿ ಪ್ರತಿ ಕುಟುಂಬಕ್ಕೆ 2 ಸಾವಿರ ರೂ. ನೀಡಲಾಗುತ್ತಿದ್ದು, ಆದೇಶಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಹಿ ಹಾಕಿದ್ದಾರೆ.

    ಮೇ 16ರಿಂದ ಜಾರಿಗೆ ಬರುವಂತೆ ಸರ್ಕಾರಿ ಆವಿನ್ ಪೂರೈಸುವ ಹಾಲಿನ ಬೆಲೆಯನ್ನು 3ರೂ. ಗೆ ಕಡಿತಗೊಳಿಸುವ ಮತ್ತೊಂದು ಆದೇಶಕ್ಕೆ ಸ್ಟಾಲಿನ್ ಅವರು ಸಹಿಹಾಕಿದ್ದಾರೆ. ಜೊತೆಗೆ ಶನಿವಾರದಿಂದ ರಾಜ್ಯ ಸಾರಿಗೆ ನಿಗಮವು ನಿರ್ವಹಿಸುವ ಎಲ್ಲಾ ಸಾಮಾನ್ಯ ಶುಲ್ಕ ನಗರ ಬಸ್‍ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ ಉದ್ದೇಶಕ್ಕಾಗಿ ಸರ್ಕಾರವು 1,200 ಕೋಟಿ ರೂ. ಗಳನ್ನು ಮೀಸಲಿಟ್ಟಿದೆ.